Tag: Totapuri 2

  • ‘ತೋತಾಪುರಿ 2’ ಚಿತ್ರದಲ್ಲಿ ಡಾಲಿ: ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಧನಂಜಯ್

    ‘ತೋತಾಪುರಿ 2’ ಚಿತ್ರದಲ್ಲಿ ಡಾಲಿ: ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಧನಂಜಯ್

    ಗಾಗಲೇ ಹಾಡು ಮತ್ತು ಟ್ರೈಲರ್ ಮೂಲಕ ಸದ್ದು ಮಾಡಿದ್ದ ‘ತೋತಾಪುರಿ’ (Totapuri 2), ಸಿನಿಮಾ ಬಿಡುಗಡೆಯಾದ ಮೇಲೂ ಗಮನ ಸೆಳೆದಿತ್ತು. ಇದೀಗ ‘ತೋತಾಪುರಿ-2’ ಬಿಡುಗಡೆಗೆ ಸಿದ್ಧವಾಗಿದೆ. ಇತ್ತೀಚೆಗೆ ಹರಿಬಿಟ್ಟ ಈ ಸಿನಿಮಾದ ಪೋಸ್ಟರ್‌ಗಳು ಹಾಗೂ ಹಾಡೊಂದು ಸದ್ದು ಮಾಡಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿವೆ. ಜಗ್ಗೇಶ್ (Jaggesh)-ಡಾಲಿ ಧನಂಜಯ್ ಕಾಂಬಿನೇಷನ್ ಇದೇ ಮೊದಲ ಬಾರಿಗೆ ಎಂಬುದು ಒಂದೆಡೆಯಾದರೆ, ಎರಡು ಭಾಗಗಳಲ್ಲಿ ಮೂಡಿಬಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾದಲ್ಲಿ ಕಾಣಿಸಿಕೊಂಡಿರೋದು ಮತ್ತೊಂದು ವಿಶೇಷ.

    ಡಾಲಿ ಧನಂಜಯ್ (Dhananjay) ಈವರೆಗೂ ವಿಭಿನ್ನ ರೀತಿಯ ಪಾತ್ರಗಳ ಮೂಲಕ ಮಿಂಚು ಹರಿಸಿದ್ದಾರೆ. ಅವರು ನಟಿಸಿರುವ ಪಾತ್ರಗಳಲ್ಲಿ ನಾಯಕ-ಖಳನಾಯಕನಾಗಿ ಅಬ್ಬರಿಸಿದ್ದಾರೆ. ಇದೀಗ ‘ತೋತಾಪುರಿ-2’ ಸಿನಿಮಾದ ಮೂಲಕ ಮತ್ತಷ್ಟು ಸೌಂಡು ಮಾಡಲು ಸಜ್ಜಾಗಿದ್ದಾರೆ. ಇದನ್ನೂ ಓದಿ:ಮಗಳೊಂದಿಗಿನ ಕ್ಯೂಟ್ ಸೆಲ್ಫಿ ಹಂಚಿಕೊಂಡ ರಾಧಿಕಾ ಪಂಡಿತ್

    ಈಗಾಗಲೇ ತೋತಾಪುರಿ ಮೊದಲ ಭಾಗದಲ್ಲಿ ಅವರ ಪಾತ್ರದ ಪರಿಚಯವಾಗಿತ್ತು. ಆದರೆ ಅವರು ಎಷ್ಟು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ, ಗೆಟಪ್, ಡೈಲಾಗ್ ಇತ್ಯಾದಿ ವಿಷಯಗಳ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ಹೊರ ಹಾಕಿರಲಿಲ್ಲ. ಇದೀಗ ‘ತೋತಾಪುರಿ-2’ ಬಿಡುಗಡೆಯ ಹಂತಕ್ಕೆ ಬಂದಿದೆ. ಹೀಗಾಗಿ ಅವರ ಪಾತ್ರದ ಬಗ್ಗೆ ಒಂದಷ್ಟು ವಿವರಣೆ ಹೊರಬಿದ್ದಿದೆ.

    ನಾರಾಯಣ್ ಪಿಳ್ಳೈ ಎಂಬ ಪಾತ್ರ ನಿರ್ವಹಿಸುತ್ತಿರುವ ಡಾಲಿ, ಬೃಹತ್ ಉದ್ಯಮಿಯಾಗಿ ಕಾಣಿಸಿಕೊಂಡಿದ್ದಾರೆ. ಅವರ ಲೈಫ್‌ಸ್ಟೈಲ್, ಲವ್‌ಸ್ಟೋರಿ ಸೇರಿದಂತೆ ಇನ್ನಿತರ ವಿಷಯಗಳನ್ನು ‘ತೋತಾಪುರಿ-2’ರಲ್ಲಿ ತೆರೆದಿಡುವ ಪ್ರಯತ್ನವಾಗಿದೆಯಂತೆ. ಇತ್ತೀಚೆಗಷ್ಟೇ ಡಾಲಿ ಹಾಗೂ ಸುಮನ್ ರಂಗನಾಥ್ ಕಾಣಿಸಿಕೊಂಡಿರುವ ‘ಮೊದಲ ಮಳೆ’ ಹಾಡು ಬಿಡುಗಡೆಯಾಗಿದ್ದು, ಇದೀಗ ‘ಲಾಂಗ್ ಡ್ರೈವ್ ಹೋಗೋಣ’ ಎಂಬ ಹಾಡು ಸಹ ಬಿಡುಗಡೆಯಾಗಲಿದೆ.

    ಚಿತ್ರದಲ್ಲಿ ಡಾಲಿ ಮೂರ‍್ನಾಲ್ಕು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದು, ವಿಭಿನ್ನ ಶೇಡ್ ಕೂಡ ಇರಲಿದೆ ಎಂಬುದು ಸದ್ಯದ ಮಾಹಿತಿ. ಈವರೆಗೂ ಕಾಣಿಸಿಕೊಂಡಿರದ ಸ್ಟೈಲ್, ಮಾತಿನ ಲಹರಿ ‘ತೋತಾಪುರಿ-2’ ಮೂಲಕ ಅನಾವರಣ ಮಾಡಲು ಸಜ್ಜಾಗಿದೆ ಚಿತ್ರತಂಡ. ಬಿಡುಗಡೆಗೂ ಮುನ್ನ ಡಾಲಿ ಗೆಟಪ್‌ಗಳನ್ನು ಹರಿಬಿಟ್ಟಿರುವ ಚಿತ್ರತಂಡ, ಸಿನಿಮಾ ಮೇಲೆ ನೀರಿಕ್ಷೆ ಹೆಚ್ಚುವಂತೆ ಮಾಡಿದೆ. ಮೈಸೂರು, ಕೂರ್ಗ್, ಕೇರಳ ಸೇರಿದಂತೆ ರಮಣೀಯ ಸ್ಥಳಗಳಲ್ಲಿ ಡಾಲಿ-ಸುಮನ್ ಅಭಿನಯಿಸಿರುವ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.

    ಇನ್ನು ಡಾಲಿ ಜೋಡಿಯಾಗಿ ಸುಮನ್ ರಂಗನಾಥ್ ನಟಿಸಿದ್ದಾರೆ. ಹಾಗೆಯೇ ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಬೃಹತ್ ತಾರಾಗಣವೇ ಇದೆ. ವಿಜಯಪ್ರಸಾದ್ (Vijay Prasad) ನಿರ್ದೇಶನವಿರುವ ಈ ಚಿತ್ರವನ್ನು ಕೆ.ಎ.ಸುರೇಶ್ನಿ (KA Suresh) ರ್ಮಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ರಜನಿ ‘ಜೈಲರ್’ ಜೊತೆ ಜಗ್ಗೇಶ್ ‘ತೋತಾಪುರಿ 2’ ಸಿನಿಮಾ

    ಸೂಪರ್‌ಸ್ಟಾರ್ ರಜನಿಕಾಂತ್ (Rajinikanth) ನಟನೆಯ ಬಹು ನಿರೀಕ್ಷಿತ ‘ಜೈಲರ್’ (Jailer) ಚಿತ್ರ ಆಗಸ್ಟ್ 10 ರಂದು ತೆರೆಕಾಣುತ್ತಿದೆ. ಈ ಕಾರಣದಿಂದಲೇ ಆಗಸ್ಟ್ 11ರಂದು ಯಾವುದೇ ಕನ್ನಡ ಸಿನಿಮಾಗಳು ಬಿಡುಗಡೆಯನ್ನು ಅನೌನ್ಸ್ ಮಾಡಿರಲಿಲ್ಲ. ಆದರೆ, ಈಗ ಕನ್ನಡ ಚಿತ್ರವೊಂದು ಜೈಲರ್ ಮುಂದೆ ಬರಲು ರೆಡಿಯಾಗಿದೆ. ಅದು ‘ತೋತಾಪುರಿ-2’ (Totapuri 2) ಚಿತ್ರ.

    ಹೌದು ಜಗ್ಗೇಶ್ (Jaggesh) ಮತ್ತು ಧನಂಜಯ್ (Dolly Dhananjay) ಕಾಂಬಿನೇಶನ್‌ನಲ್ಲಿ  ಮೂಡಿಬಂದಿರುವ ಈ ಚಿತ್ರ ಆಗಸ್ಟ್ ‌ನಲ್ಲಿ ತೆರೆಕಾಣುವುದಾಗಿ ಹೇಳಿಕೊಂಡಿತ್ತು. ಆದರೆ, ಈಗ ಆಗಸ್ಟ್ 11ರಂದು ತೆರೆಗೆ ಬರಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ಮಾತನಾಡುವ ನಿರ್ಮಾಪಕ ಸುರೇಶ್, ‘ನಾವು ಆಗಸ್ಟ್ ಎರಡನೇ ವಾರ ಬರಲು ತಯಾರಿ ಮಾಡಿಕೊಳ್ಳುತ್ತಿರುವುದು ನಿಜ’ ಎನ್ನುತ್ತಾರೆ. ಇದನ್ನೂ ಓದಿ:ಅಮ್ಮನ ಜೊತೆ ಅಮರನಾಥ ಯಾತ್ರೆಯಲ್ಲಿ ಸಾನ್ಯ ಅಯ್ಯರ್

    ‘ತೋತಾಪುರಿ-2’ನಲ್ಲಿ ಜಗ್ಗೇಶ್ ಜೊತೆಗೆ ಧನಂಜಯ್ ಅವರಿಗೂ ಪ್ರಮುಖ ಪಾತ್ರವಿದೆ. ಇಲ್ಲಿ ಸುಮನ್ ರಂಗನಾಥ್ ಕೂಡಾ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತೋತಾಪುರಿ ಚಿತ್ರದ ಮೊದಲ ಭಾಗದಲ್ಲಿ ‘ಬಾಗ್ಲು ತೆಗಿ ಮೇರಿ ಜಾನ್ ಹಾಡು ಸೂಪರ್ ಹಿಟ್ ಆಗಿತ್ತು. ರೊಮ್ಯಾಂಟಿಕ್ ಕಾಮಿಡಿ ಶೈಲಿಯಲ್ಲಿ ಮೂಡಿಬಂದಿದ್ದ ಈ ಹಾಡಿಗೆ ಲಕ್ಷಾಂತರ ಹಿಟ್ಸ್ ದಾಖಲಾಗಿತ್ತು. ಇದೀಗ ‘ತೋತಾಪುರಿ-2 ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಎಲ್ಲೆಡೆ ಸದ್ದು ಮಾಡುತ್ತಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹಾಡು ಮೋಡಿ ಮಾಡುತ್ತಿರೋದು ವಿಶೇಷ.

    ಹೃದಯಶಿವ ಸಾಹಿತ್ಯ ರಚಿಸಿರುವ ‘ಮೊದಲ ಮಳೆ ಮನದೊಳಗೆ… ಎಂಬ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸೌಂಡು ಮಾಡುತ್ತಿಿದೆ. ಡಾಲಿ ಧನಂಜಯ್ ಹಾಗೂ ಸುಮನ್ ರಂಗನಾಥ್ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದು, ಸಂಜಿತ್ ಹೆಗ್ಡೆ ಕಂಠಸಿರಿಯಲ್ಲಿ ‘ಮಳೆ ಹಾಡು ಮೂಡಿ ಬಂದಿದೆ.ಈ ಮೆಲೋಡಿ ಹಾಡಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೋತಾಪುರಿ 2 ಮೊದಲ ಪೋಸ್ಟರ್ ರಿಲೀಸ್ : ಜಗ್ಗೇಶ್ ಜೊತೆ ಡಾಲಿ ಜುಗಲ್ ಬಂದಿ

    ತೋತಾಪುರಿ 2 ಮೊದಲ ಪೋಸ್ಟರ್ ರಿಲೀಸ್ : ಜಗ್ಗೇಶ್ ಜೊತೆ ಡಾಲಿ ಜುಗಲ್ ಬಂದಿ

    ಸಿದ್ಲಿಂಗು ಖ್ಯಾತಿಯ ನಿರ್ದೇಶಕ ವಿಜಯ್ ಪ್ರಸಾದ್ ಈಗಾಗಲೇ ಒಂದು ತೋತಾಪುರಿಯನ್ನು ಪ್ರೇಕ್ಷಕರಿಗೆ ತಿನ್ನಿಸಿದ್ದಾರೆ. ಮತ್ತೊಂದು ತೋತಾಪುರಿ ತಿನ್ನಿಸಲು ರೆಡಿ ಮಾಡಿಕೊಂಡಿದ್ದಾರೆ. ಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Totapuri 2) ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಪ್ರಚಾರದ ಮೊದಲ ಭಾಗವಾಗಿ ಮೊದಲ ಪೋಸ್ಟರ್ (Poster) ರಿಲೀಸ್ ಮಾಡಿದ್ದಾರೆ.

    ಮೊನ್ನೆಯಷ್ಟೇ ಬಾಲ ಆಂಜನೇಯ, ಬಾಲ ಕೃಷ್ಣ, ಬಾಲ ಗಣಪ ಹೀಗೆ ಜೋಡಿಯ ಪೋಸ್ಟರ್ ಗಳನ್ನು ನಿರ್ಮಾಪಕ ಕೆ.ಎ ಸುರೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಜಗ್ಗೇಶ್ ಮತ್ತು ಡಾಲಿ ಧನಂಜಯ್ ಇರುವ ಒಂದು ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ.

    ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ.

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ. ಇದನ್ನೂ ಓದಿ:18 ವಯಸ್ಸಿಗೆ ನಾಯಕಿಯಾಗಿ ಬಾಲಿವುಡ್‌ಗೆ ಎಂಟ್ರಿ ಕೊಡ್ತಿದ್ದಾರೆ ರವೀನಾ ಟಂಡನ್ ಪುತ್ರಿ

    ನವರಸ ನಾಯಕ ಜಗ್ಗೇಶ್ ಅವರ ಚಿತ್ರಜೀವನದಲ್ಲಿ ಇದೇ ಮೊದಲ ಬಾರಿಗೆ 100ಕ್ಕೂ ಹೆಚ್ಚು ದಿವಸಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ನಿರ್ಮಾಪಕ ಕೆ ಎ ಸುರೇಶ್ `ರಾಜು ಕನ್ನಡ ಮೀಡಿಯಂ’ ಚಿತ್ರದ ಯಶಸ್ಸಿನ ನಂತರ ಒಂದು ಭರವಸೆ ಮೂಡಿಸುವ ತಂಡದ ಜೊತೆ ಹಣ ಹೂಡಿದ್ದಾರೆ. ವಿಜಯಪ್ರಸಾದ್ `ಸಿದ್ಲಿಂಗು’ ಸಿನಿಮಾದಲ್ಲಿ ಟೀಚರ್ ಆಗಿದ್ದ ಸುಮನ್ ರಂಗನಾಥ್ ಈ ಚಿತ್ರದಲ್ಲೂ ಪ್ರಮುಖ ಪಾತ್ರ ಗಿಟ್ಟಿಸಿಕೊಂಡಿದ್ದಾರೆ. ಅನೂಪ್ ಸೀಳಿನ್ ಸಂಗೀತ, ನಂಜೇಶ್ ಬಾಬು ಛಾಯಾಗ್ರಹಣ ಮಾಡಿದ್ದಾರೆ. ಮೈಸೂರು, ಶ್ರೀರಂಗಪಟ್ಟಣ, ಕೊಡಗಿನಲ್ಲಿ ಚಿತ್ರೀಕರಣ ಮಾಡಲಾಗಿದೆ.

    `ಎರಡನೇ ಮದುವೆ’, `ಗೋವಿಂದಾಯ ನಮಃ’, ಶ್ರಾವಣಿ ಸುಬ್ರಮಣಿ, ಆರ್ ಎಕ್ಸ್ ಸೂರಿ, ಶಿವಲಿಂಗ ಮತ್ತು ರಾಜು ಕನ್ನಡ ಮೀಡಿಯಂ ನಂತರ  `ತೋತಾಪುರಿ’, ‘ತೋತಾಪುರಿ 2’ ಚಿತ್ರವನ್ನು ನಿರ್ಮಿಸಿರುವ ನಿರ್ಮಾಪಕ ಸುರೇಶ್  ಈ  ಸಿನಿಮಾವನ್ನು ಯಾವಾಗ ರಿಲೀಸ್ ಮಾಡುತ್ತಾರೋ ಕಾದು ನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಭಿನ್ನ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ ‘ತೋತಾಪುರಿ 2’

    ವಿಭಿನ್ನ ಪೋಸ್ಟರ್ ಮೂಲಕ ಗಮನ ಸೆಳೆಯುತ್ತಿದೆ ‘ತೋತಾಪುರಿ 2’

    ಗ್ಗೇಶ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್ ನ ‘ತೋತಾಪುರಿ’ ಸಿನಿಮಾ ಈಗಾಗಲೇ ಪ್ರೇಕ್ಷಕರ ಮನಗೆದ್ದಿದೆ. ತೋತಾಪುರಿ ಸಿನಿಮಾವನ್ನು ಜನರು ಮೆಚ್ಚಿಕೊಂಡ ಬೆನ್ನಲ್ಲೇ ತೋತಾಪುರಿ 2 (Totapuri 2) ಸಿನಿಮಾವನ್ನು ರಿಲೀಸ್ ಮಾಡಲು ನಿರ್ಮಾಪಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಿನಿಮಾ ಪ್ರಚಾರವಾಗಿ ವಿಭಿನ್ನ ರೀತಿಯ ಪೋಸ್ಟರ್ ಅನ್ನು ಅವರು ಹಂಚಿಕೊಳ್ಳುತ್ತಿದ್ದಾರೆ.

    ಬಾಲ ಆಂಜನೇಯ, ಬಾಲ ಕೃಷ್ಣ, ಬಾಲ ಗಣಪ ಹೀಗೆ ಜೋಡಿಯ ಪೋಸ್ಟರ್ ಗಳನ್ನು ನಿರ್ಮಾಪಕ ಕೆ.ಎ ಸುರೇಶ್ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದು, ಪೋಸ್ಟರ್  ಕಾನ್ಸೆಪ್ಟ್ ಗೂ ಮತ್ತು ಸಿನಿಮಾಗೂ ಸಂಬಂಧವಿರಬಹುದು ಎನ್ನುವ ರೀತಿಯಲ್ಲಿ ಕುತೂಹಲ ಮೂಡಿಸುತ್ತಿದ್ದಾರೆ.

    ಕೆ.ಎ.ಸುರೇಶ್ (KA Suresh) ಆರ್ಟ್ಸ್ ಬ್ಯಾನರ್ ಅಡಿಯಲ್ಲಿ  ಈ ಸಿನಿಮಾ ನಿರ್ಮಾಣಗೊಂಡಿದ್ದು, ನೀರ್ ದೋಸೆ ಚಿತ್ರದ ಯಶಸ್ವೀ ತಂಡ ಮತ್ತೊಮ್ಮೆ `ತೋತಾಪುರಿ’ಯ ಮೂಲಕ ಒಂದಾಗಿರೋದು ವಿಶೇಷ. ನಿರ್ದೇಶಕ ವಿಜಯಪ್ರಸಾದ್ (Vijay Prasad) ಅವರ ಈ ಚಿತ್ರದಲ್ಲಿ ನವರಸ ನಾಯಕ ಜಗ್ಗೇಶ್ (Jaggesh), ದತ್ತಣ್ಣ, ಸುಮನ್ ರಂಗನಾಥ್ ಮತ್ತೆ ಒಂದಾಗಿದ್ದಾರೆ. ಇದಲ್ಲದೆ ಉದ್ಯಮಿಯ ಪಾತ್ರದಲ್ಲಿ ಡಾಲಿ ಧನಂಜಯ ಮತ್ತು ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಇದನ್ನೂ ಓದಿ:‘ಎಮರ್ಜೆನ್ಸಿ’ ನಂತರದ ಸಿನಿಮಾ ಸುಳಿವು ಕೊಟ್ಟ ಕಂಗನಾ ರಣಾವತ್

    ನಿರ್ಮಾಪಕ ಕೆ ಎ ಸುರೇಶ್ ಅವರ ಹಿಂದಿನ ಸಿನಿಮಾಗಳಿಗಿಂತ ಹೆಚ್ಚಿನ ಭರವಸೆ ಈ ಚಿತ್ರ ಮೂಡಿಸಿದೆ. ಮಾರುಕಟ್ಟೆಯಲ್ಲಿ ಈ ತಂಡದ ಬಗ್ಗೆಯೇ ದೊಡ್ಡ ನಿರೀಕ್ಷೆ ಉದ್ಭವವಾಗಿದೆ. ಕನ್ನಡ ಚಿತ್ರ ರಂಗದಲ್ಲಿ ಯಶಸ್ಸನ್ನು ಬೆನ್ನಿಗೆ ಕಟ್ಟಿಕೊಂಡಿರುವ ನಿರ್ಮಾಪಕ ಕೆ ಎ ಸುರೇಶ್ `ತೋತಾಪುರಿ’. ಚಿತ್ರದಲ್ಲಿ ಮೊದಲ ಬಾರಿಗೆ ಡಾಲಿ ಧನಂಜಯ್ (Dhananjay),  ಜಗ್ಗೇಶ್ ಜೊತೆಯಾಗಿದ್ದಾರೆ. ನಾಯಕಿ ಅದಿತಿ ಪ್ರಭುದೇವ ಮುಸ್ಲಿಂ ಹುಡುಗಿ, ಸುಮನ್ ರಂಗನಾಥ್ ಕ್ರಿಶ್ಚಿಯನ್ ಹೆಣ್ಣುಮಗಳಾಗಿ ಅಭಿನಯಿಸಿದ್ದಾರೆ.