Tag: Tourist spot

  • ಕೋಟೆನಾಡಲ್ಲಿ ಬಂದ್ ಆಗಿದ್ದ ಪ್ರವಾಸಿ ತಾಣಗಳು ಓಪನ್

    ಕೋಟೆನಾಡಲ್ಲಿ ಬಂದ್ ಆಗಿದ್ದ ಪ್ರವಾಸಿ ತಾಣಗಳು ಓಪನ್

    – ಆಕರ್ಷಿಸುತ್ತಿದೆ ಆಡುಮಲ್ಲೇಶ್ವರ ಮೃಗಾಲಯ

    ಚಿತ್ರದುರ್ಗ: ಕೊರೊನಾ ಭೀತಿಯಿಂದಾಗಿ ಸತತ ಎರಡು ತಿಂಗಳುಗಳಿಂದ ಸಂಪೂರ್ಣ ಬಂದ್ ಆಗಿದ್ದ ಜೋಗಿಮಟ್ಟಿ ಅರಣ್ಯ ಧಾಮದಲ್ಲಿರುವ ಚಿತ್ರದುರ್ಗ ಆಡುಮಲ್ಲೇಶ್ವರ ಕಿರು ಮೃಗಾಲಯವನ್ನು ತೆರೆಯಲಾಗಿದೆ. ಜೂನ್ 24 ರಿಂದ ಪ್ರವಾಸಿಗರು ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಡುಮಲ್ಲೇಶ್ವರ ಕಿರುಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

    ಕರ್ನಾಟಕ ಮೃಗಾಲಯ ಪ್ರಾಧಿಕಾರ ವ್ಯಾಪ್ತಿಯಲ್ಲಿರುವ ಆಡುಮಲ್ಲೇಶ್ವರ ಕಿರು ಮೃಗಾಲಯವನ್ನು ಕೋವಿಡ್-19 ಎರಡನೇ ಅಲೆಯ ತೀವ್ರತೆಯನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರ ವೀಕ್ಷಣೆಗೆ ನಿಬರ್ಂಧಿಸಲಾಗಿತ್ತು. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಜೂನ್ 21ರಂದು ಕೋವಿಡ್-19 ನಿಯಂತ್ರಣದ ಮಾನದಂಡಗಳೊಂದಿಗೆ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಅನ್‍ಲಾಕ್ ಘೋಷಿಸಿರುತ್ತಾರೆ. ಅದರಂತೆ ಕರ್ನಾಟಕದ ವಿವಿಧ ಮೃಗಾಲಯಗಳನ್ನು ಪ್ರವಾಸಿಗರು, ವೀಕ್ಷಕರ ಭೇಟಿಗೆ ಅವಕಾಶ ಕಲ್ಪಿಸಲಾಗಿರುತ್ತದೆ.

    ನಾಳೆಯಿಂದ ಕಿರುಮೃಗಾಲಯ ಪ್ರವಾಸಿಗರ ವೀಕ್ಷಣೆಗೆ ಲಭ್ಯವಿದ್ದು, ನೂತನವಾಗಿ ನಿರ್ಮಾಣ ಮಾಡಿರುವ ಸುಸಜ್ಜಿತ ಬೃಹತ್ ಕರಡಿ ಜೋನ್, ಚಿರತೆಗಳ ಘರ್ಜನೆ, ಜಿಂಕೆಗಳ ಫ್ರೀಡಮ್ ಓಡಾಟ ಹಾಗು ವಿವಿಧ ಆಕರ್ಷಕ ಪಕ್ಷಿಗಳ ನಿನಾದವನ್ನು ಪ್ರವಾಸಿಗರು ಸವಿಯಬಹುದಾಗಿದೆ. ಆದರೆ ಕಿರು ಮೃಗಾಲಯಕ್ಕೆ ಮಕ್ಕಳೊಂದಿಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ವೀಕ್ಷಣೆಗೆ ಧಾವಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಕಿರುಮೃಗಾಲಯದ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ವೀಕೆಂಡ್ ನಲ್ಲಿ ಸಹಸ್ರಾರು ಜನರು ವಿವಿಧೆಡೆಗಳಿಂದ ಈ ಮೃಗಾಲಯದಲ್ಲಿನ ಪ್ರಾಣಿಗಳ ವೀಕ್ಷಣೆಗೆ ಬರಲಿದ್ದಾರೆ. ಹೀಗಾಗಿ ಪ್ರತಿ ಶನಿವಾರ ಹಾಗೂ ಭಾನುವಾರ ಹೆಚ್ಚಿನ ಸಿಬ್ಬಂದಿ ನೇಮಿಸುವ ಮೂಲಕ ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮ ಅನುಸರಿಸಲಾಗಿದೆ. ಹೀಗಾಗಿ ಪ್ರವಾಸಿಗರು ನಿರಾತಂಕವಾಗಿ ಕಿರು ಮೃಗಾಲಯ ವೀಕ್ಷಿಸಲು ಕೋವಿಡ್ ನಿಯಮ ಪಾಲನೆಯೊಂದಿಗೆ ಧಾವಿಸಿ ಎಂಜಾಯ್ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಕಟ್ಟ ಕಡೆಯ ವ್ಯಕ್ತಿಗೂ ಸೇವೆ ಸಿಗಬೇಕು ಅದೇ ರಾಜಕಾರಣ: ಎಂಟಿಬಿ

  • ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ: ಯಡಿಯೂರಪ್ಪ

    ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ: ಯಡಿಯೂರಪ್ಪ

    ಶಿವಮೊಗ್ಗ: ಅಕ್ಕಮಹಾದೇವಿ ಜನ್ಮಸ್ಥಳವಾದ ಜಿಲ್ಲೆಯ ಶಿಕಾರಿಪುರ ತಾಲೂಕಿನ ಉಡುತಡಿಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಈಗಾಗಲೇ 30 ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

    ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಸಿಎಂ ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದರು. ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ ದೇಶದ ವಿಶಿಷ್ಟ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು. ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಯೂ ಅಕ್ಕಮಹಾದೇವಿಯವರ ದರ್ಶನ ಪಡೆದು ಪುನೀತರಾಗಬೇಕು ಎಂದರು.

    ಜೊತೆಗೆ ಇಲ್ಲಿ ಇರುವಷ್ಟು ಸಮಯ ಇಲ್ಲಿನ ಸುಂದರ ತಾಣದಲ್ಲಿ ಕಳೆಯುವ ಸಮಯ ಸದಾ ನೆನಪಿನಲ್ಲಿ ಉಳಿಯುವಂತಾಗಲಿದೆ. ಜೊತೆಗೆ ಅಕ್ಕನ ಆದರ್ಶಗಳನ್ನು ಅವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿಯಾಗಲಿದೆ. ಇದರಿಂದಾಗಿ ಸತ್ ಚಿಂತನೆಯ ಸುಂದರ ಸಮಾಜ ನಿರ್ಮಾಣಗೊಳ್ಳಲಿದೆ. ಮುಂದಿನ 10 ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ. ಇಲ್ಲಿನ ಸುಂದರ ತಾಣದಲ್ಲಿ ಪಾದಚಾರಿ ಮಾರ್ಗ, ವಾಯುವಿಹಾರ, ಒಂದು ಕಿ.ಮೀ.ಗೂ ಹೆಚ್ಚಿನ ದೂರದ ದೋಣಿ ವಿಹಾರ ಕೈಗೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ವಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

  • ಅ.17 ರಿಂದ 14 ದಿನ ಮೈಸೂರಿನ ಪ್ರವಾಸಿ ತಾಣಗಳು ಬಂದ್

    ಅ.17 ರಿಂದ 14 ದಿನ ಮೈಸೂರಿನ ಪ್ರವಾಸಿ ತಾಣಗಳು ಬಂದ್

    – ಪ್ರವಾಸಿಗರಿಗೆ ನಿಷೇಧ ಹೇರಿದ ಜಿಲ್ಲಾಡಳಿತ
    – ಇಂದು ಮಧ್ಯರಾತ್ರಿಯಿಂದಲೇ ಚಾಮುಂಡಿ ಬೆಟ್ಟಕ್ಕೆ ನಿಷೇಧ

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2020 ಹಿನ್ನೆಲೆಯಲ್ಲಿ ಬಿಗಿ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳ ಭೇಟಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳಾದ ಮೈಸೂರು ಅರಮನೆ, ಮೃಗಾಲಯಕ್ಕೆ 15 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಸಂಪೂರ್ಣ ನಿಷೇಧ ಮಾಡಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಇಂದು ಮಧ್ಯರಾತ್ರಿಯಿಂದಲೇ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

    ನಂಜನಗೂಡು ದೇವಾಲಯಕ್ಕೂ ಪ್ರವೇಶ ನಿಷೇಧ ಮಾಡಿದ್ದು, ಅಕ್ಟೋಬರ್ 17ರಿಂದ ನವೆಂಬರ್ 1ರವರೆಗೆ ಪ್ರವಾಸಿಗರು ಹೋಗುವಂತಿಲ್ಲ. ಮೈಸೂರಿನ ಜೊತೆಗೆ ಮಂಡ್ಯ ಪ್ರವಾಸಿ ತಾಣಗಳನ್ನು ಮುಚ್ಚಲಾಗುವುದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ. ಈ ಬಾರಿ ಸರಳ, ಸಾಂಪ್ರದಾಯಿಕ ಹಾಗೂ ವರ್ಚುವಲ್ ದಸರಾ ಮಾಡೋಣ ಎಂದು ಫೇಸ್‍ಬುಕ್ ಲೈವ್‍ನಲ್ಲಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಮೈಸೂರು ಜಿಲ್ಲೆ ಕೊರೊನಾ ಸೋಂಕಿನಲ್ಲಿ ರಾಜ್ಯದಲ್ಲೆ ಎರಡನೇ ಸ್ಥಾನದಲ್ಲಿದೆ. ಕೊರೊನಾ ಸಾವಿನ ಪ್ರಮಾಣ ಮೈಸೂರು ಜಿಲ್ಲೆಯಲ್ಲಿ ರಾಜ್ಯದ ಶೇಖಡ 10% ರಷ್ಟಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಈ ಕ್ರಮಗಳು ಅನಿವಾರ್ಯವಾಗಿವೆ. ಸಾರ್ವಜನಿಕರು ತಮ್ಮ ಮನೆಯಲ್ಲೆ ಇದ್ದು ಈ ಬಾರಿ ದಸರಾ ಆಚರಿಸಲು ಸಹಕಾರ ನೀಡಬೇಕೆಂದು ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.

  • ಇಬ್ಬನಿಯ ಆಟ, ಮೋಡಗಳ ಮೈಮಾಟ ಪ್ರವಾಸಿಗರಿಗೆ ರಸದೂಟ

    ಇಬ್ಬನಿಯ ಆಟ, ಮೋಡಗಳ ಮೈಮಾಟ ಪ್ರವಾಸಿಗರಿಗೆ ರಸದೂಟ

    -ಚುಮುಚುಮು ಚಳಿಯಯಲ್ಲಿ ಮಿಂದೆದ್ದ ಪ್ರವಾಸಿಗರು

    ಚಿಕ್ಕಬಳ್ಳಾಪುರ: ಜಿಲ್ಲೆಯ ನಂದಿ ಬೆಟ್ಟ ಬರದ ನಡುವೆಯೂ ಪ್ರವಾಸಿಗರ ಪಾಲಿಗೆ ರಸದೌತಣ ಉಣಬಡಿಸುತ್ತಿದೆ. ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಪ್ರವಾಸಿಗರ ದಂಡು ಈಗ ಬರದನಾಡಿನ ಪ್ರವಾಸಿತಾಣದತ್ತ ಲಗ್ಗೆ ಇಡುತ್ತಿದ್ದು ಇಡೀ ಸ್ಥಳ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.

    ಬೆಟ್ಟಕ್ಕೆ ಮುತ್ತಿಡೋಕೆ ಲಗ್ಗೆ ಇಡ್ತಿರೋ ಬೆಳ್ಳಿ ಮೋಡಗಳು, ಬೆಳ್ಳಿ ಮೋಡಗಳ ಇಬ್ಬನಿಯ ಮುಸುಕಿಗೆ ಬೆಳ್ಳನೆಯ ಬಣ್ಣ ಪಡೆದ ಹಚ್ಚು ಹಸಿರು ಪಡೆದ ಪ್ರವಾಸಿ ತಾಣವೇ ನಂದಿ ಬೆಟ್ಟ. ಚಿಕ್ಕಬಳ್ಳಾಪುರ ಜಿಲ್ಲೆ ಈ ಬಾರಿಯೂ ಬರದಿಂದ ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದಾರೆ. ಹಾಗಿದ್ದರೂ ಈ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮ ಮಾತ್ರ ಬರದ ನಡುವೆಯೂ ಹಚ್ಚ ಹಸಿರಿನಿಂದ ಕಂಗೊಳಿಸುತ್ತಾ ಪ್ರವಾಸಿಗರನ್ನ ತನ್ನತ್ತ ಬರ ಸೆಳೆಯುತ್ತಿದೆ.

    ರಾಜಧಾನಿ ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದ ನಂದಿ ಹಿಲ್ಸ್ ಬೆಂಗಳೂರಿಗರ ಪಾಲಿಗರ ವಿಕೇಂಡ್ ಹಾಟ್ ಸ್ಪಾಟ್. ಇದಲ್ಲದೆ ಈ ಬಾರಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದಲ್ಲಾದ ನೆರೆಗೆ ಬೆದರಿದ ಜನ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ. ಹೀಗಾಗಿ ಹಿಂದಿನಿಗಿಂತಲೂ ಅತಿ ಹೆಚ್ಚಿನ ಪ್ರವಾಸಿಗರು ನಂದಿ ಗಿರಿಧಾಮಕ್ಕೆ ಲಗ್ಗೆಯಿಡುತ್ತಿದ್ದು, ಅಲ್ಲಿಯ ಸೌಂದರ್ಯಕ್ಕೆ ಮಾರು ಹೋಗುತ್ತಿದ್ದಾರೆ. ಒಟ್ಟಿನಲ್ಲಿ ಬರದ ನಡುವೆಯೂ ಈ ಬಾರಿ ಬಾಡದ ನಂದಿಗಿರಿಧಾಮ ತುಂತುರು ಮಳೆಯ ಸಿಂಚನಕ್ಕೆ ಹಚ್ಚು ಹಸುರಾಗಿ ಕಂಗೊಳಿಸುತ್ತಿದ್ದು ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

  • ಮೋದಿ ಟೀ ಸ್ಟಾಲ್‍ನ್ನು ಪ್ರವಾಸಿ ತಾಣ ಮಾಡಲು ಸರ್ಕಾರ ನಿರ್ಧಾರ

    ಮೋದಿ ಟೀ ಸ್ಟಾಲ್‍ನ್ನು ಪ್ರವಾಸಿ ತಾಣ ಮಾಡಲು ಸರ್ಕಾರ ನಿರ್ಧಾರ

    ಗಾಂಧಿನಗರ: ಪ್ರಧಾನಿ ಮೋದಿ ಅವರ ಮೊದಲು ಚಹಾ ವ್ಯಾಪಾರಿ ಆಗಿದ್ದರು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅವರು ಟೀ ಮಾಡಿದ ಅಂಗಡಿಯನ್ನು ಸರ್ಕಾರ ಪ್ರವಾಸಿ ತಾಣ ಮಾಡಲು ನಿರ್ಧಾರ ಮಾಡಿದೆ.

    ಚಹಾ ಮಾರಿಕೊಂಡು, ದೇಶಕ್ಕೆ ಎರಡು ಬಾರಿ ಪ್ರಧಾನಿ ಅದ ಮೋದಿ ಅವರು, ಅವರ ಆರಂಭಿಕ ಜೀವನದಲ್ಲಿ ಗುಜರಾತ್‍ನ ವಾಡ್ನಾಗರದಲ್ಲಿರುವ ರೈಲು ನಿಲ್ದಾಣದಲ್ಲಿ ಒಂದು ಪುಟ್ಟ ಟೀ ಸ್ಟಾಲ್‍ನಲ್ಲಿ ಟೀ ಮಾರುತ್ತಿದ್ದರು. ಈಗ ಈ ಟೀ ಸ್ಟಾಲ್‍ನ್ನು ಸರ್ಕಾರ ಪ್ರವಾಸಿ ತಾಣ ಮಾಡಲು ಮುಂದಾಗಿದೆ.

    ಇತ್ತೀಚಿಗೆ ಈ ಜಾಗಕ್ಕೆ ಬಂದಿದ್ದ ರಾಜ್ಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಅವರು, ಮೋದಿ ಅವರ ಚಹಾ ವ್ಯಾಪಾರ ಮಾಡಿದ್ದ ಈ ಜಾಗವನ್ನು ನಾವು ಪ್ರವಾಸಿ ತಾಣ ಮಾಡಲು ನಿರ್ಧಾರ ಮಾಡಿದ್ದೇವೆ. ಇದನ್ನು ಯಾವ ರೀತಿಯಲ್ಲೂ ಬದಲಾವಣೆ ಮಾಡದೇ ಈ ರೀತಿಯಲ್ಲೇ ಈ ಜಾಗವನ್ನು ಟೂರಿಸ್ಟ್ ಸ್ಪಾಟ್ ಮಾಡಲಿದ್ದೇವೆ ಮತ್ತು ಮೋದಿ ಅವರ ಟೀ ಸ್ಟಾಲ್‍ಗೆ ಗಾಜಿನ ಹೊದಿಕೆ ಮಾಡಿಸಿ ಸಂರಕ್ಷಣೆ ಮಾಡುತ್ತೇವೆ ಎಂದು ಹೇಳಿದ್ದರು.

    ತಾನು ಒಬ್ಬ ಟೀ ವ್ಯಾಪಾರಿ ಎಂದು ಹೆಮ್ಮೆ ಇಂದು ಹೇಳಿಕೊಳ್ಳುವ ಪ್ರಧಾನಿ ಮೋದಿ, ವಿರೋಧ ಪಕ್ಷದವರು ಅ ವಿಚಾರದಲ್ಲಿ ಟೀಕೆ ಮಾಡಿದರೆ ಹೌದು ನಾನು ಟೀ ಮಾರಾಟ ಮಾಡಿ ಬಡ ಕುಟುಂದಿಂದ ಬಂದು ಪ್ರಧಾನಿಯಾಗಿದ್ದೇನೆ. ಆದರೆ ನಾನು ಟೀ ಮಾರಿದ್ದೇನೆ ಹೊರತು ದೇಶವನ್ನು ಮಾರಾಟ ಮಾಡಿಲ್ಲ ಎಂದು ಟಾಂಗ್ ಕೊಟ್ಟಿದ್ದರು.