Tag: travelling

  • ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರಕ್‍ಗೆ ಟೆಂಪೋ ಗುದ್ದಿ 18 ಮಂದಿ ಸಾವು

    ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರಕ್‍ಗೆ ಟೆಂಪೋ ಗುದ್ದಿ 18 ಮಂದಿ ಸಾವು

    ಕೋಲ್ಕತ್ತಾ: ಹೆದ್ದಾರಿಯಲ್ಲಿ ಇಂದು ಮುಂಜಾನೆ ಟ್ರಕ್, ಟೆಂಪೋ ಮಧ್ಯ ಸಂಭವಿಸಿದ ರಸ್ತೆ ಅಪಘಾತದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಸ್ಖಾಲಿಯಲ್ಲಿ ನಡೆದಿದೆ.

    ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. 30 ಜನರಿದ್ದ ಟೆಂಪೋ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. 11 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಏಳು ಮಂದಿಯನ್ನು ಶಕ್ತಿನಗರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರೆಲ್ಲರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮತ್ತಿಬ್ಬರನ್ನು ಎನ್‍ಆರ್‍ಎಸ್ ಮೆಡಿಕಲ್ ಆಸ್ಪತ್ರೆಗೆ ರವಾನಿಸಲಾಗಿದೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹಣದಾಸೆಗೆ ಅಂಧ ಸ್ನೇಹಿತನನ್ನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ!

    ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಫುಲ್ಬರಿ ಠಾಣಾ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದುರಂತಕ್ಕೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.