Tag: Traffic Police Station

  • ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

    ಬೆಂಗಳೂರಿನಲ್ಲಿ 5 ಹೊಸ ಟ್ರಾಫಿಕ್ ಪೊಲೀಸ್ ಠಾಣೆ: ಬೊಮ್ಮಾಯಿ

    ಬೆಂಗಳೂರು: ರಾಜಧಾನಿಯಲ್ಲಿ ಹೊಸದಾಗಿ ಐದು ಟ್ರಾಫಿಕ್ ಪೊಲೀಸ್ ಠಾಣೆ (Traffic Police Station) ಸ್ಥಾಪಿಸಿ, ಒಬ್ಬರು ಡಿಸಿಪಿ, ಸಿಬ್ಬಂದಿ, ವಾಹನ ಹಾಗೂ ಎಲ್ಲಾ ಸಲಕರಣೆಗಳನ್ನು ಸರ್ಕಾರ ಒದಗಿಸುತ್ತಿದೆ. ವಾಹನ ದಟ್ಟಣೆಯನ್ನು ಸಂಪೂರ್ಣ ನಿಯಂತ್ರಿಸುವ ಉದ್ದೇಶವಿದ್ದು, 12 ಕಾರಿಡಾರ್ ರಸ್ತೆಗಳನ್ನು ಕೂಡ ಹೊಸದಾಗಿ ನಿರ್ಮಿಸುವ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

    ಬಿಬಿಎಂಪಿ ವತಿಯಿಂದ ಆಯೋಜಿಸಿದ್ದ ಹೆಚ್‌ಎಎಲ್‌ ವಿಮಾನ ನಿಲ್ದಾಣದ ವಾರ್ಡ್, ಮಹದೇವಪುರ ವಲಯ ವ್ಯಾಪ್ತಿಯಲ್ಲಿನ ಸುರಂಜನ್‌ ದಾಸ್ ಜಂಕ್ಷನ್ ಬಳಿಯ ಕೆಳಸೇತುವೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಇದನ್ನೂ ಓದಿ: ಹೆಚ್‌ಡಿಕೆ ಒಕ್ಕಲಿಗರನ್ನು ಓಲೈಸಲು ಬೇರೆ ಸಮುದಾಯಗಳನ್ನ ಒಡೆಯುತ್ತಿದ್ದಾರೆ : ಸಿಪಿವೈ

    ಲೋಕಾರ್ಪಣೆಯಾಗಿರುವ ಕೆಳಸೇತುವೆಯಿಂದಾಗಿ ವೈಟ್ ಫೀಲ್ಡ್‌ನಿಂದ ಹಿಡಿದು ಎಂಜಿ ರಸ್ತೆಯವರೆಗೆ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ. ವಾಹನಗಳು ಇನ್ಮುಂದೆ ಸುಗಮವಾಗಿ ಸಂಚಾರ ಮಾಡಬಹುದಾಗಿದೆ. ಹಿಂದೊಮ್ಮೆ ಹೆಚ್‌ಎಎಲ್ ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ನೋಡಿ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕೆಲಸವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಿರುವ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ಅಭಿನಂದಿಸಿದರು.

    ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮ
    ಬೆಂಗಳೂರು ಅತಿ ವೇಗದಲ್ಲಿ ಬೆಳೆಯುತ್ತಿರುವ ನಗರ. ಪ್ರತಿನಿತ್ಯ 5 ಸಾವಿರ ವಾಹನಗಳು ರಸ್ತೆಗಿಳಿಯುತ್ತವೆ. ಬೆಂಗಳೂರಿನಲ್ಲಿ ಪ್ರತಿ ದಿನ 10 ಲಕ್ಷ ಜನ ಬಂದುಹೋಗುವವರಿದ್ದಾರೆ. ಇದರ ಪರಿಹಾರಕ್ಕೆ ಹಲವಾರು ದೀರ್ಘಾವಧಿ ಮತ್ತು ಅಲ್ಪಾವಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅವಶ್ಯಕತೆ ಇದೆ. ಸಂಚಾರ ಸುಗಮಗೊಳಿಸಲು ಅಮೃತ ನಗರೋತ್ಥಾನದಲ್ಲಿ 11 ಮೇಲ್ಸೇತುವೆಗಳನ್ನು ಕೈಗೊಂಡಿದ್ದು ಅನುಮೋದನೆಯನ್ನೂ ನೀಡಲಾಗಿದೆ. ಬೆಂಗಳೂರಿನ ಇತಿಹಾಸದಲ್ಲಿಯೇ ಒಂದೇ ವರ್ಷ 11 ಮೇಲ್ಸೇತುವೆಗಳಿಗೆ ಅನುಮೋದನೆ ನೀಡಿರುವುದು ಇದೇ ಪ್ರಥಮ ಬಾರಿ. ಬೆಂಗಳೂರಿಗೆ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಮಾಡಿದಾಗ ಮಾತ್ರ ಬೆಂಗಳೂರಿನ ನಾಗರಿಕರಿಗೆ ಪರಿಹಾರ ನೀಡಿದಂತಾಗುತ್ತದೆ ಎಂಬ ನಿಲುವಿನಿಂದ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 3,000 ಕೋಟಿ ರೂ. ಅನುದಾನವನ್ನು ರಸ್ತೆ ನಿರ್ಮಾಣಕ್ಕೆ ಒದಗಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆಯ ಬ್ರಾಹ್ಮಣ ಸಿಎಂ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ: ಬಿಎಸ್‌ವೈ

    ವಾಹನ ದಟ್ಟಣೆ ನಿಯಂತ್ರಣ
    ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ನೀಡುವ ನಿಟ್ಟಿನಲ್ಲಿ ವಿಶೇಷ ಆಯುಕ್ತರನ್ನು ನೇಮಿಸಲಾಗಿದ್ದು, ಸಂಚಾರ ದಟ್ಟಣೆಯನ್ನು ಬಹಳಷ್ಟು ಕಡಿಮೆ ಮಾಡಲಾಗಿದೆ. ಹೊರಗಿನಿಂದ ಬರುವ ವಾಹನಗಳನ್ನು ನಿಯಂತ್ರಿಸಿ ಇಲ್ಲಿ ಹೆಚ್ಚು ದಕ್ಷತೆಯಿಂದ ಸಂಚಾರ ಪೋಲಿಸರನ್ನು ನಿಯೋಜಿಸಿ, ವಾಹನ ದಟ್ಟಣೆಯನ್ನು ಕಡಿಮೆ ಮಾಡಲಾಗಿದೆ.

    ಬೆಂಗಳೂರಿನ ಅಭಿವೃದ್ದಿಗೆ ಅನುದಾನ
    ಸಬ್ ಅರ್ಬನ್ ರೈಲಿಗೆ ಈಗಾಗಲೇ ನಮ್ಮ ಪ್ರಧಾನಿಗಳು ಲೋಕಾರ್ಪಣೆ ಮಾಡಿದ್ದು, ಕಾಮಗಾರಿ ಪ್ರಾರಂಭವಾಗಿದೆ. ಸ್ಯಾಟೆಲೈಟ್ ರಿಂಗ್ ರೋಡ್ ಕಾಮಗಾರಿ ಪ್ರಗತಿಯಲ್ಲಿದೆ. ಪಿಆರ್‌ಆರ್ ಬಗ್ಗೆ ಆದಷ್ಟು ಬೇಗನೆ ತೀರ್ಮಾನ ಮಾಡಲಾಗುವುದು. ಮೆಟ್ರೊ 3ನೇ ಹಂತಕ್ಕೆ ಚಾಲನೆ ನೀಡಿದ್ದೇವೆ. ರಾಜಕಾಲುವೆಗಳ ಸಮಸ್ಯೆಗೆ 2 ಸಾವಿರ ಕೊಟಿ ರೂ. ಒದಗಿಸಿದೆ. ಅಡೆತಡೆಗಳನ್ನು ತೆರವುಗೊಳಿಸಿ ಸಮಸ್ಯೆಗೆ ಪರಿಹಾರ ನೀಡುತ್ತಿದ್ದೇವೆ. ಸರ್ಕಾರ ಬೆಂಗಳೂರಿನ ಅಭಿವೃದ್ದಿಗೆ ಅನುದಾನ ಒದಗಿಸಿದೆ. ಪ್ರಮುಖ ಕೆರೆಗಳಿಗೆ ಗೇಟ್ ಅಳವಡಿಸಿ ನೀರಿನ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ವರ್ಷ 11 ಮೇಲ್ಸೇತುವೆಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು. ಇದನ್ನೂ ಓದಿ: ರಾಜ್ಯ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ಸುಳಿವು ನೀಡಿದ ಸಚಿವ ಸುಧಾಕರ್

    ಸ್ಪಂದನಾಶೀಲ ಸರ್ಕಾರ
    ನಮ್ಮದು ಸ್ಪಂದನಾಶೀಲ ಸರ್ಕಾರ. ಬೆಂಗಳೂರಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗಿದೆ. ನಮ್ಮ ಸಚಿವರು ಅವರವರ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ನಗರದ ಅಭಿವೃದ್ದಿಗೆ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಬೆಂಗಳೂರಿನ ಅಂತಾರಾಷ್ಟ್ರೀಯ ಬ್ರ್ಯಾಂಡ್ ಉಳಿಸುವ ನಿಟ್ಟಿನಲ್ಲಿ ನಮ್ಮ‌ ಕೆಲಸ ನಡೆದಿದೆ ಎಂದರು.

    ಸಚಿವರಾದ ಬಿ.ಎ.ಬಸವರಾಜ, ಮುರುಗೇಶ್ ನಿರಾಣಿ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಗಾರ ರಾಕೇಶ್ ಸಿಂಗ್, ಆರೋಗ್ಯ ಇಲಾಖೆ ವಿಶೇಷ ಆಯುಕ್ತ ಡಾ. ಕೆ.ವಿ.ತ್ರಿಲೋಕ್ ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • BBMP ಕಸದ ಲಾರಿಗೆ ಮತ್ತೊಂದು ಬಲಿ – ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

    BBMP ಕಸದ ಲಾರಿಗೆ ಮತ್ತೊಂದು ಬಲಿ – ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವು

    ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಮತ್ತೊಂದು ಬಲಿ ಪಡೆದಿದೆ. ಯಮ ಸ್ವರೂಪಿ ಲಾರಿ ಹರಿದ ಪರಿಣಾಮ ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಥಣಿಸಂದ್ರ ರೈಲ್ವೇ ಮೇಲ್ಸೇತುವೆ ಬಳಿ ಘಟನೆ ನಡೆದಿದೆ.

    ದೇವಣ್ಣ (25) ನಾಗವಾರದಿಂದ ಹೆಗ್ಗಡೆ ನಗರದ ಕಡೆಗೆ ಬರುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಬಂಧ ಆರೋಪಿ ಚಾಲಕ ದಿನೇಶ್ ನಾಯ್ಕ (40)ನನ್ನು ಬಂಧಿಸಿದ್ದು, ಚಿಕ್ಕಜಾಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಹಿಂದೂಗಳಿಗೆ ಬಿಟ್ಟು ಕೊಡುವಂತೆ ಆಗ್ರಹ

    BBMP

    ಇದು ಚಿಕ್ಕಜಾಲಹಳ್ಳಿಯಲ್ಲಿ ನಡೆದಿರುವ 2ನೇ ಅಪಘಾತವಾಗಿದೆ. ಕಳೆದ ಮಾರ್ಚ್ 31ರಂದು ರಾಮಯ್ಯ (70) ಎಂಬ ವ್ಯಕ್ತಿಯನ್ನ ಬಿಬಿಎಂಪಿ ಲಾರಿ ಬಲಿ ಪಡೆದುಕೊಂಡಿತ್ತು. ಮತ್ತೆ ಅಂತಹದ್ದೇ ಘಟನೆ ಸಂಭವಿಸಿದ್ದು, ಬಿಬಿಎಂಪಿ ಕಸದ ಲಾರಿಗಳಿಗೆ ಇನ್ನೆಷ್ಟು ಬಲಿ ಬೇಕು ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

    2 ತಿಂಗಳಲ್ಲಿ 4 ಜೀವ ಬಲಿ: ಕಳೆದ 2 ತಿಂಗಳಲ್ಲಿ ಬಿಬಿಪಿಎಂ ಕಸದ ಲಾರಿಗೆ 4 ಮಂದಿ ಬಲಿಯಾಗಿದ್ದಾರೆ. ಈ ಹಿಂದೆ ಮೂವರು ಕಸದ ಲಾರಿ ಅಪಘಾತದಲ್ಲೇ ಸಿಕ್ಕಿ ಪ್ರಾಣ ಬಿಟ್ಟಿದ್ರು. ಮಾರ್ಚ್ 21 ರಂದು ಹೆಬ್ಬಾಳದ ಬಳಿ ಅಕ್ಷಯ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ್ದಳು. ಅಂಡರ್ ಪಾಸ್‌ನಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿ ಮೇಲೆ ಕಸದ ಲಾರಿ ಹರಿದು ವಿದ್ಯಾರ್ಥಿನಿ ಅಕ್ಷಯ ಮೃತಪಟ್ಟಿದ್ದಳು. ಈ ಸಂಬಂಧ ಆರ್‌ಟಿ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

    BBMP ACCIDENT

    ಆ ನಂತರದಲ್ಲಿ ಮಾರ್ಚ್ 31 ರಂದು ಬಾಗಲೂರು ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ರಾಮಯ್ಯ ಎಂಬ ವೃದ್ಧನ ಮೇಲೆ ಹರಿದು 2ನೇ ಬಲಿ ಪಡೆದುಕೊಂಡಿತ್ತು. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಾಲದೆಂಬಂತೆ ಏಪ್ರಿಲ್ 18 ರಂದು ನಾಯಂಡಹಳ್ಳಿ ಜಂಕ್ಷನ್ ಬಳಿ ಪದ್ಮಿನಿ ಎಂಬ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯನ್ನು ಬಲಿ ಪಡೆದಿತ್ತು. ಈ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ 4ನೇ ಬಲಿ ಪಡೆದಿದ್ದರೂ ಬಿಬಿಎಂಪಿ ಬುದ್ದಿ ಕಲಿತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

    ಲಾರಿ ಚಾಲಕರ ಅತಿಯಾದ ವೇಗ ಹಾಗೂ ಮದ್ಯ ಸೇವನೆ ಮಾಡಿ ವಾಹನ ಚಾಲಾಯಿಸಿದ್ದೆ ಘಟನೆಗೆ ಕಾರಣ ಎಂದು ಪೊಲೀಸ್ ತನಿಖೆ ವೇಳೆ ದೃಢಪಟ್ಟಿದೆ. ಆದರೆ ಬಿಬಿಎಂಪಿ ಮಾತ್ರ ಅದಕ್ಕೂ ನನಗೂ ಸಂಬಂಧವೇ ಇಲ್ಲವೆಂಬಂತೆ ನಡೆದುಕೊಳ್ಳುತ್ತಿದ್ದು, ಮತ್ತೊಬ್ಬ ಯುವಕನ ಬಲಿಗೆ ಪಾಲಿಕೆ ನೇರ ಕಾರಣವಾಗಿದೆ.

  • ನವೀಕರಣಗೊಂಡಿದ್ದ ಸಂಚಾರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ಕಮಿಷನರ್

    ನವೀಕರಣಗೊಂಡಿದ್ದ ಸಂಚಾರ ಪೊಲೀಸ್ ಠಾಣೆಯನ್ನು ಉದ್ಘಾಟಿಸಿದ ಕಮಿಷನರ್

    ಬೆಂಗಳೂರು: ನೂತನವಾಗಿ ನವೀಕರಣಗೊಂಡಿದ್ದ ಸಂಚಾರ ಪೊಲೀಸ್ ಠಾಣೆಯನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಉದ್ಘಾಟಿಸಿದರು.

    ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಹಳೆಯದಾಗಿದ್ದ ಸಂಚಾರ ಪೊಲೀಸ್ ಠಾಣೆಯನ್ನು ಟೈಟಾನ್ ಕಂಪನಿಯ ಸಹಭಾಗಿತ್ವದಲ್ಲಿ ಕಾರ್ಪೋರೆಟ್ ಫಂಡ್ ನಿಂದ ಅನುಮತಿ ಪಡೆದು ಕಳೆದ ಎರಡು ತಿಂಗಳಿನಿಂದ ಕೆಲಸ ಮಾಡಿದ್ದು ಸುಮಾರು 35 ಲಕ್ಷಗಳ ವೆಚ್ಚದಲ್ಲಿ ನೂತನನವಾಗಿ ಈ ಠಾಣೆಯನ್ನು ನಿರ್ಮಿಸಲಾಗಿದೆ.

    ಈ ವೇಳೆ ಮಾತನಾಡಿದ ಅವರು, ಸಂಚಾರ ಪೊಲೀಸ್ ಆಯುಕ್ತ ರವಿಕಾಂತೇಗೌಡರ ನೇತೃತ್ವದಲ್ಲಿ ಬಹಳ ಚೆನ್ನಾಗಿ ನಿರ್ಮಾಣ ಮಾಡಿ ಭವ್ಯವಾದ ಕಟ್ಟಡದಲ್ಲಿ ನವೀಕರಣಗೊಂಡಿದೆ. ಹೆದ್ದಾರಿಯಲ್ಲಿ ಅಪಘಾತಗಳು ನಡೆದ ಸಂದರ್ಭದಲ್ಲಿ ಪೊಲೀಸ್ ಠಾಣೆ ಎಲ್ಲಿದೆ ಎನ್ನುವುದು ಗೊತ್ತಾಗಬೇಕು ಆ ದೃಷ್ಟಿಯಿಂದ ಠಾಣೆಯನ್ನು ಚೆನ್ನಾಗಿ ನವೀಕರಣ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಹೆದ್ದಾರಿ ಪಕ್ಕದಲ್ಲಿಯೇ ಇರುವಂತಹ ಜಾಗವನ್ನು ನೋಡಿ ಅಲ್ಲಿ ಠಾಣೆಯನ್ನು ಮಾಡಿದಾಗ, ವಾಹನ ಸವಾರರಿಗೆ ಅನುಕೂಲವಾಗುತ್ತದೆ. ಇದೊಂದು ಒಳ್ಳೆಯ ಕೆಲಸವನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರಿ ಪೊಲೀಸರು ಮಾಡಿದ್ದಾರೆ ಎಂದು ಹೇಳಿದರು.

    ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ಬಗ್ಗೆ ಹೆಬ್ಬಗೋಡಿ ಪೊಲೀಸ್ ಠಾಣೆಯನ್ನು ಸ್ಪೆಷಲ್ ಸ್ಟೇಷನ್ ಆಗಿ ಬೆಂಗಳೂರು ಸಿಟಿಗೆ ಸೇರ್ಪಡೆಗೊಳಿಸುವ ಬಗ್ಗೆ ಪ್ರಸ್ತಾವನೆ ಹೋಗಿದೆ. ಈ ಹಿಂದೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯೂ ಸಹ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಇತ್ತು ಬಳಿಕ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ಸ್ಪೆಷಲ್ ಸ್ಟೇಷನ್ ಆಯ್ತು. ಮುಂದಿನ ದಿನಗಳಲ್ಲಿ ಹೆಬ್ಬಗೋಡಿ ಪೊಲೀಸ್ ಠಾಣೆಯು ಸಹ ಸ್ಪೆಷಲ್ ಸ್ಟೇಷನ್ ಆಗಿ ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಗೋಡಿಯ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಣವಾಗುತ್ತದೆ ಎಂದು ತಿಳಿಸಿದರು.