Tag: train

  • ಬೈಪಾಸ್ ಕಾಮಗಾರಿ – ಬೆಂಗಳೂರಿನಿಂದ ಸಂಚರಿಸುವ ಈ ರೈಲುಗಳ ಓಡಾಟ ರದ್ದು

    ಬೈಪಾಸ್ ಕಾಮಗಾರಿ – ಬೆಂಗಳೂರಿನಿಂದ ಸಂಚರಿಸುವ ಈ ರೈಲುಗಳ ಓಡಾಟ ರದ್ದು

    ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಪಾಪಟಪಲ್ಲಿ-ಡೋರ್ನಕಲ್ ಬೈಪಾಸ್ ನಿಲ್ದಾಣಗಳಲ್ಲಿ ಮೂರನೇ ಮಾರ್ಗದ (ಪ್ಯಾಚ್ ಟ್ರಿಪ್ಲಿಂಗ್) ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಕಾರಣದಿಂದಾಗಿ ಬೆಂಗಳೂರಿನಿಂದ ವಿವಿಧ ಮಾರ್ಗಗಳಲ್ಲಿ ಹೊರಡುವ ಈ ಕೆಳಗಿನ ರೈಲು ಸೇವೆಗಳನ್ನು (Train Service) ರದ್ದುಗೊಳಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

    ಯಾವ್ಯಾವ ರೈಲುಗಳ ಸಂಚಾರ ರದ್ದು?
    * ದಾನಾಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು (ಸಂಖ್ಯೆ 06509) ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಇದೇ ಅಕ್ಟೋಬರ್ 13ರಂದು ಸೇವೆ ಆರಂಭಿಸಬೇಕಿತ್ತು. ಅದರ ಸೇವೆ ಶುರುವಾಗುವ ಮೊಲದೇ ರೈಲು ಸಂಚಾರ ರದ್ದುಗೊಳಿಸಲಾಗಿದೆ.

    * ಅಕ್ಟೊಬರ್ 15 ರಂದು ಪ್ರಾರಂಭವಾಗಬೇಕಿದ್ದ ದಾನಾಪುರ ಕೆಎಸ್‌ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ವಿಶೇಷ ರೈಲು (06510) ರದ್ದುಗೊಳಿಸಲಾಗಿದೆ.

    * ಯಶವಂತಪುರ ತುಘಲಕಾಬಾದ್ ಪಾರ್ಸೆಲ್ ಕಾರ್ಗೋ ಎಕ್ಸ್‌ಪ್ರೆಸ್ ರೈಲು (00629) ಅ.12 ಮತ್ತು ಅ.15 ರಂದು ಪ್ರಾರಂಭವಾಗುವುದಿತ್ತು, ಅದ್ರೆ ರದ್ದುಗೊಳಿಸಲಾಗಿದೆ.

    * ಅಕ್ಟೊಬರ್ 12 ಮತ್ತು 16 ರಂದು ಪ್ರಾರಂಭವಾಗಲಿದ್ದ ತುಘಲಕಾಬಾದ್ -ಯಶವಂತಪುರ ಪಾರ್ಸೆಲ್ ಕಾರ್ಗೋ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 00630) ಪ್ರಯಾಣಗಳನ್ನು ರದ್ದುಗೊಳಿಸಲಾಗುತ್ತಿದೆ.

    * ರೈಲು ಸಂಖ್ಯೆ 03251 ದಾನಾಪುರ SMVT ಬೆಂಗಳೂರು ದ್ವೈವಾರದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ಅಕ್ಟೋಬರ್ 12 ಮತ್ತು 13 ರಂದು ಸಂಚರಿಸಬೇಕಿತ್ತು ಕಾಮಗಾರಿ ಹಿನ್ನೆಲೆ ಇದರ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ.

    * SMVT ಬೆಂಗಳೂರು ದಾನಾಪುರ ದ್ವೈವಾರದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸಂಚಾರ (03252) ಅಕ್ಟೋಬರ್‌ 14 ಮತ್ತು 15 ರಂದು ರದ್ದಾಗಿದೆ.

    * ದಾನಾಪುರ SMVT ಬೆಂಗಳೂರು ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (ಸಂಖ್ಯೆ 03259) ಸಂಚಾರ ಅಕ್ಟೋಬರ್‌ 14 ರಂದು ಸಂಚರಿಸುತ್ತಿಲ್ಲ. ಪ್ರಯಾಣಿಕರು ಗಮನಿಸಿ ಪ್ರಯಾಣವನ್ನು ಪ್ಲಾನ್ ಮಾಡಿಕೊಳ್ಳಬೇಕು.

    * ಕೊನೆಯದಾಗಿ SMVT ಬೆಂಗಳೂರು ದಾನಾಪುರ ಸಾಪ್ತಾಹಿಕ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ವಿಶೇಷ ರೈಲು (ಸಂಖ್ಯೆ 03260) ಅಕ್ಟೋಬರ್‌ 16 ರಂದು ಸೇವೆ ನೀಡದೇ ಸಂಚಾರ ಸ್ಥಗಿತಗೊಳಿಸಿದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ನವದೆಹಲಿ: ರೈಲು ಪ್ರಯಾಣ ಪ್ರಿಯರಿಗೆ ರೈಲ್ವೆ ಇಲಾಖೆ ಗುಡ್‌ನ್ಯೂಸ್ ನೀಡಿದೆ. ಇದೀಗ ಬುಕ್ ಆದ ಟಿಕೆಟ್‌ನ (Train Ticket) ದಿನಾಂಕ ಬದಲಾವಣೆಗೆ ಜನವರಿಯಿಂದ ಅವಕಾಶ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ.

    ಇಲ್ಲಿಯವರೆಗೆ ಒಮ್ಮೆ ರೈಲ್ವೆ ಟಿಕೆಟ್ ಬುಕ್ ಮಾಡಿದರೆ ಪ್ರಯಾಣದ ದಿನಾಂಕ ಬದಲಾವಣೆಗೆ ಅವಕಾಶ ಇರಲಿಲ್ಲ. ಆದರೆ ಇದೀಗ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ ಇರಲಿದೆ. ಇದನ್ನೂ ಓದಿ: ರೆಸಾರ್ಟ್‌ನಲ್ಲೂ ಬಿಗ್‌ಬಾಸ್‌ ನಿಯಮ ಅನ್ವಯ!

    ಮೊದಲೆಲ್ಲ ಟಿಕೆಟ್ ಬುಕಿಂಗ್ ಆದ್ರೆ, ದಿನಾಂಕ ಬದಲಾವಣೆಗೆ ಮೊದಲಿನ ಬುಕಿಂಗ್ ರದ್ದು ಮಾಡಿ, ನಂತರ ಹೊಸ ಟಿಕೆಟ್ ಬುಕಿಂಗ್ ಮಾಡಬೇಕಿತ್ತು. ಆದರೆ ರೈಲ್ವೆ ಇಲಾಖೆ ಈ ನಿಯಮ ಬದಲಾವಣೆಗೆ ಮುಂದಾಗಿದೆ. ದಿನಾಂಕ ಬದಲಾವಣೆಗೆ ಯಾವುದೇ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗಿಲ್ಲ ಎಂದು ತಿಳಿಸಿದೆ.

    ಅಲ್ಲದೇ ರದ್ದತಿ ವೇಳೆ ಆಗುವ ಹಣ ಕಡಿತದಂತೆ ಇಲ್ಲಿ ಆಗುವುದಿಲ್ಲ ಎನ್ನುವ ಮೂಲಕ ರೈಲ್ವೆ ಟಿಕೆಟ್ ಬುಕಿಂಗ್ ವೇಳೆ ಇದ್ದ ನಿಯಮ ಸಡಿಲಿಕೆಗೆ ಇಲಾಖೆ ಮುಂದಾಗಿದೆ.

  • ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು

    ಪ್ರೀತಿಗೆ ಮನೆಯವರ ವಿರೋಧ – ರೈಲಿಗೆ ತಲೆಕೊಟ್ಟ ಪ್ರೇಮಿಗಳು

    ಕೋಲಾರ: ಪ್ರೀತಿಗೆ ಮನೆಯವರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ರೈಲಿಗೆ (Train) ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಜಿಲ್ಲೆಯ ಮಾಲೂರು ತಾಲೂಕು ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಶೆಟ್ಟಹಳ್ಳಿ ಗ್ರಾಮದ ಸತೀಶ್ (18) ಹಾಗೂ ಅಪ್ರಾಪ್ತೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ವಿಜಯಪುರ | ಡೋಣಿ ನದಿ ಸೇತುವೆ ಜಲಾವೃತ – ದಾಟಲು ಯತ್ನಿಸಿದ ಬೈಕ್ ಸವಾರ ನೀರುಪಾಲು

    ಇವರಿಬ್ಬರ ಪ್ರೀತಿಗೆ 2 ಮನೆಯವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಮನನೊಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬ್ಯಾಟರಾಯನಹಳ್ಳಿ ಗ್ರಾಮದ ಬಳಿ ಬೈಕ್ ನಿಲ್ಲಿಸಿ, ಕೋಲಾರದಿಂದ ಬೆಂಗಳೂರಿಗೆ ತೆರಳುವ ರೈಲಿಗೆ ತಲೆಕೊಟ್ಟಿದ್ದಾರೆ.

    ರೈಲಿನಡಿ ಸಿಲುಕಿದ ದೇಹಗಳು ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ರೈಲು ಪ್ರಯಾಣಿಕರ ಗಮನಕ್ಕೆ; ಆ.24ರಂದು ಈ ರೈಲುಗಳ ಸಂಚಾರ ರದ್ದು

    ರೈಲು ಪ್ರಯಾಣಿಕರ ಗಮನಕ್ಕೆ; ಆ.24ರಂದು ಈ ರೈಲುಗಳ ಸಂಚಾರ ರದ್ದು

    – ಕೆಲವು ರೈಲುಗಳ ಬದಲಾವಣೆ

    ಬೆಂಗಳೂರು: ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್‌ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ.

    ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್‌ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು ಮೈಸೂರು-ಎಸ್‌ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್-ಮೈಸೂರು ಡೈಲಿ ಎಕ್ಸ್‌ಪ್ರೆಸ್ (16226), ಮೈಸೂರು-ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ (16225), ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು-ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು-ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ-ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳು ಒಂದು ದಿನ ರದ್ದುಗೊಳ್ಳಲಿವೆ.

    ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೀರೂರಿನಿಂದ ಅದರ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.

    ಆಗಸ್ಟ್ 24ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣದಲ್ಲಿ ನಿಯಂತ್ರಣವಿರುತ್ತದೆ. ರೈಲು ಸಂಖ್ಯೆ 16587 ಯಶವಂತಪುರ-ಬಿಕಾನೇರ್ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಯಶವಂತಪುರದಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ರೈಲು ಸಂಖ್ಯೆ 18112 ಯಶವಂತಪುರ-ಟಾಟಾನಗರ ಸಾಪ್ತಾಹಿಕ ಎಕ್ಸ್‌ಪ್ರೆಸ್, 12649 ಯಶವಂತಪುರ-ಹಜರತ್ ನಿಜಾಮುದ್ದೀನ್ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಮತ್ತು 12725 ಕೆಎಸ್‌ಆರ್ ಬೆಂಗಳೂರು-ಧಾರವಾಡ ಸಿದ್ಧಗಂಗಾ ದೈನಿಕ ಎಕ್ಸ್‌ಪ್ರೆಸ್ ರೈಲುಗಳನ್ನು ಮಾರ್ಗಮಧ್ಯೆ 60-75 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ ಮತ್ತು ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ದೈನಿಕ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

  • ಇಂದು ‌ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು

    ಇಂದು ‌ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಆಗಮನದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹಸಿರು ಮಾರ್ಗದ (Green Line) ನಾಲ್ಕು ನಿಲ್ದಾಣಗಳು ತಾತ್ಕಾಲಿಕವಾಗಿ ಮುಚ್ಚಲಿದೆ.

    ಲಾಲ್ ಬಾಗ್, ಸೌತ್ ಎಂಡ್ ಸರ್ಕಲ್, ಜಯನಗರ, ಆರ್ ವಿ ರಸ್ತೆ ಮೆಟ್ರೋ ನಿಲ್ದಾಣಗಳು ತಾತ್ಕಾಲಿಕ ಮುಚ್ಚಲಾಗುತ್ತದೆ ಎಂದು ಎಂದು ಬಿಎಂಆರ್‌ಸಿಎಲ್‌ (BMRCL) ಪ್ರಕಟಣೆಯಲ್ಲಿ ತಿಳಿಸಿದೆ.  ಇದನ್ನೂ ಓದಿ: ಬೆಂಗಳೂರಿಗೆ ಬರಲಿದ್ದಾರೆ ಮೋದಿ ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

     

    ಬಹು ನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಬೆಳಗ್ಗೆ 10:30ಕ್ಕೆ ಬೆಂಗಳೀರಿಗೆ ಆಗಮಿಸಲಿರುವ ಮೋದಿ 3 ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದು, ಇದರಲ್ಲಿ ಬೆಳಗಾವಿಯಿಂದ ಬೆಂಗಳೂರು ರೈಲು ಕೂಡ ಸೇರಿದೆ. ಬಳಿಕ 11:50 ರ ಸುಮಾರಿಗೆ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ

    5,057 ಕೋಟಿ ವೆಚ್ಚದ ಮೆಟ್ರೋ ಹಳದಿ ಮಾರ್ಗ ಇದಾಗಿದ್ದು ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗಿನ ಹಳದಿ ಮಾರ್ಗದಲ್ಲಿ ಹಳದಿ ಮೆಟ್ರೋ ರೈಲು ಸಂಚರಿಸಲು ಸಿದ್ಧವಾಗಿದೆ. ಉದ್ಘಾಟನೆ ಮಾಡಿದ ಬಳಿಕ ರಾಗಿಗುಡ್ಡ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿಯವರೆಗೆ ಮೋದಿ ಮೆಟ್ರೋದಲ್ಲಿ ಸಂಚಾರ ಮಾಡಲಿದ್ದಾರೆ. ಹಳದಿ ಮಾರ್ಗ ಒಟ್ಟು 16 ನಿಲ್ದಾಣಗಳನ್ನು ಒಳಗೊಂಡಿದೆ.

  • ಆತ್ಮಹತ್ಯೆಗಾಗಿ ರೈಲ್ವೆ ಹಳಿ ಮೇಲೆ ಮಲಗಿದ್ದ ವೃದ್ಧನ ರಕ್ಷಣೆ – 30 ಸೆಕೆಂಡ್ ತಡವಾಗಿದ್ರೂ ದೇಹ ಛಿದ್ರ!

    ಆತ್ಮಹತ್ಯೆಗಾಗಿ ರೈಲ್ವೆ ಹಳಿ ಮೇಲೆ ಮಲಗಿದ್ದ ವೃದ್ಧನ ರಕ್ಷಣೆ – 30 ಸೆಕೆಂಡ್ ತಡವಾಗಿದ್ರೂ ದೇಹ ಛಿದ್ರ!

    ದಾವಣಗೆರೆ: ಆತ್ಮಹತ್ಯೆ ಮಾಡಿಕೊಳ್ಳಲು ಬಂದಿದ್ದ ವೃದ್ದನನ್ನು ವ್ಯಕ್ತಿಯೊಬ್ಬರು ರಕ್ಷಣೆ ಮಾಡಿದ ಘಟನೆ ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ಬಳಿ ನಡೆದಿದೆ.

    ದಾವಣಗೆರೆಯ ವಿನಾಯಕ ನಗರದ ವೃದ್ಧ ಕೌಟುಂಬಿಕ ಕಲಹದಿಮದ ಬೇಸತ್ತು, ರೈಲ್ವೆ ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದನ್ನು ಕಂಡ ಸ್ಥಳೀಯರಾದ ವಿರೂಪಾಕ್ಷ ಬೆಳಗುತ್ತಿ ಅವರನ್ನು ರಕ್ಷಿಸಿದ್ದಾರೆ. ವೃದ್ಧನನ್ನು ರಕ್ಷಿಸಿದ 30 ಸೆಕೆಂಡ್‍ನಲ್ಲಿ ರೈಲು ಆ ಮಾರ್ಗದಲ್ಲಿ ಸಂಚರಿಸಿದೆ. ಇದನ್ನೂ ಓದಿ: ಗಿರೀಶ್‌ ಮಟ್ಟಣನವರ್‌, ಮಹೇಶ್‌ ಶೆಟ್ಟಿ ತಿಮರೋಡಿ, ಸಮೀರ್‌ ವಿರುದ್ಧ ಎಫ್‌ಐಆರ್‌ ದಾಖಲು

    ವೃದ್ದನನ್ನು ರಕ್ಷಣೆ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರೂಪಾಕ್ಷ ಬೆಳಗುತ್ತಿಯವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚಿಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಶಿವಮೊಗ್ಗ | ಸೇತುವೆ ಮೇಲೆ ಚಲಿಸುತ್ತಿದ್ದಾಗ ಬೇರ್ಪಟ್ಟ ರೈಲಿನ ಬೋಗಿಗಳು!

  • ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

    ರಾಯಚೂರು: ಸಿಂಧನೂರಿನಿಂದ ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭಿಸಲಾಗಿದ್ದು, ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೆ ಖಾತೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.

    ಸಿಂಧನೂರು ನಗರದಲ್ಲಿನ ರೈಲು ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು, ನರೇಂದ್ರ ಮೋದಿ‌ ಪ್ರಧಾನಿಯಾದ ನಂತರ ರೈಲ್ವೆ ಇಲಾಖೆಯಲ್ಲಿ ಹಲವು ಕ್ರಾಂತಿಕಾರಕ ಕೆಲಸಗಳಾಗಿವೆ ಎಂದು ಬಣ್ಣಿಸಿದರು.

    ಹಲವು ವರ್ಷಗಳ ಕನಸಿನ ರೈಲು ಸಂಚಾರಕ್ಕೆ ಇಂದು ಚಾಲನೆ ಸಿಕ್ಕಿದೆ. ಮಧ್ಯಾಹ್ನ 1:30ಕ್ಕೆ ಸಿಂಧನೂರಿನಿಂದ ಹೊರಟು, ಹುಬ್ಬಳ್ಳಿ ಮೂಲಕ ಮುಂಜಾನೆ 3:55ಕ್ಕೆ ರೈಲು ಬೆಂಗಳೂರು ತಲುಪಲಿದೆ.

  • ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ಚಿಕ್ಕಮಗಳೂರು-ತಿರುಪತಿ ನಡುವೆ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭ

    ಬೆಂಗಳೂರು: ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು (Chikkamagaluru) ನಡುವಿನ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ.

    ಉದ್ಘಾಟನಾ ವಿಶೇಷ ರೈಲು:
    ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು–ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್‌ಪ್ರೆಸ್ ಜುಲೈ 11 (ಶುಕ್ರವಾರ) ರಂದು ಚಲಿಸಲಿದ್ದು, ಮಧ್ಯಾಹ್ನ 12 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 02:30 ಕ್ಕೆ ತಿರುಪತಿಗೆ ತಲುಪಲಿದೆ. ಈ ರೈಲಿಗೆ ಒಟ್ಟು 18 ಎಲ್‌ಹೆಚ್‌ಬಿ ಕೋಚ್‌ಗಳು ಇರುತ್ತವೆ. ಇದನ್ನೂ ಓದಿ: SSLC ಫಲಿತಾಂಶ ಹೆಚ್ಚಳಕ್ಕೆ ಕ್ರಮ – 29 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸಿದ ಶಿಕ್ಷಣ ಇಲಾಖೆ

    ನಿಯಮಿತ ರೈಲು ಸೇವೆಗಳು:
    1. ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 17 (ಗುರುವಾರ)ರಿಂದ ನಿಯಮಿತ ಸೇವೆ ಪ್ರಾರಂಭವಾಗಲಿದೆ.
    2. ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ 2025 ಜುಲೈ 18 (ಶುಕ್ರವಾರ)ರಿಂದ ನಿಯಮಿತ ಸೇವೆ ಆರಂಭವಾಗಲಿದೆ.

    ವೇಳಾಪಟ್ಟಿ ಮತ್ತು ನಿಲ್ದಾಣಗಳು: ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಗುರುವಾರ ರಾತ್ರಿ 9 ಗಂಟೆಗೆ ತಿರುಪತಿಯಿಂದ ಹೊರಟು, ಶುಕ್ರವಾರ ಬೆಳಗ್ಗೆ 10:30 ಕ್ಕೆ ಚಿಕ್ಕಮಗಳೂರಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ಕೆಳಗಿನ ನಿಲ್ದಾಣಗಳಲ್ಲಿ ನಿಲ್ಲಲಿದೆ:
    ಪಕಾಲಾ (21:28/21:30), ಚಿತ್ತೂರು (21:58/22:00), ಕಾಟ್ಪಾಡಿ (23:08/23:10), ಜೋಲಾರಪೇಟೆ (00:28/00:30 – ಶುಕ್ರವಾರ), ಕುಪ್ಪಂ (01:10/01:12), ಬಂಗಾರಪೇಟೆ (01:39/01:41), ವೈಟ್‌ಫೀಲ್ಡ್ (02:10/02:12), ಕೃಷ್ಣರಾಜಪುರಂ (02:23/02:25), ಎಸ್‌ಎಂವಿಟಿ ಬೆಂಗಳೂರು (03:05/03:15), ಚಿಕ್ಕಬಾಣಾವರ (03:50/03:52), ತುಮಕೂರು (04:43/04:45), ತಿಪಟೂರು (05:58/06:00), ಅರಸೀಕೆರೆ (07:30/07:50), ದೇವನೂರು (08:10/08:12), ಕಡೂರು (08:26/08:28), ಬೀರೂರು (08:50/09:10), ಬಿಸಲೇಹಳ್ಳಿ (09:26/09:27), ಹಾಗೂ ಸಖರಾಯಪಟ್ಟಣ (09:39/09:40). ಇದನ್ನೂ ಓದಿ: 2ಎ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ – ತನಿಖೆಗೆ ತಡೆ ನೀಡಲು ಹೈಕೋರ್ಟ್ ನಕಾರ

    ರೈಲು ಸಂಖ್ಯೆ 17424 ಚಿಕ್ಕಮಗಳೂರು – ತಿರುಪತಿ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರತಿ ಶುಕ್ರವಾರ ಸಂಜೆ 17:30 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಶನಿವಾರ ಬೆಳಗ್ಗೆ 07:40 ಕ್ಕೆ ತಿರುಪತಿಗೆ ತಲುಪಲಿದೆ. ಈ ಮಾರ್ಗದಲ್ಲಿ ರೈಲು ಈ ನಿಲ್ದಾಣಗಳಲ್ಲಿ ನಿಲ್ಲಲಿದೆ:

    ಸಖರಾಯಪಟ್ಟಣ (18:04/18:05), ಬಿಸಲೇಹಳ್ಳಿ (18:17/18:18), ಕಡೂರು (18:28/18:30), ಬೀರೂರು (18:45/19:05), ದೇವನೂರು (19:25/19:27), ಅರಸೀಕೆರೆ (19:50/20:10), ತಿಪಟೂರು (20:30/20:32), ತುಮಕೂರು (21:18/21:20), ಚಿಕ್ಕಬಾಣಾವರ (22:00/22:02), ಎಸ್‌ಎಂವಿಟಿ ಬೆಂಗಳೂರು (00:15/00:30 – ಶನಿವಾರ), ಕೃಷ್ಣರಾಜಪುರಂ (00:40/00:42), ವೈಟ್‌ಫೀಲ್ಡ್ (00:51/00:53), ಬಂಗಾರಪೇಟೆ (01:20/01:25), ಕುಪ್ಪಂ (01:55/01:57), ಜೋಲಾರಪೇಟೆ (03:25/03:30), ಕಟ್ಪಾಡಿ (05:00/05:10), ಚಿತ್ತೂರು (05:43/05:45), ಹಾಗೂ ಪಕಾಲಾ (06:13/06:15).

    ಕೋಚ್ ಸಂಯೋಜನೆ: ಈ ರೈಲುಗಳಲ್ಲಿ ಒಟ್ಟು 18 ಎಲ್‌ಹೆಚ್‌ಬಿ ಕೋಚ್‌ಗಳು ಇರುತ್ತವೆ. ಇವುಗಳಲ್ಲಿ:
    2 ಎಸಿ ಟು ಟೈಯರ್ ಕೋಚ್‌,
    4 ಎಸಿ ತ್ರಿ ಟೇಯರ್ ಕೋಚ್, 6 ಸ್ಲೀಪರ್ ಕ್ಲಾಸ್ ಕೋಚ್‌,
    4 ಸಾಮಾನ್ಯ ದ್ವಿತೀಯ ಶ್ರೇಣಿ ಕೋಚ್‌, 1 ದ್ವಿತೀಯ ಶ್ರೇಣಿಯ ಸಾಮಾನು ಮತ್ತು ಬ್ರೇಕ್ ವ್ಯಾನ್ – ದಿವ್ಯಾಂಗ ಜನರಿಗಾಗಿ ವಿಶಿಷ್ಟ ವಿಭಾಗ,
    1 ಸಾಮಾನು/ಜನರೇಟರ್/ಬ್ರೇಕ್ ವ್ಯಾನ್ ಕೋಚ್.

    ಈ ಹೊಸ ಸಾಪ್ತಾಹಿಕ ಎಕ್ಸ್‌ಪ್ರೆಸ್ ಸೇವೆಯು ತಿರುಪತಿಯ ದೇವಾಲಯ ನಗರದ ಮತ್ತು ಚಿಕ್ಕಮಗಳೂರಿನ ಕಾಫಿ ನಾಡಿನ ಪ್ರದೇಶದ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಅನುಕೂಲಕರ ಸಾರಿಗೆ ಆಯ್ಕೆಯಾಗಿ ಸೇವೆ ನೀಡಲಿದೆ. ಜೊತೆಗೆ, ಮಧ್ಯಂತರ ಪಟ್ಟಣಗಳು ಹಾಗೂ ಜಿಲ್ಲೆಗಳ ಜನತೆಗೂ ಇದರಿಂದ ಲಾಭವಾಗಲಿದೆ.

  • ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರಾಂಚಿ: ಕಾಡಾನೆಯೊಂದು (Elephant) ರೈಲ್ವೆ ಹಳಿಗಳ ಮೇಲೆ ಮರಿಗೆ ಜನ್ಮ ನೀಡಿದ ಪರಿಣಾಮ ಜಾರ್ಖಂಡ್‌ನಲ್ಲಿ (Jarkhand) ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸ್ಥಗಿತಗೊಳಿಸಿದ ಅಪರೂಪದ ಘಟನೆ ನಡೆದಿದೆ.

    ಆನೆ ಮತ್ತು ಅದರ ಮರಿ ಸುರಕ್ಷಿತವಾಗಿವೆ. ಈ ಅಪರೂಪದ ದೃಶ್ಯವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ಈ ವೀಡಿಯೊವನ್ನು X ನಲ್ಲಿ ಹಂಚಿಕೊಂಡಿದ್ದು, ಇದು ಕರುಣೆಗೆ ಉದಾಹರಣೆ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಕಳ್ಳ ಸಂಬಂಧ ಆರೋಪ – ಯುವಕನನ್ನ ಥಳಿಸಿ ಚಿಕ್ಕಮ್ಮನೊಂದಿಗೆ ಮದುವೆ ಮಾಡಿಸಿದ ಗ್ಯಾಂಗ್‌

    ಮಾನವ-ಪ್ರಾಣಿ ಸಂಘರ್ಷದ ಸುದ್ದಿಗಳ ಹೊರತಾಗಿ, ಮಾನವ-ಪ್ರಾಣಿಗಳ ಸಾಮರಸ್ಯದ ಅಸ್ತಿತ್ವದ ಈ ಉದಾಹರಣೆಯನ್ನು ಹಂಚಿಕೊಳ್ಳಲು ಸಂತೋಷವಾಗಿದೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ.

    ಇಂತಹ ಹೃದಯಸ್ಪರ್ಶಿ ಫಲಿತಾಂಶಗಳನ್ನು ನೀಡುವ ಪ್ರಯತ್ನಗಳನ್ನು ನೋಡುವುದು ಸಂತೋಷಕರವಾಗಿದೆ. ಆನೆ ತನ್ನ ಮರಿಗೆ ಜನ್ಮ ನೀಡಲು ಸಹಾಯ ಮಾಡಿದ ಜಾರ್ಖಂಡ್ ಅರಣ್ಯ ಅಧಿಕಾರಿಗಳಿಗೆ ವಿಶೇಷ ಪ್ರಶಂಸೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಳಸಿದ ದಾಲ್ ಬಡಿಸಿದ್ದಕ್ಕೆ ಕ್ಯಾಂಟೀನ್ ಮಾಲೀಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಶಾಸಕ

    ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (MoEFCC), ರೈಲ್ವೆ ಸಚಿವಾಲಯದ ಸಮನ್ವಯದೊಂದಿಗೆ ಭಾರತದಾದ್ಯಂತ 3,500 ಕಿಮೀ ರೈಲ್ವೆ ಹಳಿಗಳನ್ನು ಸಮೀಕ್ಷೆ ಮಾಡಿದ ನಂತರ 110 ಕ್ಕೂ ಹೆಚ್ಚು ಸೂಕ್ಷ್ಮ ವನ್ಯಜೀವಿ ವಲಯಗಳನ್ನು ಗುರುತಿಸಿದೆ ಎಂದು ಯಾದವ್ ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ಈ ಉಪಕ್ರಮವು ಪ್ರಾಣಿಗಳಿಗೆ ಸಂಬಂಧಿಸಿದ ಅಪಘಾತಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಹಳಿಗಳು ಹೆಚ್ಚಾಗಿ ವನ್ಯಜೀವಿ ಕಾರಿಡಾರ್‌ಗಳೊಂದಿಗೆ ಛೇದಿಸುವ ಅರಣ್ಯ ಪ್ರದೇಶಗಳಲ್ಲಿವೆ.

  • ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

    ಶಾಲಾ ವಾಹನಕ್ಕೆ ರೈಲು ಡಿಕ್ಕಿ – 3 ವಿದ್ಯಾರ್ಥಿಗಳು ಸಾವು, ಹಲವರಿಗೆ ಗಾಯ

    – ರೈಲು ಬರುವಾಗ ಮುಚ್ಚಿರದ ಗೇಟ್‌?

    ಚೆನ್ನೈ: ಶಾಲಾ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ

    ಮಂಗಳವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಶಾಲಾ ಬಸ್‌ ಚಾಲಕ ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಯತ್ನಿಸಿದ್ದು, ಈ ವೇಳೆ ಅಪಘಾತ ಸಂಭವಿಸಿದೆ. ರೈಲು ಡಿಕ್ಕಿಯಾದ ರಭಸಕ್ಕೆ ಬಸ್‌ ನಜ್ಜುಗುಜ್ಜಾಗಿದ್ದು, ಹಲವಾರು ಅಡಿಗಳಷ್ಟು ದೂರ ಹೋಗಿ ಬಿದ್ದಿದೆ. ಇದನ್ನೂ ಓದಿ: ರೈಲು ದುರಂತಕ್ಕೆ ಸಂಚು ಹೆಚ್ಚಾಗುತ್ತಿದ್ದಂತೆ 75 ಲಕ್ಷ AI ಕ್ಯಾಮೆರಾ ಖರೀದಿಗೆ ಮುಂದಾದ ಇಲಾಖೆ

    ಈ ಘಟನೆಯ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕಿದ್ದು, ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ರೈಲ್ವೇ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ನಿದ್ರಿಸುತ್ತಿದ್ದ. ಸಮಯಕ್ಕೆ ಸರಿಯಾಗಿ ಗೇಟ್ ಮುಚ್ಚದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಆರೋಪ ಮಾಡಿದ್ದಾರೆ.

    ಈ ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನೂ ಹೆಚ್ಚಿನ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಆಂಧ್ರದಲ್ಲಿ ರೈಲು ದುರಂತ – 12 ರೈಲುಗಳ ಸಂಚಾರ ರದ್ದು