ಪತ್ರದಲ್ಲಿ ಏನಿದೆ?
ಹೈಕೋರ್ಟ್ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಕೋರ್ಟ್ ಆದೇಶವನ್ನು ಗೌರವಿಸಬೇಕು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ.
ಬೆಂಗಳೂರು: 38 ತಿಂಗಳ ಅರಿಯರ್ಸ್ ಸಹಿತ ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಬುಧವಾರ ಸಾರಿಗೆ ಮುಷ್ಕರ (Transport Strike) ನಡೆಸಲು ಮುಂದಾಗಿವೆ. ಒಂದು ಕಡೆ, ಸಾರಿಗೆ ಸಂಘಟನೆಗಳ ಜೊತೆ ಸಿಎಂ ತುರ್ತುಸಭೆ ನಡೆಸಿ ಸಂಧಾನಕ್ಕೆ ಯತ್ನಿಸಿದರೆ, ಇನ್ನೊಂದೆಡೆ ಒಂದು ದಿನದ ಮಟ್ಟಿಗೆ ಬಂದ್ ಮುಂದೂಡಿಕೆಗೆ ಹೈಕೋರ್ಟ್ ಸೂಚಿಸಿದೆ. ಆದರೆ ಹೈಕೋರ್ಟ್ (High Court) ಸೂಚನೆಯ ಮಧ್ಯೆಯೂ ಬೆಳಗ್ಗೆ 6 ಗಂಟೆಯಿಂದ ಸಾರಿಗೆ ಮುಷ್ಕರಕ್ಕೆ ಜಂಟಿ ಕ್ರಿಯಾ ಸಮಿತಿ ಮುಂದಾಗಿದೆ.
ಸಾರಿಗೆ ಸಂಘಟನೆಗಳ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ (CM Siddaramaiah), ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಇಂದು ಮಧ್ಯಾಹ್ನ ನಡೆಸಿದ ಸಂಧಾನ ಸಭೆ ವಿಫಲವಾಗಿದೆ. 38 ತಿಂಗಳ ಅರಿಯರ್ಸ್ ಕೊಡಲು ತಾಂತ್ರಿಕ ಅಡ್ಡಿಯಿದೆ. ತಕ್ಷಣಕ್ಕೆ 14 ತಿಂಗಳ ಅರಿಯರ್ಸ್ ಕೊಡುತ್ತೇವೆ. 2023ರಲ್ಲಿ ವೇತನ (Salary) ಹೆಚ್ಚಳವಾಗಿರುವ ಕಾರಣ ಸಾರಿಗೆ ಕಾಯ್ದೆ ಪ್ರಕಾರ 2027ವರೆಗೆ ವೇತನ ಹೆಚ್ಚಳ ಅಸಾಧ್ಯ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ
ಸಾರಿಗೆ ನೌಕರರ ಬೇಡಿಕೆಗಳೇನು?
2020ರಿಂದ ನೀಡಬೇಕಿರುವ 38 ತಿಂಗಳ ಅರಿಯರ್ಸ್ (Arrears) ಬಿಡುಗಡೆಯಾಗಬೇಕು. 2024ರಿಂದ 25%ರಷ್ಟು ವೇತನ ಪರಿಷ್ಕರಣೆಯಾಗಬೇಕು. 2024 ರ ವೇತನ ಪರಿಷ್ಕರಣೆಯ 18 ತಿಂಗಳ ಅರಿಯರ್ಸ್ ಬಿಡುಗಡೆ ಆಗಬೇಕು. 4 ನಿಗಮದ ನೌಕರರಿಗೆ ನೀಡಬೇಕಿರುವ 38 ತಿಂಗಳ ಅರಿಯರ್ಸ್ 1,800 ಕೋಟಿ ರೂ. ಬಿಡುಗಡೆ ಮಾಡಬೇಕು. ಇದನ್ನೂ ಓದಿ: 1 ದಿನ ಸಾರಿಗೆ ಮುಷ್ಕರ ಮುಂದೂಡಿ: ಹೈಕೋರ್ಟ್ ಸೂಚನೆ
ಸರ್ಕಾರದ ವಾದ ಏನು?
ಮಾರ್ಚ್ 1, 2023ರಂದು ವೇತನ (Salary) ಪರಿಷ್ಕರಣೆ ಒಪ್ಪಂದ ನಡೆದಿದ್ದು ಆಗ 15% ವೇತನ ಪರಿಷ್ಕರಣೆಗೆ ಒಪ್ಪಿಕೊಂಡಿದ್ದರು. ವೇತನ ಪರಿಷ್ಕರಣೆಗೆ ಶ್ರೀನಿವಾಸ್‌ಮೂರ್ತಿ ಸಮಿತಿ ರಚನೆಯಾಗಿದೆ. ಜನವರಿ 1, 2022ರಿಂದ ಫೆ.28, 2023ರ ತನಕ ಆರಿಯರ್ಸ್ ಬಿಡುಗಡೆ ಮಾಡಲಾಗುವುದು. 14 ತಿಂಗಳ ಆರಿಯರ್ಸ್‌ಗೆ 718 ಕೋಟಿ ರೂ. ವೆಚ್ಚವಾಗಲಿದೆ. 38 ತಿಂಗಳ ಆರಿಯರ್ಸ್ ಸಾಧ್ಯವಿಲ್ಲ, ಕೇಳುವುದು ಸಮಂಜಸ ಅಲ್ಲ.
ರಾಮಲಿಂಗಾರೆಡ್ಡಿ ಹೇಳಿದ್ದೇನು?
ಸಾರಿಗೆ ನೌಕರರಲ್ಲಿ ಎರಡು ಬಣ ಇವೆ. 2 ಬಣಗಳಲ್ಲಿ 14 ಸಂಘ ಸಂಸ್ಥೆಗಳು ಇವೆ. 38 ತಿಂಗಳ ಪರಿಷ್ಕೃತ ವೇತನ ಕೊಡಬೇಕು ಎಂದು ಆಗ್ರಹಿಸಿದರು. ಮಾರ್ಚ್ 01, 2023 ರಲ್ಲಿ ವೇತನ ಪರಿಷ್ಕರಣೆ ನಡೆದಿತ್ತು. ಸಿಎಂ 718 ಕೋಟಿ ರೂ. 14 ತಿಂಗಳ ಅರಿಯರ್ಸ್ ನೀಡುವುದಾಗಿ ಹೇಳಿದರೂ ಇವರು ಒಪ್ಪಿಲ್ಲ. ಈ ವರ್ಷದಿಂದ ವೇತನ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ. ಈ ವರ್ಷ ಚುನಾವಣೆ ನಡೆಸಲು ಅನುಮತಿ ಕೇಳಿದ್ದು, ನಾವು ಪರಿಶೀಲನೆ ನಡೆಸುವುದಾಗಿ ಹೇಳಿದ್ದೇನೆ. ಎರಡನೇ ಬಣ ಮುಷ್ಕರ ಮಾಡುತ್ತಿಲ್ಲ, ಧರಣಿ ಮಾಡುತ್ತಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?
ವೇತನ ಹೆಚ್ಚಳ ಬಗ್ಗೆ ಏನೂ ಹೇಳಿಲ್ಲ. ಅಧಿವೇಶನದ ಬಳಿಕ ನೋಡೋಣ ಎಂದಿದ್ದಾರೆ. 14 ತಿಂಗಳ ಅರಿಯರ್ಸ್‌ಗೆ ನಾವು ಒಪ್ಪಿಗೆ ನೀಡಿಲ್ಲ. ಶಿಸ್ತು ಕ್ರಮಕ್ಕೆ ನಾವು ಹೆದರುವುದಿಲ್ಲ. ಹತ್ತಾರು ಪ್ರತಿಭಟನೆ ಮಾಡಿದ ಅಭ್ಯಾಸ ನಮಗಿದೆ.ಬೆದರಿಕೆಗೆ ನಾವು ಬಗ್ಗುವುದಿಲ್ಲ. – ವಿಜಯ್ ಭಾಸ್ಕರ್, ಜಂಟಿ ಕ್ರಿಯಾ ಸಮಿತಿ
ಜಂಟಿ ಕ್ರಿಯಾ ಸಮಿತಿಗೆ ಹೇಳಿದ್ದನ್ನು ನಮಗೆ ಹೇಳಿದ್ದಾರೆ. ವೇತನ ಆಯೋಗದ ಮಾದರಿಯಲ್ಲಿ ವೇತನ ನೀಡುವ ಬಗ್ಗೆ ಪರಿಶೀಲನೆ ಮಾಡೋದಾಗಿ ಹೇಳಿದ್ದಾರೆ. ಬಂದ್‌ಗೆ ಬೆಂಬಲ ನೀಡುವ ಬಗ್ಗೆ ಇನ್ನೂ ನಿರ್ಣಯ ಮಾಡಿಲ್ಲ. ಕಾನೂನು ತೊಡಕು ಬಂದಿರುವುದಿಂದ ನೋಡಬೇಕು. – ಚಂದ್ರು, ಕೆಎಸ್‌ಆರ್‌ಟಿಸಿ ನೌಕರರ ಒಕ್ಕೂಟ
ಬೆಂಗಳೂರು: ಬುಧವಾರ ನಡೆಯಬೇಕಿದ್ದ ಸಾರಿಗೆ ಮುಷ್ಕರವನ್ನು (Transport Strike) ಮುಂದೂಡುವಂತೆ ಹೈಕೋರ್ಟ್ (High Court) ಸೂಚನೆ ನೀಡಿದೆ.
ಸಾರಿಗೆ ನೌಕರರ ಬೇಡಿಕೆ ಈಡೇರಿಸಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಸರ್ಕಾರಕ್ಕೆ ಸೂಚನೆ ನೀಡುವಂತೆ ವಕೀಲ ಅಮೃತೇಶ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿದಾರರ ಪರ ಹಾಜರಾಗಿದ್ದ ದೀಕ್ಷಾ ಅಮೃತೇಶ್ ಅವರು, ಜುಲೈ 15ರಂದು ಪ್ರತಿಭಟನಾಕಾರರು ನೋಟಿಸ್ ನೀಡಿದ್ದಾರೆ. ಆದರೆ ಈಗ ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿಗೊಳಿಸಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
ಸಭೆಯ ಬಳಿಕ ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಎಚ್.ವಿ. ಅನಂತಸುಬ್ಬರಾವ್ ಮಾತನಾಡಿ, 24 ತಿಂಗಳ ಹಿಂಬಾಕಿ ನೀಡಲು ಸಾಧ್ಯವಿಲ್ಲ. 14 ತಿಂಗಳು ಆರಿಯರ್ಸ್ ಕೊಡುತ್ತೇವೆ ಎಂದು ಸಿಎಂ ತಿಳಿಸಿದರು. ಮುಂದಿನ ವೇತನ ಪರಿಷ್ಕರಣೆ ಬಗ್ಗೆಯೂ ನಮಗೆ ಭರವಸೆ ಸಿಕ್ಕಿಲ್ಲ. ಹೀಗಾಗಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದರು.
ಬೆಂಗಳೂರು: ಸರ್ಕಾರದ ವಿರುದ್ಧ ಸಮರ ಸಾರಿರುವ ಸಾರಿಗೆ ನೌಕರರು (Transport Employees) ಪಟ್ಟು ಸಡಿಲಿಸುವಂತೆ ಕಾಣ್ತಿಲ್ಲ. ಅತ್ತ 5ನೇ ತಾರೀಖು ಬಂದ್ ಮಾಡೇ ಮಾಡುತ್ತೇವೆ ಅಂತ ಪಟ್ಟು ಹಿಡಿದಿದ್ರೆ, ಇತ್ತ ಸಾರಿಗೆ ನೌಕರರ ಬೇಡಿಕೆ ಈಡೇರಿಕೆ ಬಗ್ಗೆ ನಿರ್ಧಾರ ಮಾಡಬೇಕಿದ್ದ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ (Rahul Gandhi Protest) ಸಮಾವೇಶದಲ್ಲಿ ಬ್ಯುಸಿಯಾಗಿದ್ದಾರೆ.
ಹಿಂಬಾಕಿ, ಸಂಬಳ ಹೆಚ್ಚಳ ವಿಚಾರವಾಗಿ ಸರ್ಕಾರದ ವಿರುದ್ಧ ಸಮರ ಸಾರಿ ಮುಷ್ಕರಕ್ಕೆ ಕರೆ ಕೊಟ್ಟಿರುವ ಸಾರಿಗೆ ನೌಕರರು ಮುಷ್ಕರ ಮಾಡೇ ಮಾಡ್ತೀವಿ ಅಂತ ಪಟ್ಟು ಹಿಡಿದಿದ್ದಾರೆ. ಆಗಸ್ಟ್ 4ರ ತನಕ ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದು, ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರಡೇ ದಿನ ಮಾತ್ರ ಬಾಕಿ ಇದ್ದು ಸಮಸ್ಯೆ ಸಂಬಂಧ ಸಭೆ ಕರೆದು ಸಾರಿಗೆ ಮುಖಂಡರ ಜೊತೆ ಮಾತನಾಡಬೇಕಿದ್ದ ಸಿಎಂ, 5ನೇ ತಾರೀಖು ಬೆಂಗಳೂರಿನಲ್ಲಿ ನಡೆಯಲಿರುವ ರಾಹುಲ್ ಗಾಂಧಿ ಪ್ರತಿಭಟನೆಯಲ್ಲಿ ಬ್ಯುಸಿಯಾಗಿದ್ದು, ಮುಷ್ಕರ ಆರಂಭವಾಗೇ ಬಿಡುತ್ತಾ ಅನ್ನೋ ಟೆನ್ಷನ್ ಹೆಚ್ಚಾಗಿದೆ. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಬಿ.ದಯಾನಂದ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್‌ಗೆ ರಾಷ್ಟ್ರಪತಿ ಪದಕ
ಹೌದು. ಸಮಸ್ಯೆ ಸಂಬಂಧ ಈ ಹಿಂದೆ ಮುಷ್ಕರಕ್ಕೆ ಕರೆಕೊಟ್ಟಿರೋ ಸಾರಿಗೆ ಮುಖಂಡರ ಜೊತೆ ಸಿಎಂ ಸಭೆ ಮಾಡಿದ್ರು. ಆದ್ರೆ ಸಭೆ ಯಶಸ್ಸು ಕಂಡಿರಲಿಲ್ಲ. ಆದಾದ ಮೇಲೆ ಆಗಸ್ಟ್ 4ರ ವರೆಗೆ ಡೆಡ್‌ಲೈನ್ ನೀಡಿ 5ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆಕೊಡಲಾಗಿದ್ದು. ಸಾರಿಗೆ ಮುಖಂಡರು ಕೊಟ್ಟಿದ್ದ ಡೆಡ್‌ಲೈನ್ ಮುಕ್ತಾಯಕ್ಕೆ ಇನ್ನೆರೆಡು ದಿನ ಮಾತ್ರ ಬಾಕಿ ಇದೆ. ಡೆಡ್‌ಲೈನ್ ಹತ್ತಿರ ಬರ್ತಿದ್ರೂ ಸಿಎಂ ಮಾತ್ರ ಈ ಬಗ್ಗೆ ಹೆಚ್ಚು ಗಮನಕೊಟ್ಟಂತೆ ಕಾಣ್ತಿಲ್ಲ. ಸಾರಿಗೆ ಮುಷ್ಕರ ಆರಂಭವಾಗುವ ದಿನದಂತೆ ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಯಲಿದೆ.
ಈ ಸಮಾವೇಶದ ಆಯೋಜನೆಯಲ್ಲಿ ಬ್ಯುಸಿಯಾಗಿರುವ ಸಿಎಂ ಸಾರಿಗೆ ಮುಷ್ಕರದ ಬಗ್ಗೆ ಗಮನ ಕೊಟ್ಟಂತೆ ಇಲ್ಲ. ಹಣಕಾಸು ಇಲಾಖೆ ಸಿಎಂ ಕೈಯಲ್ಲೇ ಇರುವ ಕಾರಣ, ಬೇಡಿಕೆ ಈಡೇರಿಕೆ ಸಂಬಂಧ ಸಿಎಂ ಮಾತ್ರ ನಿರ್ಧಾರ ಮಾಡೋಕೆ ಸಾಧ್ಯ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಹುಲ್ ಗಾಂಧಿ ಪ್ರತಿಭಟನೆ ತಯಾರಿ ನಡುವೆ ಮುಖಂಡರ ಸಭೆ ಕರೆದು ಮನವೊಲಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: ದೇಶದಲ್ಲಿ ಕರ್ನಾಟಕವೊಂದು ಆರ್ಥಿಕ ದೇಶ: ಬ್ರಿಡ್ಜ್ ಟು ಬೆಂಗಳೂರು ಕಾರ್ಯಕ್ರಮದಲ್ಲಿ ಸಿಎಂ ಅಭಿಪ್ರಾಯ
ಇನ್ನೂ ಈ ಮಧ್ಯೆ ಸಿಎಂ ಕೊಟ್ಟಿರುವ ಡೆಡ್‌ಲೈನ್ ಮುಕ್ತಾಯಕ್ಕೂ ಮುನ್ನ ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಕೊನೆಯ ಹಂತದ ಮನವೊಲಿಕೆ ಪ್ರಯತ್ನ ನಡೆಯಲಿದೆ. ಇಂದು ಕಾರ್ಮಿಕ ಇಲಾಖೆ ಸಮ್ಮುಖದಲ್ಲಿ ಸಾರಿಗೆ ಇಲಾಖೆ 4 ನಿಗಮಗಳ ಅಧಿಕಾರಿಗಳು, ಸಾರಿಗೆ ಸಂಘಟನೆ ಮುಖಂಡರ ಸಭೆ ನಡೆಯಲಿದೆ. ಇಂದು ಬೆಳಗ್ಗೆ 11.30ಕ್ಕೆ ಸಭೆ ನಡೆಯಲಿದ್ದು, ಸಭೆಯಲ್ಲಿ ಅಧಿಕಾರಿಗಳು ಕೆಲವು ಭರವಸೆ ನೀಡುವ ಸಾಧ್ಯತೆ ಇದೆ. ಆದರೆ ಇತ್ತ ಯಾವುದೇ ಕಾರಣ ಬೇಡಿಕೆ ಈಡೇರುವ ಬಗ್ಗೆ ಘೋಷಣೆಯಾಗದ ಹೊರತು ನಾವಂತೂ ಮುಷ್ಕರ ಹಿಂಪಡೆಯಲ್ಲ ಅಂತ ಮುಖಂಡರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಇಂದಿನ ಸಭೆ ಕೂಡ ಸಾಕಷ್ಟು ಕುತೂಹಲ ಕೆರಳಿಸಿದೆ.
ಬೆಂಗಳೂರು: ಮಂಗಳವಾರ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC) ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ (Transport Strike) ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸುದ್ದಿ ಬೆನ್ನಲ್ಲೇ ಈಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
4 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗೆ ಕರೆ ನೀಡಿರುವ ಸಾರಿಗೆ ನೌಕರರು ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು. ಈ ನಿಟ್ಟಿನಲ್ಲಿ ಎರಡು ನಿಗಮಗಳು ಮಾಹಿತಿ ನೀಡಿವೆ. ಇದನ್ನೂ ಓದಿ:ಕಗ್ಗತ್ತಲಲ್ಲಿ ಪಾಕಿಸ್ತಾನ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ- ಲಕ್ಷಾಂತರ ಜನರಿಗೆ ತೊಂದರೆ
ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುವುದು ಸರಿಯಷ್ಟೇ.ಆದರೆ ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಸುಗಳ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ಇರಲಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಜನಸಾಮಾನ್ಯರ ಹಿತದೃಷ್ಟಿಯಿಂದ ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಮಾತ್ರ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಹೇಳಿದ್ದೇನೆ. ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಪ್ರಸ್ತಾವನೆಯನ್ನು ಮಾಡಿಲ್ಲ. 6 ನೇ ವೇತನ ಆಯೋಗದ ಬಗ್ಗೆ ಯಾವುದೇ ಭರವಸೆ ನೀಡಿರುವುದಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಿಗೆ ತಿಳಿಸುತ್ತೇನೆ ಎಂದು ಮಾತ್ರ ಹೇಳಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.
ಕೋಡಿಹಳ್ಳಿ ಚಂದ್ರಶೇಖರ್ ಅವರು ಇಂದು ಮುಂಜಾನೆ ತಮ್ಮನ್ನು ಭೇಟಿ ಮಾಡಿದ್ದರು. ಆ ಸಂದರ್ಭದಲ್ಲಿ ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ. ಇದು ಮುಷ್ಕರ ನಡೆಸಲು ಸೂಕ್ತ ಸಂದರ್ಭ ಅಲ್ಲ. ಕೋವಿಡ್ ಎಲ್ಲರನ್ನೂ ಕಾಡುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಾಗಿಲ್ಲ. ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಷ್ಕರವನ್ನು ಸ್ಥಗಿತಗೊಳಿಸಿ ಕೆಲಸಕ್ಕೆ ಹಾಜರಾಗುವಂತೆ ಮಾತ್ರ ನಾನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ನಾನು ಈ ಮೇಲ್ಕಂಡ ವಿಷಯವನ್ನು ಮಾತ್ರ ಅವರಿಗೆ ತಿಳಿಸಿರುತ್ತೇನೆ. ಆದರೆ ಕೋಡಿಹಳ್ಳಿ ಚಂದ್ರಶೇಖರ್ ಅವರ ಕರಪತ್ರ ಇದಕ್ಕೆ ವ್ಯತಿರಿಕ್ತವಾಗಿದೆ. ಇದರಿಂದ ಸಾರಿಗೆ ನೌಕರರಿಗೆ ತಪ್ಪು ಸಂದೇಶ ರವಾನೆಯಾಗಬಾರದು. ಹೀಗಾಗಿ ಈ ಸ್ಪಷ್ಟೀಕರಣವನ್ನು ಕೊಡಲು ಬಯಸುತ್ತೇನೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: 2017ರ ಮೋಟಾರು ವಾಹನ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು ಆಗ್ರಹಿಸಿ ರಸ್ತೆ ಸಾರಿಗೆ ಕಾರ್ಮಿಕ ಮತ್ತು ಮಾಲೀಕರ ಸಂಘಟನೆ ದೇಶಾದ್ಯಂತ ಆಗಸ್ಟ್ 7 ರಂದು ಮುಷ್ಕರಕ್ಕೆ ಕರೆ ನೀಡಿದೆ.
ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವೇದಿಕೆ ಮುಖಂಡರು, ಕೇಂದ್ರ ಸರ್ಕಾರದ ಜಾರಿಗೆ ತಂದಿರುವ 2017 ರ ಮೋಟಾರು ತಿದ್ದುಪಡಿ ಕಾಯ್ದೆಯ ವಿರುದ್ಧ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ. ಈ ಹೋರಾಟದಲ್ಲಿ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳು ಸೇರಿದಂತೆ ಬಿಎಂಟಿಸಿ ಸಾರಿಗೆ ಸೇವೆ ಸ್ಥಗಿತಗೊಳ್ಳಲಿದೆ. ಬೆಳಗ್ಗೆ 6 ರಿಂದ ಸಂಜೆ 6ವರೆಗೂ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸದ್ಯ ಆಗಸ್ಟ್ 07 ರಂದು ನಡೆಯುವ ಮುಷ್ಕರಕ್ಕೆ ಆಟೋ ಚಾಲಕರ ಸಂಘ, ಏರ್ ಪೋರ್ಟ್ ಟ್ಯಾಕ್ಸಿ ಚಾಲಕರ ಸಂಘ ಹಾಗೂ ಬಿಎಂಟಿಸಿ ಯೂನಿಯನ್ ಸಾಥ್ ನೀಡಿದೆ. ಬಂದ್ ಕುರಿತು ಹೀಗಾಗಲೇ ನೌಕರರಿಗೆ ಮಾಹಿತಿ ನೀಡಿದ್ದೇವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್ ಡಿ ರೇವಪ್ಪ ಪಬ್ಲಿಕ್ ಟಿವಿಗೆ ಹೇಳಿಕೆದ್ದಾರೆ.
ಮಸೂದೆಗೆ ವಿರೋಧ ಯಾಕೆ?
ಕೇಂದ್ರ ಜಾರಿಗೆ ತಂದಿರುವ ಹೊಸ ನೀತಿ ಇಂದ ರಾಜ್ಯ ವಾಹನಗಳಿಗೆ ಪರ್ಮೀಟ್ ನೀಡುದಕ್ಕೆ ಹಾಗೂ ಸಾರಿಗೆ ನೀತಿರೂಪಣೆಯಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕಾಗಲಿದೆ. ಕೇಂದ್ರ ಸರ್ಕಾರದ ಹಸ್ತಕ್ಷೇಪ ಹೆಚ್ಚಾಗಲಿದೆ. ರಾಷ್ಟ್ರೀಯ ಸಾರಿಗೆ ನೀತಿ ಅಡಿ ರಾಜ್ಯಗಳ ಒಪ್ಪಿಗೆ ಇಲ್ಲದೇ ಕೇವಲ ಅಭಿಪ್ರಾಯವಷ್ಟೇ ಪಡೆದು ಹೊಸ ನೀತಿಯನ್ನು ಕೇಂದ್ರ ಜಾರಿಗೆ ತರಬಹುದು. ಇದರಿಂದ ಸಾರಿಗೆ ಇಲಾಖೆ ಅಸ್ತಿತ್ವಕ್ಕೆ ಧಕ್ಕೆಯಾಗುತ್ತದೆ. ಅಗ್ರಿಗೇಟರ್ ಲೈಸೆನ್ಸ್ ಅನ್ನು ರಾಜ್ಯಸರ್ಕಾರ ನೀಡಬಹುದಾದರೂ ನೀಡುವ ಮಾನದಂಡವನ್ನ ಕೇಂದ್ರ ತೀರ್ಮಾನಿಸಲಿದೆ.
ಹೊಸ ಕಾಯ್ದೆಯಿಂದ ಊಬರ್, ಓಲಾ ದಂತಹ ಖಾಸಗಿ ದೊಡ್ಡ ಸಂಸ್ಥೆಗಳ ಆರ್ಭಟ ಹೆಚ್ಚಾಗಲಿದೆ. ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ, ಮುಂತಾದವುಗಳನ್ನು ಕಾರ್ಪೋರೇಟ್, ಆಟೋ ಮೊಬೈಲ್ ಕಂಪನಿಗಳ ಹಿಡಿತಕ್ಕೆ ಒಪ್ಪಿಸಲಾಗುತ್ತದೆ. ಎಲ್ಲವೂ ದುಬಾರಿ ಶುಲ್ಕ ಗಳ ಸುಲಿಗೆ ಕೇಂದ್ರಗಳಾಗುತ್ತೆ. ದಂಡಗಳ ಪ್ರಮಾಣ ಭಾರೀ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.