Tag: Tractor Palty

  • ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

    ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

    ಯಾದಗಿರಿ: ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಬಾಡಿಹಾಳ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

    ಲಲಿತಮ್ಮ ಮತ್ತು ಭಾಗ್ಯಲಕ್ಷ್ಮೀ ಮೃತ ಕಾರ್ಮಿಕರು. ಜಮೀನು ಕೂಲಿ ಕೆಲಸಕ್ಕೆಂದು ತಾಲೂಕಿನ ಬಾಡಿಹಾಳ ಗ್ರಾಮದಿಂದ ಟ್ರ್ಯಾಕ್ಟರ್ ನಲ್ಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಿಸಸದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಕೂಲಿಕಾರ್ಮಿಕರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಸೈದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews