Tag: Travelers

  • ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ರಿಯಾದ್: ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ (Skytrax World Airline) ಸಂಸ್ಥೆ ನಡೆಸಿದ ಗ್ರಾಹಕರ ಆನ್‌ಲೈನ್ ಸಮೀಕ್ಷೆಯಲ್ಲಿ ಸೌದಿ ಅರೇಬಿಯಾದ (Soudi Arabia) ಕತಾರ್ ಏರ್‌ವೇಸ್ (Qatar Airways) ಅತ್ಯುತ್ತಮ ಏರ್‌ಲೈನ್ ಸಂಸ್ಥೆ ಎಂದು ಗುರುತಿಸಿಕೊಂಡಿದ್ದು, ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ ಅವಾರ್ಡ್ಸ್ 2022 ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

    ಸ್ಕೈಟ್ರಾಕ್ಸ್ ವರ್ಲ್ಡ್ ಏರ್‌ಲೈನ್ ಇಂಗ್ಲಿಷ್, ಫ್ರೆಂಚ್, ಸ್ಪ್ಯಾನಿಷ್, ರಷ್ಯನ್, ಜಪಾನೀಸ್ ಮತ್ತು ಚೈನೀಸ್ ಭಾಷೆಗಳಲ್ಲಿ 2021 ಸೆಪ್ಟೆಂಬರ್‌ನಿಂದ 2022 ಆಗಸ್ಟ್ ವರೆಗೆ ನಡೆಸಿದ ವರ್ಲ್ಡ್ ಏರ್‌ಲೈನ್ (World Airline) ಗ್ರಾಹಕರ ಸಮೀಕ್ಷೆಯಲ್ಲಿ ಕತಾರ್‌ಗೆ ಬೆಸ್ಟ್ ಏರ್‌ಲೈನ್ ಸಂಸ್ಥೆ ಎಂಬ ಫಲಿತಾಂಶ ಬಂದಿದೆ.

    ಅಂತಿಮ ಸುತ್ತಿನಲ್ಲಿ 350ಕ್ಕೂ ಹೆಚ್ಚು ಏರ್‌ಲೈನ್ ಸಂಸ್ಥೆಗಳನ್ನು ಪಟ್ಟಿ ಮಾಡಲಾಗಿತ್ತು. ಅವುಗಳಲ್ಲಿ ಟಾಪ್-20 ಸಂಸ್ಥೆಗಳನ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. ಈ ಪೈಕಿ ಕತಾರ್ ನಂಬರ್ 1 ಸ್ಥಾನ ಪಡೆದುಕೊಂಡಿದೆ. ಇನ್ನುಳಿದಂತೆ ಸಿಂಗಾಪುರ್ ಏರ್‌ಲೈನ್ಸ್ (Singapore Airlines) ಲಿಮಿಟೆಡ್ ಮತ್ತು ಎಮಿರೇಟ್ಸ್ (Emirates) ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿವೆ. ಆದರೆ ಕಳೆದ ವರ್ಷದ 6ನೇ ಸ್ಥಾನದಲ್ಲಿದ್ದ ಕ್ಯಾಥೆ ಪೆಸಿಫಿಕ್ ಏರ್‌ಲೈನ್ಸ್ 16ನೇ ಸ್ಥಾನಕ್ಕೆ ಕುಸಿದಿದೆ. ಇದನ್ನೂ ಓದಿ: ರಷ್ಯಾದ ಶಾಲೆಯಲ್ಲಿ ಮನಸ್ಸೋಇಚ್ಛೆ ಗುಂಡು ಹಾರಿಸಿದ ಬಂದೂಕುಧಾರಿ- 5 ಮಕ್ಕಳು ಸೇರಿ 9 ಮಂದಿ ದುರ್ಮರಣ

    ಕೋವಿಡ್ ಸಾಂಕ್ರಾಮಿಕದ (Covid-19) ಸಂದರ್ಭದಲ್ಲಿ ಹಾಗೂ ಅದರ ನಂತರ ಸತತವಾಗಿ ಹಾರಾಟ ನಡೆಸಿದ ಕತಾರ್ ವಿಶ್ವದಾದ್ಯಂತ ಸುಮಾರು 30 ಸಂಸ್ಥೆಗಳನ್ನು ಒಳಗೊಂಡಿದೆ. ಜೊತೆಗೆ ಕತಾರ್ ವಿಮಾನಯಾನವನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ ಎಂದು ಸ್ಕೈಟ್ರಾಕ್ಸ್ ಸಿಇಒ ಎಡ್ವರ್ಡ್ ಪ್ಲಾಸ್ಟೆಡ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿದ್ದಕ್ಕೆ ತರಗತಿಗೆ ಪ್ರವೇಶ ನಿಷೇಧ – ವ್ಯಾಪಕ ಪ್ರತಿಭಟನೆ ಬಳಿಕ ಶಾಲೆ ಬಿಡಿಸಿದ ಪೋಷಕರು

    ಟಾಪ್-20 ಏರ್‌ಲೈನ್ಸ್ ಯಾವುವು?
    ಕತಾರ್ ಏರ್‌ವೇಸ್, ಸಿಂಗಾಪುರ್ ಏರ್‌ಲೈನ್ಸ್, ಎಮಿರೇಟ್ಸ್, ನಿಪ್ಪಾನ್ ಏರ್‌ವೇಸ್, ಕ್ವಾಂಟಾಸ್ ಏರ್‌ವೇಸ್, ಜಪಾನ್ ಏರ್‌ಲೈನ್ಸ್, ಟರ್ಕ್ ಹವಾ ಯೊಲ್ಲರಿ (ಟರ್ಕಿಶ್ ಏರ್‌ಲೈನ್ಸ್), ಏರ್ ಫ್ರಾನ್ಸ್, ಕೊರಿಯನ್ ಏರ್, ಸ್ವಿಸ್ ಇಂಟರ್ ನ್ಯಾಷನಲ್ ಏರ್‌ಲೈನ್ಸ್, ಬ್ರಿಟಿಷ್ ಏರ್‌ವೇಸ್, ಇತಿಹಾದ್ ಏರ್‌ವೇಸ್, ಚೀನಾ ಸೌತ್‌ರನ್, ಹೈನಾನ್ ಏರ್‌ಲೈನ್ಸ್, ಲುಫ್ಥಾನ್ಸ, ಕ್ಯಾಥೆ ಪೆಸಿಫಿಕ್, ಕೆಎಲ್‌ಎಂ, ಇವಿಎ ಏರ್, ವರ್ಜಿನ್ ಅಟ್ಲಾಂಟಿಕ್, ವಿಸ್ತಾರಾ ಏರ್‌ಲೈನ್ ಕ್ರಮವಾಗಿ 1 ರಿಂದ 20 ಸ್ಥಾನಗಳಲ್ಲಿವೆ.

    Live Tv
    [brid partner=56869869 player=32851 video=960834 autoplay=true]

  • ಹೆದ್ದಾರಿಯಲ್ಲಿ ಗಜಪಡೆ ಹಾವಳಿ – ಕಾರಿನ ಮೇಲೆ ದಾಳಿ, ಚಾಲಕ ಜಸ್ಟ್ ಮಿಸ್

    ಹೆದ್ದಾರಿಯಲ್ಲಿ ಗಜಪಡೆ ಹಾವಳಿ – ಕಾರಿನ ಮೇಲೆ ದಾಳಿ, ಚಾಲಕ ಜಸ್ಟ್ ಮಿಸ್

    ಚಾಮರಾಜನಗರ: ಹೆದ್ದಾರಿ ನಡುವೆ ಆನೆಗಳು ಗುಂಪುಗಟ್ಟಿ ಪ್ರಯಾಣಿಕರಿಗೆ ತೊಂದರೆ ಕೊಟ್ಟಿವೆ. ವಾಹನಗಳನ್ನು ಜಖಂ ಗೊಳಿಸಿದ್ದು, ಚಾಲಕನೊಬ್ಬ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    ಚಾಮರಾಜನಗರ ಗಡಿ ಭಾಗವಾದ ಹಾಸನೂರಿನ ಬಳಿ ಘಟನೆ ನಡೆದಿದ್ದು, ತಮಿಳುನಾಡಿನ ಡಿಂಡಿಗಲ್ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಆನೆಗಳು ಪುಂಡಾಟ ನಡೆಸಿವೆ. ಮರಿಯಾನೆಯೊಂದಿಗೆ ಹೆದ್ದಾರಿಗೆ ಬಂದಿದ್ದ ಆನೆಗಳು ವಾಹನಗಳನ್ನು ಅಡ್ಡಗಟ್ಟಿವೆ. ಬಳಿಕ ವಾಹನಗಳನ್ನು ಜಖಂ ಗೊಳಿಸಿವೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಹಡಗು ಮುಳುಗಡೆ – ತೈಲ ಸೋರಿಕೆ ಆತಂಕದಲ್ಲಿ ದ.ಕ ಜಿಲ್ಲಾಡಳಿತ ಅಲರ್ಟ್

    ಆನೆಗಳು ಬರುತ್ತಿದ್ದರೂ ಭಯವಿಲ್ಲದೆ ಕಾರು ಚಾಲಕ ಮುಂದಕ್ಕೆ ಸಾಗುತ್ತಿದ್ದಾಗ ಆನೆ ಅಡ್ಡಗಟ್ಟಿದೆ. ಆನೆ ದಾಳಿ ಮಾಡುವ ಆತಂಕದಿಂದ ಚಾಲಕ ಕಾರಿನಿಂದ ಕೆಳಗಿಳಿದು ಓಡಿ ಹೋಗಿದ್ದಾನೆ. ಆತ ಓಡಿ ಹೋಗುತ್ತಿದ್ದಂತೆ ಆನೆ ಕಾರಿನ ಮೇಲೆ ದಾಳಿ ನಡೆಸಿದೆ. ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಚಾಮರಾಜನಗರದಲ್ಲಿ ಪತ್ನಿ ನಗರಸಭೆ ಅಧ್ಯಕ್ಷೆ – ಆದ್ರೆ ಗಂಡನದ್ದೇ ದರ್ಬಾರ್

    ಆನೆಗಳು ಹೆದ್ದಾರಿ ಬಳಿ ಬಂದು ಪ್ರಯಾಣಿಕರಿಗೆ ಕಿರಿಕಿರಿ ಮಾಡುತ್ತಿರುವ ಘಟನೆಗಳು ಪದೇ ಪದೇ ನಡೆಯುತ್ತಿದ್ದು, ಈ ಹಿಂದೆ ಕೂಡ ಬಸ್ ಹಾಗೂ ಲಾರಿಗಳ ಮೇಲೆ ದಾಳಿ ಮಾಡಿದ್ದವು. ವಾಹನ ಸವಾರರು ಆನೆಗಳಿಗೆ ಕೀಟಲೆ ಕೊಡುತ್ತಿರುವುದರಿಂದಲೇ ಇಂತಹ ಘಟನೆಗಳು ಮರುಕಳಿಸುತ್ತಿವೆ ಎನ್ನಲಾಗುತ್ತಿದೆ.

    Live Tv

  • ಜನರಲ್ ಟಿಕೆಟ್‍ಗಾಗಿ ರೈಲು ಪ್ರಯಾಣಿಕರ ನೂಕಾಟ

    ಜನರಲ್ ಟಿಕೆಟ್‍ಗಾಗಿ ರೈಲು ಪ್ರಯಾಣಿಕರ ನೂಕಾಟ

    ರಾಯಚೂರು: ರೈಲ್ವೆ ಜನರಲ್ ಟಿಕೆಟ್‍ಗಾಗಿ ಪ್ರಯಾಣಿಕರು ಪರದಾಡುತ್ತಿರುವ ಘಟನೆ ನಗರದ ರೈಲು ನಿಲ್ದಾಣದಲ್ಲಿ ನಡೆದಿದೆ.

    ನೂರಾರು ಪ್ರಯಾಣಿಕರು ಜನರಲ್ ಟಿಕೆಟ್ ಪಡೆಯಲು ಮುಗಿಬಿದ್ದಿದ್ದಾರೆ. 3 ಟಿಕೆಟ್ ಕೌಂಟರ್ ಇದ್ದರೂ ಕೇವಲ ಒಂದೇ ಕೌಂಟರ್‍ನಲ್ಲಿ ಜನರಲ್ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಹಾಗಾಗಿ ನೂರಾರು ಪ್ರಯಾಣಿಕರು ಲಗೇಜ್ ಹಿಡಿದು ಕ್ಯೂ ನಿಂತಿದ್ದಾರೆ. ಇದನ್ನೂ ಓದಿ: ವಾರಣಾಸಿ ಜಿಲ್ಲಾ ಕೋರ್ಟ್‍ನಲ್ಲಿ ಕಾಶಿ ಮಸೀದಿ ವಿಚಾರಣೆ – ಜ್ಞಾನವಾಪಿ ಮಸೀದಿಯಲ್ಲಿ ಮತ್ತೊಂದು ಶಿವಲಿಂಗ?

    ಪ್ರಯಾಣಿಕರು ಬೆಂಗಳೂರು, ಮುಂಬೈ, ತಿರುಪತಿ, ಹೈದರಾಬಾದ್ ತೆರಳಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ತಿಕ್ಕಾಟ, ನೂಕಾಟ ಮಾಡುತ್ತಾ ಟಿಕೆಟ್ ಪಡೆಯುತ್ತಿದ್ದಾರೆ. ಪ್ರಯಾಣಿಕರ ನೂಕಾಟ ತಪ್ಪಿಸುವಂತೆ ಜನರು ಆಗ್ರಹಿಸಿ, ರಾತ್ರಿ ವೇಳೆ ಎರಡು-ಮೂರು ಟಿಕೆಟ್ ವಿತರಣೆ ಕೌಂಟರ್ ತೆರೆಯಲು ಮನವಿ ಮಾಡಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಶಾಂತನಾದ ವರುಣ, ತಗ್ಗಿದ ಪ್ರವಾಹ – ಚಿಕ್ಕಬಳ್ಳಾಪುರದ ಡ್ಯಾಮ್‍ನಲ್ಲಿ ಯುವಕನ ಕೋತಿಯಾಟ

  • ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಪ್ರಯಾಣಿಕರೇ ನಮಗೆ ದೇವರು.. ಈ ಧರ್ಮ-ಜಾತಿ ಯುದ್ಧ ಬೇಕಾಗಿಲ್ಲ: ಬಸ್ ಚಾಲಕರು

    ಬೆಂಗಳೂರು: ರಾಜ್ಯದಲ್ಲಿ ಹಿಂದೂ ಮುಸ್ಲಿಂ ನಡುವಿನ ಧರ್ಮದ ವಾರ್ ಒಂದಿಲ್ಲೊಂದು ರೂಪ ಪಡೆದುಕೊಳ್ಳುತ್ತಿದೆ. ಹಿಜಬ್‍ನಿಂದ ಶುರುವಾದ ಈ ಧರ್ಮದ ದಂಗಲ್ ಈಗ ವ್ಯಾಪಾರ ವಹಿವಾಟಗಳ ಮೇಲೆ ಪ್ರಭಾವ ಬೀರುವುದಕ್ಕೆ ಶುರು ಮಾಡಿದೆ. ಹಿಂದೂ ಸಂಘಟನೆಗಳು ಒಂದೊಂದೇ ಅಭಿಯಾನಕ್ಕೆ ಕೈಹಾಕುತ್ತಿವೆ. ಈಗ ಖಾಸಗಿ ಬಸ್ ಪ್ರಯಾಣದ ಮೇಲೆ ಅಭಿಯಾನ ಶುರುವಾಗಿದೆ.

    ನಿನ್ನೆಯಿಂದ ಹಿಂದೂ ಸಂಘಟನೆಗಳು ಹೊಸ ಆಂದೋಲನ ಶುರು ಮಾಡಿವೆ. ಹಿಂದೂಗಳು ತಾವೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಮಾಡುವಾಗ ಮುಸ್ಲಿಂ ಚಾಲಕರ ಮತ್ತು ಮುಸ್ಲಿಂ ಮಾಲೀಕರ ವಾಹನಗಳನ್ನ ಬಳಸಬೇಡಿ ಅಂತಾ ಅಭಿಯಾನ ಶುರು ಮಾಡಿದ್ದಾರೆ. ಅನ್ಯಧರ್ಮೀಯರು ನಮ್ಮ ಧರ್ಮವನ್ನ ನಂಬುವುದಿಲ್ಲ. ಅವರ ಜೊತೆಗೆ ಪ್ರಯಾಣ ಮಾಡುವ ಬದಲು ಹಿಂದೂ ಚಾಲಕರ ಮತ್ತು ಹಿಂದೂ ಮಾಲೀಕರ ವಾಹನಗಳನ್ನೇ ಬಳಸಿ ಅಂತಾ ಹೊಸ ವಾದವನ್ನು ಸೃಷ್ಟಿ ಮಾಡಿದ್ದಾರೆ. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ

    ಇದಕ್ಕೆ ಚಾಲಕರ ವರ್ಗದಲ್ಲಿ ಭಾರೀ ವಿರೋಧ ಶುರುವಾಗಿದೆ. ನಮಗೆ ಪ್ರಯಾಣಿಕರೇ ದೇವರು, ಅವರ ಜಾತಿ, ಧರ್ಮ ಯಾವುದಾದರೇ ನಮಗೇನು. ನಮ್ಮ ಬಸ್ ಹತ್ತುವ ಪ್ರಯಾಣಿಕರನ್ನು ಅವರ ಸ್ಥಳಕ್ಕೆ ಬಿಡುವ ಕಾರ್ಯ ಮಾಡುವವರು ನಾವು. ನಮ್ಮಲ್ಲಿ ಎಲ್ಲ ಜಾತಿಯ ಎಲ್ಲ ಧರ್ಮದವರು ಇದ್ದಾರೆ. ನಾವೂ ಕೆಲಸ ಮಾಡುವ ಜಾಗದಲ್ಲಿ ಧರ್ಮವನ್ನು ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್

    ಇದು ಕೆಲಸಕ್ಕೆ ಬಾರದವರು ಮಾಡುತ್ತಿರುವ ಕುತಂತ್ರ. ರಾಜ್ಯದಲ್ಲಿ ಏನ್ ಆಗುತ್ತಿದೆ. ಎಲ್ಲ ಬೆಲೆಗಳು ಗಗನಕ್ಕೆ ಏರಿಕೆಯಾಗುತ್ತಿವೆ. ಜನ ಜೀವನ ಮಾಡುವುದೇ ಕಷ್ಟಕರವಾಗಿದೆ. ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆಯಾಗುತ್ತಿದೆ. ಇತಂಹ ಸಮಯದಲ್ಲಿ ಬೇಡದ ವಿಚಾರವನ್ನು ತಂದು ಜನರ ದಿಕ್ಕು ತಪ್ಪಿಸೋ ಕೆಲಸ ಆಗುತ್ತಿದೆ. ನಾವೆಲ್ಲ ಒಂದೇ ಭಾವನೆಯಿಂದ ಕೆಲಸ ಮಾಡುವ ಜನ. ನಮಗೆ ಕಷ್ಟ ಬಂದಾಗ ಹಿಂದೂಗಳು ಬರ್ತಾರೆ. ನಾವೂ ಅವ್ರ ಕಷ್ಟಕ್ಕೆ ಹೋಗ್ತೀವಿ. ಇಲ್ಲಿ ಧರ್ಮದ ಹೆಸರಿನಲ್ಲಿ ನಮ್ಮ ನಡುವೆ ಬಿರುಕು ತರುವ ಕೆಲಸ ನಡೆಯುತ್ತಿದೆ ಎಂದು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    BRIBE

    ಒಟ್ಟಿನಲ್ಲಿ ರಾಜ್ಯದ ಶಾಂತಿಯನ್ನು ಕೆಡಿಸುವ ಕೆಲಸಕ್ಕೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ ಅನ್ನುವ ವಿಷ ಬೀಜ ಭಿತ್ತನೆ ಮಾಡಿ ಅದರ ಲಾಭ ಮಾಡಿಕೊಳ್ಳಲು ಒಂದಿಲ್ಲೊಂದು ತಂತ್ರಗಳನ್ನು ಕೆಲವರು ಮಾಡುತ್ತಿದ್ದಾರೆ. ಜನ ಮಾತ್ರ ಇದೆಲ್ಲ ಬೇಕಾ ಅಂತ ತಮ್ಮ ಪಾಡಿಗೆ ತಾವು ಕೆಲಸಗಳನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಇನ್ನಾದರೂ ಈ ಅಭಿಯಾನಗಳು ಕೊನೆಯಾಗಿ ಜನ ನೆಮ್ಮದಿಯಿಂದ ಸಹಬಾಳ್ವೆ ಮಾಡುವಂತೆ ಆಗಲಿ.

  • ಪ್ರಯಾಣಿಕರಿದ್ದ ಕಾರು ಕೂಡಾ ಟೊಯಿಂಗ್!

    ಪ್ರಯಾಣಿಕರಿದ್ದ ಕಾರು ಕೂಡಾ ಟೊಯಿಂಗ್!

    ಲಕ್ನೋ: ಪ್ರಯಾಣಿಕರಿದ್ದ ಕಾರೊಂದನ್ನು ಟೊಯಿಂಗ್ ಮಾಡಲಾದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

    ಕಾರು ಚಾಲಕ ಸುನಿಲ್ ಹಾಗೂ ಆತನ ಸ್ನೇಹಿತ ಹಜರತ್‍ಗಂಜ್ ನಗರಕ್ಕೆ ತೆರಳಿದ್ದರು. ಕಾರನ್ನು ರಸ್ತೆ ಬದಿ ಪಾರ್ಕ್ ಮಾಡಿ, ಖರೀದಿ ಮಾಡಬೇಕಿದ್ದ ವಸ್ತುಗಳ ಬಗ್ಗೆ ಚರ್ಚೆಯಲ್ಲಿದ್ದರು. ಈ ವೇಳೆ ಟಾ-ಟ್ರಕ್ ಬಂದು ಕಾರನ್ನು ಎಳೆದುಕೊಂಡು ಹೋಗಿದೆ.

    ನೋ ಪಾರ್ಕಿಂಗ್ ವಲಯದಲ್ಲಿ ವಾಹನಗಳನ್ನು ನಿಲ್ಲಿಸಿದ್ದರೂ ಅದರಲ್ಲಿ ಪ್ರಯಾಣಿಕರಿದ್ದರೆ ಅದನ್ನು ಎಳೆದೊಯ್ಯಬಾರದೆಂಬ ನಿಯಮವಿದೆ. ಈ ಘಟನೆ ನಡೆದಾಗ ಸ್ಥಳದಲ್ಲಿ ನೆರೆದಿದ್ದವರು ವೀಡಿಯೋವನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಟ್ಟಿದ್ದಾರೆ. ಇದನ್ನೂ ಓದಿ: ಟಾಟಾ ಸನ್ಸ್ ಗ್ರೂಪ್‌ಗೆ ಎನ್ ಚಂದ್ರಶೇಖರನ್ ಅಧ್ಯಕ್ಷರಾಗಿ ಮರು ನೇಮಕ

    ವೀಡಿಯೋ ವೈರಲ್ ಆಗುತ್ತಿದ್ದಂತೆ ನಗರ ಪಾಲಿಕೆ ಆಯುಕ್ತರ ಗಮನಕ್ಕೆ ಬಂದಿದೆ. ಬಳಿಕ ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಭಾರತದ ಆಯುರ್ವೇದ ಚಿಕಿತ್ಸೆಯನ್ನು ಆಫ್ರಿಕಾದಲ್ಲಿ ಆರಂಭಿಸಿಲು ಕೀನ್ಯಾ ಮಾಜಿ ಪ್ರಧಾನಿ ಮನವಿ

  • ದಕ್ಷಿಣ ಆಫ್ರಿಕಾ ಸೇರಿದಂತೆ ಇತರೆ ದೇಶಗಳಿಂದ ಬಂದ 6 ಮಂದಿಗೆ ಕೊರೊನಾ

    ದಕ್ಷಿಣ ಆಫ್ರಿಕಾ ಸೇರಿದಂತೆ ಇತರೆ ದೇಶಗಳಿಂದ ಬಂದ 6 ಮಂದಿಗೆ ಕೊರೊನಾ

    ಮುಂಬೈ: ದಕ್ಷಿಣ ಆಫ್ರಿಕಾ ಸೇರಿದಂತೆ ಇತರ ಅಪಾಯಕಾರಿ ದೇಶದಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಆರು ಮಂದಿ ಪ್ರಯಾಣಿಕರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಮುಂಬೈ ಕಾರ್ಪೊರೇಷನ್ , ಕಲ್ಯಾಣ್-ಡೊಂಬಿವಲಿ ಕಾರ್ಪೊರೇಷನ್, ಮೀರಾ-ಭಯಂದರ್ ಕಾರ್ಪೊರೇಷನ್ ಮತ್ತು ಪುಣೆಯಲ್ಲಿ ತಲಾ ಒಬ್ಬರು ಮತ್ತು ಪಿಂಪ್ರಿ-ಚಿಂಚ್‍ವಾಡ್ ಕಾರ್ಪೊರೇಷನ್‍ನಲ್ಲಿ ನೈಜೀರಿಯಾದಿಂದ ಬಂದ ಇಬ್ಬರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಆರೋಗ್ಯ ಇಲಾಖೆ ಮಂಗಳವಾರ ತಿಳಿಸಿದೆ.  ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?

    ಇದೀಗ ಸೋಂಕಿತರ ರಕ್ತದ ಮಾದರಿಗಳನ್ನು ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗಿದೆ ಮತ್ತು ಅವರೊಂದಿಗೆ ಸಂಪರ್ಕ ಹೊಂದಿದ್ದವರನ್ನು ಪತ್ತೆಹಚ್ಚುವ ಕಾರ್ಯ ನಡೆಸಲಾಗುತ್ತಿದೆ. ಈ ಎಲ್ಲಾ ಪ್ರಯಾಣಿಕರಿಗೂ ಕೋವಿಡ್ -19 ಸೋಂಕು ದೃಢವಾಗಿದ್ದು, ಅವರಿಗೆ ಯಾವುದೇ ರೋಗಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಲಾಗಿದೆ.

    ಮತ್ತೊಂದೆಡೆ, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಡಿಸೆಂಬರ್ 1 ರಿಂದ ಇತರ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರನ್ನು ಕ್ವಾರಂಟೈನ್‍ಗೊಳಿಸುವುದಾಗಿ ತಿಳಿಸಿದೆ. ಇದನ್ನೂ ಓದಿ: ಕೋವಿಡ್‌ ವಾರಿಯರ್ಸ್‌ಗೆ ಬೂಸ್ಟರ್‌ ಡೋಸ್‌ ನೀಡುವ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚೆ: ಸಿಎಂ

  • ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ

    ಒಮಿಕ್ರಾನ್ ಆತಂಕ – ಮಾಸ್ಕ್ ಇಲ್ಲದವರಿಗೆ ಮೆಟ್ರೋಗೆ ನೋ ಎಂಟ್ರಿ

    ಬೆಂಗಳೂರು: ಒಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೆಟ್ರೋ ಪ್ರಯಾಣಕ್ಕೆ ಮಾಸ್ಕ್ ಕಡ್ಡಾಯವಾಗಿದ್ದು, ಮಾಸ್ಕ್ ಇಲ್ಲದೇ ಪ್ರಯಾಣಿಸುವವರಿಗೆ ನಿರ್ಬಂಧ ವಿಧಿಸಲಾಗಿದೆ.

    ಕೋವಿಡ್ ಮಾರ್ಗಸೂಚಿ ಪಾಲನೆಗೆ ಒತ್ತು ನೀಡಿರುವ ಬೆಂಗಳೂರು ಮೆಟ್ರೋ ನಿಗಮ ಮೆಟ್ರೋ ಸ್ಟೇಷನ್, ಮೆಟ್ರೋ ಬೋಗಿ ಒಳಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಓಮಿಕ್ರಾನ್ ಇರೋ ದೇಶದ ಪ್ರಜೆಗಳ ಪ್ರವೇಶಕ್ಕೆ ನಿರ್ಬಂಧ ಹೇರಲು ಕೇಂದ್ರಕ್ಕೆ ಮನವಿ ಮಾಡಿದ್ದೇವೆ: ಸಿಎಂ

    ಸಿಲಿಕಾನ್ ಸಿಟಿಯಲ್ಲಿ ಕೋವಿಡ್ ಕೇಸ್ ಇಳಿಕೆಯಾಗುತ್ತಿದ್ದಂತೆ ಜನ ಮಾಸ್ಕ್, ಸಾಮಾಜಿಕ ಅಂತರ ಪಾಲನೆಯನ್ನು ಮರೆತಿದ್ದರು. ಆದರೆ ಇದೀಗ ರೂಪಾಂತರಿ ಒಮಿಕ್ರಾನ್ ಆತಂಕದಿಂದ ಮತ್ತೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು ನಗರದಲ್ಲಿ ಮಾಸ್ಕ್, ಸಾಮಾಜಿಕ ಅಂತರದ ಮೇಲೆ ಬಿಬಿಎಂಪಿ ಮಾರ್ಷಲ್‍ಗಳು ನಿಗಾ ವಹಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಋಣ ತೀರಿಸಲು ಮುಂದಾದ್ರಾ ಸುಮಲತಾ?

  • ಕೊರೊನಾ ನೆಗೆಟಿವ್ ವರದಿಯಿಲ್ಲದೆ ಕೇರಳ ಪ್ರಯಾಣಿಕರು ರಾಜ್ಯಕ್ಕೆ ಎಂಟ್ರಿ

    ಕೊರೊನಾ ನೆಗೆಟಿವ್ ವರದಿಯಿಲ್ಲದೆ ಕೇರಳ ಪ್ರಯಾಣಿಕರು ರಾಜ್ಯಕ್ಕೆ ಎಂಟ್ರಿ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದ್ದು, 3ನೇ ಅಲೆಯ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಆದರೆ ಕೇರಳದಿಂದ ರಾಜ್ಯಕ್ಕೆ ಬರುತ್ತಿರುವ ಪ್ರಯಾಣಿಕರಿಗೆ ತಪಾಸಣೆ ನಡೆಸದೇ ಇರುವುದು ತೀವ್ರ ಆತಂಕಕ್ಕೆ ಎಡೆ ಮಾಡಿದೆ.

    bangalore satellite

    ನಿನ್ನೆಯಷ್ಟೇ ಕೋವಿಡ್ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ನೇತೃತ್ವದಲ್ಲಿ ಸಭೆ ನಡೆಸಿದ್ದ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳ ಮುನ್ಸೂಚನೆ ನೀಡಿತ್ತು. ಆದರೆ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಇದ್ಯಾವ ಕ್ರಮಗಳೂ ಜಾರಿಗೆ ಬಂದಂತೆ ಕಾಣಿಸಲಿಲ್ಲ. ದನ್ನೂ ಓದಿ: ಓಮಿಕ್ರಾನ್‌ ಭಾರತಕ್ಕೆ ಎಚ್ಚರಿಕೆಯ ಕರೆಗಂಟೆ: ಡಬ್ಲ್ಯೂಎಚ್‌ಒ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್‌

    bangalore satellite

    ಸಾಮಾನ್ಯವಾಗಿ ರಾಜ್ಯಕ್ಕೆ ಎಂಟ್ರಿಯಾಗುವ ಗಡಿಗಳಲ್ಲಿ ಪ್ರಯಾಣಿಕರನ್ನು ತೀವ್ರ ತಪಾಸಣೆಗೆ ಒಳಪಡಿಸುತ್ತಾರೆ. ಕೊರೊನಾ ನೆಗಟಿವ್ ರಿಪೋರ್ಟ್ ಇಲ್ಲದಿದ್ದರೇ ಅಧಿಕಾರಿಗಳು ಪ್ರಯಾಣಿಕರನ್ನು ಬಸ್‍ನಿಂದ ಕೆಳಗಿಳಿಸುತ್ತಾರೆ. ಆದರೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಬರುತ್ತಿರುವ ಕೇರಳದ ಪ್ರಯಾಣಿಕರಿಗೆ ತಪಾಸಣೆಯನ್ನು ನಡೆಸುತ್ತಿಲ್ಲ. ಇದು ಜನರಲ್ಲಿ ಭೀತಿ ಹುಟ್ಟಿಸಿದೆ.

    bangalore satellite

    ಕೇರಳದಿಂದ ಬಂದ ಪ್ರಯಾಣಿಕನಿಗೆ ಮಾರ್ಷಲ್ಸ್‌ಗಳು ನೆಗೆಟಿವ್ ರಿಪೋರ್ಟ್ ತೋರಿಸಲು ತಿಳಿಸಿದಾಗ ಆ ಪ್ರಯಾಣಿಕ ತನ್ನ ಉದ್ಧಟತನ ಪ್ರದರ್ಶಿಸಿದ್ದಾನೆ. ದಂಡ ಕಟ್ಟದೇ ಮಾರ್ಷಲ್ಸ್‍ಗಳ ಜೊತೆ ವಾಗ್ವಾದಕ್ಕೆ ಇಳಿದಿದ್ದಾನೆ. ಕೊನೆಗೂ ಪ್ರಯಾಣಿಕ ದಂಡ ಕಟ್ಟಿ ಹೊರಟಿದ್ದಾರೆ. ದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರಾನ್ ಆತಂಕ – ಸೋಂಕಿತ ರಾಷ್ಟ್ರಗಳಿಂದ ಬರೋರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

    bangalore satellite

    ಬೆಂಗಳೂರಿನಲ್ಲೂ ಕೊರೊನಾ ರೂಪಾಂತರಿ ಓಮಿಕ್ರಾನ್ ಭೀತಿ ಕಾಡಲಾರಂಭಿಸಿದೆ. ಜನ ವಸತಿ ಪ್ರದೇಶಗಳಲ್ಲಿ ಮಾಸ್ಕ್ ತಪಾಸಣೆ ಚುರುಕಾಗಿ ನಡೆಯುತ್ತಿದೆ. ಕಾಲೇಜ್, ಬಸ್ ನಿಲ್ದಾಣ, ಮಾರ್ಕೆಟ್, ಇತರೆ ಜನ ಸೇರುವ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ ಬುದ್ಧಿ ಹೇಳಿ ದಂಡ ಹಾಕುತ್ತಿದ್ದಾರೆ.

    ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆಯಾ ವಲಯದ ಮಾರ್ಷಲ್ಸ್‍ಗಳಿಗೆ ಮೇಲಧಿಕಾರಿಗಳು ಸೂಚನೆಯನ್ನು ನೀಡಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಮತ್ತೆ ಕೊರೊನಾ ಮಾರ್ಗಸೂಚಿಗಳು ಚುರುಕಾಗಲಿದೆ.

  • ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್

    ಯುಕೆ ಮಾರ್ಗಸೂಚಿ ಬದಲಾವಣೆ – ಅ.11ರಿಂದ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್

    ಲಂಡನ್: ಭಾರತದಿಂದ ಬ್ರಿಟನ್‍ಗೆ ಹೋಗುವ ಆಗಮಿಸುವ ನಾಗರಿಕರು ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಲಸಿಕೆ ಪಡೆದುಕೊಂಡಿದ್ದರೆ ಅಕ್ಟೋಬರ್ 11ರಿಂದ ಅವರನ್ನು ನಿರ್ಬಂಧಿಸಲಾಗುವುದಿಲ್ಲ ಎಂದು ಎಂದು ಬ್ರಿಟಿಷ್ ಹೈ ಕಮೀಷನರ್ ಅಲೆಕ್ಸ್ ಎಲ್ಲಿಸ್ ತಿಳಿಸಿದ್ದಾರೆ.

    ಇಷ್ಟು ದಿನ ಎರಡು ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದ ಭಾರತೀಯರು ಬ್ರಿಟನ್‌ಗೆ ಹೋದಾಗ ೧೦ ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಬೇಕು ಎಂದು ಸೂಚಿಸಲಾಗಿತ್ತು. ಹೀಗಾಗಿ ರೊಚ್ಚಿಗೆದ್ದ ಭಾರತ ಬ್ರಿಟನ್ ಪ್ರಜೆಗಳಿಗೂ ಇದೇ ರೀತಿಯ ನಿರ್ಬಂಧ ಹೇರಿದ್ದರಿಂದ ಬೆದರಿದ ಬ್ರಿಟನ್ ಇದೀಗ ಈ ನಿಯಮಗಳನ್ನು ಹಿಂತೆಗೆದುಕೊಂಡಿದೆ. ಇದನ್ನೂ ಓದಿ: ಸಿಮ್ ಕಾರ್ಡ್‍ನಲ್ಲಿ ಸೋನು ಸೂದ್ – ಅಭಿಮಾನಿ ಪ್ರೀತಿಗೆ ರಿಯಲ್ ಹೀರೋ ಹೇಳಿದ್ದೇನು ಗೊತ್ತಾ?

    passengers

    ಈ ಕುರಿತಂತೆ ಬ್ರಿಟಿಷ್ ಹೈ ಕಮೀಷನರ್ ಅಲೆಕ್ಸ್ ಎಲ್ಲಿಸ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ  ಮಾಹಿತಿ ನೀಡಿದ್ದು, ಕೋವಿಶೀಲ್ಡ್ ಅಥವಾ ಯುಕೆ ಅನುಮೋದಿತ ಸಂಪೂರ್ಣ ಲಸಿಕೆ ಪಡೆದ ಭಾರತೀಯ ಪ್ರಯಾಣಿಕರಿಗೆ ಅಕ್ಟೋಬರ್ 11ರಿಂದ ನಿರ್ಬಂಧಿಸಲಾಗುವುದಿಲ್ಲ. ಕಳೆದ ತಿಂಗಳು ನಿಕಟ ಸಹಕಾರಕ್ಕಾಗಿ ಭಾರತೀಯ ಸರ್ಕಾರಕ್ಕೆ ಧನ್ಯವಾಗಳು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಶಬರಿಮಲೆ ಪ್ರತಿದಿನ 25 ಸಾವಿರ ಭಕ್ತರ ದರ್ಶನಕ್ಕೆ ಅವಕಾಶ

    ಅಕ್ಟೋಬರ್ 11ಕ್ಕಿಂತ ಮುನ್ನ ಯುಕೆಗೆ ಆಗಮಿಸುವ ಸಂಪೂರ್ಣ ಲಸಿಕೆ ಹಾಕಿಸಿಕೊಳ್ಳದ ಪ್ರಯಾಣಿಕರು ಇರುವ ನಿಯಮವನ್ನು ಪಾಲಿಸಬೇಕಾಗುತ್ತದೆ. ಆದರೆ ಕ್ಟೋಬರ್ 11ರ ಬಳಿಕ ಆಗಮಿಸುವವರು ಸಂಪೂರ್ಣ ಲಸಿಕೆ ಪಡೆದಿರುವ ಪ್ರಮಾಣ ಪತ್ರವನ್ನು ಪರಿಗಣಿಸಲಾಗುವುದು. ಸಾರ್ವಜನಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸಚಿವಾಲಯಗಳ ನಡುವಿನ ನಿಕಟ ತಾಂತ್ರಿಕ ಸಹಕಾರದ ನಂತರ ಈ ನಿರ್ಧಾರವಮನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

  • ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

    ಕೆಆರ್‌ಪೇಟೆಯಲ್ಲಿ ಮಳೆ ಅವಾಂತರ – KSRTC ಬಸ್ ನಿಲ್ದಾಣ ಸಂಪೂರ್ಣ ಜಲಾವೃತ

    ಮಂಡ್ಯ: ಜಿಲ್ಲೆಯ ಕೆಆರ್‌ಪೇಟೆ ತಾಲೂಕಿನ ವ್ಯಾಪ್ತಿ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ ಕೆಆರ್‌ಪೇಟೆ ಪಟ್ಟಣದಲ್ಲಿ ಹಲವು ಅವಘಡಗಳು ಸಂಭವಿಸಿವೆ. ಇದನ್ನೂ ಓದಿ:  ಅನಧಿಕೃತ ರೆಸಾರ್ಟ್ ತೆರವುಗೊಳಿಸದಿದ್ದರೆ ನೀವೇ ಹೊಣೆ- 4 ಅಧಿಕಾರಿಗಳಿಗೆ ಕೊಪ್ಪಳ ಡಿಸಿ ನೋಟಿಸ್

    mandya rain

    ಅಪಾರ ಪ್ರಮಾಣದಲ್ಲಿ ಸುರಿದ ಮಳೆಯಿಂದ ಕೆಆರ್‌ಪೇಟೆಯ ಎಂಡಿಸಿಸಿ ಬ್ಯಾಂಕ್‍ನ ಕಚೇರಿಗೆ ನೀರು ನುಗ್ಗಿದ ಪರಿಣಾಮ, ಕಚೇರಿಯಲ್ಲಿ ಇದ್ದ ಕಂಪ್ಯೂಟರ್, ದಾಖಲೆಗಳು ಹಾನಿಯಾಗಿವೆ. ಬೆಳಗ್ಗೆ ಕಚೇರಿಗೆ ಬಂದ ಸಿಬ್ಬಂದಿ ಬ್ಯಾಂಕ್ ಒಳ ಭಾಗದಲ್ಲಿ ನೀರಿನಲ್ಲಿ ನೆನದಿರುವ ವಸ್ತುಗಳನ್ನು ಹೊರಗಡೆ ತಂದು ಹಾರಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಖಾದರವಾದ ಅಡುಗೆ ಇಷ್ಟ ಪಡುವವರಿಗಾಗಿ ಕ್ಯಾರೆಟ್ ಚಟ್ನಿ

    mandya rain

    ಗುರುವಾರ ರಾತ್ರಿಯೇ ಮಳೆ ನೀರು ನುಗ್ಗಿರುವ ಪರಿಣಾಮ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಇದರಿಂದ ಬಸ್‍ಗಾಗಿ ಕಾದು ಕುಳಿತಿದ್ದ ಪ್ರಯಾಣಿಕರು ನೀರಿನಲ್ಲಿ ಮುಳುಗಿದರು. ಕೊನೆ ಅಗ್ನಿ ಶಾಮಕದಳದ ಸಿಬ್ಬಂದಿ ನೀರಿನಲ್ಲಿ ಇದ್ದ ಪ್ರಯಾಣಿಕರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾದರು. ಇದಲ್ಲದೇ ಪಟ್ಟಣದ ಕೆಲ ಬಡಾವಣೆಗಳಿಗೂ ನೀರು ನುಗ್ಗಿರುವ ಪರಿಣಾಮ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇಷ್ಟೆಲ್ಲಾ ಅವಾಂತರಕ್ಕೆ ಸರಿಯಾದ ಒಳಚರಂಡಿ ಇಲ್ಲದಿರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.