Tag: tribal women

  • ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಡಾನ್ಸ್- ವೀಡಿಯೋ ವೈರಲ್

    ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಡಾನ್ಸ್- ವೀಡಿಯೋ ವೈರಲ್

    ಪಣಜಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗೋವಾದಲ್ಲಿ ಬುಡಕಟ್ಟು ಮಹಿಳೆಯರೊಂದಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ನಿನ್ನೆ ಗೋವಾಕ್ಕೆ ಬಂದಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ, ಚುನಾವಣಾ ಕಣದಲ್ಲಿರುವ ಮೋರ್ಪಿರ್ಲಾ ಗ್ರಾಮದಲ್ಲಿ ಬುಡಕಟ್ಟು ಮಹಿಳೆಯರೊಂದಿಗೆ ಹೆಜ್ಜೆ ಹಾಕುತ್ತಾ ಜಾನಪದ ನೃತ್ಯ ಮಾಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?: ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ 43 ಸೆಕೆಂಡುಗಳ ವೀಡಿಯೋ ಕ್ಲಿಪ್‍ನಲ್ಲಿ, ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಪು ಸೀರೆಯನ್ನು ಧರಿಸಿ ಬುಡಕಟ್ಟು ಜನಾಂಗದವರ ಹಾಡಿಗೆ ತಕ್ಕತೆ ಹೆಜ್ಜೆ ಹಾಕುತ್ತಿರುವುದನ್ನು ಕಾಣಬಹುದಾಗಿದೆ. ಬುಡಕಟ್ಟು ಮಹಿಳೆಯರು ಜೊತೆ ಜೊತೆಯಾಗಿ ಪ್ರಿಯಾಂಕಾ ಗಾಂಧಿ ಸಂತೋಷದಿಂದ ಹೆಜ್ಜೆ ಹಾಕುತ್ತಿದ್ದಾರೆ.