Tag: TPL

  • ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ಹೊಸ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

    ಎನ್ 1 ಕ್ರಿಕೆಟ್ ಅಕಾಡೆಮಿಯ ವತಿಯಿಂದ ಹೊಸ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

    ಕಿರುತೆರೆ ಕಲಾವಿದರಿಗಾಗಿ TPL ಟೆಲಿವಿಷನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಟೂರ್ನ್ಮ್ಮೆಂಟ್ ನಡೆಸಿಕೊಂಡು ಬರುತ್ತಿರುವ ‘ಎನ್ 1’ ಕ್ರಿಕೆಟ್ ಅಕಾಡೆಮಿಯು ಇದೀಗ ಮತ್ತೊಂದು ಪ್ರಯತ್ನಕ್ಕೆ ಕೈ ಹಾಕಿದೆ. ಈಗಾಗಲೇ ಯಶಸ್ವಿಯಾಗಿ ಮೂರು TPL ಸೀಸನ್ ಮುಗಿಸಿರುವ ಎನ್ 1 ಅಕಾಡೆಮಿ ಸೂತ್ರಧಾರ ಸುನಿಲ್ ಕುಮಾರ್ ಬಿ. ಆರ್ ಅವರು ಈಗ IPT12 ಎಂಬ ಹೊಸ ಕ್ರಿಕೆಟ್ ಟೂರ್ನ್‌ಮೆಂಟ್‌ಗೆ ಚಾಲನೆ ಕೊಟ್ಟಿದ್ದಾರೆ.‌ ಇದನ್ನೂ ಓದಿ:ಒಂದೇ ಚಿತ್ರದಲ್ಲಿ 5 ಬಾಲಿವುಡ್ ಸ್ಟಾರ್ಸ್‌ಗೆ ‘ಆರ್ಟಿಕಲ್ 370’ ನಿರ್ದೇಶಕ ಆ್ಯಕ್ಷನ್ ಕಟ್

    ಡಾಕ್ಟರ್ಸ್‌, ಲಾಯರ್ಸ್‌, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಫ್ಯಾಷನ್ ಡಿಸೈನರ್ ಹೀಗೆ ಎಲ್ಲಾ ಕ್ಷೇತ್ರದವರು ಸೇರಿ ಆಡಲಿರುವ ಕ್ರಿಕೆಟ್ ಟೂರ್ನ್ಮ್ಮೆಂಟ್ IPT12 ಇದಾಗಿದೆ. ಈ ಪಂದ್ಯಾವಳಿಯ ಟ್ರೋಫಿ ಹಾಗೂ ಜರ್ಸಿ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಪ್ರಣಮ್ ದೇವರಾಜ್, ಶರಣ್ಯಾ ಶೆಟ್ಟಿ ಸೇರಿದಂತೆ ಚಿತ್ರರಂಗದ ಕಲಾವಿದರು, ಎಲ್ಲಾ ತಂಡದ ನಾಯಕರು ಮತ್ತು ಬ್ರ‍್ಯಾಂಡ್ ಅಂಬಾಸಿಡರ್ ಗಳು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

    ಬಳಿಕ ಮಾತನಾಡಿದ ನಟ ಪ್ರಣಂ ದೇವರಾಜ್ (Pranam Devaraj) ಮಾತನಾಡಿ, ಸುನಿಲ್ ಅವರು ಪ್ರತಿ ವರ್ಷ ಈ ರೀತಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ನಾವು ಮಾಧ್ಯಮದರು ಒಟ್ಟಿಗೆ ಕ್ರಿಕೆಟ್ ಆಡುವ ಅವಕಾಶ ಮಾಡಿಕೊಟ್ಟಿದ್ದಾರೆ. ಸಾಕಷ್ಟು ತಂಡಗಳು ಆಡುತ್ತಿದ್ದಾರೆ. ನಮ್ಮ ದೇಶದಲ್ಲಿ ಜನರನ್ನು ಒಂದು ಮಾಡಲು ಕ್ರಿಕೆಟ್ ಹಾಗು ಸಿನಿಮಾದಿಂದ ಮಾತ್ರ ಸಾಧ್ಯ. ಕ್ರಿಕೆಟ್ ನಿಂದ ಸುನಿಲ್ ನಮ್ಮನ್ನೆಲ್ಲಾ ಒಂದು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಈ ವೇಳೆ, ಎನ್ 1 ಕ್ರಿಕೆಟ್ ಅಕಾಡೆಮಿ ಸಂಸ್ಥಾಪಕ ಸುನಿಲ್ ಕುಮಾರ್ ಬಿ ಆರ್‌ ಎಲ್ಲಾ ತಂಡಗಳಿಗೂ ಆಲ್ ದಿ ಬೆಸ್ಟ್ ತಿಳಿಸಿದರು.

    ಯಾವ ಯಾವ ತಂಡಗಳಿವೆ?
    1.ಜಿಎಲ್‌ಆರ್‌ ವಾರಿಯರ್ಸ್‌
    ಲೂಸ್ ಮಾದ ಯೋಗಿ -ನಾಯಕ
    ರಾಜೇಶ್.ಎಲ್-ಮಾಲೀಕರು

    2. ಅಶ್ವಸೂರ್ಯ ರೈಡರ್ಸ್‌
    ಹರ್ಷ ಸಿಎಂ ಗೌಡ – ನಾಯಕ
    ರಂಜಿತ್ ಕುಮಾರ್ ಎಸ್ – ಮಾಲೀಕರು

    3.ದಿ ಬುಲ್ ಸ್ಕ್ವಾಡ್
    ಶರತ್ ಪದ್ಮನಾಭ್- ನಾಯಕ
    ಮೋನಿಶ್- ಮಾಲೀಕರು

    4.ಬಯೋಟಾಪ್ ಲೈಫ್ ಸೆವಿಯರ್ಸ್‌
    ಅಬ್ರಾರ್ ಮೊಹಮ್ಮದ್-ನಾಯಕ
    ಪ್ರಸನ್ನ ವಿ, ಡಾ.ವಿಶ್ವನಾಥ್,
    ವಿನು ಜೋಸ್ -ಮಾಲೀಕರು

    5.ಶ್ರೀಲಂಕಾ ಲಾಯರ್ಸ್‌ ಕ್ರಿಕೆಟ್
    ಕುಸನ್-ನಾಯಕ
    ಮನೀಶ್ ಅಧ್ಯಕ್ಷರು
    ಬುವನೇಕ ಉಪಾಧ್ಯಕ್ಷ

    6. S/ o ಮುತ್ತಣ್ಣ ಮಿಡಿಯಾ ಟೀಮ್
    ಸದಾಶಿವ ಶೆಣೈ-ನಾಯಕ
    ಪುರಾತನ‌‌ ಫಿಲ್ಮಂಸ್-ಮಾಲೀಕರು

    7. ಭಾರತೀಯ ವಕೀಲರ ತಂಡ
    ಅರವಿಂದ್ ವೆಂಕಟೇಶ್ ರೆಡ್ಡಿ-ನಾಯಕ
    ಶಿಲೇಶ್ ಕುಮಾರ್ -ಮಾಲೀಕರು

    8.ಫ್ಯಾಶನ್ ಮೇವರಿಕ್ಸ್
    ಫಹೀಮ್ ರಾಜ-ನಾಯಕ
    ಪ್ರಶಾಂತ್ ಕೆ ಎಂ-ಮಾಲೀಕರು

    ಎವಿಆರ್ ಗ್ರೂಪ್ಸ್ ವತಿಯಿಂದ ಎಚ್ ವೆಂಕಟೇಶ್ ರೆಡ್ಡಿರವರು IPT 12 ಕ್ರಿಕೆಟ್ ಟೂರ್ನ್ಮ್ಮೆಂಟ್ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ. ಸದ್ಯ ಜರ್ಸಿ ಹಾಗೂ ಟ್ರೋಫಿ ಅನಾವರಣ ಮಾಡಲಾಗಿದ್ದು, ಶೀಘ್ರದಲ್ಲಿಯೇ ಪ್ರಾಕ್ಟಿಸ್ ಗಾಗಿ ತಂಡಗಳು ಬ್ಯಾಟ್, ಬಾಲು ಹಿಡಿದು ಅಖಾಡಕ್ಕೆ ಇಳಿಯಲಿವೆ.

  • ಟಿಪಿಎಲ್ ಸೀಸನ್ 3 ಮುಕ್ತಾಯ: ಟ್ರೋಫಿಗೆ ಮುತ್ತಿಟ್ಟ ಕೆಟಿಎಂ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ಟಿಪಿಎಲ್ ಸೀಸನ್ 3 ಮುಕ್ತಾಯ: ಟ್ರೋಫಿಗೆ ಮುತ್ತಿಟ್ಟ ಕೆಟಿಎಂ ಖ್ಯಾತಿಯ ದೀಕ್ಷಿತ್ ಶೆಟ್ಟಿ

    ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 3 (TPL) ಮುಕ್ತಾಯಗೊಂಡಿದೆ. ಹುಬ್ಬಳ್ಳಿ ಕೆ.ಎಸ್.ಸಿ.ಎ ಮೈದಾನದಲ್ಲಿ ಫೆಬ್ರವರಿ 28 ರಿಂದ ಟಿಪಿಎಲ್ ಪಂದ್ಯ (Cricket) ಪ್ರಾರಂಭವಾಗಿತ್ತು. ಮೊನ್ನೆ ನಡೆದ ಅಂತಿಮ ಪಂದ್ಯಾವಳಿಯಲ್ಲಿ ದೀಕ್ಷಿತ್ ಶೆಟ್ಟಿ ನಾಯಕತ್ವದ ರಾಸು ವಾರಿಯರ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಅಲಕಾ ನಂದ ಶ್ರೀನಿವಾಸ್ ನೇತೃತ್ವದ ಬಯೋಟಾಪ್ ಲೈಫ್ ಸೇವಿಯರ್ಸ್ ರನ್ನರ್ ಅಪ್ ಆಗಿ ಹೊರಹೊಮ್ಮಿದೆ.

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆದುಕೊಂಡು ಬರ್ತಿರುವ ಟಿಪಿಎಲ್ ಪಂದ್ಯದಲ್ಲಿ ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್ಸ್, ಕೆಕೆಆರ್ ಮೀಡಿಯಾ ಹೌಸ್, ಬಯೋಟಾಪ್ ಲೈಫ್ ಸೇವಿಯರ್ಸ್, AVR ಟಸ್ಕರ್ಸ್, ರಾಸು ವಾರಿಯರ್ಸ್, ಭಜರಂಗಿ ಬಾಯ್ಸ್, ದಿ ಬುಲ್ ಸ್ಕ್ವಾಡ್, ಇನ್ಸೇನ್ ಕ್ರಿಕೆಟ್ ಟೀಂ, ಜಿಎಲ್ಆರ್ ವಾರಿಯರ್ಸ್ ಸೇರಿದಂತೆ ಒಟ್ಟು 10 ಟೀಮ್ ಗಳು ಭಾಗವಹಿಸಿದ್ದು, 170 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಟ್ಟಿದ್ದರು.

    ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ. ರಂಜಿತ್ ಕುಮಾರ್ ಎಸ್ ಓನರ್, ಜಿಎಲ್ಆರ್ ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕನಾದರೆ ರಾಜೇಶ್ ಎಲ್ ಓನರ್, ಇನ್ಸೇನ್ ಕ್ರಿಕೆಟ್ ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, ದಿ ಬುಲ್ ಸ್ಕ್ವಾಡ್ ತಂಡಕ್ಕೆ ಶರತ್ ಪದ್ಮನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, ಎವಿಆರ್ ಟಸ್ಕರ್ಸ್ಗೆ ಚೇತನ್ ಸೂರ್ಯ ನಾಯಕ – ಅರವಿಂದ್ ವೆಂಕಟ್ ರೆಡ್ಡಿ ಓನರ್, ಬಯೋಟಾಪ್ ಲೈಫ್ ಸೇವಿಯರ್ಸ್ ಅಲಕಾ ನಂದ ಶ್ರೀನಿವಾಸ್ ನಾಯಕ-ವಿಶ್ವನಾಥ್, ಪ್ರಸನ್ನ ಓನರ್, ಕೆಕೆಆರ್ ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ಸ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

     

    ಟಿಪಿಎಲ್ ರಾಯಭಾರಿಯಾಗಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಇದ್ದು, ಪ್ರಮುಖ ನಟರಾದ ಲೂಸ್ ಮಾದ ಯೋಗಿ, ರವಿಶಂಕರ್ ಗೌಡ ಟಿಪಿಎಲ್ 3 ನಲ್ಲಿ ಆಟವಾಡಿದ್ದು ವಿಶೇಷವಾಗಿತ್ತು.

  • ಕಿರುತೆರೆಯಲ್ಲಿ ಕ್ರಿಕೆಟ್: TPL-ಮೂರನೇ ಸೀಸನ್ ಟೀಂ ಲೋಗೋ ಲಾಂಚ್

    ಕಿರುತೆರೆಯಲ್ಲಿ ಕ್ರಿಕೆಟ್: TPL-ಮೂರನೇ ಸೀಸನ್ ಟೀಂ ಲೋಗೋ ಲಾಂಚ್

    ಕ್ರಿಕೆಟ್ ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟ ಪಡ್ತಾರೆ. ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ -3 ನಡೆಯಲಿದೆ. ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಬಿ.ಆರ್.ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. ಅದಕ್ಕೂ ಮುನ್ನ  ಬೆಂಗಳೂರಿನ ಎಂಎಂ ಲೆಗಸಿಯಲ್ಲಿ ಟಿಪಿಎಲ್ ಸೀಸನ್-3 ಟೀಂ ಲೋಗೋ ಬಿಡುಗಡೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಜಯಂತ್ ಕುಮಾರ್ ವೀರಶೈವ ವೇದಿಕೆ ರಾಷ್ಟ್ರೀಯ ಅಧ್ಯಕ್ಷರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

    ಬಳಿಕ ಮಾತನಾಡಿದ ಜಯಂತ್ ಕುಮಾರ್ , TPL ಸೀಸನ್ 3ರ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಜನವರಿ 24 ರಿಂದ 28ರವರೆಗೆ 5ದಿನ ಜರುಗಲಿದೆ. ಈ TPL ಸೀಸನ್ ಗೆ ನಮ್ಮ ಸಂಪೂರ್ಣ ಬೆಂಬಲ ಹಾಗು ಯಾವುದೇ ಸಹಾಯ ನಾನು ಮಾಡಲು ಸಿದ್ಧ ಮತ್ತು ಮುಂದಿನ ಕಾರ್ಯಕ್ರಮದಲ್ಲಿ ಕೇಂದ್ರ ಹಾಗು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಶ್ರೀ ಸುನೀಲ್ ಕುಮಾರ್ ಬಿ ಆರ್ ರವರಿಗೆ ಹೇಳಿದರು. ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಟ್ಟಾರೆ 10 ತಂಡಗಳು ಭಾಗಿಯಾಗಲಿದ್ದು, 150 ಫ್ಲೇಯರ್ಸ್ ಇರಲಿದ್ದಾರೆ. ಒಂದು ಟೀಂನಲ್ಲಿ 15 ಜನ ಇರ್ತಾರೆ. ಒಂದು ಗ್ರೂಪ್ ಗೆ 4 ಲೀಗ್ ಮ್ಯಾಚ್ ಇರುತ್ತದೆ. ಲೀಗ್ ಮ್ಯಾಚ್ ಬಳಿಕ ಸೆಮಿ ಫೈನಲ್, ಫೈನಲ್ ಇರುತ್ತದೆ. ಒಟ್ಟು 23 ಪಂದ್ಯಾವಳಿ ಇರಲಿದೆ. ಹುಬ್ಬಳ್ಳಿಯಲ್ಲಿ ಈ ಬಾರಿ ಕ್ರಿಕೆಟ್ ಪಂದ್ಯಾವಳಿ ನಡೆಯಲಿದ್ದು, ಜನವರಿ 24 ರಿಂದ 28ರವೆಗೆ ಪಂದ್ಯ ನಡೆಯಲಿದೆ ಎಂದು ತಿಳಿಸಿದರು.

    ಅಶ್ವಸೂರ್ಯ ರೈಡರ್ಸ್, ಗೋಲ್ಡನ್ ಈಗಲ್, KKR ಮೀಡಿಯಾ ಹೌಸ್, ಖುಷಿ 11, AVR tuskers, ರಾಸು ವಾರಿಯರ್, ಭಜರಂಗಿ ಬಾಯ್ಸ್, The bull squad, Insane Cricket team, GLR ವಾರಿಯರ್ಸ್ ಎಂಬ 10 ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ 10 ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ. ಎ ವಿ ಆರ್ ಗ್ರೂಪ್ಸ್ ನ ಹೆಚ್.ವೆಂಕಟೇಶ್ ರೆಡ್ಡಿ ಹಾಗೂ ಅರವಿಂದ್ ವೆಂಕಟೇಶ್ ರೆಡ್ಡಿ ಟೈಟಲ್ ಸ್ಪಾನ್ಸರ್ ಮಾಡಿದ್ದಾರೆ.

    ಅಶ್ವಸೂರ್ಯ ರೈಡರ್ಸ್ ತಂಡಕ್ಕೆ ಹರ್ಷ ಸಿಎಂ ಗೌಡ ನಾಯಕ-ರಂಜಿತ್ ಕುಮಾರ್.ಎಸ್ ಓನರ್, GLR ವಾರಿಯರ್ಸ್ ಟೀಂಗೆ ಲೂಸ್ ಮಾದ ಯೋಗಿ ನಾಯಕ-ರಾಜೇಶ್ ಎಲ್ ಓನರ್, Insane Cricket team ಟೀಂಗೆ ರವಿಶಂಕರ್ ಗೌಡ ನಾಯಕ-ಫೈಜಾನ್ ಖಾನ್ ಓನರ್, The bull squad ತಂಡಕ್ಕೆ ಶರತ್ ಪದ್ಮಾನಾಭ್ ನಾಯಕ-ಮೋನಿಶ್ ಓನರ್, ಭಜರಂಗಿ ಬಾಯ್ಸ್ ಟೀಂಗೆ ಸಾಗರ್ ಬಿಳಿಗೌಡ ನಾಯಕ- ಸ್ವಸ್ತಿಕ್ ಆರ್ಯ ಓನರ್, ರಾಸು ವಾರಿಯರ್ಸ್ ಟೀಂಗೆ ದೀಕ್ಷಿತ್ ಶೆಟ್ಟಿ ನಾಯಕ-ರಘು ಭಟ್ ಹಾಗೂ ಸುಗುಣ ಓನರ್, AVR tuskers ಚೇತನ್ ಸೂರ್ಯ ನಾಯಕ- ಅರವಿಂದ್ ವೆಂಕಟ್ ರೆಡ್ಡಿ ಓನರ್, ಖುಷಿ 11 ಅಲಕ್ ನಂದ ಶ್ರೀನಿವಾಸ್ ನಾಯಕ-ಅನಿಲ್ ಬಿಆರ್ ಓನರ್, KKR ಮೀಡಿಯಾ ಹೌಸ್ ಗೆ ಅರುಣ್ ರಾಮ್ ಗೌಡ ನಾಯಕ-ಲಕ್ಷ್ಮೀ ಕಾಂತ್ ರೆಡ್ಡಿ ಓನರ್, ಗೋಲ್ಡನ್ ಈಗಲ್ ವಿಹಾನ್ ನಾಯಕ-ಕುಶಾಲ್ ಗೌಡ ಒಡೆತನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಟಿಪಿಎಲ್ ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ರಾಗಿಣಿ ದ್ವಿವೇದಿ ಇದ್ದಾರೆ.

    ಈ ಬಾರಿಯ ಟೆಲಿಮಿಷನ್ ಪ್ರೀಮಿಯರ್ ಲೀಗ್ ಸೀಸನ್-3ನಲ್ಲಿ ಮಾಧ್ಯಮದವರಿಗೂ ಅವಕಾಶ ನೀಡಲಾಗಿದೆ. ಈ ಬಾರಿ ಪಂದ್ಯಾವಳಿ ವಿಶೇಷ ಎಂದರೆ ಎನ್ 1 ಕ್ರಿಕೆಟ್ ಅಕಾಡೆಮಿಯಿಂದ ಮ್ಯಾನ್ ಆಫ್ ದಿ ಸೀರಿಸ್ ಪಟ್ಟ ಪಡೆದವರಿಗೆ ಕಾರು, ಆರೆಂಜ್ ಕ್ಯಾಪ್ ಹೋಲ್ಡರ್(batsman), ಪರ್ಪಲ್ ಕ್ಯಾಪ್ ಹೋಲ್ಡರ್(bowler) ಪಡೆದವರಿಗೆ ಬೈಕ್ ಕೊಡಲಾಗುತ್ತದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ  ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಾಪತ್ತೆಯಾದ ಲೋಕೇಶ್

    ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.  ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]