Tag: trial blast

  • ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟದಲ್ಲಿ (Baby Hills) ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದರೆ ಹಳೆ ಮೈಸೂರು ಭಾಗದ ಜೀವನಾಡಿಯಾದ ಕೆಆರ್‌ಎಸ್ (KRS) ಅಣೆಕಟ್ಟೆಗೆ ಅಪಾಯ ಎದುರಾಗುತ್ತೆ ಎಂದು ಬೇಬಿ ಬೆಟ್ಟದಲ್ಲಿನ ಟ್ರಯಲ್ ಬ್ಲಾಸ್ಟ್‌ಗೆ ರೈತ ಸಂಘಟನೆಗಳು ವಿರೋಧಿಸಿದ ಬೆನ್ನಲ್ಲೇ ಇದೀಗ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

    ಇಂದು ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ವಿಚಾರ ಸಂಬಂಧ ಸಚಿವ ಚಲುವರಾಯಸ್ವಾಮಿ (Chaluvarayaswamy) ಮಂಡ್ಯ (Mandya) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಜನಪ್ರತಿನಿಧಿಗಳು, ರೈತ ಸಂಘಟನೆಯ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದರು. ಆರಂಭದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ರೈತ ಸಂಘಟನೆಗಳ ಮುಖಂಡರು ಈ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಜು.23 ರಂದು ʼಮೋದಿ 3.0ʼ ಬಜೆಟ್‌ ಮಂಡನೆ

    ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನು ಮತ್ತೆ ಮಾಡಲು ಅವಕಾಶ ನೀಡಿದರೆ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ ಎದುರಾಗೋದು ನಿಶ್ಚಿತವಾಗಿದೆ. ಕೆಆರ್‌ಎಸ್ ಡ್ಯಾಂ ಅನ್ನು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಮೈಸೂರು ಮಹಾರಾಜರು ನಮಗೆ ನೀಡಿರುವ ಅಮೂಲ್ಯ ಕೊಡುಗೆ ಕೆಆರ್‌ಎಸ್ ಡ್ಯಾಂ ಆಗಿದೆ. ಇದೀಗ ಇಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿ ಮುಂದೆ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಡ್ಯಾಂಗೆ ಹಾನಿಯಾಗುತ್ತದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡದೆ ಸುಗ್ರೀವಾಜ್ಞೆ ಜಾರಿಗೆ ತರಬೇಕೆಂದು ರೈತ ಸಂಘಟನೆಗಳ ಮುಖಂಡರು ಆಗ್ರಹ ಮಾಡಿದರು. ಇದನ್ನೂ ಓದಿ: ಕೀರ್ತಿ ಚಕ್ರ; ಪತಿಯ ಮರಣೋತ್ತರ ಪ್ರಶಸ್ತಿ ಸ್ವೀಕರಿಸುವಾಗ ಕ್ಯಾ.ಅನ್ಶುಮನ್‌ ಸಿಂಗ್‌ ಪತ್ನಿ ಭಾವುಕ

    ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಈ ಸಂಬಂಧ ಜುಲೈ 15ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಹೀಗಾಗಿ 15ರ ವರೆಗೆ ಟ್ರಯಲ್ ಬ್ಲಾಸ್ಟ್ ವಿಚಾರವನ್ನು ಮುಂದೂಡಲಾಗಿದೆ. ನಾವು ಸಹ ಕೋರ್ಟ್‌ಗೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ. ಟ್ರಯಲ್ ಬ್ಲಾಸ್ಟ್ ಸಂಬಂಧ ತಜ್ಞರ ವರದಿ, ಇಲ್ಲಿನ ರೈತರ ಅಭಿಪ್ರಾಯಗಳನ್ನು ನ್ಯಾಯಲಯಕ್ಕೆ ತಿಳಿಸಿ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ನಮಗೂ ಸಹ ಗಣಿಗಾರಿಕೆ ಮೇಲೆ ಆಸಕ್ತಿ ಇಲ್ಲ. ಕೆಆರ್‌ಎಸ್ ಡ್ಯಾಂ ಉಳಿಸಿಕೊಳ್ಳುವುದೆ ನಮ್ಮ ನಿಲುವಾಗಿದೆ. ಜು.15ರವರೆಗೆ ಯಾವುದೇ ಟ್ರಯಲ್ ಬ್ಲಾಸ್ಟ್ ಮಾಡೋದಿಲ್ಲ ಎಂದು ಸಭೆ ಬಳಿಕ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

  • ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ – ರೈತರಿಂದ ಭಾರೀ ಆಕ್ರೋಶ!

    ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‌ಗೆ ಸಿದ್ಧತೆ – ರೈತರಿಂದ ಭಾರೀ ಆಕ್ರೋಶ!

    – ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ – ರೈತರ ಆತಂಕ

    ಮಂಡ್ಯ: ಬೇಬಿಬೆಟ್ಟದಲ್ಲಿ ಸದ್ದಿಲ್ಲದೇ ಟ್ರಯಲ್ ಬ್ಲಾಸ್ಟ್‌ಗೆ (Bebi Trial Blast) ಸರ್ಕಾರ ಸಿದ್ಧತೆ ನಡೆಸಿದೆ. ಪ್ರಾಯೋಗಿಕ ಪರೀಕ್ಷೆಗೆ ಮುಂದಿನ ವಾರವೇ ವಿಜ್ಞಾನಿಗಳನ್ನು ಕರೆಸಲು ಮುಂದಾಗಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಇದರಿಂದ ರೈತರು (Farmers) ಗರಂ ಆಗಿದ್ದು, ಪ್ರತಿಭಟನೆ ನಡೆಸಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ಹಲವು ರೈತ ಮುಖಂಡರು, ಕಾರ್ಯಕರ್ತರು ಕೆಆರ್‌ಎಸ್‌ (KRS) ಬಳಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ರೈತರು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಜಿಲ್ಲೆಯ ಶಾಸಕರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. `ಟ್ರಯಲ್ ಬ್ಲಾಸ್ಟ್ ಬೇಡ ಬೇಡ’ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಹತ್ರಾಸ್‌ ದುರಂತ- ಮೃತರ ಕುಟುಂಬಕ್ಕೆ ತಲಾ 2 ಲಕ್ಷ, ಗಾಯಾಳುಗಳಿಗೆ ತಲಾ 50 ಸಾವಿರ ನೆರವು

    ಬಳಿಕ ಮಾತನಾಡಿದ ಪ್ರತಿಭಟನಾನಿರತ ರೈತರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಬಳಿಯ ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಡ್ಯಾಂಗೆ ಅಪಾಯ ಇದೆ. ಡ್ಯಾಂ ಸುರಕ್ಷತೆ ದೃಷ್ಟಿಯಿಂದ ಸದ್ಯ ಗಣಿಗಾರಿಕೆ ನಿಷೇಧಿಸಲಾಗಿದೆ. ಈಗ ಮತ್ತೆ ಸರ್ಕಾರವೇ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿದೆ. ಅದಕ್ಕಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಟ್ರಯಲ್ ಬ್ಲಾಸ್ಟ್ ಮಾಡಿ ಡ್ಯಾಂಗೆ ಯಾವುದೇ ಅಪಾಯವಿಲ್ಲ ಅಂತ ವರದಿ ತರಿಸಿಕೊಳ್ಳಲು ಹುನ್ನಾರ ನಡೆಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಆರ್‌ಎಸ್ ಡ್ಯಾಮ್ ಮುಖ್ಯದ್ವಾರ, ನೀರಾವರಿ ನಿಯಮದ ಕಚೇರಿ ಬಳಿ 100ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

  • ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    ಚಿಕ್ಕೋಡಿ: ಕರ್ನಾಟಕದಿಂದ (Karnataka) 70 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ (Maharashtra) ಅರಣ್ಯದಲ್ಲಿ ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದ ಶಂಕೆಯ ಮೇರೆಗೆ ಇಬ್ಬರು ಶಂಕಿತ ಉಗ್ರರನ್ನು (Suspected Terrorists) ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

    ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ (Amboli) ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ದೊರೆತಿದ್ದು, ಶಂಕಿತ ಉಗ್ರರು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಅಂಬೋಲಿಗೆ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆ ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರಕ್ಕೆ ಆಗಮಿಸಿ ಎಟಿಎಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    ಕಳೆದ ವಾರ ಪಟ್ರೋಲಿಂಗ್ (Patrolling) ಮಾಡುತ್ತಿದ್ದ ವೇಳೆ ಬೈಕ್ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಪುಣೆ ಕೊಥ್‌ರೂಡ್ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್ ಕಳ್ಳತನ ಶಂಕೆಯಡಿಯಲ್ಲಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯೂನಿಸ್ ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳಿಗೆ ಐಸಿಸ್ ಉಗ್ರ ಸಂಘಟನೆ ಜೊತೆ ನಂಟಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

    ಬಳಿಕ ಇಬ್ಬರು ಶಂಕಿತ ಉಗ್ರರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ಬಹಿರಂಗವಾಗಿದೆ. ಕೊಲ್ಲಾಪುರ ನಿಪ್ಪಾಣಿ ಆಜರಾ ಮಾರ್ಗವಾಗಿ ಅಂಬೋಲಿಗೆ ಪ್ರಯಾಣಿಸಿದ ಮಾಹಿತಿ ದೊರೆತ ಹಿನ್ನೆಲೆ ಶಂಕಿತ ಉಗ್ರರು ಪ್ರಯಾಣಿಸಿದ ಮಾರ್ಗವನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಜುಲೈ 27ರಂದು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಮಾಹಿತಿ ದೊರೆತಿದ್ದು, ಈ ಬಗ್ಗೆ ಬೆಳಗಾವಿ ಪೊಲೀಸರು ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಮೊಗ್ಗ ಬ್ಲಾಸ್ಟ್ ಕೇಸ್‌ – ರೊಬೊಟ್‌ ಬಳಸಿ‌ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್

    ಶಿವಮೊಗ್ಗ ಬ್ಲಾಸ್ಟ್ ಕೇಸ್‌ – ರೊಬೊಟ್‌ ಬಳಸಿ‌ ಭಾರತದಲ್ಲಿ ದಾಳಿಗೆ ಮುಂದಾಗಿದ್ದ ಐಸಿಸ್

    ನವದೆಹಲಿ: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಐಸಿಸ್ (ISIS) ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) 9 ಜನರ ವಿರುದ್ಧ ಶುಕ್ರವಾರ ಮೊದಲ ಪೂರಕ ಚಾರ್ಜ್‌ಶೀಟ್ (Supplymentary ChargeSheet) ಸಲ್ಲಿಸಿದೆ.

    ಆರೋಪಿಗಳು ಭವಿಷ್ಯದಲ್ಲಿ ಭಾರತದಲ್ಲಿಯೇ ಭಯೋತ್ಪಾದಕ ದಾಳಿಯನ್ನು ನಡೆಸುವ ಸಲುವಾಗಿ ರೋಬೊಟಿಕ್ಸ್ (Robotics) ಕೋರ್ಸ್‌ಗಳನ್ನು  ಕಲಿಯಲು ಮುಂದಾಗಿದ್ದಾರೆ ಎಂದು ಎನ್‌ಐಎ ತಾನು ಸಲ್ಲಿಸಿರುವ ಪೂರಕ ಚಾರ್ಜ್‌ಶೀಟ್‌ನಲ್ಲಿ  ಹೇಳಿದೆ. ಎನ್‌ಐಎ ಪ್ರಕಾರ, ಆರೋಪಿಗಳು ಐಸಿಸ್ ಜೊತೆಗೂಡಿ ಶಿವಮೊಗ್ಗದಲ್ಲಿ (Shivamogga) ಐಇಡಿ ಟ್ರಯಲ್ ಬ್ಲಾಸ್ಟ್ (Trial Blast) ಮಾಡಿದ್ದರು. ಅಲ್ಲದೇ ಜನರಲ್ಲಿ ಭಯ ಮೂಡಿಸುವ ಸಲುವಾಗಿ ವಾಹನಗಳಿಗೆ ಬೆಂಕಿ ಹಚ್ಚಿದ್ದರು. ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸಿನಲ್ಲೇ ಮಹಿಳೆ ಜೊತೆ ಕಂಡಕ್ಟರ್ ಸೆಕ್ಸ್- ವೀಡಿಯೋ ವೈರಲ್

    ಆರೋಪಿಗಳನ್ನು ಮೊಹಮ್ಮದ್ ಶಾರಿಖ್ (25), ಮಾಜ್ ಮುನೀರ್ ಅಹಮದ್ (23), ಸೈಯದ್ ಯಾಸಿನ್ (22), ರೀಶಾನ್ ತಾಜುದ್ದೀನ್ ಶೇಖ್ (22), ಹುಜೈರ್ ಫರ್ಹಾನ್ ಬೇಗ್ (22), ಮಜಿನ್ ಅಬ್ದುಲ್ ರಹಮಾನ್ (22), ನದೀಮ್ ಅಹಮದ್ ಕೆಎ (22), ಜಬೀವುಲ್ಲಾ (32) ಮತ್ತು ನದೀಮ್ ಫೈಝಲ್ ಎನ್ (27) ಎಂದು ಗುರುತಿಸಲಾಗಿದ್ದು, ಎಲ್ಲರೂ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಶಾಪಿಂಗ್‍ನಲ್ಲಿ ಬೆಂಗಳೂರಿಗರೇ ಮುಂದು – ಸರಾಸರಿ ಖರೀದಿಯಲ್ಲಿ ಮುಂಬೈ ಫಸ್ಟ್

    ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ಕಾಯ್ದೆ, ಭಾರತೀಯ ದಂಡ ಸಂಹಿತೆ ಮತ್ತು ವಿನಾಶ ಮತ್ತು ಆಸ್ತಿ ನಷ್ಟ ತಡೆ 1981ರ‌ ಕಾಯ್ದೆಯ ಅಡಿಯಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ವಿರುದ್ಧ ಈ ವರ್ಷ ಮಾರ್ಚ್‌ನಲ್ಲಿ ಆರೋಪ ಪಟ್ಟಿ ಸಲ್ಲಿಸಿದ್ದು, ಈಗ ಇತರ ಆರೋಪಿಗಳ ಕುರಿತು ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ

    9 ಆರೋಪಿಗಳ ಪೈಕಿ ಮಾಜ್ ಮುನೀರ್ ಅಹಮದ್, ಸೈಯದ್ ಯಾಸಿನ್, ರೀಶಾನ್ ತಾಜುದ್ದೀನ್ ಶೇಖ್, ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹಮದ್ ಕೆಎ ಮೆಕ್ಯಾನಿಕಲ್ (Mechanical) ಮತ್ತು ಎಲೆಕ್ಟ್ರಿಕಲ್ (Electrical) ಎಂಜಿನಿಯರಿಂಗ್ ಅಧ್ಯಯನ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭೀಕರ ಬಸ್‌ ದುರಂತ – 25 ಮಂದಿ ಸಜೀವ ದಹನ

    ಆರೋಪಿಗಳು ರೋಬೊಟಿಕ್ಸ್ ಕಲಿತು ಭವಿಷ್ಯದಲ್ಲಿ ಭಾರತದಲ್ಲಿ ಐಸಿಸ್ ಅಜೆಂಡಾವನ್ನು ಮುಂದುವರಿಸುವ ಸಲುವಾಗಿ ಭಯೋತ್ಪಾದಕ ದಾಳಿಗಳನ್ನು ಮತ್ತು ಅದರ ಕೌಶಲ್ಯವನ್ನು ಕಲಿಯುವಂತೆ ವಿದೇಶಿ ಮೂಲದ ಐಸಿಸ್ ಹ್ಯಾಂಡ್ಲರ್‌ನಿಂದ ಟಾಸ್ಕ್ ನೀಡಲಾಗಿತ್ತು. ಅಲ್ಲದೇ ಮೊಹಮ್ಮದ್ ಶಾರಿಖ್, ಮಾಜ್ ಮುನೀರ್ ಅಹಮದ್ ಮತ್ತು ಸೈಯದ್ ಯಾಸಿನ್ ಭಯೋತ್ಪಾದಕ ಸಂಘಟನೆಯಾದ ಐಎಸ್ ನಿರ್ದೇಶನದ ಮೇರೆಗೆ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ಉತ್ತೇಜಿಸಲು ವಿದೇಶದಲ್ಲಿರುವ ಐಎಸ್ ಕಾರ್ಯಕರ್ತರೊಂದಿಗೆ ಶಾಮೀಲಾಗಿ ಕ್ರಿಮಿನಲ್ ಸಂಚುಗಳನ್ನು ರೂಪಿಸಿದ್ದರು ಎಂದು ಎನ್‌ಐಎ ತನಿಖೆಯಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮಣಿಪುರ ಸಿಎಂ ಬಿರೇನ್ ಸಿಂಗ್ ರಾಜೀನಾಮೆ ಪತ್ರವನ್ನು ಹರಿದು ಹಾಕಿದ ಮಹಿಳೆ

    ರಾಷ್ಟ್ರೀಯ ಭದ್ರತೆ, ಏಕತೆ ಮತ್ತು ದೇಶದ ಸಾರ್ವಭೌಮತೆಗೆ ಧಕ್ಕೆ ತರುವ ಉದ್ದೇಶದಿಂದ ಮೂವರು ಆರೋಪಿಗಳು ಇತರೆ ಆರೋಪಿಗಳನ್ನು ನೇಮಕ ಮಾಡಿಕೊಂಡಿದ್ದರು. ಅವರ ಆನ್‌ಲೈನ್ ಹ್ಯಾಂಡ್ಲರ್ ಆರೋಪಿಗಳಿಗೆ ಕ್ರಿಪ್ಟೋ ಕರೆನ್ಸಿಗಳ (Crypto Currency) ಮೂಲಕ ಹಣವನ್ನು ನೀಡಲಾಗುತ್ತಿತ್ತು. ಈ ಟ್ರಯಲ್ ಬ್ಲಾಸ್ಟ್ ಕುರಿತು ಸೆಪ್ಟೆಂಬರ್ 19 2023ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ನವೆಂಬರ್ 15ರಂದು ಈ ಪ್ರಕರಣವನ್ನು ಎನ್‌ಐಎ ತೆಗೆದುಕೊಂಡು ಕೇಸ್ ಅನ್ನು ಮರುದಾಖಲಿಸಿತ್ತು. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    ಮಂಡ್ಯ: ತೀವ್ರ ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‍ಗೆ ಸಿದ್ಧತೆ ನಡೆಸಲಾಗಿದ್ದು, ರೈತರ ಧರಣಿಗೆ ಮಣಿದು ತಾತ್ಕಾಲಿಕ ತಡೆ ನೀಡಲಾಗಿದೆ. ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ ಬ್ಲಾಸ್ಟಿಂಗ್‍ಗೆ ತಯಾರಿ ನಡೆಸಲಾಗುತ್ತಿತ್ತು. ಇದೀಗ ತೀವ್ರ ವಿರೋಧದಿಂದಾಗಿ `ಟ್ರಯಲ್ ಬ್ಲಾಸ್ಟ್’ ಮುಂದೂಡಿಕೆ ಮಾಡಲಾಗಿದೆ.

    ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟದಿಂದ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ. ಆದರೆ ಟ್ರಯಲ್ ಬ್ಲಾಸ್ಟ್ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರೆಗೆ ಹೋರಾಟ ಮುಂದುವರಿಸಲಿದ್ದಾರೆ. ಕೆಆರ್‍ಎಸ್ ಹಾಗೂ ಬೇಬಿ ಬೆಟ್ಟದ ಸುತ್ತಮುತ್ತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು: ಸಿಎಂಗೆ ಸುಮಲತಾ ಪತ್ರ

    ಇಂದು ಕೆಆರ್‍ಎಸ್ ಬಳಿಯ ಕಟ್ಟೇರಿಯ ಬಳಿ ಸಂಪೂರ್ಣ ಟ್ರಯಲ್ ಬ್ಲಾಸ್ಟ್ ನಿಷೇಧವಾಗಬೇಕೆಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ನಿಲುವು ಬರುವವರೆಗೆ ಪ್ರತಿಭಟನೆ ಮುಂದುವರಿಯಲಿದ್ದು, ದಿನಕ್ಕೊಂದು ವಿಭಿನ್ನ ಪ್ರತಿಭಟನೆ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಂತೆಯೇ ಇತ್ತ ಪ್ರಮೋದಾದೇವಿ ಹಾಗೂ ಸಂಸದೆ ಸುಮಲತಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಪತ್ರ ಬರೆದಿದ್ದಾರೆ. ಕೆಆರ್‍ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.

    ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್‍ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಕೆಆರ್‍ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    ಮಂಡ್ಯ: ತೀವ್ರ ವಿರೋಧದ ನಡುವೆಯೂ ಕೆಆರ್‌ಎಸ್‌ ಜಲಾಶಯದ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಗೆ ಕ್ಷಣಗಣನೆ ಆರಂಭವಾಗಿದೆ. ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆಸಲು ಸೋಮವಾರ ಪರಿಶೀಲನೆಗೆ ಬಂದ ತಜ್ಞರ ವಿರುದ್ಧ ರೈತರು ಪರ, ವಿರೋಧ ಪ್ರತಿಭಟನೆಗಳು ತಾರಕಕ್ಕೇರಿದೆ.

    ಬ್ಲಾಸ್ಟಿಂಗ್ ವಿರುದ್ಧ ರೈತರ ಸಂಘದ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದ್ದಾರೆ. ಇದನ್ನು ಕಾವೇರಿಪುರದ ಬಳಿ ಪೊಲೀಸರು ತಡೆದ್ರು. ಈ ವೇಳೆ ವಾಕ್ಸಮರ ನಡೀತು. ಇದೇ ಹೊತ್ತಲ್ಲಿ ಕಾವೇರಿಪುರ ಗ್ರಾಮಸ್ಥರು ನಮಗೆ ಗಣಿಗಾರಿಕೆ ಬೇಕು, ಟ್ರಯಲ್ ಬ್ಲಾಸ್ಟ್ ಮಾಡಿ ಎಂದು ಆಗ್ರಹಿಸಿದ್ರು. ಎರಡು ಗುಂಪುಗಳ ಮಧ್ಯೆ ಜಟಾಪಟಿ ನಡೀತು. ಕೊನೆಗೆ ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ್ರು. ಡಿಸಿ ನಡೆಸಿದ ಓಲೈಕೆ ಯತ್ನವೂ ವಿಫಲವಾಗಿದೆ. ಇದನ್ನೂ ಓದಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ – ಸಿಎಂ ಬೊಮ್ಮಾಯಿ ಅಂಕಿತ

    ರೈತರು ಡಿಸಿ ಕಚೇರಿಯಲ್ಲಿಯೇ ಧರಣಿ ಕುಳಿತಿದ್ದಾರೆ. ಈ ಮಧ್ಯೆ ಮೈಸೂರಿನ ರಾಜಮನೆತನವೂ ಟ್ರಯಲ್ ಬ್ಲಾಸ್ಟಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಂಡ್ಯ ಡಿಸಿಗೆ ಪತ್ರ ಬರೆದಿದೆ. ನಮ್ಮ ಅನುಮತಿ ಪಡೆಯದೇ ಟ್ರಯಲ್ ಬ್ಲಾಸ್ಟ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದು ಪ್ರಮೋದಾದೇವಿ ತಗಾದೆ ತೆಗೆದಿದ್ದಾರೆ. ಕೂಡ್ಲೇ ಅನುಮತಿ ಹಿಂಪಡೆಯಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]