ವಾಷಿಂಗ್ಟನ್: ಭಾರತದ ಜೊತೆ ವ್ಯಾಪಾರ ಒಪ್ಪಂದ ಆಗಿಲ್ಲ. ಹೀಗಾಗಿ, 20ರಿಂದ 25% ಸುಂಕ ಹಾಕಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಉಭಯ ದೇಶಗಳು ಶೀಘ್ರದಲ್ಲೇ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಲು ಸಾಧ್ಯವಾಗದಿದ್ದರೆ, ಭಾರತದ ಆಮದುಗಳ ಮೇಲೆ 25% ರಷ್ಟು ಸುಂಕವನ್ನು ವಿಧಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಭಾರತಕ್ಕೆ 20% ರಿಂದ 25% ರ ವರೆಗೆ ಸುಂಕ ವಿಧಿಸಲಾಗುತ್ತದೆಯೇ ಎಂಬ ಪ್ರಶ್ನೆ ಕೇಳಿಬಂತು. ಅದಕ್ಕೆ ಟ್ರಂಪ್, ಹೌದು, ನಾನು ಹಾಗೆ ಭಾವಿಸುತ್ತೇನೆ. ಭಾರತವು ಆ ಪರಿಸ್ಥಿತಿ ತಂದುಕೊಂಡಿದೆ. ಆದರೆ, ಅವರು ನನ್ನ ಸ್ನೇಹಿತರು ಎಂದು ಮಾತನಾಡಿದ್ದಾರೆ.
ಅಮೆರಿಕ ಮತ್ತು ಭಾರತ ತಿಂಗಳುಗಳಿಂದ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚಿಸುತ್ತಿವೆ. ಆದರೆ, ಯಾವುದೇ ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಭಾರತೀಯ ಮಾರುಕಟ್ಟೆಗೆ ಅಮೆರಿಕದ ಸರಕುಗಳು ಹೆಚ್ಚಾಗಿ ಪ್ರವೇಶಿಸಲು ಟ್ರಂಪ್ ಒತ್ತಾಯಿಸುತ್ತಿದ್ದಾರೆ. ಇತರ ವ್ಯಾಪಾರ ಮಾತುಕತೆಗಳಲ್ಲಿ ಅವರು ಆಗಾಗ್ಗೆ ಇದೇ ರೀತಿಯ ಬೇಡಿಕೆಗಳನ್ನು ಇಟ್ಟಿದ್ದಾರೆ.
– ಅಮೆರಿಕದಿಂದ 750 ಶತಕೋಟಿ ಡಾಲರ್ ಮೌಲ್ಯದ ಇಂಧನ ಖರೀದಿ
– ಯುಎಸ್‌ನಲ್ಲಿ 600 ಶತಕೋಟಿ ಡಾಲರ್ ಹೂಡಿಕೆ ಮಾಡಲು ಡೀಲ್
ವಾಷಿಂಗ್ಟನ್: ಯುರೋಪಿಯನ್ ಒಕ್ಕೂಟದೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದವನ್ನ (Biggest Trade Deal) ಘೋಷಣೆ ಮಾಡಿದ್ದಾರೆ. ಈ ಒಪ್ಪಂದದ ಅಡಿಯಲ್ಲಿ ಒಕ್ಕೂಟದಿಂದ ಬರುವ ಆಮದುಗಳ ಮೇಲೆ 15% ಸುಂಕ ವಿಧಿಸಲಾಗುತ್ತದೆ.
Today, President Trump secured a HUGE, POWERFUL TRADE DEAL between the U.S. and EU 🇺🇸
The EU will:
💰 Invest $600 Billion in U.S.
⚡️ Purchase $750 Billion in American Energy
💸 Open Markets to U.S. pic.twitter.com/PWNtlhpH5b
ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಅಧಿಕಾರ ವಹಿಸಿಕೊಂಡ ಟ್ರಂಪ್ ತನ್ನ ದೇಶದ ವ್ಯಾಪಾರ ಸುಧಾರಿಸುವ ದೃಷ್ಟಿಯಲ್ಲಿ ಹಲವು ದೇಶಗಳ ಮೇಲೆ ಸುಂಕ ಸಮರ (Tariffs war) ಸಾರಿದ್ದಾರೆ. ಕೆಲ ದಿನಗಳ ಹಿಂದೆ ಟ್ರಂಪ್ 14 ದೇಶಗಳ ಮೇಲೆ ಸುಂಕ ವಿಧಿಸಿದ್ದರು. ಆಗಸ್ಟ್ 1 ರಿಂದಲೇ ಹೊಸ ಸುಂಕ ಜಾರಿಗೆ ಬರಲಿದೆ ಎಂದು ಘೋಷಿಸಿದ್ದರು. ಆದ್ರೆ ಈ ಪಟ್ಟಿಯಲ್ಲಿ ಭಾರತವನ್ನ ಹೊರಗಿಟ್ಟಿದ್ದರು. ಮುಂಬರುವ ಆಗಸ್ಟ್ 1ರಿಂದ ಯುರೋಪಿಯನ್ ಒಕ್ಕೂಟದ (European Union) ರಫ್ತಿನ ಮೇಲೆ 30% ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿದ್ದರು. ಈ ನಡುವೆ ಮಹತ್ವದ ಒಪ್ಪಂದ ಮಾಡಿಕೊಂಡಿದ್ದು, 30% ಸುಂಕದಿಂದ ಬಚಾವ್ ಆಗಿದೆ. ಇದನ್ನೂ ಓದಿ: ಆಸ್ಟ್ರೇಲಿಯಾದ ನೈಸರ್ಗಿಕ ವಿಪತ್ತಾದ ‘ಆಲ್ಗಲ್ ಬ್ಲೂಮ್’ – ಈ ಬಿಕ್ಕಟ್ಟಿನ ಹಿಂದಿನ ಕಾರಣವೇನು?
ಸ್ಕಾಟ್ಲೆಂಡ್‌ನಲ್ಲಿರುವ ತಮ್ಮ ಗಾಲ್ಫ್ ರೆಸಾರ್ಟ್‌ನಲ್ಲಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ನಡುವಿನ ಮಹತ್ವದ ಸಭೆಯಲ್ಲಿ ಇದುವರೆಗಿನ ಅತಿದೊಡ್ಡ ವ್ಯಾಪಾರ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರನ್ವಯ ಯುರೋಪಿನ್‌ನಿಂದ ರಫ್ತಾಗುವ ಆಟೋಮೊಬೈಲ್, ಔಷಧಗಳು ಮತ್ತು ಅರೆವಾಹಕ ಸೇರಿದಂತೆ ಇತರೇ ಸರಕುಗಳ ಮೇಲೆ 15% ಸುಂಕವನ್ನಷ್ಟೇ ವಿಧಿಸಲಾಗುತ್ತದೆ.
ಮುಂದುವರಿದು… ಜೊತೆಗೆ ಒಪ್ಪಂದದ ಭಾಗವಾಗಿ 27 ರಾಷ್ಟ್ರಗಳ ಯುರೋಪಿಯನ್ ಒಕ್ಕೂಟ ಅಮೆರಿಕದಿಂದ 750 ಶತಕೋಟಿ ಡಾಲರ್ ಮೌಲ್ಯದ ಇಂಧನ ಖರೀದಿಸಲಿದೆ. ಜೊತೆಗೆ ಅಮೆರಿಕದಲ್ಲಿ 600 ಶತಕೋಟಿ ಡಾಲರ್‌ಗಿಂತಲೂ ಹೆಚ್ಚಿನ ಹೂಡಿಕೆ ಮಾಡಲಿವೆ ಎಂದು ಟ್ರಂಪ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್
– 60 ಶತಕೋಟಿ ಡಾಲರ್ ವಹಿವಾಟು ದ್ವಿಗುಣಗೊಳ್ಳುವ ನಿರೀಕ್ಷೆ
– ಭಾರತೀಯ ಸಮೂಹವನ್ನೂ ಭೇಟಿಯಾಗಿ ಮೋದಿ ಭಾವುಕ
ಲಂಡನ್/ನವದೆಹಲಿ: ನಾಲ್ಕು ದಿನಗಳ ಕಾಲ ಲಂಡನ್, ಮಾಲ್ದೀವ್ಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಟನ್‌ಗೆ ಬಂದಿಳಿದಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ (PM Modi) ಬ್ರಿಟನ್ ಪ್ರಧಾನಿ ಕೀರ್ ಸ್ಟಾಮರ್ (UK PM Keir Starmer) ಸಾಂಪ್ರದಾಯಿಕ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿಯಾದ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
Landed in London.
This visit will go a long way in advancing the economic partnership between our nations. The focus will be on furthering prosperity, growth and boosting job creation for our people.
2 ದಿನಗಳ ಕಾಲ ಬ್ರಿಟನ್ (Britain) ಪ್ರವಾಸದಲ್ಲಿರುವ ಮೋದಿ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಗುರಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಇಂದು ಕೀರ್ ಸ್ಟಾಮರ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ (Free Trade Deal) ಅಂತಿಮ ಸಹಿ ಹಾಕುವ ಸಾಧ್ಯತೆ ಇದೆ. ಮೂರು ವರ್ಷಗಳ ಚರ್ಚೆಯ ಬಳಿಕ ಮೇ ತಿಂಗಳಲ್ಲಿ ಒಪ್ಪಂದಕ್ಕೆ ಅಂತಿಮ ರೂಪ ನೀಡಲಾಗಿದ್ದು, ಇದು ಭಾರತದ ಶೇ.99 ರಷ್ಟು ರಫ್ತುಗಳ ಮೇಲಿನ ಸುಂಕವನ್ನು ತೆಗೆದುಹಾಕಲಿದೆ. ಇದನ್ನೂ ಓದಿ: 5 ವರ್ಷದ ಬಳಿಕ ಚೀನಿಯರಿಗೆ ಭಾರತ ಪ್ರವಾಸಕ್ಕೆ ಅನುಮತಿ
Touched by the warm welcome from the Indian community in the UK. Their affection and passion towards India’s progress is truly heartening. pic.twitter.com/YRdLcNTWSS
ಮುಖ್ಯವಾಗಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದರಿಂದ ಪ್ರಸ್ತುತ ಇರುವ 60 ಶತಕೋಟಿ ಡಾಲರ್‌ನಿಂದ ವಹಿವಾಟು ದ್ವಿಗುಣಗೊಳ್ಳುವ ಸಾಧ್ಯತೆಗಳಿವೆ. ಜೊತೆಗೆ ಬ್ರಿಟನ್ ಉತ್ಪನ್ನಗಳಾದ ವಿಸ್ಕಿ ಮತ್ತು ಆಟೋಮೊಬೈಲ್‌ಗಳಿಗೆ ಭಾರತದ ಮಾರುಕಟ್ಟೆಯಲ್ಲಿ ಸುಲಭ ಪ್ರವೇಶ ಸಿಗಲಿದೆ. ಇದರೊಂದಿಗೆ ರಕ್ಷಣಾ ವಲಯ, ಶಿಕ್ಷಣ, ಸಂಶೋಧನೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಇದನ್ನೂ ಓದಿ: ಸೇರ್ಪಡೆಯಾಗಿ 2 ವರ್ಷದ ನಂತ್ರ ಯುನೆಸ್ಕೋದಿಂದ ಹೊರ ಬಂದ ಅಮೆರಿಕ
ಭಾರತೀಯ ಸಮೂಹ ಭೇಟಿ; ಮೋದಿ ಭಾವುಕ
ಇನ್ನೂ ಬ್ರಿಟನ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಭಾರತೀಯ ಸಮೂಹವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಭಾವುಕರಾದರು. ಸಾಂಪ್ರದಾಯಿಕ ಸ್ವಾಗತಕ್ಕಾಗಿ ಅಲ್ಲಿನ ಭಾರತೀಯ ಸಮೂಹಕ್ಕೆ ಧನ್ಯವಾದ ಸಲ್ಲಿಸಿದರಲ್ಲದೇ ಭಾರತದ ಪ್ರಗತಿಗೆ ನಿಮ್ಮ ಪ್ರೀತಿ ಮತ್ತು ಬದ್ಧತೆ ನೋಡಿ ಹೃದಯ ತುಂಬಿಬರುತ್ತಿದೆ ಎಂದು ಭಾವುಕರಾದರು. ಇದನ್ನೂ ಓದಿ: ಅಮೆರಿಕ-ಜಪಾನ್ ನಡುವೆ ವ್ಯಾಪಾರ ಒಪ್ಪಂದ; ಟ್ರಂಪ್ ಘೋಷಣೆ
ಎಸ್ & ಪಿ ಗ್ಲೋಬಲ್ ಮಾರ್ಕೆಟ್ ಇಂಟೆಲಿಜೆನ್ಸ್ ಪ್ರಕಾರ, ಈ ಒಪ್ಪಂದವು ಭಾರತಕ್ಕೆ ಗಣನೀಯ ಆರ್ಥಿಕ ಉತ್ತೇಜನ ನೀಡಲಿದೆ. 2024ರಲ್ಲಿ ಯುಕೆಯಿಂದ ಭಾರತಕ್ಕೆ 130 ಬಿಲಿಯನ್ ಡಾಲರ್‌ನಷ್ಟು (ಭಾರತದ ಜಿಡಿಪಿಯ 3.3%) ವಿದೇಶಿ ವಿನಿಮಯ ಹರಿವು ದಾಖಲಾಗಿದ್ದು, ಈ ಒಪ್ಪಂದದಿಂದ ಈ ಹರಿವು ಮತ್ತಷ್ಟು ಹೆಚ್ಚಲಿದೆ. ವಿಶೇಷವಾಗಿ, ಯುಕೆಯಲ್ಲಿ ಕೆಲಸ ಮಾಡುವ ಭಾರತೀಯ ಐಟಿ ವೃತ್ತಿಪರರಿಗೆ ಮೂರು ವರ್ಷಗಳವರೆಗೆ ರಾಷ್ಟ್ರೀಯ ವಿಮೆಯಿಂದ ವಿನಾಯಿತಿ ನೀಡುವ ನಿಬಂಧನೆಯು ಅವರ ಉಳಿತಾಯ ಮತ್ತು ವಿದೇಶಿ ವಿನಿಮಯ ಹರಿವನ್ನು ಹೆಚ್ಚಿಸಲಿದೆ. 2024ರಲ್ಲಿ 56.7 ಬಿಲಿಯನ್ ಡಾಲರ್ ಆಗಿರುವ ದ್ವಿಪಕ್ಷೀಯ ವಾಣಿಜ್ಯವನ್ನು 2030ರ ವೇಳೆಗೆ ದ್ವಿಗುಣಗೊಳಿಸುವ ಗುರಿಯನ್ನು ಈ ಒಪ್ಪಂದ ಹೊಂದಿದೆ.
ಬ್ರಿಟನ್ ಭೇಟಿಯ ಬಳಿಕ, ಪ್ರಧಾನಿ ಮೋದಿ ಜುಲೈ 25-26ರಂದು ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್‌ನ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 1965ರಲ್ಲಿ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 60ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಮಾಲ್ಡೀವ್ಸ್, ಈ ಸಂದರ್ಭದಲ್ಲಿ ಮೋದಿಯವರಿಗೆ ಗೌರವಾನ್ವಿತ ಸ್ವಾಗತವನ್ನು ನೀಡಲಿದೆ. ಮಾಲ್ಡೀವ್ಸ್‌ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ, ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿಸುವ ಬಗ್ಗೆ ಚರ್ಚಿಸಲಿದ್ದಾರೆ. ಇದನ್ನೂ ಓದಿ: 4 ವರ್ಷಗಳಲ್ಲಿ 1.9 ಲಕ್ಷ ಕೋಟಿ ಮೌಲ್ಯದ ರೈಲ್ವೆ ಯೋಜನೆಗಳಿಗೆ ಅನುಮೋದನೆ: ಅಶ್ವಿನಿ ವೈಷ್ಣವ್
ಕಳೆದ ಕೆಲವು ವರ್ಷಗಳಲ್ಲಿ ಭಾರತ-ಮಾಲ್ಡೀವ್ಸ್ ಸಂಬಂಧಗಳು ಕೆಲವು ಏರಿಳಿತಗಳನ್ನು ಕಂಡಿವೆ. 2023ರಲ್ಲಿ ಮುಯಿಝು ಅವರು ‘ಇಂಡಿಯಾ ಔಟ್’ ಚುನಾವಣಾ ಪ್ರಚಾರದೊಂದಿಗೆ ಅಧಿಕಾರಕ್ಕೆ ಬಂದಿದ್ದರು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಎರಡೂ ದೇಶಗಳು ತಮ್ಮ ಸಂಬಂಧವನ್ನು ಸುಧಾರಿಸಿಕೊಳ್ಳಲು ಕಾರ್ಯನಿರ್ವಹಿಸಿವೆ. ಭಾರತವು ಮಾಲ್ಡೀವ್ಸ್‌ಗೆ 2024-25ರಲ್ಲಿ 470 ಕೋಟಿ ರೂ.ನಿಂದ 600 ಕೋಟಿ ರೂ.ಗೆ ಹೆಚ್ಚಳವಾದ ಲೈನ್ ಆಫ್ ಕ್ರೆಡಿಟ್ ಮತ್ತು ಕರೆನ್ಸಿ ಸ್ವಾಪ್ ಸೌಲಭ್ಯವನ್ನು ವಿಸ್ತರಿಸಿದೆ. ಇದರಿಂದ ಮಾಲ್ಡೀವ್ಸ್‌ನ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ನೆರವಾಗಿದೆ.
– ಭಾರತ, ಅಮೆರಿಕ ಮಧ್ಯೆ 3 ಶತಕೋಟಿ ಡಾಲರ್ ಒಪ್ಪಂದ
– ಗ್ಯಾಸ್, ಔಷಧ, 5ಜಿ ಸ್ಪೆಕ್ಟ್ರಂ ಬಗ್ಗೆ ಚರ್ಚೆ
– ಔಷಧ, ವೈದ್ಯಕೀಯ ಉಪಕರಣಗಳ ಅಕ್ರಮ ಸರಬರಾಜಿಗೆ ತಡೆ
ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ 2 ದಿನಗಳ ಭಾರತ ಪ್ರವಾಸವನ್ನು ಇಡೀ ಜಗತ್ತೇ ಕುತೂಹಲದಿಂದ ಕಾಯುತ್ತಿತ್ತು. ಟ್ರಂಪ್ ಪ್ರವಾಸದ ಭಾಗವಾಗಿ ಇಂದು ಮಹಾ ಮಾತುಕತೆಯೂ ನಡೆದಿದೆ. ಅಮೆರಿಕ ಹಾಗೂ ಭಾರತದ ಮಧ್ಯೆ ಭಾರೀ ಒಪ್ಪಂದ ನಡೆದಿದ್ದು, 21,625 ಕೋಟಿ ರೂ. ಒಪ್ಪಂದಕ್ಕೆ ಎರಡು ದೇಶಗಳು ಸಹಿ ಹಾಕಿವೆ.
ದೆಹಲಿಯ ಹೈದ್ರಾಬಾದ್ ಹೌಸ್‍ನಲ್ಲಿ ಇಂದು ಬೆಳಗ್ಗೆ ಒಂದೂವರೆ ತಾಸು ನಡೆದ ಮಾತುಕತೆಯಲ್ಲಿ ರಕ್ಷಣೆ, ಇಂಧನ ಹಾಗೂ ಔಷಧ ಕ್ಷೇತ್ರಕ್ಕೆ ಸಂಬಂಧಿಸಿದಂತೆ 3 ಪ್ರಮುಖ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಉಭಯ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಬಲಪಡಿಸುವಿಕೆಯೇ ಇವತ್ತಿನ ಮಾತುಕತೆ ಪ್ರಮುಖ ಅಂಶವಾಗಿದೆ.
Yet another excellent meeting and talks with my friend @realDonaldTrump.
Relations between India and USA are not merely ties between two governments. Ours is a friendship that is people-driven and people centric.
ವಿಶ್ವದ ಅತ್ಯಾಧುನಿಕ ಎಂಹೆಚ್ 60 ಸೀಹಾಕ್ ರೋಮಿಯೋ ಹೆಲಿಕಾಪ್ಟರ್‌ನಿಂದ ನೌಕಾಪಡೆಗೆ ಆನೆಬಲ ಬಂದಂತಾಗಿದೆ. ಮಾತುಕತೆ ವೇಳೆ ಸಿಎಎ ಬಗ್ಗೆ ನೇರವಾಗಿ ಪ್ರಸ್ತಾಪವಾಗದಿದ್ದರೂ, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಚರ್ಚೆ ನಡೆದಿದೆ. ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹಕ್ಕೆ ಭಾರತ ಕೈಗೊಂಡಿರುವ ಕ್ರಮಗಳನ್ನು ಟ್ರಂಪ್ ಪ್ರಶಂಸಿದ್ದಾರೆ. ಪಾಕಿಸ್ತಾನ ನೆಲದಿಂದ ಉಂಟಾಗುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಯನ್ನು ನಿಯಂತ್ರಿಸಲು ಉಭಯ ದೇಶಗಳು ಸಂಕಲ್ಪ ಮಾಡಿವೆ.
ಮೂರು ಒಪ್ಪಂದಗಳು:
ನೌಕಾಪಡೆಗೆ ಆನೆಬಲ ನೀಡಲಿರುವ ‘ಅಮೆರಿಕದ ರೋಮಿಯೋ’ ಭಾರತದ ಬತ್ತಳಿಕೆ ಸೇರಿದೆ. ಅತ್ಯಾಧುನಿಕ ತಂತ್ರಜ್ಞಾನಗಳಿಂದ ಕೂಡಿರುವ ಸಬ್ ಮೆರೀನ್ ನಿರೋಧಕ ಹಾಗೂ ಬಹುವಿಧ ಕಾರ್ಯವೈಖರಿಯ ಎಂಹೆಚ್ 60 ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್‌ಗಳ ಸೇರ್ಪಡೆ ಭಾರತ ಇನ್ನಷ್ಟು ಬಲಿಷ್ಠವಾಗಿದೆ.
ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್
‘ರೋಮಿಯೋ’ ವೈಶಿಷ್ಟತೆ:
24 ಎಂಹೆಚ್ 60 ರೋಮಿಯೋ ಸೀ ಹಾಕ್ ಹೆಲಿಕಾಪ್ಟರ್ ಖರೀದಿಸಲು ಒಪ್ಪಂದ ನಡೆದಿದೆ. ಈಗ ಲಭ್ಯವಿರುವ ನೌಕಾ ಹೆಲಿಕಾಪ್ಟರ್‌ಗಳಲ್ಲೇ ಇದು ಅತ್ಯಂತ ಆಧುನಿಕವಾಗಿರುವುದು ವಿಶೇಷ. ಭಾರತೀಯ ನೌಕಾಪಡೆಯಲ್ಲಿ ಈಗ ಇಂಗ್ಲೆಂಡಿನ ಹಳೆಯ ಮಾದರಿ ಹೆಲಿಕಾಪ್ಟರ್‌ಗಳಿವೆ. ಸೀಹಾಕ್ ಖರೀದಿ ಸಂಬಂಧ 2.6 ಬಿಲಿಯನ್ ಡಾಲರ್ (18,683 ಕೋಟಿ ರೂ.) ಮೊತ್ತದ ವ್ಯವಹಾರ ನಡೆದಿದ್ದು, ಸಾಗರದಾಳದ ಸಬ್ ಮೆರೀನ್‍ಗಳನ್ನು ಗುರುತಿಸಿ ಹೊಡೆದುರುಳಿಸುವ ಸಾಮರ್ಥ್ಯ ಈ ಹೆಲಿಕಾಪ್ಟರ್ ಗಳಿಗಿವೆ. ಸಮುದ್ರದಲ್ಲಿ ಶೋಧ, ರಕ್ಷಣಾ ಕಾರ್ಯಾಚರಣೆ ನಡೆಸಲಿರುವುದರಿಂದ ಭಾರತದ ಜಲ ಪ್ರದೇಶ ಇನ್ನಷ್ಟು ಬಲಿಷ್ಠವಾಗಲಿದೆ. ವಿಶೇಷವಾಗಿ ಚೀನಾ ಯುದ್ಧನೌಕೆಗಳ ಮೇಲೆ ಕಣ್ಗಾವಲು ಇಡಲಿದೆ. ಅಮೆರಿಕದ ಪ್ರತಿಷ್ಠಿತ ಶಸ್ತ್ರಾಸ್ತ್ರ ತಯಾರಿ ಮತ್ತು ಮಾರಾಟ ಸಂಸ್ಥೆ ಲಾಕ್ ಹೀಡ್ ಮಾರ್ಟಿನ್ ಈ ಹೆಲಿಕಾಪ್ಟರ್ ನಿರ್ಮಾಣ ಮಾಡುತ್ತಿದೆ.
ಅಪಾಚೆ ಹೆಲಿಕಾಪ್ಟರ್:
ನೌಕಾಪಡೆಯಂತೆ ಭಾರತೀಯ ವಾಯುಪಡೆಗೂ ಆನೆಬಲ ಬಂದಿದೆ. `ಹಾರುವ ಯುದ್ಧ ಟ್ಯಾಂಕ್‍ಗಳೆಂದೇ’ ಪ್ರಸಿದ್ಧಿ ಪಡೆದಿರುವ ಅಪಾಚೆ ಹೆಲಿಕಾಪ್ಟರ್‌ಗಳು ಖರೀದಿಗೆ ಒಪ್ಪಂದ ನಡೆಯಿತು. ಶತ್ರು ರಾಷ್ಟ್ರಗಳನ್ನು ನಡುಗಿಸುವ ಅಪಾಚೆ ಹೆಲಿಕಾಪ್ಟರ್ ಅನ್ನು ಅಮೆರಿಕದ ಖ್ಯಾತ ವಿಮಾನ ತಯಾರಿಕಾ ಸಂಸ್ಥೆ ಬೋಯಿಂಗ್ ನಿರ್ಮಾಣ ಮಾಡಿದೆ.
ಅಪಾಚೆ ಹೆಲಿಕಾಪ್ಟರ್
ಅಪಾಚೆ ವಿಶೇಷತೆಗಳು:
ಭಾರತದ ಮೊದಲ ಪೂರ್ಣ ಪ್ರಮಾಣದ ಅಟ್ಯಾಕ್ ಹೆಲಿಕಾಪ್ಟರ್ ಇದಾಗಿದ್ದು, 2015ರಲ್ಲಿ 1.4 ಶತಕೋಟಿ ಡಾಲರ್ ಮೊತ್ತದ 22 ಅಪಾಚೆ ಹೆಲಿಕಾಪ್ಟರ್‌ಗಳಿಗಾಗಿ ಒಪ್ಪಂದ ನಡೆದಿದೆ. ಈಗಾಗಲೇ ಭಾರತೀಯ ವಾಯುಸೇನೆಯಲ್ಲಿ 17 ಅಪಾಚೆ ಹೆಲಿಕಾಪ್ಟರ್‌ಗಳ ಬಳಕೆ ಆಗುತ್ತಿದ್ದು, ಇದೇ ಮಾರ್ಚ್ ನಲ್ಲಿ ಉಳಿದ 5 ಹೆಲಿಕಾಪ್ಟರ್‌ಗಳು ಭಾರತಕ್ಕೆ ರವಾನೆ ಆಗಲಿದೆ.
ಭೂ ಸೇನೆಗಾಗಿ 6 ಹೆಲಿಕಾಪ್ಟರ್‌ಗಳ ಖರೀದಿಗೆ 6,680 ಕೋಟಿ ರೂ. ಒಪ್ಪಂದ ನಡೆದಿದೆ. 30 ಎಂಎಂ ಚೈನ್‍ಗನ್, ಎಐಎಂ- 92 ಕ್ಷಿಪಣಿ, ಹೈಡ್ರಾ 70 ಎಂಎಂ ರಾಕೆಟ್, ಸ್ಟೈಕ್ ಕ್ಷಿಪಣಿಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಈ ಹೆಲಿಕಾಪ್ಟರಿಗೆ ಇದೆ. ನಿಖರ, ನಿರ್ದಿಷ್ಟ ಸ್ಥಳದ ಮೇಲೆ ಕ್ಷಿಪಣಿ ದಾಳಿ ಮಾಡಬಹುದಾಗಿದೆ. ಬಿರುಗಾಳಿ, ಮಳೆ ಸೇರಿದಂತೆ ಯಾವುದೇ ಪರಿಸ್ಥಿತಿಗಳಲ್ಲಿ ಕಾರ್ಯಾಚರಣೆ ಮಾಡಬಲ್ಲದು. ಗುಡ್ಡಗಾಡು, ಕಿರಿದಾದ ಪ್ರದೇಶಗಳಲ್ಲೂ ಸುಲಭವಾಗಿ ಇಳಿಯಬಲ್ಲದು. ಯುದ್ಧಭೂಮಿಯಿಂದ ನಿಯಂತ್ರಣ ಭೂಮಿಗೆ ನೇರವಾಗಿ ಚಿತ್ರಗಳನ್ನು ಕಳುಹಿಸುವ ಸಾಮಥ್ರ್ಯ ಈ ಹೆಲಿಕಾಪ್ಟರ್‌ಗೆ ಇದೆ.
ದ್ರವೀಕೃತ ನೈಸರ್ಗಿಕ ಅನಿಲ ಖರೀದಿ
ಮೂರನೇ ಒಪ್ಪಂದ ಇದಾಗಿದ್ದು, ಅಮೆರಿಕದ ಎಕ್ಸಾನ್ ಮೊಬಿಲ್-ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಡುವೆ ಈ ಒಪ್ಪಂದ ನಡೆದಿದೆ. ಪೈಪ್‍ಲೈನ್, ರಸ್ತೆ, ರೈಲು ಮಾರ್ಗ, ಸಮುದ್ರ ಮಾರ್ಗಗಳಲ್ಲಿ ಕಂಟೈನರ್‍ಗಳ ಮೂಲಕ ದ್ರವೀಕೃತ ನೈಸರ್ಗಿಕ ಅನಿಲ(ಎಲ್‍ಎನ್‍ಜಿ) ಸರಬರಾಜು ಆಗಲಿದೆ. ಅಮೆರಿಕದಿಂದ ಅತೀ ಹೆಚ್ಚು ಇಂಧನ ಖರೀದಿ ಮಾಡುತ್ತಿರುವ 6ನೇ ದೇಶ ಭಾರತವಾಗಿದ್ದು 2018ರಲ್ಲಿ 609 ದಶಲಕ್ಷ ಡಾಲರ್ ಮೌಲ್ಯದ ಕಚ್ಚಾತೈಲವನ್ನು ಭಾರತ ಖರೀದಿಸಿದೆ. ಜಗತ್ತಿನಲ್ಲಿ ದ್ರವೀಕೃತ ನೈಸರ್ಗಿಕ ಅನಿಲ ಖರೀದಿಸುತ್ತಿರುವ ನಾಲ್ಕನೇ ಅತೀ ದೊಡ್ಡ ರಾಷ್ಟ್ರ ಭಾರತವಾಗಿದ್ದು, ಸುವರ್ಣ ಚತುಷ್ಪತ ರಸ್ತೆಯಲ್ಲಿ ಎಲ್‍ಎನ್‍ಜಿ ಕೇಂದ್ರ ಸ್ಥಾಪಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಡೀಸೆಲ್ ಬದಲು ಭವಿಷ್ಯದಲ್ಲಿ ಟ್ರಕ್ ವಾಹನಗಳು ಎಲ್‍ಎನ್‍ಜಿ ಬಳಸಲು ಸರ್ಕಾರ ಉತ್ತೇಜಿಸಲಿದ್ದು, ಇಂಧನ ಬಳಕೆಯಲ್ಲಿ ಎಲ್‍ಎನ್‍ಜಿ ಪಾಲು 10 ವರ್ಷಗಳಲ್ಲಿ ಈಗಿರುವ ಶೇ.6.2ರಿಂದ ಶೇ 15 ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹಾಕಿಕೊಂಡಿದೆ. -168 ಡಿಗ್ರಿ ಸೆಲ್ಸಿಯಸ್‍ನಲ್ಲಿ ದ್ರವೀಕೃತ ನೈಸರ್ಗಿಕ ಅನಿಲವನ್ನ ಪೂರೈಸಲಾಗುತ್ತದೆ.
On trade, our Commerce Ministers had constructive interactions. @POTUS and I agreed to give a legal shape to the understanding between our Ministers so far.
It is the view of both nations to begin negotiations for a trade deal that will be mutually beneficial. pic.twitter.com/MV25IxHNrN
ಬೇರೆ ಏನು ಒಪ್ಪಂದ ನಡೆದಿದೆ?
ಮೇಲೆ ತಿಳಿಸಿದ ಮೂರು ಒಪ್ಪಂದಗಳ ಜೊತೆಗೆ ಹಲವು ವಿಷಯಗಳೂ ಚರ್ಚೆ ಆಗಿವೆ. ಭಾರತ-ಅಮೆರಿಕ ನಡುವೆ ಔಷಧ ಸಹಕಾರ ಒಪ್ಪಂದ ನಡೆದಿದೆ. ಈ ಮೂಲಕ ಭಾರತದಿಂದ ಅಕ್ರಮವಾಗಿ ಔಷಧ, ವೈದ್ಯಕೀಯ ಉಪಕರಣಗಳ ಸರಬರಾಜು ತಡೆಗೆ ಉಭಯ ದೇಶಗಳು ಸಹಿ ಹಾಕಿವೆ. ಅಮೆರಿಕ ಆಹಾರ ಮತ್ತು ಔಷಧ ಆಡಳಿತ ಹಾಗೂ ಭಾರತದ ಕೇಂದ್ರೀಯ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಜೊತೆ ಒಡಂಬಡಿಕೆ ನಡೆದಿದೆ.
ಬೇರೊಂದು ರಾಷ್ಟ್ರದ ಮೂಲಕ ಅಕ್ರಮವಾಗಿ ಭಾರತದಿಂದ ಅಮೆರಿಕಕ್ಕೆ ಔಷಧ, ವೈದ್ಯಕೀಯ ಉಪಕರಣಗಳ ಪೂರೈಕೆ ಆಗುತ್ತಿದೆ. 2019ರಲ್ಲಿ ಈ ರೀತಿಯ 50 ಬಗೆಯ ಔಷಧಗಳು, ಉಪಕರಣಗಳ ಅಕ್ರಮ ಸಾಗಾಟ ನಡೆದಿದೆ. ಹೆಚ್‍ಐವಿ, ಕ್ಯಾನ್ಸರ್ ಮುಂತಾದ ರೋಗಗಳಿಗೆ ಅಮೆರಿಕ ನಿಗದಿಪಡಿಸಿದ ಗುಣಮಟ್ಟಕ್ಕಿಂತ ಕಡಿಮೆ ಗುಣಮಟ್ಟದ ಔಷಧ, ವೈದ್ಯಕೀಯ ಉಪಕರಣಗಳ ಮಾರಾಟ ನಡೆದಿದೆ.
5ಜಿ ಚರ್ಚೆ:
5ಜಿ ತರಂಗಾಂತರದ ಬಗ್ಗೆಯೂ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ಮೋದಿ ಚರ್ಚೆ ನಡೆಸಿದ್ದಾರೆ. ಭಾರತದಲ್ಲಿ 5ಜಿ ತರಂಗಾಂತರ ಹರಾಜು ಪ್ರಕ್ರಿಯೆ ಬಾಕಿ ಇದ್ದು ಚೀನಾ ಮೂಲದ ಹುವಾವೇ ಕಂಪನಿಗೆ ಉಪಕರಣಗಳ ಬಳಕೆ ಅನುಮತಿ ನೀಡಲಾಗಿದೆ. ವಿಶ್ವದಲ್ಲಿ ಅತೀ ಹೆಚ್ಚು 5ಜಿ ಉಪಕರಣಗಳನ್ನು ಉತ್ಪಾದಿಸುತ್ತಿರುವ ಹುವವೇ ಒಟ್ಟು 60 ಕಂಪನಿಗಳ ಜೊತೆಗೆ ಒಪ್ಪಂದ ಮಾಡಿಕೊಂಡಿದೆ. ಆದರೆ ಸುರಕ್ಷತೆಯ ದೃಷ್ಟಿಯಿಂದ ಅಮೆರಿಕದಲ್ಲಿ ಹುವಾವೇ ಕಂಪನಿಗೆ ಟ್ರಂಪ್ ಸರ್ಕಾರ ನಿಷೇಧ ಹೇರಿದೆ. ಹೀಗಾಗಿ ಭಾರತ ಸರ್ಕಾರ ಹುವಾವೇ ಕಂಪನಿಯನ್ನು 5ಜಿ ವ್ಯವಹಾರ ನಿಷೇಧಿಸಬೇಕೆಂದು ಟ್ರಂಪ್ ಪ್ರಸ್ತಾಪ ಮಾಡಿದ್ದಾರೆ ಎಂದು ವರದಿಯಾಗಿದೆ.