Tag: Tricolor

  • BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    BRICS ಶೃಂಗಸಭೆ: ನೆಲದ ಮೇಲಿದ್ದ ತ್ರಿವರ್ಣ ಧ್ವಜವನ್ನು ಕೈಗೆತ್ತಿಕೊಂಡು ಗೌರವ ತೋರಿದ ಮೋದಿ

    ಕೇಪ್‌ಟೌನ್: ಬ್ರಿಕ್ಸ್ ಶೃಂಗಸಭೆಯಲ್ಲಿ (BRICS Summit) ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದಕ್ಷಿಣ ಆಫ್ರಿಕಾದ (South Africa) ಜೋಹನ್ಸ್‌ಬಗ್‌ಗೆ (Johannesburg) ತೆರಳಿದ್ದಾರೆ. ಪ್ರವಾಸದಲ್ಲಿರುವ ಮೋದಿಯವರು ಭಾರತದ ತ್ರಿವರ್ಣ ಧ್ವಜಕ್ಕೆ (Tricolor) ಗೌರವ ತೋರಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ಬಗ್ಗೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗುತ್ತಿದೆ.

    ಶೃಂಗಸಭೆಯಲ್ಲಿ ಬ್ರೆಜಿಲ್, ರಷ್ಯಾ, ಭಾರತ, ಚೀನಾ ಹಾಗೂ ದಕ್ಷಿಣ ಆಫ್ರಿಕಾದ ನಾಯಕರನ್ನು ಗ್ರೂಪ್ ಫ್ರೋಟೋ ಕ್ಲಿಕ್ಕಿಸಿಕೊಳ್ಳಲು ವೇದಿಕೆಗೆ ಕರೆಯಲಾಗಿತ್ತು. ಈ ವೇಳೆ ನರೇಂದ್ರ ಮೋದಿ ಅವರು ವೇದಿಕೆಯ ನೆಲದ ಮೇಲೆ ತಾವು ನಿಲ್ಲಬೇಕಾಗಿದ್ದ ಸ್ಥಳದಲ್ಲಿ ಪುಟ್ಟ ತ್ರಿವರ್ಣ ಧ್ವಜವನ್ನು ಗಮನಿಸಿದ್ದಾರೆ.

    ತಕ್ಷಣ ಮೋದಿ ಧ್ವಜದ ಮೇಲೆ ತಾವು ಕಾಲಿಡದಂತೆ ನೋಡಿಕೊಂಡು, ಪುಟ್ಟ ರಾಷ್ಟ್ರ ಧ್ವಜವನ್ನು ಕೈಗೆತ್ತಿಕೊಂಡು, ತಮ್ಮ ಜೇಬಿನಲ್ಲಿ ಇರಿಸಿಕೊಂಡರು. ಇದನ್ನು ಗಮನಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲೆ ರಾಮಾಫೋಸಾ ಕೂಡಾ ಮೋದಿಯವರನ್ನು ಅನುಸರಿಸಿ, ನೆಲದ ಮೇಲೆ ಇಡಲಾಗಿದ್ದ ದಕ್ಷಿಣ ಆಫ್ರಿಕಾದ ಧ್ವಜವನ್ನು ಎತ್ತಿಕೊಂಡರು. ಇದನ್ನೂ ಓದಿ: ಆ.26ಕ್ಕೆ ಬೆಂಗಳೂರಿಗೆ ಮೋದಿ – ಇಸ್ರೋ ಕೇಂದ್ರ ಕಚೇರಿಗೆ ಭೇಟಿ

    ಇದಾದ ಬಳಿಕ ಮೋದಿ ಅವರು ವೇದಿಕೆಯಲ್ಲಿ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡಾ ಸಿಲ್ವಾ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಾಫೋಸಾ, ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡರು.

    ಇದಕ್ಕೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಮೋದಿ ರಾಷ್ಟ್ರಧ್ವಜಕ್ಕೆ ತೋರಿದ ಗೌರವದ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಈಗ ಕರ್ನಾಟಕಕ್ಕೂ ಚಂದ್ರನಿಗೂ ನೇರ ಸಂಪರ್ಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡ ಹಿಜ್ಬುಲ್ ಭಯೋತ್ಪಾದಕನ ಸಹೋದರ

    ಶ್ರೀನಗರ: ಸ್ವಾತಂತ್ರ್ಯ ದಿನಾಚರಣೆಗೂ (Independence Day) ಮುನ್ನ ಹಿಜ್ಬುಲ್ ಭಯೋತ್ಪಾದಕನ (Hizbul Terrorist) ಸಹೋದರ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿರುವ ತನ್ನ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸಿ ಹರ್ ಘರ್ ತಿರಂಗಾ (Har Ghar Tiranga) ಅಭಿಯಾನದಲ್ಲಿ ಪಾಲ್ಗೊಂಡಿದ್ದಾನೆ.

    ಹಿಜ್ಬುಲ್ ಭಯೋತ್ಪಾದಕ ಜಾವಿದ್ ಮಟ್ಟೂ (Javid Mattoo) ಸಹೋದರ ರಯೀಸ್ ಮಟ್ಟೂ ತನ್ನ ಮನೆಯ ಹೊರಗಡೆ ತ್ರಿವರ್ಣ ಧ್ವಜವನ್ನು ಹಾರಿಸಿರುವುದು ವೀಡಿಯೋವೊಂದರಲ್ಲಿ ಕಂಡುಬಂದಿದೆ. ಜಾವಿದ್ ಮಟ್ಟೂ ಹಿಜ್ಬುಲ್ ಮುಜೈದೀನ್ ಭಯೋತ್ಪಾದಕ ಮುಜೈದೀನ್ ಸಂಘಟನೆಗೆ ಸಂಬಂಧಿಸಿದ ಸಕ್ರಿಯ ಭಯೋತ್ಪಾದಕ. ಭದ್ರತಾ ಏಜೆನ್ಸಿಗಳು ಗುರಿಯಾಗಿಸಿಕೊಂಡಿರುವ ಟಾಪ್ 10 ಭಯೋತ್ಪಾದಕರ ಪಟ್ಟಿಯಲ್ಲಿ ಈತನೂ ಸೇರಿದ್ದಾನೆ.

    ಪ್ರಧಾನಿ ನರೇಂದ್ರ ಮೋದಿ ಸ್ವತಂತ್ರ್ಯ ದಿನಾಚರಣೆಗೂ ಮುನ್ನ ಆಗಸ್ಟ್ 13ರಿಂದ 15ರ ವರೆಗೆ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಕರೆ ನೀಡಿದ್ದಾರೆ. ಭಾನುವಾರ ಶ್ರೀನಗರದಲ್ಲಿ ಬೃಹತ್ ‘ತಿರಂಗ’ ರ‍್ಯಾಲಿಯನ್ನು ಕೈಗೊಳ್ಳಲಾಯಿತು. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: 7 ವರ್ಷಗಳ ಬಳಿಕ ಭಾರತದ ವಿರುದ್ಧ T20 ಸರಣಿ ಜಯ – ಹೊಸ ದಾಖಲೆ ಬರೆದ ವಿಂಡೀಸ್‌

    ಜಮ್ಮು ಮತ್ತು ಕಾಶ್ಮೀರದಲ್ಲಿ ತಿರಂಗಾ ಎತ್ತಲು ಯಾರೂ ಉಳಿಯುವುದಿಲ್ಲ ಎಂದು ಹೇಳುತ್ತಿದ್ದ ಅವರು, ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಬ್ಬ ಯುವಕರು ದೇಶದ ಇತರ ಭಾಗದ ಜನರಂತೆ ರಾಷ್ಟ್ರಧ್ವಜವನ್ನು ಪ್ರೀತಿಸುತ್ತಾರೆ ಎಂದು ಅರ್ಥಮಾಡಿಕೊಂಡಿದ್ದಾರೆ ಎಂದು ಮನೋಜ್ ಸಿನ್ಹಾ ಯಾವುದೇ ಹೆಸರನ್ನು ಎತ್ತದೇ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಭಾನುವಾರ ರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೊಫೈಲ್ ಫೋಟೋದಲ್ಲಿ ತಿರಂಗಾ ರಾರಾಜಿಸಲಿ – ಭಾರತೀಯರಿಗೆ ಪ್ರಧಾನಿ ಮೋದಿ ಕರೆ

    ಪ್ರೊಫೈಲ್ ಫೋಟೋದಲ್ಲಿ ತಿರಂಗಾ ರಾರಾಜಿಸಲಿ – ಭಾರತೀಯರಿಗೆ ಪ್ರಧಾನಿ ಮೋದಿ ಕರೆ

    ನವದೆಹಲಿ: ಸ್ವಾತಂತ್ರ್ಯ ದಿನದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಲ್ಲಿ (Har Ghar Tiranaga movement) ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತೀಯರಿಗೆ ಕರೆ ನೀಡಿದ್ದಾರೆ.

    ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರಗಳನ್ನು (DP) ತ್ರಿವರ್ಣ ಧ್ವಜವಾಗಿ (Tricolor) ಬದಲಾಯಿಸಲು ಮೋದಿ ಭಾರತೀಯರಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶ ಹಾಗೂ ಭಾರತೀಯರ ನಡುವೆ ಬಾಂಧವ್ಯವನ್ನು ಗಾಢವಾಗಿಸೋಣ ಎಂದು ಅವರು ಹೇಳಿದ್ದಾರೆ.

    ಆಗಸ್ಟ್ 13ರಿಂದ 15ರ ನಡುವೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಚರಿಸಿ. ತಿರಂಗಾ ಜೊತೆಗಿನ ಫೋಟೋ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ (harghartiranga.com.) ಅಪ್‌ಲೋಡ್ ಮಾಡಿ. ಪ್ರತಿಯೊಬ್ಬ ಭಾರತೀಯನೂ ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ಇದು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: BMTC ಬಸ್‍ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ- ಫ್ರೀ ಟಿಕೆಟ್ ನೀಡಲು ನಿರಾಕರಿಸಿ ನಿಂದನೆ

    ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ (ಭಾನುವಾರ) ಪ್ರಾರಂಭವಾಗುತ್ತದೆ. ಹಾಗೂ 77ನೇ ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರ ವರೆಗೆ ಮುಂದುವರಿಯುತ್ತದೆ. ನಾಗರಿಕರಲ್ಲಿ ದೇಶಭಕ್ತಿಯ ಪ್ರಜ್ಞೆಯನ್ನು ಬಲಪಡಿಸಲು ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸ್ಮರಿಸುವ ಸಲುವಾಗಿ ಸಂಸೃತಿ ಸಚಿವಾಲಯ ಈ ಅಭಿಯಾನವನ್ನು ಆಯೋಜಿಸಿದೆ. ಇದನ್ನೂ ಓದಿ: ಲೋಕಸಭಾ ಟಿಕೆಟ್ ನೀಡುವ ವಿಚಾರದಲ್ಲಿ ರಾಜ್ಯ, ರಾಷ್ಟ್ರ ಸಮಿತಿಯವರು ತೀರ್ಮಾನ ಮಾಡ್ತಾರೆ: ಈಶ್ವರಪ್ಪ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅತಿಕ್ ಸಮಾಧಿಗೆ ತ್ರಿವರ್ಣ ಧ್ವಜ ಹಾಕಿದ ಕಾಂಗ್ರೆಸ್ ನಾಯಕ ಅರೆಸ್ಟ್

    ಅತಿಕ್ ಸಮಾಧಿಗೆ ತ್ರಿವರ್ಣ ಧ್ವಜ ಹಾಕಿದ ಕಾಂಗ್ರೆಸ್ ನಾಯಕ ಅರೆಸ್ಟ್

    ಲಕ್ನೋ: ಹತ್ಯೆಯಾದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತಿಕ್ ಅಹ್ಮದ್ (Atiq Ahmed) ಸಮಾಧಿ (Grave) ಮೇಲೆ ರಾಷ್ಟ್ರ ಧ್ವಜವನ್ನು (Tricolor) ಇರಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ ಕಾಂಗ್ರೆಸ್‌ನ ನಾಯಕನನ್ನು (Congress Leader) ಅಧಿಕಾರಿಗಳು ಬಂಧಿಸಿದ್ದಾರೆ.

    ಓಲ್ಡ್ ಸಿಟಿ ಪ್ರದೇಶದ ಕಸರಿ ಮಸಾರಿ ಸ್ಮಶಾನದಲ್ಲಿ ಅತಿಕ್ ಸಮಾಧಿಯಿದೆ. ಅಲ್ಲಿನ ಸ್ಥಳೀಯ ಕಾಂಗ್ರೆಸ್ ನಾಯಕ ರಾಜ್‌ಕುಮಾರ್ ಸಿಂಗ್ ರಜ್ಜು (Rajkumar Singh Rajju) ಅತಿಕ್ ಸಮಾಧಿ ಮೇಲೆ ರಾಷ್ಟ್ರಧ್ವಜವನ್ನು ಇರಿಸುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ ಬಳಿಕ ಧೂಮಗಂಜ್ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಅತಿಕ್ ಮತ್ತು ಆತನ ಕಿರಿಯ ಸಹೋದರ ಅಶ್ರಫ್ ಏಪ್ರಿಲ್ 15 ರಂದು ರಾತ್ರಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಮೂವರು ಬಂದೂಕುಧಾರಿಗಳು ಗುಂಡಿಕ್ಕಿ ಅವರಿಬ್ಬರನ್ನೂ ಕೊಂದಿದ್ದರು. ಬಳಿಕ ಏಪ್ರಿಲ್ 16ರ ಸಂಜೆ ತಡವಾಗಿ ಅತಿಕ್ ಮತ್ತು ಅಶ್ರಫ್‌ನ ಸಮಾಧಿ ಮಾಡಲಾಯಿತು. ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿರುವ ವೀಡಿಯೊದಲ್ಲಿ ರಾಜ್‌ಕುಮಾರ್ ಸಿಂಗ್ ಅತಿಕ್‌ನನ್ನು ಹುತಾತ್ಮ ಎಂದು ಕರೆದಿದ್ದಾನೆ. ಅತಿಕ್‌ಗೆ ಭಾರತ ರತ್ನ ನೀಡಬೇಕೆಂದು ಎಂದು ಹೇಳಿ ಸಮಾಧಿಯ ಮೇಲೆ ತ್ರಿವರ್ಣ ಧ್ವಜವನ್ನು ಹರಡಿರುವುದು ಕಂಡುಬಂದಿದೆ. ಆದರೆ ಈ ವೀಡಿಯೋ ಕ್ಲಿಪ್‌ನ ಸತ್ಯಾಸತ್ಯತೆ ಇನ್ನೂ ದೃಢಪಟ್ಟಿಲ್ಲ. ಇದನ್ನೂ ಓದಿ: ಗ್ಯಾಂಗ್‍ಸ್ಟಾರ್ ಅತೀಕ್ ಅಹ್ಮದ್ ಬೆಂಬಲಿಗ ಕಾಂಗ್ರೆಸ್ ಸ್ಟಾರ್ ಪ್ರಚಾರಕ – ಕರಂದ್ಲಾಂಜೆ ಖಂಡನೆ

    ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದ ವೀಡಿಯೋದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬುಧವಾರ ಆರೋಪಿ ಕಾಂಗ್ರೆಸ್ ನಾಯಕನನ್ನು ಬಂಧಿಸಿದ್ದಾರೆ. ಈ ನಡುವೆ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರದೀಪ್ ಮಿಶ್ರಾ ಅಂಶುಮಾನ್ ಮಾತನಾಡಿ, ರಾಜ್‌ಕುಮಾರ್‌ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಲಾಗಿದೆ. ಅತಿಕ್ ಬಗೆಗಿನ ರಜ್ಜು ಹೇಳಿಕೆಗಳು ಹಾಗೂ ಕೃತ್ಯಗಳು ಆತನ ವೈಯಕ್ತಿಕ ದೃಷ್ಟಿಕೋನದ್ದಾಗಿದೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅತೀಕ್ ಅಹ್ಮದ್ ಪ್ರಕರಣ – ಐವರು ಪೊಲೀಸರ ಅಮಾನತು

  • ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಕೇವಲ ತ್ರಿವರ್ಣ ಧ್ವಜ ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ: ಉದ್ಧವ್ ಠಾಕ್ರೆ ಟಾಂಗ್

    ಮುಂಬೈ: ಕೇವಲ ತ್ರಿವರ್ಣ ಧ್ವಜವನ್ನು ಹಾರಿಸುವುದರಿಂದ ನಾವು ದೇಶಭಕ್ತರಾಗುವುದಿಲ್ಲ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದರು.

    ಬಿಜೆಪಿ ನೇತೃತ್ವದ ಸರ್ಕಾರ ಆಯೋಜಿಸಿರುವ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಮಾತನಾಡಿದ ಠಾಕ್ರೆ, ಇದು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿದೆ ಎಂಬುದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಆದರೆ 75 ವರ್ಷಗಳ ಬಳಿಕವೂ ಪ್ರಜಾಪ್ರಭುತ್ವ ಎಷ್ಟು ಉಳಿದಿದೆ ಎಂಬುದನ್ನು ನಾವು ಯೋಚಿಸಬೇಕಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾವಲಂಬಿ ಭಾರತ ಕಟ್ಟಲು ಕೈಜೋಡಿಸಿ: ರಾಜ್ಯಪಾಲರ ಮನವಿ

    ಕೇಂದ್ರ ಸರ್ಕಾರ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಕೇಳಿದೆ. ಆದರೆ ನಾನೊಂದು ವ್ಯಂಗ್ಯ ಚಿತ್ರ ನೋಡಿದೆ. ಅದರಲ್ಲಿ ಬಡವನೊಬ್ಬ ಹೇಳುತ್ತಾನೆ, ನನ್ನ ಬಳಿ ತ್ರಿವರ್ಣ ಧ್ವಜವಿದೆ. ಆದರೆ ಅದನ್ನು ಸ್ಥಾಪಿಸಲು ಮನೆಯಿಲ್ಲ. ಇದು ಬಡವರ ಪರಿಸ್ಥಿತಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಸಿಎಂ ಚಾಲನೆ – ಭವ್ಯ ಭಾರತ ಕಟ್ಟಲು ಯುವಜನತೆ ಸನ್ನದ್ಧರಾಗುವಂತೆ ಕರೆ

    ಇಂದಿಗೂ ಚೀನಾದವರು ಅರುಣಾಚಲ ಪ್ರದೇಶದಿಂದ ಭಾರತವನ್ನು ಪ್ರವೇಶಿಸುತ್ತಿದ್ದಾರೆ. ನಾವು ನಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾಕಿದ ತಕ್ಷಣ ಅವರು ಹಿಂತಿರುಗುವುದಿಲ್ಲ. ತ್ರಿವರ್ಣ ನಮ್ಮ ಹೃದಯದಲ್ಲಿಯೂ ಇರಬೇಕು ಎಂದರು.

    Live Tv
    [brid partner=56869869 player=32851 video=960834 autoplay=true]

  • ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ಹರ್ ಘರ್ ತಿರಂಗ: ರಾಷ್ಟ್ರಧ್ವಜವನ್ನ ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸಲಿದೆ ಭಾರತೀಯ ಅಂಚೆ ಸೇವೆ

    ನವದೆಹಲಿ: ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮುನ್ನ, ಭಾರತೀಯ ಅಂಚೆ ಸೇವೆಯು ರಾಷ್ಟ್ರಧ್ವಜವನ್ನು ಉಚಿತವಾಗಿ ಮನೆ ಬಾಗಿಲಿಗೆ ತಲುಪಿಸುತ್ತಿದೆ.

    ತ್ರಿವರ್ಣ ಧ್ವಜವನ್ನು 25 ರೂ. ದರದಲ್ಲಿ ಇಂಡಿಯಾ ಪೋಸ್ಟ್‌ನ ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಖರೀದಿಸಬಹುದು. ಇದರಲ್ಲಿ ಯಾವುದೇ ಜಿಎಸ್‍ಟಿ ಅನ್ವಯಿಸುವುದಿಲ್ಲ. ಧ್ವಜವನ್ನು ಖರೀದಿಸಲು ಆಸಕ್ತಿಯುಳ್ಳವರು ePostoffice ಪೋರ್ಟಲ್‍ನಿಂದ ಆರ್ಡರ್ ಮಾಡಬಹುದು. ಪರ್ಯಾಯವಾಗಿ, ರಾಷ್ಟ್ರಧ್ವಜವನ್ನು ಖರೀದಿಸಲು ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು. ಇದನ್ನೂ ಓದಿ: ನಿರಂತರ ಜಿಟಿ ಜಿಟಿ ಮಳೆ – ಮನೆ ಗೋಡೆ ಕುಸಿದು ಬಿದ್ದು ಯುವಕ ಸಾವು 

    ಇಂಡಿಯಾ ಪೋಸ್ಟ್ ಈ ಕುರಿತು ಟ್ವಿಟ್ಟರ್‌ನಲ್ಲಿ, ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ತಿರಂಗಾ ಮಾರಾಟ ಮತ್ತು ವಿತರಣೆಯನ್ನು ಸುಲಭಗೊಳಿಸಲಾಗುವುದು. 2022ರ ಸ್ವಾತಂತ್ರ್ಯ ದಿನಾಚರಣೆಯ ಮೊದಲ ರಜಾದಿನಗಳಲ್ಲಿ ಎಲ್ಲ ಅಂಚೆ ಕಚೇರಿಗಳು ಕಾರ್ಯನಿರ್ವಹಿಸುತ್ತವೆ ಎಂದು ಬರೆದು ಪೋಸ್ಟ್ ಮಾಡಿದೆ.

    ಸಾರ್ವಜನಿಕ ರಜಾದಿನಗಳಲ್ಲಿ ರಾಷ್ಟ್ರಧ್ವಜಗಳನ್ನು ಅಂಚೆ ಕಚೇರಿಗಳಲ್ಲಿ ಕನಿಷ್ಠ ಒಂದು ಕೌಂಟರ್ ಮೂಲಕ ಮಾರಾಟ ಮಾಡಲು ವಿಶೇಷ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ವೆಬ್‍ಸೈಟ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಹೆಂಗಳೆಯರ ಮನಗೆದ್ದ ʼಗೋಬಿ ಮಂಚೂರಿʼ ಮಾಡುವ ಸಿಂಪಲ್ ವಿಧಾನ

    ಕೇಂದ್ರ ಸರ್ಕಾರದ ಬಜೆಟ್ ಡಾಕ್ಯುಮೆಂಟ್ ಪ್ರಕಾರ, ಭಾರತವು 1,55,000 ಅಂಚೆ ಕಛೇರಿಗಳೊಂದಿಗೆ ವಿಶ್ವದ ಅತಿದೊಡ್ಡ ಅಂಚೆ ಜಾಲವನ್ನು ಹೊಂದಿದೆ. 89 ಪ್ರತಿಶತ ಗ್ರಾಮೀಣ ಪ್ರದೇಶಗಳಲ್ಲಿ ಅಂಚೆ ಕಚೇರಿಗಳು ಸ್ಥಾಪನೆಯಾಗಿವೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

    ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

    ನವದೆಹಲಿ: ಕಾಂಗ್ರೆಸ್ ಮತ್ತು ಬಿಜೆಪಿಯ ಟ್ವೀಟ್ ವಾರ್ ಇಂದು ನಿನ್ನೆಯದಲ್ಲ. ದಿನವಿಡೀ ಈ ಎರಡು ಪಕ್ಷಗಳು ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ಮಾಡಿಕೊಳ್ಳುತ್ತಿರುತ್ತೆ. ಅದೇ ರೀತಿ ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ಗೆ ಇರುವುದು ಹುಸಿ ಪ್ರೇಮ ಎನ್ನುವ ಮೂಲಕ ಬಿಜೆಪಿ ಕಿಡಿಕಾರಿದೆ.

    ಆರ್‌ಎಸ್‍ಎಸ್ ಅನ್ನು ರಾಷ್ಟ್ರವಿರೋಧಿ ಸಂಘಟನೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ ಬಳಿಕ ಬಿಜೆಪಿ ತಿರುಗೇಟು ಕೊಟ್ಟಿದೆ.

    ಟ್ವಿಟ್‍ನಲ್ಲಿ ಏನಿದೆ?
    ಕರ್ನಾಟಕದ ಖಾದಿ ಗ್ರಾಮೋದ್ಯೋಗದ ಕಾರ್ಮಿಕರನ್ನು ಭೇಟಿಯಾದಾಗ ರಾಹುಲ್ ಟ್ವೀಟ್ ಮಾಡಿದ್ದು, ಇಂದು ಕರ್ನಾಟಕದ ಹುಬ್ಬಳ್ಳಿಯಲ್ಲಿರುವ ಕರ್ನಾಟಕ ಖಾದಿ ವಿಲೇಜ್ ಇಂಡಸ್ಟ್ರೀಸ್‍ನಲ್ಲಿ ನಮ್ಮ ತ್ರಿವರ್ಣ ಧ್ವಜವನ್ನು ನೇಯುವ ಎಲ್ಲ ಕಾರ್ಮಿಕರನ್ನು ಭೇಟಿಯಾಗಲು ತುಂಬಾ ಸಂತೋಷವಾಗಿದೆ. ತ್ರಿವರ್ಣ ಧ್ವಜವನ್ನು ಯಾವಾಗಲೂ ಎತ್ತರದಲ್ಲಿ ಇರಿಸಲು ಲಕ್ಷಾಂತರ ದೇಶವಾಸಿಗಳು ತಮ್ಮ ಪ್ರಾಣವನ್ನು ತ್ಯಾಗ ಮಾಡಿದರು. ಆದರೆ ಒಂದು ಸಂಘಟನೆಯು ಯಾವಾಗಲೂ ತ್ರಿವರ್ಣ ಧ್ವಜವನ್ನು ಅಳವಡಿಸಿಕೊಳ್ಳಲು ನಿರಾಕರಿಸಿತು. ಇದನ್ನೂ ಓದಿ:  ಭಾರತದ ಮೂರನೇ ಅತಿ ದೊಡ್ಡ ಕಲ್ಲಿದ್ದಲು ಪೂರೈಕೆದಾರ ರಷ್ಯಾ 

    52 ವರ್ಷಗಳ ಕಾಲ ನಾಗ್ಪುರದ ತನ್ನ ಪ್ರಧಾನ ಕಛೇರಿಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಿಲ್ಲ ಮತ್ತು ಅದನ್ನು ನಿರಂತರವಾಗಿ ಅವಮಾನಿಸಿತು. ಆರ್‍ಎಸ್‍ಎಸ್ ತನ್ನ ಕೇಂದ್ರ ಕಚೇರಿಯಲ್ಲಿ 52 ವರ್ಷಗಳ ಕಾಲ ತ್ರಿವರ್ಣ ಧ್ವಜವನ್ನು ಏಕೆ ಹಾರಿಸಲಿಲ್ಲ? ಖಾದಿಯಿಂದ ರಾಷ್ಟ್ರಧ್ವಜ ಮಾಡುವವರ ಜೀವನಾಧಾರ ಏಕೆ ನಾಶವಾಗುತ್ತಿದೆ? ಚೀನಾದಿಂದ ಯಂತ್ರ-ನಿರ್ಮಿತ ಪಾಲಿಯೆಸ್ಟರ್ ಧ್ವಜಗಳ ಆಮದನ್ನು ಏಕೆ ಅನುಮತಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದರು.

    ಬಿಜೆಪಿ ಪ್ರತಿಕ್ರಿಯೆ
    ರಾಹುಲ್ ಗಾಂಧಿ ಟ್ವೀಟ್‍ಗೆ ಬಿಜೆಪಿ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಆರ್‍ಜಿ ಅವರ ವಿವಾದಾತ್ಮಕ ಟ್ವೀಟ್‍ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು, ಆರ್‍ಎಸ್‍ಎಸ್ ಕುರಿತು ರಾಹುಲ್ ಗಾಂಧಿ ಮಾಡಿದ ಟ್ವೀಟ್‍ಗೆ ಯಾವುದೇ ಬೆಲೆ ನೀಡಬಾರದು.

    ದೇಶವು ಆರ್‌ಎಸ್‍ಎಸ್ ಸಿದ್ಧಾಂತವನ್ನು ಒಪ್ಪಿಕೊಂಡಿದೆ. ಅದಕ್ಕಾಗಿಯೇ ನಾವು 2 ಸ್ಥಾನಗಳಿಂದ ಹೆಚ್ಚು ಸ್ಥಾನಗಳನ್ನು ತಲುಪಿದ್ದೇವೆ. ಅದನ್ನು ಒಪ್ಪಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ರಾಹುಲ್ ಗಾಂದಿ,ü ಅರೆಕಾಲಿಕ ರಾಜಕಾರಣಿ ಎಂದು ಟೀಕಿಸಿದ್ದಾರೆ.

    ಬಿಜೆಪಿ ನಾಯಕ ರಾಕೇಶ್ ಸಿನ್ಹಾ ಅವರು ಟ್ವೀಟ್ ಮಾಡಿದ್ದು, ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್ ಹುಸಿ ಪ್ರೀತಿ ಹೊಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ಕಾಂಗ್ರೆಸ್ ಸರ್ಕಾರ ನೆಹರು, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಭಾವಚಿತ್ರಗಳನ್ನು ಇಡಲಾಗಿದೆ. ಅದರಲ್ಲಿ ತ್ರಿವರ್ಣ ಧ್ವಜ ಅವರ ಕಾಲುಗಳನ್ನು ಸ್ಪರ್ಶಿಸುತ್ತಿದೆ! ತಿರಂಗದ ಮೇಲಿನ ಅವರ ಹುಸಿ ಪ್ರೀತಿಗೆ ನಾಚಿಕೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಮಗನ 2ನೇ ವರ್ಷದ ಬರ್ತ್‍ಡೇಗೆ ಕುದುರೆ ಓಟದ ಸ್ಪರ್ಧೆ ಆಯೋಜಿಸಿದ್ದ ತಂದೆ 

    ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಪಕ್ಷವು ‘ನಮ್ಮ ರಾಷ್ಟ್ರೀಯ ಚಿಹ್ನೆಗಳು ಮತ್ತು ಇತಿಹಾಸದೊಂದಿಗೆ ಕಠೋರವಾಗಿದೆ’ ಎಂದು ಕರೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಯಾಗರಾ ಫಾಲ್ಸ್ ಮೇಲೆ ತ್ರಿವರ್ಣ- ಸ್ಟೇ ಸ್ಟ್ರಾಂಗ್ ಇಂಡಿಯಾ ಎಂದ ಕೆನಡಾ

    ನಯಾಗರಾ ಫಾಲ್ಸ್ ಮೇಲೆ ತ್ರಿವರ್ಣ- ಸ್ಟೇ ಸ್ಟ್ರಾಂಗ್ ಇಂಡಿಯಾ ಎಂದ ಕೆನಡಾ

    ನವದೆಹಲಿ: ಭಾರತದಲ್ಲಿನ ಕೊರೊನಾ ಪರಿಸ್ಥಿತಿ ಕಂಡು ಇಂತಹ ಕಠಿಣ ಪರಿಸ್ಥಿತಿಯಲ್ಲಿ ನಾವು ಭಾರತದ ಜೊತೆಗಿದ್ದೇವೆ ಎಂದು ಧೈರ್ಯ ತುಂಬಲು ಹಲವು ರಾಷ್ಟ್ರಗಳು ವಿಶೇಷ, ವಿಭಿನ್ನವಾಗಿ ಕಾಳಜಿ ತೋರಿಸುತ್ತಿವೆ. ದೇಶದ ಪ್ರತಿಷ್ಠಿತ ಕಟ್ಟಡಗಳು, ಸ್ಥಳಗಳಲ್ಲಿ ಭಾರತದ ತ್ರಿವರ್ಣ ಧ್ವಜದ ಬಣ್ಣ ಹಾಗೂ ಸ್ಟೇ ಸ್ಟ್ರಾಂಗ್ ಇಂಡಿಯಾ ಎಂದು ಹೇಳುತ್ತಿವೆ. ಇದೀಗ ಕೆನಡಾ ಸಹ ಇದೇ ರೀತಿ ವಿಶೇಷ ಸಂದೇಶ ಸಾರಿದ್ದು, ವಿಶ್ವವಿಖ್ಯಾತ ನಯಾಗರಾ ಜಲಪಾತದಲ್ಲಿ ತ್ರಿವರ್ಣ ಧ್ವಜದ ಲೈಟಿಂಗ್ಸ್ ಮೂಲಕ ಗಮನ ಸೆಳೆದಿದೆ.

    ಕೆನಡಾದ ಒಂಟಾರಿಯೊದಲ್ಲಿನ ನಯಾಗರಾ ಫಾಲ್ಸ್ ಗೆ ತ್ರಿವರ್ಣ ಧ್ವಜದ ಬಣ್ಣದ ಲೈಟಿಂಗ್ಸ್ ಮೂಲಕ ಭಾರತದ ಜೊತೆಗಿದ್ದೇವೆ ಎಂಬ ಸಂದೇಶ ಸಾರಿದೆ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 4 ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುವ ಮೂಲಕ ಭಾರತ ಜಾಗತಿಕ ದಾಖಲೆ ಬರೆದಿದೆ. ಭಾರತದೊಟ್ಟಿಗೆ ಇದ್ದೇವೆ ಎಂದು ಭರವಸೆ ಪ್ರದರ್ಶನ ಮಾಡಲು ನಯಾಗರಾ ಫಾಲ್ಸ್‍ಗೆ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ದೀಪಗಳನ್ನು ಬೆಳಗಿಸಲಾಯಿತು. ಸ್ಟೇ ಸ್ಟ್ರಾಂಗ್ ಇಂಡಿಯಾ ಎಂದು ಹೇಳುವ ಮೂಲಕ ನಯಾಗರಾ ಪಾಕ್ರ್ಸ್ ಗಮನಸೆಳೆದಿದೆ.

    ನಯಾಗರಾ ಪಾರ್ಕ್ಸ್ ಈ ಕುರಿತು ಟ್ವೀಟ್ ಮಾಡುತ್ತಿದ್ದಂತೆ ಹಲವರು ರೀ ಟ್ವೀಟ್ ಮಾಡಿದ್ದು, ಲೈಕ್, ಶೇರ್, ಕಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಧನ್ಯವಾದಗಳನ್ನು ಸಹ ತಿಳಿಸಿದ್ದಾರೆ.

    ಇತ್ತೀಚೆಗೆ ಯುಎಇನ ದುಬೈನ ಬುರ್ಜ್ ಖಲಿಫಾದ ಮೇಲೆ ಸಹ ಭಾರತದ ತ್ರಿವರ್ಣ ಧ್ವಜದ ಬಣ್ಣದ ಲೈಟಿಂಗ್ಸ್ ಮಾಡಲಾಗಿತ್ತು. ಈ ಮೂಲಕ ಕೊರೊನಾ ಸಂದರ್ಭದಲ್ಲಿ ಭಾರತದ ಜೊತಿಗಿದ್ದೇವೆ ಎಂಬ ಸಂದೇಶ ಸಾರಲಾಗಿತ್ತು.

    ಭಾರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದು, ಒಂದೇ ದಿನ 4 ಲಕ್ಷಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಯಲ್ಲಿ ಬರೋಬ್ಬರಿ 4,01,993 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಈ ಮೂಲಕ ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ 1,91,64,969ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ 3,523 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಇದುವರೆಗೆ 2,11,853 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ.

    ಸದ್ಯ ದೇಶದಲ್ಲಿ 32,68,710 ಸಕ್ರಿಯ ಪ್ರಕರಣಗಳಿವೆ. 1,56,84,406 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 15,49,89,635 ಮಂದಿ ಮುಂಜಾಗ್ರತಾ ಕ್ರಮವಾಗಿ ವಾಕ್ಸಿನ್ ಪಡೆದುಕೊಂಡಿದ್ದಾರೆ.