Tag: TOPPI

  • ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

    ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು- ಸಿದ್ದುಗೆ ಸಿ.ಟಿ.ರವಿ ಪ್ರಶ್ನೆ

    ಬೆಂಗಳೂರು: ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ‘ಕಂಬಳಿ’ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಕುರುಬ ಸಮುದಾಯದ ಸಂಕೇತವಾಗಿರುವ ಕಂಬಳಿ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ನಾಯಕರು ಹಗ್ಗಜಗ್ಗಾಟ ನಡೆಸುತ್ತಿದ್ದಾರೆ.

    C.T.RAVI TWEET

    ಸಮಾವೇಶವೊಂದರಲ್ಲಿ ಕಂಬಳಿಯನ್ನು ಹೊದ್ದುಕೊಂಡು ಸಮುದಾಯಕ್ಕೆ ಭರವಸೆ ನುಡಿಗಳನ್ನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು, ಮುಸಲ್ಮಾನ ಸಮುದಾಯದ ಟೋಪಿ ಹಾಕಿರುವ ಸಿದ್ದರಾಮಯ್ಯ ಅವರ ಫೋಟೊವನ್ನು ಟ್ವಿಟರ್‍ನಲ್ಲಿ ಹಂಚಿಕೊಂಡು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಿಎಂ ಆಗ್ಲೇಬೇಕುಂತ ರಗ್ಗು ಹೊದ್ದು ಮಲಗಿದ್ದ ಸಿದ್ದರಾಮಯ್ಯರನ್ನು ಕರ್ಕೊಂಡು ಬಂದಿದ್ದು ನಾನು: ಹೆಚ್‍ಡಿಕೆ

    siddaramaiah

    “ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ?” ಎಂದು ಕುಟುಕಿದ್ದಾರೆ.

    ಟೀಕಿಸುವ ಭರದಲ್ಲಿ ಸಿ.ಟಿ.ರವಿ ಅವರು ಕೀಳುಮಟ್ಟದ ಪದ ಬಳಸಿ ವಿವಾದಕ್ಕೆ ಗುರಿಯಾಗಿದ್ದಾರೆ. ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಪರಸ್ಪರ ಕೀಳುಮಟ್ಟದ ಭಾಷೆ ಬಳಸಿ ವಾಕ್ಸಮರ ನಡೆಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಪಕ್ಷದಲ್ಲಿದ್ದುಕೊಂಡೇ ಬೆನ್ನಿಗೆ ಚೂರಿ ಹಾಕುವವರು ತಾಯಿ ದ್ರೋಹಿಗಳು: ಸಿದ್ದರಾಮಯ್ಯ