ನೆಲಮಂಗಲ: ದಸರಾ ಹಬ್ಬಕ್ಕೆ ಸಾಲು ಸಾಲು ರಜೆ ಇದ್ದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಹಾಗೂ ಸ್ವಂತ ಊರುಗಳಿಗೆ ತೆರಳಿದ್ದವರು ಬೆಂಗಳೂರಿಗೆ (Bengaluru) ವಾಪಸ್ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯ ನೆಲಮಂಗಲ (Nelamangala) ನಗರದ ಬಳಿ ಭಾರೀ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಭಾರಿ ವಾಹನ ದಟ್ಟಣೆ ಹೆಚ್ಚಾಗಿದ್ದು ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದಾರೆ. ಇನ್ನೂ ಭಾರೀ ವಾಹನ ದಟ್ಟಣೆ ಹಿನ್ನಲೆಯಲ್ಲಿ ಸಂಚಾರ ಸುಗಮಗೊಳಿಸಲು ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸವನ್ನು ಪಡುತ್ತಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ, ಕೊಲೆ – ಕ್ರೌರ್ಯತೆ ನೆನೆದು ಪಿಎಸ್ಐ ಕಣ್ಣಿರು
ಹಾಸನ: ಸಾಲು ಸಾಲು ರಜೆ ಹಿನ್ನೆಲೆ ಪ್ರವಾಸಿ ತಾಣ, ಧಾರ್ಮಿಕ ಕ್ಷೇತ್ರಗಳಿಗೆ ಅಪಾರ ಸಂಖ್ಯೆಯಲ್ಲಿ ಜನ ತೆರಳುತ್ತಿದ್ದಾರೆ. ಪರಿಣಾಮ ಸಕಲೇಶಪುರ (Sakaleshapura) ಶಿರಾಡಿಘಾಟ್ (Shiradi Ghat) ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.
ದಸರಾ ಪ್ರಯುಕ್ತ ಸಾಲು ಸಾಲು ರಜೆಯಿಂದಾಗಿ ಪ್ರವಾಸಿಗರು ಪ್ರವಾಸಿ ತಾಣಗಳುಗೆ ತೆರಳುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಕೆಲಸ ಮಾಡುವವರು ಸ್ವಂತ ಊರಿಗೆ ತೆರಳುತ್ತಿದ್ದಾರೆ. ಇದರ ನಡುವೆ ಕೆಲವರು ಊರಿಂದ ವಾಪಸ್ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಇದರಿಂದಾಗಿ ಸಾವಿರಾರು ಪ್ರಯಾಣಿಕರು ಟ್ರಾಫಿಕ್‌ನಲ್ಲಿ ಸಿಲುಕುವಂತಾಗಿದೆ.
ಬೆಂಗಳೂರು: ದೇಶದೆಲ್ಲೆಡೆ ಇಂದು (ಅ.1) ಆಯುಧ ಪೂಜೆ ಸಂಭ್ರಮ ಜೋರಾಗಿದೆ. ಸಿಲಿಕಾನ್ ಸಿಟಿಯಲ್ಲಿ ಜನರು ಖರೀದಿಗಾಗಿ ಮುಗಿಬಿದ್ದಿದ್ದು, ಕೆ.ಆರ್ ಮಾರ್ಕೆಟ್ (KR Market) ಸುತ್ತ ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ಆಗಿದೆ.
ಆಯುಧ ಪೂಜೆ ಹಿನ್ನೆಲೆ ಕೆ.ಆರ್ ಮಾರುಕಟ್ಟೆಯಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಹೂವು, ಹಣ್ಣು ಪೂಜಾ ಸಾಮಗ್ರಿಗಳ ಖರೀದಿ ಭರಾಟೆ ಜೋರಾಗಿದೆ. ಈ ಹಿನ್ನೆಲೆ ಟೌನ್‌ಹಾಲ್‌ನಿಂದ ಕೆಆರ್ ಮಾರ್ಕೆಟ್‌ವರೆಗೆ ಟ್ರಾಫಿಕ್ ಬಿಸಿ ತಟ್ಟಿದೆ. ಖರೀದಿಗೆ ಬಂದ ಜನರು ಫ್ಲೈಓವರ್ ಮೇಲೆಯೂ ವಾಹನಗಳನ್ನು ಪಾರ್ಕ್ ಮಾಡಿದ್ದು, ಫ್ಲೈ ಓವರ್ ಮೇಲೆಯೂ ಕಿ.ಮೀವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ.ಇದನ್ನೂ ಓದಿ: ಭಾರತದ ಮೋಸ್ಟ್ ಡೇಂಜರಸ್ ಫೋರ್ಟ್ – ಹರಿಹರ ಕೋಟೆ ಹತ್ತಲು ಡಬಲ್ ಗುಂಡಿಗೆ ಬೇಕು!
ಆಯುಧ ಪೂಜೆ ಹಾಗೂ ದಸರಾ ಹಬ್ಬದ ಹಿನ್ನೆಲೆ ಹೂವು, ಹಣ್ಣುಗಳ ಬೆಲೆಯೂ ಗಗನಕ್ಕೇರಿದೆ. ಬೆಲೆ ಏರಿಕೆಯಾದರೂ ಹಬ್ಬರ ಸಂಭ್ರಮ ಜೋರಾಗಿ ಇದೆ.
ಹೂವು ಇಂದಿನ ದರ (ಕೆ.ಜಿಗೆ)
ಸೇವಂತಿ 200-300 ರೂ.
ಕನಕಾಂಬರ 2000-2500 ರೂ.
ಮಲ್ಲಿಗೆ 1500-2000 ರೂ.
ಗುಲಾಬಿ 400-450 ರೂ.
ಕಾಕಡ 800 ರೂ
ಬಾಳೆಕಂಬ ಜೋಡಿ 50-70ರೂ.
ಕುಂಬಳಕಾಯಿ 50-60ರೂ
ಗುಲಾಬಿ ಹಾರ 4000 ರೂ.
ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾದ (Accident) ಘಟನೆ ನೆಲಮಂಗಲ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನೆಲಮಂಗಲ ಟೋಲ್ (Nelamangala Toll) ಬಳಿ ತುಮಕೂರು ಕಡೆಯಿಂದ ಬೆಂಗಳೂರು ಕಡೆ ಬರುತ್ತಿದ್ದ ಕಂಟೇನರ್ ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ. 1 ಕಿ.ಮೀ ವರೆಗೆ ವಾಹನಗಳು ಸಾಲಾಗಿ ನಿಂತಿವೆ. ಇದನ್ನೂ ಓದಿ: ಡ್ರಗ್ಸ್ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು (Bengaluru) ಏಕಾಏಕಿ ಮಳೆ ಅಬ್ಬರಿಸಿದೆ. ಸಂಜೆ ಸುರಿದ ಮಳೆಯಿಂದ ಭಾರೀ ಅವಾಂತರ ಸೃಷ್ಟಿಯಾಗಿದೆ. ಇದೇ ವೇಳೆ ಮಣ್ಣು ಕುಸಿದು ಓರ್ವ ಕಟ್ಟಡ ಕಾರ್ಮಿಕ ಬಲಿಯಾಗಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಳೆ ನೀರು ಜಾಸ್ತಿ ಹರಿದ ಪರಿಣಾಮ ಮಣ್ಣು ಕುಸಿದಿದೆ, ಈ ವೇಳೆ ಮಣ್ಣಿನಡಿ ಸಿಲುಕಿ ಆಂಧ್ರ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ. ಇನ್ನೂ ಮತ್ತೋರ್ವನ ಸ್ಥಿತಿಯೂ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಲಹಂಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗೆ ಕನ್ನಡ ಬರುತ್ತಾ ಅಂತ ಕೇಳಿದ ಸಿಎಂ – ಸ್ವಲ್ಪ ಸ್ವಲ್ಪ ಬರುತ್ತೆ; ಮುರ್ಮು ಉತ್ತರ
ಸಂಜೆ ಮಳೆಗೆ ಭಾರಿ ಅವಾಂತರ
ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್ ದಟ್ಟಣೆ ಕೂಡ ಉಂಟಾಗಿತ್ತು.
ಎಲ್ಲೆಲ್ಲಿ ಮಳೆಯ ಆರ್ಭಟ ಜೋರು?
ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು.
ಇನ್ನೂ ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು. ಇದನ್ನೂ ಓದಿ: Bengaluru | ಗೋವಿಂದರಾಜನಗರದಲ್ಲಿ ಬ್ರಾಹ್ಮಣ ಭವನ ಉದ್ಘಾಟನೆ
– ಬಿಬಿಎಂಪಿ ವಲಯ ಕಚೇರಿ ರಸ್ತೆಯಲ್ಲೇ ತುಂಬಿ ಹರಿದ ಮಳೆ ನೀರು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿಂದು (Bengaluru Rains) ಸಂಜೆ ಏಕಾಏಕಿ ಮಳೆ ಅಬ್ಬರಿಸಿದೆ. ಬೆಳಗ್ಗೆಯಿಂದ ಕಾಣಿಸಿಕೊಳ್ಳದ ಮಳೆರಾಯ ಸಂಜೆ ಏಕಾಏಕಿ ಅಪ್ಪಳಿಸಿದೆ. ಕೆಲವೇ ನಿಮಿಷ ಸುರಿದ ಮಳೆಗೆ ಹಲವೆಡೆ ಅವಾಂತರ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಪರದಾಟುವಂತಾಗಿದೆ.
ಕಳೆದ 2-3 ದಿನಗಳಿಂದ ಆಗೊಮ್ಮೆ ಈಗೊಮ್ಮೆ ಮಳೆ ಬಂದು ಹೋಗುತ್ತಿತ್ತು. ಆದ್ರೆ ಸೆಪ್ಟೆಂಬರ್ ಮೊದಲ ದಿನವೇ ಜೋರು ಮಳೆ ಸುರಿದಿದೆ. ಮಳೆಗಾಲದ ದಿನಗಳಿಗೆ ಹೋಲಿಸಿದ್ರೆ ಸೋಮವಾರ ಸಂಜೆ ಸುರಿದ ಮಳೆ ಬಿರುಸಾಗಿತ್ತು. ರಸ್ತೆಯಲ್ಲಿ ಜನ, ವಾಹನ ಸಂಚಾರ ಸಾಧ್ಯವಾಗದಷ್ಟು ಜೋರಿತ್ತು. ಮಿಂಚು ಗುಡುಗು ಕೂಡ ಇದ್ದು ಜನ ಭಯ ಭೀತರಾದರು. ವಾಹನ ಸವಾರರು ಮಳೆಯಲ್ಲಿ ಸಂಚಾರ ಮಾಡುವ ಧೈರ್ಯ ಮಾಡದೇ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿ ಮರ, ಕಟ್ಟಡಗಳ ಬಳಿ ಆಶ್ರಯ ಪಡೆದಿದ್ದರು. ಇನ್ನೂ ಅಲ್ಲಲ್ಲಿ ಟ್ರಾಫಿಕ್ ದಟ್ಟಣೆ ಕೂಡ ಉಂಟಾಗಿತ್ತು. ಇದನ್ನೂ ಓದಿ: Ramanagara | ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ – 23 ಮಂದಿಯ ವಿರುದ್ಧ ಎಫ್‌ಐಆರ್
ಎಲ್ಲೆಲ್ಲಿ ಮಳೆಯ ಆರ್ಭಟ ಜೋರು?
ಟೌನ್ ಹಾಲ್, ಕಾರ್ಪೋರೇಷನ್, ಜಯನಗರ, ಜೆಪಿ ನಗರ ಸುತ್ತಮುತ್ತ, ವಿಲ್ಸನ್ ಗಾರ್ಡನ್, ಶಾಂತಿನಗರ, ಲಾಲ್ ಬಾಗ್ ಸುತ್ತಮುತ್ತ, ಮಲ್ಲೇಶ್ವರಂ ರಸ್ತೆ, ಮಂತ್ರಿ ಮಾಲ್ ಯಲ್ಲಿ ಜೋರು ಮಳೆ ಉಂಟಾಗಿತ್ತು. ಅಲ್ಲದೇ ಬಿಬಿಎಂಪಿ ವಲಯ ಕಚೇರಿ ಮುಂದಿನ ರಸ್ತೆಯೇ ತುಂಬಿ ಹರಿಯುತ್ತಿದ್ದ ದೃಶ್ಯವೂ ಕಂಡುಬಂದಿತು. ಅಲ್ಲದೇ ಕೆ.ಆರ್ ಮಾರ್ಕೆಟ್, ಶಾಂತಿನಗರದಲ್ಲೂ ಜೋರು ಮಳೆಯಾಗಿದ್ದು, ರಸ್ತೆಗಳು ಜಲಾವೃತವಾಗಿದ್ದವು. ಇದನ್ನೂ ಓದಿ: ಡಿಕೆಶಿ ನಟ್ಟು ಬೋಲ್ಟು ಹೇಳಿಕೆ ಸಾಧು ಕೋಕಿಲ ಕಿತಾಪತಿ – ಕಿಚ್ಚ ಸುದೀಪ್
ಇನ್ನೂ ಏಕಾಏಕಿ ಸುರಿದ ಮಳೆಯಿಂದಾಗಿ ಕೆಲ ಸಮಯದ ರಸ್ತೆಯಲ್ಲಿ 2 ರಿಂದ 3 ಅಡಿಯಷ್ಟು ನೀರು ಆವೃತವಾಗಿತ್ತು. ಅಲ್ಲಲ್ಲಿ ಚರಂಡಿ ನೀರು ತುಂಬಿ ಹರಿಯುತ್ತಿದ್ದರಿಂದ ದುರ್ವಾಸನೆ ಬೀರುತ್ತಿತ್ತು. ಇದು ವಾಹನ ಸವಾರರನ್ನೂ ಹೈರಾಣಾಗುವಂತೆ ಮಾಡಿತ್ತು. ಇನ್ನೂ ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಅವಾಂತರ ಸೃಷ್ಟಿಯಾಗಿತ್ತು. ಇದನ್ನೂ ಓದಿ: ಭಾರೀ ಭ್ರಷ್ಟಾಚಾರ ಆರೋಪ – ಆನೇಕಲ್ ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ (Delhi NCR) ಪ್ರದೇಶದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ (Delhi Airport) ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯಾಗಿ 209 ನಿರ್ಗಮನ ಮತ್ತು 43 ಆಗಮನದಲ್ಲಿ ವಿಳಂಬವಾಗಿದೆ.
यह वीडियो दिल्ली की पटपरगंज के रोड का है । भाजपा की चार एंजिन की सरकार ने अब तो अब झूठे दावे करने भी बंद कर दिए हैं ।सोच रहे हैं कि बारिश का मौसम खत्म हो और बला टलें ।
दिल्ली वाले सोच रहे हैं आने वाले समय में ये भाजपा सरकार दिल्ली को हर क्षेत्र में पीछे धकेल देगी।
ನಿರಂತರ ಮಳೆಯಿಂದಾಗಿ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ, ಡಿಫೆನ್ಸ್ ಕಾಲೋನಿ ಮತ್ತು ಪ್ರೀತ್ ವಿಹಾರ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ವ್ಯಾಪಕ ಜಲಾವೃತ ಮತ್ತು ಸಂಚಾರ ದಟ್ಟಣೆ ಉಂಟಾಗಿದೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಬಂದ ರಹಸ್ಯ ಪತ್ರದಿಂದ ಭಾರತ, ಚೀನಾ ಸಂಬಂಧ ಸುಧಾರಣೆ!
VIDEO | Delhi: Vehicles stuck in waterlogging after heavy rains; visuals from West Vinod Nagar show submerged roads.
ರಾಜಧಾನಿಯ ಹಲವಾರು ಪ್ರಮುಖ ಮಾರ್ಗಗಳಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿತ್ತು. ಡಿಎನ್‌ಡಿ ಫ್ಲೈವೇ, ಮಥುರಾ ರಸ್ತೆ, ವಿಕಾಸ್ ಮಾರ್ಗ, ಐಎಸ್‌ಬಿಟಿ, ಗೀತಾ ಕಾಲೋನಿ ಮತ್ತು ರಾಜಾರಾಮ್ ಕೊಹ್ಲಿ ಮಾರ್ಗ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ಸಂಚಾರ ನಿಧಾನಗತಿಯಲ್ಲಿ ಸಾಗಿತು. ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ
ಶುಕ್ರವಾರದಿಂದ ಭಾನುವಾರದವರೆಗೆ ಮೂರು ದಿನ ಸಾಲು ಸಾಲು ರಜೆಯಿದ್ದ ಕಾರಣ ಹೆಚ್ಚಿನವರು ಊರಿಗೆ ತೆರಳಿದ್ದರು. ಇದೀಗ ರಜೆ ಮುಗಿಸಿ ಊರಿನಿಂದ ಬೆಂಗಳೂರಿನತ್ತ ಜನರು ಬರುತ್ತಿದ್ದು, ಮಂಗಳೂರು-ಬೆAಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ.
ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಮಳೆಯೇ ನಡುವೆ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ಮೂರು ದಿನಗಳ ರಜೆ ಮುಗಿಸಿ ಹೆಚ್ಚಿನ ಜನರು ಬೆಂಗಳೂರಿಗೆ ಮರಳುತ್ತಿರುವ ಹಿನ್ನೆಲೆ ಟ್ರಾಫಿಕ್ ಜಾಮ್ ಆಗಿದೆ. ಇದೆಲ್ಲದರ ಮಧ್ಯೆಯೇ ಆಂಬುಲೆನ್ಸ್ ಸಿಲುಕಿಕೊಂಡಿದ್ದು, ಪ್ರಯಾಣಿಕರು ಹೈರಾಣಾಗಿದ್ದಾರೆ.ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ – ಪತಿ ವಿರುದ್ಧ ಕೊಲೆ ಆರೋಪ
– ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ – ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಸವಾರರು
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (NH 75) ಭೂಕುಸಿತ (Landslide) ಉಂಟಾಗಿದೆ. ಭೂಕುಸಿತ ಹಿನ್ನೆಲೆ ವಾಹನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ (Shiradi Ghat) ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ (Traffic Jam) ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲ್ಸ ಆಗ್ತಿದೆ: ವಿಶ್ವನಾಥ್
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು (Hiriyur) ತಾಲೂಕಿನ ಕೆಆರ್ ಹಳ್ಳಿ ಗೇಟ್ (KR Halli Gate) ಬಳಿ ಟ್ರಾಫಿಕ್ ಜಾಮ್ (Traffic Jam) ಉಂಟಾದ ಪರಿಣಾಮ ಸುಮಾರು 5 ಕಿಲೋ ಮೀಟರ್‌ವರೆಗೂ ವಾಹನಗಳು ನಿಂತಲ್ಲೇ ನಿಂತಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಆದಿವಾಲದಿಂದ ಗೊರ್ಲಡಕು ಗೇಟ್ ಮುಂದೆ ಜವನಗೊಂಡನಹಳ್ಳಿಯಿಂದ ಶಿರಾ ತಲುಪುವವರೆಗೆ ಜಾಮ್ ಉಂಟಾಗಿದೆ. ಟ್ರಾಫಿಕ್ ಹಿನ್ನೆಲೆ ಬೆಂಗಳೂರಿಗೆ ತೆರಳುವವರು ಮಾರ್ಗ ಬದಲಿಸುವುದು ಉತ್ತಮ. ಇದನ್ನೂ ಓದಿ: ಆ.15 ರಿಂದ ಸಿಗುತ್ತೆ ಫಾಸ್ಟ್ಯಾಗ್ ವಾರ್ಷಿಕ ಪಾಸ್
ಕೆಆರ್ ಹಳ್ಳಿ ಬಳಿ ಫ್ಲೈಓವರ್ ನಿರ್ಮಾಣ ಹಿನ್ನೆಲೆ ವಾಹನಗಳು ಸರ್ವಿಸ್ ರಸ್ತೆಯಲ್ಲಿ ಚಲಿಸಿತ್ತಿದೆ. ಕಿರಿದಾದ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಟ್ರಾಫಿಕ್ ಉಂಟಾಗಿದೆ. ಟ್ರಾಫಿಕ್‌ನಲ್ಲಿ ಸಿಲುಕಿದ ವಾಹನ ಸವಾರರು ಕಂಗಾಲಾಗಿದ್ದಾರೆ. ಭಾನುವಾರ ರಾತ್ರಿ ಕೂಡ ಇದೇ ಸಮಸ್ಯೆ ತಲೆದೋರಿತ್ತು. ಇದನ್ನೂ ಓದಿ: Belagavi | 500 ರೂ.ಗಾಗಿ ತಾಯಿ ಎದುರೇ ಸ್ನೇಹಿತನ ಕೊಲೆ