Tag: Transfer Scam

  • ಗೃಹ ಇಲಾಖೆ ವರ್ಗಾವಣೆ ವಿಚಾರಕ್ಕೆ ಸಿಎಂಗೂ, ಗೃಹ ಸಚಿವರಿಗೂ ಸಂಘರ್ಷ ಆಗಿತ್ತು – HDK ಮತ್ತೊಂದು ಬಾಂಬ್

    ಗೃಹ ಇಲಾಖೆ ವರ್ಗಾವಣೆ ವಿಚಾರಕ್ಕೆ ಸಿಎಂಗೂ, ಗೃಹ ಸಚಿವರಿಗೂ ಸಂಘರ್ಷ ಆಗಿತ್ತು – HDK ಮತ್ತೊಂದು ಬಾಂಬ್

    ಬೆಂಗಳೂರು: ವಿದೇಶಿ ಪ್ರವಾಸ ಮುಗಿಸಿ ಬಂದ ಬೆನ್ನಲ್ಲೇ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಮತ್ತೆ ಸರ್ಕಾರದ ವಿರುದ್ಧ ಗುಡುಗಲಾರಂಭಿಸಿದ್ದಾರೆ. ಗೃಹ ಇಲಾಖೆ (Home Department) ವರ್ಗಾವಣೆ ರಹಸ್ಯ ಸಭೆಯಲ್ಲಿ ವೈಎಸ್‌ಟಿ ಭಾಗಿ ಮಾಹಿತಿ ಸ್ಫೋಟಿಸಿದ್ದ ಹೆಚ್‌ಡಿಕೆ ಈಗ ಆ ಸಭೆ ಬಗ್ಗೆ ಮತ್ತಷ್ಟು ರಹಸ್ಯಗಳನ್ನ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ತಮ್ಮನ್ನ ಟೀಕಿಸಿದ ಸಿಎಂ ಮತ್ತು ಪರಮೇಶ್ವರ್‌ ಅವ್ರಿಗೂ ಹೆಚ್‌ಡಿಕೆ ಟಕ್ಕರ್ ಕೊಟ್ಟಿದ್ದಾರೆ.

    ಗೃಹ ಇಲಾಖೆ ವರ್ಗಾವಣೆ (Home Department Transfer Scam) ಬಗ್ಗೆ ಮಾಜಿ ಸಿಎಂ ಹೆಚ್‌ಡಿಕೆ ಸ್ಫೋಟಿಸಿದ ಬಾಂಬ್ ಇನ್ನೂ ಸಿಡಿಯುತ್ತಲೇ ಇದೆ. ಈ ಮಧ್ಯೆ ಶನಿವಾರವೂ ಗೃಹ ವರ್ಗಾವಣೆ ದಂಧೆ ಆರೋಪ ಬಗ್ಗೆ ತಮ್ಮ ಬತ್ತಳಿಕೆಯಿಂದ ಮತ್ತಷ್ಟು ಬಾಣಗಳನ್ನ ಬಿಟ್ಟಿದ್ದಾರೆ. ಕಳೆದ ಜುಲೈ 30ರ ಸೀಕ್ರೆಟ್ ಸಭೆಯಲ್ಲಿ ಗೃಹ ಇಲಾಖೆ ವರ್ಗಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwara) ನಡುವೆ ಜಟಾಪಟಿ ನಡೆದಿತ್ತು ಅಂತ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

    ಇಲ್ಲಿನ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಕುಮಾರಸ್ವಾಮಿ, ಆವತ್ತು ಸಭೆ ನಡೆದ ಪೊಲೀಸ್ ಮೆಸ್‌ನಲ್ಲಿ ಸಿಎಂಗೂ-ಗೃಹ ಸಚಿವರಿಗೂ ಘರ್ಷಣೆ ಆಯ್ತು. ಸರ್ಕಾರದ ಶಾಸಕರಿಗೂ ಏನಾಯ್ತು ಅಂತ ಎಲ್ಲಾ ಗೊತ್ತಿದೆ. ವರ್ಗಾವಣೆ ಪ್ರಕ್ರಿಯೆ ಆಗುವಾಗ ಜೊತೆಗೆ ಯಾರು ಕೂತಿದ್ರು? ಅದೆಲ್ಲ ಗೊತ್ತಿಲ್ವಾ? ಸಾಕ್ಷಿಗೆ ಬೇಕಾದ್ರೆ ಮೆಸ್‌ನಲ್ಲಿ ಸಿಸಿ ಕ್ಯಾಮೆರಾಗಳಿವೆ, ಪರಿಶೀಲಿಸಬಹುದು ಎಂದಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಸೇವಿಸಿ ಐವರು ಸಾವು – ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ವಿತರಣೆ

    ಸುಮ್ನೆ ನನ್ನನ್ನ ಕೆಣಕಬೇಡಿ:
    ಇದೇ ವೇಳೆ ತಮ್ಮ ಆರೋಪ ಹಿಟ್ ಅಂಡ್ ರನ್ ಕೇಸ್‌ ಅಂದ ಸಿಎಂ ಮೇಲೂ ಹೆಚ್‌ಡಿಕೆ ಹರಿಹಾಯ್ದಿದ್ದಾರೆ. ನಾನು ಹಿಟ್ ಅಂಡ್ ರನ್ ಮಾಡುವ ವ್ಯಕ್ತಿ ಅಲ್ಲ. ನಡೆದಿರುವುದನ್ನ ಹೇಳಿದ್ದೇನೆ, ಮಿಸ್ಟರ್ ಸಿದ್ದರಾಮಯ್ಯ ನಿಮ್ಮಂತೆ ನಾನು ಸಿಎಂ ಆಗಿದ್ದಾಗ ನನ್ನ ಸಹಿಯನ್ನ ಮಾರಾಟಕ್ಕಿಟ್ಟಿರಲಿಲ್ಲ. ನಾನು ಹಿಟ್ ಅಂಡ್ ರನ್ನಾ? ಯಾವುದರಲ್ಲಿ ಹಿಟ್ ಅಂಡ್ ರನ್? ತೋರಿಸಿ ನೋಡೋಣ. ಸುಮ್ಮನೆ ನನ್ನನ್ನ ಕೆಣಕಬೇಡಿ. ಹಿಟ್ ಅಂಡ್ ರನ್ ಮಾಡ್ತಾ ಇರೋದು ನೀವು. ಬಿಜೆಪಿ ಸರ್ಕಾರದ ಮೇಲೆ 40% ಆರೋಪ ಮಾಡಿದಿರಿ. ಆ ಆರೋಪಗಳ ಕಥೆ ಏನಾಯ್ತು? ಒಂದು ದಾಖಲೆಯನ್ನಾದ್ರೂ ಹೊರಗೆ ಬಿಟ್ರಾ? ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? ಎಂದು ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ತೆರಿಗೆ ಕಾನೂನುಗಳು ಸರಳವಾಗ್ಬೇಕು; ಹೆಚ್ಚು ತೆರಿಗೆ ಸಂಗ್ರಹವಾಗ್ತಿದ್ರೆ, ದೇಶದ ಅಭಿವೃದ್ಧಿಯ ಸಂಕೇತ: ಬೊಮ್ಮಾಯಿ

    ಕೇರಳದಲ್ಲಿ ಮಾನ ಮೂರಾಬಟ್ಟೆಯಾಗಿದೆ:
    ಇನ್ನು ಗೃಹ ಸಚಿವ ಪರಮೇಶ್ವರ್ ವಿರುದ್ಧವೂ ಹೆಚ್‌ಡಿಕೆ ಟೀಕಾಪ್ರಹಾರ ನಡೆಸಿದ್ದಾರೆ. ತಮ್ಮ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಗೃಹ ಸಚಿವರೂ ಆಗಿದ್ದ ಪರಮೇಶ್ವರ್ ಅವರಿಗೆ ನಾನು ವರ್ಗಾವಣೆ ವಿಷಯದಲ್ಲಿ ಸಲಹೆ ಕೊಟ್ಟಿದ್ದೇನೆ ಎಂದು ಸ್ವತಃ ಅವರೇ ಹೇಳಿದ್ದಾರೆ. ನಾನು ಏನು ಸಲಹೆ ಕೊಟ್ಟಿದ್ದೀನಿ ಎಂದು ಅವರು ಜನರ ಮುಂದೆ ಬಂದು ಹೇಳಲಿ. ಪೊಲೀಸ್ ವರ್ಗಾವಣೆಯಲ್ಲಿ ನನ್ನ ಹಸ್ತಕ್ಷೇಪ ಇತ್ತಾ? ನೀವು, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸೇರಿ ವರ್ಗ ಮಾಡಿದ್ದು, ಅಲ್ಲವೇ? ಬಿಡಿಎ ಸಂಬಂಧಿಸಿದ ಗಲಾಟೆ ನನ್ನಿಂದ ಶುರುವಾಯಿತಾ? ಅಲ್ಲಿ ನಡೆದ ಅವಾಂತರಕ್ಕೆ ಯಾರು ಕಾರಣ? ಪರಮೇಶ್ವರ್ ಹೇಳಬಹುದು, ಅಲ್ಲವೇ? ಗೃಹ ಸಚಿವರು ನನ್ನ ಬಗ್ಗೆ ಮಾತನಾಡುವುದನ್ನ ಮೊದಲು ನಿಲ್ಲಿಸಲಿ. ಕೇರಳದಲ್ಲಿ ನಿಮ್ಮ ಇಲಾಖೆಯ ಮಾನ ಮೂರಾಬಟ್ಟೆ ಆಗಿದೆ. ಕೇರಳಕ್ಕೆ ಹೋಗಿ ಮುಖಕ್ಕೆ ಮಂಗಳಾರತಿ ಮಾಡಿಸ್ಕೊಂಡು ಬಂದ್ರಲ್ಲಾ? ಯಾವ ರೀತಿ ಆಡಳಿತ ಇದೆ ಅನ್ನೋದಕ್ಕೆ ಈ ಉದಾಹರಣೆ ಸಾಕಲ್ಲವೇ? ಎಂದು ಪರಮೇಶ್ವರ್‌ಗೆ ಟಾಂಗ್‌ ಕೊಟ್ಟಿದ್ದಾರೆ.

    ವರ್ಗಾವಣೆ ದಂಧೆಯಲ್ಲಿ 1 ಸಾವಿರ ಕೋಟಿ ಮೀರಿದೆ:
    ಈ ಸರ್ಕಾರ ಲೆಕ್ಕಕ್ಕಿಲ್ಲದಷ್ಟು ಪ್ರಮಾಣದಲ್ಲಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ದಿನದಿಂದ ದಿನಕ್ಕೆ ಅದರ ಅವ್ಯವಹಾರ ಎಲ್ಲೆ ಮೀರುತ್ತಿದೆ. ಈವರೆಗೆ ಈ ದಂಧೆಯಲ್ಲಿ 1,000 ಕೋಟಿಗೂ ಮೀರಿ ಕೈ ಬದಲಾಗಿದೆ ಎಂದು ಅಧಿಕಾರಿಗಳೇ ಮಾತನಾಡಿಕೊಳ್ಳುತ್ತಿದ್ದಾರೆ. ಒಂದೊಂದು ಹುದ್ದೆಗೆ ಮೂರು-ಮೂರು ಅಧಿಕಾರಿಗಳು ನಿಯೋಜನೆಯಾಗಿದ್ದಾರೆ. ಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿ ಕಚೇರಿಯ ಅಡಿ ಟಿಪ್ಪಣಿಗಳು ಹಾದಿಬೀದಿಯಲ್ಲಿ ಬಿಕರಿ ಆಗುತ್ತಿವೆ ಎಂದು ಹೆಚ್‌ಡಿಕೆ ಗಂಭೀರ ಆರೋಪ‌ ಮಾದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಧಾರವಾಡ ಜಿಲ್ಲೆಯಲ್ಲಿಯೂ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದೆ: ಪ್ರಹ್ಲಾದ್‌ ಜೋಶಿ ಬಾಂಬ್‌

    ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿಯೂ ಸಹ ಅಧಿಕಾರಿಗಳ ವರ್ಗಾವಣೆ ಹರಾಜು ಪ್ರಕ್ರಿಯೆ ನಡೆದಿದ್ದು, ಅಧಿಕಾರಿಗಳು ನನಗೆ ವಯಕ್ತಿಕವಾಗಿ ಕರೆ ಮಾಡಿ ನೋವು ನೋಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಬಾಂಬ್ ಸಿಡಿಸಿದ್ದಾರೆ.

    ಮಾಜಿ ಸಿಎಂ ಕುಮಾರಸ್ವಾಮಿ (H.D. Kumaraswamy) ವರ್ಗಾವಣೆ ಆರೋಪ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, ವರ್ಗಾವಣೆ ವಿಚಾರದಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿವೆ. ಬಿಜೆಪಿ ಮೇಲೆ ಕಾಂಗ್ರೆಸ್ ಮಾಡಿದ್ದ ಆರೋಪದ ಹತ್ತು ಪಟ್ಟು ಭ್ರಷ್ಟಾಚಾರ ನಡೆಯುತ್ತಿದೆ. ವರ್ಗಾವಣೆಗಳನ್ನು ಹರಾಜು ಮಾಡಲಾಗುತ್ತಿದೆ. 10, 12 ಲಕ್ಷ ಕೊಟ್ಟವರಿಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಅನ್ಯಕೋಮಿನ ಸದಸ್ಯನಿಗೆ ದಕ್ಕಿದ ಅಧ್ಯಕ್ಷ ಸ್ಥಾನ – 19 ಗ್ರಾಪಂ ಸದಸ್ಯರಿಂದ ಸಾಮೂಹಿಕ ರಾಜೀನಾಮೆ

    ಸುಪ್ರೀಂ ಕೋರ್ಟ್‌ ತೀರ್ಪಿನ ಕುರಿತು ಮಾತನಾಡಿ, ರಾಹುಲ್ ಗಾಂಧಿಯವರ ಶಿಕ್ಷೆಯನ್ನು ಕೋರ್ಟ್ ತಡೆದಿದೆಯೇ ಹೊರೆತು, ಅವರು ಮಾಡಿದ್ದು ಸರಿ ಅಂತ ಒಪ್ಪಿಕೊಂಡಿಲ್ಲ. ಮಾತನಾಡಿದ್ದು ತಪ್ಪು ಅಂತ ಹೇಳಿದೆ. ಕೋರ್ಟ್ ತೀರ್ಪು ಆಧರಸಿ ಸ್ಪೀಕರ್ ಅವರು ರಾಹುಲ್ ಗಾಂಧಿ ಸಂಸದ ಸ್ಥಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳತ್ತಾರೆ. ರಾಹುಲ್ ಗಾಂಧಿಯ ಅವರ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ. ಅದು‌ ನ್ಯಾಯಾಲಯದ ವಿಚಾರ ಎಂದರು.

    ಸಮಾಜ ವಿದ್ರೋಹಿಗಳಿಗೆ ಕಾಂಗ್ರೆಸ್ ಬಂದಿದ್ದು ಕುಮ್ಮಕ್ಕು ಸಿಕ್ಕಂತಾಗಿದೆ. ನಾವು ಏನು ಮಾಡಿದರೂ ಕಾಂಗ್ರೆಸ್ ಪಾರ್ಟಿ ಸಂರಕ್ಷಣೆ ನೀಡುತ್ತೆ ಅಂತ ಇದನ್ನು ಮಾಡಲಾಗುತ್ತಿದೆ ಎಂದು ಉಡುಪಿ ಹಾಸ್ಟೆಲ್ ವೀಡಿಯೋ ಮತ್ತು ಹುಬ್ಬಳ್ಳಿ ಕಾಲೇಜು ಪೋಸ್ಟ್ ವಿಚಾರವಾಗಿ ಗರಂ ಆದರು. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ

    ಆರಗ ಜ್ಞಾನೇಂದ್ರ ಅವರ ಬೇಡಿಕೆಗೆ ನಮ್ಮ ಸಮ್ಮತಿ ಇದೆ. ಆದರೆ ಅವರ ಹೇಳಿಕೆಗೆ ನಮ್ಮ ವಿರೋಧವಿದೆ. ಖರ್ಗೆಯವರ ಬಗ್ಗೆ ಜ್ಞಾನೇಂದ್ರ ಆ ರೀತಿ ಮಾತನಾಡಬಾರದಿತ್ತು. ರಾಜಕೀಯ ವಿಚಾರವಾಗಿ ಖರ್ಗೆ ಮತ್ತು ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿದೆ. ಆದರೆ ವಯಕ್ತಿಕವಾಗಿ ಖರ್ಗೆ ಅನುಭವ, ಹಿರಿತನದ ಬಗ್ಗೆ ಗೌರವವಿದೆ. ಯಾವುದೇ ವ್ಯಕ್ತಿ ಮೈ ಬಣ್ಣ, ಪ್ರದೇಶ‌ ನೋಡಿ ಮಾತನಾಡುವುದು ಸರಿಯಲ್ಲ.
    ಈ ಕುರಿತು ನಾನು ಜ್ಞಾನೇಂದ್ರಗೆ ತಿಳಿ ಹೇಳುತ್ತೇನೆ ಎಂದು ಹೇಳಿದರು.

    ಗೃಹಜ್ಯೋತಿ ಅರ್ಜಿ ಸಲ್ಲಿಕೆ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿದ್ದವು. ಈಗ ಅದೇ ಮುಂದುವರಿದಿದೆ. ದಿನ ಬಳಕೆ ವಿದ್ಯುತ್ ದರ ಜಾಸ್ತಿ ಮಾಡಿ ಯೋಜನೆ ಜಾರಿ ಮಾಡಲಾಗಿದೆ. ರಾಜಸ್ಥಾನದಲ್ಲಿ ಹೀಗೆ ಫ್ರೀ ವಿದ್ಯುತ್ ಕೊಡುತ್ತೇನೆ ಅಂತ ಹೇಳಿ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜೈನ ಮುನಿ ಕೊಲೆ ಕೇಸ್‌ – ಸಿಬಿಐ ತನಿಖೆಗೆ ಆಗ್ರಹಿಸಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

    ಜೈನ ಮುನಿ ಕೊಲೆ ಕೇಸ್‌ – ಸಿಬಿಐ ತನಿಖೆಗೆ ಆಗ್ರಹಿಸಿ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ

    ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೇತೃತ್ವದಲ್ಲಿ ಬಿಜೆಪಿ ಸದಸ್ಯರು ವಿಧಾನಸಭೆಯಲ್ಲಿ (Assembly) ಪ್ರತಿಭಟನಾ ಧರಣಿ ನಡೆಸಿದರು.

    ಜೈನಮುನಿ ಹತ್ಯೆ ಪ್ರಕರಣದ ಕುರಿತು ಶೂನ್ಯ ವೇಳೆಯಲ್ಲಿ ನಡೆದ ಚರ್ಚೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ (G Parameshwara) ನೀಡಿದ ಉತ್ತರ ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ವರ್ಗಾವಣೆ ‘ವ್ಯಾಪಾರ’ದ ಕಿಚ್ಚು ; ಕಾಂಗ್ರೆಸ್-ಬಿಜೆಪಿ ಮಧ್ಯೆ ಜಟಾಪಟಿ, ಕಲಾಪ ಮುಂದೂಡಿಕೆ

    ಧರಣಿಗೂ ಮೊದಲು ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜೈನಮುನಿ ಕೊಲೆಗೂ ಬೇರೆ ಕೊಲೆಗೂ ಹೋಲಿಕೆ ಮಾಡುವುದು ಸರಿಯಲ್ಲ. ಯಾರಿಗೂ ಹಿಂಸೆ ಬಯಸದ ಜೈನ ಮುನಿಗಳನ್ನ ಕರೆಂಟ್ ಶಾಕ್ ಕೊಟ್ಟು ಹತ್ತೆ ಮಾಡಿರಬೇಕೆಂದರೆ ಇದರ ಹಿಂದೆ ಷಡ್ಯಂತರ ಇದೆ‌. ಈ ಪ್ರಕರಣದಲ್ಲಿ ಅವರು ಕೊಂದು ಇಷ್ಟೊಂದು ತುಂಡು ಮಾಡಿ ಕೊಳವೆ ಬಾವಿಯಲ್ಲಿ ಹಾಕುವಷ್ಟು ಸಮಯ ಇದ್ದರೇ ಅವರು ಎಷ್ಟು ಪೂರ್ವ ನಿಯೋಜಿತ ಯೋಜನೆ ರೂಪಿಸಿದ್ದರು ಎನ್ನುವುದಕ್ಕೆ ಸಾಕ್ಷಿ ಎಂದು ಹೇಳಿದರು.

    ಈ ಪ್ರಕರಣದಲ್ಲಿ ಯಾರನ್ನೋ ರಕ್ಷಣೆ ಮಾಡುವ ಪ್ರಯತ್ನ‌ ನಡೆಸಿದ್ದೀರಿ ಎನ್ನುವ ಅನುಮಾನ ಮೂಡುತ್ತಿದೆ. ಪ್ರಕರಣವನ್ನು ಸಿಬಿಐಗೆ ಕೊಡುವುದರಿಂದ ರಾಜ್ಯ ಪೊಲಿಸರ ಘನತೆ ಏನು ಕಡಿಮೆ ಆಗುವುದಿಲ್ಲ. ಅನೇಕ ಪ್ರಕರಣಗಳನ್ನು ಹಿಂದೆ ಸಿಬಿಐಗೆ ಕೊಟ್ಟಿದ್ದಾರೆ. ಈ ಪ್ರಕರಣ ಸಿಬಿಐಗೆ ಕೊಡುವುದರಿಂದ ಏನು ಕಳೆದುಕೊಳ್ಳುವುದಿದೆ? ಸಿಬಿಐಗೆ ಕೊಡದಿದ್ದರೆ ಅನುಮಾನ ಹುಟ್ಟುತ್ತದೆ. ನೀವು ಸಿಬಿಐ, ಇನ್ಸ್‌ಪೆಕ್ಟರ್ ನಿಂದ ತನಿಖೆ ಮಾಡಿಸಲು ಬಯಸುತ್ತಿದ್ದೀರಿ ಇದರ ವಿರುದ್ದ ಪ್ರತಿಭಟನೆ ನಡೆಸುತ್ತೇವೆ ಎಂದು ಸದನದ ಬಾವಿಗಿಳಿದು ಧರಣಿ ನಡೆಸಿದರು. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ ರಾಜ್ಯಪಾಲರಿಗೆ ಮನವಿ: ಬೊಮ್ಮಾಯಿ

    ಆರೋಪಿಗಳ ಮೇಲೆ ಕ್ರಮಣಕ್ಕೆ ಆಗ್ರಹ:
    ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಯುವಬ್ರಿಗೇಡ್‌ ಕಾರ್ಯಕರ್ತ ವೇಣುಗೋಪಾಲ ಎನ್ನುವ ವ್ಯಕ್ತಿಯನ್ನ ಬರ್ಬರವಾಗಿ ಹತ್ಯೆ ಮಾಡಿದ್ದು, ಹಂತಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

    ಹನುಮ ಜಯಂತಿ ಕಾರ್ಯಕ್ರಮದಲ್ಲಿ ಅವಕಾಶ ನೀಡಲಿಲ್ಲ, ದೇವರ ಫೋಟೊ ಜಾಗದಲ್ಲಿ ಪುನೀತ್‌ ರಾಜಕುಮಾರ್ ಫೋಟೋ ಇಡುವ ವಿಚಾರಕ್ಕೆ ಮಣಿಕಂಠ, ವೇಣುಗೋಪಾಲ ನಡುವೆ ಗಲಾಟೆಯಾಗಿದೆ. ಮಾರನೇ ದಿನ ಮಾತುಕತೆಗೆಂದು ಕರೆಸಿಕೊಂಡು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೊಗುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇಷ್ಟು ಸಣ್ಣ ವಿಚಾರಕ್ಕೆ ಕೊಲೆಯಾಗಿರೋದು ಆಘಾತಕಾರಿ, ಧಾರ್ಮಿಕ ಆಚರಣೆಗಳು ನಿರಂತರವಾಗಿ ನಡೆಯುತ್ತವೆ. ಈ ರೀತಿಯ ಕೊಲೆಗಳು ಸಮಾಜದ ಮೇಲೆ ಪರಿಣಾಮ ಬೀರುತ್ತವೆ. ಇದರಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

    ಈ ರೀತಿಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಪೊಲಿಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಆದರೆ ಮೆಲಧಿಕಾರಿಗಳು ಆರೋಪಿಗಳ ಹೆಸರುಗಳನ್ನು ಹೇಳಿ ದಾರಿ ತಪ್ಪಿಸುತ್ತಿದ್ದಾರೆ. ಸಕಲೇಶಪುರ, ಕಲಬುರಗಿ, ನಂಜನಗೂಡಿನಲ್ಲಿ ಹಲವು ಪ್ರಕರಣಗಳು ನಡೆದಿವೆ. ಇಂತಹ ಪ್ರಕರಣಗಳನ್ನ ಸರ್ಕಾರ ಗಂಭಿರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ ಎಂದು ಹೇಳಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನಸಭೆಯಲ್ಲಿ ವರ್ಗಾವಣೆ ‘ವ್ಯಾಪಾರ’ದ ಕಿಚ್ಚು ; ಕಾಂಗ್ರೆಸ್-ಬಿಜೆಪಿ ಮಧ್ಯೆ ಜಟಾಪಟಿ, ಕಲಾಪ ಮುಂದೂಡಿಕೆ

    ವಿಧಾನಸಭೆಯಲ್ಲಿ ವರ್ಗಾವಣೆ ‘ವ್ಯಾಪಾರ’ದ ಕಿಚ್ಚು ; ಕಾಂಗ್ರೆಸ್-ಬಿಜೆಪಿ ಮಧ್ಯೆ ಜಟಾಪಟಿ, ಕಲಾಪ ಮುಂದೂಡಿಕೆ

    ಬೆಂಗಳೂರು: ವಿಧಾನಸಭೆ ಕಲಾಪದಲ್ಲಿಂದು (Assembly Session) ವರ್ಗಾವಣೆ ದಂಧೆ ಆರೋಪ ವಿಚಾರ ದೊಡ್ಡ ಸದ್ದು ಮಾಡ್ತು. ಯತ್ನಾಳ್ ಮಾಡಿದ ಆರೋಪ ಕಾಂಗ್ರೆಸ್-ಬಿಜೆಪಿ (Congress, BJP) ಮಧ್ಯೆ ಮಾತಿನ ಕಿಚ್ಚು ಹಚ್ಚಿತ್ತು. ಸದಸ್ಯರು ಪರಸ್ಪರ ಏರು ದನಿಯಲ್ಲಿ ವಾಗ್ವಾದಕ್ಕಿಳಿದು ಕಲಾಪದಲ್ಲಿ ಕೋಲಾಹಲ ಎಬ್ಬಿಸಿದ್ದರು.

    ವಿಧಾನಸಭೆಯಲ್ಲಿಂದು ಮಾಜಿ ಸಿಎಂ HDK ಗೈರಾಗಿದ್ದರು. ಆದ್ರೂ ವರ್ಗಾವಣೆ ಫೈಟ್ ಜೋರಾಗಿಯೇ ಕಾವೇರಿತ್ತು. ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹತ್ತಿಸಿದ ವರ್ಗಾವಣೆ ಕಿಡಿಗೆ ಕೆಲ ಗಂಟೆಗಳ ಕಲಾಪ ಉಭಯ ಪಕ್ಷಗಳ ಸದಸ್ಯರ ಜಟಾಪಟಿಗೆ ಬಲಿಯಾಯ್ತು. ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರ ಹುದ್ದೆಗೆ ಅನರ್ಹ ಅಧಿಕಾರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಶೂನ್ಯವೇಳೆಯಲ್ಲಿ ಯತ್ನಾಳ್ ವಿಷಯ ಪ್ರಸ್ತಾಪಿಸಿದರು. ಈ ವೇಳೆ ನಗರಾಭಿವೃದ್ಧಿ ಇಲಾಖೆ ಸಚಿವ ಬೈರತಿ ಸುರೇಶ್ ವಿರುದ್ಧ ಯತ್ನಾಳ್ ವರ್ಗಾವಣೆ ವ್ಯಾಪಾರ ನಡೆಸುತ್ತಿರುವ ಗಂಭೀರ ಆರೋಪ ಮಾಡಿದ್ದರಿಂದ ಸದನದಲ್ಲಿ ಪರಸ್ಪರ ಮಾತಿನ ಬೆಂಕಿ ಹಚ್ಚಿಕೊಳ್ತು.

    ವಿಜಯಪುರ ಪಾಲಿಕೆಗೆ ಅರ್ಹತೆಯಿಲ್ಲದ, ಐಎಎಸ್, ಕೆಎಎಸ್ ಕೇಡರ್ ಇಲ್ಲದ ಅಧಿಕಾರಿಯನ್ನ ವರ್ಗಾಯಿಸಲಾಗಿದೆ. ಆ ಮೂಲಕ ಹೈಕೋರ್ಟ್, ಕೆಎಟಿ, ಸರ್ಕಾರದ ನಿಯಮಗಳನ್ನ ಉಲ್ಲಂಘಿಸಲಾಗಿದೆ. ಆ ಅಧಿಕಾರಿ ಸೌಜನ್ಯಕ್ಕೂ ನನ್ನ ಬಂದು ಮಾತಾಡಿಸಿಲ್ಲ. ಈ ವರ್ಗಾವಣೆ ಮೂಲಕ ಸಚಿವರು ವ್ಯಾಪಾರ ಮಾಡಿರಬಹುದು ಎಂದು ಗಂಭೀರ ಆರೋಪ ಮಾಡಿದ್ರು. ಯತ್ನಾಳ್ ಆರೋಪಕ್ಕೆ ಸಚಿವ ಬೈರತಿ ಸುರೇಶ್ ಹಾಗೂ ಕಾಂಗ್ರೆಸ್ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಸದನದಲ್ಲಿ ಗದ್ದಲ, ಕೋಲಾಹಲ ಸೃಷ್ಟಿಯಾಗಿ ಸದಸ್ಯರು ಪರಸ್ಪರ ಮಾತಿನ ಸಮರ ನಡೆಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ನಮಾಜ್‌ ಮಾಡೋಕೆ ಅದೇನು ಮೆಕ್ಕಾ-ಮದೀನಾನಾ – ಮುತಾಲಿಕ್‌ ಪ್ರಶ್ನೆ

    ಅಷ್ಟೇ ಅಲ್ಲ ಯತ್ನಾಳ್ ಮಾತಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸಹ ಕಿಡಿಕಾರಿದ್ರು. ಯತ್ನಾಳ್ ನೀವು ಹಿರಿಯರು, ವರ್ಗಾವಣೆ ಬಗ್ಗೆ ಮಾತ್ರ ಮಾತಾಡಿ, ಅದು ಬಿಟ್ಟು ವ್ಯಾಪಾರ ಅಂತೆಲ್ಲ ಏನ್ರಿ ಮಾತಾಡೋದು ಅಂತ ಸಿದ್ದರಾಮಯ್ಯ ಗರಂ ಆಗಿ ಗದರಿದರು. ಇನ್ನು ಡಿಕೆಶಿ ಸಹ, ಯತ್ನಾಳ್ ನೀವು ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ರೂ., ಮಂತ್ರಿ ಹುದ್ದೆಗೆ 1,000 ಕೋಟಿ ರೂ. ಅಂತೆಲ್ಲಾ ಆರೋಪ ಮಾಡಿದ್ರಿ. ಮಾತಿನ ಮೇಲೆ ಹಿಡಿತವಿರಲಿ, ನಮ್ಮ ಪಕ್ಷದಲ್ಲಿ ಇದ್ದಿದ್ದರೆ, ನಿಮ್ಮನ್ನ 24 ಗಂಟೆಯಲ್ಲಿ ವಜಾ ಮಾಡ್ತಿದ್ದೆ ಅಂತ ಕಿಡಿಕಾರಿದ್ರು. ಈ ವೇಳೆ ಯತ್ನಾಳ್ ಪರ ಮಾಜಿ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡ್ರು. ಉಭಯ ಪಕ್ಷಗಳ ಸದಸ್ಯರ ನಡುವೆ ಭಾರೀ ಜಟಾಪಟಿ ನಡೀತು. ಬೈರತಿ ಸುರೇಶ್ ಕ್ಷಮೆಗೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗೆ ಇಳಿದು ಧರಣಿ ನಡೆಸಿದ್ರು. ಸ್ಪೀಕರ್ ಅನಿವಾರ್ಯವಾಗಿ ಸದನವನ್ನ ಹತ್ತು ನಿಮಿಷ ಕಾಲ ಮುಂದೂಡಿದರು. ಬಳಿಕ ಸ್ಪೀಕರ್‌ ನೇತೃತ್ವದಲ್ಲಿ ಸಂಧಾನ ಸಭೆ ನಡೆಸಲಾಯ್ತು. ಇದನ್ನೂ ಓದಿ: ರಾಜ್ಯದಲ್ಲಿ ಡಿಸಿ, ಸಿಇಓ, ಕಮಿಷನರ್‌ಗಳಿಗೆ ರೇಟ್ ಫಿಕ್ಸ್ ಆಗಿದೆ: ಕಟೀಲ್ ಗಂಭೀರ ಆರೋಪ

    ಬಹಳ ಹೊತ್ತು ಸಂಧಾನ ಸಭೆ ನಡೆಸಿ ಮತ್ತೆ ಕಲಾಪ ಆರಂಭವಾದಾಗ ಮತ್ತೆ ಜಟಾಪಟಿ ನಡೀತು.‌ ಈ ವೇಳೆ ಸಿದ್ದರಾಮಯ್ಯ ಸಲಹೆ ಮೇರೆಗೆ ಉಭಯ ಕಡೆಯಿಂದಲೂ ವಿಷಾದ ವ್ಯಕ್ತಪಡಿಸಿ ಗದ್ದಲಕ್ಕೆ ಬ್ರೇಕ್ ಹಾಕಲಾಯ್ತು. ಅಧಿಕಾರಿ ವರ್ಗ ಬಗ್ಗೆ ಉತ್ತರಿಸಿದ ಸಚಿವ ಬೈರತಿ ಸುರೇಶ್, ವರ್ಗಾವಣೆಯಲ್ಲಿ ನಿಯಮ ಉಲ್ಲಂಘನೆ ಆಗಿದ್ದರೆ ವಾಪಸ್ ಪಡೆಯೋದಾಗಿಯೂ ಸರಿ ಇದ್ದರೆ ಅದೇ ಅಧಿಕಾರಿ ಮುಂದುವರೆಸೋದಾಗಿಯೂ ಉತ್ತರಿಸಿದರು.‌ ಅಲ್ಲಿಗೆ ಯತ್ನಾಳ್ ಹಚ್ಚಿದ್ದ ವರ್ಗಾವಣೆ ಕಿಡಿಯೂ ತಣ್ಣಗಾಯ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನಸೌಧ, ಶಾಸಕರ ಭವನ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಏಜೆಂಟ್‌ಗಳು ಫುಲ್‌ ಬ್ಯುಸಿ – ಬೊಮ್ಮಾಯಿ ವರ್ಗಾವಣೆ ದಂಧೆ ಆರೋಪ

    ವಿಧಾನಸೌಧ, ಶಾಸಕರ ಭವನ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಏಜೆಂಟ್‌ಗಳು ಫುಲ್‌ ಬ್ಯುಸಿ – ಬೊಮ್ಮಾಯಿ ವರ್ಗಾವಣೆ ದಂಧೆ ಆರೋಪ

    ಬೆಂಗಳೂರು: ವರ್ಗಾವಣೆ ದಂಧೆ (Transfer Scam) ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ ಭವನ, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಜನ ತುಂಬಿಕೊಂಡಿದ್ದಾರೆ. ಇವರಿಂದ ಸ್ವಚ್ಛ ಆಡಳಿತ ನಿರೀಕ್ಷಿಸಲಾಗುತ್ತಾ? ಏಜೆಂಟರು ಎಷ್ಟು ಬ್ಯೂಸಿ ಇದ್ದಾರೆ ಅಂದ್ರೆ ಮಂತ್ರಿಗಳೇ ನಿಲ್ಲಿಸಿದ್ರೂ ನಿಲ್ಲಲ್ಲ, ಅಷ್ಟು ಸ್ಪೀಡಾಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

    ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು‌, ವಿಧಾನಸೌಧದ ಸುತ್ತ ಜನವೋ ಜನ ತುಂಬಿ ತುಳುಕುತ್ತಿದೆ. ಏಜೆಂಟ್‌ಗಳು ಫುಲ್‌ ಬ್ಯೂಸಿಯಾಗಿದ್ದಾರೆ. ಮಂತ್ರಿಗಳೇ ನಿಲ್ಲಿಸಿದ್ರೂ ನಿಲ್ಲೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ‌ವಿಧಾನಸೌಧದಲ್ಲಿ ನಮ್ಗೆ ಕಾರ್‌ ಪಾರ್ಕಿಂಗ್‌ ಮಾಡೋಕೆ ಸ್ಥಳ ಸಿಕ್ತಿಲ್ಲ – ಪರಿಷತ್ ನಲ್ಲಿ ಶಾಸಕರ ಅಳಲು

    ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ (Kumarakrupa Guest House) ಸುತ್ತಮುತ್ತ ಜನಜಂಗುಳಿ, ಹಫ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು. ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸಬೇಕೆಂದರೆ 2013 ರಿಂದ 2023ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

    ಭ್ರಷ್ಟಾಚಾರ ನಿಯಂತ್ರಣಕ್ಕೆ‌ ಲೋಕಾಯುಕ್ತ ಇರುವಾಗ ಅದನ್ನ ನಿಷ್ಕ್ರೀಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತಾ ಕೋರ್ಟ್ ಆದೇಶದಲ್ಲಿಯೇ ಇದೆ. ಭ್ರಷ್ಟಾಚಾರ ನಿಯಂತ್ರಣ ಮಾಡೋದಕ್ಕೆ 2013 ರಿಂದ 2023ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ‌ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ. ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ ಸತ್ಯ ಹೊರಬೇಕೆಂದರೆ ನಮ್ಮ ಕಾಲದ ನಿಮ್ಮ ಕಾಲದಲ್ಲಿ ನಡೆದಿರುವ ಭಷ್ಟ್ರಾಚಾರ ಹಗರಣಗಳ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಿದರು.

    ಹಫ್ತಾ ವಸೂಲಿಗೆ ಒತ್ತಡ:
    ಅಧಿಕಾರಿಗಳ‌ ಮೇಲೆ, ಕಾನ್ ಸ್ಟೇಬಲ್ ಗಳ ಮೇಲೆ ಒತ್ತಡ ಹೇರಿ ಹಫ್ತಾ ವಸೂಲಿ ಮಾಡಲಾಗುತ್ತಿದೆ. ಬೀದರ್ ನಲ್ಲಿ ಒಬ್ಬ ಏಜೆಂಟನ್ನ ಹಫ್ತಾ ವಸೂಲಿ ಮಾಡಲಿಕ್ಕೆ ಇಟ್ಟುಕೊಂಡಿದ್ದಾರೆ. ಅವನು ಹಫ್ತಾ ವಸೂಲಿ ಮಾಡಿದರೂ ಮತ್ತೆ ಗಾಡಿ ನಿಲ್ಲಿಸಿ ಮತ್ತೆ ಹಫ್ತಾ ವಸೂಲಿ ಮಾಡುವಂತೆ ಕೊರವಿ ಎನ್ನುವ ಇನ್ಸ್ ಪೆಕ್ಟರ್ ಒತ್ತಡ ಹೇರಿದ್ದಾರೆ ಅಂತಾ ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ ಕೂಡ ಆಗಿದೆ. ಕಲಬುರಗಿಯಲ್ಲಿ ಹಿರಿಯ ಅಧಿಕಾರಿಗಳೇ ಹಫ್ತಾ ವಸೂಲಿ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಕಾನ್ ಸ್ಟೇಬಲ್‌ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಯಾವ ಅಧಿಕಾರಿ ಒತ್ತಡ ಹೇರಿದ್ದರು ಅಂತ ಅವರ ಹೆಸರುಕೂಡ ಪೇದೆ ಹೇಳಿದ್ದಾರೆ. ಅವರ ಮೇಲೆ ಒತ್ತಡ ತಂದು ಹೇಳಿಕೆ ತಿರುಚುವ ಪ್ರಯತ್ನ ಕೂಡ ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ಸರಣಿ ಆರೋಪ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದ್ರೆ ರಾಜಕೀಯ ನಿವೃತ್ತಿ: ಹೆಚ್‌ಡಿಕೆ

    ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದ್ರೆ ರಾಜಕೀಯ ನಿವೃತ್ತಿ: ಹೆಚ್‌ಡಿಕೆ

    ಬೆಂಗಳೂರು: ನಾನು ವರ್ಗಾವಣೆ ದಂಧೆ ನಡೆಸಿದ್ದೇನೆ ಅಂತ ಒಂದು ಪ್ರಕರಣ ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಸವಾಲು ಹಾಕಿದರು.

    ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಸರ್ಕಾರ ದಿನದ 24 ಗಂಟೆಯೂ ವರ್ಗಾವಣೆ ದಂಧೆಯನ್ನೇ ನಡೆಸುತ್ತಿದೆ. ಅಭಿವೃದ್ಧಿ ಬದಲು ನಗದು ಅಭಿವೃದ್ಧಿಯಲ್ಲಿ ತೊಡಗಿದೆ. ಇದನ್ನು ಹೇಳಿದರೆ ನಮ್ಮ ಮೇಲೆಯೇ ಕೆಸರು ಎರಚುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಯತೀಂದ್ರ ನಮ್ಮ ಮನೆಯಲ್ಲಿದ್ದಾರೆ ಅಂತ ಆರೋಪ ಮಾಡೋದು ಸರಿಯಲ್ಲ – HDK ವಿರುದ್ಧ ಸಿಎಂ ವಾಗ್ದಾಳಿ

    ಈ ಸರ್ಕಾರ ನಡೆಸುತ್ತಿರುವ ವರ್ಗಾವಣೆ ದಂಧೆಗಳಿಗೆ ಸಂಬಂಧಿಸಿ ನನ್ನಲ್ಲಿ ದಾಖಲೆಗಳಿವೆ. ಅದರಲ್ಲಿ ಯಾರಿಗೂ ಅನುಮಾನ ಬೇಡ. ಅದನ್ನು ಬಿಡುಗಡೆ ಮಾಡಬೇಕಾದ ಸಂದರ್ಭದಲ್ಲಿ ಮಾಡುತ್ತೇನೆ. ಯಾವಾಗ, ಎಲ್ಲಿ ಬಿಡುಗಡೆ ಮಾಡುತ್ತೇನೆ ಎಂಬುದು ನನಗೆ ಗೊತ್ತಿದೆ. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಹಲವಾರು ವರ್ಷಗಳು ಕೆಲಸ ಮಾಡಿದ್ದಾರೆ. ಅವರು ಎಂದಾದರೂ ದಾಖಲೆ ಬಿಡುಗಡೆ ಮಾಡಿದ್ದರಾ ಎಂದು ಖಾರವಾಗಿ ಪ್ರಶ್ನೆ ಮಾಡಿದರು.

    ಅವರು ದಾಖಲೆ ಇಟ್ಟು ಮಾತನಾಡಿದ್ದನ್ನು ನಾನು ನೋಡಲೇ ಇಲ್ಲ. ಇದ್ದರೆ ತೋರಿಸಲಿ. ಬಹುಮತದ ಸರ್ಕಾರ ತಂದುಕೊಂಡು ಈ ದಂಧೆಯಲ್ಲಿ ತೊಡಗಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು. ಇದನ್ನೂ ಓದಿ: ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

    ಮೈಸೂರಿನಲ್ಲಿ ವರ್ಗಾವಣೆ ಬಗ್ಗೆ ಚರ್ಚೆ ಆಗುತ್ತಿದೆ. ಮನೆಯಲ್ಲಿ ಸಿಎಂ ಪುತ್ರ ಮಲಗಿರುವ ಸಂದರ್ಭದಲ್ಲಿ ಇಷ್ಟಾಗಿದೆ. ಇನ್ನೂ ಹೊರಗೆ ಬಂದರೆ ಏನಾಗಬಹುದು ಎಂದು ಜನ ಕೇಳುತ್ತಿದ್ದಾರೆ. ನಾನು ದ್ವೇಷದ ರಾಜಕೀಯ ಮಾಡ್ತಿಲ್ಲ. ವಿರೋಧ ಪಕ್ಷದ ಸದಸ್ಯನಾಗಿ ನನ್ನ ಕೆಲಸ ಮಾಡುತ್ತಿದ್ದೇನೆ. ಸತ್ಯ ಹೇಳುವುದೇ ತಪ್ಪಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದರು.

    ನಾನು ಓಡಿ ಹೋಗಲ್ಲ, ದಾಖಲೆ ಬಿಟ್ಟೇ ಬಿಡುತ್ತೇನೆ
    ಪೆನ್‌ಡ್ರೈವ್ ಬಿಡುಗಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಹೆದರಿ ಓಡಿ ಹೋಗುವ ವ್ಯಕ್ತಿ ಅಲ್ಲ. ಹಿಟ್ ಆ್ಯಂಡ್ ರನ್ ಮಾಡಲ್ಲ. ಕಾಂಗ್ರೆಸ್ ನಾಯಕರು ಏನು ಮಾತಾಡ್ತಾರೆಂದು ನೋಡೋಣ. ನನ್ನ ಬಳಿ ಇರುವ ಪೆನ್‌ಡ್ರೈವ್ ಅಸಲಿ, ಹೈದ್ರಾಬಾದ್‌ನಲ್ಲಿ ಮಾಡಿಸಿದ್ದಲ್ಲ. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಕ್ರಮ ಏನು ಅಂತ ಅವರು ಹೇಳಲಿ. ಆಮೇಲೆ ದಾಖಲೆ ಹೊರ ಬಿಡುತ್ತೇನೆ ಎಂದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುಮಾರಸ್ವಾಮಿ ಯಾವತ್ತೂ ಹಿಟ್‌ & ರನ್ ಕೇಸ್‌ – ಸಿಎಂ ತಿರುಗೇಟು

    ಕುಮಾರಸ್ವಾಮಿ ಯಾವತ್ತೂ ಹಿಟ್‌ & ರನ್ ಕೇಸ್‌ – ಸಿಎಂ ತಿರುಗೇಟು

    ಬೆಂಗಳೂರು: ಕುಮಾರಸ್ವಾಮಿ ಯಾವಗ್ಲೂ ಹಿಟ್ ಅಂಡ್ ರನ್ ಕೇಸ್ (Hit and Run Case). ಇದುವರೆಗೆ ಮಾಡಿರೋ ಆರೋಪಗಳಲ್ಲಿ ಯಾವುದನ್ನ ಕುಮಾರಸ್ವಾಮಿ ಲಾಜಿಕಲ್ ಎಂಡ್‌ಗೆ ತೆಗೆದುಕೊಂಡು ಹೋಗಿದ್ದಾರೆ ಹೇಳಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿ ಕಾರಿದ್ದಾರೆ.

    ಕಾಂಗ್ರೆಸ್‌ ಸರ್ಕಾರದ ಮೇಲೆ ಸಾಲು ಸಾಲು ಆರೋಪ ಮಾಡ್ತಿರೋ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಆರೋಪಗಳಿಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಪಾಪ ಹತಾಶರಾಗಿದ್ದಾರೆ. ಹತಾಶೆಯಾಗಿ ದ್ವೇಷದಿಂದ ಹೀಗೆಲ್ಲ ಮಾತಾಡ್ತಾ ಇದ್ದಾರೆ ಅಂತಾ ಕುಟುಕಿದ್ದಾರೆ.

    ಈಗ ಹೊಸ ಸರ್ಕಾರ ಬಂದಿದೆ, ಇದು ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ. ಜನರಲ್ ವರ್ಗಾವಣೆ ಪ್ರಕ್ರಿಯೆಯಲ್ಲಿ ವರ್ಗಾವಣೆ ಮಾಡಲೇಬೇಕು. ಅದಕ್ಕೆ ದಂಧೆ (Transfer Scam) ನಡೆದಿದೆ, ‌ಲಂಚ ನಡೆದಿದೆ ಅಂತಾ ಹೇಳ್ತಿರೋದು ಸುಳ್ಳು ಎಂದು ಹೆಚ್‌ಡಿಕೆ ಆರೋಪಗಳನ್ನ ತಳ್ಳಿಹಾಕಿದ್ದಾರೆ. ಇದನ್ನೂ ಓದಿ: ಮಳೆ ಹಾನಿಗೊಳಗಾದ ದ.ಕನ್ನಡ, ಉ. ಕನ್ನಡ, ಉಡುಪಿ ಜಿಲ್ಲೆಗೆ ಶೀಘ್ರವೇ ಪರಿಹಾರ ನೀಡಿ: ಸಿಎಂ ಸೂಚನೆ

    ಕುಮಾರಸ್ವಾಮಿ ಕಾಲದಲ್ಲಿ ವರ್ಗಾವಣೆ ಆಗಿರಲಿಲ್ಲವಾ? ಹಾಗಾದ್ರೆ ಅವರು ದುಡ್ಡು ತಗೊಂಡಿದ್ರಾ? ವರ್ಗಾವಣೆ ಆದಾಗೆಲ್ಲ ದಂಧೆ ನಡೆದಿದೆ, ದುಡ್ಡು ತಗೊಂಡಿದ್ದಾರೆ ಅಂದರೆ ಹೇಗೆ? ಹಾಗಾದ್ರೆ ಕುಮಾರಸ್ವಾಮಿನೂ ದುಡ್ಡು ತಗೊಂಡಿದ್ರಾ? ಹಾಗಾದ್ರೆ ನಾವು ಅವರ ಮೇಲೂ‌ ಹೇಳ್ತೀವಿ ದುಡ್ಡು ತಗೊಂಡಿದ್ರು ಅಂತಾ ಎಂದು ಹರಿಹಾಯ್ದಿದ್ದಾರೆ.

    ಸಾಮಾನ್ಯ ವರ್ಗಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಮಾಡಬೇಕಾಗುತ್ತದೆ, ಊಹಿಸಿಕೊಂಡು ಹೇಳಬಾರದು. ಹೊಸ ಸರ್ಕಾರ ಬಂದಾಗ ಸ್ವಾಭಾವಿಕವಾಗಿ ವರ್ಗಾವಣೆ ಆಗುತ್ತವೆ. ಎಲೆಕ್ಷನ್ ಬಂದಿತ್ತು, ನೀತಿ ಸಂಹಿತೆ ಇತ್ತು, ಹೀಗಾಗಿ ವರ್ಗಾವಣೆ ಮಾಡಿರಲಿಲ್ಲ. ಈಗ ಸಾಮಾನ್ಯ ವರ್ಗಾವಣೆ ನಡೆಯುತ್ತಿದೆ ಇದನ್ನ ದಂಧೆ ಅಂದರೆ ಹೇಗೆ? ಹೆಚ್‌ಡಿಕೆ ಅವರಿಗೆ ಮರುಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಸರ್ಕಾರ ರಾಜಕೀಯ ತೆವಲಿಗಾಗಿ ಜೀವದ ಜೊತೆ ಚೆಲ್ಲಾಟವಾಡ್ತಿದೆ – KSRTC ನೌಕರನ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ

    ಇನ್ನೂ ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಕುಮಾರಸ್ವಾಮಿ ಯಾವಾಗಲೂ ಹಿಟ್ ಅಂಡ್ ರನ್ ಕೇಸ್. ಇದುವರೆಗೆ ಮಾಡಿರೋ ಆರೋಪಗಳಲ್ಲಿ ಯಾವುದನ್ನ ಕುಮಾರಸ್ವಾಮಿ ಲಾಜಿಕಲ್ ಎಂಡ್ ಗೆ ತೆಗೆದುಕೊಂಡು ಹೋಗಿದ್ದಾರೆ ಹೇಳಲಿ.. ಅವರು ದಾಖಲೆ ಬಿಡುಗಡೆ ಮಾಡಲಿ ಅದಕ್ಕೆ ಉತ್ತರ ಕೊಡ್ತೀವಿ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ – ಹೆಚ್‌ಡಿಕೆ

    ಸಮ್ಮಿಶ್ರ ಸರ್ಕಾರದಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ – ಹೆಚ್‌ಡಿಕೆ

    ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದ ನನಗೆ ವರ್ಗಾವಣೆ (Transfer) ಮಾಡೋ‌ ಅಧಿಕಾರವೇ ಇರಲಿಲ್ಲ ಅಂತ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy), ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಸಿಎಂ ಕಚೇರಿಯಲ್ಲಿ ವರ್ಗಾವಣೆ ದಂಧೆ ಎಂದು ಆರೋಪ ಮಾಡಿದ್ದ ಕುಮಾರಸ್ವಾಮಿಗೆ ತಮ್ಮ ಅವಧಿಯಲ್ಲಿ ಆಗಿದ್ದನ್ನೇ ಈಗ ಹೇಳ್ತಿದ್ದಾರೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಅವಕಾಶ ಕೊಟ್ಟರೆ ನಾನೂ ಮಾಡ್ತೀನಿ: ವಿಪಕ್ಷ ನಾಯಕ ಸ್ಥಾನ ಆಕಾಂಕ್ಷೆ ಹೊರಹಾಕಿದ ಅಶ್ವಥ್ ನಾರಾಯಣ್

    ಸಿದ್ದರಾಮಯ್ಯ ಅವರು ನೆನಪು ಮಾಡಿಕೊಳ್ಳಬೇಕು. ನಾನು ಸಿಎಂ ಆಗಿದ್ದಾಗ ನಿಮ್ಮ ಮಂತ್ರಿಗಳು ನನ್ನನ್ನ ಯಾವ ರೀತಿ ನಡೆಸಿಕೊಂಡಿದ್ದಾರೆ ಅನ್ನೋದನ್ನ ಒಮ್ಮೆ ನೆನಪು ಮಾಡಿಕೊಳ್ಳಬೇಕು. ನಿಮ್ಮ ಪಕ್ಷ ಸಚಿವರು ಪೊಗರುದಸ್ತು ಇಲಾಖೆ ಇಟ್ಟುಕೊಂಡಿದ್ರು. ಏನ್‌ ಜನರ ಕೆಲಸ ಮಾಡಲಿಕ್ಕೆ ಇಟ್ಟುಕೊಂಡಿದ್ರಾ ಇಲಾಖೆಗಳನ್ನ? ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನನಗೆ ವರ್ಗಾವಣೆ ಮಾಡೋ ಅಧಿಕಾರವೇ ಇರಲಿಲ್ಲ. ಕಾಂಗ್ರೆಸ್ ಅವರು ಹೇಳಿದಂತೆ ನಾನು ವರ್ಗಾವಣೆ ಮಾಡಬೇಕಿತ್ತು ಅಂತಾ ತಿಳಿಸಿದರು.

    ನನ್ನ ಕಾಲದಲ್ಲಿ ವಿಧಾನಸೌಧದಲ್ಲೇ ಚರ್ಚೆ ಮಾಡಿದ್ದೇನೆ. ಬೆಂಗಳೂರು ಪ್ರಾಧಿಕಾರಕ್ಕೆ 10-15 ಕೋಟಿ ಹಣ ಕೊಡ್ತೀವಿ ಅಂತಾ ಬಂದವರನ್ನ ಆಚೆಗಿಟ್ಟಿದೆ. ಯಲಹಂಕ ತಹಶೀಲ್ದಾರ್‌ಗೆ 1.5 ಕೋಟಿ ಕೊಡೋಕೆ ಬಂದಿದ್ದವರನ್ನ ಉಗಿದು ಆಚೆಗಿಟ್ಟಿದ್ದೆ. ಇದು ಕುಮಾರಸ್ವಾಮಿ ನಡೆದುಕೊಂಡಂತ ರೀತಿ. ನನ್ನ ಅವಧಿಯಲ್ಲಿ 5 ರೂ. ತೆಗೆದುಕೊಳ್ಳದೇ ಪ್ರಾಮಾಣಿಕವಾಗಿ ವರ್ಗಾವಣೆ ಮಾಡಿದ್ದೇನೆ ಅಂತಾ ಹೆಚ್‌ಡಿಕೆ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಈ ತಿಂಗಳ ಉಚಿತ ವಿದ್ಯುತ್‌ ಪಡೆಯೋಕೆ ಜುಲೈ 25 ರೊಳಗೆ ನೋಂದಾಯಿಸಿಕೊಳ್ಳಿ: ಇಂಧನ ಇಲಾಖೆ ಸೂಚನೆ

    ಇದೇ ವೇಳೆ ಅನ್ನಭಾಗ್ಯ ಯೋಜನೆಗೆ ಹಣ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ಈ ಸರ್ಕಾರದಲ್ಲಿ ಎಷ್ಟೋ ಜನ ಸಿಎಂ ಇದ್ದಾರೆ. ಸಿದ್ದರಾಮಯ್ಯ ಒಬ್ಬರೇ ಈ ಸರ್ಕಾರದ ಸಿಎಂ ಅಲ್ಲ. ಹಲವಾರು ಜನ ಸಿಎಂ ಇದ್ದಾರೆ. ಸಿದ್ದರಾಮಯ್ಯ ಅವರು 15 ದಿನಗಳಲ್ಲಿ ಹಣ ಕೊಡ್ತೀನಿ ಅಂದ್ರು. ಆದ್ರೆ ಸಚಿವ ಸತೀಶ್ ಜಾರಕಿಹೊಳಿ ಆಗಸ್ಟ್ ಅಂತಾರೆ. ಯಾರ ಮಾತು ನಂಬಬೇಕು? ಈ ಸರ್ಕಾರದಲ್ಲಿ ಎಷ್ಟು ಜನ ಸಿಎಂ ಇದ್ದಾರೆ? ಇವರ ಹೈಕಮಾಂಡ್ ಯಾರ್ಯಾರಿಗೆ ಮಾತನಾಡುವ ಅಧಿಕಾರ ಕೊಟ್ಟಿದೆ? ಎಂದು ಕಿಡಿ ಕಾರಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ ದೇಶದ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ: ಹೆಚ್‌ಡಿಕೆ

    ಭಾರತ ದೇಶದ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ: ಹೆಚ್‌ಡಿಕೆ

    ರಾಮನಗರ: ಭಾರತ ದೇಶದಲ್ಲಿ ಭಗವಂತ ಕೊಟ್ಟಿರುವ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

    ಚನ್ನಪಟ್ಟಣದಲ್ಲಿ ಮೈಲನಾಯಕನಹೊಸಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜಮಹಾರಾಜರ ಕಾಲದಲ್ಲಿ ಒಂದು ರೀತಿಯ ಗುಲಾಮಗಿರಿ ಇತ್ತು. ಆ ನಂತರ ಬಂದ ಮೊಘಲರ ಕಾಲದಲ್ಲಿ ಇನ್ನೊಂದು ರೀತಿಯ ಗುಲಾಮಗಿರಿ ಇತ್ತು. ನಂತರ ಬಂದ ಈಸ್ಟ್ ಇಂಡಿಯಾ ಕಂಪನಿಯವರು ನಮ್ಮ ದೇಶವನ್ನೇ ಆಳಿದರು. ವ್ಯಾಪಾರ ಮಾಡಲು ಬಂದು ದೇಶವನ್ನೇ ಲೂಟಿ ಮಾಡಿಕೊಂಡು ಹೋದ್ರು. ನಮ್ಮ ದೇಶದಲ್ಲಿ ನಾವೇ ಅವರಿಗೆ ತೆರಿಗೆ (Tax) ಕಟ್ಟಬೇಕಾಯಿತು. ಅದೇ ರೀತಿ ಈಗಿನ ರಾಷ್ಟ್ರೀಯ ಪಕ್ಷಗಳು ಒಂದು ರೀತಿಯ ಈಸ್ಟ್ ಇಂಡಿಯಾ ಕಂಪನಿಯಂತಾಗಿವೆ. ಇದು ನಮ್ಮ ದೇಶದ ಸಂಸ್ಕೃತಿ, ನಮ್ಮದು ಸಂಪದ್ಭರಿತವಾದ ದೇಶ. ಈ ದೇಶದಲ್ಲಿ ಭಗವಂತ ಕೊಟ್ಟಿರುವ ಸಂಪತ್ತು ಎಷ್ಟು ಲೂಟಿ ಮಾಡಿದರೂ ಕರಗಲ್ಲ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

    ಪರ್ಸೆಂಟೇಜ್ ಲೆಕ್ಕಾಚಾರ ಶುರುವಾಗುತ್ತೆ:
    ಕಾಂಗ್ರೆಸ್‌ನಲ್ಲೂ (Congress) ಈಗ ಪರ್ಸೆಂಟೇಜ್ ಲೆಕ್ಕಾಚಾರ ಶುರುವಾಗುತ್ತೆ. ಅದರಲ್ಲಿ ಯಾವುದೇ ಅನುಮಾನ ಬೇಡ. ರೇಟ್ ಫಿಕ್ಸ್ ಮಾಡುವ ಸಲುವಾಗಿ ಎಲ್ಲಾ ಕೆಲಸಗಳನ್ನ ನಿಲ್ಲಿಸಿದ್ದಾರೆ. ಕಳೆದ 4 ವರ್ಷಗಳಲ್ಲಿ ಆಗಿರುವ ಬೆಂಗಳೂರು ಅಭಿವೃದ್ಧಿ ಬಗ್ಗೆ ತನಿಖೆ ಮಾಡ್ತೀವಿ ಅಂತಾ ಒಬ್ಬ ಮಂತ್ರಿ ಹೇಳ್ತಾರೆ. ಇದು ನಗೆಪಾಟಲಿನ ವಿಚಾರ. 4 ವರ್ಷಗಳ ಅಭಿವೃದ್ಧಿ ಕಾರ್ಯಗಳ ತನಿಖೆ (Investigation) ಯಾವರೀತಿ, ಎಲ್ಲಿಂದ ಮಾಡಲು ಸಾಧ್ಯ? ಇವತ್ತು ಬೆಳಿಗ್ಗೆಯಾದ್ರೆ ಯಾವ ಮಂತ್ರಿ ನೋಡಿದ್ರೂ ತನಿಖೆ.. ತನಿಖೆ.. ಅಂತಾರೆ. ಇದು 5 ಗ್ಯಾರಂಟಿಗಳ ಜೊತೆಗೆ ತನಿಖಾ ಜ್ಯೋತಿ ಕೊಡಲು ಹೊರಟಿದ್ದಾರೆ. ಈ ಸರ್ಕಾರದ ಹೇಳಿಕೆ ನೋಡಿದ್ರೆ ಇದು 6ನೇ ಗ್ಯಾರಂಟಿ ಅನ್ನಿಸುತ್ತೆ. ಹಾಗಾಗಿ `ಹಿಂದಿನ ಸರ್ಕಾರದ ತನಿಖಾ ಜ್ಯೋತಿ’ ಅಂತಾ ಸೇರಿಸಿಕೊಳ್ಳಿ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಯಾರಿ – ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ಕೆಂಡ

    ರಾಜ್ಯದಲ್ಲಿ ಪರಿಶುದ್ಧ ಆಡಳಿತ ತರ್ತಿವಿ ಅನ್ನೋದು ಇವರ ಭ್ರಮೆ. ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಹೊಸ ಹೊಸ ಹೇಳಿಕೆ ಕೊಡ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ

    ವರ್ಗಾವಣೆ ದಂಧೆ ಜೋರಾಗಿದೆ:
    ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಕುರಿತ ವಿಚಾರಕ್ಕೆ ಪ್ರತಿಕ್ರಿಯಿಸಿ, ಒಂದೇ ಹುದ್ದೆಗೆ ಮುಖ್ಯಮಂತ್ರಿ ಅವರೇ 4 ರಿಂದ 5 ಬಾರಿ ಆದೇಶ ಮಾಡಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? ಒಂದೇ ಹುದ್ದೆಗೆ ಐದು ವ್ಯಕ್ತಿಗಳನ್ನ ನಿಯುಕ್ತಿಗೊಳಿಸಿದ್ದಾರೆ. ಇದನ್ನ ಯಾರು ಆದೇಶ ಮಾಡಿದ್ದಾರೆ? ಕಾಂಗ್ರೆಸ್‌ನಲ್ಲಿ ವರ್ಗಾವಣೆ ದಂಧೆ (Transfer Scam) ದೊಡ್ಡಮಟ್ಟದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

    ಲಂಚ ಮುಟ್ಟಲ್ಲ ಅಂತ ವೀರಾವೇಶದಲ್ಲಿ ಹೇಳ್ತಾರೆ:
    ಕಾಂಗ್ರೆಸ್ಸಿನವರು ಹೊರನೋಟಕ್ಕೆ ನಾವು ಲಂಚ ತೆಗೆದುಕೊಳ್ಳಲ್ಲ ಅಂತಾರೆ. ನಾನು ಲಂಚ ಮುಟ್ಟಲ್ಲ, ನೀವು ಮುಟ್ಟಬೇಡಿ ಅಂತ ವೀರಾವೇಶದಲ್ಲಿ ಹೇಳ್ತಾರೆ. ಆದ್ರೆ ಬೆಳಿಗ್ಗೆ ಎದ್ದಕೂಡಲೇ ವರ್ಗಾವಣೆ ದಂಧೆ ನಡೆಯುತ್ತಿದೆ. ಕಾಂಗ್ರೆಸ್‌ನವರು ವರ್ಗಾವಣೆ ಬಿಟ್ರೆ ಬೇರೇನೂ ಕೆಲಸ ಮಾಡ್ತಿಲ್ಲ. ಪ್ರತಿಯೊಂದು ಇಲಾಖೆಯ ಅಧಿಕಾರಿಗಳನ್ನ ಬಿಜೆಪಿಗಿಂತ ಕೆಟ್ಟ ರೀತಿ ನಡೆಸಿಕೊಳ್ತಿದ್ದಾರೆ. ಅಧಿಕಾರ ಬಂದಾಗ ತಲೆತಿರುಗದೆ ಗೌರವಯುತವಾಗಿ ಕೆಲಸ ಮಾಡಬೇಕು. ಜನಪ್ರತಿನಿಧಿಗಳು ಮೊದಲ ಸಾರ್ವಜನಿಕವಾಗಿ ಯಾವರೀತಿ ನಡೆದುಕೊಳ್ಳಬೇಕು ಅಂತಾ ಕಲಿಯಬೇಕು ಎಂದು ಕುಟುಕಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]