Tag: Trains

  • ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

    ಉತ್ತರ ಭಾರತದ ರಾಜ್ಯಗಳಲ್ಲಿ ದಟ್ಟವಾದ ಮಂಜು – ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ದಟ್ಟವಾದ ಮಂಜಿನ (Fog) ಪದರ ಆವೃತಗೊಂಡಿದ್ದು, ತೀವ್ರ ಶೀತ ವಾತವರಣ ನಿರ್ಮಾಣವಾಗಿದೆ. ಇದರ ಪರಿಣಾಮ ವಿಮಾನ (Flights) ಮತ್ತು ರೈಲುಗಳ (Train) ಸಂಚಾರದಲ್ಲಿ ಭಾರಿ ವ್ಯತ್ಯಯವಾಗಿದೆ.

    ಫ್ಲೈಟ್ ಮಾನಿಟರಿಂಗ್ ವೆಬ್‌ಸೈಟ್ ಫ್ಲೈಟ್‌ರಾಡಾರ್ ಪ್ರಕಾರ, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರು ವಿಮಾನಗಳನ್ನು ರದ್ದುಗೊಳಿಸಲಾಗಿದೆ. 215 ವಿಮಾನಗಳ ಆಗಮನ ವಿಳಂಬವಾಗಿದೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 17 ಹೊರಡುವ ವಿಮಾನಗಳು ವಿಳಂಬಗೊಂಡಿದ್ದು, 10 ವಿಮಾನಗಳು ರದ್ದಾಗಿದೆ. 36 ಆಗಮಿಸುವ ವಿಮಾನಗಳು ವಿಳಂಬವಾಗಿವೆ. ಇದನ್ನೂ ಓದಿ: ಬೇರೆ ರೂಟ್‌ಗೆ ಕರೆದೊಯ್ದ ಚಾಲಕ – ಭಯಗೊಂಡು ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ

    ಶುಕ್ರವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ರನ್‌ವೇ ಗೋಚರತೆ ಶೂನ್ಯವಾಗಿತ್ತು. ವಿಮಾನ ಕಾರ್ಯಾಚರಣೆಗಳಿಗೆ ಸಂಭಾವ್ಯ ಅಡಚಣೆಗಳ ಬಗ್ಗೆ ವಿಮಾನ ನಿಲ್ದಾಣದ ಅಧಿಕಾರಿಗಳು ಎಚ್ಚರಿಸಿದ್ದಾರೆ. ಇಂಡಿಗೋ ಮತ್ತು ಸ್ಪೈಸ್‌ಜೆಟ್ ಹವಾಮಾನ ವಿಳಂಬಗಳ ವಿರುದ್ಧ ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ಬೆಂಗಳೂರು| ಟ್ಯೂಷನ್ ಟೀಚರ್‌ನಿಂದಲೇ ವಿದ್ಯಾರ್ಥಿನಿ ಕಿಡ್ನ್ಯಾಪ್ – ಆರೋಪಿ ಸುಳಿವು ಕೊಟ್ಟವರಿಗೆ ಬಹುಮಾನ ಘೋಷಣೆ

    ಮಂಜಿನ ವಾತಾವರಣದಿಂದಾಗಿ ಹಲವಾರು ದೂರದ ಸೇವೆಗಳು ಸೇರಿದಂತೆ ಕನಿಷ್ಠ 24 ರೈಲುಗಳು ತಡವಾಗಿ ಓಡುತ್ತಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇವುಗಳಲ್ಲಿ ಕೆಲವು ರೈಲುಗಳು 4-5 ಗಂಟೆಗಳವರೆಗೆ ವಿಳಂಬವಾಗಿವೆ. ಕರ್ನಾಟಕ ಎಕ್ಸ್‌ಪ್ರೆಸ್ ಮತ್ತು ಬಿಹಾರ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್, ಭಟಿಂಡಾ-ಬಾಲೂರ್‌ಘಾಟ್ ಫರಕ್ಕಾ ಎಕ್ಸ್‌ಪ್ರೆಸ್, ಆಂಧ್ರಪ್ರದೇಶ ಎಕ್ಸ್‌ಪ್ರೆಸ್, ಅಯೋಧ್ಯೆ ಎಕ್ಸ್‌ಪ್ರೆಸ್ ರೈಲುಗಳು ವಿಳಂಬವಾಗುತ್ತಿವೆ. ಇದನ್ನೂ ಓದಿ: ಸಿಎಂ ತವರು ಕ್ಷೇತ್ರದಲ್ಲೇ ದಲಿತ ಕುಟುಂಬಕ್ಕೆ 4 ವರ್ಷದಿಂದ ದಲಿತರಿಂದಲೇ ಬಹಿಷ್ಕಾರ

    ನೋಯ್ಡಾದಲ್ಲಿ, ಜ.8ರವರೆಗೆ ಶಾಲಾ ತರಗತಿಗಳಿಗಳನ್ನು ಮುಚ್ಚಲಾಗುವುದು ಎಂದು ಜಿಲ್ಲಾ ಅಧಿಕಾರಿಗಳು ಘೋಷಿಸಿದ್ದಾರೆ. ನೋಯ್ಡಾದಲ್ಲಿ ಶುಕ್ರವಾರ ಕನಿಷ್ಠ 8 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗೋಚರತೆ ಕಡಿಮೆಯಾದ ಕಾರಣ ಪಂಜಾಬ್‌ನ ಬಟಿಂಡಾದಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿ ಹೊಡೆದು 20 ರಿಂದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಾಲಿನ ದರ 10 ರೂ. ಹೆಚ್ಚಳಕ್ಕೆ ಬೇಡಿಕೆ ಇದೆ: ಸಚಿವ ವೆಂಕಟೇಶ್

    ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಬಿಹಾರ ಸೇರಿದಂತೆ ರಾಜ್ಯಗಳಲ್ಲಿ ದಟ್ಟವಾದ ಮಂಜಿನ ಜೊತೆಗೆ ತೀವ್ರವಾದ ಚಳಿ ಅಲೆಯನ್ನು ಅನುಭವಿಸುತ್ತಿದೆ. ಪಾಟ್ನಾ ಸೇರಿದಂತೆ ಬಿಹಾರದ ಹಲವಾರು ಭಾಗಗಳಲ್ಲಿ ಹವಮಾನ ಕುಸಿದಿರುವುದರಿಂದ, ಮುಂದಿನ ಮೂರರಿಂದ ನಾಲ್ಕು ದಿನಗಳಲ್ಲಿ ಕನಿಷ್ಠ ತಾಪಮಾನವು 6-11 ಡಿಗ್ರಿ ಸೆಲ್ಸಿಯಸ್ ನಡುವೆ ಉಳಿಯುವ ನಿರೀಕ್ಷೆಯಿದೆ. ಇದಕ್ಕೆ ಸ್ಪಂದಿಸಿದ ಸರ್ಕಾರ ಶಾಲಾ ಸಮಯದಲ್ಲಿ ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಪೀಣ್ಯ ಬಸವೇಶ್ವರ ಬಸ್ ನಿಲ್ದಾಣವಾಗುತ್ತಾ ಕಲ್ಯಾಣ ಮಂಟಪ, ಮಾಲ್?

  • ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ – 45 ದಿನಗಳಲ್ಲಿ 13,000 ರೈಲುಗಳ ಸಂಚಾರ

    ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ – 45 ದಿನಗಳಲ್ಲಿ 13,000 ರೈಲುಗಳ ಸಂಚಾರ

    – ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ

    ಲಕ್ನೋ: ಜನವರಿ 13ರಿಂದ ಫೆಬ್ರವರಿ 26ರವರೆಗೆ ಪ್ರಯಾಗ್‌ರಾಜ್‌ನಲ್ಲಿ (Prayagraj) ಮಹಾ ಕುಂಭಮೇಳ (Maha Kumbh Mela) ನಡೆಯಲಿದೆ. ಈ ಹಿನ್ನೆಲೆ ಭಕ್ತರಿಗೆ ಸ್ಥಳಾವಕಾಶ ಕಲ್ಪಿಸಲು 3,000 ವಿಶೇಷ ರೈಲುಗಳನ್ನು ಒಳಗೊಂಡಂತೆ 45 ದಿನಗಳಲ್ಲಿ ಒಟ್ಟು 13,000 ರೈಲುಗಳು (Train) ಕಾರ್ಯ ನಿರ್ವಹಿಸಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

    ಮಹಾಕುಂಭ ಮೇಳದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಮಹಾ ಕುಂಭಕ್ಕಾಗಿ ನಾಲ್ಕು ರಿಂಗ್ ರೈಲ್ ಸರ್ಕಲ್‌ಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ವಾರಣಾಸಿ-ಪ್ರಯಾಗ್‌ರಾಜ್, ಪ್ರಯಾಗ್‌ರಾಜ್-ಅಯೋಧ್ಯೆ, ಅಯೋಧ್ಯೆ-ಕಾಶಿ ಮತ್ತು ಪ್ರಯಾಗ್‌ರಾಜ್ ಸರ್ಕಲ್ ಸೇರಿವೆ. ದೇಶದ ವಿವಿಧ ರಾಜ್ಯಗಳ 50 ನಗರಗಳಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲುಗಳು ಕಾರ್ಯನಿರ್ವಹಿಸಲಿದೆ ಎಂದರು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ನೇಣಿಗೆ ಶರಣಾದ 10ರ ಬಾಲಕ

     

    ಮಹಾ ಕುಂಭಮೇಳದ ಅವಧಿಯಲ್ಲಿ 18,000 ಆರ್‌ಪಿಎಫ್ ಮತ್ತು ಜಿಆರ್‌ಪಿ ಯೋಧರನ್ನು ನಿಯೋಜಿಸಲಾಗಿದೆ. ಇದರಲ್ಲಿ ಆರ್‌ಪಿಎಫ್ ಯೋಧರ ಸಂಖ್ಯೆ 8,000 ಮತ್ತು ಜಿಆರ್‌ಪಿ ಸೈನಿಕರ ಸಂಖ್ಯೆ 10,000 ಇರಲಿದೆ. ಇದಲ್ಲದೇ ದೇಶಾದ್ಯಂತ 13,000 ರೈಲ್ವೆ ಅಧಿಕಾರಿಗಳು ಮತ್ತು ನೌಕರರನ್ನು ಇಲ್ಲಿಗೆ ನಿಯೋಜಿಸಲಾಗುತ್ತಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ ದಕ್ಷಿಣ ಭಾರತ, ಪಂಜಾಬಿ, ಬೆಂಗಾಲಿ, ಮರಾಠಿ, ಗುಜರಾತಿ ಇತ್ಯಾದಿ ಮಾತನಾಡಬಲ್ಲ ಉದ್ಯೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೊನೆಗೂ ಪಂಚಮಸಾಲಿ ಹೋರಾಟಕ್ಕೆ ಬೆಳಗಾವಿ ಜಿಲ್ಲಾಡಳಿತ ಅನುಮತಿ

    ಇನ್ನು ಪ್ರಯಾಗ್‌ರಾಜ್‌ನಲ್ಲಿ ಮೊದಲ ಬಾರಿಗೆ ಮೊಬೈಲ್ ಅನ್ ರಿಸರ್ವ್ಡ್ ಟಿಕೆಟ್ ಸಿಸ್ಟಂ (UTS) ಅನ್ನು ಪರಿಚಯಿಸಲಾಗಿದೆ. ಇದಕ್ಕೂ ಮೊದಲು ಪುರಿಯಲ್ಲಿ ರಥಯಾತ್ರೆಯ ಸಮಯದಲ್ಲಿ ಈ ಸಿಸ್ಟಂ ಅನ್ನು ಬಳಸಲಾಗಿತ್ತು. ಮಹಾ ಕುಂಭದ ಸಿದ್ಧತೆಗಾಗಿ ಕಳೆದ 2 ವರ್ಷಗಳಿಂದ 5,000 ಕೋಟಿ ರೂ.ಗೂ ಹೆಚ್ಚು ಹಣವನ್ನು ಬಳಸಲಾಗಿದೆ ಎಂದು ಅಶ್ವಿನಿ ವೈಷ್ಣವ್ (Ashwini Vaishnaw) ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ಮಿಕರ ಮೇಲೆ ಕಾಡಾನೆ ದಾಳಿ – ನಾಲ್ವರಿಗೆ ಗಾಯ

  • ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    ಪಾಟ್ನಾ: ಬಿಹಾರದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೇಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

    ದೇಶದಲ್ಲಿರುವ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ವಾಹನ ಸಂಚಾರಕ್ಕೆ ಸೇನಾ ಆಕಾಂಕ್ಷಿಗಳು ಅಡ್ಡಿಪಡಿಸಿದ್ದಾರೆ. ಭಭುವಾ ರೋಡ್ ರೈಲ್ವೇ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲಿನ ಗಾಜಿನ ಕಿಟಕಿಗಳನ್ನು ಲಾಠಿಗಳಿಂದ ಒಡೆದು ಹಾಕಿದ್ದು, ರೈಲಿನ ಒಂದು ಕೋಚ್‍ಗೆ ಬೆಂಕಿ ಹಚ್ಚಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಜೊತೆಗೆ 5 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಪ್ರತಿಭಟನೆಯಿಂದಾಗಿ ಬಿಹಾರದಲ್ಲಿ ಸಂಚರಿಸುತ್ತಿದ್ದ 29 ರೈಲುಗಳ ಮೇಲೆ ಪರಿಣಾಮ ಬೀರಿದೆ. ಇದನ್ನೂ ಓದಿ: ಉತ್ತರ ಪ್ರದೇಶ ಬುಲ್ಡೋಜರ್‌ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ

    https://twitter.com/PAYALSHAHU62/status/1537336410768048128

    ಅಗ್ನಿಪಥ್ ನೇಮಕಾತಿ ವಿರೋಧಿಸಿ ಬಿಹಾರ, ರಾಜಸ್ಥಾನ, ಉತ್ತರಪ್ರದೇಶ, ಮಧ್ಯಪ್ರದೇಶಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇತ್ತ ರಾಹುಲ್ ಗಾಂಧಿ ಈ ಬಗ್ಗೆ ಟ್ವೀಟ್ ಮಾಡಿ ಕೇಂದ್ರ ಸರ್ಕಾರ ಯುವಕರ ತಾಳ್ಮೆಯನ್ನು ಪರೀಕ್ಷಿಸುವುದು ಬೇಡ ಎಂದು ಟೀಕೆ ವ್ಯಕ್ತ ಪಡಿಸಿದ್ದಾರೆ.

    Live Tv

  • ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ

    ವಿದ್ಯುತ್ ಸಮಸ್ಯೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ: ಚಿದಂಬರಂ ವ್ಯಂಗ್ಯ

    ನವದೆಹಲಿ: ವಿದ್ಯುತ್ ಕೊರತೆಗೆ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ, ಇದಕ್ಕೆಲ್ಲಾ 60 ವರ್ಷಗಳ ಕಾಂಗ್ರೆಸ್ ಆಡಳಿತವೇ ಕಾರಣ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ವ್ಯಂಗ್ಯವಾಡಿದರು.

    ಹಲವಾರು ರಾಜ್ಯಗಳು ಕಲ್ಲಿದ್ದಲು ಕೊರತೆ ಸಮಸ್ಯೆಯನ್ನು ಅನುಭವಿಸುತ್ತಿವೆ. ಈ ಸಂದರ್ಭದಲ್ಲಿ ವಿದ್ಯುತ್ ಬಿಕ್ಕಟ್ಟನ್ನು ಪರಿಹರಿಸಲು ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿರುವ ಸರ್ಕಾರದ ಕ್ರಮದ ವಿರುದ್ಧ ಟ್ವೀಟ್‌ ಮಾಡಿ ಟೀಕಿಸಿದರು.

    ಟ್ವೀಟ್‍ನಲ್ಲಿ ಏನಿದೆ?: ಹೇರಳವಾದ ಕಲ್ಲಿದ್ದಲು, ಹಾಗೂ ಉಷ್ಣ ಸ್ಥಾವರಗಳಲ್ಲಿ ಬಳಕೆಯಾಗದಷ್ಟು ಸಾಮರ್ಥ್ಯವಿದೆ. ಆದರೂ ದೇಶದಲ್ಲಿ ತೀವ್ರವಾದ ವಿದ್ಯುತ್ ಕೊರತೆ ಇದೆ. ಇದಕ್ಕೆಲ್ಲಾ ಮೋದಿ ಸರ್ಕಾರವನ್ನು ದೂಷಿಸಲು ಸಾಧ್ಯವಿಲ್ಲ. 60 ವರ್ಷಗಳ ಕಾಂಗ್ರೆಸ್ ಆಡಳಿತವೇ ಕಾರಣ.

    ಕೇಂದ್ರ ಸಚಿವಾಲಯಗಳಲ್ಲಿ ಕಲ್ಲಿದ್ದಲು, ರೈಲ್ವೆ ಅಥವಾ ವಿದ್ಯುತ್‍ನ ಯಾವುದೇ ಅಸಮರ್ಥತೆ ಇಲ್ಲ. ಇವೆಲ್ಲವೂ ಹಿಂದಿನ ಕಾಂಗ್ರೆಸ್ ಮಂತ್ರಿಗಳ ಮೇಲೆ ಎಂದು ಇಲಾಖೆ ಆಪಾದನೆ ಮಾಡಿದೆ. ಇದನ್ನೂ ಓದಿ: ಪಂಜಾಬ್‍ನ ಪಾಕ್ ಗಡಿಯಲ್ಲಿ ‘ಮೇಡ್ ಇನ್ ಚೀನಾ’ ಡ್ರೋನ್ ಹೊಡೆದುರುಳಿಸಿದ ಬಿಎಸ್‍ಎಫ್

    ಆದರೆ ಇದಕ್ಕೆಲ್ಲಾ ಸರ್ಕಾರ ಪರಿಪೂರ್ಣ ಪರಿಹಾರವನ್ನು ಕಂಡುಕೊಂಡಿದೆ. ಪ್ಯಾಸೆಂಜರ್ ರೈಲುಗಳನ್ನು ರದ್ದುಗೊಳಿಸಿ ಕಲ್ಲಿದ್ದಲು ರೇಕ್‍ಗಳನ್ನು ಚಲಾಯಿಸುತ್ತಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸಮಸ್ಯೆ – ಕಲ್ಲಿದ್ದಲು ಸಾಗಾಟಕ್ಕೆ 650ಕ್ಕೂ ಹೆಚ್ಚು ಪ್ರಯಾಣಿಕ ರೈಲುಗಳ ಸಂಚಾರ ರದ್ದು

    ದೇಶಾದ್ಯಂತ ವಿದ್ಯುತ್ ಬೇಡಿಕೆ ತೀವ್ರಗೊಂಡಿದ್ದು ಕಲ್ಲಿದ್ದಲು ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ರೈಲ್ವೆಯು ಕಲ್ಲಿದ್ದಲು ಸಾಗಿಸುವ ರೇಕ್‍ಗಳು ವಿದ್ಯುತ್ ಸ್ಥಾವರಗಳನ್ನು ವೇಗವಾಗಿ ತಲುಪಲು ಕಳೆದ ಎರಡು ವಾರಗಳಲ್ಲಿ ಪ್ರತಿದಿನ ಸುಮಾರು 16 ಮೇಲ್/ಎಕ್ಸ್ ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳನ್ನು ರದ್ದು ಮಾಡಿದೆ.

    ಕಲ್ಲಿದ್ದಲು ಸಚಿವಾಲಯವು ಪ್ರಸ್ತುತ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಪ್ರತಿದಿನ 422 ಕಲ್ಲಿದ್ದಲು ರೇಕ್‍ಗಳನ್ನು ಓಡಿಸುವಂತೆ ರೈಲ್ವೆಗೆ ಮನವಿ ಮಾಡಿದೆ. ಆದರೆ ರೈಲ್ವೆ ಪ್ರತಿದಿನ 415 ಕಲ್ಲಿದ್ದಲು ರೇಕ್‍ಗಳನ್ನು ನೀಡುವುದಾಗಿ ಒಪ್ಪಿಕೊಂಡಿತ್ತು. ಆದರೆ ಈಗ ಪ್ರತಿದಿನ 410 ರೇಕ್‍ಗಳು ಮಾತ್ರ ಸಂಚರಿಸುತ್ತಿದೆ.

    ಪ್ರತಿ ರೇಕ್ ಸುಮಾರು 3,500 ಟನ್ ಕಲ್ಲಿದ್ದಲನ್ನು ಹೊತ್ತೊಯ್ಯುವ ಸಾಮರ್ಥ್ಯವನ್ನು ಹೊಂದಿದೆ. ದೇಶದಲ್ಲಿನ ವಿದ್ಯುತ್ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಸುಧಾರಿಸಲು ಮುಂದಿನ ಎರಡು ತಿಂಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ ಎಂದು ಮೂಲವನ್ನು ಉದ್ದೇಶಿಸಿ ಮಾಧ್ಯಮ ವರದಿ ಮಾಡಿದೆ.

  • ಏ.30ರವರೆಗೂ ರೈಲ್ವೆ ಟಿಕೆಟ್ ಬುಕ್ಕಿಂಗ್ ಇಲ್ಲ

    ಏ.30ರವರೆಗೂ ರೈಲ್ವೆ ಟಿಕೆಟ್ ಬುಕ್ಕಿಂಗ್ ಇಲ್ಲ

    ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಸ್ತಬ್ಧಗೊಂಡಿದ್ದ ರೈಲು ಸೇವೆ ಸದ್ಯಕ್ಕೆ ಆರಂಭಗೊಳ್ಳುವುದಿಲ್ಲ. ಭಾರತೀಯ ರೈಲ್ವೆ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಐಆರ್‌ಸಿಟಿಸಿ, ರೈಲುಗಳ ಬುಕಿಂಗ್ ಅನ್ನು ಏಪ್ರಿಲ್ 30 ರವರೆಗೆ ಸ್ಥಗಿತಗೊಳಿಸಲು ನಿರ್ಧರಿಸಿದೆ.

    ಈ ಮಧ್ಯೆ ಐಆರ್‌ಸಿಟಿಸಿ ಸದ್ಯ ಮೂರು ರೈಲುಗಳನ್ನು ಓಡಿಸಲಿದೆ. 2 ತೇಜಸ್ ರೈಲುಗಳು ಮತ್ತು 1 ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ರೈಲು ಸಂಚರಿಸಲಿದೆ.

    ತೇಜಸ್ ಎಕ್ಸ್‌ಪ್ರೆಸ್‌ ರೈಲು ಅಹಮದಾಬಾದ್ – ಮುಂಬೈ ಮಧ್ಯ ಸಂಚರಿಸಿದರೆ, ಕಾಶಿ ಮಹಕಲ್ ಎಕ್ಸ್‌ಪ್ರೆಸ್‌ ದೆಹಲಿ-ಲಕ್ನೋ ಮಧ್ಯ ಸಂಚರಿಸಲಿದೆ. ಈಗಾಗಲೇ ಟಿಕೆಟ್ ಬುಕ್ಕಿಂಗ್ ಮಾಡಿರುವ ಪ್ರಯಾಣಿಕರ ಹಣವನ್ನು ವಾಪಸ್ ಬ್ಯಾಂಕ್ ಖಾತೆಗೆ ಮರು ಪಾವತಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್, ಭಾರತೀಯ ರೈಲ್ವೆಯ 2,500 ಬೋಗಿಗಳಲ್ಲಿ 40,000 ಪ್ರತ್ಯೇಕ ಹಾಸಿಗೆಗಳನ್ನು ಸಿದ್ಧಪಡಿಸಿದೆ. ರೈಲ್ವೆ ಇಲಾಖೆ ಪ್ರತಿದಿನ 375 ಪ್ರತ್ಯೇಕ ಹಾಸಿಗೆಗಳನ್ನು ತಯಾರಿಸುತ್ತಿದೆ ಮತ್ತು ಇದು ದೇಶಾದ್ಯಂತ 133 ಸ್ಥಳಗಳಲ್ಲಿ ನಡೆಯುತ್ತಿದೆ ಎಂದು ತಿಳಿಸಿದ್ದರು.

  • ಆಂಧ್ರ ಸರ್ಕಾರದಿಂದ ದೆಹಲಿ ಪ್ರತಿಭಟನೆಗೆ ಜನರನ್ನ ಕೊಂಡ್ಯೊಯಲು 1.12 ಕೋಟಿ ರೂ. ಖರ್ಚು

    ಆಂಧ್ರ ಸರ್ಕಾರದಿಂದ ದೆಹಲಿ ಪ್ರತಿಭಟನೆಗೆ ಜನರನ್ನ ಕೊಂಡ್ಯೊಯಲು 1.12 ಕೋಟಿ ರೂ. ಖರ್ಚು

    ಹೈದರಾಬಾದ್: ಕೇಂದ್ರ ಸರ್ಕಾರದ ವಿರುದ್ಧ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ಫೆ.11 ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಜನರನ್ನು ಕೊಂಡ್ಯೊಯಲು ಬರೋಬ್ಬರಿ 1.23 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದೆ.

    ಆಂಧ್ರ ಪ್ರದೇಶ ಆಡಳಿತಾತ್ಮಕ ಇಲಾಖೆ ರಾಜ್ಯದಿಂದ ರೈಲುಗಳಲ್ಲಿ ಜನರನ್ನು ಕರೆದುಕೊಂಡು ಹೋಗಲು ಹಣವನ್ನು ಬಿಡುಗಡೆ ಮಾಡಿದೆ. ಅನಂತಪುರಂ, ಶ್ರೀಕಾಕುಳಂ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಪಕ್ಷದ ಕಾರ್ಯಕರ್ತರು, ವಿವಿಧ ಸಂಘಟನೆಗಳ ಸ್ವಯಂ ಸೇವಕರನ್ನು ದೆಹಲಿಗೆ ಕರೆತರಲಿದ್ದು, ಫೆ.11 ರಂದು ‘ದೀಕ್ಷಾ’ ಹೆಸರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಚಂದ್ರಬಾಬು ನಾಯ್ಡು ಅವರು ಕೈಗೊಳ್ಳಲಿದ್ದಾರೆ.

    ಆಂಧ್ರ ಪ್ರದೇಶದಿಂದ ಹೊರಡುವ ಎರಡು ರೈಲುಗಳು ಭಾನುವಾರ 10 ಗಂಟೆಗೆ ದೆಹಲಿಯನ್ನು ತಲುಪಲಿದ್ದು, ಆಂಧ್ರ ಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 2014ರಲ್ಲಿ ಆಂಧ್ರಪ್ರದೇಶ ವಿಭಜನೆ ಕಾಯ್ದೆ ಆನ್ವಯ ಕೇಂದ್ರ ಸರ್ಕಾರ ತಮಗೇ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಬೇಕು ಎಂಬುವುದು ಚಂದ್ರಬಾಬು ನಾಯ್ಡು ಸರ್ಕಾರದ ಪ್ರಮುಖ ಬೇಡಿಕೆ ಆಗಿದೆ.

    ಕೇವಲ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಮಾತ್ರವಲ್ಲದೇ ವಿರೋಧಿ ಪಕ್ಷಗಳ ಸಹಕಾರವನ್ನು ಕೂಡ ಚಂದ್ರಬಾಬು ನಾಯ್ಡು ಅವರು ಕೋರಿದ್ದು, ಬಿಜೆಪಿ ಪಕ್ಷ ಹೊರತು ಪಡಿಸಿ ಉಳಿದೆಲ್ಲಾ ಪಕ್ಷಗಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅಂದಹಾಗೇ ಕಳೆದ ವರ್ಷವಷ್ಟೇ ಟಿಡಿಪಿ ಪಕ್ಷ ಎನ್‍ಡಿಎ ಒಕ್ಕೂಟದಿಂದ ಹೊರ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಾರೀ ಮಳೆಗೆ ಭೂಕುಸಿತ: ಮಂಗ್ಳೂರು- ಬೆಂಗ್ಳೂರು ರೈಲು ಸಂಚಾರ ಅಸ್ತವ್ಯಸ್ಥ

    ಭಾರೀ ಮಳೆಗೆ ಭೂಕುಸಿತ: ಮಂಗ್ಳೂರು- ಬೆಂಗ್ಳೂರು ರೈಲು ಸಂಚಾರ ಅಸ್ತವ್ಯಸ್ಥ

    ಹಾಸನ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರೈಲು ಪ್ರಯಾಣ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

    ಜಿಲ್ಲೆಯ ಹಾಸನ ಹಾಗೂ ಸಕಲೇಶಪುರ ತಾಲೂಕುಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾಸನ-ಮಂಗಳೂರು ಮಾರ್ಗದಲ್ಲಿ ಮೂರುಕಡೆ ಭೂಕುಸಿತ ಉಂಟಾಗಿದೆ. ಯಡಕುಮೇರಿಯ 218 ಮೈಲಿಯಲ್ಲಿ ಭೂಕುಸಿತ ಉಂಟಾಗಿದ್ದು ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ.

    ಬೆಂಗಳೂರಿಂದ-ಮಂಗಳೂರಿಗೆ ಹೋಗುತ್ತಿದ್ದ ರೈಲು ಹಾಸನದಲ್ಲಿ ನಿಂತುಕೊಂಡಿದೆ. ಇದರಿಂದ ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ತಮ್ಮ ನಿಗದಿತ ಜಾಗಗಳಿಗೆ ತಲುಪಲಾಗದೇ ಪರದಾಡಬೇಕಾಗಿದೆ.

    ಹಾಸನದಿಂದ ಬೆಂಗಳೂರಿಗೆ ಹೋಗಲು ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. 1200 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಟಿಕೆಟ್ ದರ ಮರುಪಾವತಿ ಮಾಡಿದೆ. ಮಾರ್ಗಮಧ್ಯೆ ಗುಡ್ಡ ಕುಸಿತದಿಂದ ಸಂಚಾರ ಅಸ್ತವ್ಯಸ್ತಗೊಂಡಿದ್ದು ಸಂಜೆ ವೇಳೆಗೆ ರೈಲು ಹಳಿ ಸಂಚಾರಕ್ಕೆ ಮುಕ್ತವಾಗಲಿವೆ ಎಂದು ಹಾಸನ ರೈಲ್ವೆ ನಿಲ್ದಾಣಾಧಿಕಾರಿ ವಿಜಯ್ ಕುಮಾರ್ ಹೇಳಿದ್ದಾರೆ.

    ಯಡಕುಮೇರಿ-ಕಡಗರವಳ್ಳಿ ನಡುವೆ ನಾಲ್ಕುಕಡೆ ಗುಡ್ಡ ಕುಸಿದು ಯಶವಂತಪುರದಿಂದ ಕಾರವಾರಕ್ಕೆ ಹೋಗುವ ರೈಲಿನ ಪ್ರಯಾಣ ರದ್ದುಗೊಂಡಿದೆ. ಅಲ್ಲಿಗೆ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರಿಗೆ ಟಿಕೆಟ್ ಹಣ ಮರುಪಾವತಿ ಮಾಡಲಾಗಿದೆ. ಆರು ಬಸ್ ಗಳ ಮೂಲಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಸಂಜೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳಬೇಕಿದ್ದ ರೈಲಿನ ಮಾರ್ಗವನ್ನೂ ಬದಲಾವಣೆ ಮಾಡಲಾಗಿದೆ.