Tag: transport staff

  • ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ

    ಸರ್ಕಾರಕ್ಕೆ ಡೆಡ್‍ಲೈನ್ ನೀಡಿದ ಸಾರಿಗೆ ನೌಕರರ ಒಕ್ಕೂಟ

    ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಸಾರಿಗೆ ಸಿಬ್ಬಂದಿ (Transport Staff) ಮತ್ತು ಸರ್ಕಾರದ ನಡುವಿನ ತಿಕ್ಕಾಟ ಮುಗಿಯುವ ಹಾಗೆ ಕಾಣುತ್ತಿಲ್ಲ. ಸರ್ಕಾರದ (Government) ವಿರುದ್ಧ ಮತ್ತೆ ಸಮರ ಸಾರಿರುವ ಸಾರಿಗೆ ನೌಕರರು ಸಾರಿಗೆ ಇಲಾಖೆ ಮುಂದೆ ಮಾಡು ಇಲ್ಲವೇ ಮಡಿ ಆಯ್ಕೆ ಇಟ್ಟಿದ್ದಾರೆ.

    ಚುನಾವಣಾ (Election) ಹೊತ್ತಲ್ಲೇ ಮತ್ತೆ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ. ಕಳೆದ ತಿಂಗಳಷ್ಟೇ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದ ಸಾರಿಗೆ ನೌಕರರ ಒಕ್ಕೂಟ, ಈಗ ಮತ್ತೊಮ್ಮೆ ತಮ್ಮ ಬೇಡಿಕೆ ಈಡೇರಿಕೆಗೆ ಡೆಡ್ ಲೈನ್ (Deadline) ನೀಡಿದೆ. ಇದನ್ನೂ ಓದಿ: BBMP ವ್ಯಾಪ್ತಿಯಲ್ಲಿ ಅಧಿಕಾರಿಗಳ ಅಕ್ರಮ – 969 ಕೋಟಿ ರೂ. ಬೃಹತ್ ಅವ್ಯವಹಾರ ಬೆನ್ನತ್ತಿದ ED

    ಫೆಬ್ರವರಿ ಅಂತ್ಯದೊಳಗೆ ತಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದಿದ್ದರೆ ಮತ್ತೊಮ್ಮೆ ರಸ್ತೆಗೆ ಇಳಿದು ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಮುಂದೆ ನೌಕರರ ಒಕ್ಕೂಟ ಎರಡು ಆಯ್ಕೆಗಳನ್ನು ಮುಂದಿಟ್ಟಿದೆ. ಒಂದು ತಮ್ಮ ಬೇಡಿಕೆಗಳಿಗೆ ಒಪ್ಪಬೇಕು. ಎರಡನೇಯದು ಸರ್ಕಾರ ಬೇಡಿಕೆಗೆ ಒಪ್ಪದಿದ್ದರೆ ಪ್ರತಿಭಟನೆಯನ್ನು ಎದುರಿಸುವಂತೆ ಎಚ್ಚರಿಕೆ ನೀಡಿದ್ದಾರೆ. ಇದೇ ತಿಂಗಳು ಆರಂಭವಾಗುವ ವಿಧಾನಸಭಾ ಕಲಾಪದಲ್ಲಿ ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ತೀರ್ಮಾನ ಪ್ರಕಟಿಸುವಂತೆ ಆಗ್ರಹ ಮಾಡಿದ್ದು, ಈ ತಿಂಗಳೇ ಸರ್ಕಾರಕ್ಕೆ ಡೆಡ್‌ಲೈನ್‌ ಅಂತಾ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: Union Budget 2023ː ಕರ್ನಾಟಕಕ್ಕೆ ಬಂಪರ್ ಕೊಡುಗೆ – ರೈಲ್ವೆಗೆ ದಾಖಲೆಯ 7,561 ಕೋಟಿ ಅನುದಾನ

    ಸದ್ಯ ಸಾರಿಗೆ ನೌಕರರ ಈ ಬಾರಿಯ ಪಟ್ಟು ಸರ್ಕಾರಕ್ಕೆ ಬಿಸಿ ತುಪ್ಪವಾಗಿಯೇ ಪರಿಣಮಿಸುವ ಸಾಧ್ಯತೆ ಹೆಚ್ಚಿದೆ. ಕಾರಣ ಚುನಾವಣೆ ಸಂದರ್ಭದಲ್ಲಿ ಮತ್ತೊಮ್ಮೆ ಬಸ್ (Bus) ಸಂಚಾರ ಸ್ಥಗಿತಗೊಳಿಸಿ ಸಮರ ಸಾರಿದ್ರೆ ಸಾರ್ವಜನಿಕರಿಗೆ ಬಹಳ ತೊಂದರೆಯಾಗುವ ಸಾಧ್ಯತೆ ಇದ್ದು, ಚುನಾವಣೆ ಕೆಲಸಗಳಿಗೂ ತಡೆಯಾಗಬಹುದು. ಅಲ್ಲದೆ ಸರ್ಕಾರದ ಮೇಲೂ ಚುನಾವಣೆ ವೇಳೆ ಪರಿಣಾಮ ಬೀರಲಿದೆ. ಹಾಗಾಗಿ ಸದ್ಯ ಸರ್ಕಾರ ಕೂಡ ಈ ಬಗ್ಗೆ ಗಂಭೀರ ಚಿಂತನೆ ಮಾಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಮೂಹೂರ್ತ ಫಿಕ್ಸ್

    ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಮೂಹೂರ್ತ ಫಿಕ್ಸ್

    ಬೆಂಗಳೂರು: ಸಾರಿಗೆ ನೌಕರರು ಡಿಸೆಂಬರ್ ನಲ್ಲಿ ವೇತನ ಪರಿಷ್ಕರಣೆ ಸೇರಿ 10 ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಿದ್ದರು. ಈ ವೇಳೆ ಬೇಡಿಕೆ ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿತ್ತು. ಜೊತೆಗೆ ಸರ್ಕಾರ ಸಾರಿಗೆ ನಿಗಮಗಳಿಗೆ, ಬೇಡಿಕೆಗಳ ಸಾಧಕ- ಭಾದಕ ಅಧ್ಯಯನ ನಡೆಸಿ ವರದಿ ನೀಡುವಂತೆ ತಿಳಿಸಿತ್ತು.

    ಈ ಹಿನ್ನೆಲೆ ವೇತನ ಪರಿಷ್ಕರಣೆ ಸಂಬಂಧ ಆರನೇ ವೇತನ ಆಯೋಗದ ಶಿಫಾರಸುಗಳ ಅಂಶಗಳನ್ನು ಪರಿಶೀಲಿಸಲು ಕೆಎಸ್‍ಆರ್‍ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿತ್ತು. ಈ ಸಮಿತಿಯ ಮಹತ್ವದ ಸಭೆಯನ್ನು ಇದೇ 27ರಂದು ಕರೆಯಲಾಗಿದೆ.

    ದಿನಾಂಕ 27 ರಂದು ಶಾಂತಿನಗರದ ಕೆಎಸ್ ಆರ್ ಟಿಸಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 11.30 ಈ ಸಭೆ ಜರುಗಲಿದ್ದು, 4 ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ನೌಕರರ ವೇತನಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳೊಂದಿಗೆ ಹಾಜರಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

  • ಸಾರಿಗೆ ನೌಕರರ 10 ಬೇಡಿಕೆಯಲ್ಲಿ 9 ಈಡೇರಿಸುತ್ತೇವೆ: ಸವದಿ

    ಸಾರಿಗೆ ನೌಕರರ 10 ಬೇಡಿಕೆಯಲ್ಲಿ 9 ಈಡೇರಿಸುತ್ತೇವೆ: ಸವದಿ

    – ಸಿಬ್ಬಂದಿಗೆ ಧನ್ಯವಾದದ ಜೊತೆಗೆ ಮನವಿ

    ಬೆಂಗಳೂರು: ಸಾರಿಗೆ ನೌಕರರು ಹತ್ತು ಬೇಡಿಕೆಗಳನ್ನು ಇಟ್ಟಿದ್ದಾರೆ. ಇವಿಗಳಲ್ಲಿ ನಾವು 9 ಬೇಡಿಕೆಯನ್ನು ಈಡೇರಿಸುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರನ್ನಾಗಿ ಮಾಡುವುದರಿಂದ ಸರ್ಕಾರಕ್ಕೆ ಬಹಳಷ್ಟು ಹಣಕಾಸಿನ ಹೊಡೆತ ಬರುತ್ತದೆ. 30 ರಿಂದ 40 ನಿಗಮಗಳಿವೆ, ಅವರೆಲ್ಲರೂ ಬೇಡಿಕೆ ಇಡುತ್ತಾರೆ. ಆಗ ಭಾರೀ ಪ್ರಮಾಣದ ಹಣಕಾಸಿನ ಹೊಡೆತ ಬಿದ್ದು ಅಭಿವೃದ್ಧಿಯು ನಿಂತು ಹೋಗುತ್ತದೆ. ಸರ್ಕಾರಿ ನೌಕರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂದರು.

    ಕೋಡಿಹಳ್ಳಿ ಚಂದ್ರಶೇಖರ್ ಅವರಿಗು ನಮಗೂ ಸಂಬಂಧ ಇಲ್ಲ. ನಾವು ನಮ್ಮ ಸಾರಿಗೆ ನೌಕರರೊಂದಿಗೆ ಚರ್ಚೆ ಮಾಡುತ್ತವೆ. ಈಗಾಗಲೇ ಅನೇಕ ಕಡೆಗಳಲ್ಲಿ ಬಸ್ ಪ್ರಾರಂಭವಾಗಿವೆ. ನಮ್ಮ ಸಾರಿಗೆ ನೌಕರರು ನಮ್ಮ ಮಾತಿಗೆ ಬೆಲೆ ಕೊಟ್ಟು ಪ್ರಾರಂಭಿಸಿದ್ದಾರೆ. ಹೀಗಾಗಿ ನಾನು ಅವರಿಗೆ ಅಭಿನಂದನೆ ಹೇಳುತ್ತೇನೆ. ಯಾರ ಮಾತಿಗೂ ಕಿವಿ ಕೊಡಬೇಡಿ ನಿಮ್ಮ ಕೆಲಸವನ್ನು ನೀವು ಕಾರ್ಯಾರಂಭ ಮಾಡಿ. ಸರ್ಕಾರ ನಿಮ್ಮ ಜೊತೆಗೆ ಇದೆ ಎಂದು ಸಾರಿಗೆ ಕಾರ್ಮಿಕರಲ್ಲಿ ಮನವಿ ಮಾಡಿದರು.

    ಮುಷ್ಕರವನ್ನು ವಾಪಸ್ ಪಡೆಯಬೇಕು ಎಂದು ನಿರ್ಧಾರ ಮಾಡಿರುವುದು ನನಗೆ ಮಾಧ್ಯಮದ ಮುಖಾಂತರ ತಿಳಿಯಿತು. ಅಧಿಕೃತವಾಗಿ ಘೋಷಣೆ ಮಾಡುವವರೆಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನಿನ್ನೆ ನಮ್ಮ ಹತ್ತಿರ ಬಂದು ವಾಪಸ್ ಪಡೆಯುತ್ತೇವೆ ಮುಷ್ಕರವನ್ನು ಎಂದು ಮಾತು ಕೊಟ್ಟು ಮತ್ತೆ ಮಾತು ಬದಲಾಯಿಸಿದ್ದಾರೆ. ನಾನು ಈ ವಿಷಯವಾಗಿ ಯಾವುದೇ ಹೇಳಿಕೆ ಕೊಡುವುದಾಗಲಿ ಅಥವಾ ಟೀಕೆ ಟಿಪ್ಪಣಿ ಮಾಡುವುದಾಗಲಿ ಮಾಡುವುದಿಲ್ಲ. 11 ಗಂಟೆಗೆ ಅವರ ನಿರ್ಧಾರವನ್ನು ಹೇಳುತ್ತೇವೆ ಎಂದು ಹೇಳಿದ್ದಾರೆ ಎಂದರು.

    ಎಸ್ಮಾ ಜಾರಿ ಮಾಡುವಂತ ಸಂದರ್ಭ ಬರುವುದಿಲ್ಲ. ಈ ಬ್ರಹ್ಮಾಸ್ತ್ರವನ್ನು ನಾವು ಉಪಯೋಗಿಸುವುದಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಬಂದಿರುವುದು ರಾಜಕೀಯ ಪ್ರೇರಿತ ಎಂದು ಎಲ್ಲರಿಗೂ ಎನ್ನಿಸುತ್ತದೆ ಎಂದರು.

  • ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ- ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು!

    ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ- ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿದ ವಿದ್ಯಾರ್ಥಿಗಳು!

    ಕಾರವಾರ: ಗಾಳಿ ಮಳೆಗೆ ದಾರಿಗೆ ಅಡ್ಡಲಾಗಿ ಬಿದ್ದಿದ್ದ ಮರವೊಂದನ್ನು ಸಾರಿಗೆ ಸಿಬ್ಬಂದಿಯೇ ತೆರವುಗೊಳಿಸಿದ್ದು, ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತೆ ಮಾಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುರುವಾರದಿಂದ ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾಣ ಮೂಲಕ ಕುಮಟಾ ತೆರಳುವ ರಸ್ತೆಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದಿತ್ತು.

    ಈ ವೇಳೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಮಕ್ಕಳನ್ನು ಕರೆದುಕೊಂಡು ಬರುವ ಅನಿವಾರ್ಯತೆಗೆ ಸಿಲುಕಿದ್ದ ಸಾರಿಗೆ ಸಿಬ್ಬಂದಿ ಸ್ವತಃ ಕಾರ್ಯಾಚರಣೆಗಿಳಿದಿದ್ದರು. ಬೃಹತ್ ಮರವನ್ನು ಪ್ರಯಾಸಪಟ್ಟು ತೆರವು ಮಾಡಿ ಬಳಿಕ ಮಕ್ಕಳನ್ನು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಿದ್ದಾರೆ.

    ಈ ಮೂಲಕ ಸಾರಿಗೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ. ಹೀಗಾಗಿ ಕಂಡಕ್ಟರ್ ಹಾಗೂ ಡ್ರೈವರ್ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

  • ಫೆ. 20 ಸಾರಿಗೆ ಸಿಬ್ಬಂದಿ ಹೋರಾಟ!

    ಫೆ. 20 ಸಾರಿಗೆ ಸಿಬ್ಬಂದಿ ಹೋರಾಟ!

    ಬೆಂಗಳೂರು: ಫೆಬ್ರವರಿ 20 ರಂದು ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಅಂತ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿದ್ದಾರೆ.

    ಫೆಬ್ರವರಿ 20 ರಂದು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ರಜೆ ಇದ್ದವರು, ವಾರದ ರಜೆ ಇದ್ದವರು ಮಾತ್ರ ಈ ಹೋರಾಟದಲ್ಲಿ ಭಾಗಿಯಾಗಲಿದ್ದು, ಬಸ್ ಸಂಚಾರಕ್ಕೆ ತೊಂದರೆಯಾಗಲ್ಲ ಅಂತ ಸಿಐಟಿಯು ಜಂಟಿ ಕಾರ್ಯದರ್ಶಿ ಹೇಳಿದ್ದಾರೆ. ಆದರೆ ಬಹುಸಂಖ್ಯೆಯಲ್ಲಿ ಸಿಬ್ಬಂದಿಗಳು ಶಕ್ತಿ ಪ್ರದರ್ಶನಕ್ಕೆ ಮುಂದಾದರೆ ಬಸ್ ವ್ಯವಸ್ಥೆಯಲ್ಲಿ ವ್ಯತ್ಯಯವಾಗಲಿದೆ.

    ಫೆಬ್ರವರಿ 20 ರಂದು ಫ್ರೀಡಂ ಪಾರ್ಕ್ ನಲ್ಲಿ ಸುಮಾರು ಇಪ್ಪತ್ತು ಸಾರಿಗೆ ಸಿಬ್ಬಂದಿ ಕುಟುಂಬ ಸಮೇತರಾಗಿ ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಈ ಹೋರಾಟಕ್ಕೆ ಮಠಾದೀಶರು, ಚಿಂತಕರು ಕೂಡ ಸಾಥ್ ಕೊಡಲಿದ್ದಾರೆ. ಮುಂದಿನ ಬಜೆಟ್‍ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಅಂತ ಘೋಷಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಾರಿಗೆ ಸಿಬ್ಬಂದಿ ನೀಡಿದ್ದಾರೆ.