Tag: treatment

  • ಪಾವಗಡ ಬಸ್ ದುರಂತ – ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವು

    ಪಾವಗಡ ಬಸ್ ದುರಂತ – ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸಾವು

    ತುಮಕೂರು: ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಬಸ್ ಉರುಳಿ ಗಂಭೀರ ಗಾಯಗೊಂಡು ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬುಡ್ಡಾರೆಡ್ಡಿ ಗ್ರಾಮದ ಮಹೇಂದ್ರ (21) ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾನೆ.

    ಬಸ್ ಅಪಘಾತದಲ್ಲಿ ಸ್ಥಳದಲ್ಲಿಯೇ 4 ಸಾವನ್ನಪ್ಪಿ, ಇಬ್ಬರು ಚಿಕಿತ್ಸೆಗೆ ತೆರಳುತ್ತಿದ್ದ ವೇಳೆ ಸಾವನ್ನಪ್ಪಿದರು. ಮಹೇಂದ್ರ ಸಾವಿನ ಮೂಲಕ ಮೃತರ ಸಾವಿನ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

    ಮಹೇಂದ್ರ ಬೆನ್ನುಮೂಳೆ ಮುರಿದು, ತಲೆಗೆ ಗಂಭೀರವಾಗಿ ಪೆಟ್ಟಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಚಿಕಿತ್ಸೆಗೆ ಹಣವಿಲ್ಲದೆ ಪೋಷಕರು ಪರದಾಡಿದ್ದರು. ಈ ವೇಳೆ ಶಾಸಕರು ಸೇರಿದಂತೆ ಸಂಘಸಂಸ್ಥೆಗಳ ಮುಖಂಡರು ಹಣವನ್ನ ಒದಗಿಸಿದ್ದರು. ಜೊತೆಗೆ ಯುವಕನ ಸಂಪೂರ್ಣ ಚಿಕಿತ್ಸೆಯ ವೆಚ್ಚ ಸರ್ಕಾರವೇ ಭರಿಸಬೇಕೆಂದು ಶಾಸಕ ವೆಂಕಟರಮಣಪ್ಪ ಸದನದ ಬಾವಿಗಿಳಿದು ಪ್ರತಿಭಟನೆ ಕೂಡ ನಡೆಸಿದ್ದರು. ವಿಧಿ ಆಟವೇ ಬೇರೆಯಾಗಿ ಮಹೇಂದ್ರ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ:8 ಮಂದಿ ಸಾವು

    ಕುಟುಂಬವು ಇರುವ ಒಬ್ಬ ಮಗನ ಜೀವಕ್ಕಾಗಿ ಹಲವರ ಮುಂದೆ ಚಿಕಿತ್ಸೆಯ ಹಣಕ್ಕಾಗಿ ಕೈಚಾಚಿದ್ದರು. ತಾಲೂಕಿನಾದ್ಯಂತ ಹಾಗೂ ಸ್ವಗ್ರಾಮ ಬುಡ್ಡಾರೆಡ್ಡಿ ಹಳ್ಳಿ ಗ್ರಾಮದಲ್ಲಿ ಚಂದಾ ಸಂಗ್ರಹಿಸಿ ಚಿಕಿತ್ಸೆಗೆ ಹಣ ಕಳಿಸಲಾಗಿತ್ತು. ಇದನ್ನೂ ಓದಿ:  ಮೊದಲೇ ಟಾರ್ಗೆಟ್ ರೀಚ್, ರಫ್ತಿನಲ್ಲಿ ಸಾಧನೆ – ಇದು ಆತ್ಮನಿರ್ಭರ್ ಭಾರತದ ಮೈಲುಗಲ್ಲು ಎಂದ ಮೋದಿ

  • BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

    BBMP ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

    ಬೆಂಗಳೂರು: ಬಿಬಿಎಂಪಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತವನ್ನು ಮಾಡಲಾಗಿದೆ.

    ಬಸವನಗುಡಿಯ ಎನ್‍ಆರ್ ಕಾಲೋನಿಯ ಪಾಲಿಕೆ ಹೆರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 60 ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ – ಶನಿವಾರ, ಭಾನುವಾರ ಕಂಪ್ಲೀಟ್‌ ಬಂದ್

    ಕಟ್ಟೆ ಸತ್ಯ ಫೌಂಡೇಷನ್ ಮತ್ತು ರಾಧಕೃಷ್ಣ ಆಸ್ಪತ್ರೆ ಸಹಯೋಗದೊಂದಿಗೆ ಡಾ.ಸಿ ಅಶ್ವಥ್ ಕಲಾ ಭವನನಲ್ಲಿನಡೆದ ಕಾರ್ಯಕ್ರಮವನ್ನ ನಟಿ ಸುಧಾರಣಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ನಟಿ ಸುಧಾರಾಣಿ, ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಸಂತೋಷವಾಗುತ್ತಿದೆ. ಎಷ್ಟೋ ಹೆಣ್ಣು ಮಕ್ಕಳಿಗೆ ಸೀಮಂತದ ಕ್ಷಣಗಳನ್ನ ಆನಂದಿಸೋಕೆ ಸಾಧ್ಯವಾಗುವುದಿಲ್ಲ. ಇಂತಹ ಕಾರ್ಯಕ್ರಮಗಳ ಮೂಲಕ ಸಾಧ್ಯವಾಗದ ಗರ್ಭಿಣಿಯರಿಗೆ ಸೀಮಂತ ಮಾಡುತ್ತಿರುವುದು ಬಹಳ ಸಂತೋಷ ಎಂದಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‍ಗೆ ಕೊರೊನಾ

    ಹೆಣ್ಣು ಮಕ್ಕಳಿಗೆ ತಾಯ್ತನದ ಹಂತ ಬಹಳ ಶ್ರೇಷ್ಠವಾದದ್ದು. ಇಂತಹ ಸಂಧರ್ಭದಲ್ಲಿ ಸಂತೋಷದಿಂದ ಮತ್ತು ಎಚ್ಚರದಿಂದಿರಬೇಕು. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ, ನಿಮ್ಮ ತಾಯಿ ತನದ ದಿನಗಳನ್ನ ಆರೋಗ್ಯದಿಂದ ಆನಂದಿಸಿ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಮೇಯರ್ ಸತ್ಯನಾರಾಯಣ, ಶಾಸಕ ರವಿ ಸುಬ್ರಹ್ಮಣ್ಯ, ಫೌಂಡೇಶನ್ ಅಧ್ಯಕ್ಷ ಸುಧೀಂದ್ರ ಭಾಗಿಯಾಗಿದ್ದರು.

  • ಪುನೀತ್ ಅಂತಿಮ ದರ್ಶನ ವೇಳೆ ಗಾಯಗೊಂಡ ಕಾನ್ಸ್​ಟೇಬಲ್ ಆರೋಗ್ಯ ವಿಚಾರಿಸಿದ ಆರಗ ಜ್ಞಾನೇಂದ್ರ

    ಪುನೀತ್ ಅಂತಿಮ ದರ್ಶನ ವೇಳೆ ಗಾಯಗೊಂಡ ಕಾನ್ಸ್​ಟೇಬಲ್ ಆರೋಗ್ಯ ವಿಚಾರಿಸಿದ ಆರಗ ಜ್ಞಾನೇಂದ್ರ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ಅಂತಿಮ ದರ್ಶನ ವೇಳೆ ಅಭಿಮಾನಿಗಳ ದಟ್ಟಣೆಯ ನೂಕು ನುಗ್ಗಲಿನಲ್ಲಿ ಸಿಲುಕಿ ಕಾಲು ಮುರಿತಕ್ಕೆ ಒಳಗಾದ ಕರ್ತವ್ಯ ನಿರ್ವಹಿಸುತ್ತಿದ್ದ ಮಡಿವಾಳ ಪೊಲೀಸ್ ಠಾಣೆಯ ಕಾನ್ಸ್​ಟೇಬಲ್ ಗಣೇಶ್ ನಾಯಕ್, ಆರೋಗ್ಯವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಚಾರಿಸಿದರು.

    ಗಣೇಶ್ ನಾಯಕ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಸಚಿವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಇಲಾಖೆಯಿಂದ ಚಿಕಿತ್ಸಾ ವೆಚ್ಚವನ್ನು ಭರಿಸುವ ಹಾಗೂ ಉನ್ನತ ಚಿಕಿತ್ಸೆ ಬೇಕಿದ್ದರೆ ಅದನ್ನೂ ಒದಗಿಸುವ ಬಗ್ಗೆ ಭರವಸೆ ನೀಡಿದ್ದು, ನೋವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಗಣೇಶ್ ನಾಯಕ್ ಬಗ್ಗೆ ಸಚಿವರು ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುನೀತ್ ಅಂತ್ಯಕ್ರಿಯೆಗೆ ಸಹಕರಿಸಿದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಸಿಎಂ ಧನ್ಯವಾದ

    ಗಣೇಶ್ ನಾಯಕ್ ಮಲ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಪ್ರಸ್ತುತ ವೆಂಕಟೇಶ್ವರ ಆಸ್ಪತ್ರೆ ಹೊಸೂರ್ ರಸ್ತೆ ಬೆಂಗಳೂರಿನಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಇಬ್ಬರ ಬಾಳಿಗೆ ಬೆಳಕಾದ ಅಪ್ಪು

  • ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಇಬ್ಬರ ಬಾಳಿಗೆ ಬೆಳಕಾದ ಅಪ್ಪು

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ.

    PUNEET RAJKUMAR

    ಪುನೀತ್ ಅವರು ದಾನ ಮಾಡಿದ್ದ ಕಣ್ಣುಗಳನ್ನು ನಿನ್ನೆ ಒಬ್ಬರಿಗೆ, ಇಂದು ಒಬ್ಬರಿಗೆ ನೀಡಲಾಗಿತ್ತು. ಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನಲ್ಲೂ ಸಾರ್ಥಕತೆ ಮೆರೆದ ಪುನೀತ್ ರಾಜ್‍ಕುಮಾರ್ ಅವರು ತಂದೆ ರಾಜ್‍ಕುಮಾರ್ ಹಾದಿಯಲ್ಲೇ ಸಾಗಿದ್ದಾರೆ. ವೈದ್ಯರು ಪುನೀತ್ ಕಣ್ಣುಗಳನ್ನ ಇಬ್ಬರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

    ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ನಿನ್ನೆ ಒಬ್ಬರಿಗೆ ಆಪರೇಷನ್ ಮಾಡಲಾಗಿದೆ ಮತ್ತು ಇಂದು ಮತ್ತೊಬ್ಬರಿಗೆ ಆಪರೇಷನ್ ಮಾಡಲಾಗಿದೆ. ಈ ಮೂಲಕ ಪುನೀತ್ ಅವರ ಎರಡೂ ಕಣ್ಣುಗಳ ಅಳವಡಿಕೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಸಾವಿನ ಬಳಿಕವೂ ಇಬ್ಬರ ಬಾಳಿನಲ್ಲಿ ಅಪ್ಪು ಬೆಳಕಾಗಿದ್ದಾರೆ. ನಾರಾಯಣ ನೇತ್ರಾಲಯ ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    PUNEET

    ಪುನೀತ್ ರಾಜ್‍ಕುಮಾರ್ ಅವರು ನಿಧನರಾದ ಬಳಿಕ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿತ್ತು. ಇದೀಗ ಅವರ ಕಣ್ಣುಗಳಿಂದ ಇಬ್ಬರ ಬಾಳಲ್ಲಿ ಬೆಳಕು ಮೂಡಿದೆ. ಇಂದು ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆಯನ್ನು ಈಡಿಗ ಸಂಪ್ರದಾಯದ ಮೂಲಕವಾಗಿ ನೆರವೇರಿಸಲಾಗಿದೆ. ಪುನೀತ್ ಅವರನ್ನು ಕಳೆದುಕೊಂಡ, ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

  • ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

    ಯುಪಿ ಜನತೆಗೆ 10 ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ – ಪ್ರಿಯಾಂಕಾ ಗಾಂಧಿ ಭರವಸೆ

    ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಸರ್ಕಾರ ರಚನೆಯಾದ ಬಳಿಕ ತಮ್ಮ ಪಕ್ಷದಿಂದ 10 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಹಾಗೂ ಆರೋಗ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

    ಈ ಕುರಿತಂತೆ ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟ್ಟರ್‌ನಲ್ಲಿ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಉತ್ತರ ಪ್ರದೇಶದಲ್ಲಿ ಪ್ರತಿಯೊಬ್ಬರ ಆರೋಗ್ಯದ ಸ್ಥಿತಿ ಹೇಗಿತ್ತು ಎಂಬುವುದನ್ನು ನೋಡಿದ್ದೇವೆ. ಇದು ಆಡಳಿತ ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿತ್ತು. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ ನಂತರ ಪ್ರಣಾಳಿಕೆ ಸಮಿತಿಯ ಒಪ್ಪಿಗೆಯೊಂದಿಗೆ, ಯಾವುದೇ ರೋಗಕ್ಕೂ ಉಚಿತವಾಗಿ ಚಿಕಿತ್ಸೆ ನೀಡಲು ಪಕ್ಷ ನಿರ್ಧರಿಸಿದ್ದು, 10 ಲಕ್ಷದವರೆಗೂ ಚಿಕಿತ್ಸೆಯ ವೆಚ್ಚ ಸರ್ಕಾರ ಭರಿಸುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಿನ್ನೌರ್‌ನಲ್ಲಿ ಭಾರೀ ಹಿಮಪಾತಕ್ಕೆ ಮೂವರು ಬಲಿ – 10 ಮಂದಿಯ ರಕ್ಷಣೆ

    ಈ ಮುನ್ನ ಮುಂದಿನ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮತ್ತು 20 ಲಕ್ಷ ಜನರಿಗೆ ಉದ್ಯೋಗ ಸೇರಿದಂತೆ ಏಳು ಭರವಸೆಗಳನ್ನು ಈಡೇರಿಸುವಂತೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಕಾಂಗ್ರೆಸ್ ಪ್ರತಿಜ್ಞಾ ಯಾತ್ರೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿಗದ ಜಾಮೀನು – ಜೈಲಿನಲ್ಲಿ ರಾಮನ ಮೊರೆ ಹೋದ ಆರ್ಯನ್ ಖಾನ್

    ಇದೇ ವೇಳೆ ಗೋಧಿ ಮತ್ತು ಭತ್ತವನ್ನು ಪ್ರತಿ ಕ್ವಿಂಟಾಲ್‍ಗೆ 2,500ರೂ. ಮತ್ತು ಕಬ್ಬನ್ನು 400ರೂ. ದೊರಕಿಸಿಕೊಡುವಂತೆ ಮತ್ತು ಎಲ್ಲರ ವಿದ್ಯುತ್ ಬಿಲ್ ಅನ್ನು ಅರ್ಧದಷ್ಟು ಕಡಿಮೆಗೊಳಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಚುನಾವಣೆಯಲ್ಲಿ ಗೆದ್ದ ಮಹಿಳೆಯರಿಗೆ ತಮ್ಮ ಪಕ್ಷದಲ್ಲಿ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್

    12ನೇ ತರಗತಿ ತೇರ್ಗಡೆಯಾದ ಬಾಲಕಿಯರಿಗೆ ಸ್ಮಾರ್ಟ್‍ಫೋನ್ ಮತ್ತು ಪದವೀಧರ ಬಾಲಕಿಯರಿಗೆ ಇ-ಸ್ಕೂಟರ್ ನೀಡುವುದಾಗಿ ತಿಳಿಸಿದ್ದಾರೆ ಮತ್ತು ಕೋವಿಡ್ ಬಿಕ್ಕಟ್ಟಿನಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

  • ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

    ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅವರನ್ನು ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

     Bill Clinton

    ಕ್ಯಾಲಿಫೋರ್ನಿಯಾದ ಇರ್ವಿನ್ ಮೆಡಿಕಲ್ ಸೆಂಟರ್‌ನಲ್ಲಿ ಬಿಲ್ ಕ್ಲಿಂಟನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳುವ ಪ್ರಕಾರ, ಕ್ಲಿಂಟನ್ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟಿದ್ದು, ಪರ್ಸನಲ್ ಆಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಉಸಿರಾಟದ ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಬಿಲ್ ಕ್ಲಿಂಟನ್ ಅವರನ್ನು ಕೋವಿಡ್-19 ಹೊರತಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    ಈ ಕುರಿತಂತೆ ಕ್ಲಿಂಟನ್ ವಕ್ತಾರ ಏಂಜೆಲ್ ಯುರೇನಾ ಟ್ವಿಟ್ಟರ್‌ನಲ್ಲಿ, ಕ್ಲಿಂಟನ್ ಅವರ ಮನಸ್ಥಿತಿ ಉತ್ತಮವಾಗಿದೆ. ಅವರಿ ಆರೈಕೆ ಅತ್ಯುತ್ತಮವಾಗಿ ಆರೈಕೆ ಮಾಡುತ್ತಿರುವ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಅಲ್ಪೇಶ್ ಅಮೀನ್ ಮತ್ತು ಡಾ. ಲಿಸಾ ಬಾರ್ಡಾಕ್ ಅವರು, ಕ್ಲಿಂಟನ್ ಅವರನ್ನು “ಆರೋಗ್ಯ ಮೇಲ್ವಿಚಾರಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಗ್ಯವಾಗಿದ್ದಾರೆ. “ಎರಡು ದಿನಗಳ ಚಿಕಿತ್ಸೆಯ ನಂತರ, ಅವರ ಬಿಳಿ ರಕ್ತ ಕಣಗಳ ಎಣಿಕೆ ಕಡಿಮೆಯಾಗುತ್ತಿದೆ ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.” ಆದಷ್ಟು ಬೇಗ ಅವರು ಗುಣಮುಖರಾಗಿ ಮನೆಗೆ ಹಿಂದಿರುಗುತ್ತಾರೆ ಎಂದು ನಾವು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

  • ಒಂದೇ ದಿನ 40ಕ್ಕೂ ಹೆಚ್ಚು ಜನರ ಮೇಲೆ ಹುಚ್ಚುನಾಯಿ ದಾಳಿ

    ಒಂದೇ ದಿನ 40ಕ್ಕೂ ಹೆಚ್ಚು ಜನರ ಮೇಲೆ ಹುಚ್ಚುನಾಯಿ ದಾಳಿ

    ಮಂಡ್ಯ: ಒಂದೇ ದಿನ ಹುಚ್ಚು ನಾಯಿವೊಂದು 40ಕ್ಕೂ ಹೆಚ್ಚು ಮಂದಿಗೆ ಕಚ್ಚಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ತಾಲೂಕು ವ್ಯಾಪ್ತಿ ಜರುಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

    Mandya Dog

    ಕೆಆರ್‌ಪೇಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ಮೊದಲ ಬಾರಿಗೆ ಐದಕ್ಕೂ ಹೆಚ್ಚು ಮಂದಿಗೆ ಕಚ್ಚಿದ ಹುಚ್ಚು ನಾಯಿ ನಂತರ ಕೆಆರ್‍ಪೇಟೆ ಪಟ್ಟಣ, ಪುರದ ಗೇಟ್, ಕುಂದನಗಳ್ಳಿ, ಹೆಗ್ಗಡಹಳ್ಳಿ, ವಡ್ಡರಹಳ್ಳಿ, ಮಾಕವಳ್ಳಿ ಭಾಗದಲ್ಲಿ ಸುಮಾರು 40ಕ್ಕೂ ಅಧಿಕ ಮಂದಿಯ ಮೇಲೆ ದಾಳಿ ನಡೆಸಿದೆ. ಇದನ್ನೂ ಓದಿ:  ಉದಯಪುರಕ್ಕೆ ಸಾರಾ ಅಲಿಖಾನ್ ಭೇಟಿ – ಪ್ರಕೃತಿ ಮಧ್ಯೆ ಫೋಟೋ ಕ್ಲಿಕ್ಕಿಸಿಕೊಂಡ ಸೈಫ್ ಪುತ್ರಿ

    Mandya Dog

    ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರ ಮೇಲೆ, ಕಬ್ಬು ಕಡಿಯುತ್ತಿದ್ದ ಜನರ ಮೇಲೆ, ಜಮೀನಿನಲ್ಲಿ ಹಾಗೂ ಗ್ರಾಮದಲ್ಲಿ ಇದ್ದವರ ಮೇಲೆ ಈ ಹುಚ್ಚು ನಾಯಿ ದಾಳಿ ನಡೆಸಿದೆ. ಸದ್ಯ ಹುಚ್ಚು ನಾಯಿ ಕಡಿತಕ್ಕೆ ಒಳಗಾದವರಿಗೆ ಕೆಆರ್‍ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು, ಹಲವರನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನೆ ಮಾಡಲಾಗಿದೆ. ಹುಚ್ಚು ನಾಯಿ ಕಡಿತದಿಂದ ಜನರಲ್ಲಿ ಆತಂಕ ಮೂಡಿದ್ದು, ಹುಚ್ಚು ನಾಯಿ ಸೆರೆಗೆ ಜನರು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ:  ಸಾರಿಗೆ ನೌಕರರ ವೇತನ ವಿಳಂಬ – ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೆಚ್‍ಡಿಕೆ

  • ಏಡ್ಸ್ ರೋಗಿಗಳಿಗೆ ಸಕಾಲಕ್ಕೆ ಸಿಗ್ತಿಲ್ಲ ಚಿಕಿತ್ಸೆ – ಪ್ರಾಣಾಪಾಯದಲ್ಲಿ 300ಕ್ಕೂ ಅಧಿಕ ಸೋಂಕಿತರು

    ಏಡ್ಸ್ ರೋಗಿಗಳಿಗೆ ಸಕಾಲಕ್ಕೆ ಸಿಗ್ತಿಲ್ಲ ಚಿಕಿತ್ಸೆ – ಪ್ರಾಣಾಪಾಯದಲ್ಲಿ 300ಕ್ಕೂ ಅಧಿಕ ಸೋಂಕಿತರು

    ಯಾದಗಿರಿ: ಜಿಲ್ಲೆಯ ಏಡ್ಸ್ ರೋಗಿಗಳಿಗೆ ಕಳೆದ ಒಂದು ತಿಂಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡಿದ ಕಾರಣ 300 ಕ್ಕೂ ಅಧಿಕ ಹೆಚ್‍ಐವಿ ಸೋಂಕಿತರು ಪರದಾಡುವಂತಾಗಿದೆ.

    Yadagiri hospital

    ಜಿಲ್ಲೆಯ ಏಡ್ಸ್ ರೋಗಿಗಳ ಸಮಸ್ಯೆಗೆ ವೈದ್ಯರು ಸರಿಯಾಗಿ ಸ್ಪಂದಿಸದ ಕಾರಣ ಬೇರೆ, ಬೇರೆ ತಾಲೂಕಿನಿಂದ ನಿತ್ಯ ಬಂದು ವಾಪಸು ಹೋಗುತ್ತಿದ್ದಾರೆ ಹೆಚ್‍ಐವಿ ಸೋಂಕಿತರು. ಸೋಂಕಿತರಿಗೆ ಬ್ಲಡ್ ಟೆಸ್ಟ್ ಮಾಡುತ್ತಿಲ್ಲ. ಬ್ಲಡ್ ಟೆಸ್ಟ್ ಮಾಡದೇ ಮಾತ್ರೆಗಳನ್ನು ನುಂಗುವಂತಿಲ್ಲ. ಇದನ್ನೂ ಓದಿ: ಸೊಸೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಮಾವ!

    Yadagiri hospital

    ಹೀಗಿದ್ದರೂ ಜಿಲ್ಲಾಸ್ಪತ್ರೆಯ ವೈದ್ಯ ಅಧಿಕಾರಿ ಸಂಜೀವ್ ರಾಯಚೂರಕರ್ ರೋಗಿಗಳಿಗೆ ಹಾರಿಕೆಯ ಉತ್ತರ ನೀಡುತ್ತಿದ್ದಾರೆ. ನಿತ್ಯ ಆಸ್ಪತ್ರೆಗೆ ಬಂದು ಹೋಗುತ್ತಿರುವುದಕ್ಕೆ ಸೋಂಕಿತರು ಮುಜುಗರ ಅನುಭವಿಸುವಂತಾಗಿದೆ. ಇನ್ನೂ ಇದು ಹೀಗೆ ಮುಂದುವರಿದರೆ ಸೋಂಕಿತರಿಗೆ ಪ್ರಾಣಾಪಾಯವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ದೆಹಲಿ ಜನ್ರಿಗೆ ಗುಡ್ ನ್ಯೂಸ್ – ಅ.1ರಿಂದ ಕಾರ್ಯನಿರ್ವಹಿಸಲಿರುವ ಹೊಂಜು ಗೋಪುರ

  • ರಾಯಚೂರಿನಲ್ಲಿ ಡೆಂಗ್ಯೂಗೆ ಮೂರನೇ ಮಗು ಬಲಿ

    ರಾಯಚೂರಿನಲ್ಲಿ ಡೆಂಗ್ಯೂಗೆ ಮೂರನೇ ಮಗು ಬಲಿ

    ರಾಯಚೂರು: ಜಿಲ್ಲೆಯಲ್ಲಿ ದಿನೇ, ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದೀಗ 5 ವರ್ಷದ ಮಗು ಡೆಂಗ್ಯೂವಿನಿಂದ ಮೃತಪಟ್ಟಿದ್ದು, ಇದು  ಮೂರನೇ ಸಾವಿನ ಪ್ರಕರಣವಾಗಿದೆ. ಇದನ್ನೂ ಓದಿ: ನಮ್ಮಪ್ಪ ಕಾಮುಕ, ಸ್ಯಾಡಿಸ್ಟ್, ಕುಡುಕ – ಡೆತ್‍ನೋಟ್‍ನಲ್ಲಿ ಮಧುಸಾಗರ್ ಗಂಭೀರ ಆರೋಪ

    Dengue

    ಮಾನ್ವಿ ಪಟ್ಟಣದ ಉಮ್ಮೇ ಕುಲ್ಸುಮ್(5) ಮೃತ ಬಾಲಕಿ. ಚಿಕಿತ್ಸೆ ಫಲಕಾರಿಯಾಗದೇ ಮಗು ಹೈದರಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಮಾನ್ವಿ ಪಟ್ಟಣದ ನಿವಾಸಿ ಸೈಯದ್‍ರವರ ಮಗಳು ಉಮ್ಮೇ ಕುಲ್ಸುಮ್‍ಗೆ ಮಾನ್ವಿ, ರಾಯಚೂರು ಹಾಗೂ ಹೈದರಾಬಾದ್‍ನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಉಮ್ಮೇ ಕುಲ್ಸುಮ್ ಡೆಂಗ್ಯೂ ಜ್ವರಕ್ಕೆ ಬಲಿಯಾಗಿದೆ.

    Dengue

    ಜಿಲ್ಲೆಯಲ್ಲಿ ಈವರೆಗೆ ಮೂರು ಮಕ್ಕಳು ಡೆಂಗ್ಯೂವಿನಿಂದ ಸಾವನ್ನಪ್ಪಿದ್ದಾರೆ. ಮಾನ್ವಿ ಪಟ್ಟಣದಲ್ಲಿ ಡೆಂಗ್ಯೂ ಜ್ವರದಿಂದ ಹೆಚ್ಚು ಮಕ್ಕಳು ಬಾಧಿತರಾಗಿದ್ದಾರೆ. ಪಟ್ಟಣದ ತಾಲೂಕಾಸ್ಪತ್ರೆ ಹಾಗೂ ರಾಯಚೂರು ನಗರದ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ ಎದುರಾಗಿದೆ. ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಬರುವ ಪೋಷಕರು ಪರದಾಡುವಂತಾಗಿದೆ. ಇದನ್ನೂ ಓದಿ: 40 ಕೆಜಿ ತೂಕ ಇಳಿಸಿಕೊಂಡ ಬಾಲಿವುಡ್‍ನ ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಪತ್ನಿ

  • ರಾಯಚೂರಿನಲ್ಲಿ ಡೆಂಗ್ಯೂಗೆ ಎರಡನೇ ಮಗು ಬಲಿ

    ರಾಯಚೂರಿನಲ್ಲಿ ಡೆಂಗ್ಯೂಗೆ ಎರಡನೇ ಮಗು ಬಲಿ

    ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ, ದಿನೇ ಹೆಚ್ಚಾಗುತ್ತಿದ್ದು, ಸಿಂಧನೂರು ನಗರದ ಮಹಿಬೂಬಿಯಾ ಕಾಲೋನಿಯಲ್ಲಿ 6 ವರ್ಷದ ಮಗು ಡೆಂಗ್ಯೂಗೆ ಬಲಿಯಾಗಿದ್ದಾಳೆ.

    ಅಂಗನವಾಡಿ ಕಾರ್ಯಕರ್ತೆ ಅನಿತಾರವರ ಮಗಳು ಸೋನು(6) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಮೂಲಕ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಇಬ್ಬರು ಮಕ್ಕಳು ಅಸುನೀಗಿದ್ದಾರೆ. ಒಂದು ವಾರದಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋನುಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್‍ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ. ಇದನ್ನೂ ಓದಿ:  ನೈಸ್ ರಸ್ತೆಯಲ್ಲಿ ಕಾರು ಪಲ್ಟಿ – ಪಾರ್ಟಿಯಿಂದ ಬರುವಾಗ ಅಪಘಾತ?

    ಕಳೆದ ವಾರವಷ್ಟೇ ಮಾನ್ವಿಯಲ್ಲಿ 5 ವರ್ಷದ ಬಾಲಕ ಡೆಂಗ್ಯೂಗೆ ಬಲಿಯಾಗಿದ್ದ. ಡೆಂಗ್ಯೂಗೆ ಜಿಲ್ಲೆಯಲ್ಲಿ ಇದುವರೆಗೂ 5 ಮಕ್ಕಳು ಬಲಿಯಾಗಿದ್ದಾರೆ ಅಂತ ಶಂಕಿಸಲಾಗಿದೆ. ಆದರೆ ಎರಡು ಪ್ರಕರಣಗಳು ಮಾತ್ರ ಧೃಡಪಟ್ಟಿವೆ. ಇಡೀ ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಡೆಂಗ್ಯೂ ಪ್ರಕರಣಗಳೂ ಸಹ ವಿಪರೀತವಾಗಿವೆ. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

    ರಿಮ್ಸ್ ಆಸ್ಪತ್ರೆಯೊಂದರಲ್ಲೇ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಗ್ಯೂ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1,500ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದಾರೆ. ವೈರಲ್ ಫೀವರ್ ಹಾಗೂ ಡೆಂಗ್ಯೂ ಪ್ರಕರಣಗಳಿಂದ ಮಕ್ಕಳ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.