Tag: traffic

  • ದ್ವಿಚಕ್ರ ವಾಹನದೊಂದಿಗೆ ರೀಲ್ಸ್ ಮಾಡುತ್ತೀರಾ? ನಿಮಗೂ ದಂಡ ಬೀಳಬಹುದು ಹುಷಾರ್

    ದ್ವಿಚಕ್ರ ವಾಹನದೊಂದಿಗೆ ರೀಲ್ಸ್ ಮಾಡುತ್ತೀರಾ? ನಿಮಗೂ ದಂಡ ಬೀಳಬಹುದು ಹುಷಾರ್

    ದೀಗ ಎಲ್ಲಲ್ಲೂ ರೀಲ್ಸ್ ಹವಾ. ಕೇವಲ ಪಡ್ಡೆಗಳ ಅಡ್ಡೆಯಾಗಿದ್ದ ರೀಲ್ಸ್ ಎಂಬ ಸಾಮಾಜಿಕ ಜಾಲತಾಣವನ್ನು ಸಾಮಾನ್ಯರು ಮಾತ್ರವಲ್ಲ, ಸಿಲಿಬ್ರಿಟಿಗಳು ಕೂಡ ಇದೀಗ ಅತೀ ಹೆಚ್ಚು ಬಳಸುತ್ತಿದ್ದಾರೆ. ಮೊನ್ನೆಯಷ್ಟೇ ಕಿಚ್ಚ ಸುದೀಪ್ ಕೂಡ ತಮ್ಮ ಹಾಡಿಗೆ ರೀಲ್ಸ್ ಮಾಡಿ ಅಭಿಮಾನಿಗಳನ್ನು ರಂಜಿಸಿದ್ದರು. ರೀಲ್ಸ್ ಮಾಡಿಯೇ ಬದುಕು ನಡೆಸುತ್ತಿರುವವರೂ ನಮ್ಮ ಮಧ್ಯೆ ಇದ್ದಾರೆ. ಆದರೆ, ರೀಲ್ಸ್ ಮಾಡುವ ಮುನ್ನ ಈ ಬಗ್ಗೆ ಹುಷಾರಾಗಿರುವುದು ಒಳಿತು.

    ಬೈಕ್ ಚಲಾಯಿಸುತ್ತಾ ರೀಲ್ಸ್ ಮಾಡುವವರು ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸರು ಅಂತಹ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಬೈಕ್ ಓಡಿಸುತ್ತಾ ವ್ಹೀಲಿಂಗ್ ಮಾಡುವುದು, ಹೆಲ್ಮೆಟ್ ಹಾಕದೇ ಇರುವುದು, ಫೋನ್ ನಲ್ಲಿ ಮಾತನಾಡುತ್ತಿರುವುದು, ವೇಗವಾಗಿ ಗಾಡಿ ಓಡಿಸುವುದು ಹೀಗೆ ನಾನಾ ಅಪರಾಧಗಳಲ್ಲಿ ಅವರಿಗೆ ದಂಡ ವಿಧಿಸುತ್ತಿದ್ದಾರೆ. ಈ ಹಿಂದೆಯೇ ಟಿಕ್ ಟಾಕ್ ವೀರರಿಗೆ ಇಂಥದ್ದೇ ಬಿಸಿ ಮುಟ್ಟಿಸಿದ್ದರು ಪೊಲೀಸ್ ಅಧಿಕಾರಿಗಳು. ಇದನ್ನೂ ಓದಿ:ಸಾವರ್ಕರ್ ಅವಹೇಳನ : ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಹತ್ಯೆ ಮಾಡುವುದಾಗಿ ಪತ್ರ

    police (1)

    ಈವರೆಗೂ 44 ಪ್ರಕರಣಗಳನ್ನು ಪತ್ತೆ ಮಾಡಿರುವ ಪೊಲೀಸ್ ಅಧಿಕಾರಿಗಳು ಅವರ ವಿರುದ್ಧ ಕ್ರಮ ತಗೆದುಕೊಂಡಿದ್ದಾರೆ. ಮತ್ತಷ್ಟು ಜನರಿಗಾಗಿ ಸೋಷಿಯಲ್ ಮೀಡಿಯಾವನ್ನು ಜಾಲಾಡುತ್ತಿದ್ದಾರಂತೆ. ಯಾರೇ ತಪ್ಪು ಮಾಡಿದರೂ ಅವರನ್ನು ಸುಮ್ಮನೆ ಬಿಡುವುದಿಲ್ಲ ಎನ್ನುತ್ತಾರೆ ಅಧಿಕಾರಿಗಳು. ರೀಲ್ಸ್ ಮಾಡುವ ಮುನ್ನ ಸಾರಿಗೆ ನಿಯಮಗಳನ್ನು ಪಾಲಿಸುವಂತೆಯೂ ಅವರು ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ದಂಡ ಕಟ್ಟಿಟ್ಟ ಬುತ್ತಿ ಎಂದೂ ಅವರು ತಿಳಿಸಿದ್ದಾರೆ.

    Live Tv

  • ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ಬೆಂಗಳೂರು: ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ ಟ್ರಾಫಿಕ್ ರೂಲ್ಸ್‌ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ಹೊರಡಿಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ ನಡೆಸುವಂತಿಲ್ಲ. ಡ್ರಿಂಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

    ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ದಂಡ ಕಲೆಕ್ಷನ್ ಎಫೆಕ್ಟ್‌ನಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಎಲ್ಲೆಂದರಲ್ಲಿ ರೂಲ್ಸ್ ಉಲ್ಲಂಘನೆ ಮಾಡದೇ ಇದ್ರೂ ಟ್ರಾಫಿಕ್ ಪೊಲೀಸರು ವಾಹನ ಅಡ್ಡ ಹಾಕ್ತಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದಿತ್ತು. ನಿಯಮಗಳು ತಮಗೆ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿರುವ ಬಹುತೇಕ ಸಂಚಾರ ಪೊಲೀಸರು, ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಿಕ್ಕ ಸಿಕ್ಕ ವಾಹನಗಳನ್ನು ಅಡ್ಡಗಟ್ಟುತ್ತಿರುವುದು ಜನರ ಸಿಟ್ಟಿಗೆ ಕಾರಣವಾಗಿತ್ತು. ಸಾರ್ವಜನಿಕರು ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಟ್ವೀಟ್ ಮೂಲಕ ಎಲ್ಲೆಂದರಲ್ಲಿ ದಾಖಲೆಯ ಪರಿಶೀಲನೆ ನೆಪದಲ್ಲಿ ಗಾಡಿಯನ್ನು ನಿಲ್ಲಿಸುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಕಮೀಷನರ್‌ಗೆ ಹಾಗೂ ಟ್ರಾಫಿಕ್ ಪೊಲೀಸರಿಗೆ ತಕ್ಷಣ ಜಾರಿಗೊಳಿಸುವಂತೆ ಸೂಚನೆ ಕೊಡುತ್ತೇನೆ ಎಂದು ಬೆಂಗಳೂರಿಗರಿಗೆ ಪ್ರವೀಣ್ ಸೂದ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಮೋಟಾರು ವಾಹನಗಳ ಕಾಯ್ದೆ ಏನು ಹೇಳುತ್ತೆ?
    ಮೋಟಾರು ವಾಹನಗಳ ಕಾಯ್ದೆಯಡಿ ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ಕೈ ಹಿಡಿದು ವಾಹನ ಅಡ್ಡ ಹಾಕುವಂತಿಲ್ಲ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡಿದರೆ ಮಾತ್ರ ವಾಹನ ಸವಾರರನ್ನು ಹಿಡಿಯಬೇಕು. ಹಿಡಿದು ಪರಿಶೀಲನೆ ನಡೆಸಿ ದಂಡ ವಿಧಿಸಬಹುದು.

    Live Tv

  • ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    ಬೆಂಗಳೂರು: ಇಂದು ಸಂಜೆ ಖೇಲೋ ಇಂಡಿಯಾ ಸಮಾರೋಪ ‌ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಕಂಠೀರವ ಕ್ರೀಡಾಂಗಣ ಸುತ್ತಮುತ್ತ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆಯಿದೆ.

    ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಹಲವು ಸಚಿವರು ಹಾಗೂ ವಿವಿಧ ರಾಜ್ಯದ ಗಣ್ಯರು ಭಾಗವಹಿಸುವ ಹಿನ್ನೆಲೆ ಕಂಠೀರವ ಸ್ಟೇಡಿಯಂ ‌ಸುತ್ತಮುತ್ತ ಇರುವ ರಸ್ತೆಯ ಬದಲು ಪರ್ಯಾಯ ರಸ್ತೆಯನ್ನು ಬಳಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

    ವಾಹನ ನಿಲುಗಡೆ ನಿಷೇಧ:
    ಇಂದು ಬೆಳಗ್ಗೆ 6 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಕೆಲ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಕಸ್ತೂರ್ಬಾ ರಸ್ತೆ, ಹಡ್ಸನ್ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ, ಮಲ್ಯ ಆಸ್ಪತ್ರೆ ರಸ್ತೆ, ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್. ಜಂಕ್ಷನ್‍ವರೆಗೆ, ಆರ್.ಆರ್.ಎಂ.ಆರ್. ರಸ್ತೆ, ಆರ್.ಆರ್.ಎಂ.ಆರ್. ಜಂಕ್ಷನ್ ನಿಂದ ಹಡ್ಸನ್ ವೃತ್ತದವರೆಗೆ, ಎನ್.ಆರ್. ರಸ್ತೆ, ಕೆ.ಜಿ.ರಸ್ತೆ, ನೃಪತುಂಗ ರಸ್ತೆ, ಹಳೇ ಅಂಚೆ ಕಛೇರಿ ರಸ್ತೆ, ಬಿ.ಆರ್.ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ದೇವರಾಜ್ ಅರಸ್ ರಸ್ತೆ, ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಟಿ.ಚೌಡಯ್ಯ ರಸ್ತೆ, ಟೆಂಪಲ್ ಸ್ಟ್ರೀಟ್ ರಸ್ತೆಯಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

  • ಸ್ಕೂಲ್ ಬಳಿ ಬಂದು ಸಮಸ್ಯೆ ಕ್ಲೀಯರ್ ಮಾಡಿ- ಠಾಣೆ ಮೆಟ್ಟಿಲೇರಿದ ಪುಟಾಣಿ

    ಸ್ಕೂಲ್ ಬಳಿ ಬಂದು ಸಮಸ್ಯೆ ಕ್ಲೀಯರ್ ಮಾಡಿ- ಠಾಣೆ ಮೆಟ್ಟಿಲೇರಿದ ಪುಟಾಣಿ

    ಅಮರಾವತಿ: ಭಾರತದ ಬಹುತೇಕ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. ಕೇವಲ ದೊಡ್ಡವರಿಗೆ ಮಾತ್ರವಲ್ಲದೆ ಶಾಲೆಗೆ ಹೋಗುವ ಪುಟ್ಟ ಮಕ್ಕಳು ಕೂಡ ಇದರಿಂದ ಕಿರಿಕಿರಿ ಅನುಭವಿಸುತ್ತಿದ್ದಾರೆ. ಅಂತೆಯೇ ಟ್ರಾಫಿಕ್ ಸಮಸ್ಯೆಯಿಂದ ಬೇಸತ್ತ 6 ವರ್ಷದ ಬಾಲಕನೊಬ್ಬ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡದ್ದಲ್ಲದೇ ಮನವಿ ಮಾಡಿಕೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರ್ ಜಿಲ್ಲೆಯಲ್ಲಿ ನಡೆದಿದೆ.

    ಸದ್ಯ 6 ವರ್ಷದ ಬಾಲಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರನ್ನು ಪ್ರಶ್ನೆ ಮಾಡುತ್ತಿರುವ ವೀಡಿಯೋವನ್ನು ಇತರೆ ಪೊಲೀಸರು ಮಾಡಿಕೊಂಡಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

    ಯುಕೆಜಿ ಓದುತ್ತಿರುವ ಪುಟ್ಟ ಬಾಲಕ ಕಾರ್ತಿಕ್, ಚಿತ್ತೂರ್ ಜಿಲ್ಲೆಯ ಪಾಲಮನೆರ್ ನಲ್ಲಿರುವ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾನೆ. ದೂರಿನಲ್ಲಿ, ತಾನು ಶಾಲೆಗೆ ತೆರಳುವ ರಸ್ತೆಯಲ್ಲಿ ಚರಂಡಿ ರಿಪೇರಿಗೆ ಅಗೆಯಲಾಗಿದೆ. ಅಲ್ಲದೆ ಟ್ರ್ಯಾಕ್ಟರ್ ಅಡ್ಡಾದಿಡ್ಡಿಯಾಗಿ ನಿಂತಿವೆ. ಇದರಿಂದ ನಮಗೆ ಶಾಲೆಗೆ ತೆರಳಲು ಕಿರಿಕಿರಿಯಾಗುತ್ತಿದೆ. ದಯಮಾಡಿ ಸ್ಕೂಲ್ ಹತ್ತಿರ ಬಂದು ಸಮಸ್ಯೆ ಪರಿಹರಿಸಿ ಕೊಡಿ ಎಂದು ಬಾಲಕ ಪಲಮನೇರ್ ಸರ್ಕಲ್ ಇನ್ಸ್ ಪೆಕ್ಟರ್ ಎನ್. ಭಾಸ್ಕರ್ ಅವರ ಬಳಿ ಮನವಿ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿವೆ: ಗುಲಾಂ ನಾಬಿ ಅಜಾದ್

    ಈ ವೇಳರ ಭಾಸ್ಕರ್ ಕೂಡ ಬಾಲಕನ ಮನವಿಗೆ ಸ್ಪಂಧಿಸಿದ್ದಾರೆ. ಶೀಘ್ರವೇ ರಸ್ತೆ ಸಮಸ್ಯೆ ಪರಿಹರಿಸಿ ಕೊಡುವುದಾಗಿ ಭರವಸೆ ನೀಡಿದರು. ಅಲ್ಲದೆ ಬಾಲಕನಿಗೆ ಭಾಸ್ಕರ್ ಅವರು ತಮ್ಮ ಫೋನ್ ನಂಬರ್ ನೀಡಿ ಇನ್ನು ಮುಂದೆ ಇಂತಹ ಸಮಸ್ಯೆಗಳು ಕಂಡುಬಂದಲ್ಲಿ ತಮ್ಮ ಗಮನಕ್ಕೆ ತರುವಂತೆ ತಿಳಿಸಿದ್ದಾರೆ.

    ಈ ವೀಡಿಯೋವನ್ನು ಟ್ವಿಟ್ಟರ್ ಬಳಕೆದಾರೆ ಶ್ರೀಲಕ್ಷ್ಮಿ ಎಂಬವರು ಶೇರ್ ಮಾಡಿಕೊಂಡಿದ್ದು, ಇದೀಗ ಈ ವೀಡಿಯೋ ಸಾಕಷ್ಟು ವೈರಲ್ ಆಗುತ್ತಿದೆ. ಅಲ್ಲದೆ ಬಾಲಕನ ಮುಗ್ಧತೆಗೆ ನೆಟ್ಟಿಗರು ಮಾರು ಹೋಗಿದ್ದಾರೆ. ಇದನ್ನೂ ಓದಿ: ಮೇಕೆದಾಟು ಯೋಜನೆ- ರಾಜ್ಯ ಸರ್ಕಾರ ನಿರ್ಧಾರದ ವಿರುದ್ಧ ತ.ನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

  • ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆಯೂ ಕಾರಣವಾಗಿದೆ: ಅಮೃತಾ ಫಡ್ನವೀಸ್

    ಡಿವೋರ್ಸ್ ಹೆಚ್ಚಾಗಲು ಟ್ರಾಫಿಕ್ ಸಮಸ್ಯೆಯೂ ಕಾರಣವಾಗಿದೆ: ಅಮೃತಾ ಫಡ್ನವೀಸ್

    ಮುಂಬೈ: ಟ್ರಾಫಿಕ್ ಸಮಸ್ಯೆಯಿಂದ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿಯೇ ವಿಚ್ಛೇದನ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಮಹರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್(Amruta fadnavis) ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸಾಮಾನ್ಯ ನಾಗರಿಕಳಾಗಿ ಹೇಳುತ್ತಿದ್ದೇನೆ, ನಾನು ಒಮ್ಮೆ ಹೊರಗೆ ಹೋದಾಗ ಗುಂಡಿಗಳು, ಟ್ರಾಫಿಕ್ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತೇನೆ. ಟ್ರಾಫಿಕ್ ಕಾರಣ, ಜನರು ತಮ್ಮ ಕುಟುಂಬಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಪರಿಣಾಮ ವಿಚ್ಛೇದನ ಪ್ರಕರಣಗಳು ಹೆಚ್ಚುತ್ತಿವೆ. ಮುಂಬೈನಲ್ಲಿ ಶೇ.3ರಷ್ಟು ವಿಚ್ಛೇದನಗಳು ಟ್ರಾಫಿಕ್ ಸಮಸ್ಯೆಯಿಂದ ನಡೆಯುತ್ತಿವೆ ಎಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿನೇ ಹಿಜಬ್ ಹಾಕಿದ್ದಾರೆ: ಸಿಎಂ ಇಬ್ರಾಹಿಂ

    ಮುಂಬೈನಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿಬಿಟ್ಟಿದೆ. ಇದರಿಂದಾಗಿ ಕುಟುಂಬಸ್ಥರು ಪರಸ್ಪರ ಸಮಯ ಕೊಡಲಾಗುತ್ತಿಲ್ಲ. ಜನಜೀವನದ ಮೇಲೆ ಟ್ರಾಫಿಕ್ ಸಮಸ್ಯೆ ಭಾರಿ ಪರಿಣಾಮ ಬೀರಿದೆ ಎಂದರು. ದನ್ನೂ ಓದಿ: ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

  • ಮಂದಗತಿಯ ಫ್ಲೈ ಓವರ್ ದುರಸ್ತಿ ಕಾರ್ಯ- ಬೆಂಗಳೂರಿಗರಿಗೆ ತಪ್ಪದ ಕಿರಿಕಿರಿ

    ಮಂದಗತಿಯ ಫ್ಲೈ ಓವರ್ ದುರಸ್ತಿ ಕಾರ್ಯ- ಬೆಂಗಳೂರಿಗರಿಗೆ ತಪ್ಪದ ಕಿರಿಕಿರಿ

    ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆ ದಾಸರಹಳ್ಳಿಯ ಫ್ಲೈ ಓವರ್ ರಸ್ತೆ ದುರಸ್ತಿ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಇನ್ನೂ ಒಂದು ವಾರ ನೆಲಮಂಗಲ, ಬೆಂಗಳೂರಿನ ಫ್ಲೈ ಓವರ್ ರಸ್ತೆಯಲ್ಲಿ ಕೆಲಸ ನಡೆಯುವ ಸಾಧ್ಯತೆ ಇದೆ.

    ಇತ್ತೀಚೆಗಷ್ಟೇ ದಾಸರಹಳ್ಳಿಯ ದೀಪಕ್ ಬಸ್ ನಿಲ್ದಾಣದ ಬಳಿಯ ಫ್ಲೈ ಓವರ್ ರಸ್ತೆಯಲ್ಲಿ ರೋಪ್ ಕಟ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ದುರಸ್ತಿ ಕಾರ್ಯ ಪ್ರಾರಂಭವಾಗಿದೆ. ಇನ್ನೂ ನೆಲಮಂಗಲ – ಬೆಂಗಳೂರು ರಸ್ತೆಯಲ್ಲಿ ಪ್ರತಿನಿತ್ಯ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ದುರಸ್ತಿ ಕಾರ್ಯ ಮಂದಗತಿಯಿಂದ ನಡೆಯುತ್ತಿರುವುದರಿಂದ ಇನ್ನೂ ಒಂದು ವಾರ ವಾಹನ ಸವಾರರು ಟ್ರಾಫಿಕ್ ದಟ್ಟಣೆ ಅನುಭವಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ, ಪೀಣ್ಯ ಫ್ಲೈಓವರ್ ಸಂಚಾರ ಬಂದ್ – ಬದಲಿ ಮಾರ್ಗ ಇಲ್ಲಿದೆ

    ನವಯುಗ ಟೋಲ್ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ನಿಧಾನಗತಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯದಿಂದಾಗಿ ವಾಹನ ಸವಾರರು ಹೈರಾಣಾಗಿದ್ದಾರೆ. ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಗೊರಗುಂಟೆಪಾಳ್ಯ ವರೆಗಿನ ಫ್ಲೈ ಓವರ್ ರಸ್ತೆಯಲ್ಲಿರುವ ಎಲ್ಲಾ ಕಂಬಗಳನ್ನು ಇಂಜಿನಿಯರ್‌ಗಳು ಪರಿಶೀಲಿಸುತ್ತಿದ್ದಾರೆ. ಇದರಿಂದಾಗಿ ಇನ್ನೂ ಒಂದು ವಾರ ದುರಸ್ತಿ ಕಾರ್ಯ ತಡವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ವಾಹನ ಸವಾರರೆ ಎಚ್ಚರಿಕೆಯಿಂದ ಸಾಗಬೇಕಿದೆ. ಇದನ್ನೂ ಓದಿ: ಬಸ್ ಅಪಘಾತದಲ್ಲಿ 22 ಮಂದಿ ಸಾವಿಗೆ ಕಾರಣನಾದ ಚಾಲಕನಿಗೆ 190 ವರ್ಷ ಜೈಲು ಶಿಕ್ಷೆ

  • ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್

    ಹೊಸ ವರ್ಷ ಸಂಭ್ರಮಾಚರಣೆ ತಡೆಯಲು ಚೆನ್ನೈನಲ್ಲಿ ವಾಹನ ಸಂಚಾರ ಬ್ಯಾನ್

    ಚೆನ್ನೈ: ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರೇಕ್ ಹಾಕುವ ಸಲುವಾಗಿ ತಮಿಳುನಾಡು ಪೊಲೀಸರು ಚೆನ್ನೈ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ. ಡಿಸೆಂಬರ್ 31ರ ಮಧ್ಯರಾತ್ರಿ 12 ಗಂಟೆಯಿಂದ ಜನವರಿ 1ರ ಬೆಳಗ್ಗೆ 5 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿರುತ್ತದೆ.

    ಬೀಚ್‍ಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಯನ್ನು ನಿಷೇಧಿಸುವ ಸಲುವಾಗಿ ಡಿಸೆಂಬರ್ 28 ರಂದು ಪ್ರಕಟಿಸಲಾದ ನಿಯಮಗಳಲ್ಲಿ ವಾಹನ ಸಂಚಾರ ನಿರ್ಬಂಧವನ್ನು ಸಹ ಜಾರಿಗೊಳಿಸಲಾಗಿದೆ.  ಇದನ್ನೂ ಓದಿ: ಕೋವಿಡ್ ಹೆಚ್ಚಾದ್ರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜ್ ಬಂದ್: ಮಮತಾ ಬ್ಯಾನರ್ಜಿ

    ಡಿಸೆಂಬರ್ 31 ರಂದು ಮಧ್ಯರಾತ್ರಿ 12 ಗಂಟೆಯೊಳಗೆ ನಾಗರಿಕರು ಮನೆಗೆ ತಲುಪಲು ಪೊಲೀಸರು ಸೂಚಿಸಿದ್ದು, ಈ ನಿಯಮದ ಅಡಿಯಲ್ಲಿ ಅಗತ್ಯ ಮತ್ತು ತುರ್ತು ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಭಾರತದ ರಫೇಲ್‌ಗಳಿಗೆ ಪೈಪೋಟಿ ನೀಡಲು ಚೀನಾದ ಜೆ-10ಸಿ ಸ್ಕ್ವಾಡ್ರನ್ ಖರೀದಿಗೆ ಮುಂದಾದ ಪಾಕ್

    ಬೀಚ್ ಬಳಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದ್ದು, ಡಿಸೆಂಬರ್ 31 ರಂದು ರಾತ್ರಿ 9 ಗಂಟೆಯಿಂದ ಬೀಚ್ ರಸ್ತೆಗಳಲ್ಲಿ ವಾಹನಗಳ ಸಂಚಾರವನ್ನು ಸಹ ನಿಷೇಧಿಸಲಾಗಿದೆ. ಹೊಸ ವರ್ಷದಂದು ನಗರದಲ್ಲಿ 10,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ನಿಯಮ ಉಲ್ಲಂಘನೆ ಕುರಿತಂತೆ ಪರಿಶೀಲನೆ ನಡೆಸಲಿದ್ದಾರೆ.

  • ಹಾರ್ನ್ ಹಾಕುವುದನ್ನು ಕಮ್ಮಿ ಮಾಡಿ – 32 ವರ್ಷಗಳಿಂದ ಸಂದೇಶ ಸಾರ್ತಿದ್ದಾರೆ ಸೈಲೆಂಟ್ ಕ್ರುಸೇಡರ್

    ಕೋಲ್ಕತ್ತಾ: ನಮ್ಮಲ್ಲಿ ಟ್ರಾಫಿಕ್ ಇದ್ದಾಗ ಯಾರಿಗೆ ತಾನೇ ತಾಳ್ಮೆ ಇರುತ್ತೆ? ಅರ್ಜೆಂಟ್ ಇಲ್ಲ ಅಂದ್ರೂ ಹಾರ್ನ್ ಹಾಕಿ ಗದ್ದಲ ಮಾಡಿ ಇತರ ಪ್ರಯಾಣಿಕರಿಗೂ ಕಿರಿಕಿರಿ ಮಾಡುವ ಚಟ ನಮ್ಮಲ್ಲಿ ಹೆಚ್ಚಿನವರಿಗೆ ಇದೆ. ಇಲ್ಲೊಬ್ಬ ವ್ಯಕ್ತಿ ಹಾರ್ನ್ ಹಾಕುವುದನ್ನು ಕಡಿಮೆ ಮಾಡಿ ಎಂಬ ಸಂದೇಶದೊಂದಿಗೆ ಓಡಾಡುತ್ತಿದ್ದು ಗಮನ ಸೆಳೆದಿದ್ದಾರೆ.

    ಅನವಶ್ಯಕ ಹಾರ್ನ್ ಮಾಡುವುದನ್ನು ನಿಲ್ಲಿಸಿ ಎಂಬ ಸಂದೇಶದೊಂದಿಗೆ ಓಡಾಡುತ್ತಿರುವ ಕೋಲ್ಕತ್ತಾದ ಉದ್ಯಮಿ ಕೈಲಾಶ್ ಮೆಹ್ತಾ ಕಳೆದ 32 ವರ್ಷಗಳಿಂದ ಸಂದೇಶವನ್ನು ಸಾರುತ್ತಿದ್ದಾರೆ. ಮೆಹ್ತಾ ತನ್ನನ್ನು ತಾನು ಸೈಲೆಂಟ್ ಕ್ರುಸೇಡರ್ ಎಂದು ಕರೆದಿದ್ದಾರೆ.

    ಕಳೆದ ನಾಲ್ಕು ವರ್ಷಗಳಿಂದ ಕೈಲಾಶ್ ಹಾರ್ನ್ ಮಾಡದೇ ಸ್ಕೂಟರ್ ಅನ್ನು ಓಡಿಸುತ್ತಿದು, ಹಾರ್ನ್ ಹಾಕುವುದನ್ನು ಕಡಿಮೆ ಮಾಡಿ ಎಂಬ ಪೋಸ್ಟರ್ ಕೂಡಾ ಬೆನ್ನಿಗೆ ಹಾಕಿಕೊಂಡು ಓಡಾಡುತ್ತಿದ್ದಾರೆ. ತಮ್ಮ ದ್ವಿಚಕ್ರ ವಾಹನವನ್ನು ನೋ ಹಾಂಕಿಂಗ್ ಟ್ಯಾಬ್ಲೋ ಆಗಿ ಪರಿವರ್ತಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭದ್ರತೆಗಾಗಿ 12 ಕೋಟಿಯ ದುಬಾರಿ ಕಾರು- ವಿಶೇಷತೆ ಏನು..?

    ಹಾರ್ನ್ ಮಾಡುವುದರಿಂದ ಟ್ರಾಫಿಕ್ ಕಡಿಮೆಯಾಗುತ್ತದೆಯೇ? ಇಲ್ಲ. ನಿಯಮಗಳನ್ನು ಅನುಸರಿಸಿದರೆ ಟ್ರಾಫಿಕ್ ಅನ್ನು ಪರಿಹರಿಸಬಹುದು. ಹಾರ್ನ್ ಮಾಡಬೇಡಿ. ಆದರೆ ಬ್ರೇಕ್ ಹಾಕಿ ಎಂದು ಮೆಹ್ತಾ ಹೇಳುತ್ತಾರೆ.

    ವಾಹನ ಚಾಲಕರು ಹಾರ್ನ್ ಮಾಡುವುದನ್ನು ಕಡಿಮೆ ಮಾಡಿದರೆ ನಗರ ಹೆಚ್ಚು ನಾಗರಿಕ ಹಾಗೂ ವಾಸಯೋಗ್ಯವಾಗುತ್ತದೆ. ಅತಿಯಾದ ಹಾರ್ನ್ ಶಬ್ಧದಿಂದ ಜನರಲ್ಲಿ ಒತ್ತಡ ಹೆಚ್ಚುತ್ತದೆ. ಹೃದಯದ ಸಮಸ್ಯೆಗೂ ಕಾರಣವಾಗುತ್ತದೆ. ಹೀಗೆ ಹಾರ್ನ್ ಮಾಡುವುದರ ದುಷ್ಪರಿಣಾಮಗಳ ಬಗ್ಗೆ ನಾಗರಿಕರಿಗೆ ತಿಳುವಳಿಕೆ ನೀಡುವ ಉದ್ದೇಶದಿಂದ ಇಂತಹ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಕಛೇರಿಯಲ್ಲಿ ಶೇ.50, ಮದುವೆಗೆ 20 ಜನ ಮಾತ್ರ ಅವಕಾಶ – ಹೊಸ ನಿಯಮ ಜಾರಿಗೊಳಿಸಿದ ದೆಹಲಿ ಸರ್ಕಾರ

    ನಾನು ಅಮೆರಿಕಾದಲ್ಲಿ ವಾಸಮಾಡಿದ್ದೆ. ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ಚೀನಾಗೂ ಪ್ರಯಾಣಿಸಿ ಓಡಾಡಿದ್ದೇನೆ. ಅವರು ಅನಗತ್ಯ ಹಾರ್ನ್ ಮಾಡುವುದಿಲ್ಲ. ಅಂತಹ ದೇಶದವರಿಗೆ ಸಾಧ್ಯವಿದ್ದರೆ, ನಮ್ಮ ದೇಶದಲ್ಲಿ ಏಕೆ ಸಾಧ್ಯವಿಲ್ಲ ಎಂದು ಮೆಹ್ತಾ ಸವಾಲು ಹಾಕಿದ್ದಾರೆ.

  • ನಾಳೆಯಿಂದ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ – ಮುಂಜಾನೆ 5ರಿಂದಲೇ ರೈಲು ಸಂಚಾರ

    ನಾಳೆಯಿಂದ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ – ಮುಂಜಾನೆ 5ರಿಂದಲೇ ರೈಲು ಸಂಚಾರ

    ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್​ಸಿಎಲ್) ನಿರ್ಧರಿಸಿದೆ.

    ಇಷ್ಟು ದಿನ ಬೆಳಗ್ಗೆ 6ಗಂಟೆಗೆ ಆರಂಭವಾಗುತ್ತಿದ್ದ ಮೆಟ್ರೋ ರೈಲು ಸಂಚಾರ ಸೇವೆಗಳು ಡಿಸೆಂಬರ್ 20ರಿಂದ ಬೆಳಗ್ಗೆ 5 ಗಂಟೆಯಿಂದ ರಾತ್ರಿ 11ರವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‍ಸಿಎಲ್ ಪ್ರಕಟಿಸಿದೆ. ಇದನ್ನೂ ಓದಿ: ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ: ಬಿಎಸ್‍ವೈ

    namma metro

    ಕೋವಿಡ್‍ಗೂ ಮುನ್ನ ಇದ್ದ ವೇಳಾಪಟ್ಟಿಯಂತೆಯೇ ಮೆಟ್ರೋ ಸೇವೆಗಳು ಎಂದಿನಂತೆ ಡಿಸೆಂಬರ್ 20ರಿಂದ ಪ್ರಾರಂಭವಾಗಲಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ರೈಲು ಟರ್ಮಿನಲ್ ನಿಲ್ದಾಣಗಳಾದ ಕೆಂಗೇರಿ, ಸಿಲ್ಕ್ ಇನ್‍ಸ್ಟಿಟ್ಯೂಟ್, ನಾಗಸಂದ್ರ ಮತ್ತು ಬೈಯಪ್ಪನಹಳ್ಳಿಯಿಂದ ಬೆಳಿಗ್ಗೆ 5 ಗಂಟೆಗೆ ಹೊರಡಲಿದೆ. ಈ ನಿಲ್ದಾಣಗಳಿಂದ ಕೊನೆಯದಾಗಿ ರಾತ್ರಿ 11 ಗಂಟೆಗೆ ರೈಲು ಸಂಚರಿಸಲಿದೆ ಮತ್ತು ಎಂದಿನಂತೆ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಪ್ರಸಿದ್ಧ ವಾಸ್ತುಶಿಲ್ಪಿ ರಿಚರ್ಡ್ ರೋಜರ್ಸ್ ನಿಧನ

    ನಗರದ ಮುಖ್ಯ ನಿಲ್ದಾಣ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ರಾತ್ರಿ 11.30 ಕ್ಕೆ ಸಂಚಾರ ಮಾಡಲಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

  • ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

    ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

    ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ಎಪಿಎಂಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರಾಜ್ಯ ಹೆದ್ದಾರಿ ಬಂದ್ ಆಗಿದ್ದು, ಟ್ರಾಫಿಕ್ ಜಾಮ್‍ನಲ್ಲಿ ಅಂಬುಲೆನ್ಸ್ ಸಿಲುಕಿ ರೋಗಿ ಪರದಾಡಿದ ಘಟನೆ ಸಿಂಧನೂರಿನ ಕುಷ್ಟಗಿ ಮುಖ್ಯ ಹೆದ್ದಾರಿಯಲ್ಲಿ ನಡೆದಿದೆ.

    ನಗರದ ಹೊರವಲಯದಲ್ಲಿ ಪ್ರತೀ ಸೋಮವಾರ ಕುರಿ ಸಂತೆ ನಡೆಯುತ್ತದೆ. ಸಂತೆಗೆ ಬಂದವರು ವಾಹನಗಳನ್ನೆಲ್ಲಾ ಯದ್ವಾತದ್ವಾ ರಸ್ತೆ ಮೇಲೆ ನಿಲ್ಲಿಸಿದ್ದರ ಪರಿಣಾಮ ಸುಮಾರು ಒಂದು ಕಿಮೀವರೆಗೆ ಟ್ರಾಫಿಕ್ ಜಾಮ್ ಆಗಿತ್ತು. ಈ ವೇಳೆ ಅದೇ ದಾರಿಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಕರೆತರುತ್ತಿದ್ದ ಅಂಬುಲೆನ್ಸ್ ಗೂ ದಾರಿ ಸಿಗದೇ ಪರದಾಡಬೇಕಾಯಿತು.

    ಕೆಲ ಹೊತ್ತು ಅಂಬುಲೆನ್ಸ್ ಟ್ರಾಫಿಕ್‍ನಲ್ಲೇ ಸಿಕ್ಕಾಕಿಕೊಂಡಿತ್ತು, ಹೀಗಾಗಿ ಅಂಬ್ಯುಲೆನ್ಸ್ ನಲ್ಲಿದ್ದ ರೋಗಿ ನರಳಾಡುವಂತಾಯಿತು. ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದ್ದರೂ ಕೇಳುವವರು ಇರಲಿಲ್ಲ. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

    ಸ್ಥಳದಲ್ಲಿ ಇಷ್ಟೆಲ್ಲಾ ಅವಾಂತರವಾದ್ರೂ ಸಂಚಾರಿ ಠಾಣೆ ಪೊಲೀಸರು ಸ್ಥಳದಲ್ಲಿರಲಿಲ್ಲ. ಪ್ರತೀ ವಾರ ಸಂತೆ ನಡೆಯುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಾಕಿಂಗ್ ಹೋಗಿದ್ದ ಪಾದಚಾರಿ ಮೇಲೆ ಹರಿದ ಲಾರಿ – ಸ್ಥಳದಲ್ಲಿಯೇ ಮಹಿಳೆ ಸಾವು