Tag: transport department

  • ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ – ರಾಮಲಿಂಗಾರೆಡ್ಡಿ

    ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ – ರಾಮಲಿಂಗಾರೆಡ್ಡಿ

    ಬೆಂಗಳೂರು: ಶಕ್ತಿ ಯೋಜನೆಯಿಂದ (Shakti Scheme) ಆಟೋ ಚಾಲಕರಿಗೆ (Auto Drivers) ಸಮಸ್ಯೆಯಾದರೆ, ಸರ್ಕಾರ ಅವರ ನೆರವಿಗೆ ಧಾವಿಸೋ ಬಗ್ಗೆ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಭೋಜೇಗೌಡ ಪ್ರಶ್ನೆ ಕೇಳಿದರು. ಶಕ್ತಿ ಯೋಜನೆ ಪರಿಣಾಮ ಆಟೋ ರಿಕ್ಷಾಗಳ ಮೇಲೆ ಬಿದ್ದಿದೆ. ಉಚಿತ ಬಸ್ ಪ್ರಯಾಣದಿಂದ ಆಟೋದವರು ಜೀವನ ಮಾಡಲು ಆಗುತ್ತಿಲ್ಲ. ರಾಜ್ಯದಲ್ಲಿ ಸುಮಾರು 5 ಲಕ್ಷ ಆಟೋ ಚಾಲಕರು ಇದ್ದಾರೆ. ಅವರಿಗೆ ಜೀವನ ಮಾಡಲು ಆಗುತ್ತಿಲ್ಲ. ಇವರ ನೆರವಿಗೆ ಸರ್ಕಾರ ಬರಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಲೋಕಸಭೆಯಲ್ಲಿ ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದ್ರೆ ಆದೇಶ ಪಾಲಿಸಲು ಸಿದ್ಧ: ಯತೀಂದ್ರ ಸಿದ್ದರಾಮಯ್ಯ

    ಇದಕ್ಕೆ ಉತ್ತರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಜೂನ್ 11ಕ್ಕೆ ಶಕ್ತಿ ಯೋಜನೆ ಪ್ರಾರಂಭ ಆಯ್ತು. ಉತ್ತಮವಾಗಿ ಯೋಜನೆ ನಡೆಯುತ್ತಿದೆ. ಯೋಜನೆ ಜಾರಿ ಆಗಿ ಒಂದು ತಿಂಗಳು ಆಗಲಿ. ಆಟೋದವರಿಗೆ ಏನ್ ಸಮಸ್ಯೆ ಆಗಿದೆ ಅಂತ ನೋಡೋಣ ಎಂದು ಹೇಳಿದರು.

    ಈವರೆಗೂ ಯಾವ ಆಟೋ ಚಾಲಕರ ಸಂಘದವರು ನನ್ನ ಬಳಿ ಬಂದು ಕಷ್ಟ ಅಂತ ಹೇಳಿಲ್ಲ. ಯಾವುದೇ ಆಟೋ ಚಾಲಕರು ನನಗೆ ಮನವಿ ಮಾಡಿಲ್ಲ. ಒಂದು ತಿಂಗಳು ಆಗಲಿ, ಬಳಿಕ ಪರಿಶೀಲನೆ ಮಾಡಿ ಆಟೋದವರಿಗೆ ಸಮಸ್ಯೆಯಾದರೆ ಸರ್ಕಾರ ಪರಿಹಾರ ಕೊಡಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: 40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಿಸಿ ಸರ್ಕಾರ ಆದೇಶ

    ಬೆಂಗಳೂರು: ಸಾರಿಗೆ ನಿಗಮಗಳ ನೌಕರರ (Transport Employees) ವೇತನವನ್ನು ಶೇ.15 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಹೊರಡಿಸಿದೆ.

    ಸಾರಿಗೆ ನೌಕರರ ಮುಷ್ಕರದ ಮೊದಲೇ ವೇತನ ಹೆಚ್ಚಿಸಿದೆ. ಮಾರ್ಚ್ 1 ರಿಂದ ಅನ್ವಯ ಆಗುವಂತೆ ವೇತನ ಹೆಚ್ಚಳ ಮಾಡಿದ ಸರ್ಕಾರ‌ ಆದೇಶಿಸಿದೆ. ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಭವಿಷ್ಯ- ಆದೇಶ ಕಾಯ್ದಿರಿಸಿದ ಹೈಕೋರ್ಟ್

    ನಾಲ್ಕೂ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕಲ್ಯಾಣ ಕರ್ನಾಟಕ ಸಾರಿಗೆ, ವಾಯುವ್ಯ ಕರ್ನಾಟಕ ಸಾರಿಗೆ) ಸಾರಿಗೆ ನೌಕರರಿಗೆ ವೇತನ ಹೆಚ್ಚಿಸಲಾಗಿದೆ.

    ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮಾ.21ರಿಂದ ಮುಷ್ಕರಕ್ಕೆ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಶೇ.15ರಷ್ಟು ವೇತನ ಹೆಚ್ಚಿಸುವುದಾಗಿ ಸರ್ಕಾರ ತಿಳಿಸಿತ್ತು. ಅದರಂತೆ ವೇತನ ಹೆಚ್ಚಳ ಮಾಡಿದೆ. ಆದರೆ ಮೂಲ ವೇತನದಲ್ಲಿ ಶೇ.25ರಷ್ಟು ಹೆಚ್ಚಳ ಮಾಡಬೇಕು ಎಂಬುದು ಸಾರಿಗೆ ನೌಕರರ ಬೇಡಿಕೆಯಾಗಿದೆ. ಇದನ್ನೂ ಓದಿ: ಅಕಾಡೆಮಿ ಪ್ರಶಸ್ತಿ ವಿಜೇತರಿಗೆ ವರದಿಗಾರರ ಕೂಟ ಅಭಿನಂದನೆ

  • ರಿಯಾಯಿತಿ ಕೊಟ್ಟ 9 ದಿನಗಳಲ್ಲಿ 100 ಕೋಟಿಗೂ ಅಧಿಕ ದಂಡ ಸಂಗ್ರಹ

    ರಿಯಾಯಿತಿ ಕೊಟ್ಟ 9 ದಿನಗಳಲ್ಲಿ 100 ಕೋಟಿಗೂ ಅಧಿಕ ದಂಡ ಸಂಗ್ರಹ

    ಬೆಂಗಳೂರು: ರಾಜ್ಯದಲ್ಲಿ 50 ಪರ್ಸೆಂಟ್ ಡಿಸ್ಕೌಂಟ್ ದಂಡಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಶನಿವಾರ ಕೊನೆಯ ದಿನವಾಗಿದ್ದು, ದಂಡದ ಮೊತ್ತ 100 ಕೋಟಿ ಗಡಿ ದಾಟಿದೆ. ದಂಡ ಪಾವತಿಗೆ ಅವಧಿ ವಿಸ್ತರಣೆಗೆ ಸರ್ಕಾರ ಮುಂದಾಗುವ ಸಾಧ್ಯತೆ ಹೆಚ್ಚಾಗಿದ್ದು, ಈ ಬಗ್ಗೆ ಸಾರಿಗೆ ಇಲಾಖೆಯೊಂದಿಗೆ (Transport Department) ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿ ಹೊಡೆದ ಕಾರು – 2 ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸಾವು

    ಕೊನೆಯ ದಿನವಾದ ಶನಿವಾರ ದಂಡ ಪಾವತಿಗೆ ನೂಕು ನುಗ್ಗಲು ಹೆಚ್ಚಾಗಿತ್ತು. ಕೆಲ ಪೊಲೀಸ್ ಠಾಣೆ (Bengaluru Traffic Police) ಮುಂಭಾಗ ಜನರು ಸಾಲುಗಟ್ಟಿ ನಿಂತಿದ್ದರಿಂದ ಪೊಲೀಸರೂ ಹೈರಾಣಾಗಿದ್ದರು. ಇದನ್ನೂ ಓದಿ: `ರಿಷಬ್’ ಜೊತೆ ಕಾಣಿಸಿಕೊಂಡ ಊರ್ವಶಿ ರೌಟೇಲಾ: `ಕಾಂತಾರ 2′ ಬಗ್ಗೆ ಅಪ್‌ಡೇಟ್

    26.26 ಲಕ್ಷ ಸಂಚಾರ ನಿಮಯ ಉಲ್ಲಂಘನೆ (Traffic Violations) ಮಾಡಿರೋ ಕೇಸ್‌ಗಳು ವಿಲೇವಾರಿಯಾಗಿದೆ. ಒಟ್ಟಿನಲ್ಲಿ ಆಫ್ ರೇಟ್, ಚೀಪ್ ರೇಟ್‌ಗೆ ಬೆಂಗಳೂರಿಗರು (Bengaluru) ಕೆಲಸ ಕಾರ್ಯ ಬಿಟ್ಟು ಕೇಸ್ ಕ್ಲಿಯರ್ ಮಾಡಿಕೊಂಡಿದ್ದರೆ, ಮತ್ತಷ್ಟು ಮಂದಿ ಕೊನೆ ದಿನಾಂಕದವರೆಗೆ ಕಾದು ದಂಡ ಕಟ್ಟೋದಕ್ಕೆ ಆಗದೇ ಸುಮ್ಮನಾಗಿದ್ದಾರೆ.

    ಈ ಬಗ್ಗೆ `ಪಬ್ಲಿಕ್ ಟಿವಿ’ಯೊಂದಿಗೆ (Public TV) ಮಾತನಾಡಿದ ಸಾರಿಗೆ ಇಲಾಖೆ ಆಯುಕ್ತ ಸಿದ್ದರಾಮಪ್ಪ, 50 ಪರ್ಸೆಂಟ್ ದಂಡ ಪಾವತಿಸುವ ಅವಧಿ ವಿಸ್ತರಣೆ ಮಾಡುವ ಬಗ್ಗೆ ಚರ್ಚಿಸಲು ಸಾರಿಗೆ ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸರ್ಕಾರ ಸಹ ಈ ಬಗ್ಗೆ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನ ಕಾದು ನೋಡಬೇಕು ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ- ಅಂಜುಂ ಪರ್ವೇಜ್

    2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ- ಅಂಜುಂ ಪರ್ವೇಜ್

    ಬೆಂಗಳೂರು: ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರ ಸಾಧ್ಯವಾಗಿಸುತ್ತಿದೆ. 2025ರ ಜೂನ್ ಹೊತ್ತಿಗೆ `ನಮ್ಮ ಮೆಟ್ರೋ’ (Namma Metro) ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ (Anjum Parvez)ತಿಳಿಸಿದ್ದಾರೆ.

    ಬೆಂಗಳೂರು ಟೆಕ್ ಸಮ್ಮೇಳನದ (Bengaluru Tech Summit) ವಿಚಾರ ಗೋಷ್ಠಿಯಲ್ಲಿ `ಸಂಚಾರ ವ್ಯವಸ್ಥೆಯ ಭವಿಷ್ಯ’ ಕುರಿತು ಮಾತನಾಡಿದ ಅವರು, ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (International Airport) ಕಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಸ್ವಂತ ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯ ಕಡೆಗೆ ಜನರನ್ನು ಕರೆತರುವುದೇ ದೊಡ್ಡ ಸವಾಲಾಗಿದೆ ಎಂದು ಅವರು ಪ್ರತಿಪಾದಿಸಿದರು.

    1990ರ ವರೆಗೂ ದೇಶದಲ್ಲಿ ನಗರ ಪ್ರದೇಶಗಳ ಕಡೆಗೆ ಗಮನವನ್ನೇ ಕೊಡುತ್ತಿರಲಿಲ್ಲ. ಹೀಗಾಗಿ ನಮ್ಮ ನಗರಾಭಿವೃದ್ಧಿ ಯೋಜನೆಗಳು ಬಹುಕಾಲ ವೈಜ್ಞಾನಿಕವಾಗಿರಲಿಲ್ಲ. ಈಗ ನವೋದ್ಯಮಗಳಿಂದ ಮೆಟ್ರೋ ವ್ಯವಸ್ಥೆಗೆ ಸಾಕಷ್ಟು ಅನುಕೂಲಗಳು ಸಿಗುತ್ತಿವೆ. ಹೀಗಾಗಿ ಜನರು ಮೆಟ್ರೋ ರೈಲುಗಳ ಮೂಲಕ ತಮ್ಮ ಕಾರ್ಯಸ್ಥಳಗಳನ್ನು ತಲುಪುವಂತೆ ಮಾಡಲು ಹಲವು ನವೋದ್ಯಮಗಳೊಂದಿಗೆ ಬಿಎಂಆರ್‌ಸಿಎಲ್ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ

    ಮೆಟ್ರೋ ನಿಲ್ದಾಣಗಳಲ್ಲೇ ಬಸ್ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸುವಂತೆ ಬಿಎಂಟಿಸಿ (BMTC) ಜೊತೆ ಮಾತುಕತೆ ಪ್ರಗತಿಯಲ್ಲಿದೆ. ಇದರಿಂದ ಆ ಸಂಸ್ಥೆಗೂ ಲಾಭವಾಗಲಿದೆ. ಇದರ ಜತೆಗೆ ಕಾರು ಮತ್ತು ಬೈಕ್ ಪೂಲಿಂಗ್ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಅಲ್ಲದೆ ಮೆಟ್ರೋ ನಿಲ್ದಾಣಗಳ ಒಳಗೆ ಮತ್ತು ಹೊರಗೆ ಸಾರ್ವಜನಿಕರಿಗೆ ಎಲ್ಲ ಸೌಲಭ್ಯ ಸಿಗುವಂತಿರಬೇಕು. ಇದನ್ನ ಸಾಧ್ಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಯೋಚಿಸುತ್ತಿದೆ ಎಂದು ಪರ್ವೇಜ್ ನುಡಿದರು.

    ಅಂತಾರಾಷ್ಟ್ರೀಯ ಸಾರಿಗೆ ಕೌನ್ಸಿಲ್‌ನ ಅಮಿತ್ ಭಟ್ ಮಾತನಾಡಿ, ಪಾಶ್ಚಾತ್ಯ ಜಗತ್ತಿನಲ್ಲಿ ಶೇ.85 ರಷ್ಟು ನಗರೀಕರಣವಾಗಿದ್ದು, ಭಾರತದಲ್ಲಿ ಈ ಪ್ರಮಾಣ ಶೇ.33ರಷ್ಟಿದೆ. ಆದರೆ ನಮ್ಮಲ್ಲಿ ಇನ್ನೂ ಶೇ.66ರಷ್ಟು ಮೂಲಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಏಕೆಂದರೆ ನಮ್ಮಲ್ಲಿ ಹೊಸದಾಗಿ ಹಲವು ನಗರಗಳು ತಲೆ ಎತ್ತುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ‘ಲೈಗರ್’ ಸಿನಿಮಾಗೆ ಹಣ ಎಲ್ಲಿಂದ ಬಂತು?: ನಟಿ, ನಿರ್ದೇಶಕನಿಗೆ ‘ಇಡಿ’ ಗ್ರಿಲ್

    ಸುಗಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯವನ್ನು ಒದಗಿಸುವಾಗ ಇಂಗಾಲದ ಉತ್ಪಾದನೆ ಇಲ್ಲದಂತೆ ನೋಡಿಕೊಳ್ಳುವುದು, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಯಾವುದೇ ಅಪಘಾತಗಳಿಗೆ ಆಸ್ಪದವಿಲ್ಲದಂತೆ ಖಾತ್ರಿಪಡಿಸುವುದು ಬಹಳ ದೊಡ್ಡ ಸವಾಲುಗಳಾಗಿವೆ ಎಂದು ಅವರು ಪ್ರತಿಪಾದಿಸಿದರು.

    ಬಾಶ್ ಕಂಪನಿಯ ಉಪಾಧ್ಯಕ್ಷ ವಾದಿರಾಜ್ ಕೃಷ್ಣಮೂರ್ತಿ, ಚಲೋ ಕಂಪನಿಯ ಸಹ ಸಂಸ್ಥಾಪಕ ವಿನಾಯಕ್ ಭಾವ್ನಾನಿ ಅವರು ಕೂಡ ಗೋಷ್ಠಿಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸಾರಿಗೆ ಇಲಾಖೆಯ 4 ನಿಗಮಗಳ ಆಸ್ತಿ ಅಡ ಇಟ್ಟ  ಸರ್ಕಾರ – ಲೆಕ್ಕ ಕೊಟ್ಟ ಶ್ರೀರಾಮುಲು

    ಸಾರಿಗೆ ಇಲಾಖೆಯ 4 ನಿಗಮಗಳ ಆಸ್ತಿ ಅಡ ಇಟ್ಟ ಸರ್ಕಾರ – ಲೆಕ್ಕ ಕೊಟ್ಟ ಶ್ರೀರಾಮುಲು

    ಬೆಂಗಳೂರು: ಸಾರಿಗೆ ಇಲಾಖೆಯ 4 ನಿಗಮಗಳ ವಿವಿಧ ಆಸ್ತಿಯನ್ನು ಒಟ್ಟು 540 ಕೋಟಿ ರೂ.ಗೆ ಅಡವಿಟ್ಟಿದ್ದೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ವಿಧಾನಪರಿಷತ್‌ನಲ್ಲಿ ಉತ್ತರಿಸಿದ್ದಾರೆ.

    ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಕಾಂಗ್ರೆಸ್‍ನ ಯು.ಬಿ ವೆಂಕಟೇಶ್ ಸಾರಿಗೆ ಇಲಾಖೆಯ ಸಾಲದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಶ್ರೀರಾಮುಲು, ಸಾರಿಗೆ ಇಲಾಖೆ 4 ನಿಗಮಗಳ ವಿವಿಧ ಆಸ್ತಿಗಳನ್ನು ಅಡಮಾನ ಇಟ್ಟು ಸಾಲ ಪಡೆಯಲಾಗಿದೆ. ಬಿಎಂಟಿಸಿ – 390 ಕೋಟಿ ರೂ., ವಾಯುವ್ಯ ಸಾರಿಗೆ – 100 ಕೋಟಿ ರೂ., ಕಲ್ಯಾಣ ಕರ್ನಾಟಕ ಸಾರಿಗೆ – 50 ಕೋಟಿ ರೂ. ಒಟ್ಟು 540 ಕೋಟಿ ರೂ. ಸಾಲ ಮಾಡಲಾಗಿದೆ ಎಂದರು. ಇದನ್ನೂ ಓದಿ:  ಪಂಚ ರಾಜ್ಯಗಳ ಚುನಾವಣೆ ಮುಗಿಯಿತು – ಪೆಟ್ರೋಲ್, ಡಿಸೇಲ್ ದರ ಏರಿಕೆಗೆ ಸಜ್ಜಾಗಿ

    ಕೊರೊನಾ ಸಮಯದಲ್ಲಿ ನೌಕರರಿಗೆ ನಮಗೆ ಸಂಬಳ ಕೊಡಲು ಹಣ ಇರಲಿಲ್ಲ ಈ ವೇಳೆ ಸಾಲ ಮಾಡಿದ್ದೇವೆ. ಅಲ್ಲದೇ ನೌಕರರ ಭವಿಷ್ಯ ನಿಧಿ ಬಳಕೆಗೆ ಕೂಡ ಸಾಲ ಮಾಡಿದ್ದೇವೆ. ಕೊರೊನಾ ಸಮಯದಲ್ಲಿ ಸರ್ಕಾರ ಸಾರಿಗೆ ಇಲಾಖೆಗೆ 2,958 ಕೋಟಿ ರೂ. ನೀಡಿ ನೌಕರರಿಗೆ ಸಂಬಳ ನೀಡಲು ಮುಂದಾಗಿತ್ತು. ಸದ್ಯ ಕೋವಿಡ್‍ನಲ್ಲಿ ಮೃತರಾದ ಸಿಬ್ಬಂದಿಗಳ ಮಾಹಿತಿ ಪಡೆಯಲಾಗುತ್ತಿದ್ದು, ಮಾಹಿತಿ ಬಂದ ಹಾಗೆ ಪರಿಹಾರ ನೀಡಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಆದಷ್ಟು ಶೀಘ್ರ ಲಾಭಕ್ಕೆ ತರಲು ಸಮಿತಿ ರಚನೆ ಮಾಡಲಾಗಿದೆ. ಆದಷ್ಟು ಬೇಗ ಸಂಸ್ಥೆಯನ್ನು ಲಾಭದತ್ತ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ಪಂಚರಾಜ್ಯಗಳ ಫಲಿತಾಂಶದ ಬೆನ್ನಲ್ಲೇ ರಾಜ್ಯಕ್ಕೆ ಬರಲಿದ್ದಾರೆ ಮೋದಿ – ಕಲಬುರಗಿಗೆ ಯಾಕೆ?

  • ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬೊಮ್ಮಾಯಿ

    ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬೊಮ್ಮಾಯಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯಲ್ಲಿ ಸಾರಿಗೆ ಇಲಾಖೆಯ ಕುಂದುಕೊರತೆಯ ಬಗ್ಗೆ ಚರ್ಚೆ ನಡೆಸಲಾಗಿದೆ.

    ಸಭೆಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕ.ರಾ.ರ.ಸಾ.ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಉಪಸ್ಥಿತರಿದ್ದರು. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ 6 ತಿಂಗಳು – ರಿಪೋರ್ಟ್ ಕಾರ್ಡ್ ತರಿಸಿಕೊಂಡ ಹೈಕಮಾಂಡ್!

    ಈ ಮೊದಲು ಮುಖ್ಯಮಂತ್ರಿ ಇಂದು ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಅಧಿಕಾರಿಗಳಿಗೆ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿದರು. ಅಲ್ಲದೇ, ಮತದಾನ ಸಂವಿಧಾನ ನಮಗೆ ನೀಡಿರುವ ಅತ್ಯಮೂಲ್ಯ ಹಕ್ಕು. ಅದನ್ನು ತಪ್ಪದೇ ಚಲಾಯಿಸಿ, ದೇಶದ ಅಭಿವೃದ್ಧಿಗೆ ಕೈ ಜೋಡಿಸೋಣ, ಉತ್ತಮ ಸಮಾಜ ನಿರ್ಮಿಸುವಲ್ಲಿ ಮುನ್ನಡೆಯೋಣ. 18 ವರ್ಷ ಪೂರ್ಣಗೊಂಡವರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿರಿ. ಎಲ್ಲರಿಗೂ ರಾಷ್ಟ್ರೀಯ ಮತದಾರರ ದಿನದ ಶುಭಾಶಯಗಳು ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ರಾಷ್ಟ್ರೀಯ ಮತದಾರರ ದಿನದ ಶುಭಕೋರಿದ್ದಾರೆ. ಇದನ್ನೂ ಓದಿ: ಬಿಜೆಪಿಯಲ್ಲಿ ಉಸ್ತುವಾರಿ ಸಚಿವರ ಕಿತ್ತಾಟ – ಮಾಧುಸ್ವಾಮಿ, ಸೋಮಣ್ಣ, ಎಂಟಿಬಿಗೆ ಅಸಮಾಧಾನ

  • ಯುವತಿ ಸ್ಕೂಟರ್ ನಂಬರ್ ಪ್ಲೇಟ್‍ನಲ್ಲಿ ‘SEX’ ಪದ- ಮಹಿಳಾ ಆಯೋಗದಿಂದ ನೋಟಿಸ್

    ಯುವತಿ ಸ್ಕೂಟರ್ ನಂಬರ್ ಪ್ಲೇಟ್‍ನಲ್ಲಿ ‘SEX’ ಪದ- ಮಹಿಳಾ ಆಯೋಗದಿಂದ ನೋಟಿಸ್

    ನವದೆಹಲಿ: ಅಪ್ಪ ಕೊಡಿಸಿದ ಸ್ಕೂಟಿಯ ನಂಬರ್ ಪ್ಲೇಟ್‍ನಲ್ಲಿ SEX ಎಂದು ಬರೆದಿರುವುದು ಯುವತಿಗೆ ಮುಜುಗರಕ್ಕೀಡು ಮಾಡಿತ್ತು, ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಆದರೆ ಇದೀಗ ಈ ವಿಚಾರವಾಗಿ ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

    ದೆಹಲಿ ಮಹಿಳಾ ಆಯೋಗವು ಸಾರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸೆಕ್ಸ್(SEX ) ಎಂಬ ಪದವನ್ನು ಹೊಂದಿರುವ ವಾಹನ ನೋಂದಣಿ ಸಂಖ್ಯೆಯನ್ನು ಬದಲಾಯಿಸುವಂತೆ ಕೋರಿದೆ. ಈ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ಸಲ್ಲಿಸುವಂತೆ ಆಯೋಗವು ಸಾರಿಗೆ ಇಲಾಖೆಗೆ ತಿಳಿಸಿದೆ.

    ಇಲಾಖೆಗೆ ಬಂದಿರುವ ಎಲ್ಲಾ ದೂರುಗಳ ವಿವರಗಳನ್ನು ಕೇಳಿದೆ. ಈ ಬಗ್ಗೆ 4 ದಿನಗಳೊಳಗೆ ವಿವರವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಹೇಳಿದೆ. ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ನೋಟಿಸ್ ಜಾರಿ ಮಾಡುವಾಗ, ಸೆಕ್ಸ್(SEX ) ಎಂಬ ಪದವನ್ನು ಹೊಂದಿರುವ ಈ ಹಂಚಿಕೆ ಸರಣಿಯಲ್ಲಿ ನೋಂದಣಿಯಾಗಿರುವ ಒಟ್ಟು ವಾಹನಗಳ ಸಂಖ್ಯೆಯನ್ನು ಸಲ್ಲಿಸಲು ನಾನು ಸಾರಿಗೆ ಇಲಾಖೆಯನ್ನು ಕೇಳಿದ್ದೇನೆ. ಇನ್ನು ಮುಂದೆ ತೊಂದರೆಯಾಗದಂತೆ ಈ ಸಮಸ್ಯೆಯನ್ನು ಪರಿಹರಿಸಲು ಸಾರಿಗೆ ಇಲಾಖೆಗೆ 4 ದಿನಗಳ ಕಾಲಾವಕಾಶ ನೀಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಅಪ್ಪ ಕೊಡಿಸಿದ ಸ್ಕೂಟಿಯ ನಂಬರ್‌ ಪ್ಲೇಟಲ್ಲಿತ್ತು SEX – ನಂಬರ್ ಪ್ಲೇಟ್‍ನಿಂದ ಮುಜುಗರಕ್ಕೀಡಾದ ಯುವತಿ!

    ಹಿನ್ನೆಲೆ: ದೆಹಲಿಯಲ್ಲಿ ದ್ವಿಚಕ್ರ ವಾಹನಗಳಿಗೆ ಎಸ್ ಆಂಗ್ಲ ಅಕ್ಷರವನ್ನು ಸೂಚಕವಾಗಿ ನೀಡಲಾಗುತ್ತದೆ. ರಾಜ್ಯದ ಸೂಚಕವಾಗಿ ಡಿಎಲ್ ಅಕ್ಷರದ ಜೊತೆಗೆ ಜಿಲ್ಲೆಯನ್ನು ಪ್ರತಿನಿಧಿಸುವ ಸಂಖ್ಯೆ ನೀಡಲಾಗುತ್ತದೆ. ನಂತರ ವಾಹನ ಸೂಚಕವಾಗಿ ಕಾರಿಗೆ ಸಿ(C) ಬೈಕಿಗೆ ಎಸ್(S) ಎಂದು ನೀಡಲಾಗುತ್ತದೆ. ದೆಹಲಿಯಲ್ಲಿ ಈಗ ಇಎಕ್ಸ್(EX) ಸೀರಿಸ್ ನಡೆಯುತ್ತಿದೆ. ಹೀಗಾಗಿ ಕೆಲವು ದ್ವಿಚಕ್ರ ವಾಹನಗಳಿಗೆ ಎಸ್‍ಇಎಕ್ಸ್(SEX) ಎಂದು ನಂಬರ್ ನೀಡಲಾಗುತ್ತದೆ. ಇದನ್ನೂ ಓದಿ:   ಚೀನಾ ಮೇಲೆ ಕಣ್ಣಿಡಲು ಬಂತು ಇಸ್ರೇಲ್ ಡ್ರೋನ್

    ಹೀಗಾಗಿ ಇತ್ತೀಚಿನ ದಿನಗಳಲ್ಲಿ ದೆಹಲಿಯಲ್ಲಿ ದ್ವಿಚಕ್ರ ವಾಹನಗಳ ನಂಬರ್ ಪ್ಲೇಟ್‍ಗಳಲ್ಲಿ ಎಸ್ ಅಕ್ಷರದ ನಂತರ ಇಎಕ್ಸ್ ಅಕ್ಷರವಿದೆ. (EX) ಅಂತಹ ಒಂದು ನಂಬರ್ ಪ್ಲೇಟ್ ಪಡೆದಿರುವ ವಾಹಾನ ಸವಾರರು ಮುಜುಗರಕ್ಕೆ ಒಳಗಾಗುತ್ತಿದ್ದಾರೆ.  ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?

    ಸ್ಕೂಟಿ ನಂಬರ್ ಪ್ಲೇಟ್‍ನಿಂದಾಗಿ ಜನರು ಪದೇ ಪದೇ ಗೇಲಿ ಮಾಡಲು ಆರಂಭಿಸಿದ್ದರು. ಇದರಿಂದ ಸ್ಕೂಟಿ ತೆಗೆದುಕೊಂಡು ಮನೆಯಿಂದ ಹೊರಬರುವುದು ಕಷ್ಟವಾಗಿತ್ತು. ನನ್ನ ಪೋಷಕರು ಸ್ಕೂಟಿ ಸಂಖ್ಯೆಯನ್ನು ಬದಲಾಯಿಸಲು ಪ್ರಯತ್ನಿಸಿದರು. ಆದರೆ ವಾಹನಕ್ಕೆ ಒಮ್ಮೆ ನಿಗದಿಪಡಿಸಿದ ಸಂಖ್ಯೆಯಲ್ಲಿ ಬದಲಾವಣೆಯನ್ನು ಮಾಡಲು ಅನುಮತಿ ಇಲ್ಲ ಎಂದು ತಿಳಿಯಿತ್ತು. ಹೀಗಾಗಿ ನಂಬರ್ ಬದಲಾಯಿಸಲು ಸಾಧ್ಯವಾಗಲಿಲ್ಲ ಎಂದು ಯುವತಿಯೊಬ್ಬಳು ಸ್ಕೂಟಿ ನಂಬರ್ ಪ್ಲೇಟ್‍ನಿಂದ ತಾನು ಅನುಭವಿಸಿರುವ ಮುಜುಗರದ ಸಂಗತಿಯನ್ನು ಹೇಳಿಕೊಂಡಿದ್ದಾರೆ.

  • 4 ಸಾವಿರ ಕೋಟಿ ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ: ಡಿಸಿಎಂ

    4 ಸಾವಿರ ಕೋಟಿ ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ: ಡಿಸಿಎಂ

    ಬೆಳಗಾವಿ: ಕಳೆದ ಮಾರ್ಚ ನಿಂದ ಸುಮಾರ 4 ಸಾವಿರ ಕೋಟಿ ಸಾರಿಗೆ ಇಲಾಖೆಗೆ ನಷ್ಟ ಉಂಟಾಗಿದೆ. ಅದಕ್ಕೆ ಮುಖ್ಯ ಕಾರಣ, 20 ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ ಕೋವಿಡ್ ಪ್ರಕರಣಗಳು ಎಂದು ಸಾರಿಗೆ ಸಚಿವರು ಮತ್ತು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಬೆಳಗಾವಿ ತಮ್ಮ ನಿವಾಸದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಸಾರಿಗೆ ಇಲಾಖೆಯ ಕಾರ್ಯಚರಣೆ ಕುಂಟಿತ ಆಗಿದೆ, ಅತಿವೃಷ್ಠಿ ಬಳಿಕ ಕೊರೊನಾ ಸಮಸ್ಯೆ, ಬಳಿಕ ಇಲಾಖೆ ಸಿಬ್ಬಂದಿ ಪ್ರತಿಭಟನೆ, ಬಳಿಕ ಮತ್ತೆ ಕೊರೊನಾ ಎರಡನೇ ಅಲೆ ಬಂದಿದ್ದರಿಂದ, ಸರ್ಕಾರದಲ್ಲಿ ಹೆಚ್ಚು ನಷ್ಟ ಸಾರಿಗೆ ಇಲಾಖೆಗೆ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ರೈತರಿಗೆ ಪರಿಹಾರ ನೀಡಿದ ನಂತರ ನಿವೇಶನ ಹಂಚಿಕೆ: ವಿಶ್ವನಾಥ್

    ಸಾರಿಗೆ ಇಲಾಖೆಗೆ ನಷ್ಟ ಇದ್ದರು 2600 ಕೋಟಿ ಸಂಬಳ ಸಿಬ್ಬಂದಿಗೆ ನೀಡಲಾಗಿದೆ. 50 ಪ್ರತಿಶತ ಈಗ ಸಾರಿಗೆಯಲ್ಲಿ ಜನ ಪ್ರಯಾಣಿಸಲು ಅವಕಾಶ ಇರುವುದರಿಂದ ಬರುವ ಆದಯಾಕ್ಕೆ ಸಂಬಳ ಮತ್ತು ಇಂದನಕ್ಕೆ ಸಾಲುತ್ತಿಲ್ಲ. ಮೂರು ನಾಲ್ಕು ತಿಂಗಳು ಹೆಚ್ಚು ಜನರಿಗೆ ಪ್ರಯಾಣಕ್ಕೆ ಅವಕಾಶ ಇಲ್ಲ. ನಮ್ಮ ಸರ್ಕಾರಕ್ಕೆ ನಷ್ಟ ಆದರು ಜನರ ಆರೋಗ್ಯ ಮುಖ್ಯ ಎಂದು ತಿಳಿಸಿದರು.

    ಜುಲೈ 5ರ ಬಳಿಕ ಸಾರಿಗೆ ಇಲಾಖೆಯ ಸಿಬ್ಬಂದಿಯಿಂದ ಮತ್ತೆ ಮುಷ್ಕರ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ಸಾರಿಗೆ ಇಲಾಖೆ ಸಿಬ್ಬಂದಿಗೆ ಲೋಪ ಮಾಡೊರುವುದು ತಿಳಿದಿದೆ. ಅವರ ವಿರುದ್ಧ ಹುನ್ನಾರ ಮಾಡಿದ್ದು, ಅವರ ಹುನ್ನಾರಕ್ಕೆ ನಾವು ಒಳಗಾಗಾಗಿದ್ದೆವೆ ಎಂದು ಸಾರಿಗೆ ಸಿಬ್ಬಂದಿಗೆ ತಿಳಿದಿದೆ. ಸರ್ಕಾರದ ಎಳಿಗೆ ಸಹಿಸಲು ಆಗದ ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರ ಮಾಡಿದ್ದಾರೆ. ಹುನ್ನಾರ ಮಾಡಿದ್ದು, ಯಾರು ಎಂದು ನಾ ಹೇಳಲ್ಲ ಅದು ನಿಮಗೆ ಗೊತ್ತಾಗಲಿದೆ ಎಂದಿದ್ದಾರೆ.

    ಈ ಕೊರೊನಾ ಅಲೆಗಳು ಸಾಕಷ್ಟು ಅನುಭವ ಕೊಟ್ಟಿದೆ. ವಿಷೇಶವಾಗಿ ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಹೊಸ ರೂಪ ಪಡೆದುಕೊಂಡಿದೆ. ಎರಡನೆಯ ಅಲೆಯಲ್ಲಿ ಬ್ಲ್ಯಾಕ್, ಯೆಲ್ಲೋ, ಗ್ರಿನ್ ಫಂಗಸ್ಸ್ ಸೇರಿದಂತೆ ಅನೇಕ ಪ್ರಕರಣಗಳು ಪತ್ತೆ ಆಗಿದ್ದವು. ಆದರೆ ಈಗ ಮಹಾರಾಷ್ಟ್ರದಲ್ಲಿ ಈಗ ಡೆಲ್ಟಾ ಫ್ಲಸ್ ಎಂಬ ರೂಪಾಂತರಿ ಕೊರೊನಾ ಪ್ರಕರಣ ಪತ್ತೆ ಆಗುತ್ತಿದೆ. ಅಂತರರಾಜ್ಯ ಸಾರಿಗೆ ಪ್ರಾರಂಭ ಮಾಡಿದ್ದೇವೆ. ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಬರುವವರು ಕೋವಿಡ್ ನೇಗೆಟಿವ್ ರೀಪೊರ್ಟ ಕಡ್ಡಾಯವಾಗಿ ಇರಬೇಕು ಎಂದು ಹೇಳಿದ್ದಾರೆ.

    ಕೋವಿಡ್ ರೀಪೊರ್ಟ ಇದ್ರೆ ಮಾತ್ರ ಗಡಿ ಪ್ರವೇಶಕ್ಕೆ ಅವಕಾಶ ಇರುತ್ತದೆ. ಬೀದರ, ಗುಲ್ಬರ್ಗಾ ಬೆಳಗಾವಿ ಜಿಲ್ಲೆಗೆ ಮಹಾರಾಷ್ಟ್ರದ ಹೆಚ್ಚು ಸಂಪರ್ಕ ಇರುವುದರಿಂದ ಅಂತಹ ಗಡಿಗಳಲ್ಲಿ ನೇಗಟಿವ್ ರೀಪೊರ್ಟ ಕಡ್ಡಾವಾಗಿ ಪರಿಶೀಲನೆ ನಡೆಸಬೇಕು ಎಂದು ಡಿಸಿಗಳಿಗೆ ಸೂಚನೆ ನೀಡಿದ್ದೇವೆ. ಬೆಳಗಾವಿ ಜಿಲ್ಲೆಯ ಅಥಣಿ, ನಿಪ್ಪಾಣಿ, ಕಾಗವಾಡ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ಮೂರನೆ ಅಲೆಗೆ ಈಗಿನಿಂದಲೆ ಜಾಗೃತಿ ವಹಿಸುತ್ತಿದ್ದೇವೆ ಎಂದು ತಿಳಿಸಿದರು.

  • ಕೊರೊನಾದಿಂದ ಸಾರಿಗೆ ಇಲಾಖೆಗೆ ಭಾರೀ ನಷ್ಟ

    ಕೊರೊನಾದಿಂದ ಸಾರಿಗೆ ಇಲಾಖೆಗೆ ಭಾರೀ ನಷ್ಟ

    ಬೆಂಗಳೂರು: ಕೋವಿಡ್‌ 19ನಿಂದಾಗಿ ಸಾರಿಗೆ ಇಲಾಖೆಗೆ ಭಾರೀ ನಷ್ಟವಾಗಿದೆ.

    2020-21ರ ಹಣಕಾಸು ವರ್ಷದಲ್ಲಿ ಸಾರಿಗೆ ಇಲಾಖೆ 7,115 ಕೋಟಿ ರೂ.ಗಳ ಆದಾಯವನ್ನು ನಿರೀಕ್ಷಿಸಲಾಗಿತ್ತು. ಆದರೆ ಜನವರಿ ಅಂತ್ಯಕ್ಕೆ 4,294  ಕೋಟಿ ರೂ. ಮಾತ್ರ ಆದಾಯ ಸಂಗ್ರಹವಾಗಿದೆ.

    2021-22ರ ಸಾಲಿನಲ್ಲಿ 7,515 ಕೋಟಿ ರೂ. ಸಂಗ್ರಹಣೆಯ ಗುರಿಯನ್ನು ಹಾಕಲಾಗಿದೆ. ಈ ವರ್ಷ ರಾಜ್ಯದಲ್ಲಿ 52 ಬಸ್‌ ನಿಲ್ದಾಣ, 16 ಬಸ್‌ ಘಟಕಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಪ್ರಸ್ತಾಪ ಮಾಡಲಾಗಿದೆ.

  • ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಸಿಎಂ ಒಪ್ಪಿದ್ದಾರೆ: ಲಕ್ಷ್ಮಣ್ ಸವದಿ

    ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಸಿಎಂ ಒಪ್ಪಿದ್ದಾರೆ: ಲಕ್ಷ್ಮಣ್ ಸವದಿ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ.

    ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ ಎದುರಾಗಿದೆ. ಕೊರೊನಾದಿಂದ ಆರ್ಥಿಕ ಸಮಸ್ಯೆ ಇದೆ. ಇಂದು ಈ ಸಮಸ್ಯೆಯನ್ನು ಸಿಎಂಗೆ ಮನವರಿಕೆ ಮಾಡಿದೆವು ಎಂದ ಅವರು ಬಸ್ ಟಿಕೆಟ್ ದರ ಹೆಚ್ಚಳ ಸದ್ಯ ಏನೂ ಚರ್ಚೆ ಆಗಿಲ್ಲ. ಹೆಚ್ಚಳದ ಪ್ರಸ್ತಾಪ ಸದ್ಯ ನಮ್ಮ ಮುಂದೆ ಇಲ್ಲ ಅಂತ ತಿಳಿಸಿದರು.

    ಅಕ್ಟೋಬರ್, ನವೆಂಬರ್, ಡಿಸೆಂಬರ್ ಸಂಬಳಕ್ಕೆ ಹಣದ ಕೊರತೆ ಇದೆ. 75:25 ಪ್ರಮಾಣದಂತೆ ಹಣಕಾಸು ನೆರವು ಕೇಳಿದ್ದೇವೆ. 634 ಕೋಟಿ ನೀಡಲು ಸಿಎಂ ಒಪ್ಪಿಗೆ ಕೊಟ್ಟಿದ್ದಾರೆ. ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ. ಆರ್ಥಿಕ ನೆರವು ನೀಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕೋವಿಡ್ ಕಾರಣ ನಿಗಮಗಳು ನಷ್ಟದಲ್ಲಿವೆ. ಹೀಗಾಗಿ ಸಂಬಳ ನೀಡಲು ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ದುರ್ದೈವದಿಂದ KSRTC, BMTC ನೌಕರರ ಸಂಬಳ ನೀಡಲು ಆಗಿಲ್ಲ: ಲಕ್ಷ್ಮಣ ಸವದಿ

    ಇದೇ ವೇಳೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೂ ಒತ್ತಾಯ ಹಾಕಿದ್ದೇವೆ. ಮರಾಠ ಅಭಿವೃದ್ಧಿ ಪ್ರಾಧಿಕಾರ ಸಮುದಾಯ ಆಧಾರಿತವಾಗಿ ಮಾಡಲಾಗಿದೆ. ಅದನ್ನು ನಾವು ಸ್ವಾಗತಿಸುತ್ತೇವೆ. ನಾವು ನಮ್ಮ ಸಮುದಾಯದ ವಿಚಾರದಲ್ಲಿ ಸಿಎಂಗೆ ಒತ್ತಡ ಹಾಕಿದ್ದೇವೆ. ನಾನು, ಸೋಮಣ್ಣ ಹಾಗೂ ಬಿ.ಸಿ ಪಾಟೀಲ್ ಈ ಬಗ್ಗೆ ಸಿಎಂಗೆ ಮನವಿ ಮಾಡಿದ್ದೇವೆ. ಪರಿಶೀಲನೆ ಮಾಡುತ್ತೇನೆ ಎಂದು ಸಿಎಂ ಭರವಸೆ ಕೊಟ್ಟಿದ್ದಾರೆ ಎಂದರು.

    ಮರಾಠ ಸಮುದಾಯ ಹಿಂದುಳಿದಿದೆ. ಹಾಗಾಗಿ ನಿಗಮ ರಚಿಸಲಾಗಿದೆ. ಇದಕ್ಕೆ ನಮ್ಮ ಆಕ್ಷೇಪ ಇಲ್ಲ. ವೀರಶೈವ ಲಿಂಗಾಯತ ಸಮುದಾಯ ಶಿಕ್ಷಣ, ಉದ್ಯೋಗದಲ್ಲಿ ಹಿಂದುಳಿದಿದೆ. ಹಾಗಾಗಿ ನಾವು ನಿಗಮ ಕೇಳಿದ್ದೇವೆ. ಕನ್ನಡ ಹೋರಾಟಗಾರರಿಗೆ ಮನವಿ ಮಾಡ್ತೇನೆ. ಮರಾಠಾ ನಿಗಮ ಭಾಷೆ ಆಧಾರದಲ್ಲಿ ಮಾಡಿಲ್ಲ. ಸಮುದಾಯ ಆಧಾರದಲ್ಲಿ ಮಾಡಿದ್ದಾರೆ. ಮರಾಠ ಸಮುದಾಯ ಬಹಳ ವರ್ಷಗಳಿಂದ ರಾಜ್ಯದಲ್ಲಿದ್ದಾರೆ, ಹಿಂದುಳಿದಿದ್ದಾರೆ ಎಂದು ಅವರು ಹೇಳಿದರು.