Tag: Traffic Violations Fine

  • ಮಕ್ಕಳು ಬೈಕ್‌ ಓಡಿಸಿದ್ದಕ್ಕೆ ಪೋಷಕರಿಗೆ ಬಿತ್ತು ದಂಡ; 23 ಕಾಲೇಜುಗಳ 800 ವಾಹನಗಳಿಗೆ ಫೈನ್‌

    ಮಕ್ಕಳು ಬೈಕ್‌ ಓಡಿಸಿದ್ದಕ್ಕೆ ಪೋಷಕರಿಗೆ ಬಿತ್ತು ದಂಡ; 23 ಕಾಲೇಜುಗಳ 800 ವಾಹನಗಳಿಗೆ ಫೈನ್‌

    ಬೆಂಗಳೂರು: ಇದೇ ಮೊದಲ ಬಾರಿಗೆ ಕಾಲೇಜು ಆವರಣದಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ, 23 ಕಾಲೇಜುಗಳ 800 ವಾಹನಗಳ ಮಾಲೀಕರಿಗೆ ದಂಡ ಹಾಕಿದ್ದಾರೆ.

    ಅಪ್ರಾಪ್ತ ಮಕ್ಕಳಿಗೆ ಬೈಕ್‌ ಕೊಟ್ಟು ಸಂಚಾರಿ ನಿಯಮ ಉಲ್ಲಂಘಿಸಿದ ಆರೋಪದಡಿ ಪೋಷಕರಿಗೆ ದಂಡ ವಿಧಿಸಲಾಗಿದೆ. ಮಕ್ಕಳಿಗೆ ಬೈಕ್‌ ಕೊಡುವ ಮುನ್ನ ಎಚ್ಚರ ವಹಿಸಬೇಕು ಎಂದು ಅವರ ಪೋಷಕರಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: 25 ಲಕ್ಷ ಜನರಿಂದ ಬಾಲಕ ರಾಮನ ದರ್ಶನ – 11 ಕೋಟಿ ರೂ. ಕಾಣಿಕೆ ಸಂಗ್ರಹ

    ವಿದ್ಯಾರ್ಥಿಗಳು ಮಾಡುವ ತಪ್ಪಿಗೆ ಪೋಷಕರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಲೈಸೆನ್ಸ್ ಇಲ್ಲದೆ ವಿದ್ಯಾರ್ಥಿಗಳು ವಾಹನಗಳನ್ನ ಚಲಾಯಿಸುತ್ತಿದ್ದರು. ಇದನ್ನು ಗಮನಿಸಿರುವ ಪೊಲೀಸರು ಕಾರ್ಯಾಚರಣೆ ನಡೆಸಿ, 23 ಕಾಲೇಜು 800 ವಾಹನಗಳ ಮಾಲೀಕರಿಗೆ ದಂಡ ಹಾಕಿದ್ದಾರೆ.

    ಶಾಲಾ ಕಾಲೇಜುಗಳಲ್ಲಿ ಸರ್ಕ್ಯೂಲರ್ ಹೊರಡಿಸಲು ಪೊಲೀಸರು ಸೂಚನೆ ಕೊಟ್ಟಿದ್ದಾರೆ. ಅಪ್ರಾಪ್ತರು ವಾಹನ ತರದಂತೆ ಸರ್ಕ್ಯೂಲರ್ ಹೊರಡಿಸಬೇಕು ಎಂದು ತಿಳಿಸಿದ್ದಾರೆ. ತಪ್ಪಿದರೆ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ರಾತ್ರಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್ ಸೌಂಡ್ ಜಾಸ್ತಿ ಮಾಡಿದ್ರೆ, ಜೋರಾಗಿ ಮಾತಾಡಿದ್ರೆ ಬೀಳುತ್ತೆ ಕೇಸ್

    ಕಾಲೇಜು ಆವರಣದಲ್ಲಿದ್ದ ಸುಮಾರು 800 ವಾಹನಗಳಿಗೆ ಈಗಾಗಲೇ ದಂಡ ಬಿದ್ದಿದೆ. ಪರೀಕ್ಷೆ ಎಂದು ನೆಪ ಹೇಳಿ ತಪ್ಪಿಸಿಕೊಳ್ಳುವಂತಿಲ್ಲ. ಈ ಬಾರಿ ದಂಡ ಮಾತ್ರ ವಿಧಿಸಲಾಗಿದೆ. ಮತ್ತೊಮ್ಮೆ ಇದೇ ರೀತಿ ನಡೆದರೆ ಐಪಿಸಿ ಸೆಕ್ಷನ್ ನಡಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

  • ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್

    ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಟ್ರಾಫಿಕ್ ದಂಡಕ್ಕೆ ಬ್ರೇಕ್

    ಬೆಂಗಳೂರು: ಮೋಟಾರು ವಾಹನ ತಿದ್ದುಪಡಿ ಕಾಯ್ದೆಯ ಅನ್ವಯ ಭಾರೀ ದಂಡ ವಿಧಿಸುತ್ತಿದ್ದ ಸರ್ಕಾರ ನಡೆಗೆ ಸಾಕಷ್ಟು ಜನರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ನಡುವೆಯೇ ಗುಜರಾತ್ ಸರ್ಕಾರ ದಂಡದ ಮೊತ್ತವನ್ನು ಕಡಿಮೆ ಮಾಡಿತ್ತು. ಸದ್ಯ ಕರ್ನಾಟಕದಲ್ಲೂ ದಂಡದ ಪ್ರಮಾಣ ಕಡಿಮೆ ಮಾಡಲು ಸಿಎಂ ಬಿಎಸ್‍ವೈ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ದಂಡದ ಮೊತ್ತ ಜಾಸ್ತಿಯಾಗಿರುವ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿ ಕಡಿಮೆ ಮಾಡಿರುವಂತೆ ನಮ್ಮಲ್ಲೂ ಕಡಿತ ಮಾಡುವ ಯೋಚನೆ ಇದೆ. ಈಗಾಗಲೇ ಹಿರಿಯ ಅಧಿಕಾರಿಗಳಿಗೆ ಬೇರೆ ಬೇರೆ ರಾಜ್ಯಗಳಿಂದ ಮಾಹಿತಿ ಪಡೆಯಲು ಸೂಚನೆ ನೀಡಿದ್ದೇವೆ. 2 ದಿನಗಳ ಒಳಗೆ ಈ ಮಾಹಿತಿ ಲಭಿಸುವ ನಿರೀಕ್ಷೆ ಇದ್ದು, ಮಾಹಿತಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ. ಸದ್ಯದ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ನೀಡಬೇಕಾದ ಕೆಲ ಸೂಚನೆಗಳನ್ನ ನೀಡಿದ್ದೇವೆ ಎಂದು ಹೇಳಿದರು. ಇದನ್ನು ಓದಿ: ದುಬಾರಿ ಟ್ರಾಫಿಕ್ ದಂಡಕ್ಕೆ ಗುಜರಾತ್ ಸರ್ಕಾರದಿಂದ ಬ್ರೇಕ್

    ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿದವರಿಗೆ ದುಬಾರಿ ದಂಡ ವಿಧಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ಷೇಪ ಕೇಳಿಬರುತ್ತಿತ್ತು. ಇದೇ ವೇಳೆ ಗುಜರಾತ್ ಸಿಎಂ ವಿಜಯ್ ರೂಪಾಣಿ ಅವರು, ಹೊಸ ಕಾಯ್ದೆಯಲ್ಲಿ ವಿಧಿಸುತ್ತಿರುವ ದಂಡದ ಮೊತ್ತ ಗರಿಷ್ಠ ಪ್ರಮಾಣದಲ್ಲಿದ್ದು, ಈ ಬಗ್ಗೆ ಚರ್ಚೆ ನಡೆಸಿ ಕೆಲ ದಂಡದ ಮೊತ್ತಗಳನ್ನು ಕಡಿಮೆ ಮಾಡಲಾಗಿದೆ ಎಂದು ಹೇಳಿದ್ದರು. ಇದನ್ನು ಓದಿ: ಸಿದ್ಧಪಡಿಸಿಕೊಂಡ ನೆಟ್ಟಿಗರು- ವೈರಲಾಯ್ತು ವಿಡಿಯೋ

    ಗುಜರಾತ್ ಸರ್ಕಾರದ ಹೊಸ ನಿಯಮಗಳಂತೆ ಹೆಲ್ಮೆಟ್ ಧರಿಸದಿದ್ದರೆ 500 ರೂ. ದಂಡವನ್ನು ನಿಗದಿ ಮಾಡಲಾಗಿದೆ. ಕೇಂದ್ರ ಸರ್ಕಾರ ಸೆ.1ರಿಂದ ಜಾರಿ ಮಾಡಿದ್ದ ಹೊಸ ತಿದ್ದುಪಡಿ ಕಾಯ್ದೆಯ ಅನ್ವಯ ಈ ಮೊತ್ತ 1 ಸಾವಿರ ರೂ. ಇತ್ತು. ಸೀಟ್ ಬೆಲ್ಟ್ ಧರಿಸದಿದ್ದರೆ 1 ಸಾವಿರ ಬದಲಾಗಿ 500 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ ದ್ವಿಚಕ್ರ ವಾಹನ ಸವಾರರಿಗೆ 2 ಸಾವಿರ ರೂ., ಉಳಿದ ವಾಹನಗಳಿಗೆ 3 ಸಾವಿರ ರೂ. ನಿಗದಿ ಮಾಡಲಾಗಿದೆ. ಆದರೆ ಲೈಸನ್ಸ್, ಆರ್ ಸಿ, ವಿಮೆ ಮೊದಲ ಬಾರಿಗೆ ಇಲ್ಲದಿದ್ದರೆ 500 ರೂ. ದಂಡ ವಿಧಿಸಿದರೆ, 2ನೇ ಬಾರಿಗೆ ಈ ಮೊತ್ತ ಕೇಂದ್ರ ಸರ್ಕಾರ ನೀತಿಗೆ ಅಡಿ ಅನ್ವಯವಾಗಲಿದೆ. ತ್ರಿಬಲ್ ರೈಡಿಂಗ್ ಮಾಡುವವರಿಗೆ ವಿಧಿಸಲಾಗುತ್ತಿದ್ದ 1 ಸಾವಿರ ರೂ. ದಂಡವನ್ನು 100 ರೂ.ಗಳಿಗೆ ಕಡಿಮೆ ಮಾಡಲಾಗಿದೆ. ಮಾಲಿನ್ಯ ಪ್ರಮಾಣ ಪತ್ರ ಪಡೆಯದ ವಾಹನಗಳಿಗೆ ನಿಗದಿ ಮಾಡಿದ್ದ 10 ಸಾವಿರಗಳನ್ನು ಸಣ್ಣ ವಾಹನಗಳಿಗೆ 1 ಸಾವಿರ ರೂ. ಭಾರೀ ವಾಹನಗಳಿಗೆ 3 ಸಾವಿರ ರೂ.ಗೆ ಇಳಿಸಲಾಗಿದೆ.  ಇದನ್ನು ಓದಿ: ಟ್ರಾಫಿಕ್ ರೂಲ್ಸ್ ಉಲ್ಲಂಘನೆ- ಬೈಕಿಗೆ 23, 24 ಸಾವಿರ ರೂ, ಆಟೋಗೆ 32 ಸಾವಿರ ರೂ. ದಂಡ