Tag: Trade Unions

  • ಕೆ.ಆರ್ ಮಾರ್ಕೆಟ್ ಮೇಲೆ ಬಂದ್ ಎಫೆಕ್ಟ್ – ವ್ಯಾಪಾರಿಗಳ ಅಳಲು

    ಕೆ.ಆರ್ ಮಾರ್ಕೆಟ್ ಮೇಲೆ ಬಂದ್ ಎಫೆಕ್ಟ್ – ವ್ಯಾಪಾರಿಗಳ ಅಳಲು

    ಬೆಂಗಳೂರು: ಇಂದು ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಬಂದ್ ಎಫೆಕ್ಟ್ ಕೆ.ಆರ್ ಮಾರ್ಕೆಟ್ ಮೇಲೆ ಬಿದ್ದಿದೆ. ಪ್ರತಿದಿನಕ್ಕಿಂತ ಕಡಿಮೆ ಮಟ್ಟದಲ್ಲಿ ಹೂವು, ಹಣ್ಣು, ತರಕಾರಿಗಳ ಮಾರಾಟವಾಗುತ್ತಿದ್ದು, ವ್ಯಾಪಾರ ಡಲ್ ಆಗಿದೆ.

    ಬೆಳ್ಳಂಬೆಳಗ್ಗೆ 3 ಗಂಟೆಗೆ ರಾಜ್ಯದ ವಿವಿಧ ಭಾಗಗಳಿಂದ ಬಂದ ರೈತರು ಹಾಗೂ ವ್ಯಾಪಾರಿಗಳು ವ್ಯಾಪಾರ ಆರಂಭಿಸಿದ್ದಾರೆ. ಆದರೇ ಗ್ರಾಹಕರು ಬರುತ್ತಿಲ್ಲ, ಬೋಣಿಯೇ ಆಗಿಲ್ಲ ಎಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಸ್ಥಿತಿ ಉಂಟಾಯಿತು. ಅಲ್ಲದೆ ಉಳಿದಿರುವ ಹೂವು ಮಾರಾಟ ಮಾಡಬೇಕು ಇಲ್ಲವೆಂದರೆ ನಾಳೆಗೆ ಇಡಬೇಕಾಗುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.

    ಭಾರತ ಬಂದ್‍ಗೆ ಕೆ.ಆರ್ ಮಾರ್ಕೆಟ್‍ನಲ್ಲಿ ಕರುನಾಡ ಸಂಘಟನೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿತ್ತು. ಮಾರ್ಕೆಟ್‍ಗೆ ಬರುವ ಜನರಿಗೆ, ವಾಹನ ಸವಾರರಿಗೆ, ಗ್ರಾಹಕರಿಗೆ, ವ್ಯಾಪಾರಿಗಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತ ನೀಡಿದರು. ಬಂದ್ ಜನವಿರೋಧಿ ಸಾವಿರಾರು ಕೋಟಿ ನಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಕೆ.ಆರ್ ಮಾರ್ಕೆಟ್ ಜನಗಳಿಲ್ಲದೇ ಬೀಕೋ ಎನ್ನುತ್ತಿದೆ.

  • ಬುಧವಾರ ಕಾರ್ಮಿಕರ ಪ್ರತಿಭಟನೆ – ಭಾರತ್ ಬಂದ್ ಯಾಕೆ? ಬೇಡಿಕೆ ಏನು?

    ಬುಧವಾರ ಕಾರ್ಮಿಕರ ಪ್ರತಿಭಟನೆ – ಭಾರತ್ ಬಂದ್ ಯಾಕೆ? ಬೇಡಿಕೆ ಏನು?

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್‍ಗೆ ಕರೆ ನೀಡಿವೆ.

    ನಮ್ಮ ಬೇಡಿಕೆ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಪದೇ ಪದೇ ಸಂಘಟನೆಗಳು ದನಿ ಎತ್ತಿದ್ದರೂ, ಸರ್ಕಾರ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಿ ಎಐಟಿಯುಸಿ, ಎಚ್‍ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‍ಇಡಬ್ಲ್ಯುಎ, ಎಐಸಿಸಿಟಿಯು, ಎಲ್‍ಪಿಎಫ್ ಮತ್ತು ಯುಟಿಯುಸಿ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.

    ಪ್ರತಿಭಟನೆಗೆ ಕಾರಣ ಏನು?
    1. ಒಟ್ಟು ರಾಷ್ಟ್ರೀಯ ಉತ್ಪನ್ನ ಜಿಡಿಪಿ ಶೇ.9.4 ರಿಂದ 4.5ಕ್ಕೆ ಕುಸಿತ.
    2. ಆರ್ಥಿಕ ಬಿಕ್ಕಟ್ಟಿನಿಂದ ಉದ್ಯೋಗ ಕಳೆದುಕೊಂಡವರ ಸಂಖ್ಯೆ 50 ಲಕ್ಷ ಮಂದಿ.
    3. ಎಂಜಿನಿಯರಿಂಗ್ ಮುಗಿಸಿದ 100 ಮಂದಿಯಲ್ಲಿ 12 ಜನರಿಗೆ ಮಾತ್ರ ಉದ್ಯೋಗ.
    4. ಮಾಲೀಕರ ಲಾಭದ ಪಾಲು 100ರಲ್ಲಿ 45 ರೂ. ಕಾರ್ಮಿಕರ ವೇತದ ಪಾಲು 100 ರಲ್ಲಿ 15 ರೂ.
    5. ಜಿಎಸ್‍ಟಿಯಿಂದ ಎಲ್ಲ ಬೆಲೆಗಳು ಶೇ.20 ರಷ್ಟು ಏರಿಕೆ.
    6. ಕಾರ್ಮಿಕರು ಪ್ರತಿಭಟನೆ ಮಾಡಿದರೆ 6 ತಿಂಗಳು ಜೈಲು ಶಿಕ್ಷೆ.
    7. ಶ್ರೀಮಂತ ಉದ್ಯಮಿಗಳು ಮಾಡಿರುವ ಬ್ಯಾಂಕ್ ಸಾಲ ಮರುಪಾವತಿ ಮಾಡದೇ ಇರಲು ಕಾನೂನು ತರಲಾಗಿದೆ.

    ಬೇಡಿಕೆ ಏನು?
    1. 21 ಸಾವಿರ ರೂಪಾಯಿ ರಾಷ್ಟ್ರವ್ಯಾಪಿ ಸಮಾನ ಕನಿಷ್ಟ ವೇತನಕ್ಕೆ ಆಗ್ರಹ.
    2. ಕೇಂದ್ರ ಸರ್ಕಾರ ದ ಖಾಸಗೀಕರಣ ನೀತಿಗೆ ವಿರೋಧ.
    3. ಕಾರ್ಮಿಕ ಕಾನೂನು ಕಟ್ಟುನಿಟ್ಟಿನ ಜಾರಿಗಾಗಿ ಜಿಲ್ಲೆಗಳಲಿ ಕಾರ್ಮಿಕ ನ್ಯಾಯಾಲಯ ಸ್ಥಾಪನೆ.
    4. ಮಾಸಿಕ ಪಿಂಚಣಿ 10 ಸಾವಿರ ರೂಪಾಯಿಗಾಗಿ ಬೇಡಿಕೆ.
    5. ಬೆಲೆಯೇರಿಕೆ ನಿಯಂತ್ರಣಕ್ಕೆ ಆಗ್ರಹಿಸಿ, ಸಾರ್ವತ್ರಿಕಪಡಿತರ ವ್ಯವಸ್ಥೆಗಾಗಿ.
    6. ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿರುವ ನೀತಿಗಳ ವಿರುದ್ಧ ಉದ್ಯೋಗ ಕಳಕೊಂಡ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿ ಮಾಡಬೇಕು.

    7. ಕಟ್ಟಡ ಕಾರ್ಮಿಕರು, ಆಟೋ ಚಾಲಕರು, ಬೀದಿಬದಿಯ ವ್ಯಾಪಾರಸ್ಥರು, ಮನೆ ಕೆಲಸಗಾರರು, ಅಸಂಘಟಿತ ಕಾರ್ಮಿಕರಿಗೆ ಭವಿಷ್ಯ ನಿಧಿ ಸ್ಥಾಪನೆ, ಕಲ್ಯಾಣ ಯೋಜನೆಗೆ ಅನುದಾನ ನೀಡಬೇಕು.
    8. ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಗಳಿಗಾಗಿ ಡಾ| ಸ್ವಾಮಿನಾಥನ್ ವರದಿ ಜಾರಿಗಾಗಿ, ಸಾಲ ಮನ್ನಾಕ್ಕಾಗಿ, ರೈತರ ಆತ್ಮಹತ್ಯೆ ತಡೆಗಾಗಿ, ಗ್ರಾಮೀಣ ಉದ್ಯೋಗ ಖಾತ್ರಿ ಬಲಪಡಿಸಲು ಆಗ್ರಹ.
    9. ಗುತ್ತಿಗೆ ಪದ್ಧತಿ ನಿಯಂತ್ರಣ, ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾಯಂ ಖಾತ್ರಿಗೆ ಆಗ್ರಹ.
    11. ರಕ್ಷಣಾ ವಲಯ, ರೈಲ್ವೇ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ವಿರೋಧಿಸಿ ಬಂದ್.