Tag: transport minister

  • ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ಹಿಂಬದಿ ಸವಾರರಿಗೂ ಸೀಟ್‌ಬೆಲ್ಟ್ ಕಡ್ಡಾಯ, ತಪ್ಪಿದರೆ ದಂಡ

    ನವದೆಹಲಿ: ಕಾರಿನಲ್ಲಿ ಹಿಂದೆ ಕುಳಿತು ಸೀಟ್ ಬೆಲ್ಟ್ ಧರಿಸದೇ ಇರುವವರಿಗೆ ದಂಡ ವಿಧಿಸುವ ಕ್ರಮವನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಮುಂಬೈನಲ್ಲಿ ನಡೆದ ಕಾರು ಅಪಘಾತದಲ್ಲಿ ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಮೃತಪಟ್ಟ ಎರಡು ದಿನಗಳ ನಂತರ ಈ ಕ್ರಮಕ್ಕೆ ಕೇಂದ್ರ ಸಚಿವರು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ ಹಾವಳಿ: ನಾಳೆ ಸಾಫ್ಟ್‌ವೇರ್ ಕಂಪನಿಗಳ ಜತೆ ಸಭೆ

    ಸಾಂದರ್ಭಿಕ ಚಿತ್ರ

    ಈಗಾಗಲೇ ಹಿಂದಿನ ಸೀಟಿನಲ್ಲಿರುವವರೂ ಸೀಟ್‌ಬೆಲ್ಟ್ ಧರಿಸುವುದು ಕಡ್ಡಾಯವಾಗಿದೆ. ಆದರೆ ಜನರು ಅದನ್ನು ಅನುಸರಿಸುತ್ತಿಲ್ಲ. ಹಾಗಾಗಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಹಿಂಬದಿ ಸೀಟಿನಲ್ಲಿರುವವರು ಕಡ್ಡಾಯವಾಗಿ ಬೆಲ್ಟ್ ಧರಿಸದೇ ಇದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

    ದಂಡ ವಸೂಲಿ ಮಾಡುವುದು ಸರ್ಕಾರದ ಉದ್ದೇಶವಲ್ಲ. ಜಾಗೃತಿ ಮೂಡಿಸುವುದು ನಮ್ಮ ಉದ್ದೇಶ. ಈ ನೀತಿಯ ಹಿಂದೆ 2024ರ ವೇಳೆಗೆ ರಸ್ತೆ ಅಪಘಾತಗಳನ್ನು ಶೇ.50 ರಷ್ಟು ಕಡಿಮೆ ಮಾಡುವ ಗುರಿಯೂ ಇದೆ. ಹಾಗಾಗಿ ನಿಗಾ ವಹಿಸಲು ಹೆಚ್ಚುವರಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಕನಿಷ್ಠ ದಂಡ 1 ಸಾವಿರ ರೂಪಾಯಿ ಇರುತ್ತದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಳೆ; ನಾಳೆ ಬೆಂಗಳೂರು ಪೂರ್ವ ಭಾಗದ ಶಾಲೆಗಳಿಗೆ ರಜೆ

    ಇದೇ ವೇಳೆ ಕಳೆದ 5 ವರ್ಷಗಳಲ್ಲಿ ಮಹಾರಾಷ್ಟ್ರದಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 59 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 80 ಸಾವಿರದಷ್ಟು ಜನ ಗಂಭೀರ ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಹೆದ್ದಾರಿ ಪೊಲೀಸರು ಇಂದು ಬಿಡುಗಡೆ ಮಾಡಿದ ಅಂಕಿ-ಅಂಶಗಳನ್ನು ಬಹಿರಂಗಪಡಿಸಿದ್ದಾರೆ.

    ಅಲ್ಲದೇ `ಭಾರತದಲ್ಲಿ ರಸ್ತೆ ಅಪಘಾತಗಳು – 2020′ ಎಂಬ ಶೀರ್ಷಿಕೆಯ ವರದಿಯ ಪ್ರಕಾರ, ರಸ್ತೆ ಅಪಘಾತದಲ್ಲಿ ಉಂಟಾದ ಶೇ.11ಕ್ಕಿಂತ ಹೆಚ್ಚು ಸಾವುಗಳು ಸೀಟ್ ಬೆಲ್ಟ್ ಬಳಸದ ಕಾರಣದಿಂದ ಸಂಭವಿಸಿದ್ದರೇ, ಹೆಲ್ಮೆಟ್ ಧರಿಸದ ಕಾರಣದಿಂದ ಶೇ.30.1 ರಷ್ಟು ಸಾವುಗಳು ಸಂಭವಿಸಿದೆ. ಶೇ.26 ರಷ್ಟು ಮಂದಿ ಗಾಯಗೊಂಡಿದ್ದಾರೆ ಎಂದು ಅವರು ವರದಿಯನ್ನು ವಿವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

    KSRTC ಹೆಸರು ಕೈ ತಪ್ಪುವ ಆತಂಕ ಬೇಡ: ಡಿಸಿಎಂ ಸವದಿ ಸ್ಪಷ್ಟನೆ

    ಬೆಂಗಳೂರು: ಕೆಎಸ್ಆರ್‌ಟಿಸಿ (KSRTC) ಎಂಬ ಹೆಸರು ಕರ್ನಾಟಕದಿಂದ ಕೈತಪ್ಪಿದೆ ಎಂಬ ಆತಂಕ ಪಡಬೇಕಾಗಿಲ್ಲ. ಕೇರಳ ಸರ್ಕಾರವು ಈ ಬಗ್ಗೆ ಏನೇ ಹೇಳಿಕೆ ನೀಡಿದರೂ ನಮ್ಮ ಕರ್ನಾಟಕ ಸರ್ಕಾರವು ಈ ಬಗ್ಗೆ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುತ್ತದೆ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಕೆಎಸ್ಆರ್‌ಟಿಸಿ ಎಂಬ ಹೆಸರನ್ನು ಮುಂದೆಯೂ ಕರ್ನಾಟಕವು ಬಳಸಲು ಸ್ವತಂತ್ರವಾಗಿದೆ. ಈ ಬಗ್ಗೆ ಕೇರಳ ಸರ್ಕಾರದ ಅನುಮತಿ ನಮಗೆ ಬೇಕಾಗಿಲ್ಲ. ಅಗತ್ಯವಿದ್ದರೆ ನ್ಯಾಯಾಲಯಲ್ಲಿ ಕಾನೂನಾತ್ಮಕ ಹೋರಾಟಗಳನ್ನು ನಡೆಸಲು ನಾವು ಹಿಂದೆ ಬೀಳುವುದಿಲ್ಲ ಎಂದು ಸವದಿ ಅವರು ಕಟುವಾಗಿ ಪ್ರತ್ಯುತ್ತರ ನೀಡಿದ್ದಾರೆ.

    ರಾಜ್ಯ ರಸ್ತೆ ಸಾರಿಗೆ ನಿಗಮವು ಇನ್ನು ಮುಂದೆ ಕೆಎಸ್ಆರ್‌ಟಿಸಿ ಎಂದು ಬಳಸುವಂತಿಲ್ಲವೆಂದು, ಕೇಂದ್ರದ ಟ್ರೇಡ್ ಮಾರ್ಕ್ ರಿಜಿಸ್ಟರಿ ಬುಧವಾರ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು, ಎರಡು ರಾಜ್ಯಗಳ ನಡುವಿನ ಒಂದು ದಶಕದ ಕಾನೂನಾತ್ಮಕ ಹೋರಾಟವು ಅಂತ್ಯಗೊಂಡಂತಿದೆ ಎಂಬ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಇಂದು ಕೂಲಂಕುಶವಾಗಿ ಪರಿಶೀಲಿಸಲಾಗಿದ್ದು, ಇದು ವಾಸ್ತವಕ್ಕೆ ದೂರವಾದ ಸಂಗತಿಯಾಗಿದೆ ಎಂಬುದು ದೃಢಪಟ್ಟಿದೆ. ಆದ್ದರಿಂದ ಅನವಶ್ಯಕ ಅಪಪ್ರಚಾರಕ್ಕೆ ಯಾರೂ ಕಿವಿಕೊಡಬಾರದು ಎಂದು ಸವದಿ ಅವರು ಸ್ಪಷ್ಟಪಡಿಸಿದ್ದಾರೆ. ಯಾಕೆಂದರೆ ನಮ್ಮ ಸಾರಿಗೆ ಸಂಸ್ಥೆಗೆ ಕೇಂದ್ರ ಟ್ರೇಡ್ ಮಾರ್ಕ್ ರಿಜಿಸ್ಟರಿ ಅವರಿಂದ ಇಂತಹ ಯಾವುದೇ ಸೂಚನೆ ಅಥವಾ ಆದೇಶ ಇಂದಿನವರೆಗೂ ಬಂದಿಲ್ಲ. ಇದನ್ನೂ ಓದಿ: KSRTC ಟ್ರೇಡ್ ಮಾರ್ಕ್ ಕೇರಳಕ್ಕೆ ಸೇರಿದ್ದು – ಟ್ರೇಡ್ ಮಾರ್ಕ್ ಅಥಾರಿಟಿ ಆಫ್ ಇಂಡಿಯಾದಿಂದ ಆದೇಶ

    ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ಆರ್‌ಟಿಸಿಗೆ ನೀಡಲಾದ ಟ್ರೇಡ್ ಮಾರ್ಕ್ ಪ್ರಮಾಣಪತ್ರದ ವಿರುದ್ಧ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿ (ಐಪಿಎಬಿ)ಯ ಮುಂದೆ ಸಲ್ಲಿಸಿದ ಮೇಲ್ಮನವಿಗಳಲ್ಲಿ ಯಾವುದೇ ಅಂತಿಮ ಆದೇಶಗಳನ್ನು ಸಹ ಹೊರಡಿಸಲಾಗಿಲ್ಲ ಎಂಬುದು ತಿಳಿದುಬಂದಿದೆ. ಏತನ್ಮಧ್ಯೆ, ಸದರಿ ಮಂಡಳಿಯನ್ನು ದಿನಾಂಕ 4.04.2021 ರ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ರದ್ದುಪಡಿಸಲಾಗಿದೆ ಮತ್ತು ಇಲ್ಲಿ ಬಾಕಿ ಇರುವ ಅರ್ಜಿಗಳನ್ನು ಹೈಕೋರ್ಟ್‌ಗೆ ವರ್ಗಾಯಿಸಲಾಗುತ್ತದೆ. ಆದ್ದರಿಂದ, ಕರ್ನಾಟಕದಲ್ಲಿ ಕೆಎಸ್‌ಆರ್‌ಟಿಸಿಯ ಟ್ರೇಡ್ ಮಾರ್ಕ್ ನೋಂದಣಿಯು ಪ್ರಸ್ತುತ ಜಾರಿಯಲ್ಲಿದೆ ಮತ್ತು ಕೆಎಸ್‌ಆರ್‌ಟಿಸಿಯು ತನಗೆ ನೀಡಲಾಗಿರುವ ಟ್ರೇಡ್‌ಮಾರ್ಕ್‌ಗಳನ್ನು ಬಳಸಲಾಗುವುದಿಲ್ಲ ಎಂಬ ಸುದ್ದಿ-ವರದಿಗಳು ಸತ್ಯಕ್ಕೆ ದೂರವಾಗಿದೆ ಮತ್ತು ಇದನ್ನು ಕಾನೂನಾತ್ಮಕವಾಗಿ ಒಪ್ಪಲಾಗದು. ಆದ್ದರಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ‘ಕೆಎಸ್‌ಆರ್‌ಟಿಸಿ’ ಟ್ರೇಡ್‌ಮಾರ್ಕ್ ಬಳಕೆ ಮಾಡುವ ವಿರುದ್ಧವಾಗಿ ಯಾವುದೇ ಕಾನೂನಾತ್ಮಕ ಅಡೆತಡೆಯಾಗಲಿ ಅಥವಾ ನಿಷೇಧವಾಗಲಿ ಇಲ್ಲ ಎಂಬುದನ್ನು ಗಮನಿಸಬೇಕು ಎಂದು ಸವದಿಯವರು ಸಮಜಾಯಿಷಿ ನೀಡಿದ್ದಾರೆ.

    ಕೇರಳ ಎಸ್‌ಆರ್‌ಟಿಸಿಯು, ಕೆಎಸ್ಆರ್‌ಟಿಸಿ/ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಲು ಉದ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಒಂದು ವೇಳೆ ಅಂತಹ ನೋಟಿಸ್ ನೀಡಿದರೆ, ಸಂಸ್ಥೆಯಿಂದ ಸೂಕ್ತವಾದ ಉತ್ತರವನ್ನು ನೀಡಲಾಗುತ್ತದೆ. ನಮ್ಮ ಹಕ್ಕುಗಳನ್ನು ರಕ್ಷಿಸಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ನಾವು ಪ್ರಸ್ತುತ ನಮ್ಮ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದೇವೆ. ಆದ್ದರಿಂದ ಊಹಾಪೋಹದ ಯಾವುದೇ ವದಂತಿಯನ್ನು ನಂಬಿ ಆತಂಕಪಡಬೇಕಾಗಿಲ್ಲ ಎಂದು ಸವದಿ ಅವರು ತಿಳಿಸಿದ್ದಾರೆ.

  • ಪಕ್ಷ ಬಯಸಿದರೆ ರಾಜೀನಾಮೆಗೆ ಸಿದ್ಧ – ಸಚಿವ ಡಿಸಿ ತಮ್ಮಣ್ಣ

    ಪಕ್ಷ ಬಯಸಿದರೆ ರಾಜೀನಾಮೆಗೆ ಸಿದ್ಧ – ಸಚಿವ ಡಿಸಿ ತಮ್ಮಣ್ಣ

    ಮಂಡ್ಯ: ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಮ್ಮ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇನೆ. ಅಲ್ಲದೇ ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೂಡ ನಾನು ಸಿದ್ಧ ಎಂದು ಸಾರಿಗೆ ಸಚಿವ ರೇವಣ್ಣ ಅವರು ಹೇಳಿದ್ದಾರೆ.

    ಮದ್ದೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿಖಿಲ್ ಕುಮಾರಸ್ವಾಮಿ ಸೋಲಿನ ಹೊಣೆ ಹೊತ್ತ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಸೋಲಿನ ಹೊಣೆ ಹೊತ್ತುಕೊಂಡದ್ದು ಅವರ ದೊಡ್ಡ ಗುಣ, ಅದಕ್ಕೆ ಸೋಲಿನ ಹೊಣೆ ಅವರೇ ಹೊತ್ತಿದ್ದಾರೆ. ಆದರೆ ಲೋಕಸಭಾ ಚುನಾವಣೆಯ ಸೋಲಿನ ಪರಾಮರ್ಶೆ, ಆತ್ಮಾವಲೋಕನ ಮಾಡಲು ಹೋಗಲ್ಲ. ಏಕೆಂದರೆ ರಮ್ಯಾ ಅವರು ಉಪಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಲ್ಲಿ ಇಪ್ಪತ್ತು ಸಾವಿರ ಲೀಡ್ ಪಡೆದಿದ್ದರು. ಆ ಸಂದರ್ಭದ ಅಂಶಗಳು ಚುನಾವಣೆ ಮೇಲೆ ಪ್ರಭಾವ ಬೀರುತ್ತವೆ ಅಷ್ಟೇ ಎಂದರು.

    ಇದೇ ವೇಳೆ ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಮುಂದಾಗಿರುವುದಾಗಿ ತಿಳಿಸಿದ ಅವರು, ಒಳಚರಂಡಿ, ಕುಡಿಯುವ ನೀರು, ರಸ್ತೆ ಅಭಿವೃದ್ಧಿಗೆ 196 ಕೋಟಿ ರೂ. ಹಾಗೂ ರಸ್ತೆ ಅಭಿವೃದ್ಧಿ ಹೊರತುಪಡಿಸಿ 111 ಕೋಟಿ ರೂ. ಬಿಡುಗಡೆಯಾಗಿದೆ ಎಂದರು. ಅಲ್ಲದೇ ರಾಜ್ಯ ಸರ್ಕಾರದ ಮುಂದೇ ಬಸ್ ಪ್ರಯಾಣ ದರ ಏರಿಕೆ ವಿಚಾರ ಇದ್ದು, ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನು ಓದಿ: ಫಲಿತಾಂಶದ ಹೊಣೆಯನ್ನು ನಾನೇ ಹೊರುತ್ತೇನೆ: ನಿಖಿಲ್ ಮೊದಲ ಪ್ರತಿಕ್ರಿಯೆ

  • ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್-1,016 ಹೋರಾಟಗಾರರು ಪ್ರಕರಣದಿಂದ ಖುಲಾಸೆ

    ಕಾವೇರಿ ಹೋರಾಟಗಾರರ ಮೇಲಿನ ಪ್ರಕರಣ ವಾಪಸ್-1,016 ಹೋರಾಟಗಾರರು ಪ್ರಕರಣದಿಂದ ಖುಲಾಸೆ

    ಬೆಂಗಳೂರು: ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯ ಕಾವೇರಿ ಹೋರಾಟಗಾರರಿಗೆ ಸಂತಸದ ಸುದ್ದಿ ನೀಡಿದ್ದು, ಕಾವೇರಿ ನದಿ ನೀರಿನ ವಿಷಯವಾಗಿ ನಡೆದ ಪ್ರತಿಭಟನೆಗಳಲ್ಲಿ ದಾಖಲಾಗಿದ್ದ 51 ಪಕ್ರರಣಗಳನ್ನ ಹಿಂಪಡೆದಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಮಾಹಿತಿ ನೀಡಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಸರ್ಕಾರದ ನಿರ್ಧಾರದಿಂದ ಒಟ್ಟು 1,016 ಹೋರಾಟಗಾರರಿಗೆ ಪ್ರಕರಣಗಳಿಂದ ಮುಕ್ತಿ ಸಿಗಲಿದೆ. ಆದರೆ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟ ಮಾಡಿದವರ ವಿರುದ್ಧದ ಪ್ರಕರಣಗಳನ್ನ ಸರ್ಕಾರ ವಾಪಸ್ ಪಡೆಯದೇ ಇರಲು ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    ಮಂಡ್ಯದಲ್ಲಿ 14 ಪ್ರಕರಣಗಳಲ್ಲಿ 180 ಆರೋಪಿಗಳು, ಮದ್ದೂರಿನಲ್ಲಿ 6 ಪ್ರಕರಣಗಳಲ್ಲಿ 94 ಆರೋಪಿಗಳು, ಮಳವಳ್ಳಿಯಲ್ಲಿ 3 ಪ್ರಕರಣಗಳಲ್ಲಿ 36 ಆರೋಪಿಗಳು, ಶ್ರೀರಂಗಪಟ್ಟಣದಲ್ಲಿ 11 ಪ್ರಕರಣಗಳಲ್ಲಿ 74 ಆರೋಪಿಗಳು, ಕೆಆರ್ ಪೇಟೆಯಲ್ಲಿ 1 ಪ್ರಕರಣದಲ್ಲಿ ಒಬ್ಬ ಆರೋಪಿ, ಇನ್ನು ಪಾಂಡವಪುರದಲ್ಲಿ ದಾಖಲಾಗಿದ್ದ 16 ಪ್ರಕರಣಗಳಲ್ಲಿ 631 ಆರೋಪಿಗಳು ಖುಲಾಸೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

    ಮಂಡ್ಯ ಕಾವೇರಿ ಹೋರಾಟಗಾರರ ವಿರುದ್ಧ ಪ್ರಕರಣಗಳ ಬಗ್ಗೆ ಇಂದು ಮಾತನಾಡಿದ್ದ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಅವರು, ಕಾವೇರಿ ಹೋರಾಟಗಾರರ ಮೇಲಿನ ಕೇಸನ್ನು ಸರ್ಕಾರ ವಾಪಸ್ ಪಡೆದ ಹಿನ್ನೆಲೆ ರೈತರು ಸ್ವಂತಕ್ಕೇನು ಹೋರಾಟ ಮಾಡಲಿಲ್ಲ. ಕಾವೇರಿ ನೀರಿಗಾಗಿ ಹೋರಾಡಿದ್ದರು. ಮುಖ್ಯಮಂತ್ರಿ ಕುಮಾರಸ್ವಾಮಿ ಒಬ್ಬ ರೈತರು. ಅವರಿಗೆ ರೈತರ ಕಷ್ಟ ಗೊತ್ತು. ರೈತರು ಸ್ವಂತಕ್ಕೇನು ಹೋರಾಟ ಮಾಡಲಿಲ್ಲ. ಕಾವೇರಿ ನೀರಿಗಾಗಿ ಹೋರಾಡಿದ್ದರು. ರೈತರ ಕಷ್ಟ ಅರ್ಥ ಮಾಡಿಕೊಂಡು ಕೇಸುಗಳನ್ನು ಸಿಎಂ ವಾಪಸ್ ಪಡೆದಿದ್ದಾರೆ. ಆದರಿಂದ ಸಿಎಂ ಕುಮಾರಸ್ವಾಮಿ ಅವರಿಗೆ ಕೇಸು ವಾಪಸ್ ಪಡೆದಿದ್ದಕ್ಕೆ ರೈತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹುತಾತ್ಮ ಯೋಧನ ಪುಣ್ಯತಿಥಿ ವೆಚ್ಚವನ್ನು ನಾನೇ ಭರಿಸುತ್ತೇನೆ: ಸಚಿವ ಡಿಸಿ ತಮ್ಮಣ್ಣ

    ಹುತಾತ್ಮ ಯೋಧನ ಪುಣ್ಯತಿಥಿ ವೆಚ್ಚವನ್ನು ನಾನೇ ಭರಿಸುತ್ತೇನೆ: ಸಚಿವ ಡಿಸಿ ತಮ್ಮಣ್ಣ

    ಮಂಡ್ಯ: ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧ ಗುರು ಅವರ 11ನೇ ದಿನದ ಪುಣ್ಯತಿಥಿ ಕಾರ್ಯಕ್ರಮದ ಖರ್ಚು ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ಜಿಲ್ಲೆಯ ಕೆಎಂ ದೊಡ್ಡಿಯಲ್ಲಿ ಮಾತನಾಡಿದ ಸಚಿವರು, ಗುರು ನಮ್ಮ ಊರಿನ ಯೋಧ ಆಗಿರುವುದರಿಂದ ನಾನೇ ಖರ್ಚು ಭರಿಸುತ್ತೇನೆ. ನಮ್ಮ ಬೆಂಬಲಿಗರು ಕೂಡ ಎಲ್ಲ ಕಾರ್ಯದಲ್ಲೂ ಸಹಾಯ ಮಾಡುತ್ತಾರೆ ಎಂದರು.

    ಗುರು ಸ್ಮಾರಕ:
    ಪುಣ್ಯಕಾರ್ಯದಂದು ಸುಮಾರು 4 ರಿಂದ 5 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು. ಸಂಪ್ರದಾಯದಂತೆ ಏನೆಲ್ಲಾ ಊಟ ಮಾಡಬೇಕೆಂದು ನಿಗದಿ ಆಗಿಂದೆಯೋ ಎಲ್ಲವನ್ನೂ ಮಾಡುತ್ತೇವೆ. ಸದ್ಯದಲ್ಲೇ ಹುತಾತ್ಮ ಯೋಧ ಗುರು ಸ್ಮಾರಕ ಕೂಡ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.

    ಜೆಡಿಎಸ್‍ಗೆ ನಷ್ಟವಿಲ್ಲ: ಇದೇ ವೇಳೆ ಸುಮಲತಾ ಅಂಬರೀಶ್ ಅವರ ಲೋಕಸಭಾ ಸ್ಪರ್ಧೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಸುಮಲತಾ ಅವರು ನಮ್ಮ ಸಂಬಂಧಿಕರೇ ಆಗಿದ್ದಾರೆ. ಆದರೆ ಸಂಬಂಧ ಅಥವಾ ಪಕ್ಷ ಎಂದು ಬಂದಾಗ ನನಗೇ ಪಕ್ಷವೇ ಮುಖ್ಯವಾಗುತ್ತದೆ ಎಂದರು.

    ದೊಡ್ಡರಸಿನಕೆರೆ ಗ್ರಾಮದಲ್ಲಿರುವ ಸುಮಲತಾ ಅವರ ಸಂಬಂಧಿಕರ ಮೂಲಕ ಸಿಎಂ ಜೊತೆ ಮಾತನಾಡಿ ನಿರ್ಧಾರ ಮಾಡುವ ಬಗ್ಗೆ ಅವರಿಗೆ ತಿಳಿಸಲು ಹೇಳಿದ್ದೆ. ಆದರೆ ಅವರು ಬರಲಿಲ್ಲ. ಯಾರಿಗೆ ಅವಶ್ಯಕವಾಗಿದೆಯೋ ಅವರು ಮಾತುಕತೆಗೆ ಮುಂದಾಗಬೇಕು. ಆದರೆ ಯಾರು ಸ್ಪರ್ಧೆ ಮಾಡಬೇಕು ಎಂಬ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ. ಮಂಡ್ಯ ಲೋಕಸಭೆಗೆ ದೇವೇಗೌಡರೇ ಬಂದರೆ ಯಾವುದೇ ವಿವಾದ ಇಲ್ಲದಂತಾಗುತ್ತದೆ. ನಿಖಿಲ್ ಸ್ಪರ್ಧೆ ಮಾಡಿದರು ಕೂಡ ಸಂತೋಷ. ನನ್ನ ಮಗನಿಗೆ ಟಿಕೆಟ್ ಸಿಗದಿದ್ದಾಗಲೂ ನಾನು ಪಕ್ಷ ನಿಷ್ಠೆ ಮೆರೆದಿದ್ದೇನೆ. ಒಂದು ವೇಳೆ ಸುಮಲತಾ ಅವರು ಪಕ್ಷೇತರವಾಗಿ ಸ್ಪರ್ಧಿಸಿದರೂ ಜೆಡಿಎಸ್ ಗೆ ಏನೂ ಆಗುವುದಿಲ್ಲ ಎಂದು ಡಿಸಿ ತಮ್ಮಣ್ಣ ವಿಶ್ವಾಸ ವ್ಯಕ್ತಪಡಿಸಿದರು.

    ಅಂಬರೀಶ್ ಹಾಗೂ ಡಿಸಿ ತಮ್ಮಣ್ಣ ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ದೊಡ್ಡರಸಿನಕೆರೆ ಗ್ರಾಮದವರಾಗಿದ್ದ ಪರಿಣಾಮ ಹೆಚ್ಚು ಆತ್ಮೀಯರಾಗಿದ್ದರು. ದೊಡ್ಡರಸಿನಕೆರೆ ಗ್ರಾಮಕ್ಕೆ ಬರುವ ಸಮಯದಲ್ಲಿ ಹೆಚ್ಚು ಸಲ ಸಚಿವ ಡಿಸಿ ತಮ್ಮಣ್ಣ ಅವರ ಕಾರಿನಲ್ಲೇ ಅಂಬರೀಶ್ ಆಗಮಿಸುತ್ತಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶಾವಳಿ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ: ನಿತಿನ್ ಗಡ್ಕರಿ

    ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶಾವಳಿ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ: ನಿತಿನ್ ಗಡ್ಕರಿ

    ಹೈದರಾಬಾದ್: ಪ್ರಧಾನಿ ಹೊಟ್ಟೆಯಿಂದ ಪ್ರಧಾನಿ ಹುಟ್ಟುತ್ತಿದ್ದ ವಂಶವಾಹಿ ರಾಜಕಾರಣಾ ಪದ್ಧತಿಯನ್ನು ನಾವು ಕಿತ್ತುಹಾಕಿದ್ದೇವೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ತೆಲಂಗಾಣ ರಾಜಧಾನಿಯ ಬಿಜೆಪಿ ಯುವ ಮೋರ್ಚಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಗಿದ್ದಾಗಿನಿಂದ ಪ್ರಧಾನಿ ಹೊಟ್ಟೆಯಿಂದ ಪ್ರಧಾನಿಯ ಹುಟ್ಟು, ಮುಖ್ಯಮಂತ್ರಿಯ ಹೊಟ್ಟೆಯಿಂದ ಮುಖ್ಯಮಂತ್ರಿ ಹಾಗೂ ಸಂಸದನ ಹೊಟ್ಟೆಯಿಂದ ಸಂಸದ ಹುಟ್ಟುತ್ತಿದ್ದ ವಂಶವಾಹಿ ಪರಂಪರೆಯಿಂದ ಭಾರತದ ಪ್ರಜಾಪ್ರಭುತ್ವ ಇಲ್ಲವಾಗುವ ಹಂತಕ್ಕೆ ತಲುಪಿತ್ತು. ಆದರೆ ನಾವೀಗ ಅದನ್ನು ಕಿತ್ತುಹಾಕುವ ಮೂಲಕ ವಂಶ ರಾಜಕಾರಣಕ್ಕೆ ಅಂತ್ಯ ಹಾಡಿದ್ದೇವೆ ಎನ್ನುವ ಮೂಲಕ ವಂಶವಾಹಿ ರಾಜಕಾರಣವನ್ನು ಮುಂದುವರಿಸಿಕೊಂಡು ಬಂದಿದ್ದ ಕಾಂಗ್ರೆಸ್ ಹಾಗೂ ಇತರೆ ಪಕ್ಷಗಳ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದರು.

    ಬಿಜೆಪಿ ಪಕ್ಷವು ಯಾವುದೇ ಒಂದು ಪರಿವಾರಕ್ಕೆ ಸೇರಿಲ್ಲ. ಜಾತಿ, ಧರ್ಮ ಹಾಗೂ ಭಾಷೆಯ ಆಧಾರದ ಮೇಲೆ ರಾಜಕಾರಣ ನಡೆಸುವ ಪಕ್ಷ ನಮ್ಮದಲ್ಲ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎಂದೆಂದಿಗೂ ನಮ್ಮ ವರಿಷ್ಠ ನಾಯಕರು. ಅಲ್ಲದೇ ಎಲ್.ಕೆ.ಅಡ್ವಾಣಿಯವರು ಸಹ ನಮ್ಮ ವರಿಷ್ಠರೇ ಆದರೆ ಕೇವಲ ಅವರ ಹೆಸರಿನಿಂದ ನಮ್ಮ ಪಕ್ಷವನ್ನು ಯಾರು ಗುರುತಿಸಿಲ್ಲ. ಪ್ರಸ್ತುತ ನರೇಂದ್ರ ಮೋದಿಯವರು ಪ್ರಧಾನಿಯಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಮಿತ್ ಶಾ ರವರು ನೇಮಕಗೊಂಡಿದ್ದಾರೆ. ಆದರೆ ಇವುಗಳ ನೇತೃತ್ವ ಎಂದಿಗೂ ಬದಲಾಗುತ್ತಲೇ ಇರುತ್ತದೆ. ನಮ್ಮ ಪಕ್ಷ ಯಾವುದೇ ವ್ಯಕ್ತಿಯ ಹೆಸರಲ್ಲಿ ನಡೆಯುವುದಿಲ್ಲ. ನಮ್ಮ ಪಕ್ಷ ಕೇವಲ ಸಿದ್ಧಾಂತ ಮತ್ತು ಉದ್ದೇಶದ ಆಧಾರದ ಮೇಲೆ ನಡೆಯುತ್ತದೆ ಎಂದು ತಿಳಿಸಿದರು.

    ಈ ಹಿಂದೆ ಸುಮಾರು 60 ವರ್ಷಗಳ ದೇಶವನ್ನಾಳಿದ ಕೆಲವರು ಕೇವಲ ತಮ್ಮ ಕುಟುಂಬವನ್ನು ಮಾತ್ರ ಉದ್ಧಾರ ಮಾಡಿಕೊಂಡರು ಎನ್ನುವ ಮೂಲಕ ಪರೋಕ್ಷವಾಗಿ ನೆಹರು ಹಾಗೂ ಗಾಂಧಿ ಕುಟುಂಬದ ವಿರುದ್ಧ ಹರಿಹಾಯ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ಪರ್ಮಿಟ್ ಇಲ್ಲ: ನಿತಿನ್ ಗಡ್ಕರಿ

    ನವದೆಹಲಿ: ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನಗಳನ್ನು ಬಳಸಿ ಚಾಲನೆಯಾಗುವ ವಾಹನಗಳು ಯಾವುದೇ ಪರ್ಮಿಟ್ ಇಲ್ಲದೇ ರಸ್ತೆಗಿಳಿಯಬಹುದೆಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಪ್ರಾಧಿಕಾರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

    ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ(ಎಸ್‍ಐಎಎಂ) ವಾರ್ಷಿಕ ಅಧಿವೇಶನದಲ್ಲಿ ಮಾತನಾಡಿದ ಅವರು ಎಲೆಕ್ಟ್ರಿಕ್ ಮತ್ತು ಪರ್ಯಾಯ ಇಂಧನ ಬಳಸಿ ಚಲಿಸುವ ವಾಹನಗಳಿಗೆ ಪ್ರೋತ್ಸಾಹ ನೀಡಲು ಎಲೆಕ್ಟ್ರಿಕಲ್ ವಾಹನ ಸೇರಿದಂತೆ, ಎಥೆನಾಲ್, ಬಯೋ ಡೀಸೆಲ್, ಸಿಎನ್‍ಜಿ ಹಾಗೂ ಬಯೋ ಇಂಧನಗಳ ಮೂಲಕ ಸಾಗುವ ವಾಹನಗಳಿಗೆ ರಸ್ತೆ ರಹದಾರಿಯನ್ನು ಸಂಪೂರ್ಣವಾಗಿ ತೆಗೆದು ಹಾಕಿದ್ದೇವೆ. ಇಂತಹ ವಾಹನಗಳಿಗೆ ಉಚಿತ ಪರ್ಮಿಟ್ ನೀಡುವ ಮೂಲಕ, ಸುಲಭವಾಗಿ ರಸ್ತೆಗಿಳಿಯುವಂತೆ ಮಾಡಲಾಗಿದೆ ಎಂದರು.

    ಆ್ಯಪ್ ಆಧಾರಿತಾ ಟ್ಯಾಕ್ಸಿ ಸೇವೆಗಳಾದ ಊಬರ್ ಹಾಗೂ ಓಲಾಗಳು ತಮ್ಮ ವಾಹನಗಳನ್ನು ಎಲೆಕ್ಟ್ರಿಕ್ ಮಾದರಿಗಳನ್ನು ಬಳಸುವ ಮೂಲಕ ರಸ್ತೆ ತೆರಿಗೆಗಳ ವಿನಾಯಿತಿ ಹೊಂದಬಹುದಾಗಿದೆ ಎಂದು ಈ ವೇಳೆ ಸಲಹೆ ನೀಡಿದರು. ಇದನ್ನೂ ಓದಿ:  2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

    ವಾಹನ ತಯಾರಿಕಾ ಸಂಸ್ಥೆಗಳು ಎಲೆಕ್ಟ್ರಿಕ್ ವಾಹನಗಳ ತಯಾರಿಕೆಯಲ್ಲಿ ಮುಂದೆ ಬರುವುದಕ್ಕಾಗಿ ಈ ನಿರ್ಧಾರನ್ನು ತೆಗೆದುಕೊಳ್ಳಲಾಗಿದೆ. ಅಲ್ಲದೇ ಎಲೆಕ್ಟ್ರಿಕ್ ವಾಹನಗಳಿಗೆ ಮೇಲೆ 12% ಜಿಎಸ್‍ಟಿ ಇದೆ. ಹೀಗಾಗಿ ಮತ್ತೆ ಯಾವುದೇ ಸಬ್ಸಿಡಿ ಅವಶ್ಯಕತೆ ಇರುವುದಿಲ್ಲ ಎಂದು ಯೋಚಿಸಿದ್ದೇನೆ. ಉತ್ತಮ ವಾತಾವರಣವನ್ನು ಕಲ್ಪಿಸುವ ದೃಷ್ಟಿಯಿಂದ ಈಗಾಗಲೇ ನಮ್ಮ ಇಲಾಖೆಯು ಈ ಬಗ್ಗೆ ವರದಿ ಸಿದ್ದಪಡಿಸಿದ್ದು, ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಓಡಾಟ ಜಾಸ್ತಿಯಾಗುವಂತೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 30 ರೂ. ಆಗುತ್ತೆ!

    ಕೇಂದ್ರ ಸರ್ಕಾರವು 2015ರಲ್ಲಿ ಜಾರಿಗೆ ತಂದ ಎಲೆಕ್ಟ್ರಿಕ್ ವಾಹನಗಳ ಅಭಿವೃದ್ಧಿ ಯೋಜನೆಗೆ ಈ ನಿರ್ಧಾರವು ಸಹಾಯಕವಾಗುತ್ತದೆ. ವಾಹನಗಳ ಮೇಲಿನ ಪರ್ಮಿಟ್ ತೆಗೆದು ಹಾಕಿರುವುದರಿಂದ ವಾಹನ ತಯಾರಿಕಾ ಸಂಸ್ಥೆಗಳ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಒತ್ತು ನೀಡಬೇಕು ಎಂದು ಕೇಳಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ, ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧ- ಡಿಸಿ ತಮ್ಮಣ್ಣ

    ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ, ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧ- ಡಿಸಿ ತಮ್ಮಣ್ಣ

    ಗದಗ: ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ. ನಮ್ಮ ಸರ್ಕಾರವೂ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ನಗರದ ನೂತನ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಹಾಗೂ ಶುದ್ಧನೀರಿನ ಘಟಕವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವೂ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಡಿದ ಆವೇಶದ ಮಾತುಗಳನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸಬಾರದು. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದನ್ನು ಶೀಘ್ರದಲ್ಲೇ ಸರಿ ಪಡಿಸಲಾಗುವುದು ಎಂದರು.

    ಅಖಂಡ ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಪಾಯ ಹಾಕಿದ್ದು, ಅವರ ಆಶಯದಂತೆ ರಾಜ್ಯದ ಅಭಿವೃದ್ಧಿ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ ಎಂದು ಹೇಳಿದರು.

    ಉತ್ತರ ಕರ್ನಾಟಕ ಗಂಡುಮೆಟ್ಟಿದ ನಾಡು. ಗೋಕಾಕ್ ಚಳುವಳಿಯ ಮೂಲಕ ಅಖಂಡ ಕರ್ನಾಟಕದ ಹೋರಾಟ ಆರಂಭವಾಯ್ತು. ರಾಜ್ಯದ ನಾಲ್ಕು ಸಾರಿಗೆ ವಿಭಾಗಗಳಲ್ಲಿ ಯಾವುದೇ ತಾರತಮ್ಯ ಇಲ್ಲ. ಆಡಳಿತದ ದೃಷ್ಟಿಯಿಂದ ಈ ಹಿಂದೆ ವಿಭಾಗಗಳನ್ನು ಮಾಡಿರುವುದು ಸರಿಯಾಗಿದೆ ಎಂದು ಸಚಿವರು ತಿಳಿಸಿದ್ರು.

  • ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು

    ಶೌಚಾಲಯ ಪರಿಶೀಲನೆ ನಡೆಸಿದ ಸಚಿವ ತಿಮ್ಮಣ್ಣ: ಮುಜುಗರಕ್ಕೀಡಾದ ಮಹಿಳೆಯರು

    ಚಿಕ್ಕಮಗಳೂರು: ಬಸ್ ನಿಲ್ದಾಣದ ಶೌಚಾಲಯ ವ್ಯವಸ್ಥೆ ತಿಳಿಯಲು ಸಾರಿಗೆ ಸಚಿವ ಡಿಸಿ ತಿಮ್ಮಣ್ಣ ಅವರೇ ನೇರವಾಗಿ ಮಹಿಳಾ ಶೌಚಾಲಯಕ್ಕೆ ಹೋದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

    ಸಾರಿಗೆ ಅಧಿಕಾರಿಗಳಿಗೆ ಚುರುಕು ಮುಟ್ಟಿಸಲು ಸಚಿವರು ಮುಂದಾಗಿದ್ದು, ಇಂದು ಚಿಕ್ಕಮಗಳೂರು ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ್ದರು. ಹೀಗಾಗಿ ಶೌಚಾಲಯದ ವ್ಯವಸ್ಥೆ ತಿಳಿಯಲು ಪುರುಷರು ಹಾಗೂ ಮಹಿಳಾ ಶೌಚಾಲಯಗಳಿಗೆ ಸ್ವತಃ ತಾವೇ ಭೇಟಿ ನೀಡಿ ಪರಿಶೀಲನೆಗೆ ಮುಂದಾದರು. ಮಹಿಳಾ ಶೌಚಾಲಯಕ್ಕೆ ಸಚಿವರ ಭೇಟಿಯಿಂದಾಗಿ ನಿಲ್ದಾಣದಲ್ಲಿದ್ದ ಮಹಿಳೆಯರು ಮುಜುಗರಕ್ಕೆ ಒಳಗಾದರು.

    ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಇಲ್ಲದಿರುವುದಕ್ಕೆ ಸಚಿವ ತಿಮ್ಮಣ್ಣ ಅವರು ಅಸಮಾಧಾನ ಹೊರಹಾಕಿ, ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡರು. ಅಲ್ಲದೇ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  • ಬಲು ಮಾತಾಡ್ತಿಯಾ, ಮುಚ್ಚೋ ಬಾಯಿ- ಮಂಡ್ಯದಲ್ಲಿ ಗರಂ ಆದ ಸಾರಿಗೆ ಸಚಿವ

    ಬಲು ಮಾತಾಡ್ತಿಯಾ, ಮುಚ್ಚೋ ಬಾಯಿ- ಮಂಡ್ಯದಲ್ಲಿ ಗರಂ ಆದ ಸಾರಿಗೆ ಸಚಿವ

    ಮಂಡ್ಯ: ತಡಿಲಾ ಗೌಡ, ಬಲು ಮಾತಾಡ್ತಿಯಾ ಕಣ್ಲ ನೀನು. ನಿನ್ನಂತವರು ನನ್ನತ್ರಾನೂ ಇದ್ದಾರೆ. ಸ್ವಲ್ಪ ಸುಮ್ನಿರ್ಲಾ. ಹೀಗಂತ ವ್ಯಕ್ತಿಯೊಬ್ಬರ ವಿರುದ್ಧ ಸಾರಿಗೆ ಸಚಿವ ಹೆಚ್‍ಎಂ ರೇವಣ್ಣ ಗರಂ ಆಗಿದ್ದಾರೆ.

    ಮಂಡ್ಯದ ಮದ್ದೂರಿನ ಕೊಪ್ಪ ಸಾರಿಗೆ ಬಸ್ಸ್ ನಿಲ್ದಾಣ ಉದ್ಘಾಟನೆಗೆ ಆಗಮಿಸಿದ್ದ ಸಚಿವರು ಭಾಷಣ ಪ್ರಾರಂಭಿಸಿದ್ದರು. ಈ ವೇಳೆ ವ್ಯಕ್ತಿಯೊಬ್ಬ ಗಲಾಟೆ ಮಾಡಲು ಶುರು ಮಾಡಿದ್ದ. ಕೋಪಗೊಂಡ ಸಚಿವರು ಮೊದಲೆರಡು ಬಾರಿ ಸಮಾಧಾನವಾಗಿಯೇ ತಡಿಲಾ ಗೌಡ, ಬಲು ಮಾತಾಡ್ತಿಯ ಕಣ್ಲಾ ನೀನು ಅಂತ ಹೇಳಿದ್ರು.

    ಆದ್ರೂ ಆತ ಸುಮ್ಮನಿರದಿದ್ದಾಗ ಗರಂ ಆದ ಸಚಿವರು, ಅಯ್ಯೋ ನಿನ್ನ ಅವಾಗ್ಲಿಂದ ನೀನ್ ಒಬ್ಬನೆ ಮಾತಾಡ್ತಿದ್ದೀಯಾ. ಮುಚ್ಚೋ ಬಾಯಿ, ಸಭೆಯನ್ನ ಹಾಳು ಮಾಡಬಾರದು ಅಂತ ಸ್ಟ್ರಾಂಗ್ ಆಗಿ ಗದರಿದ್ರು.