Tag: tricolour

  • ಆಸ್ಟ್ರೇಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ

    ಆಸ್ಟ್ರೇಲಿಯಾದಲ್ಲಿ ಮತ್ತೆ ಖಲಿಸ್ತಾನಿಯರ ಅಟ್ಟಹಾಸ – ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ದಾಳಿ

    ಸಿಡ್ನಿ: ಆಸ್ಟ್ರೇಲಿಯಾದಲ್ಲಿ ( Australia) ತ್ರಿವರ್ಣಧ್ವಜ (Tricolour) ಹಿಡಿದ ಭಾರತೀಯರ (Indians) ಮೇಲೆ ಖಲಿಸ್ತಾನಿ (Khalistan) ಬೆಂಬಲಿಗರು ದಾಳಿ ನಡೆಸಿದ್ದಾರೆ.

    ಈ ವೀಡಿಯೋವನ್ನು ಬಿಜೆಪಿ (BJP) ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ ಹಂಚಿಕೊಂಡಿದ್ದಾರೆ. ಸಮಾಜ ವಿರೋಧಿ ಚಟುವಟಿಕೆಯನ್ನು ಎದುರಿಸಬೇಕು ಎಂದು ಬರೆದುಕೊಂಡಿದ್ದಾರೆ.

    ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರು ನಡೆಸುತ್ತಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ಖಂಡಿಸುತ್ತೇನೆ. ಈ ಚಟುವಟಿಕೆಗಳಿಂದ ದೇಶದ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರಲು ಪ್ರಯತ್ನಿಸುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.

    ವೀಡಿಯೋದಲ್ಲಿ ಏನಿದೆ?: ಖಲಿಸ್ತಾನಿ ಧ್ವಜವನ್ನು ಬೀಸುತ್ತಿರುವ ಗುಂಪೊಂದು ತ್ರಿವರ್ಣ ಧ್ವಜವನ್ನು ಹೊತ್ತ ಭಾರತೀಯರ ಮೇಲೆ ದಾಳಿ ನಡೆಸಿದೆ. ಖಲಿಸ್ತಾನಿ ಪರದ ತಂಡ ರಾಡ್‍ಗಳನ್ನು ಹಿಡಿದು ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆಸಿದೆ. ಅಷ್ಟೇ ಅಲ್ಲದೇ ಈ ವೇಳೆ ತ್ರಿವರ್ಣ ಧ್ವಜವನ್ನು ರಸ್ತೆಗೆ ಎಸೆದಿದ್ದಾರೆ.

    ಘಟನೆ ವೇಳೆ ಐವರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದ ಮುಸ್ಲಿಂ ಮಹಿಳೆಯರು ರೆಡ್ಡಿ ಪಕ್ಷಕ್ಕೆ ಸೇರ್ಪಡೆ

    ದಾಳಿಯನ್ನು ಖಂಡಿಸಿರುವ ವಿಕ್ಟೋರಿಯಾ ಪೊಲೀಸರು, ಹಿಂಸಾತ್ಮಕ ದಾಳಿಯ ನಂತರ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಬಂಧಿತ ಇಬ್ಬರು ವ್ಯಕ್ತಿಗಳು ತಮ್ಮ 30 ರ ಹರೆಯದವರಾಗಿದ್ದಾರೆ ಎಂದು ತಿಳಿಸಿದರು.

    ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಕೆಲವೇ ವಾರಗಳ ನಂತರ ಈ ಘಟನೆ ನಡೆದಿದೆ. ಮೆಲ್ಬೋರ್ನ್‍ನಲ್ಲಿ ಕಳೆದ ಕೆಲವು ವಾರಗಳಲ್ಲಿ ಖಲಿಸ್ತಾನ್ ಪರ ಮತ್ತು ಭಾರತ ವಿರೋಧಿ ಘೋಷಣೆಗಳಿಂದ ಮೂರು ದೇವಾಲಯಗಳನ್ನು ವಿರೂಪಗೊಳಿಸಲಾಗಿದೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‍ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ವಾಟರ್ ಬಿಲ್ ಕಟ್ಟದಿದ್ದಕ್ಕೆ ಕನೆಕ್ಷನ್ ಕಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ತ್ರಿವರ್ಣ ಧ್ವಜ ಭಾರತೀಯರಿಗಷ್ಟೇ ಅಲ್ಲ, ವಿದೇಶದಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿ: ಮೋದಿ ಬಣ್ಣನೆ

    ನವದೆಹಲಿ: ತ್ರಿವರ್ಣ ಧ್ವಜವು ಭಾರತೀಯರಿಗಷ್ಟೇ ಅಲ್ಲ, ವಿದೇಶಗಳಲ್ಲಿರುವ ಪ್ರಜೆಗಳಿಗೂ ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ತಿರಂಗಾದ ಮಹತ್ವದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ತಮ್ಮ ಅಧಿಕೃತ ನಿವಾಸದಲ್ಲಿ ಕಾಮನ್‌ವೆಲ್ತ್- 2022 ಕ್ರೀಡಾಕೂಟದ ಎಲ್ಲಾ ಪದಕ ವಿಜೇತರೊಂದಿಗೆ ಸಂವಾದ ನಡೆಸಿದರು. ಯುದ್ಧಪೀಡಿತ ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಲ್ಲಿ ತ್ರಿವರ್ಣ ಧ್ವಜದ ಮಹತ್ವವನ್ನು ಪ್ರಧಾನಿ ಈ ವೇಳೆ ಸ್ಮರಿಸಿದ್ದಾರೆ. ಇದನ್ನೂ ಓದಿ: ‘ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ಗೆ ತಿವಿದ ಹಸು

    ತ್ರಿವರ್ಣ ಧ್ವಜದ ಶಕ್ತಿ ಏನು? ನಾವು ಇದನ್ನು ಸ್ವಲ್ಪ ಕಾಲದ ಹಿಂದೆ ಉಕ್ರೇನ್‌ನಲ್ಲಿ ನೋಡಿದ್ದೇವೆ. ತ್ರಿವರ್ಣ ಧ್ವಜವು ಭಾರತೀಯರಿಗೆ ಮಾತ್ರವಲ್ಲದೆ ಇತರ ದೇಶಗಳಲ್ಲಿರುವ ಪ್ರಜೆಗಳಿಗೆ ಯುದ್ಧಭೂಮಿಯಿಂದ ಹೊರಬರಲು ರಕ್ಷಣಾತ್ಮಕ ಗುರಾಣಿಯಾಗಿದೆ ಎಂದು ಹೇಳಿದ್ದಾರೆ.

    ಕ್ರೀಡಾಪಟುಗಳ ಕಠಿಣ ಪರಿಶ್ರಮ ಮತ್ತು ಸ್ಫೂರ್ತಿದಾಯಕ ಸಾಧನೆಯಿಂದ ದೇಶವು ‘ಆಜಾದಿ ಕಾ ಅಮೃತ್ ಕಾಲ’ವನ್ನು ಪ್ರವೇಶಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಧಾನಿ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ತ್ರಿವರ್ಣ ಧ್ವಜದ ಡಿಪಿ ಹಾಕಿದ ಆರ್‌ಎಸ್‌ಎಸ್‌

    ಇತ್ತೀಚೆಗೆ ಮುಕ್ತಾಯಗೊಂಡ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಅಥ್ಲೀಟ್‌ಗಳ ಸಾಧನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಕ್ರೀಡಾಪಟುಗಳು ಕೇವಲ ದೇಶಕ್ಕಾಗಿ ಪದಕಗಳನ್ನು ಗೆದ್ದುಕೊಂಡಿಲ್ಲ. ‘ಏಕ ಭಾರತ, ಶ್ರೇಷ್ಠ ಭಾರತ’ ಎಂಬ ಮನೋಭಾವವನ್ನು ಬಲಪಡಿಸಿದ್ದಾರೆ. ಆ ಮೂಲಕ ಎಲ್ಲಾ ಕ್ಷೇತ್ರಗಳ ಯುವಕರನ್ನು ಪ್ರೇರೇಪಿಸಿದ್ದಾರೆ ಎಂದು ತಿಳಿಸಿದ್ದಾರೆ.

    ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರವು ಈ ವರ್ಷದ ಆರಂಭದಲ್ಲಿ ʻಆಪರೇಷನ್ ಗಂಗಾʼ ಪ್ರಾರಂಭಿಸಿತ್ತು. ಈ ವೇಳೆ ತ್ರಿವರ್ಣ ಧ್ವಜವನ್ನು ಹಿಡಿದು ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತವರಿಗೆ ಮರಳಿದ್ದರು. ಇದೇ ವೇಳೆ ಪಾಕಿಸ್ತಾನ ವಿದ್ಯಾರ್ಥಿಗಳು ಸಹ ಭಾರತದ ಧ್ವಜ ಹಿಡಿದು ಸುರಕ್ಷಿತವಾಗಿ ಹಿಂತಿರುಗಿ ಕೃತಜ್ಞತೆ ಸಲ್ಲಿಸಿದ್ದು ಸುದ್ದಿಯಾಗಿತ್ತು. ಇದನ್ನೂ ಓದಿ: ಮೋದಿ ಚೀನಾದೊಂದಿಗೆ `ರಾಷ್ಟ್ರಧ್ವಜ ಒಪ್ಪಂದ’ ಮಾಡ್ಕೊಂಡಿದ್ದಾರೆ – ರಾಹುಲ್ ಗಾಂಧಿ ಆರೋಪ

    ಭಾರತದ 75ನೇ ಸ್ವಾತಂತ್ರ್ಯ ದಿನವನ್ನು ಸಂಭ್ರಮಿಸಲು ಪ್ರತಿಯೊಬ್ಬರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವುದಕ್ಕೆ ಉತ್ತೇಜಿಸಲು ಆಜಾದಿ ಕಾ ಅಮೃತ್ ಮಹೋತ್ಸವದ ಆಶಯದಲ್ಲಿ ‘ಹರ್ ಘರ್ ತಿರಂಗ’ ಅಭಿಯಾನ ನಡೆಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ಧ್ವಜ ಖರೀದಿಗೆ ವೇತನದಲ್ಲಿ 38 ರೂ. ಖಡಿತಗೊಳಿಸಿದ ರೈಲ್ವೆ ಇಲಾಖೆ- ನೌಕರರಿಂದ ಅಸಮಾಧಾನ

    ನವದೆಹಲಿ: ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ರೈಲ್ವೆ ತನ್ನ ಎಲ್ಲಾ ಉದ್ಯೋಗಿಗಳಿಗೆ ನೀಡಿರುವ ರಾಷ್ಟ್ರ ಧ್ವಜದ ವೆಚ್ಚವನ್ನು ಅವರ ಸಂಬಳದಿಂದ ವಸೂಲಿ ಮಾಡುತ್ತಿದ್ದು, ಇಲಾಖೆಯ ಈ ಕ್ರಮಕ್ಕೆ ರೈಲ್ವೆ ನೌಕರರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

    75ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಕೇಂದ್ರವು ಹರ್ ಘರ್ ತಿರಂಗಾ ಅಭಿಯಾನವನ್ನು ಪ್ರಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಏಜೆನ್ಸಿಯಿಂದ ರೈಲ್ವೆ ನೌಕರರಿಗೆ ರಾಷ್ಟ್ರಧ್ವಜವನ್ನು ನೀಡಿದ್ದಾರೆ. ಆದರೆ ಈ ಧ್ವಜದ ಬೆಲೆಯನ್ನು 38 ರೂ.ಗಳಲ್ಲಿ ಇರಿಸಲಾಗಿದೆ. ರೈಲ್ವೆ ನೌಕರರು ಹಣವನ್ನು ಪಾವತಿಸಿ ಈ ರಾಷ್ಟ್ರ ಧ್ವಜವನ್ನು ಖರೀದಿಸಬೇಕಿಲ್ಲ. ಆದರೆ ಅವರ ಸಂಬಳದಿಂದ ಈ ಹಣ ಕಡಿತಗೊಳ್ಳುತ್ತದೆ. ಇದಕ್ಕೆ ಉತ್ತರ ಮಧ್ಯ ರೈಲ್ವೆ ನೌಕರರ ಸಂಘ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ.

    ವಿಭಾಗೀಯ ಸಚಿವ ಚಂದನ್ ಸಿಂಗ್ ಮಾತನಾಡಿ, ಈ ಧ್ವಜವನ್ನು ಸಿಬ್ಬಂದಿಗೆ ನೌಕರರ ಪ್ರಯೋಜನ ನಿಧಿಯಿಂದ ನೀಡಲಾಗುತ್ತಿದೆ. ನಂತರ ಅವರ ಸಂಬಳದಿಂದ ಕಡಿತಗೊಳಿಸಿದ ಹಣವನ್ನು ನೌಕರರ ಲಾಭ ನಿಧಿಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ತಗ್ಗಿದ ಮಳೆ – ರೆಡ್‌ನಿಂದ ಆರೆಂಜ್ ಅಲರ್ಟ್‌ನತ್ತ ಕರಾವಳಿ

    ಈ ಧ್ವಜಗಳು ಬಿಜೆಪಿ ಕಚೇರಿಯಲ್ಲಿ 20 ರೂ.ಗೆ ಲಭ್ಯವಿದ್ದು, ಪ್ರಧಾನ ಅಂಚೆ ಕಚೇರಿಯಲ್ಲಿ 25 ರೂ.ಗೆ ಖರೀದಿಸಬಹುದು. ಸ್ವಸಹಾಯ ಸಂಘಗಳು ಸಹ 20 ರೂ.ಗೆ ಧ್ವಜವನ್ನು ನೀಡುತ್ತಿವೆ. ಇದನ್ನೂ ಓದಿ: ಕುಟುಂಬ ಕಲಹ – ವಿದ್ಯುತ್ ಹೈಟೆನ್ಷನ್ ಟವರ್ ಏರಿ ವ್ಯಕ್ತಿ ಹೈಡ್ರಾಮಾ

    Live Tv
    [brid partner=56869869 player=32851 video=960834 autoplay=true]

  • 75ನೇ ಸ್ವಾತಂತ್ರ್ಯ ಸಂಭ್ರಮ – ಬಾವುಟವನ್ನು ಮಡಿಸೋದು ಹೇಗೆ?

    75ನೇ ಸ್ವಾತಂತ್ರ್ಯ ಸಂಭ್ರಮ – ಬಾವುಟವನ್ನು ಮಡಿಸೋದು ಹೇಗೆ?

    ನವದೆಹಲಿ: ಕೇಂದ್ರ ಸರ್ಕಾರವೂ 75ನೇ ಸ್ವಾಂತಂತ್ರ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಈಗಾಗಲೇ ಸಿದ್ಧಗೊಂಡಿದ್ದು ಅಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಅನೇಕ ಕಾರ್ಯಕ್ರಮವನ್ನುಜಾರಿಗೆ ತರುತ್ತಿದೆ. ಹರ್ ಘರ್ ತಿರಂಗ (ಪ್ರತಿ ಮನೆಯಲ್ಲೂ ಬಾವುಟ)ವು ಅಜಾದಿ ಕಾ ಅಮೃತ ಮಹೋತ್ಸವ ಅಡಿಯಲ್ಲಿ ಬರುವ ಮಹತ್ವದ ಕಾರ್ಯಕ್ರಮವಾಗಿದೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸೂಚನೆಯೊಂದನ್ನು ಬಿಡುಗಡೆ ಮಾಡಿದೆ.

    ಹೌದು.. ಹರ್ ಘರ್ ತಿರಂಗ ಆಚರಿಸುವ ಉತ್ಸಾಹದಲ್ಲಿ ಯಾವುದೇ ಪ್ರಮಾದ ಅಥವಾ ದೇಶ ದ್ರೋಹದ ಕೆಲಸವಾಗದಿರಲಿ ಎಂದು ಬಾವುಟವನ್ನು ಮಡಿಸುವ ಸರಿಯಾದ ಮಾರ್ಗದ ಬಗ್ಗೆ ಪಟ್ಟಿಯೊಂದನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಬಾವುಟವನ್ನು ಹಂತ ಹಂತವಾಗಿ ಯಾವ ರೀತಿಯಾಗಿಮಡಿಸಬೇಕು ಎನ್ನುವ ಎಲ್ಲಾ ಕ್ರಮಗಳನ್ನು ನೀಡಿದೆ. ಅವು ಈ ರೀತಿ ಆಗಿದೆ.

    ಮೊದಲಿಗೆ ರಾಷ್ಟ್ರಧ್ವಜವನ್ನು ಅಡ್ಡಲಾಗಿ ಇರಿಸಬೇಕು. ನಂತರ ಮಧ್ಯದಲ್ಲಿರುವ ಬಿಳಿ ಪಟ್ಟಿಯ ಅಡಿಯಲ್ಲಿ ಕೇಸರಿ ಹಾಗೂ ಹಸಿರು ಪಟ್ಟಿಗಳನ್ನು ಮಡಿಸಬೇಕು. ಅದಾದ ಬಳಿಕ ಕೇಸರಿ ಮತ್ತು ಹಸಿರು ಬಣ್ಣದ ಪಟ್ಟಿಯೊಂದಿಗೆ ಅಶೋಕ ಚಕ್ರ ಮಾತ್ರ ಕಾಣುವ ರೀತಿಯಲ್ಲಿ ಬಿಳಿ ಬಣ್ಣದ ಪಟ್ಟಿಯನ್ನು ಮಡಿಸಬೇಕು. ಇದಾದ ನಂತರ ಮಡಿಸಿದ ರಾಷ್ಟ್ರ ಧ್ವಜವನ್ನು ಅಂಗೈ ಅಥವಾ ತೋಳುಗಳ ಮೇಲೆ ತೆಗೆದುಕೊಂಡು ಹೋಗಬೇಕು. ಈ ಎಲ್ಲಾ ನಿಯಮಗಳು ರಾಷ್ಟ್ರಧ್ವಜವನ್ನು ಮಡಿಸುವಾಗ ಅನುಸರಿಸಲೇ ಬೇಕಾದ ಕ್ರಮಗಳಾಗಿವೆ. ಇದನ್ನೂ ಓದಿ: ಆಜಾದಿ ಕಾ ಅಮೃತ ಮಹೋತ್ಸವಕ್ಕೆ ಉಗ್ರರ ಕರಿ ನೆರಳು – ಕೆಂಪುಕೋಟೆಯ ಸುತ್ತ 1,000 ಅಧಿಕ ಸಿಸಿಟಿವಿ ಕ್ಯಾಮೆರಾ

    75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮಂಗಳವಾರದಂದು ಪ್ರಧಾನಿ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ರಾಷ್ಟ್ರಧ್ವಜವನ್ನು ತಮ್ಮ ಪ್ರೊಫೈಲ್ ಪಿಕ್ಚರ್ ಆಗಿ ಬದಲಾಯಿಸಿಕೊಂಡಿದ್ದರು. ಅಷ್ಠ ಅಲ್ಲದೇ ಈ ಅಭಿಯಾನದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಈ ಅಭಿಯಾನಕ್ಕೆ ಈಗಾಗಲೇ ದೇಶಾದ್ಯಂತ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಅನೇಕ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ.

    ಕೇವಲ ಬಿಜೆಪಿಯೊಂದೇ ಅಲ್ಲದೇ ಕಾಂಗ್ರೆಸ್‍ನವರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದು, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ತಮ್ಮ ಪ್ರೊಫೈಲ್‍ನಲ್ಲಿ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರು ರಾಷ್ಟ್ರಧ್ವಜವನ್ನು ಹಿಡಿದಿರುವ ಫೋಟೋವನ್ನು ಹಾಕಿದ್ದಾರೆ. ಅಷ್ಟೇ ಅಲ್ಲದೇ ರಾಹುಲ್ ಗಾಂಧಿ ನಮ್ಮ ತಿರಂಗ, ನಮ್ಮ ದೇಶದ ಹೆಮ್ಮೆ, ರಾಷ್ಟ್ರಧ್ವಜ ಪ್ರತಿಯೊಬ್ಬ ಭಾರತೀಯನ ಹೃದಯದಲ್ಲೂ ಇದೆ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರಾಷ್ಟ್ರಧ್ವಜದ ಮೇಲೆ ಕಾಂಗ್ರೆಸ್‍ನವರಿಗೆ ಇರುವುದು ಹುಸಿ ಪ್ರೇಮ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    ಆಗಸ್ಟ್ 13 ರಿಂದ 15ರವರೆಗೆ ನಿಮ್ಮ ಮನೆಮುಂದೆ ತ್ರಿವರ್ಣ ಧ್ವಜವನ್ನು ಹಾರಿಸಿ: ಮೋದಿ ಕರೆ

    ನವದೆಹಲಿ: ಆಜಾದ್ ಕಿ ಅಮೃತ ಮಹೋತ್ಸವ ಆಚರಿಸುತ್ತಿರುವ ಹಿನ್ನೆಲೆ ದೇಶದ ಜನತೆ ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಮುಂದೆ ಹಾರಿಸಿ ಅಥವಾ ಪ್ರದರ್ಶಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಟ್ವಿಟ್ಟರ್ ಮೂಲಕ ಕರೆ ನೀಡಿದ್ದಾರೆ.

    ಈ ವರ್ಷ ದೇಶದ ಜನತೆ ಆಚರಿಸುವ ಸ್ವಾತಂತ್ರ್ಯೋತ್ಸವ ವಿಶೇಷವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಜಾದ್ ಕಿ ಅಮೃತ ಮಹೋತ್ಸವ ಎಂದು ವರ್ಷವಿಡೀ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರ ಭಾಗವಾಗಿ ನರೇಂದ್ರ ಮೋದಿ ದೇಶದ ಜನತೆಯಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಪ್ರತಿ ಮನೆಯಲ್ಲಿ ತಿರಂಗ ಅಭಿಯಾನವನ್ನು ಬಲಪಡಿಸೋಣ. ಆಗಸ್ಟ್ 13 ರಿಂದ 15ರವರೆಗೆ ತ್ರಿವರ್ಣ ಧ್ವಜವನ್ನು ನಿಮ್ಮ ಮನೆಯಲ್ಲಿ ಹಾರಿಸಿ ಅಥವಾ ಪ್ರದರ್ಶಿಸಿ, ಈ ಅಭಿಯಾನ ರಾಷ್ಟ್ರಧ್ವಜದ ಮೇಲೆ ಭಾರತೀಯರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಫೈನಲ್‍ಗೆ ಲಗ್ಗೆ ಇಟ್ಟ ಎಲ್ದೋಸ್ ಪಾಲ್, ರೋಹಿತ್ ಯಾದವ್

    ಜುಲೈ 22 ಇತಿಹಾಸದಲ್ಲಿ ವಿಶೇಷ ದಿನ:
    ಇಂದು ದೇಶದ ಇತಿಹಾಸದಲ್ಲಿ ವಿಶೇಷ ದಿನ. 1947ರಲ್ಲಿ ಇದೇ ದಿನ ನಮ್ಮ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಲಾಗಿತ್ತು. ನಮ್ಮ ತ್ರಿವರ್ಣಧ್ವಜದ ಜೊತೆ ಸಹಯೋಗ ಹೊಂದಿದ ಸಮಿತಿಯ ವಿವರ ಈ ರೀತಿ ಇದೆ. ಪಂಡಿತ್ ಜವಹರಲಾಲ್ ನೆಹರೂ ಅವರು ಅನಾವರಣಗೊಳಿಸಿದ ತ್ರಿವರ್ಣಧ್ವಜ ಹಲವು ಆಸಕ್ತಿಕರ ವಿಷಯಗಳೊಂದಿಗೆ ರಾಜಾಜಿಸುತ್ತಿದೆ. ನಾವು ವಸಾಹತುಶಾಹಿ ಆಡಳಿತದ ವಿರುದ್ಧ ಹೋರಾಡುತ್ತಿದ್ದಾಗ ಮುಕ್ತ ಭಾರತಕ್ಕಾಗಿ ಧ್ವಜದ ಕನಸು ಕಂಡಂತಹ ಮಹಾನುಭಾವರ ಧೈರ್ಯ ಮತ್ತು ಪ್ರಯತ್ನಗಳನ್ನು ಇಂದು ನೆನಪಿಸಿಕೊಳ್ಳುತ್ತೇವೆ. ಅವರ ಕನಸಿನ ಭಾರತವನ್ನು ನಿರ್ಮಿಸಲು ನಾವು ಮುಂದಾಗೋಣ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಕರ್ನಾಟಕದ 4 ಮತಗಳು ತಿರಸ್ಕೃತ

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

    ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಹರ್ ಘರ್ ತಿರಂಗಾ(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಪ್ರಾರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು, ದೇಶಾದ್ಯಂತ ಬರೋಬ್ಬರಿ 20 ಕೋಟಿ ಮನೆಗಳ ಮೇಲೆ ಧ್ವಜವನ್ನು ಹಾರಿಸಲು ಸಿದ್ಧತೆ ನಡೆಸಲಾಗುತ್ತಿದೆ.

    ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಮುಂದಿನ ತಿಂಗಳು 3 ದಿನಗಳ ಕಾಲ ದೇಶಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ವಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

    ಈ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಾರರೊಂದಿಗೆ ಸಿದ್ಧತೆಗಳು ನಡೆಯುತ್ತಿವೆ.

    ಕಾರ್ಯಕ್ರಮದ ಭಾಗವಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಆಗಸ್ಟ್ 13 ರಿಂದ 15 ರವರೆಗೆ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು. ಈ ಅಭಿಯಾನದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳೂ ಭಾಗಿಯಾಗಲಿವೆ ಎಂದು ಕೇಂದ್ರದ ಅಧಿಕೃತ ವರದಿ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

    2022ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜುಲೈ 22 ರಿಂದ ಎಲ್ಲಾ ರಾಜ್ಯ ಸರ್ಕಾರದ ವೆಬ್‌ಸೈಟ್ ಮುಖಪುಟಗಳಲ್ಲಿ ರಾಷ್ಟ್ರಧ್ವಜ ಕಾಣಿಸಿಕೊಳ್ಳಬೇಕು. ನಾಗರಿಕರೂ ತಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ತ್ರಿವರ್ಣ ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

    ತ್ರಿವರ್ಣ ಧ್ವಜದೊಂದಿಗಿನ ಫೋಟೋಗಳನ್ನು ತೆಗೆದುಕೊಂಡು ಸಂಸ್ಕೃತಿ ಸಚಿವಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಸ್ವಾತಂತ್ರ್ಯದ ಅಮೃತ ಮೋತ್ಸವವನ್ನು ಹೊಸ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ

    Amith

    ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ ದೇಶಭಕ್ತಿಯ ಮನೋಭಾವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು. ಜನರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮೂಲಕ ಅಭಿಯಾನವನ್ನು ಯಶಸ್ಸಿನತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]