Tag: train

  • ಕುಷ್ಟಗಿ ರೈಲು ಸಂಚಾರ ಶೀಘ್ರವೇ ಆರಂಭ: ಬಸವರಾಜ ರಾಯರೆಡ್ಡಿ

    ಕುಷ್ಟಗಿ ರೈಲು ಸಂಚಾರ ಶೀಘ್ರವೇ ಆರಂಭ: ಬಸವರಾಜ ರಾಯರೆಡ್ಡಿ

    ಗದಗ: ವಾಡಿ ರೈಲ್ವೆ ಮಾರ್ಗದಲ್ಲಿ ಗದಗದಿಂದ ಕುಷ್ಟಗಿವರೆಗೆ (Kushtagi) ಶೀಘ್ರದಲ್ಲೇ ಸಂಚಾರ ಆರಂಭವಾಗಲಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraja Rayareddy) ಹೇಳಿದರು.

    ಸಂಸದ ರಾಜಶೇಖರ ಹಿಟ್ನಾಳ್ (Chandrashekhar Hitnal) ಅವರೊಂದಿಗೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಗದಗದಿಂದ ಕುಷ್ಟಗಿವರೆಗೆ ರೈಲ್ವೆ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಾಯೋಗಿಕವಾಗಿ ರೈಲು ಓಡಿಸಲಾಗಿದೆ. ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರೊಂದಿಗೆ ಈಗಾಗಲೇ ಮಾತನಾಡಿದ್ದೇವೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಜೊತೆಗೆ ಮಾತನಾಡಿ ಉದ್ಘಾಟನೆ ದಿನಾಂಕವನ್ನು ಶೀಘ್ರವೇ ನಿಗದಿ ಮಾಡಲಾಗುವುದು ಎಂದರು. ಇದನ್ನೂ ಓದಿ: ವಾಹನ ಕಂಪನಿಗಳಿಗೆ ತಾತ್ಕಾಲಿಕ ವಿನಾಯತಿ – ಟ್ರಂಪ್‌ ಯೂಟರ್ನ್‌

    ರೈಲ್ವೆ ಸಚಿವರ ಸಮಯ ನೋಡಿಕೊಂಡು ಯಲಬುರ್ಗಾ ಅಥವಾ ಕುಷ್ಟಗಿಯಲ್ಲಿ ಉದ್ಘಾಟನೆ ಕಾರ್ಯಕ್ರಮ ನಿಗದಿ ಮಾಡಲಾಗುವುದು. ಇದೀಗ ಕುಷ್ಟಗಿಯಿಂದ ಸುರಪುರದವರೆಗೆ ಒಂದೇ ಟೆಂಡರ್ ಕರೆದಿದ್ದಾರೆ. ಮುಂದಿನ 3 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

    ಯಲಬುರ್ಗಾ ತಾಲೂಕು ಇಟಗಿ (Itagi) ಗ್ರಾಮದಲ್ಲಿ ರೈಲ್ವೆ ನಿಲ್ದಾಣ ಮಂಜೂರಾಗಿದೆ. ಐತಿಹಾಸಿಕ ಸ್ಥಳ ಇಟಗಿಯಲ್ಲಿ ಇಟಗಿ ಮಹದೇವ್ ರೈಲ್ವೆ ನಿಲ್ದಾಣ ಎಂಬ ಹೆಸರಿನಲ್ಲಿ ನಿರ್ಮಾಣ ಆಗಲಿದೆ. ರಾಜ್ಯ ಸರ್ಕಾರ ಅರ್ಧ ಹಣ ಕೊಟ್ಟು ಭೂಮಿ ನೀಡುತ್ತಿದೆ ಎಂದರು. ಇದನ್ನೂ ಓದಿ: ಬ್ರಾಹ್ಮಣರ ಸಂಖ್ಯೆ 15 ಲಕ್ಷ ಅಲ್ಲ, ನಮ್ಮ ಸಂಖ್ಯೆ 45 ಲಕ್ಷ: ಅಶೋಕ್ ಹಾರನಹಳ್ಳಿ

    ಗದಗ-ವಾಡಿ ರೈಲ್ವೆ ಯೋಜನೆಗೆ ಅಗತ್ಯ ಇರುವ ಪೂರ್ಣ ಪ್ರಮಾಣದ ಭೂಸ್ವಾಧೀನ ಆಗಿದೆ. ಗದಗ-ವಾಡಿ ರೈಲ್ವೆ ಹಳಿ ನಿರ್ಮಾಣ ಕಾಮಗಾರಿಯಲ್ಲಿ ಅಂಡರ್‌ಪಾಸ್ ಕೆಲಸದಲ್ಲಿ ತಾಂತ್ರಿಕ ಸಮಸ್ಯೆ ಆಗಿರುವ ಹಾಗೂ ಕಳಪೆ ಕಾಮಗಾರಿ ನಡೆದ ಬಗ್ಗೆ ಮಾಹಿತಿ ಇದೆ. ಕೂಡಲೇ ಸರಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದೇನೆ. ಆರಂಭದಲ್ಲಿ ಕೇವಲ 2 ಸಾವಿರ ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿ ಇದಾಗಿತ್ತು. ಇದೀಗ 4 ಸಾವಿರ ಕೋಟಿ ರೂ.ವರೆಗೆ ಹೆಚ್ಚುವರಿಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: Haveri | ಬಿರುಗಾಳಿ ಸಹಿತ ಮಳೆ – 20ಕ್ಕೂ ಅಧಿಕ ಮರಗಳು ಧರಾಶಾಹಿ, ಕಾರುಗಳು ಜಖಂ

    ಮುನಿರಾಬಾದ್‌ನಿಂದ ಮೆಹಬೂಬ್ ರೈಲ್ವೆ ಮಾರ್ಗದ ಯೋಜನೆ ಕರ್ನಾಟಕದಲ್ಲಿ ಸಿಂಧನೂರುವರೆಗೆ ಪೂರ್ಣಗೊಂಡು, ಅಲ್ಲಿಂದ ರಾಯಚೂರುವರೆಗೆ ಕಾಮಗಾರಿ ನಡೆಯುತ್ತಿದೆ. ಆಂಧ್ರದಲ್ಲಿ ಈ ಲೈನ್ ಕಂಪ್ಲೀಟ್ ಆಗಿದೆ. ಕರ್ನಾಟಕದಲ್ಲಿ ಭೂ ಸ್ವಾಧೀನ ಸಮಸ್ಯೆಯಿಂದ ವಿಳಂಬ ಆಗಿತ್ತು. ಖರ್ಗೆ ಅವರ ಒತ್ತಾಸೆಯಿಂದ ಯೋಜನೆ ಮಂಜೂರಾಗಿತ್ತು ಎಂದು ಮಾಹಿತಿ ನೀಡಿದರು.

  • ಬೆಳಗಾವಿ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ತಪ್ಪಿದ ಭಾರೀ ಅನಾಹುತ

    ಬೆಳಗಾವಿ ನಿಲ್ದಾಣದ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು – ತಪ್ಪಿದ ಭಾರೀ ಅನಾಹುತ

    ಬೆಳಗಾವಿ: ನಗರದ (Belagavi) ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲು (Goods Train ) ಹಳಿ ತಪ್ಪಿದ ಘಟನೆ ಇಂದು (ಏ.15) ಮುಂಜಾನೆ ನಡೆದಿದೆ.

    ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ರೈಲು ಬೆಳಗಾವಿ ಕಡೆಯಿಂದ ಹುಬ್ಬಳ್ಳಿ (Hubballi) ಕಡೆಗೆ ಹೊರಟಿತ್ತು. ಈ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ.

    20 ನಿಮಿಷ ಆಗಿದ್ದರೆ ಗೂಡ್ಸ್ ರೈಲಿಗೆ ರಾಣಿ ಚನ್ನಮ್ಮ ರೈಲು ಡಿಕ್ಕಿಯಾಗುವ ಸಂಭವವಿತ್ತು ಎನ್ನಲಾಗಿದೆ.‌ ಆದರೆ ಬೆಂಗಳೂರಿನಿಂದ ಬೆಳಗಾವಿಯತ್ತ ಬರುತ್ತಿದ್ದ ರಾಣಿ ಚನ್ನಮ್ಮ ರೈಲನ್ನು 8 ಕಿಮೀ ಹಿಂದಿನ ದೇಸೂರು ನಿಲ್ದಾಣದಲ್ಲಿಯೇ ಅಧಿಕಾರಿಗಳು ತಡೆದಿದ್ದಾರೆ. ಇದರಿಂದ ಆಗುತ್ತಿದ್ದ ಭಾರೀ ಅನಾಹುತ ತಪ್ಪಿದಂತಾಗಿದೆ.

    ಸ್ಥಳಕ್ಕೆ ರೇಲ್ವೇ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯಾವ ಕಾರಣಕ್ಕೆ ಹಳಿ ತಪ್ಪಿದೆ ಎಂಬ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

  • ಜಾರ್ಖಂಡ್‌ | ಗೂಡ್ಸ್ ರೈಲುಗಳ ನಡುವೆ ಡಿಕ್ಕಿ – ಇಬ್ಬರು ಲೋಕೋ ಪೈಲಟ್‌ ಸೇರಿ 3 ಸಾವು

    ಜಾರ್ಖಂಡ್‌ | ಗೂಡ್ಸ್ ರೈಲುಗಳ ನಡುವೆ ಡಿಕ್ಕಿ – ಇಬ್ಬರು ಲೋಕೋ ಪೈಲಟ್‌ ಸೇರಿ 3 ಸಾವು

    ಡಿಕ್ಕಿ ಬಳಿಕ ಹೊತ್ತಿ ಉರಿದ ಇಂಜಿನ್‌  – ಮೂವರು ಸಿಬ್ಬಂದಿಗೆ ಗಾಯ

    ರಾಂಚಿ: ಜಾರ್ಖಂಡ್‌ನ (Jharkhand) ಸಾಹಿಬ್‌ಗಂಜ್‌ನಲ್ಲಿ ಎರಡು ಗೂಡ್ಸ್‌ ರೈಲುಗಳ (Train) ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಲೋಕೋ ಪೈಲಟ್‌ (Loco Pilot) ಸೇರಿದಂತೆ ಮೂವರು ಸಿಬ್ಬಂದಿ ಸಾವಿಗೀಡಾಗಿದ್ದಾರೆ.

    ಅಪಘಾತದ ಬಳಿಕ ರೈಲಿನ ಎಂಜಿನ್‌ಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಮೂವರ ಸಾವಾಗಿದೆ. ಅವಘಡದಲ್ಲಿ ಮೂವರು ಸಿಐಎಸ್‌ಎಫ್ (Central Industrial Security Force) ಸಿಬ್ಬಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಳಿಯಲ್ಲಿದ್ದ ಕಸ ತೆರವುಗೊಳಿಸುತ್ತಿದ್ದ ವೇಳೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ನಾಲ್ವರು ಗುತ್ತಿಗೆ ಕಾರ್ಮಿಕರ ದುರ್ಮರಣ

    ಬೆಳಗಿನ ಜಾವ 3:30ರ ಸುಮಾರಿಗೆ ಈ ಅಪಘಾತ ನಡೆದಿದೆ. ಫರಕ್ಕಾದಿಂದ ಲಾಲ್ಮಾಟಿಯಾಗೆ ಗೂಡ್ಸ್ ರೈಲು ಬರ್ಹೆತ್‌ನಲ್ಲಿ ನಿಂತಿದ್ದ ಸರಕು ರೈಲಿಗೆ ಡಿಕ್ಕಿ ಹೊಡೆದಿದೆ.‌

    ಕಲ್ಲಿದ್ದಲು ತುಂಬಿದ್ದ ಹಿನ್ನಲೆ ವೇಗವಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಹರಿದು 11 ಮಂದಿ ಸಾವು – ಅವಘಡ ಹೇಗಾಯ್ತು?

  • ಅತ್ಯಾಚಾರಕ್ಕೆ ಯತ್ನ – ಕಾಮುಕನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿಂದ ಜಿಗಿದ ಮಹಿಳೆ

    ಅತ್ಯಾಚಾರಕ್ಕೆ ಯತ್ನ – ಕಾಮುಕನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿಂದ ಜಿಗಿದ ಮಹಿಳೆ

    ಹೈದರಾಬಾದ್: ರೈಲಿನಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಹಿನ್ನೆಲೆ ಮಹಿಳೆಯು ರೈಲಿನಿಂದ ಹಾರಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ತೆಲಂಗಾಣದಲ್ಲಿ (Telangana) ನಡೆದಿದೆ.

    ಖಾಸಗಿ ವಲಯದ ಉದ್ಯೋಗಿಯಾಗಿರುವ ಮಹಿಳೆ, ಮೊಬೈಲ್ ಫೋನ್ ಸರಿಮಾಡಲು ಮೆಡ್ಚಲ್‌ನಿಂದ ಸಿಕಂದರಾಬಾದ್‌ಗೆ (Secunderabad) ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ನಾನು ಸಿಎಂ ಆದ್ರೆ ಸಾವಿರ ಜೆಸಿಬಿ ಆರ್ಡರ್, ಪ್ರತಿ ತಾಲೂಕಿಗೆ 35 ಇಡ್ತೀನಿ: ಯತ್ನಾಳ್‌

    ಮಾ. 22ರಂದು ಸಂಜೆ ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಮೆಡ್ಚಲ್‌ಗೆ (Medchal) ಹೋಗುವ ಮಲ್ಟಿ ಮಾಡಲ್ ಟ್ರಾರ್ನ್ಸ್‌ಪೋರ್ಟ್‌ ಸರ್ವಿಸ್ ರೈಲಿನ ಮಹಿಳಾ ಕೋಚ್‌ನಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದೆ. ಅಲ್ವಾಲ್ ರೈಲ್ವೆ ನಿಲ್ದಾಣದಲ್ಲಿ (Alwal railway station) ಹತ್ತಿದ ಸುಮಾರು 25 ವಯಸ್ಸಿನ ಒಬ್ಬ ಅಪರಿಚಿತ ವ್ಯಕ್ತಿ ಲೈಂಗಿಕ ಕ್ರಿಯೆಗೆ ಬೇಡಿಕೆ ಇಟ್ಟಿದ್ದ. ಆತನಿಗೆ ಸಹಕರಿಸಲು ನಿರಾಕರಿಸಿದಾಗ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದನು. ಆತನಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಹೊರಗೆ ಹಾರಿದೆ ಎಂದು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ: ನ್ಯಾ.ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಣೆ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್

    ಮಹಿಳೆಯ ತಲೆ, ಗಲ್ಲ, ಬಲಗೈ ಮತ್ತು ಸೊಂಟದ ಮೇಲೆ ತೀವ್ರ ಗಾಯಗಳಾಗಿದ್ದು, ರೈಲ್ವೆ ಹಳಿ ಬಳಿ ಹೋಗುತ್ತಿದ್ದ ಕೆಲವರು ಆಕೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು. ಮಹಿಳೆಯ ದೂರಿನ ಆಧಾರದ ಮೇಲೆ ಬಿಎನ್‌ಎಸ್‌ನ (BNS) ಸೆಕ್ಷನ್ 75 ಮತ್ತು 131 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಹನಿಟ್ರ್ಯಾಪ್‌ ಕೇಸ್‌- ಮಂಗಳವಾರ ರಾಜಣ್ಣ ದೂರು, ಎಸ್‌ಐಟಿ ರಚನೆ ಸಾಧ್ಯತೆ

  • ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ

    ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್‌ಐ ಮಗಳು ಆತ್ಮಹತ್ಯೆ

    ಮಂಡ್ಯ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ (Mandya) ನಗರದ ಬಂದೀಗೌಡ ಬಡಾವಣೆ ಸಮೀಪ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಯುವತಿಯನ್ನು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಅನ್ಸರ್ ಪಾಷಾ ಅವರ ಮಗಳು ಸುಹಾನಾ (19) ಎಂದು ಗುರುತಿಸಲಾಗಿದೆ. ಆಕೆ ಮೈಸೂರಿನಲ್ಲಿ (Mysuru) ಪ್ರಥಮ ವರ್ಷದ ಬಿ.ಎ.ವ್ಯಾಸಂಗ ಮಾಡುತ್ತಿದ್ದಳು. ಎಂದಿನಂತೆ ಕಾಲೇಜು ಮುಗಿಸಿಕೊಂಡು ಮನೆಗೆ ಬಂದವಳು ಬೈಕ್ ತೆಗೆದುಕೊಂಡು ಹೋಗಿ ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ಚಾಮುಂಡಿ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಹನಿಟ್ರ‍್ಯಾಪ್ ಆರೋಪ ಮುಂದೆಯೂ ಬರಬಹುದು: ರಾಜಣ್ಣ ಹೊಸ ಬಾಂಬ್

    ಘಟನೆಗೆ‌ ನಿಖರ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮಂಡ್ಯ ರೈಲ್ವೇ ಪೊಲೀಸರು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗಳನ್ನು ಕಳೆದುಕೊಂಡ ಕುಟುಂಬದವರ ಶೋಕ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಕುಣಿಯಲಾರದವರು ನೆಲ ಡೊಂಕು ಅನ್ನೋ ಹಾಗೆ ಡಿಕೆಶಿ ಮಾತಾಡಬಾರದು: ನಿಖಿಲ್ ಕುಮಾರಸ್ವಾಮಿ

  • ಬೇಸಿಗೆ ರಜೆ ಹಿನ್ನಲೆ ಕಲಬುರಗಿ – ದೌಂಡ್ ನಡುವೆ 180 ವಿಶೇಷ ರೈಲು ಸಂಚಾರ

    ಬೇಸಿಗೆ ರಜೆ ಹಿನ್ನಲೆ ಕಲಬುರಗಿ – ದೌಂಡ್ ನಡುವೆ 180 ವಿಶೇಷ ರೈಲು ಸಂಚಾರ

    ಕಲಬುರಗಿ: ಕಲಬಯರಗಿ ರೈಲ್ವೆಯ ಸೋಲಾಪುರ ಕೇಂದ್ರ ವಿಭಾಗದ ಕಲಬುರಗಿ – ದೌಂಡ್ (Kalaburagi – Daund) ನಡುವೆ 180 ಬೇಸಿಗೆ ವಿಶೇಷ ರೈಲುಗಳು (Train) ಸಂಚರಿಸಲಿವೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೇಸಿಗೆ ರಜೆಯ ಆರಂಭ ಮತ್ತು ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ಪರಿಗಣಿಸಿ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕಲಬುರಗಿ-ದೌಂಡ್ ನಡುವೆ ಕೇಂದ್ರ ರೈಲ್ವೆಯ ಸೋಲಾಪುರ ವಿಭಾಗದ ಮೂಲಕ 180 ಬೇಸಿಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

    ರೈಲು ಸಂಚಾರದ ವಿವರ
    ಕಲಬುರಗಿ – ದೌಂಡ್ ವಾರಕ್ಕೆ 5 ದಿನಗಳು ಕಾಯ್ದಿರಿಸದ ವಿಶೇಷ ರೈಲುಗಳು (128 ಟ್ರಿಪ್‌ಗಳು)

    – 01421 ವಿಶೇಷ ರೈಲು 05.04.2025 ರಿಂದ 02.07.2025 ರವರೆಗೆ ವಾರದಲ್ಲಿ 5 ದಿನಗಳು (ಗುರುವಾರ ಮತ್ತು ಭಾನುವಾರ ಹೊರತುಪಡಿಸಿ) ಬೆಳಿಗ್ಗೆ 05:00 ಗಂಟೆಗೆ ದೌಂಡ್‌ನಿಂದ ಹೊರಟು ಅದೇ ದಿನ ಬೆಳಿಗ್ಗೆ 11:20 ಗಂಟೆಗೆ ಕಲಬುರಗಿಗೆ ಆಗಮಿಸಲಿದೆ. (64 ಟ್ರಿಪ್‌ಗಳು)

    – 01422 ವಿಶೇಷ ರೈಲು ಕಲಬುರಗಿಯಿಂದ ವಾರದ 5 ದಿನಗಳು (ಗುರುವಾರ ಮತ್ತು ಭಾನುವಾರ ಹೊರತುಪಡಿಸಿ) 05.04.2025 ರಿಂದ 02.07.2025 ರವರೆಗೆ ಸಂಜೆ 4:10 ಕ್ಕೆ ಹೊರಟು ಅದೇ ದಿನ ರಾತ್ರಿ 22:20 ಕ್ಕೆ ದೌಂಡ್‌ಗಡ ಆಗಮಿಸುತ್ತದೆ. (64 ಟ್ರಿಪ್‌ಗಳು)

    ಕಲಬುರಗಿ – ದೌಂಡ್ ದ್ವಿ-ವಾರದ ಕಾಯ್ದಿರಿಸದ ವಿಶೇಷ ರೈಲುಗಳು (52 ಟ್ರಿಪ್‌ಗಳು)

    – 01425 ವಿಶೇಷ ರೈಲು 03.04.2025 ರಿಂದ 29.06.2025 ರವರೆಗೆ ಪ್ರತಿ ಗುರುವಾರ ಮತ್ತು ಭಾನುವಾರ ಬೆಳಿಗ್ಗೆ 5:00 ಕ್ಕೆ ದೌಂಡ್ಗೆ ಹೊರಟು ಅದೇ ದಿನ ಬೆಳಿಗ್ಗೆ 11:20 ಕ್ಕೆ ಕಲಬುರಗಿಗೆ ಆಗಮಿಸುತ್ತದೆ. (26 ಟ್ರಿಪ್‌ಗಳು)

    – 01426 ವಿಶೇಷ ರೈಲು ಪ್ರತಿ ಗುರುವಾರ ಮತ್ತು ಭಾನುವಾರ 03.04.2025 ರಿಂದ 29.06.2025 ರವರೆಗೆ ರಾತ್ರಿ 20:30 ಕ್ಕೆ ಕಲಬುರಗಿಯಿಂದ ಹೊರಟು ಮರುದಿನ 02:30 ಕ್ಕೆ ದೌಂಡ್ಗೆ ಆಗಮಿಸುತ್ತದೆ. (26 ಟ್ರಿಪ್‌ಗಳು)

    01421/01422 & 01425/01426 ರೈಲುಗಳ ನಿಲುಗಡೆ ವಿವರ: ಗಾಣಗಾಪುರ ರಸ್ತೆ, ದುಧಾನಿ, ಬೊರೊಟಿ, ಅಕ್ಕಲ್ಕೋಟ್ ರಸ್ತೆ, ಹೊಟ್ಗಿ, ಟಿಕೆಕರ್ವಾಡಿ, ಸೋಲಾಪುರ, ಮೊಹೋಲ್, ಮಾಧಾ, ಕುರ್ದುವಾಡಿ, ಕೆಮ್, ಜೆಯೂರ್, ಪರೆವಾಡಿ ಮತ್ತು ಭಿಗ್ವಾನ್.

    01421/01422 & 01425/01426 ಗಾಗಿ ಸಂಯೋಜನೆ: 10 ಸಾಮಾನ್ಯ ಎರಡನೇ ದರ್ಜೆ ಮತ್ತು 2 ಲಗೇಜ್ ಕಮ್ ಬ್ರೇಕ್ ವ್ಯಾನ್ಗಳು (12 ಕೋಚ್‌ಗಳು) ಹೊಂದಿರುತ್ತವೆ. ಅನಾನುಕೂಲತೆಯನ್ನು ತಪ್ಪಿಸಲು ಪ್ರಯಾಣಿಕರು ಮಾನ್ಯ ಟಿಕೆಟ್‌ಗಳೊಂದಿಗೆ ಪ್ರಯಾಣಿಸಲು ವಿನಂತಿಸಲಾಗಿದೆ. ಕಾಯ್ದಿರಿಸದ ಬೋಗಿಗಳ ಬುಕಿಂಗ್ ಅನ್ನು ನಿಲ್ದಾಣಗಳಲ್ಲಿನ ಬುಕಿಂಗ್ ಕೌಂಟರ್‌ಗಳು ಮತ್ತು ಯುಟಿಎಸ್ ಅಪ್ಲಿಕೇಶನ್ ಮೂಲಕವೂ ಮಾಡಬಹುದು.

    ಈ ವಿಶೇಷ ರೈಲುಗಳ ವಿವರವಾದ ಸಮಯ ಮತ್ತು ನಿಲುಗಡೆಗಳಿಗಾಗಿ, www.enquiry.indianrail.gov.in ಗೆ ಭೇಟಿ ನೀಡಿ ಅಥವಾ NTES ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

  • ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

    ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ – ಪ್ರಾಣಾಪಾಯದಿಂದ ಪಾರು

    ಹಾಸನ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ವಿದ್ಯಾರ್ಥಿಯೋರ್ವ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

    ಮುಜಾಮಿಲ್ (17) ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈತ ಕೆ.ಆರ್ ನಗರದಿಂದ ಹಾಸನಕ್ಕೆ ಎಕ್ಸ್ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಮುಜಾಮಿಲ್ ಒಂದು ಕಾಲಿಟ್ಟು, ಇನ್ನೊಂದು ಕಾಲು ಬೋಗಿಯಿಂದ ಹೊರಗೆ ಹಾಕಿ ನಿಂತಿದ್ದ. ಈ ವೇಳೆ ಆಯತಪ್ಪಿ 70 ರಿಂದ 80 ಅಡಿ ಎತ್ತರದಿಂದ ಹೇಮಾವತಿ ನದಿಗೆ ಬಿದ್ದಿದ್ದಾನೆ. ಇದನ್ನೂ ಓದಿ: 3 ವರ್ಷದ ಹಿಂದೆ ನಡೆದ ಪರಿಷತ್ ಚುನಾವಣೆ | ಕೈ ಅಭ್ಯರ್ಥಿಗೆ 6 ಮತಗಳ ಸೋಲು – ಮರು ಮತ ಎಣಿಕೆಗೆ ಹೈಕೋರ್ಟ್ ಸೂಚನೆ

    ಹೇಮಾವತಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಬಂಡೆ ಹಿಡಿದು ಮುಜಾಮಿಲ್ ಕಿರುಚಾಡುತ್ತಿದ್ದ. ಮುಜಾಮಿಲ್ ಕಿರುಚಾಟ ಕೇಳಿದ ಸ್ಥಳೀಯರು ನದಿಗೆ ಇಳಿದು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಮುಜಾಮಿಲ್ ಹೊಳೆನರಸೀಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: Kumbh Mela Stampede | ಇಂದು ಸಂಜೆ ದೆಹಲಿಯಿಂದ ಬೆಳಗಾವಿಗೆ ಬರಲಿದೆ ನಾಲ್ವರ ಶವ

  • ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

    ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವು

    ಬೆಂಗಳೂರು: ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವಿಗೀಡಾಗಿರುವ ಘಟನೆ ಬುಧವಾರ ಮಾಗಡಿ ರಸ್ತೆಯ ರೈಲ್ವೆ ಗೇಟ್‌ ಬಳಿ ನಡೆದಿದೆ.

    ಮೃತ ಯುವಕರು ಸೂರ್ಯ, ಶರತ್‌ ಎಂದು ಗುರುತಿಸಲಾಗಿದೆ. ಮೃತಪಟ್ಟ ಯುವಕರು ಬಿನ್ನಿಪೇಟೆ, ಕೆ.ಪಿ ಅಗ್ರಹಾರದವರು ಎಂದು ಹೇಳಲಾಗುತ್ತಿದೆ. ರಾತ್ರಿ 10:30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.

    ಬಿನ್ನಿಪೇಟೆಯ ಸೂರ್ಯ ಮತ್ತು ಶರತ್ ಎಂಬಾತ ಕೆಪಿ ಅಗ್ರಹಾರದವ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಇಬ್ಬರು ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ಕೂತಿರುವಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರ ಕಾಲುಗಳು ಮುರಿದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.

  • ಕ್ರಿಸ್‌ಮಸ್ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

    ಕ್ರಿಸ್‌ಮಸ್ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ

    ಬೆಂಗಳೂರು: ಕ್ರಿಸ್‌ಮಸ್‌ (Christmas) ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಪೂರೈಸಲು ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ-ತಿರುವನಂತಪುರಂ ನಾರ್ತ್‌ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.

    ಎಸ್ಎಂವಿಟಿ ಬೆಂಗಳೂರು-ತಿರುವನಂತಪುರಂ ನಾರ್ತ್ ಮಧ್ಯ ಒಂದು ಟ್ರಿಪ್ ವಿಶೇಷ ರೈಲು (06507/06508) ಸಂಚಾರ ಮಾಡಲಿದೆ. ಡಿ.23 (ಸೋಮವಾರ) ರಂದು ರಾತ್ರಿ 11:00 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರಿನಿಂದ ಹೊರಟು, ಮರುದಿನ ಸಂಜೆ 4:30 ಕ್ಕೆ ತಿರುವನಂತಪುರಂ ನಾರ್ತ್ ತಲುಪಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕೋ ಕೆಲಸ ಬಿಜೆಪಿ ಮಾಡಿದೆ: ಆರ್.ಅಶೋಕ್‌

    ಹಿಂತಿರುಗುವಾಗ, ಈ ರೈಲು (06508) ಡಿ.24 (ಮಂಗಳವಾರ) ರಂದು ತಿರುವನಂತಪುರಂ ನಾರ್ತ್ ನಿಲ್ದಾಣದಿಂದ ಸಂಜೆ 5:55 ಕ್ಕೆ ಹೊರಟು, ಮರುದಿನ ಬೆಳಿಗ್ಗೆ 11:15 ಕ್ಕೆ ಸರ್ ಎಂ.ವಿಶ್ವೇಶ್ವರಯ್ಯ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

    ಎರಡೂ ಮಾರ್ಗಗಳಲ್ಲಿ ಈ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರ್, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಅಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಿಂಗವನಂ, ತಿರುವಲ್ಲಾ, ಚೆಂಗನ್ನೂರು, ಮಾವೇಲಿಕರ, ಕಾಯಂಕುಲಂ ಮತ್ತು ಕೊಲ್ಲಂ ನಿಲ್ದಾಣಗಳಲ್ಲಿ ನಿಲ್ಲಲಿದೆ. ಇದನ್ನೂ ಓದಿ: ನನ್ನ ವಿರುದ್ಧ ಸಂಚು: ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಸಿಟಿ ರವಿ

  • ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ

    ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ

    ನವದೆಹಲಿ: ಆಲಮಟ್ಟಿ – ಯಾದಗಿರಿ ರೈಲು (Almatti- Yadagiri Train Project) ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ರಾಯಚೂರು ಸಂಸದ ಜಿ.ಕುಮಾರ್ ನಾಯಕ್ (G Kumar Naik) ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ನವದೆಹಲಿಯಲ್ಲಿ (Newdelhi) ಗುರುವಾರ (ಡಿ.12) ಭೇಟಿ ಮಾಡಿ ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆಗೆ ಅನುಮೋದನೆ ನೀಡುವಂತೆ ಪ್ರಸ್ತಾಪಿಸಿದರು.ಇದನ್ನೂ ಓದಿ: ರಷ್ಯನ್ ಭಾಷೆಯಲ್ಲಿ ಆರ್‌ಬಿಐಗೆ ಬಾಂಬ್ ಬೆದರಿಕೆ

    ಯೋಜನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ, ತೆಲಂಗಾಣ ಹಾಗೂ ಒಡಿಶಾದಲ್ಲಿ ರೈಲ್ವೆ ಸಂಪರ್ಕ ಜಾಲ ಕಡಿಮೆ ಇದೆ. ಈ ಲೋಪವನ್ನು ಸರಿಪಡಿಸಲು ರಾಜ್ಯದಲ್ಲಿ ರೈಲು ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಲಮಟ್ಟಿ-ಯಾದಗಿರಿ ರೈಲು ಮಾರ್ಗದ ಬೇಡಿಕೆಯು ದಶಕಗಳಷ್ಟು ಹಳೆಯದು ಎಂದು ಸಚಿವರ ಗಮನಕ್ಕೆ ತಂದರು.

    ಉದ್ದೇಶಿತ ರೈಲು ಮಾರ್ಗವು ವಿಜಯಪುರ ಮತ್ತು ಯಾದಗಿರಿ ನಡುವಣ ಪ್ರಯಾಣದ ಅಂತರ ಗಣನೀಯವಾಗಿ ಕಡಿಮೆ ಮಾಡುತ್ತದೆ. ಪ್ರಸ್ತುತ ಪ್ರಯಾಣವನ್ನು 328 ಕಿ.ಮೀನಿಂದ 165 ಕಿ.ಮೀಗೆ ಕಡಿತಗೊಳಿಸುತ್ತದೆ. ಈ ಪ್ರದೇಶದಲ್ಲಿ ಬೆಳೆಯುವ ಆರು ಲಕ್ಷ ಟನ್‌ಗಳಷ್ಟು ಭತ್ತ ಹಾಗೂ ಇನ್ನಿತರ ಕೃಷಿ ಉತ್ಪನ್ನಗಳ ಸಾಗಣೆಗೆ ಈ ರೈಲು ಮಾರ್ಗದಿಂದ ಅನುಕೂಲವಾಗುತ್ತದೆ. ಈ ಪ್ರದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಈ ಯೋಜನೆ ಪೂರಕವಾಗಲಿದೆ. ಮುಂಬರುವ ಬಜೆಟ್‌ನಲ್ಲಿ ಈ ಯೋಜನೆಯನ್ನು ಸೇರಿಸಿ ಶೀಘ್ರ ಅನುಷ್ಠಾನ ಮಾಡಬೇಕು ಎಂದು ಕೋರಿದರು.

    ಈ ಪ್ರಸ್ತಾವನೆಗೆ ಸೂಕ್ತ ಆದ್ಯತೆ ನೀಡಿ, ಪರಿಗಣಿಸುವುದಾಗಿ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದರು.ಇದನ್ನೂ ಓದಿ: ವಾಯುಭಾರ ಕುಸಿತದ ಎಫೆಕ್ಟ್; ತಮಿಳುನಾಡಿನಾದ್ಯಂತ ಭಾರೀ ಮಳೆ, ಪ್ರವಾಹ ಮುನ್ಸೂಚನೆ!