Tag: Traffic rules Violation

  • ಟ್ರಾಫಿಕ್ ರೂಲ್ಸ್ ಬ್ರೇಕ್ – 1.61 ಲಕ್ಷ ದಂಡ ಕಟ್ಟಿದ ಸವಾರ

    ಟ್ರಾಫಿಕ್ ರೂಲ್ಸ್ ಬ್ರೇಕ್ – 1.61 ಲಕ್ಷ ದಂಡ ಕಟ್ಟಿದ ಸವಾರ

    ಬೆಂಗಳೂರು: ಸಂಚಾರಿ ನಿಮಯ ಉಲ್ಲಂಘನೆ ಮಾಡಿದ ಬೈಕ್ ಸವಾರ ಬರೋಬ್ಬರಿ 1.61 ಲಕ್ಷ ರೂ. ದಂಡ ಪಾವತಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಕೆಎ05 ಜೆಡ್‌ಎಕ್ಸ್1344 ನಂಬರ್‌ನ ಸ್ಕೂಟರ್‌ನಿಂದ ಹೆಲ್ಮೆಟ್, ಸಿಗ್ನಲ್ ಜಂಪ್ ಹೀಗೆ ಹಲವು ರೀತಿಯಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆಯಾಗಿತ್ತು. ಇದೀಗ ಸ್ಕೂಟರ್ ಸವಾರ ಕೊನೆಗೂ ಕಾನೂನಿಗೆ ತಲೆ ಬಾಗಿದ್ದಾನೆ. ತನ್ನ ಬೈಕ್ ಮೇಲಿದ್ದ 1.61 ರೂ. ದಂಡದ ಮೊತ್ತ ಪಾವತಿಸಿದ್ದಾರೆ.ಇದನ್ನೂ ಓದಿ: ಮೇಲುಕೋಟೆಗೆ ಸಚಿವ ಚಲುವರಾಯಸ್ವಾಮಿ ಕುಟುಂಬಸ್ಥರ ಭೇಟಿ – ಮನೆದೇವರಿಗೆ ವಿಶೇಷ ಪೂಜೆ

    ಸ್ಕೂಟರ್ ಮೇಲೆ ಕಳೆದ ವರ್ಷ 1,05,500 ರೂ. ದಂಡ ಹಾಕಲಾಗಿತ್ತು. ಈ ವರ್ಷ 1,61,000 ರೂ. ದಂಡ ಏರಿಕೆಯಾಗಿತ್ತು. ಆದರೂ, ಪೊಲೀಸರ ಭಯವಿಲ್ಲದೇ ರಾಜಾರೋಷವಾಗಿ ವ್ಯಕ್ತಿ ಸ್ಕೂಟರ್ ಚಲಾಯಿಸುತ್ತಿದ್ದ. ಈ ಕುರಿತು ವ್ಯಕ್ತಿಯೊಬ್ಬರು ಸ್ಕೂಟರ್ ಪೋಟೋ ತೆಗೆದು, ಬೆಂಗಳೂರಿನಲ್ಲಿ ಸ್ಕೂಟರ್ ಬೆಲೆಗಿಂತ ದುಪ್ಪಟ್ಟು ಟ್ರಾಫಿಕ್ ಫೈನ್ ವಿಧಿಸಿಕೊಂಡಿದ್ದ ವ್ಯಕ್ತಿ ಎಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದರು.

    ಇದಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಯಾಕೆ ಇನ್ನೂ ಸವಾರನ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸಂಚಾರಿ ಪೊಲೀಸರು ವೈರಲ್ ಆಗುತ್ತಿದ್ದ ಸ್ಕೂಟರ್ ಪತ್ತೆ ಹಚ್ಚಿದ್ದರು. ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ಸ್ಕೂಟರ್ ಚಲಾಯಿಸುತ್ತಿದ್ದ ವ್ಯಕ್ತಿಗೆ ದಂಡದ ಮೊತ್ತ ಕಟ್ಟುವಂತೆ ನೋಟಿಸ್ ನೀಡಿ, ಸ್ಕೂಟರ್ ಸೀಜ್ ಮಾಡಿದ್ದರು. ಸ್ಕೂಟರ್ ಮೇಲೆ 2023ರಿಂದ ಈವರೆಗೆ ಒಟ್ಟು 311 ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದ್ದವು.

    ಇದೀಗ ಸ್ಕೂಟರ್ ಮೇಲಿದ್ದ ಎಲ್ಲಾ ದಂಡದ ಮೊತ್ತವನ್ನು ಸಂಚಾರಿ ಪೊಲೀಸರಿಗೆ ಕಟ್ಟಿದ್ದಾರೆ. ದಂಡ ಕಟ್ಟಿದ ಮೇಲೆ ಸ್ಕೂಟರ್ ಸವಾರನಿಗೆ ಸಂಚಾರಿ ನಿಯಮ ಪಾಲನೆಯ ಬಗ್ಗೆ ಅರಿವು ಮೂಡಿಸಿ, ತಲೆಗೆ ಹೆಲ್ಮೆಟ್ ಹಾಕಿ ಕಳಿಸಿದ್ದಾರೆ.ಇದನ್ನೂ ಓದಿ: ಯುಗಾದಿಗೆ ಗ್ಯಾರಂಟಿ ಹಣ ಬಿಡುಗಡೆ: ಶಾಸಕ ಬಸವಂತಪ್ಪ

     

  • ಟ್ರಾಫಿಕ್ಸ್ ರೂಲ್ಸ್ ಬ್ರೇಕ್; 311 ಕೇಸ್, 1.61 ಲಕ್ಷ ಫೈನ್ – ಸ್ಕೂಟಿ ಬೆಲೆಗಿಂತ ದುಪ್ಪಟ್ಟು ದಂಡ ಕಟ್ಟಲು ನೋಟಿಸ್

    ಟ್ರಾಫಿಕ್ಸ್ ರೂಲ್ಸ್ ಬ್ರೇಕ್; 311 ಕೇಸ್, 1.61 ಲಕ್ಷ ಫೈನ್ – ಸ್ಕೂಟಿ ಬೆಲೆಗಿಂತ ದುಪ್ಪಟ್ಟು ದಂಡ ಕಟ್ಟಲು ನೋಟಿಸ್

    ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಬೈಕ್ ಸೀಜ್ ಮಾಡಿ, ಲಕ್ಷಾಂತರ ರೂ. ದಂಡ ಕಟ್ಟುವಂತೆ ಸಿಟಿ ಮಾರ್ಕೆಟ್ ಪೊಲೀಸರು (City Market Police) ಮಾಲೀಕನಿಗೆ ನೋಟಿಸ್ ನೀಡಿದ್ದಾರೆ.

    KA05 ZX1344 ನಂಬರ್‌ನ ಸ್ಕೂಟರ್‌ನಿಂದ ಹೆಲ್ಮೆಟ್, ಸಿಗ್ನಲ್ ಜಂಪ್ ಹೀಗೆ ಹಲವು ರೀತಿಯಲ್ಲಿ ಟ್ರಾಫಿಕ್ ರೂಲ್ಸ್ ಉಲ್ಲಂಘನೆಯಾಗಿತ್ತು. ಕಳೆದ ವರ್ಷ 1,05,500 ರೂ. ದಂಡ ಹಾಕಲಾಗಿತ್ತು. ಈ ವರ್ಷ 1,61,000 ರೂ. ದಂಡ ಏರಿಕೆಯಾಗಿದೆ.ಇದನ್ನೂ ಓದಿ: ಚಳಿಗಾಲದಲ್ಲೂ ಸುಡುತ್ತಿದೆ ಬಿಸಿಲು – ರಾಜ್ಯದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದ ಉಷ್ಣಾಂಶ

    ಆದರೂ, ಪೊಲೀಸರ ಭಯವಿಲ್ಲದೇ ರಾಜಾರೋಷವಾಗಿ ವ್ಯಕ್ತಿ ಸ್ಕೂಟರ್ ಚಲಾಯಿಸುತ್ತಿದ್ದ. ಈ ಕುರಿತು ವ್ಯಕ್ತಿಯೊಬ್ಬರು ಸ್ಕೂಟರ್ ಪೋಟೋ ತೆಗೆದು, ಬೆಂಗಳೂರಿನಲ್ಲಿ ಸ್ಕೂಟರ್ ಬೆಲೆಗಿಂತ ದುಪ್ಪಟ್ಟು ಟ್ರಾಫಿಕ್ ಫೈನ್ ವಿಧಿಸಿಕೊಂಡಿದ್ದ ವ್ಯಕ್ತಿ ಎಂದು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದರು.

    ಇದಕ್ಕೆ ಬೆಂಗಳೂರು ಸಂಚಾರಿ ಪೊಲೀಸರು ಯಾಕೆ ಇನ್ನೂ ಸವಾರನ ವಿರುದ್ಧ ಕ್ರಮಕೈಗೊಂಡಿಲ್ಲ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸಂಚಾರಿ ಪೊಲೀಸರು ವೈರಲ್ ಆಗುತ್ತಿದ್ದ ಸ್ಕೂಟರ್ ಪತ್ತೆ ಹಚ್ಚಿ ಸೀಜ್ ಮಾಡಿದ್ದಾರೆ.

    ಪದೇ ಪದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿ, ಸ್ಕೂಟರ್ ಚಲಾಯಿಸುತ್ತಿದ್ದ ವ್ಯಕ್ತಿಗೆ ದಂಡದ ಮೊತ್ತ ಕಟ್ಟುವಂತೆ ನೋಟಿಸ್ ನೀಡಿ, ಸ್ಕೂಟರ್ ಸೀಜ್ ಮಾಡಿದ್ದಾರೆ. ಸ್ಕೂಟರ್ ಮೇಲೆ 2023ರಿಂದ ಈವರೆಗೆ ಒಟ್ಟು 311 ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿವೆ.ಇದನ್ನೂ ಓದಿ: ಹೆಚ್ಚಾಯ್ತು ಬೇಡಿಕೆ- ಸಿನಿಮಾ ಆಫರ್‌ಗೆ ಡೋಂಟ್ ಕೇರ್ ಎಂದ Bigg Boss ವಿನ್ನರ್ ಹನುಮಂತ

  • ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!

    ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ಬಾಲಕನ ತಂದೆಗೆ ಬಿತ್ತು 25,000 ರೂ. ದಂಡ!

    ಮಡಿಕೇರಿ: ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಕೊಟ್ಟ ತಪ್ಪಿಗೆ ಇಲ್ಲೊಬ್ಬ ಪಿತಾಮಹಾ ಬರೋಬ್ಬರಿ 25 ಸಾವಿರ ರೂ. ದಂಡ ತೆತ್ತಿದ್ದಾನೆ.

    ಕೊಡಗು ಜಿಲ್ಲೆಯ ಸೋಮವಾರಪೇಟೆ ಪೊಲೀಸ್ ಠಾಣಾ (Somwarpet Police Station) ವ್ಯಾಪ್ತಿಯ ರೇಂಜರ್ ಬ್ಲಾಕಿನ ಬಿ.ಎಸ್ ಮಂಜುನಾಥ ಎಂಬುವವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ್ದರು. ಈ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮ್ಮೆ ಸಂಖ್ಯೆ 116/24 ರಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: 1 ತಿಂಗಳ ಹಿಂದೆಯಷ್ಟೇ ನೀತಿ ಸಂಹಿತೆ ಉಲ್ಲಂಘನೆ ಕೇಸ್‌ನಿಂದ ರಿಲೀಫ್‌ ಪಡೆದಿದ್ದ ಅಲ್ಲು ಅರ್ಜುನ್‌

    ಪ್ರಕರಣದ ವಿಚಾರಣೆ ನಡೆಸಿದ ಸೋಮವಾರಪೇಟೆ ಜೆಎಂಎಫ್‌ಸಿ ಕೋರ್ಟ್‌ (Somwarpet JMFC Court), ಮಂಜುನಾಥ್‌ ಅವರಿಗೆ 25,000 ರೂ. ದಂಡ ವಿಧಿಸಿದೆ. ಇದರೊಂದಿಗೆ ದ್ವಿಚಕ್ರ ವಾಹನದ ಎಫ್‌ಸಿ ನವೀಕರಿಸದಕ್ಕೆ ಹೆಚ್ಚುಬರಿ 2,000 ರೂ. ಸೇರಿ ಒಟ್ಟು 27,000 ರೂ. ದಂಡ ವಿಧಿಸಿದೆ. ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ

  • ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ತಂದೆಗೆ 25,000 ರೂ. ದಂಡ!

    ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ – ತಂದೆಗೆ 25,000 ರೂ. ದಂಡ!

    ಶಿವಮೊಗ್ಗ: ಅಪ್ರಾಪ್ತನೊಬ್ಬ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದೆ.

    ತನ್ನ ಮಗನಿಗೆ ತಂದೆಯೇ ವಾಹನ ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ತೀರ್ಥಹಳ್ಳಿ ನ್ಯಾಯಾಲಯವು (Thirthahalli Court) ತಂದೆಗೆ 25,000 ರೂ. ದಂಡ ವಿಧಿಸಿದೆ. ದ್ವಿಚಕ್ರ ವಾಹನ ಚಾಲನೆ ಮಾಡಿದ 17 ವರ್ಷದ ಬಾಲಕ ಮೂಲತಃ ತೀರ್ಥಹಳ್ಳಿಯವನು (Thirthahalli) ಎಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯಲ್ಲಿ ನೀರಿನ ಬಿಕ್ಕಟ್ಟು – 2ನೇ ದಿನಕ್ಕೆ ಕಾಲಿಟ್ಟ ಸಚಿವೆ ಅತಿಶಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ

    ತೀರ್ಥಹಳ್ಳಿ ಟೌನ್ ದೊಡ್ಮನೆ ಕೇರಿ ಬಳಿಕ ಶಿವಮೊಗ್ಗ ಸಂಚಾರ ಪೊಲೀಸರು (Shivamogga Traffic Police) ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನ ಚಾಲನೆ ಮಾಡಿಕೊಂಡು ಬಂದಿದ್ದ 17 ವರ್ಷದ ಅಪ್ರಾಪ್ತನನ್ನು ತಡೆದು ಪರವಾನಗಿ ಪರಿಶೀಲಿಸಿದರು.

    ನಂತರ ಆತ ಅಪ್ರಾಪ್ತ ಮತ್ತು ಪರವಾನಗಿಯಿಲ್ಲದೇ ಬೈಕ್‌ ಚಾಲನೆ ಮಾಡುತ್ತಿದ್ದ ಕಾರಣಕ್ಕೆ ಪೊಲೀಸರು ಆತನನ್ನ ಕೋರ್ಟ್‌ಗೆ ಹಾಜರು ಪರಿಡಿಸಿದ್ದರು. ಇದನ್ನು ಗಮನಿಸಿದ ತೀರ್ಥಹಳ್ಳಿ ಪಿಸಿಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ 25,000 ದಂಡ ವಿಧಿಸಿ ಆದೇಶಿಸಿತು. ಇದನ್ನೂ ಓದಿ: ಹಣಕಾಸು ಆಯೋಗದ ಶಿಫಾರಸಿನ ಅನುದಾನವನ್ನು ಕರ್ನಾಟಕಕ್ಕೆ ನೀಡಿ – ಕೇಂದ್ರದ ಮುಂದೆ ರಾಜ್ಯ ಸರ್ಕಾರ ಡಿಮ್ಯಾಂಡ್!

  • ಸಂಚಾರ ನಿಯಮ ಉಲ್ಲಂಘನೆ – ಮೈಸೂರಿನಲ್ಲಿ ಒಂದೇ ದಿನ ಬರೋಬ್ಬರಿ 7,336 ಕೇಸ್ ದಾಖಲು!

    ಸಂಚಾರ ನಿಯಮ ಉಲ್ಲಂಘನೆ – ಮೈಸೂರಿನಲ್ಲಿ ಒಂದೇ ದಿನ ಬರೋಬ್ಬರಿ 7,336 ಕೇಸ್ ದಾಖಲು!

    ಮೈಸೂರು: ನಗರದ ವಿವಿಧ ಸಂಚಾರ ಪೊಲೀಸ್ ಠಾಣೆಗಳಲ್ಲಿ ಒಂದೇ ದಿನ ಬರೋಬ್ಬರಿ 7,336 ಸಂಚಾರ ನಿಯಮ ಉಲ್ಲಂಘನೆ (Traffic Rules Violation) ಪ್ರಕರಣಗಳು ದಾಖಲಾಗಿವೆ.

    ನಗರದಲ್ಲಿ ವಿಶೇಷ ತಪಾಸಣಾ ಕಾರ್ಯಾಚರಣೆ ಹಮ್ಮಿಕೊಂಡಿದ್ದ ಮೈಸೂರು ಪೊಲೀಸರು (Mysuru City Police), ಪೊಲೀಸ್ ಆಯುಕ್ತ ಬಿ.ರಮೇಶ್ ಬಾನೋತ್ ನಿರ್ದೇಶನದ ಮೇರೆಗೆ ಮಂಗಳವಾರ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ವಾಹನಗಳ ತಪಾಸಣೆ ಕಾರ್ಯ ನಡೆಸಿದ್ದಾರೆ.

    ಈ ವೇಳೆ ತ್ರಿಬಲ್ ರೈಡಿಂಗ್ (Triple Riding) ಸಂಬಂಧ 169, ಹೆಲ್ಮೆಟ್ ಧರಿಸದ ಸಂಬಂಧ 6,680, ನಂಬರ್ ಪ್ಲೇಟ್ ಇಲ್ಲದ ವಾಹನ 113 ಕೇಸ್ ಹಾಗೂ ಸರಕು ಸಾಗಣೆ ವಾಹನದಲ್ಲಿ ಪ್ರಯಾಣಿಕರನ್ನ ಕರೆದೊಯ್ಯುವುದು 22 ಪ್ರಕರಣಗಳನ್ನ ದಾಖಲಿಸಲಾಗಿದೆ. ಇದನ್ನೂ ಓದಿ: ವಾಜಪೇಯಿ ಜೊತೆ ಸಹಿ ಹಾಕಿದ್ದ ಒಪ್ಪಂದವನ್ನು ನಾವು ಉಲ್ಲಂಘನೆ ಮಾಡಿದ್ದೆವು: ತಪ್ಪೊಪ್ಪಿಕೊಂಡ ನವಾಜ್‌ ಷರೀಫ್‌

    ಜೊತೆಗೆ ಡ್ರಂಕ್ ಅಂಡ್ ಡ್ರೈವ್‌ 33 ಪ್ರಕರಣಗಳು ಸೇರಿ ಒಟ್ಟು 7,336 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳನ್ನ ದಾಖಲಿಸಲಾಗಿದೆ. ಇದನ್ನೂ ಓದಿ: ಹವಾಮಾನ ವೈಪರಿತ್ಯ – 24 ಗಂಟೆಯಲ್ಲಿ 250ಕ್ಕೂ ಹೆಚ್ಚು ವಿಮಾನಗಳ ಹಾರಾಟ ಸ್ಥಗಿತ!

  • ಸೀರಿಯಲ್‌ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್‌ ಫೈನ್‌!

    ಸೀರಿಯಲ್‌ ಚಿತ್ರೀಕರಣದ ವೇಳೆ ಮಾಡಿದ ತಪ್ಪು – ʻಸೀತಾರಾಮʼ ನಟಿ ವೈಷ್ಣವಿ ಗೌಡಗೆ ಟ್ರಾಫಿಕ್‌ ಫೈನ್‌!

    ಬೆಂಗಳೂರು: ಸೀರಿಯಲ್‌ ದೃಶ್ಯವೊಂದರಲ್ಲಿ ಸ್ಕೂಟರ್‌ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಹೆಲ್ಮೆಟ್‌ ಧರಿಸದೇ ಇರುವ ಕಾರಣಕ್ಕೆ ʻಸೀತಾರಾಮʼ ಸೀರಿಯಲ್‌ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಪೊಲೀಸರು ದಂಡ ವಿಧಿಸಿದ್ದಾರೆ.

    ಸೀರಿಯಲ್‌ ಚಿತ್ರೀಕರಣದ ವೇಳೆ ನಟಿ ಹೆಲ್ಮೆಟ್‌ ಧರಿಸದೇ ನಿಯಮ ಉಲ್ಲಂಘಿಸಿದ್ದರು. ಈ ದೃಶ್ಯವನ್ನೂ ಫೋಟೋದಲ್ಲಿ ಸೆರೆ ಹಿಡಿದಿದ್ದ ಸಾಮಾಜಿಕ ಹೋರಾಟಗಾರ ಜಯಪ್ರಕಾಶ್ ಹೆಕ್ಕೂರು ಮಂಗಳೂರು ಪೊಲೀಸರಿಗೆ ದೂರು ನೀಡಿದ್ದರು. ಫೋಟೋವನ್ನೂ ಸಹ ದೂರಿನಲ್ಲಿ ಲಗತ್ತಿಸಿದ್ದರು. ಇದನ್ನೂ ಓದಿ: ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರದ ಸಾಂಗ್ ರಿಲೀಸ್

    ದೂರು ಸ್ವೀಕರಿಸಿದ ಪೊಲೀಸರು ಬೆಂಗಳೂರು ರಾಜಾಜಿನಗರ ಪೊಲೀಸರಿಗೆ (Bengaluru Traffic Police) ವರ್ಗಾವಣೆ ಮಾಡಿದ್ದರು. ಸಾಮಾಜಿಕ ಹೋರಾಟಗಾರ ನೀಡಿದ ದೂರಿನ ಅನ್ವಯ ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕಾಗಿ ವೈಷ್ಣವಿ ಗೌಡ ಅವರಿಗೆ ರಾಜಾಜಿನಗರ ಸಂಚಾರ ಪೊಲೀಸರು 500 ರೂ. ದಂಡ (Traffic Police Fines) ವಿಧಿಸಿದ್ದಾರೆ. ಇದನ್ನೂ ಓದಿ: ಆಲ್ಬಂ ಜೊತೆ ಸವಾರಿ ಹೊರಟ ಬೃಂದಾ ಆಚಾರ್ಯ

    ಕಟ್ಟುನಿಟ್ಟಿನ ಕ್ರಮಕ್ಕೆ ಒತ್ತಾಯ:
    ಇತ್ತೀಚೆಗೆ ಸಿನಿಮಾ, ಸೀರಿಯಲ್‌, ವೆಬ್‌ಸಿರೀಸ್‌ಗಳಲ್ಲಿ ನಟಿಸುವ ಕೆಲ ಕಲಾವಿದರು ಬೈಕ್‌ ಅಥವಾ ಸ್ಕೂಟರ್‌ ರೈಡ್‌ ಮಾಡುವಾಗ ʻತಮ್ಮ ಮುಖ ಕಾಣಲಿʼ ಎಂಬ ಉದ್ದೇಶದಿಂದ ಹೆಲ್ಮೆಟ್‌ ಧರಿಸಿರುವುದಿಲ್ಲ. ಇದೇ ರೀತಿ ಕಾರಿನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಸೀಟ್‌ ಬೆಲ್ಟ್‌ ಸಹ ಧರಿಸುವುದಿಲ್ಲ. ಕೆಲವು ನಟಿಯರು ಮೇಕಪ್‌ ಹಾಳಾಗುತ್ತದೆ ಎಂದು ಹೆಲ್ಮೆಟ್‌ ಧರಿಸುವುದಿಲ್ಲ. ಈ ರೀತಿಯ ಕಂಟೆಂಟ್‌ಗಳನ್ನು ಸಾಕಷ್ಟು ಜನರು ವೀಕ್ಷಿಸುವುದರಿಂದ ವೀಕ್ಷಕರಿಗೆ ತಪ್ಪು ಸಂದೇಶ ರವಾನಿಸಿದಂತೆ ಆಗುತ್ತದೆ. ಅಲ್ಲದೇ ಇದು ಪ್ರಾಣಾಪಾಯಕ್ಕೂ ಕಾರಣವಾಗಬಹದು. ಆದ್ದರಿಂದ ಸಂಚಾರ ಪೊಲೀಸರು ಕಲಾವಿರದರಿಗೂ ಎಚ್ಚರಿಕೆಯ ಸಂದೇಶ ನೀಡಬೇಕು. ಇಲ್ಲವೇ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂಬ ಒತ್ತಾಯವೂ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

  • ಸಂಚಾರ ನಿಯಮ ಉಲ್ಲಂಘನೆ- ಶಿರಸಿ ಉಪ ವಿಭಾಗದಲ್ಲಿ ಕೆಲವೇ ಗಂಟೆಯಲ್ಲಿ 1 ಲಕ್ಷ ದಂಡ ವಸೂಲಿ

    ಸಂಚಾರ ನಿಯಮ ಉಲ್ಲಂಘನೆ- ಶಿರಸಿ ಉಪ ವಿಭಾಗದಲ್ಲಿ ಕೆಲವೇ ಗಂಟೆಯಲ್ಲಿ 1 ಲಕ್ಷ ದಂಡ ವಸೂಲಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದು, ದಾಖಲೆಯ ದಂಡ ವಸೂಲಿ ಮಾಡಿದ್ದಾರೆ.

    ಡಿವೈಎಸ್‍ಪಿ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದು, ಒಟ್ಟು 24, ಸಿಪಿಐ ಶಿರಸಿ-26, ಪಿಎಸ್‍ಐ ನಗರ-22, ಪಿಎಸ್‍ಐ ನ್ಯೂ ಮಾರ್ಕೆಟ್-30, ಪಿಎಸ್‍ಐ ಬನವಾಸಿ-8, ಸಿದ್ದಾಪುರ ಠಾಣೆ-21, ಯಲ್ಲಾಪುರ ಠಾಣೆ-6, ಮುಂಡಗೋಡ ಠಾಣೆ-74 ಪ್ರಕರಣಗಳನ್ನು ದಾಖಲಿಸಿದ್ದು, ಶಿರಸಿ ಉಪವಿಭಾಗದಲ್ಲಿ ಒಟ್ಟು 211 ಪ್ರಕರಣಗಳನ್ನು ದಾಖಲಿಸಿ, 1,07,000 ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು

    ಶಿರಸಿ ಉಪವಿಭಾಗದ ಎಲ್ಲ 7 ಪೊಲೀಸ್ ಠಾಣೆಗಳಲ್ಲಿ ರಸ್ತೆ ಸುರಕ್ಷತೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ವಿಶೇಷ ಕಾರ್ಯಾಚರಣೆಯನ್ನು ನಡೆಸಲಾಯಿತು. ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರವಿ.ಡಿ.ನಾಯ್ಕ್ ಅವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಸಂಚಾರ ನಿಯಮಗಳ ಉಲ್ಲಂಘನೆಯ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.