Tag: Tollgate

  • ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

    ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

    ಉಡುಪಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಂಬುಲೆನ್ಸ್ ಅಪಘಾತಕ್ಕೆ ಕಾರಣ ಎಂದು ಚಾಲಕ ರೋಷನ್ ಹೇಳಿದ್ದಾರೆ.

    ಜಿಲ್ಲೆಯಲ್ಲಿ ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಅಂಬುಲೆನ್ಸ್ ಪಲ್ಟಿಯಾದ ಹಿನ್ನೆಲೆ ನಾಲ್ವರು ಸಾವನ್ನಪ್ಪಿದ್ದರು. ಸದ್ಯ ಘಟನೆ ವೇಳೆ ಗಾಯಗೊಂಡಿರುವ ಟೋಲ್ ಸಿಬ್ಬಂದಿ ಹಾಗೂ ಇತರ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇದನ್ನೂ ಓದಿ: ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    ಈ ನಡುವೆ ಆಂಬುಲೆನ್ಸ್ ಚಾಲಕ ರೋಷನ್ ಆಂಬುಲೆನ್ಸ್‍ಗೆ ಅಡ್ಡಲಾಗಿ ದನ ಬಂದಿದ್ದೆ ಅಪಘಾತಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ನಾನು ಉಡುಪಿಯ ಆದರ್ಶ ಆಸ್ಪತ್ರೆಗೆ ರೋಗಿ ಒಬ್ಬರನ್ನು ಶಿಫ್ಟ್ ಮಾಡುತ್ತಿದ್ದೆ. ಶಿರೂರಿನಲ್ಲಿ ಫಸ್ಟ್ ಗೇಟ್ ಸೆಕೆಂಡ್ ಗೇಟ್ ಸಿಗುತ್ತದೆ. ಎಮರ್ಜೆನ್ಸಿ ಲೈನ್‍ನಲ್ಲಿ ಫಸ್ಟ್ ಗೇಟ್ ತೆಗೆದಿದ್ದಾರೆ. ಸೆಕೆಂಡ್ ಗೇಟ್ ತೆಗೆಯುವಾಗ ಅಡ್ಡಲಾಗಿ ದನ ಮಲಗಿತ್ತು. ಆಗ ನನಗೆ ಏನು ಮಾಡಲು ಸಾಧ್ಯವಾಗಲಿಲ್ಲ. ದನ ಮತ್ತು ಇಬ್ಬರು ಟೋಲ್ ಸಿಬ್ಬಂದಿ ಅಲ್ಲಿಯೇ ಇದ್ದರು. ಹೀಗಾಗಿ ಅಪಘಾತವಾಗಿ ವಾಹನ ಪಲ್ಟಿ ಆಗುತ್ತಿತ್ತು. ಈ ಭಯದಿಂದ ನಾನು ಹಿಂದುಗಡೆ ಬ್ರೇಕ್ ಹೊಡೆದ್ದರಿಂದ ಅಪಘಾತವಾಯಿತು ಎಂದಿದ್ದಾರೆ.

    ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

    Live Tv
    [brid partner=56869869 player=32851 video=960834 autoplay=true]

  • ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    ಉಡುಪಿ: ಟೋಲ್‍ಗೇಟ್ ನಲ್ಲಿ ಅಂಬುಲೆನ್ಸ್ ಅಪಘಾತಕ್ಕೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

    ಘಟನೆ ಸಂಬಂಧ ಈಗಾಗಲೇ ಹೊನ್ನಾವರದ ಲೋಕೇಶ್, ಮಾಧವ ನಾಯ್ಕ ಹಾಗೂ ಜ್ಯೋತಿ ಲೋಕೇಶ್ ನಾಯ್ಕ್ ಈ ಮೂವರು ಮೃತಪಟ್ಟಿದ್ದಾರೆ. ಹೊನ್ನಾವರ ಮೂಲದ ಮಂಜುನಾಥ ಮಾದೇವ ನಾಯ್ಕ ಅವರು ಆಸ್ಪತ್ರೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

    ಗಜಾನನ ಲಕ್ಷ್ಮಣ್ ನಾಯ್ಕ್ ಎಂಬವರಿಗೆ ರಕ್ತದೊತ್ತಡ ಹೆಚ್ಚಾಗಿದ್ದವರಿಂದ ಅವರನ್ನು ಚಿಕಿತ್ಸೆಗೆಂದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆಯಲ್ಲಿ ಟೋಲ್ ಸಿಬ್ಬಂದಿ ಶಂಬಾಜಿ ಸ್ಥಿತಿ ಗಂಭೀರವಾಗಿದ್ದು, ಅಂಬುಲೆನ್ಸ್ ಚಾಲಕ ರೋಶನ್ ಅವರಿಗೂ ಗಾಯಗಳಾಗಿದೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

    ಏನಿದು ಘಟನೆ..?
    ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • 60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್

    60 ಕಿ.ಮೀ ಒಳಗಿನ ಎಲ್ಲ ಟೋಲ್ ತೆರವಿಗೆ ಸೂಚಿಸಿದ್ರೂ ದ.ಕನ್ನಡ ಜಿಲ್ಲೆಯಲ್ಲಿದೆ 48 ಕಿ.ಮೀನಲ್ಲಿ 4 ಟೋಲ್

    ಮಂಗಳೂರು: 60 ಕಿ.ಮೀ ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಇರಬಾರದು ಎಂಬುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿಯಮ. ಆದ್ರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 48 ಕಿ.ಮೀ ಅಂತರದಲ್ಲಿ 4 ಟೋಲ್‍ಗೇಟ್‍ಗಳಿದ್ದು, ಅದರಲ್ಲೂ ಸುರತ್ಕಲ್ ಟೋಲ್‍ಗೇಟ್ ಅಕ್ರಮ ಎಂಬುದು ಟೋಲ್ ವಿರೋಧಿ ಹೋರಾಟಗಾರರ ಆರೋಪವಾಗಿದೆ.

    ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್‍ನ ಎನ್.ಐ.ಟಿ.ಕೆ ಬಳಿ ಕಾರ್ಯಾಚರಿಸುತ್ತಿರುವ ಟೋಲ್‍ಗೇಟ್, ಉಡುಪಿ ಜಿಲ್ಲೆಯ ಹೆಜಮಾಡಿ ಟೋಲ್‍ಗೇಟ್ ಆರಂಭವಾದ ಬಳಿಕ ಮುಚ್ಚುವ ಒಪ್ಪಂದದೊಂದಿಗೆ 6 ವರ್ಷದ ಹಿಂದೆ ತಾತ್ಕಾಲಿಕ ನೆಲೆಯಲ್ಲಿ ಆರಂಭಗೊಂಡಿತ್ತು. ಇದನ್ನೂ ಓದಿ: ಅಗ್ನಿಪಥ್ ಸತ್ಯಾಗ್ರಹದಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು 

    ಆದರೆ ತಾತ್ಕಾಲಿಕ ನೆಲೆಯಲ್ಲಿ ಆರಂಭವಾದ ಟೋಲ್‍ಗೇಟ್ ಕೂಡಾ ಕಾರ್ಯಾಚರಿಸುತ್ತಿರುವುದು ಸುರತ್ಕಲ್ ಟೋಲ್ ವಿರೋಧಿ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಹುಸಿ ಭರವಸೆ ನೀಡಿದ ಸಂಸದರು ಸೇರಿದಂತೆ ಶಾಸಕರು ರಾಜೀನಾಮೆ ನೀಡುವಂತೆ ಹೋರಾಟಗಾರರನ್ನು ಒತ್ತಾಯಿಸಿದ್ದಾರೆ.

    ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 60 ಕಿ.ಮೀ ಒಳಗಿನ ಎಲ್ಲ ಟೋಲ್‍ಗೇಟ್‍ಗಳನ್ನು 90 ದಿನಗಳೊಳಗೆ ತೆರವುಗೊಳಿಸುವುದಾಗಿ ಲೋಕಸಭೆಯಲ್ಲಿ ಹೇಳಿದ್ದರು. ಭಾರತದಲ್ಲಿ ಈ ರೀತಿ 187 ಟೋಲ್ ಬೂತ್‍ಗಳಿದ್ದು, ಕರ್ನಾಟಕದಲ್ಲಿ 28 ಟೋಲ್‍ಗೇಟ್‍ಗಳಿವೆ.

    ಈ ಹಿನ್ನೆಲೆ ಸಂಸದರು, ಶಾಸಕರು ಸುರತ್ಕಲ್ ಟೋಲ್‍ಗೇಟ್ ತೆರವು ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಈ ಭರವಸೆಯ ಗಡುವು ಜೂನ್ 22ಕ್ಕೆ ಮುಕ್ತಾಯಗೊಂಡಿದ್ದು, ಟೋಲ್ ತೆರವಿಗೆ ಯಾವುದೇ ಕ್ರಮವಾಗಿಲ್ಲ. ಬದಲಿಗೆ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಅಕ್ರಮವಾಗಿ ನಡೆಯುತ್ತಿರುವ ಟೋಲ್ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇರೋದು ಮೂರಾಬಟ್ಟೆ ಸರ್ಕಾರ: ಕಾರಜೋಳ 

    ಟೋಲ್‍ಗೇಟ್‍ಗಳನ್ನು ರದ್ದು ಮಾಡುವ ಭರವಸೆಯನ್ನು ಜನಪ್ರತಿನಿಧಿಗಳು ನೀಡುತ್ತಲೇ ಬಂದಿದ್ದಾರೆ. ಆದ್ರೆ ಈ ಭರವಸೆಗಳು ಕಾರ್ಯರೂಪಕ್ಕೆ ಬಂದೇ ಇಲ್ಲ. ಹೀಗಾಗಿ ಇನ್ಮುಂದೆಯಾದ್ರು ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು ತಾವು ನೀಡಿದ ಹೇಳಿಕೆಗಳಿಗೆ ಬದ್ಧರಾಗಿರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

    Live Tv