Tag: Transport Employee

  • ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

    ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ ಕರೆ ನೀಡ್ತೆವೆ – ವಾಟಾಳ್

    ರಾಮನಗರ: ಸಾರಿಗೆ ನೌಕರರ ಬೇಡಿಕೆ ಈಡೇರಿಸಿ ಅವರ ಸಮಸ್ಯೆ ಬಗೆಹರಿಸಿ, ಇಲ್ಲದಿದ್ರೆ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ತಿಳಿಸಿದ್ದಾರೆ.ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಹಿಂದಿಕ್ಕಿ ದೀರ್ಘಾವಧಿಯ ಗೃಹ ಸಚಿವರಾಗಿ ಸೇವೆ ಸಲ್ಲಿಸಿದ ಅಮಿತ್ ಶಾ

    ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ರಾಮನಗರದಲ್ಲಿ ಮಾತನಾಡಿದ ಅವರು, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದೆ. ಯಾವ ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಿಲ್ಲ. ಹೀಗಾಗಿ ಅವರ ಹಳೆಯ ಸಂಬಳವನ್ನ ಕೊಟ್ಟುಬಿಡಿ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟಿಕೊಂಡಿದ್ದೀರಿ? ಬಾಕಿ ಇಟ್ಕೊಂಡ್ರೆ ನೌಕರರ ಜೀವನ ಹೇಗೆ ನಡೆಯಬೇಕು ಎಂದು ಕಿಡಿಕಾರಿದ್ದಾರೆ.

    ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಅವರು ಕೂಡಲೇ ಅವರ ಬೇಡಿಕೆ ಈಡೇರಿಸಬೇಕು. ಸಾರಿಗೆ ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಅವರ ಜೊತೆ ಸೇರಿ ನಾವು ಹೋರಾಟ ಮಾಡ್ತೀವಿ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

  • ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಡಿಪೋ ಆವರಣದಲ್ಲಿ ನೇಣಿಗೆ ಶರಣಾದ ಸಾರಿಗೆ ನೌಕರ

    ಹಾವೇರಿ: ಬಸ್ ಡಿಪೋದ (Bus Depot) ಆವರಣದಲ್ಲಿಯೇ ಸಾರಿಗೆ ನೌಕರ (Transport Employee) ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರಿನ (Ranebennur) ಬಸ್ ಡಿಪೋದಲ್ಲಿ ನಡೆದಿದೆ.

    ಆತ್ಮಹತ್ಯೆಗೆ ಶರಣಾದ ಚಾಲಕ ಕಂ ನಿರ್ವಾಹಕನನ್ನ ಮಲ್ಲಿಕಾರ್ಜುನ ಬಡಿಗೇರ (49) ಎಂದು ಗುರುತಿಸಲಾಗಿದೆ. ಮೂಲತಃ ವಿಜಯಪುರ (Vijayapura) ಜಿಲ್ಲೆ ಮುದ್ದೇಬಿಹಾಳ ತಾಲೂಕು ದಾವಳಗಿ ಗ್ರಾಮದ ನಿವಾಸಿಯಾಗಿದ್ದ ಇವರು, ಕಳೆದ ಹತ್ತು ವರ್ಷದಿಂದ ಹಾವೇರಿ ಜಿಲ್ಲೆ ರಾಣೇಬೆನ್ನೂರು ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

    ಕಳೆದ ಎರಡು ವರ್ಷಗಳ ಹಿಂದೆ ಹೃದಯ ಆಪರೇಷನ್ ಸಹ ಆಗಿತ್ತು. ಕಳೆದ ಒಂದು ವಾರದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು ಎನ್ನಲಾಗಿದೆ. ಆದರೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಹಲಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: 20ರ ಯುವಕನಿಗೆ ಚಾಕು ಇರಿತ- ಪೊಲೀಸರ ಮುಂದೆ ಮೃತನ ತಾಯಿ ಹೇಳಿದ್ದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇದು ‘ಕೊಲೆಗೆಡುಕ ಸರ್ಕಾರ’  – ಹೆಚ್‍ಡಿಕೆ ಕಿಡಿ

    ಇದು ‘ಕೊಲೆಗೆಡುಕ ಸರ್ಕಾರ’ – ಹೆಚ್‍ಡಿಕೆ ಕಿಡಿ

    ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದು ‘ಕೊಲೆಗೆಡುಕ ಸರ್ಕಾರ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡುವ ಮೂಲಕ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರ್ಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದರೆ, ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು ‘ಕೊಲೆಗೆಡುಕ ಸರ್ಕಾರ’ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಆರ್ಥಿಕ ಸಂಕಷ್ಟದಿಂದ ಮನನೊಂದು KSRTC ನೌಕರ ವಿಷ ಸೇವಿಸಿ ಆತ್ಮಹತ್ಯೆ

    ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲೇ ಆದ್ಯತೆ ನೀಡಬೇಕಿತ್ತು. ರಾಜ್ಯ ಸರ್ಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ. ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಗೋಕಾಕ್ ಫಾಲ್ಸ್ ಬಳಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ 140 ಅಡಿ ಕಂದಕಕ್ಕೆ ಬಿದ್ದವ ಪವಾಡ ಸದೃಶ್ಯ ರೀತಿ ಪಾರು

    ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನಾ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 200 ಕೋಟಿ ಜೀವನಾಂಶ ರಿಜೆಕ್ಟ್ ಮಾಡಿದ ಸಮಂತಾ

     

  • ವರ್ಗಾವಣೆ ವಿರೋಧಿಸಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

    ವರ್ಗಾವಣೆ ವಿರೋಧಿಸಿ ಸಾರಿಗೆ ನೌಕರ ಆತ್ಮಹತ್ಯೆಗೆ ಯತ್ನ

    ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್‍ಈಕೆಎಸ್‍ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ.

    ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ.

    ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಏಳು ಮಕ್ಕಳನ್ನ ಕಟ್ಟಿಕೊಂಡು ಬಾಲ್ಕಿಗೆ ಹೇಗೆ ಹೋಗಲಿ ಅಂತ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ್ದಾನೆ. ಏಕಾಏಕಿ ವರ್ಗಾವಣೆ ಶಿಕ್ಷೆಗೆ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಮಾರ್ಚ್ ತಿಂಗಳಿನಿಂದ ವೇತನವೂ ನೀಡದೇ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಅಂತ ಚಾಲಕ ಸೈಯದ್ ಯೂನೂಸ್ ಆರೋಪಿಸಿದ್ದಾರೆ. ವಿಷಯ ತಿಳಿದು ಕಚೇರಿಗೆ ಬಂದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಸಿಬ್ಬಂದಿಯನ್ನ ಸಮಾಧಾನ ಪಡಿಸಲು ಯತ್ನಿಸಿದರು. ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ ನಮ್ಮಿಂದ ಕಿರುಕುಳ ಆಗಿಲ್ಲ ಅಂತ ಡಿವಿಷನಲ್ ಕಂಟ್ರೋಲರ್ ವೆಂಕಟೇಶ್ ಹೇಳಿದ್ದಾರೆ.