Tag: tomato rate

  • ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

    ದುಬಾರಿಯಾದ ಟೊಮೆಟೋ ದರ- ರೈತರು ಫುಲ್ ಖುಷ್

    ಚಿಕ್ಕಬಳ್ಳಾಪುರ: ಟೊಮೆಟೋ ದರ (Tomato Price) ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, ಗ್ರಾಹಕರಿಗೆ ಶಾಕ್ ಎದುರಾದರೆ ರೈತರು ಮಾತ್ರ ಫುಲ್ ಖುಷಿಯಾಗಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಮಾರುಕಟ್ಟೆಯಲ್ಲಿ ಟೊಮೆಟೋ ದರ ಕಳೆದ ಒಂದು ವಾರದಿಂದ ಗಗನಕ್ಕೇರಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ 15 ಕೆ.ಜಿ ತೂಕದ ಟೊಮೆಟೋ ಬಾಕ್ಸ್ 1000 ರೂ. ನಿಂದ 1,500 ರೂ. ವರೆಗೆ ಮಾರಾಟವಾಗಿದೆ. ಮೂರು ದಿನಗಳಿಂದಲೂ ನಿರಂತರವಾಗಿ ಬೆಲೆ ಏರಿಕೆಯಾಗಿ ಬುಧವಾರ (ಇಂದು) ಸಹ ಉತ್ತಮ ಗುಣಮಟ್ಟದ ಟೊಮೆಟೋ 1,000 ರೂಪಾಯಿಯವರೆಗೂ ಬಿಕರಿಯಾಗಿದೆ. ಇದು ಸಹಜವಾಗಿ ಟೊಮೆಟೋ ಬೆಳೆದ ರೈತರಿಗೆ ಇದು ಖುಷಿ ತಂದಿದೆ. ಇದನ್ನೂ ಓದಿ: ನೂರರ ಗಡಿ ದಾಟಿದ ಟೊಮೆಟೋ ಬೆಲೆ- ಗೃಹಿಣಿಯರ ಆಕ್ರೋಶ

    ಅಂದಹಾಗೆ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಯಥೇಚ್ಚವಾಗಿ ಟೊಮೆಟೋ ಬೆಳೆಯಲಾಗುತ್ತದೆ. ಚಿಕ್ಕಬಳ್ಳಾಪುರ-ಚಿಂತಾಮಣಿ, ಕೋಲಾರದ ಟೊಮೆಟೋ ಮಾರುಕಟ್ಟೆಯಿಂದ ದೇಶದಲ್ಲಿ ಅಷ್ಟೇ ಅಲ್ಲದೆ ವಿದೇಶಗಳಿಗೂ ಟೊಮೆಟೋ ರಫ್ತು ಮಾಡಲಾಗುತ್ತದೆ. ಆದರೆ ಈ ಬಾರಿ ಮಳೆಯ ಕೊರತೆ, ಅತಿಯಾದ ಬಿಸಿಲಿನ ಪರಿಣಾಮ ಟೊಮೆಟೋ ಬೆಳೆಯಲ್ಲಿ ವ್ಯತ್ಯಾಸ ಆಗಿದ್ದು ಇಳುವರಿಯಲ್ಲಿಯೂ ಕುಂಠಿತವಾಗಿದೆ. ಹೀಗಾಗಿ ಟೊಮೆಟೋ ಸಿಗದೆ ರೇಟ್ ಸಹ ಹೆಚ್ಚಳವಾಗುತ್ತಿದೆ ಎಂದು ವರ್ತಕರು ಹೇಳುತ್ತಾರೆ.

    ಟೊಮೆಟೋ ಬೆಲೆ ಏರಿಕೆ ಗ್ರಾಹಕರು ಶಾಕ್ ಆಗುವಂತೆ ಮಾಡಿದ್ರೆ ರೈತರು ಖುಷಿಯಾಗುವಂತೆ ಮಾಡಿದೆ. ಕೇವಲ ಟೊಮೆಟೋ ಅಷ್ಟೇ ಅಲ್ಲದೆ ಇತರೆ ತರಕಾರಿಗಳ ಬೆಲೆಯೂ ಏರಿಕೆಯಾಗಿ ಜನರ ಜೇಬಿಗೆ ಕತ್ತರಿ ಬೀಳುತಿದ್ದು, ಜನ ಬೆಲೆ ಏರಿಕೆಯಿಂದ ತತ್ತರಿಸುವಂತಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೂರರ ಗಡಿ ದಾಟಿದ ಟೊಮೆಟೋ ಬೆಲೆ- ಗೃಹಿಣಿಯರ ಆಕ್ರೋಶ

    ನೂರರ ಗಡಿ ದಾಟಿದ ಟೊಮೆಟೋ ಬೆಲೆ- ಗೃಹಿಣಿಯರ ಆಕ್ರೋಶ

    ಬೆಂಗಳೂರು/ನವದೆಹಲಿ: ದಿನನಿತ್ಯ ತಮ್ಮ ಅಡುಗೆಯಲ್ಲಿ ಬಳಸುವ ಟೊಮೆಟೋ ದರ (Tomato Price) ಗಗನಕ್ಕೇರಿದು, ಗೃಹಿಣಿಯರು ಆಕ್ರೋಶ ಹೊರಹಾಕುತ್ತಿದ್ದಾರೆ.

    ಹೌದು. ಕಡಿಮೆ ದರದಲ್ಲಿ ಸಿಗುತ್ತಿದ್ದ ಟೊಮೆಟೋಗೆ ಇದೀಗ ಕೆ.ಜಿ ಆಪಲ್ ಬೆಲೆಯಾಗಿದೆ. ಕಳೆದ ಕೆಲ ದಿನಗಳಿಂದ ದೇಶದ ಹಲವು ಭಾಗಗಳಲ್ಲಿ ಟೊಮೆಟೋ ದರ ನೂರರ ಗಡಿ ದಾಟಿದೆ. ಇದನ್ನೂ ಓದಿ: ತರಕಾರಿ, ಹಣ್ಣುಗಳ ಬೆಲೆ ಏರಿಕೆ – ಹಿಂದೆ ಎಷ್ಟಿತ್ತು? ಈಗ ಎಷ್ಟಾಗಿದೆ?

    ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಸೇರಿದಂತೆ ಬೆಂಗಳೂರು ಸುತ್ತಮುತ್ತ ಭಾಗಗಳಲ್ಲಿ ಟೊಮೆಟೋ ಬೆಳೆ ನಾಶವಾಗಿದೆ. ಹೀಗಾಗಿ ದರದಲ್ಲಿ ಏರಿಕೆಯಾಗಿದೆ ಎನ್ನಲಾಗಿದೆ. ಒಂದು ಕೆ.ಜಿ ಟೊಮೆಟೋಗೆ ಹಾಪ್ ಕಾಮ್ಸ್ ನಲ್ಲಿ 110 ರೂ., ಆನ್ ಲೈನ್ ಶಾಪಿಂಗ್ ನಲ್ಲಿ 120 ರೂ. ಆಗಿದೆ. ಹೀಗಾಗಿ ಟೊಮೆಟೋ ಸಾರು, ರಸಂ, ಗೊಜ್ಜು, ಹುಳಿ ಮಾಡೋಕೆ ಆಗಲ್ಲ ಅಂತಾ ಗೃಹಿಣಿಯರು ಆಕ್ರೋಶ ಹೊರಹಾಕುತ್ತಿದ್ದಾರೆ.

    ಉತ್ಪಾದನೆ ಕೊರತೆ, ತೀವ್ರವಾದ ಬಿಸಿಲು ಮತ್ತು ಮುಂಗಾರು ಆಗಮನ ವಿಳಂಬವಾಗಿದ್ದರಿಂದ ಟೊಮೆಟೋ ದರದಲ್ಲಿ ಏರಿಕೆಯಾಗಿದೆ ಎಂದು ರೈತರು ತಿಳಿಸಿದ್ದಾರೆ. ಉತ್ತರ ಪ್ರದೇಶ ಮತ್ತು ಹರಿಯಾಣದಂತಹ ನೆರೆಯ ರಾಜ್ಯಗಳಿಂದ ಪೂರೈಕೆ ಕಡಿಮೆಯಾದ ಕಾರಣ ದೆಹಲಿಯಲ್ಲಿ ಕಳೆದೆರಡು ದಿನಗಳಲ್ಲಿ ಟೊಮೆಟೋ ಬೆಲೆ ದ್ವಿಗುಣಗೊಂಡಿದೆ ಎಂಬುದಾಗಿಯೂ ವರದಿಯಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

    ಮಾರುಕಟ್ಟೆಯಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ

    ಬೆಂಗಳೂರು: ಭಾರೀ ಮಳೆಯಿಂದಾಗಿ ಅಪಾರ ಬೆಳೆ ನಾಶವಾಗಿದ್ದು, ಟೊಮೆಟೋ ಬೆಲೆ ದಿಢೀರನೇ ಗಗನಕ್ಕೆ ಏರಿದೆ. ಇದರಿಂದಾಗಿ ಜನಸಾಮಾನ್ಯರು ತೀವ್ರ ಆತಂಕಕ್ಕೊಳಗಾಗಿದ್ದಾರೆ.

    tomato

    ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತರಕಾರಿ ಬೆಳೆ ಹಾಳಾಗಿದೆ. ಮಾರುಕಟ್ಟೆಗೆ ತರಕಾರಿಗಳು ಕಡಿಮೆ ಪ್ರಮಾಣದಲ್ಲಿ ಬರುತ್ತಿದ್ದು ಬೇಡಿಕೆ ಜಾಸ್ತಿಯಿದೆ. ಪರಿಣಾಮ ಬೆಲೆ ಭಾರೀ ಏರಿಕೆಯಾಗಿದೆ. ಇದನ್ನೂ ಓದಿ: ರೈತರ ಹೋರಾಟಕ್ಕೆ ಇಂದಿಗೆ ಒಂದು ವರ್ಷ – ಸಿಂಘು, ಟ್ರಿಕ್ರಿ ಗಡಿಯಲ್ಲಿ ಅನ್ನದಾತರ ಮಹಾಪಂಚಾಯತ್

    ಬೆಂಗಳೂರಿನ ಮಾರುಕಟ್ಟೆ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕೆಜಿಗಟ್ಟಲೇ ತರಕಾರಿಕೊಳ್ಳಲು ಹೆದರುವ ಪರಿಸ್ಥಿತಿ ಎದುರಾಗಿದೆ. ಅದರಲ್ಲೂ ಟೊಮೆಟೊ ಬೆಲೆ ದಿನೇ ದಿನೇ ಅಧಿಕಗೊಳ್ಳುತ್ತಿದ್ದು, ಹೀಗೆ ಮುಂದುವರಿದರೆ ಟೊಮೆಟೊವನ್ನು ಕೊಳ್ಳಲು ಗ್ರಾಹಕರಿಗೆ ಮತ್ತಷ್ಟು ಹೊರೆಯಾಗಬಹುದು. ಇದನ್ನೂ ಓದಿ: ಖ್ಯಾತ ವಿದ್ವಾಂಸ ಪ್ರೊ. ಕೆ.ಎಸ್.ನಾರಾಯಣಾಚಾರ್ಯ ವಿಧಿವಶ

    ಪ್ರತಿ ಕೆಜಿಗೆ ಟೊಮೆಟೊ ಬೆಲೆ 90-100 ರೂ.ಗಳಾಗಿದ್ದು, ಜನಸಾಮಾನ್ಯರ ಪಾಲಿಗೆ ಇದು ಬಿಸಿತುಪ್ಪದಂತಾಗಿದೆ. ಹಾಪ್‌ ಕಾಮ್ಸ್‌ನಲ್ಲಿ ಒಂದು ಕೆಜಿ ಟೊಮೆಟೊಗೆ 90 ರೂ.ಯಿದ್ದರೆ, ಆನ್‍ಲೈನ್‍ನಲ್ಲಿ ಖರೀದಿಸುವವರಿಗೆ 98 ರೂಪಾಯಿ ಆಗಿದೆ. ಸೇಬಿಗಿಂತ ಟೊಮೆಟೊಗೆ ಅಧಿಕ ಬೆಲೆ ಬಂದಿದೆ.

    1 ಕೆಜಿಗೆ ಎಷ್ಟು ದರ?
    ತೊಗರಿ 70 ರೂ., ಅಡುಗೆ ಬಾಳೆ 40 ರೂ., ಅವರೇಕಾಯಿ 59 ರೂ., ಅವರೇಬೇಳೆ 280 ರೂ., ಅವರೇಬೀಜ 135 ರೂ., ಬ್ರಾಕಲಿ 250 ರೂ., ಕೊತ್ತಂಬರಿ ಸೊಪ್ಪು 108 ರೂ. ಕರಿಬೇವು 67 ರೂ. ಇದೆ.

  • ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

    ಭಾರತದ ರೈತರು ಕೊಟ್ಟ ಶಾಕಿಗೆ ಪಾಕಿನಲ್ಲಿ ಗಗನಕ್ಕೇರಿತು ಟೊಮೆಟೊ ದರ!

    ನವದೆಹಲಿ: ಪುಲ್ವಾಮಾ ಭಯಾನಕ ದಾಳಿ ಬಳಿಕ ಪಾಕಿಸ್ತಾನಕ್ಕೆ ಆರ್ಥಿಕ ಹೊಡೆತ ಬೀಳಲು ಆರಂಭವಾಗಿದೆ. ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ.

    ಲಾಹೋರ್ ನಲ್ಲಿ ಒಂದು ಕಿಲೋ ಟೊಮೆಟೊ ಬೆಲೆ ಪಾಕ್ ಕರೆನ್ಸಿಯಲ್ಲಿ 180 ರೂಪಾಯಿಯ ಗಡಿ ದಾಟಿದ್ದು, ಇದರಿಂದ ಪಾಕ್ ಗ್ರಾಹಕರು ಕಂಗೆಟ್ಟು ಹೋಗಿದ್ದಾರೆ. ಇದರ ಜೊತೆಯಲ್ಲಿ ಬದನೆಕಾಯಿ, ಮೂಲಂಗಿ, ಕೋಸು, ಹಸಿ ಮೆಣಸಿನಕಾಯಿ ಮುಂತಾದ ತರಕಾರಿ ಹಾಗೂ ಕೆಲವು ಹಣ್ಣುಗಳ ಬೆಲೆಯೂ ಕೂಡ ಸಿಕ್ಕಾಪಟ್ಟೆ ಏರಿದೆ.

    ನಮ್ಮ ಆಹಾರ ತಿಂದು, ನಮ್ಮ ಸೈನಿಕರ ಮೇಲೆ ದಾಳಿ ನಡೆಸುವ ಪಾಕಿಸ್ತಾನಕ್ಕೆ ನಾವು ಬೆಳೆದ ಟೊಮೆಟೋ ಪೂರೈಕೆ ಮಾಡುವುದಿಲ್ಲ. ಪಾಕಿಸ್ತಾನಕ್ಕೂ ಸಹ ಬೇರೆ ಕಡೆಯಿಂದ ತರಕಾರಿಗಳು ರಫ್ತು ಆಗಬಾರದು ಎಂದು ಮಧ್ಯಪ್ರದೇಶದ ಜಭುವಾ ಜಿಲ್ಲೆಯ ರೈತರು ಹೇಳಿದ್ದಾರೆ.

    ದೆಹಲಿಯ ಅಜಾದ್‍ಪುರ ಮಂಡಿಯಿಂದ ಪಾಕಿಸ್ತಾನಕ್ಕೆ ಬಹುತೇಕ ತರಕಾರಿಗಳು ರಫ್ತಾಗುತ್ತಿತ್ತು. ಪ್ರತಿದಿನ 750- 800 ಟ್ರಕ್ ಗಳಲ್ಲಿ ಪಾಕಿಸ್ತಾನಕ್ಕೆ ತರಕಾರಿಗಳು ರಫ್ತಾಗುತಿತ್ತು. ಈಗ ಅಲ್ಲಿಂದ ಸಹ ತರಕಾರಿ ರಫ್ತಾಗುತ್ತಿಲ್ಲ. ಎಲ್ಲ ಕಡೆ ರಫ್ತು ನಿಂತ ಹಿನ್ನೆಲೆಯಲ್ಲಿ ಪಾಕಿಸ್ತಾನದಲ್ಲಿ ತರಕಾರಿಗಳ ಬೆಲೆ ಏರಿಕೆಯಾಗಿದೆ.

    ಪಾಕಿಸ್ತಾನಕ್ಕೆ ನೀಡಿದ್ದ ಪರಮಾಪ್ತ ರಾಷ್ಟದ ಸ್ಥಾನವನ್ನು ಭಾರತ ಹಿಂಪಡೆಯಲಾಗಿದ್ದು, ಇದರೊಂದಿಗೆ ಪಾಕಿಸ್ತಾನದಿಂದ ಭಾರತಕ್ಕೆ ರಫ್ತು ಆಗುವ ಎಲ್ಲಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಶೇ.200 ರಷ್ಟು ಹೆಚ್ಚಳ ಮಾಡಿದೆ. ಈ ಮೂಲಕ ಪಾಕಿಸ್ತಾನ ಆರ್ಥಿಕತೆಗೆ ಭಾರತ ಪೆಟ್ಟು ನೀಡಿದೆ. ಅಕ್ಕಿ, ತರಕಾರಿ, ಪೀಠೋಪಕರಣಗಳು, ಸಿಮೆಂಟ್, ಚರ್ಮದ ಸರಕು, ಜವಳಿ ಬಟ್ಟೆ, ವಿದ್ಯುತ್ ವಸ್ತುಗಳು, ಶಸ್ತ್ರಚಿಕಿತ್ಸೆ ವಸ್ತುಗಳು ಸೇರಿ ಹಲವು ವಸ್ತುಗಳನ್ನು ಪಾಕಿಸ್ತಾನದಿಂದ ಭಾರತ ಆಮದು ಮಾಡಿಕೊಳ್ಳುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv