Tag: Town Police Station

  • ಬೀದರ್‌ ಆಸ್ಪತ್ರೆಯಲ್ಲಿ ಮಾರಾಮಾರಿ – ಕೈ ಮುಖಂಡ ಸೇರಿ ಮೂವರ ಬಂಧನ

    ಬೀದರ್‌ ಆಸ್ಪತ್ರೆಯಲ್ಲಿ ಮಾರಾಮಾರಿ – ಕೈ ಮುಖಂಡ ಸೇರಿ ಮೂವರ ಬಂಧನ

    ಬೀದರ್: ಜಿಲ್ಲೆ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂದಿಸಿದಂತೆ ಟೌನ್ ಪೊಲೀಸ್ ಠಾಣೆಯಲ್ಲಿ ಎರಡು ಗುಂಪುಗಳ ವಿರುದ್ಧವೂ ಎಫ್‍ಐಆರ್ ದಾಖಲಾಗಿದ್ದು ಮೂವರನ್ನು ಬಂಧಿಸಲಾಗಿದೆ.

    ಚಾಕುವಿನಿಂದ ಹಲ್ಲೆಗೊಳಗಾದ ಎಂಡಿ ರೌಫ್ ಪರವಾಗಿ ಟೌನ್ ಪೊಲೀಸ್ ಠಾಣೆಯಲ್ಲಿ ಇತೆಶಾಮ್ ಮಹ್ಮದ್ ಅಲಿ ನೀಡಿದ ದೂರಿನ ಮೇರೆಗೆ ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಸೇರಿದಂತೆ 10 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: 2ನೇ ಬಾರಿ ಸಿಎಂ ಆಗಿ ‘ಬುಲ್ಡೋಜರ್ ಬಾಬಾ’ ಚುಕ್ಕಾಣಿ – ಮೋದಿ, ಬಿಜೆಪಿ ಸಿಎಂಗಳ ಸಮ್ಮುಖದಲ್ಲಿ ಪ್ರಮಾಣವಚನ

    ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಸೇರಿ ಮೂವರ ಬಂಧನ ಮಾಡಿ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕಡೆ ಮಹಮ್ಮದ್ ರೌಫ್ ವಿರುದ್ಧವೂ ಟೌನ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಪ್ರಕರಣ ದಾಖಲಾಗಿದೆ. ಮಹಮ್ಮದ್ ರೌಫ್ ವಿರುದ್ಧ ಕಾಜಮುಖಾನ್ ನೀಡಿದ ದೂರಿನ ಮೇರೆಗೆ ಎಂಡಿ ರೌಫ್, ಇತೆಶಾಮ್, ಅಬೇದ್ ಅಲಿ ಸೇರಿದಂತೆ ನಾಲ್ಕು ಜನರ ವಿರುದ್ಧ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಹಳೆಯ ವೈಶಮ್ಯದ ಹಿನ್ನೆಲೆ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸಾರ್ವಜನಿಕವಾಗಿ ಎಂಡಿ ರೌಫ್ ಅವರಿಗೆ ಹತ್ತಾರು ಜನರು ಮಾರಣಾಂತಿಕವಾಗಿ ಹಲ್ಲೆ ಮಾಡಿದರು. ಮಾರಣಾಂತಿಕ ಹಲ್ಲೆಯಿಂದ ಸ್ಥಿತಿ ಗಂಭೀರವಾಗಿದ್ದು, ಹೈದ್ರಾಬಾದ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಡಿ ರೌಫ್ ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಇಂದಿನಿಂದ ಐಪಿಎಲ್ ಆರಂಭ – ಅತಿ ಹೆಚ್ಚು ರನ್ ಸಿಡಿಸಿದದ ಟಾಪ್ ತಂಡಗಳು

  • ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ

    ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ

    – ಎಂಎಲ್‍ಸಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದ ಸಾರ್ವಜನಿಕರು
    – ಹುಟ್ಟುಹಬ್ಬ ಆಚರಣೆಯಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್

    ಹಾಸನ: ರಾಜಕಾರಣಿಗಳಿಗೆ ಒಂದು ನಿಯಮ, ಜನಸಾಮಾನ್ಯರಿಗೆ ಮತ್ತೊಂದು ನಿಯಮ ಎಂಬಂತೆ, ಹಾಸನದಲ್ಲಿ ಎಂಎಲ್‍ಸಿ ಗೋಪಾಲಸ್ವಾಮಿ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಬೆಂಬಲಿಗರೊಂದಿಗೆ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ.

    ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಎಂಎಲ್‍ಸಿ ಗೋಪಾಲಸ್ವಾಮಿ ನಿನ್ನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಅದು ಅಲ್ಲದೇ ಇವರು ಚನ್ನರಾಯಪಟ್ಟಣದ ಪಟ್ಟಣ ಪೊಲೀಸ್ ಠಾಣೆ, ತಹಶಿಲ್ದಾರ್ ಕಚೇರಿ ಸಮೀಪವೇ ಅದ್ದೂರಿಯಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದು, ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ. ಇದನ್ನೂ ಓದಿ:  ಚಾಲಕನ ಮೇಲೆ ದಾಳಿಯಾದಾಗ ನಿಯಂತ್ರಣ ತಪ್ಪಿ ಕಾರು ರೈತರ ಮೇಲೆ ಹರಿದಿದೆ: ಮಿಶ್ರಾ

    ಬೆಂಗಳೂರು ಹಾಸನ ರಸ್ತೆಯ ಮಧ್ಯದಲ್ಲೇ ಸಾವಿರಾರು ಬೆಂಬಲಿಗರೊಂದಿಗೆ ಗೋಪಾಲಸ್ವಾಮಿ ಅವರನ್ನು ತೆರೆದ ಕಾರಿನಲ್ಲಿ ಮೆರವಣಿಗೆ ಮಾಡಲಾಯಿತು. ಜೆಸಿಬಿಗಳಲ್ಲಿ ಹೂವಿನ ಮಳೆಗರೆಯುತ್ತ, 200 ಕೆಜಿ ತೂಕದ ಸೇಬಿನ ಹಾರ ಹಾಕಿಸಿಕೊಂಡು ಗೋಪಾಲಸ್ವಾಮಿ ಅವರು ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ. ಈ ವೇಳೆ ಗೋಪಾಲಸ್ವಾಮಿ ಅವರನ್ನು ಸೇರಿದಂತೆ ಯಾರೊಬ್ಬರ ಮುಖದಲ್ಲೂ ಮಾಸ್ಕ್ ಇರಲಿಲ್ಲ. ಸಾಮಾಜಿಕ ಅಂತರ ಕೇಳೋರೆ ಇಲ್ಲ. ಡೋಲು ಬಡಿಯುತ್ತಾ, ಕುಣಿದು ಕುಪ್ಪಳಿಸುತ್ತಾ, ಒಬ್ಬರ ಮೇಲೊಬ್ಬರು ಬೀಳುತ್ತಾ ಹುಟ್ಟುಹಬ್ಬ ಆಚರಣೆ ಮಾಡಲಾಗಿದೆ. ಇದನ್ನೂ ಓದಿ:  ರೈತರ ಮೇಲೆ ಜೀಪ್ ಹತ್ತಿಸಿದ ಮತ್ತೊಂದು ವೀಡಿಯೋ ಲಭ್ಯ – ಇಂದು ಸುಪ್ರೀಂನಲ್ಲಿ ವಿಚಾರಣೆ

    ಹುಟ್ಟುಹಬ್ಬ ಆಚರಣೆಯಿಂದ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಮಾಡಲಾಗಿದ್ದು, ಪರಿಣಾಮ ವಾಹನ ಸವಾರರು ಪರದಾಡುತ್ತಿದ್ದರು. ಗೋಪಾಲಸ್ವಾಮಿ ಅವರು ಹುಟ್ಟುಹಬ್ಬ ಆಚರಿಸಿಕೊಂಡ ಸ್ಥಳದ ಕೂಗಳತೆ ದೂರದಲ್ಲೇ ತಹಶಿಲ್ದಾರ್ ಕಚೇರಿ ಮತ್ತು ಪಟ್ಟಣ ಪೊಲೀಸ್ ಠಾಣೆ ಇದ್ದು, ಎಂಎಲ್‍ಸಿ ಎಂಬ ಕಾರಣಕ್ಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದ್ದರು. ಹೀಗೆ ಆದರೆ ಹಾಸನದಲ್ಲಿ ಕೊರೊನಾ ಮೂರನೇ ಅಲೆ ತಡೆಯೋದು ಕಷ್ಟ. ನಿಯಮ ಮೀರಿ ಹುಟ್ಟುಹಬ್ಬ ಆಚರಿಸಿಕೊಂಡ ಎಂಎಲ್‍ಸಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.