Tag: trail blast

  • ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    – ರೈತ ಸಂಘ, ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ

    ಮಂಡ್ಯ: ಇಲ್ಲಿನ ಬೇಬಿ ಬೆಟ್ಟದಲ್ಲಿ (Baby Betta) ಗಣಿಗಾರಿಕೆ (Mining) ನಡೆಯಬೇಕೋ ಬೇಡವೋ ಎಂದು ತೀರ್ಮಾನ ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ (Trail blast) ನಡೆಸಲು ಆದೇಶ ನೀಡಿದೆ. ಅದರಂತೆ ಇಂದಿನಿಂದ 4 ದಿನಗಳ ಟ್ರಯಲ್ ಬ್ಲಾಸ್ಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.

    ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ (KRS) ಅಣೆಕಟ್ಟೆಗೆ ಹಾನಿ ಆಗುತ್ತದೆ ಎಂದು ಹಲವು ಹೋರಾಟಗಳು ನಡೆದವು. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹೈಕೋರ್ಟ್ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿತ್ತು. ಇದೀಗ ಇದೇ ಹೈಕೋರ್ಟ್ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುತ್ತಾ ಎಂದು ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡಿಸಲು ಸರ್ಕಾರಕ್ಕೆ ಆದೇಶ ನೀಡಿದೆ. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಸರ್ಕಾರವೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಇಂದಿನಿಂದ 4 ದಿನ ಮುಹೂರ್ತ ಫಿಕ್ಸ್ ಮಾಡಿದೆ. ಈ ಸಂಬಂಧ ಹೊರ ರಾಜ್ಯದಿಂದ ತಜ್ಞರ ತಂಡ ಸೋಮವಾರ ರಾತ್ರಿಯೇ ಕೆಆರ್‌ಎಸ್‌ನ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದೆ. ಇಂದು ಬೆಳಗ್ಗೆ ಕೆಆರ್‌ಎಸ್‌ನ ಕಾವೇರಿ ಸಭಾಂಗಣದಲ್ಲಿ ತಜ್ಞರು ಕಾವೇರಿ ನೀರಾವರಿ ನಿಗಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೂ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಹಾಗೂ ಗುರುವಾರ ಬೇಬಿ ಬೆಟ್ಟದ ಆಯ್ದ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಒಂದೆಡೆ ಹೈಕೋರ್ಟ್ ಆದೇಶದಂತೆ ಸರ್ಕಾರ ಇಂದಿನಿಂದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿಸುತ್ತಿದ್ದರೆ, ಇನ್ನೊಂದೆಡೆ ರೈತ ಸಂಘ (Farmers Association) ಹಾಗೂ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸರ್ಕಾರ ಗಣಿ ಮಾಲೀಕರ ಲಾಬಿಗೆ ಮಣಿದು ಟ್ರಯಲ್ ಬ್ಲಾಸ್ಟ್ ಮಾಡಿಸಲು ಮುಂದಾಗುತ್ತಿದೆ. ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟ ಬಳಸಿ ಬ್ಲಾಸ್ಟ್ ಮಾಡಿ ಕೆಆರ್‌ಎಸ್‌ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುರತ್ತಾರೆ. ಇದರಿಂದ ಕೆಆರ್‌ಎಸ್‌ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಈಗ ಇರುವಂತೆಯೇ ಶಾಶ್ವತವಾಗಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸಬೇಕೆಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: ಶಿಲ್ಪಿ ಅರುಣ್ ಯೋಗಿರಾಜ್‌ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ. ಕೆಆರ್‌ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಈ ಚಳುವಳಿ ನಡೆಯಲಿದೆ. ರೈತಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಟ್ರಯಲ್ ಬ್ಲಾಸ್ಟ್ ನಡೆಸದಂತೆ ಬೆಳಿಗ್ಗೆ 10 ಗಂಟೆಗೆ ಚಳುವಳಿ ಆರಂಭವಾಗಲಿದೆ. ಬಿಜೆಪಿಯಿಂದಲೂ ಪ್ರತ್ಯೇಕ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಟ್ರಯಲ್ ಬ್ಲಾಸ್ಟ್‌ಗೆ ಆಗಮಿಸಿರುವ ತಜ್ಞರು ವಾಪಸ್ ತೆರಳುವಂತೆ ಗೋ ಬ್ಯಾಕ್ ಚಳುವಳಿ ನಡೆಯಲಿದೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

    ಗಣಿ ಮಾಲೀಕರು ನಡೆಸುವ ಬ್ಲಾಸ್ಟ್‌ಗೂ ತಜ್ಞರು ನಡೆಸುವ ಬ್ಲಾಸ್ಟ್‌ಗೂ ತುಂಬಾ ವ್ಯತ್ಯಾಸ ಇದೆ. ಗಣಿಗಾರಿಕೆಗೆ ಅಪಾರ ಪ್ರಮಾಣದ ಸ್ಫೋಟಕ ಬಳಕೆ ಮಾಡುತ್ತಾರೆ. ಆದರೆ ತಜ್ಞರು ಟ್ರಯಲ್ ಬ್ಲಾಸ್ಟ್‌ನಲ್ಲಿ ಅಲ್ಪ ಪ್ರಮಾಣದ ಸ್ಫೋಟಕ ಬಳಸುತ್ತಾರೆ. ಟ್ರಯಲ್ ಬ್ಲಾಸ್ಟ್‌ನಲ್ಲಿ ಕೆಆರ್‌ಎಸ್ ಡ್ಯಾಂಗೆ ಅಪಾಯ ಇಲ್ಲ ಎಂಬ ವರದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್‌ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್‌ ಕುಮಾರ್‌ ಹೆಗಡೆ

  • ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್- ತೀವ್ರ ವಿರೋದಧ ನಡುವೆಯೂ ಪ್ರಾಯೋಗಿಕವಾಗಿ ಸಿದ್ಧತೆ

    ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್- ತೀವ್ರ ವಿರೋದಧ ನಡುವೆಯೂ ಪ್ರಾಯೋಗಿಕವಾಗಿ ಸಿದ್ಧತೆ

    ಮಂಡ್ಯ: ಸೋಮವಾರದಿಂದ ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ.

    ಕೆಆರ್‌ಎಸ್‌ನ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಜಾರ್ಖಂಡ್ ಮೂಲದ ಭೂ ವಿಜ್ಞಾನಿಗಳ ತಂಡದಿಂದ ಬೇಬಿ ಬೆಟ್ಟ ಸೇರಿದಂತೆ ಐದು ಕಡೆ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!

    ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಯುತ್ತಿದ್ದು, ಇದನ್ನು ವಿರೋಧಿಸಿ ನಾಳೆ ರೈತರಿಂದ ಬೈಕ್ ‌Rally ಕೂಡ ನಡೆಯಲಿದೆ. ಕೆಆರ್‌ಎಸ್‌ನಿಂದ ಟ್ರಯಲ್ ಬ್ಲಾಸ್ಟ್ ನಡೆಯುವ ಸ್ಥಳದ ವರೆಗೆ ಬೈಕ್ Rally ನಡೆಯಲಿದ್ದು, ಬಳಿಕ ಟ್ರಯಲ್ ಬ್ಲಾಸ್ಟಿಂಗ್ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗಿದೆ.

    ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪ್ರತಿಭಟನೆ ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ ರೈತ ಸಂಘಟನೆ, ಪ್ರಗತಿಪರ ಸಂಘಟನೆ, ಕಾರ್ಮಿಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ. 2018 ರಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಬಂದಿದ್ದ ವೇಳೆ ರೈತರು ಗೋ ಬ್ಯಾಕ್ ಚಳುವಳಿ ನಡೆಸಿದ್ದರು. ಆ ವೇಳೆ ಚಳುವಳಿಗೆ ಸೋತು ಅಧಿಕಾರಿಗಳು ಜಾಗ ಖಾಲಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]