Tag: train derailment

  • ಸನ್ಮಾನಕ್ಕಾಗಿ ತಾವೇ ರೈಲು ಹಳಿಯಿಂದ ಕ್ಲಿಪ್, ಫಿಶ್ ಪ್ಲೇಟ್ ಕಿತ್ತಿದ್ದ ಮೂವರು ರೈಲ್ವೇ ಸಿಬ್ಬಂದಿ ಬಂಧನ

    ಸನ್ಮಾನಕ್ಕಾಗಿ ತಾವೇ ರೈಲು ಹಳಿಯಿಂದ ಕ್ಲಿಪ್, ಫಿಶ್ ಪ್ಲೇಟ್ ಕಿತ್ತಿದ್ದ ಮೂವರು ರೈಲ್ವೇ ಸಿಬ್ಬಂದಿ ಬಂಧನ

    ಗಾಂಧಿನಗರ: ಅಪಘಾತ ತಪ್ಪಿಸಿ ಪ್ರಶಂಸೆ ಪಡೆಯುವ ಉದ್ದೇಶಕ್ಕಾಗಿ ರೈಲು ಹಳಿತಪ್ಪಿಸುವ ಸಂಚು ರೂಪಿಸಿದ್ದಕ್ಕಾಗಿ ಮೂವರು ರೈಲ್ವೇ ಸಿಬ್ಬಂದಿಯನ್ನು ಬಂಧಿಸಿರುವ ಘಟನೆ ಸೂರತ್ (Surat) ಜಿಲ್ಲೆಯ ಕಿಮ್ ಬಳಿ ನಡೆದಿದೆ.

    ಅಪಘಾತ ತಪ್ಪಿಸಿ ಪ್ರಶಂಸೆ ಪಡೆಯುವ ಉದ್ದೇಶದಿಂದ ಫಿಶ್ ಪ್ಲೇಟ್‌ಗಳು (Fish Plates) ಮತ್ತು ಇತರ ಭಾಗಗಳನ್ನು ತೆಗೆದು ಮತ್ತೆ ಅಳವಡಿಸಿರುವುದು ಗಮನಕ್ಕೆ ಬಂದಿದ್ದು, ರೈಲ್ವೆ ಸಿಬ್ಬಂದಿಗಳಾದ ಸುಭಾಷ್ ಪೊದಾರ್, ಮನೀಶ್ ಮಿಸ್ತ್ರಿ, ಶುಭಂ ಜಯಸ್ವಾಲ್ ಎಂಬುವವರನ್ನು ಬಂಧಿಸಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ಬಾಡಿಗೆಗಿದ್ದ ಮಹಿಳೆಯ ಮನೆಯ ಬಾತ್‍ರೂಮ್, ಬೆಡ್‍ರೂಮ್‍ನಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ ಕಾಮುಕ ಅರೆಸ್ಟ್

    ಮೂವರ ಸಿಬ್ಬಂದಿಗಳನ್ನು ತನಿಖೆ ನಡೆಸಿದಾಗ ಬೆಳಗಿನ ಜಾವ 5:15ರ ಸುಮಾರಿಗೆ ಕಿಮ್ ಮತ್ತು ಕೊಸಾಂಬಾ ಗ್ರಾಮಗಳ ನಡುವಿನ ಹಳಿಯ ಬಳಿ ಮೂವರು ಓಡಿ ಹೋಗುವುದನ್ನು ಗಮನಿಸಿದ್ದೇವೆ. ಜೊತೆಗೆ ರೈಲು ಹಳಿಯಲ್ಲಿ 71 ಎಲಾಸ್ಟಿಕ್ ರೈಲ್ ಕ್ಲಿಪ್ ಕೀಗಳು (Elastic Rail Clip Keys) ಮತ್ತು ಎರಡು ಫಿಶ್ ಪ್ಲೇಟ್‌ಗಳನ್ನು ತೆಗೆದುಹಾಕಲಾಗಿರುವುದು ಕಂಡುಬಂದಿದೆ ಹಾಗೂ ಅದಾದ 25 ನಿಮಿಷಗಳಲ್ಲಿ ಅವುಗಳು ಮತ್ತೆ ಅಳವಡಿಸಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.

    ಸೂರತ್ ಎಸ್ಪಿ ಹಿತೇಶ್ ಜೋಯ್ಸರ್ ಮಾತನಾಡಿ, ಇಷ್ಟು ಕಡಿಮೆ ಅವಧಿಯಲ್ಲಿ ಅಳವಡಿಸಿರುವುದು ಅನುಮಾನ ಉಂಟು ಮಾಡಿತ್ತು. ಬಳಿಕ ಮೂವರ ಫೋನ್‌ಗಳನ್ನು ಪರಿಶೀಲಿಸಿದಾಗ ಫೋನ್‌ನ ಬಿನ್‌ನಲ್ಲಿ ತೆಗೆದ ಭಾಗಗಳ ಕೆಲವು ಫೋಟೋಗಳು ಮತ್ತು ವೀಡಿಯೊಗಳು ಲಭ್ಯವಾಗಿದೆ. ಫೋಟೋಗಳು ರಾತ್ರಿ 2 ರಿಂದ 3 ನಡುವೆ ತೆಗೆದಿರುವುದು ಗೊತ್ತಾಗಿದೆ. ಇದನ್ನು ಪ್ರಶ್ನಿಸಿದಾಗ ವಿವರಣೆ ಅಸಾಧ್ಯವಾದಾಗ ಅವರು ಭಾಗಿಯಾಗಿರುವುದು ಅನುಮಾನ ಉಂಟು ಮಾಡಿತ್ತು. ಮತ್ತಷ್ಟು ಪ್ರಶ್ನೆ ಮಾಡಿದಾಗ ನಿಜವಾದ ವಿವರ ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

    ಹಳಿತಪ್ಪಿಸುವ ಯತ್ನದಂತೆ ತೋರಲು ಹಳಿಗಳ ಭಾಗಗಳನ್ನು ತೆಗೆದಿದ್ದಾರೆ. ಜೊತೆಗೆ ಅವುಗಳ ವೀಡಿಯೊ ಮತ್ತು ಫೋಟೋವನ್ನು ತೆಗೆದುಕೊಂಡಿದ್ದಾರೆ. ಅಪಘಾತವನ್ನು ತಪ್ಪಿಸಲು ಪ್ರಶಂಸೆ ಪಡೆಯುವ ಪ್ರಯತ್ನದಲ್ಲಿ ತೆಗೆದಿದ್ದ ಹಳಿ ಭಾಗಗಳನ್ನು ಮತ್ತೆ ಅಳವಡಿಸಿದ್ದು, ತನಿಖೆಯ ವೇಳೆ ಕಂಡು ಬಂದಿದೆ ಎಂದು ತಿಳಿಸಿದರು.

    ಸದ್ಯ ಪೊಲೀಸರು ಪ್ರಕರಣವನ್ನು ವಿಶೇಷ ಕಾರ್ಯಾಚರಣೆ ತಂಡಕ್ಕೆ ತನಿಖೆಯನ್ನು ಹಸ್ತಾಂತರಿಸಿದ್ದಾರೆ. ಪೊಲೀಸರು ಆರೋಪಿಯನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ: ‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

  • ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ದೂದ್ ಸಾಗರ್ ಬಳಿ ಹಳಿ ತಪ್ಪಿದ ರೈಲು – ಮಾರ್ಗ ಬದಲು

    ಬೆಳಗಾವಿ: ವಾಸ್ಕೋದಿಂದ ಬಳ್ಳಾರಿಗೆ (Ballary) ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಗೂಡ್ಸ್ ರೈಲಿನ (Goods Train) ವ್ಯಾಗನ್ ಗುರುವಾರ ಮಧ್ಯಾಹ್ನ ದೂದ್ ಸಾಗರ್ (Dudhsagar) ಬಳಿ ಹಳಿತಪ್ಪಿದ್ದು, ಕೆಲವು ರೈಲುಗಳು ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಕೆಲವೊಂದನ್ನು ಸ್ಥಗಿತಗೊಳಿಸಲಾಗಿದೆ.

    ಹುಬ್ಬಳ್ಳಿ ವಿಭಾಗದ ಸೋನಾಲಿಯಂ ಮತ್ತು ದೂದ್ ಸಾಗರ ನಿಲ್ದಾಣಗಳ ನಡುವೆ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಗೂಡ್ಸ್ ರೈಲಿನ ವ್ಯಾಗನ್ ಹಳಿತಪ್ಪಿದೆ.ಇದನ್ನೂ ಓದಿ: ಪತಿಯಿಂದಲೇ ಮಿಸ್ ಸ್ವಿಜರ್ಲೆಂಡ್ ಹತ್ಯೆ: ಕೊಲೆ ಬಳಿಕ ಬ್ಲೆಂಡರ್ ಬಳಸಿ ಮೃತದೇಹ ಪೀಸ್ ಪೀಸ್

    ಈ ಘಟನೆಯಿಂದಾಗಿ ಮಧ್ಯಾಹ್ನ ಗೋವಾಗೆ ತೆರಳುತ್ತಿದ್ದ ಅಮರಾವತಿ ಎಕ್ಸ್ಪ್ರೆಸ್ (Amaravati Express) ರೈಲು ಕರಂಜೋಳ್‌ವರೆಗೆ ತೆರಳಿ ಪುನಃ ಲೋಂಡಾವರೆಗೆ ವಾಪಸ್ ತಂದು ಪ್ರಯಾಣಿಕರನ್ನು ಅಲ್ಲಿಯೇ ಬಿಟ್ಟು ಬಸ್ ಮೂಲಕ ತೆರಳಲು ವ್ಯವಸ್ಥೆ ಮಾಡಿದೆ ಎನ್ನಲಾಗಿದೆ.

    ಇನ್ನು ರೈಲು ಸಂಖ್ಯೆ 12779 ವಾಸ್ಕೋ ಡ ಗಾಮಾ – ಹಜರತ್ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣವನ್ನು ಮಡಗಾಂವ್, ರೋಹಾ, ಪನ್ವೆಲ್, ಪುಣೆ, ದೌಂಡ್ ಕಾರ್ಡ್ ಲೈನ್ ಮತ್ತು ಮನ್ಮಾಡ್ ನಿಲ್ದಾಣಗಳ ಮೂಲಕ ತಿರುಗಿಸಲಾಗಿದೆ.

    18048 ವಾಸ್ಕೋ ಡ ಗಾಮಾ (Vasco da Gama)- ಶಾಲಿಮಾರ್ ಎಕ್ಸ್ಪ್ರೆಸ್ ಪ್ರಯಾಣವು ವಾಸ್ಕೋ ಡ ಗಾಮಾ ಬದಲಿಗೆ ಎಸ್‌ಎಸ್‌ಎಸ್ ಹುಬ್ಬಳ್ಳಿಯಿಂದ ಹೊರಡಲಿದ್ದು, ವಾಸ್ಕೋ ಡ ಗಾಮಾ – ಎಸ್‌ಎಸ್‌ಎಸ್ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ.ಇದನ್ನೂ ಓದಿ: Nagamangala Violence | 52 ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

    ಪ್ರಯಾಣಿಕರ ಸೌಕರ್ಯವನ್ನು ಖಚಿತಪಡಿಸಿಕೊಳ್ಳಲು, ಲೋಂಡಾ ನಿಲ್ದಾಣದಲ್ಲಿ ರೈಲು ಸಂಖ್ಯೆ 18047ರ ಅಂದಾಜು 1,100 ಪ್ರಯಾಣಿಕರಿಗೆ ಆಹಾರ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿದೆ. ಲೋಂಡಾದಲ್ಲಿಯೇ ಸಿಲುಕಿರುವ ಪ್ರಯಾಣಿಕರನ್ನು ಕರೆದೊಯ್ಯಲು 25 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣ ಪುನಃಸ್ಥಾಪನೆ ತ್ವರಿತಗೊಳಿಸಲು ಅಪಘಾತ ಪರಿಹಾರ ರೈಲನ್ನು ವಾಸ್ಕೋ ಡ ಗಾಮಾದಿಂದ ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

  • ಭಾರತೀಯ ರೈಲ್ವೆ ಮೇಲೆ ಆಗಂತುಕರ ಕಣ್ಣು – ಆಗಸ್ಟ್ ತಿಂಗಳಲ್ಲೇ 18 ಬಾರಿ ರೈಲು ಹಳಿ ತಪ್ಪಿಸಲು ಯತ್ನ

    ಭಾರತೀಯ ರೈಲ್ವೆ ಮೇಲೆ ಆಗಂತುಕರ ಕಣ್ಣು – ಆಗಸ್ಟ್ ತಿಂಗಳಲ್ಲೇ 18 ಬಾರಿ ರೈಲು ಹಳಿ ತಪ್ಪಿಸಲು ಯತ್ನ

    – ಕಳೆದೊಂದು ವರ್ಷದಲ್ಲಿ 24 ಪ್ರಕರಣಗಳು

    ನವದೆಹಲಿ: ಆಗಸ್ಟ್ ತಿಂಗಳು ಒಂದರಲ್ಲೇ ದೇಶದಾದ್ಯಂತ ರೈಲುಗಳ  ಹಳಿ ತಪ್ಪಿಸಲು (Train Derailment) 18 ಪ್ರಯತ್ನಗಳು ನಡೆದಿವೆ ಎಂದು ಭಾರತೀಯ ರೈಲ್ವೇ ಅಧಿಕಾರಿಗಳು (Railway Department) ಹೇಳಿದ್ದಾರೆ. ಕಾನ್ಪುರ ಮತ್ತು ಅಜ್ಮೀರ್‌ನಲ್ಲಿ ಭಾನುವಾರ ಎರಡು ಪ್ರಯತ್ನಗಳು ವರದಿಯಾಗಿದ್ದು, ಜೂನ್ 2023ರಿಂದ ಇಲ್ಲಿಯವರೆಗೆ ಇಂತಹ 24 ಘಟನೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.

    ಎಲ್‌ಪಿಜಿ ಸಿಲಿಂಡರ್‌ಗಳು, ಬೈಸಿಕಲ್‌ಗಳು, ಕಬ್ಬಿಣದ ರಾಡ್‌ಗಳು ಮತ್ತು ಸಿಮೆಂಟ್ ಬ್ಲಾಕ್‌ಗಳು ಸೇರಿದಂತೆ ರೈಲು ಹಳಿಗಳ ಮೇಲೆ ಇರಿಸಲಾದ ವಿವಿಧ ರೀತಿಯ ವಸ್ತುಗಳನ್ನು ಪತ್ತೆ ಮಾಡಲಾಗಿದೆ. ರೈಲ್ವೆಯ ವರದಿಯ ಪ್ರಕಾರ, 18 ಘಟನೆಗಳಲ್ಲಿ 15 ಆಗಸ್ಟ್‌ನಲ್ಲಿ ಮತ್ತು ಮೂರು ಸೆಪ್ಟೆಂಬರ್‌ನಲ್ಲಿ ಸಂಭವಿಸಿವೆ. ಘಟನೆಗಳಲ್ಲಿ ಹೆಚ್ಚಿನವು ಉತ್ತರ ಪ್ರದೇಶದಲ್ಲಿ ನಡೆದಿದ್ದು, ಉಳಿದವು ಪಂಜಾಬ್, ಜಾರ್ಖಂಡ್, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ ಮತ್ತು ತೆಲಂಗಾಣದಿಂದ ವರದಿಯಾಗಿದೆ. ಇದನ್ನೂ ಓದಿ: ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚಿಸಿ: ಅಶೋಕ್ ಆಗ್ರಹ

    ಕಳೆದ ಆಗಸ್ಟ್‌ನಲ್ಲಿ ಟ್ರ‍್ಯಾಕ್‌ನಲ್ಲಿ ಇರಿಸಲಾದ ವಸ್ತುವಿಗೆ ಎಂಜಿನ್ ಡಿಕ್ಕಿ ಹೊಡೆದ ಪರಿಣಾಮ ಅಹಮದಾಬಾದ್‌ಗೆ ತೆರಳುತ್ತಿದ್ದ ಸಬರಮತಿ ಎಕ್ಸ್‌ಪ್ರೆಸ್ ಪ್ಯಾಸೆಂಜರ್ ರೈಲಿನ 20 ಬೋಗಿಗಳು ಕಾನ್ಪುರದ ಗೋವಿಂದಪುರಿ ನಿಲ್ದಾಣದ ಬಳಿ ಹಳಿತಪ್ಪಿದವು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇದನ್ನೂ ಓದಿ: ನಿಯಂತ್ರಣಕ್ಕೆ ಬಾರದ ಹಿಂಸಾಚಾರ – ಮಣಿಪುರದ ಮೂರು ಜಿಲ್ಲೆಗಳಲ್ಲಿ ಕರ್ಫ್ಯೂ

    ಈ ಭಾನುವಾರ ಎರಡು ಹಳಿ ತಪ್ಪಿಸುವ ಪ್ರಯತ್ನಗಳು ನಡೆದಿವೆ. ಕಾನ್ಪುರದಲ್ಲಿ ಕಾಳಿಂದಿ ಎಕ್ಸ್ಪ್ರೆಸ್ ಪ್ಯಾಸೆಂಜರ್ ರೈಲು ಹಳಿ ಮೇಲೆ ಇರಿಸಲಾಗಿದ್ದ ಎಲ್‌ಪಿಜಿ ಸಿಲಿಂಡರ್‌ಗೆ ಡಿಕ್ಕಿ ಹೊಡೆದು ನಿಂತಿತು. ಟ್ರ‍್ಯಾಕ್‌ನಲ್ಲಿ ಸಿಲಿಂಡರ್, ಪೆಟ್ರೋಲ್ ಬಾಟಲಿ, ಬೆಂಕಿಕಡ್ಡಿ ಸೇರಿದಂತೆ ಇತರ ಅನುಮಾನಾಸ್ಪದ ವಸ್ತುಗಳನ್ನು ಗುರುತಿಸಿದ ನಂತರ ಲೊಕೋ ಪೈಲಟ್ ಬ್ರೇಕ್ ಹಾಕಿದ್ದರು. ಕಾನ್ಪುರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಈವರೆಗೆ ಆರು ಮಂದಿಯನ್ನು ಬಂಧಿಸಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ ರಾಜಸ್ಥಾನದ ಅಜ್ಮೀರ್‌ನಲ್ಲಿ ಸರಕು ರೈಲು ಸಂಚರಿಸುತ್ತಿದ್ದು, ಹಳಿಗಳ ಮೇಲೆ ತಲಾ 70 ಕೆಜಿ ತೂಕದ ಎರಡು ಸಿಮೆಂಟ್ ಬ್ಲಾಕ್‌ಗಳನ್ನು ಇರಿಸಲಾಗಿತ್ತು. ಇದಕ್ಕೆ ಡಿಕ್ಕಿ ಹೊಡೆದ ನಂತರ ರೈಲು ಯಾವುದೇ ಹಾನಿಯಾಗದೆ ತನ್ನ ಪ್ರಯಾಣವನ್ನು ಮುಂದುವರಿಸಿದೆ. ಇದನ್ನೂ ಓದಿ: ವಯನಾಡು ದುರಂತದ ಬಳಿಕ ಸರ್ಕಾರ ಅಲರ್ಟ್- ಕಾಫಿನಾಡಲ್ಲಿ 40 ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ನೋಟಿಸ್

    ಸೆಪ್ಟೆಂಬರ್ 4 ರಂದು ಇದೇ ರೀತಿಯ ಘಟನೆಯಲ್ಲಿ, ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ರೈಲು ಹಳಿ ಮೇಲೆ ಬೃಹತ್ ಕಲ್ಲನ್ನು ಹಾಕಿರುವುದನ್ನು ಟವರ್ ವ್ಯಾಗನ್‌ನ ಲೋಕೋ ಪೈಲಟ್‌ಗಳು ಗಮನಿಸಿದರು ಮತ್ತು ಅದಕ್ಕೆ ಡಿಕ್ಕಿಯಾಗುವ ಮೊದಲೇ ರೈಲು ನಿಲ್ಲಿಸಿದರು. ಘಟನೆ ಕುರಿತು ರೈಲ್ವೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ. 2023ರಲ್ಲಿ ಒಡಿಶಾ ಮತ್ತು ರಾಜಸ್ಥಾನದಲ್ಲಿ ಕ್ರಮವಾಗಿ ಜೂನ್ ಮತ್ತು ಅಕ್ಟೋಬರ್‌ನಲ್ಲಿ ಎರಡು ಹಳಿ ತಪ್ಪಿಸುವ ಪ್ರಯತ್ನಗಳು ನಡೆದಿವೆ. ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ರೈಲ್ವೆ ಕ್ರಾಸಿಂಗ್‌ನಲ್ಲಿ ಮರದ ದಿಮ್ಮಿ ಇಡಲಾಗಿದ್ದು, ರಾಜಸ್ಥಾನದ ಚಿತ್ತೋರ್‌ಗಢದಲ್ಲಿ ಹಳಿಯಲ್ಲಿ ಕಲ್ಲು ಪತ್ತೆಯಾಗಿತ್ತು. ಇದನ್ನೂ ಓದಿ: ಸ್ಫೋಟಕ್ಕೆ ಉಗ್ರರ ಸಂಚು – ಮಲ್ಲೇಶ್ವರ ಬಿಜೆಪಿ ಕಚೇರಿಗೆ ಪೊಲೀಸ್‌ ಭದ್ರತೆ ಹೆಚ್ಚಳ

  • ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ- ಹಳಿ ತಪ್ಪಿದ ಶಕ್ತಿಪುಂಜ್ ಎಕ್ಸ್ ಪ್ರೆಸ್

    ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ- ಹಳಿ ತಪ್ಪಿದ ಶಕ್ತಿಪುಂಜ್ ಎಕ್ಸ್ ಪ್ರೆಸ್

     

    ಲಕ್ನೋ: ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ಸುರಂತ ಸಂಭವಿಸಿದೆ. ಹೌರಾ-ಜಬಲ್‍ಪುರ್-ಶಕ್ತಿಪುಂಜ್ ಎಕ್ಸ್ ಪ್ರೆಸ್‍ನ 7 ಬೋಗಿಗಳು ಹಳಿ ತಪ್ಪಿವೆ.

    ಇಂದು ಬೆಳಿಗ್ಗೆ 6.30ರ ಸುಮಾರಿಗೆ ಸೋನ್‍ಭದ್ರಾದ ಓಬ್ರಾ ಹಾಗೂ ಪಾಫ್ರಾಕುಂದ್ ನಿಲ್ದಾಣಗಳ ಮಧ್ಯೆ ಈ ಘಟನೆ ನಡೆದಿದೆ. ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ಯಾವುದೇ ವರದಿಯಾಗಿಲ್ಲ ಎಂದು ಭಾರತೀಯ ರೈಲ್ವೆಯ ವಕ್ತಾರರು ತಿಳಿಸಿದ್ದಾರೆ.

    ಕಳೆದ 20 ದಿನಗಳಲ್ಲಿ ನಡೆದ ನಾಲ್ಕನೇ ರೈಲು ದುರಂತ ಇದಾಗಿದೆ. ಘಟನೆಯಿಂದಾಗ ರೈಲು ಸಂಚಾರ ವ್ಯತ್ಯಯವಾಗಿದೆ.

    ಇಂದು ಬೆಳಿಗ್ಗೆ 6.25ಕ್ಕೆ ಈ ಘಟನೆ ನಡೆದಿದೆ. ಘಟನಾ ಸ್ಥಳವನ್ನ ಈಗಾಗಲೇ ತೆರವುಗೊಳಿಸಿದ್ದೇವೆ ಎಂದು ರೈಲ್ವೆ ಸಚಿವಾಲಯದ ವಕ್ತಾರರಾದ ಅನಿಲ್ ಸಕ್ಸೇನಾ ಹೇಳಿದ್ದಾರೆ.

    ಹಳಿ ತಿಪ್ಪಿದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು 7.28ರ ವೇಳೆಗೆ ಉಳಿದ ಬೋಗಿಗಳಿಗೆ ಶಿಫ್ಟ್ ಮಡಲಾಗಿದೆ. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

    ರೈಲು ಗಂಟೆಗೆ 40 ಕಿ.ಮೀ ವೇಗದಲ್ಲಿ ಹೋಗುತ್ತಿದ್ದರಿಂದ ಯಾವುದೇ ಹಾನಿಯಾಗಿಲ್ಲ ಎಂಧು ಅಧಿಕಾರಿಗಳು ಹೇಳಿದ್ದಾರೆ.

    ಆಗಸ್ಟ್ 29ರಂದು ನಾಗ್ಪುರ ಮುಂಬೈ ದುರಂತೋ ಎಕ್ಸ್ ಪ್ರೆಸ್‍ನ 9 ಬೋಗಿಗಳು ಮಹಾರಾಷ್ಟ್ರದ ಕಲ್ಯಾಣ್‍ನ ತಿತ್ವಾಲಾ ನಿಲ್ದಾಣದ ಬಳಿ ಹಳಿ ತಪ್ಪಿದ್ದವು. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿರಲಿಲ್ಲ.

    ಆಗಸ್ಟ್ 23ರಂದು ಕೈಫಿಯಾತ್ ಎಕ್ಸ್ ಪ್ರೆಸ್ ಹಳಿ ತಪ್ಪಿತ್ತು. ಈ ಘಟನೆಯಲ್ಲಿ 80 ಜನರಿಗೆ ಗಾಯಗಳಾಗಿತ್ತು. ಆಗಸ್ಟ್ 19ರಂದು ಉತ್ಕಲ್ ಎಕ್ಸ್ ಪ್ರೆಸ್ ನ 14 ಬೋಗಿಗಳು ಹಳಿ ತಪ್ಪಿ 24 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 156 ಮಂದಿ ಗಾಯಗೊಂಡಿದ್ದರು. ಈ ಎರಡೂ ಘಟನೆಗಳು ಉತ್ತರಪ್ರದೇಶದಲ್ಲಿ ನಡೆದಿತ್ತು.

  • ಹಳಿ ತಪ್ಪಿದ ಮುಂಬೈ ಸಬ್ ಅರ್ಬನ್ ರೈಲು- ಐವರಿಗೆ ಗಾಯ

    ಹಳಿ ತಪ್ಪಿದ ಮುಂಬೈ ಸಬ್ ಅರ್ಬನ್ ರೈಲು- ಐವರಿಗೆ ಗಾಯ

    ಮುಂಬೈ: ಕಳೆದ ಒಂದು ವಾರದಲ್ಲಿ ಮೂರನೇ ಬಾರಿಗೆ ರೈಲು ಹಳಿ ತಪ್ಪಿರೋ ಘಟನೆ ನಡೆದಿದೆ. ಇಂದು ಬೆಳಿಗ್ಗೆ ಮುಂಬೈನ ಮಹೀಮ್ ರೈಲ್ವೆ ನಿಲ್ದಾಣದ ಬಳಿ ಸಬ್ ಅರ್ಬನ್ ರೈಲಿನ 4 ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ 5 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಪಶ್ಚಿಮ ರೈಲ್ವೆ ಹೇಳಿದೆ.

    ರೈಲು ಹಳಿ ತಪ್ಪಿದ ಪರಿಣಾಮ ವದಾಲಾ- ಅಂಧೇರಿ ಭಾಗದಲ್ಲಿ ರೈಲು ಸಂಚಾರಕ್ಕೆ ತೊಂದರೆಯಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್(ಸಿಎಸ್‍ಎಮ್‍ಟಿ)ನಿಂದ ಹೊರಟ ರೈಲು ಅಂಧೇರಿ ನಿಲ್ದಾಣಕ್ಕೆ ಹೋಗುವ ಮಾರ್ಗ ಮಧ್ಯೆ ತೊಂದರೆ ಕಾಣಿಸಿಕೊಂಡಿತ್ತು. ರೈಲು ಚಾಲನೆಗೆ ಪವರ್ ಪೂರೈಕೆ ಮಾಡುವ ಓವರ್‍ಹೆಡ್ ಉಪಕರಣದಲ್ಲಿ ದೋಷ ಕಾಣಿಸಿಕೊಂಡಿತ್ತು. ಈ ಕಾರಣದಿಂದ ರೈಲನ್ನು ಮತ್ತೊಂದು ಟ್ರ್ಯಾಕ್‍ಗೆ ವರ್ಗಾಯಿಸಬೇಕಿತ್ತು. ಪ್ಲಾಟ್‍ಫಾರ್ಮ್‍ನಲ್ಲಿ ಸುಮಾರು 9.55ರ ವೇಳೆಯಲ್ಲಿ ರಿವರ್ಸ್ ತೆಗೆದುಕೊಳ್ಳುತ್ತಿದ್ದಾಗ ರೈಲಿನ ಮುಂದಿನ 4 ಬೋಗಿಗಳು ಹಳಿ ತಪ್ಪಿತು ಎಂದು ಪಶ್ಚಿಮ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ರವಿಂದರ್ ಭಟ್ಕರ್ ಹೇಳಿದ್ದಾರೆ.

    ಎರಡು ದಿನಗಳ ಹಿಂದಷ್ಟೆ ಕೈಫಿಯತ್ ಎಕ್ಸ್‍ಪ್ರೆಸ್ ರೈಲು ಹಳಿ ತಪ್ಪಿ 80 ಮಂದಿ ಗಾಯಗೊಂಡಿದ್ದರು. ಹಾಗೂ ಆಗಸ್ಟ್ 19ರಂದು ಉತ್ಕಲ್ ಎಕ್ಸ್‍ಪ್ರೆಸ್‍ನ 14 ಬೋಗಿಗಳು ಹಳಿ ತಪ್ಪಿ 24 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ 156ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಎರಡೂ ಘಟನೆಗಳು ಉತ್ತರಪ್ರದೇಶದಲ್ಲಿ ನಡೆದಿತ್ತು.