Tag: Towing

  • ಹೊಸ ಎಸ್‍ಒಪಿ ಸಿದ್ಧಪಡಿಸೋ ತನಕ ಬೆಂಗಳೂರಿನಲ್ಲಿ ಟೋಯಿಂಗ್ ಕಿರಿಕಿರಿ ಇರಲ್ಲ!

    ಹೊಸ ಎಸ್‍ಒಪಿ ಸಿದ್ಧಪಡಿಸೋ ತನಕ ಬೆಂಗಳೂರಿನಲ್ಲಿ ಟೋಯಿಂಗ್ ಕಿರಿಕಿರಿ ಇರಲ್ಲ!

    ಬೆಂಗಳೂರು: ಟ್ರಾಫಿಕ್ ಪೊಲೀಸರ ಟೋಯಿಂಗ್ ಟಾರ್ಚರ್‌ಗೆ ಜನ ಹೈರಾಣಾಗಿ ಹೋಗಿದ್ದಾರೆ. ಇದು ನಿನ್ನೆ ಮೊನ್ನೆಯದಲ್ಲ. ನಿತ್ಯ ವಾಹನವನ್ನು ಪಾರ್ಕ್ ಮಾಡಿದರೆ ವಾಪಸ್ ಬರುವಷ್ಟರಲ್ಲಿ ಎತ್ತಾಕ್ಕೊಂಡು ಹೋಗಿರ್ತಾರೆ. ಈ ಟೋಯಿಂಗ್ ಗೊಂದಲಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿ ತಾತ್ಕಾಲಿಕ ಮದ್ದು ಕೊಟ್ಟಿದ್ದಾರೆ.

    ಟೋಯಿಂಗ್ ಗೊಂದಲದ ಬಗ್ಗೆ ರೇಸ್ ಕೋರ್ಸ್ ರಸ್ತೆಯಲ್ಲಿ ಶಕ್ತಿ ಭವನದಲ್ಲಿ ಬೊಮ್ಮಾಯಿ ಸಭೆ ನಡೆಸಿದರು. ಬೊಮ್ಮಾಯಿ ನೇತೃತ್ವದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಇಂದು ನಡೆಯಿತು. ಹೊಸ ಮಾರ್ಗಸೂಚಿ (ಎಸ್‍ಒಪಿ) ಸಿದ್ದಪಡಿಸೊ ತನಕ ಬೆಂಗಳೂರಿನಲ್ಲಿ ವಾಹನ ಸವಾರರಿಗೆ ಟೋಯಿಂಗ್ ಕಿರಿಕಿರಿ ಇಲ್ಲ ಎಂದು ಸಂಜೆ ನಡೆದ ಸಿಎಂ ಸಭೆಯಲ್ಲಿ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮತಾಂತರ ಮಾಡ್ತಿದ್ದಾರೆಂದು ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ- RSS ಕಾರ್ಯಕರ್ತ ಅರೆಸ್ಟ್

    ಸಭೆಯಲ್ಲಿ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭಾಗಿಯಾಗಿದ್ದರು. ಸಿಎಂ ಜೊತೆ ನಡೆದ ಸುದೀರ್ಘ ಸಭೆಯಲ್ಲಿ ಟೋಯಿಂಗ್ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ಈಗ ಇರುವಂತೆ ಟೋಯಿಂಗ್ ನಿಯಮಗಳನ್ನ ಬದಲಾವಣೆ ಮಾಡಲು ಸೂಚನೆ ಕೊಟ್ಟಿದ್ದಾರೆ.

    ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ,  ಟೋಯಿಂಗ್ ವಾಹನಗಳ ಕಾರ್ಯ ವೈಖರಿ ಬಗ್ಗೆ ಕೂಲಂಕಶವಾಗಿ ಪರಿಶೀಲನೆ ಮಾಡಿ. ಎಸ್‍ಒಪಿ ಏನು ಇದೆ ಅವುಗಳಲ್ಲಿ ಕೆಲವು ಬದಲಾವಣೆಗಳಿಗೆ ಸೂಚನೆ ನೀಡಿದ್ದಾರೆ. ಪಾರದರ್ಶಕತೆಯ ದೃಷ್ಟಿಯಿಂದ ಪಾರದರ್ಶಕವಾಗಿರಬೇಕು. ಅಲ್ಲಿಯ ತನಕ ಟೋಯಿಂಗ್ ವಾಹನವನ್ನ ನಿಯಂತ್ರಿಸಿ ಕಾರ್ಯಚರಣೆ ಮಾಡುವುದಕ್ಕೆ ನಾವು ಸೂಚನೆ ಕೊಡುತ್ತಿದ್ದೇವೆ. ಒಟ್ಟಾರೆ ಕೆಲವು ಬದಲಾವಣೆಗಳು ಪಾರದರ್ಶಕತೆ ದೃಷ್ಟಿಯಿಂದ ಮಾಡಲು ಹೇಳಿದ್ದಾರೆ. ಅದನ್ನ ಪರಿಶೀಲನೆ ಮಾಡಿ ಇಲಾಖೆ ಹೊಸ ಎಸ್‍ಒಪಿಯನ್ನ ಕೆಲವು ಬದಲಾವಣೆ ತರುವುದಕ್ಕೆ ಸೂಚನೆ ಕೊಟ್ಟಿದ್ದಾರೆ. ಯಾವುದೇ ರೀತಿಯ ಆರೋಪಗಳಿಗೆ ಅವಕಾಶವಾಗದಂತೆ ಬದಲಾವಣೆ ಮಾಡಲು ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಟೋಯಿಂಗ್ ಸಿಬ್ಬಂದಿ ಕಾರ್ಯವೈಖರಿಯ ವೀಡಿಯೋಗಳನ್ನ ಸಾಮಾಜಿಕ ಜಾಲಾತಾಣದಲ್ಲಿ ಹಾಕಿ ಸಂಚಾರಿ ಪೊಲೀಸರ ಮೇಲೆ ಸಾರ್ವಜನಿಕರು ಕಿಡಿಕಾರಿದ್ದರು. ಇದು ಸರ್ಕಾರಕ್ಕೆ ಒಂದು ರೀತಿ ಮುಜುಗರ ಉಂಟು ಮಾಡಿತ್ತು. ಹಾಗಾಗಿ ಸಿಎಂ ಮಧ್ಯಪ್ರವೇಶ ಮಾಡಿ ಟೋಯಿಂಗ್ ಗೊಂದಲಕ್ಕೆ ತಾತ್ಕಾಲಿಕ ಮದ್ದುಕೊಟ್ಟಿದ್ದಾರೆ.

  • ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

    ವಾಹನ ಟೋಯಿಂಗ್ ಈ ನಿಯಮ ಪಾಲಿಸಲೇಬೇಕು – ಪೊಲೀಸರಿಗೆ ಗೃಹ ಸಚಿವರ ಖಡಕ್ ಸೂಚನೆ

    ಬೆಂಗಳೂರು: ಯಾವುದೇ ವಾಹನವನ್ನು ಟೋಯಿಂಗ್ ಮಾಡುವ ಮುನ್ನ ಸ್ಥಳದಲ್ಲಿರುವ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು. ವಾಹನ ಟೋಯಿಂಗ್ ಮಾಡಬೇಕಾದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಲ್ಲಾ ನಿಯಾಮಾವಳಿಗಳನ್ನು ಚಾಚೂ ತಪ್ಪದೆ ಅನುಸರಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸರಿಗೆ ಸೂಚಿಸಿದ್ದಾರೆ.

    ನಗರದಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಯಿಂದ, ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆಗಳ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹಾಗೂ ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರ ಜೊತೆ ಸಭೆ ನಡೆಸಿ ಇನ್ನು ಮುಂದೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಂದು ಪ್ರಕರಣ – ಕಾಲೇಜು ವಿದ್ಯಾರ್ಥಿನಿ ಮೇಲೆ ಹಲ್ಲೆ, ಅತ್ಯಾಚಾರ ಯತ್ನ

    ಇನ್ನು ಮುಂದೆ ಯಾವುದೇ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರು ವಾಹನವನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನದ ಮಾಲೀಕರು ಸ್ಥಳದಲ್ಲಿದ್ದರೆ ಕೇವಲ ನೋ ಪಾರ್ಕಿಂಗ್ ಶುಲ್ಕದ ಹಣವನ್ನು ಮಾತ್ರ ಪಡೆದುಕೊಳ್ಳಬೇಕು ಹಾಗೂ ವಾಹನವನ್ನು ಅಲ್ಲಿಯೇ ಅವರಿಗೆ ಬಿಟ್ಟು ಕೊಡಬೇಕು ಮತ್ತು ಟೋಯಿಂಗ್ ಮಾಡಬಾರದು ಎಂದು ಸೂಚಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯವರು ವಾಚಾಳಿತನ ಬಿಡಬೇಕು: ಆರ್ ಅಶೋಕ್

    ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಟೋಯಿಂಗ್ ಮಾಡಲಾಗುವ ವಾಹನಗಳನ್ನು ಅತ್ಯಂತ ಜಾಗರೂಕತೆಯಿಂದ ಯಾವುದೇ ಹಾನಿಗೊಳಗಾಗದಂತೆಯೂ ನೋಡಿಕೊಳ್ಳಬೇಕು ಎಂದೂ ಹೇಳಿದ್ದಾರೆ.

  • ವೆಹಿಕಲ್ ಟೋಯಿಂಗ್ ಹುಡುಗರನ್ನು ಅಟ್ಟಾಡಿಸಿ ಹೊಡೆದ ಸಾರ್ವಜನಿಕರು

    ವೆಹಿಕಲ್ ಟೋಯಿಂಗ್ ಹುಡುಗರನ್ನು ಅಟ್ಟಾಡಿಸಿ ಹೊಡೆದ ಸಾರ್ವಜನಿಕರು

    ಬೆಂಗಳೂರು: ನಗರದಲ್ಲಿ ವೆಹಿಕಲ್ ಟೋಯಿಂಗ್ ಮಾಡುತ್ತಿದ್ದ ಹುಡುಗರನ್ನು ಸಾರ್ವಜನಿಕರು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಇಂದಿರಾ ನಗರದಲ್ಲಿ ನಡೆದಿದೆ.

    ಬೆಂಗಳೂರು ನಗರದಲ್ಲಿ ನಡೆದಿರುವ ಎರಡನೇ ಘಟನೆ ಇದಾಗಿದ್ದು, ಕಳೆದ ತಿಂಗಳು ಯಲಹಂಕದಲ್ಲಿ ಬೈಕ್ ಟೋಯಿಂಗ್ ಮಾಡೋ ವಿಚಾರವಾಗಿ ಇಬ್ಬರಿಗೆ ಹೆಲ್ಮೆಟ್‍ನಿಂದ ಹಿಗ್ಗಾಮುಗ್ಗ ಸಾರ್ವಜನಿಕರು ಥಳಿಸಿದ್ದರು. ಘಟನೆ ಸಂಬಂಧ ಹಲ್ಲೆಮಾಡಿದವರ ಮೇಲೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಇಬ್ಬರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಕೆಟ್ಟು ನಿಂತ ಟೆಂಪೋವನ್ನು 7 ಕಿ.ಮೀ ಎಳೆದ ಬೈಕ್! – ವಿಡಿಯೋ ನೋಡಿ

    ಈ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಘಟನೆ ಹಲಸೂರು ಸಂಚಾರಿ ಪೊಲೀಸ್ ಠಾಣಾ ಟೋಯಿಂಗ್ ಹುಡುಗರ ಮೇಲೆ ಹಲ್ಲೆ ನಡೆದಿದೆ. ಇಂದಿರಾ ನಗರದಲ್ಲಿ ಸಂಜೆ ನಾಲ್ಕು ಗಂಟೆಗೆ ಬೈಕ್ ಟೋಯಿಂಗ್ ಮಾಡುವ ವಿಚಾರವಾಗಿ ಸಾರ್ವಜನಿಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ಗಲಾಟೆ ಆಗಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಸಾರ್ವಜನಿಕರು ಟೋಯಿಂಗ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.

    ಈ ಘಟನೆ ಸಂಬಂಧ ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಹಲಸೂರು ಸಂಚಾರಿ ಪೊಲೀಸ್ ಠಾಣಾ ಎಸ್.ಐ ರಾಜೇಂದ್ರ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತಲೆಮರೆಸಿಕೊಂಡಿರುವ ಹಲ್ಲೆಕೋರರಿಗೆ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪಾರ್ಕಿಂಗ್‌ನಲ್ಲೇ ಬೈಕ್ ಪಾರ್ಕ್ ಮಾಡಿದ್ರೂ ಟೋಯಿಂಗ್ ಕಾಟ- ಫೈನ್ ಕಟ್ಟದೆ ಮಹಿಳೆ ಅವಾಜ್