ಹನೋಯಿ: ವಿಯೆಟ್ನಾಂನಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ 34 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 8ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಶನಿವಾರ ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಿಂದಾಗಿ ಹಾ ಲಾಂಗ್ ಕೊಲ್ಲಿ ಪ್ರವಾಸಿ ತಾಣದಲ್ಲಿ ದುರ್ಘಟನೆ ನಡೆದಿದೆ.
ಪ್ರವಾಸಿ ದೋಣಿಯಲ್ಲಿ 48 ಮಂದಿ ಪ್ರಯಾಣಿಕರು ಹಾಗೂ ಐವರು ಸಿಬ್ಬಂದಿ ಇದ್ದರು. ಅವರೆಲ್ಲರೂ ವಿಯೆಟ್ನಾಮ್‌ನವರೇ ಎಂದು ವದರಿಗಳು ತಿಳಿಸಿವೆ. ವಿಷಯ ತಿಳಿದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, 11 ಜನರನ್ನ ರಕ್ಷಣೆ ಮಾಡಿದ್ದಾರೆ.
ತಿರುವನಂತಪುರಂ: ಪ್ರವಾಸಿ ದೋಣಿ (Tourist Boat) ಮುಳುಗಿ ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ಕೇರಳದ (Kerala) ಮಲಪ್ಪುರಂನಲ್ಲಿ (Malappuram) ನಡೆದಿದೆ.
ಕೇರಳದ ಮಲಪ್ಪುರಂನ ತನೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. 40 ಪ್ರಯಾಣಿಕರು ದೋಣಿಯಲ್ಲಿ ಇದ್ದರು. ಘಟನೆಯ ವೇಳೆ ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.
ಸಚಿವ ವಿ. ಅಬ್ದುರಹಿಮಾನ್ ಮಾಹಿತಿ ನೀಡಿದ್ದು, ಸಾವಿನ ಸಂಖ್ಯೆ ಈಗ 22ಕ್ಕೆ ಏರಿದೆ. 7 ಜನರ ಸ್ಥೀತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಪರಿಹಾರ ನಿಧಿಯಿಂದ 2 ಲಕ್ಷ ರೂ ಘೋಷಿಸಿದ್ದಾರೆ.
Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM @narendramodi
ಕೇರಳದ ಮಲಪ್ಪುರಂನಲ್ಲಿ ದೋಣಿ ದುರಂತದಿಂದ ಪ್ರಾಣಹಾನಿಯಾಗಿರುವುದು ನೋವು ತಂದಿದೆ. ಮೃತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ವನ್ನು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾಗುವುದು ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ- ಇಂದಿನಿಂದ ಎಣ್ಣೆ ಸಿಗಲ್ಲ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೂಡ ಸಾವಿಗೆ ಸಂತಾಪ ಸೂಚಿಸಿ ಹೇಳಿಕೆ ನೀಡಿದ್ದು, ಸಂಘಟಿತ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಮಲಪ್ಪುರಂ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಸಿಎಂ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ತಾನೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ದುಪ್ಪಟ್ಟು ದರಕ್ಕೆ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ 1.72 ಲಕ್ಷ ಮೌಲ್ಯದ ಮದ್ಯ ವಶಕ್ಕೆ