Tag: Triplets

  • ಏಕಕಾಲದಲ್ಲಿ 2 ಹೆಣ್ಣು, 1 ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮವಿತ್ತ ತಾಯಿ

    ಏಕಕಾಲದಲ್ಲಿ 2 ಹೆಣ್ಣು, 1 ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮವಿತ್ತ ತಾಯಿ

    ಹುಬ್ಬಳ್ಳಿ: ತಾಯಿಯೊಬ್ಬರು ಏಕಕಾಲದಲ್ಲಿ ಎರಡು ಹೆಣ್ಣು ಹಾಗೂ ಒಂದು ಗಂಡು ಸೇರಿ ಮೂವರು ಮಕ್ಕಳಿಗೆ ಜನ್ಮ ನೀಡಿದ ಘಟನೆ ಸವದತ್ತಿ (Savadatti) ತಾಲೂಕಿನ ಮುನವಳ್ಳಿ ಗ್ರಾಮದಲ್ಲಿ ನಡೆದಿದೆ.

    ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ನಿವಾಸಿ ವರ್ಷಿಣಿ ಹಾಗೂ ಪಂಚಾಕ್ಷರಿ ದಂಪತಿಗಳಿಗೆ ತ್ರಿವಳಿ ಮಕ್ಕಳು ಜನಿಸಿವೆ.ಇದನ್ನೂ ಓದಿ: ಮಿಗ್-21 ಯುದ್ಧ ವಿಮಾನದ 62 ವರ್ಷಗಳ ಸೇವೆಗೆ ವಿದಾಯ – ಸೆ. 19ರಂದು ಬೀಳ್ಕೊಡುಗೆ ಸಮಾರಂಭ

    ದಂಪತಿಗೆ ಈಗಾಗಲೇ ಆರು ವರ್ಷದ ಒಂದು ಹೆಣ್ಣು ಮಗುವಿದೆ. ಈಗ ಮತ್ತೆ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಡಾ. ಸುಧಾ ಹಳೇಮಣಿ ಹಾಗೂ ವೈದ್ಯರ ತಂಡ ವರ್ಷಿಣಿ ಅವರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ವೇಳೆ ವರ್ಷಿಣಿ ಅವರು ಎರಡು ಹೆಣ್ಣು, ಒಂದು ಗಂಡು ಸೇರಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಸದ್ಯ ಆಸ್ಪತ್ರೆಯಲ್ಲಿ ವರ್ಷಣಿ ಹಾಗೂ ಮಕ್ಕಳಿಗೆ ಆರೈಕೆ ಮಾಡಲಾಗುತ್ತಿದೆ. ಮೂರು ಮಕ್ಕಳು ಹಾಗೂ ತಾಯಿ ಆರೋಗ್ಯವಾಗಿದ್ದು, ತ್ರಿವಳಿ ಮಕ್ಕಳು ಹುಟ್ಟಿರುವ ಕಾರಣ ಕುಟುಂಬದಲ್ಲಿ ಸಂತಸ ಮನೆಮಾಡಿದೆ.ಇದನ್ನೂ ಓದಿ: ಜಗನ್ನಾಥ ರಥಯಾತ್ರೆಯಲ್ಲಿ ಸರಗಳ್ಳತನ – ನಾಲ್ವರು ಚಾಲಾಕಿ ಕಳ್ಳಿಯರ ಬಂಧನ

     

  • ಕೊಟ್ಟ ಮಾತಿನಂತೆ ನಡೆದ ಸೋನು ಸೂದ್ – ಯಾದಗಿರಿಯ ಕುಟುಂಬಕ್ಕೆ ಬಂತು ದಿನಸಿ

    ಕೊಟ್ಟ ಮಾತಿನಂತೆ ನಡೆದ ಸೋನು ಸೂದ್ – ಯಾದಗಿರಿಯ ಕುಟುಂಬಕ್ಕೆ ಬಂತು ದಿನಸಿ

    ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದಾರೆ.

    ಈ ತಿಂಗಳ 22ರಂದು ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಪಬ್ಲಿಕ್ ಟಿವಿ ಮೂಲಕ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು. ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ ರೇಷನ್ ನೀಡುವ ಭರವಸೆ ನೀಡಿದ್ದರು. ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದಾರೆ.

    ಎರಡು ತಿಂಗಳಿಗಾಗುವಷ್ಟು ಅಡುಗೆ ಎಣ್ಣೆ, ಅಕ್ಕಿ, ಸಕ್ಕರೆ, ಬೆಳೆಯನ್ನು ಅಮೆಜಾನ್ ಮೂಲಕ ಮೂರು ಬಾಕ್ಸ್‍ಗಳಲ್ಲಿ ಪಾರ್ಸಲ್ ಮಾಡಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿಗೆ ವಿಡಿಯೋ ಕಳುಹಿಸಿರುವ ಸೋನು ಸೂದ್, ಮುಂದಿನ ದಿನಗಳಲ್ಲಿ ವೈದ್ಯಕೀಯ ಸಹಾಯ ನೀಡುವ ಮತ್ತು ಮಕ್ಕಳಿಗೆ ಬಟ್ಟೆ ಕಳುಹಿಸಲು ಭರವಸೆ ನೀಡಿದ್ದಾರೆ. ಮಕ್ಕಳ ತಂದೆ ನಾಗರಾಜ್ ನಟನಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

  • ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

    ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಸೋಲಿಗ ಮಹಿಳೆಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಜಿಲ್ಲೆಯ ಕೆ.ಗುಡಿ ಅರಣ್ಯ ವ್ಯಾಪ್ತಿಯ ಭೂತಣ್ಣಿ ಪೋಡಿನ ನಿವಾಸಿ ಬಸಮಣಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಜನ್ಮದಾತೆ. ಜಿಲ್ಲಾಸ್ಪತ್ರೆಯಲ್ಲಿ ಸಿಜೇರಿಯನ್ ಮೂಲಕ ಬಸಮಣಿಗೆ ವೈದ್ಯರು ಹೆರಿಗೆ ಮಾಡಿಸಿದ್ದು, ಮೂರು ಮಕ್ಕಳಿಗೆ ತಾಯಿ ಜನ್ಮ ನೀಡಿದ್ದಾರೆ.

    ಮೂರು ಮಕ್ಕಳು ಸಹ ತಲಾ ಒಂದೂವರೆ ಕೆ.ಜಿ ತೂಕವಿದ್ದು, ಚಾಮರಾಜನಗರ ಜಿಲ್ಲಾಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿ ಮಕ್ಕಳ ಚಿಕಿತ್ಸೆ ಮುಂದುವರಿದಿದೆ. ಮೂರು ಮಕ್ಕಳು ಸಹ ಆರೋಗ್ಯವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಬಸಮಣಿ ಕುಟುಂಬಸ್ಥರಲ್ಲೂ ಸಂತಸ ಮನೆ ಮಾಡಿದ್ದು, ಮೂರು ಮಕ್ಕಳು ಜನಿಸಿದ್ದಕ್ಕೆ ಖುಷಿಪಟ್ಟಿದ್ದಾರೆ.

    ಮಂಗಳವಾರ ಮಹಾರಾಷ್ಟ್ರದ 38 ವರ್ಷದ ಮಹಿಳೆಯೊಬ್ಬರು ಬೆಳಗಾವಿಯನ್ನು 17ನೇ ಮಗುವಿಗೆ ಜನ್ಮ ನೀಡುವ ಮೂಲಕ ಭಾರೀ ಸುದಿಯಾಗಿದ್ದಾರೆ. ಬೀಡ್ ಜಿಲ್ಲೆಯ ಮಜಲ್‍ಗಾಂವ್ ಮೂಲದ ಲಂಕಾಬಾಯಿ(38) ಅವರು ತಮ್ಮ 17ನೇ ಮಗುವಿಗೆ ಜನ್ಮ ನೀಡಿದ್ದರು. ಆದರೆ ದುರಾದೃಷ್ಟವಶಾತ್ ಆರೋಗ್ಯ ಸಮಸ್ಯೆಯಿಂದ ಹುಟ್ಟಿದ ಬಳಿಕ ಆ ಹೆಣ್ಣು ಮಗು ಮೃತಪಟ್ಟಿದೆ. ಲಂಕಾಬಾಯಿ ಕುಟುಂಬ ಅಲೆಮಾರಿ ಸಮುದಾಯದವರಾಗಿದ್ದು, ಕೆಲಸ ಅರಸಿ ಆಕೆಯ ಕುಟುಂಬ ಕರ್ನಾಟಕಕ್ಕೆ ಬಂದಿತ್ತು.

    ಸದ್ಯ ಕರ್ನಾಟಕದಲ್ಲಿ ಕಬ್ಬಿನ ಕಟಾವಿನ ಸಮಯವಾಗಿದ್ದು, ಬೆಳಗಾವಿಯ ಕಬ್ಬಿನ ಗದ್ದೆಯೊಂದರಲ್ಲಿ ಮಹಿಳೆ ಹಾಗೂ ಆಕೆಯ ಕುಟುಂಬ ಕೆಲಸ ಮಾಡುತ್ತಿತ್ತು. ಕೆಲಸ ಮಾಡುತ್ತಿದ್ದ ವೇಳೆಯೇ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ, ಮಹಿಳೆ ಕಬ್ಬಿನ ಗದ್ದೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹುಟ್ಟಿದ ಬಳಿಕ ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದರು.

    20ನೇ ಬಾರಿಗೆ ಈ ಮಹಿಳೆ ಗರ್ಭ ಧರಿಸಿರುವ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಮಹಿಳೆಗೆ 11 ಮಕ್ಕಳಿದ್ದು, ಅದರಲ್ಲಿ 9 ಹೆಣ್ಣು ಮಕ್ಕಳಿದ್ದಾರೆ. ಮೂರು ಬಾರಿ ಗರ್ಭಪಾತವಾಗಿದೆ, 5 ಮಗು ಸಾವನ್ನಪ್ಪಿದೆ ಎಂದು ಆರೋಗ್ಯಾಧಿಕಾರಿ ಡಾ. ಪವಾರ್ ಮಾಹಿತಿ ನೀಡಿದ್ದರು.

  • ಅವಧಿಗೆ ಮುನ್ನವೇ ಹೆರಿಗೆ- ಮೃತಪಟ್ಟ ತ್ರಿವಳಿ ಮಕ್ಕಳು

    ಅವಧಿಗೆ ಮುನ್ನವೇ ಹೆರಿಗೆ- ಮೃತಪಟ್ಟ ತ್ರಿವಳಿ ಮಕ್ಕಳು

    ದಾವಣಗೆರೆ: ಅವಧಿಗೂ ಮುನ್ನವೇ ತಾಯಿಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದು, ಹೆರಿಗೆ ನಂತರ ಮೂರು ನವಜಾತ ಶಿಶುಗಳು ಮೃತಪಟ್ಟಿರುವ ಪ್ರಕರಣವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

    ಬಿಳಚೋಡು ಗ್ರಾಮದ ನಿವಾಸಿ ಕಾವೇರಿ(24) ಅವರಿಗೆ ಬುಧವಾರ ಬೆಳಗಿನ ಜಾವ 4.30ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಅಂಬುಲೆನ್ಸ್ ನಲ್ಲಿ ಸಾಗಿಸುವಾಗ ಹೆರಿಗೆ ನೋವು ಜಾಸ್ತಿಯಾಗಿದೆ.

    ಕಾವೇರಿ ಅಂಬುಲೆನ್ಸ್ ನಲ್ಲೇ ಎರಡು ಹೆಣ್ಣು ಮಗು ಹಾಗೂ ಒಂದು ಗಂಡು ಶಿಶುವಿಗೆ ಜನ್ಮ ನೀಡಿದ್ದಾರೆ. ಮೂರು ಶಿಶುಗಳು ಕೇವಲ 300 ರಿಂದ 350 ಗ್ರಾಂ ತೂಕವಿತ್ತು. ಹಾಗಾಗಿ ಮೂರು ಶಿಶುಗಳು ಮೃತಪಟ್ಟಿದೆ. ತಾಯಿ ಕಾವೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವರಮಹಾಲಕ್ಷ್ಮಿ ಹಬ್ಬದಂದೇ ಜನನ- 2ನೇ ಹೆರಿಗೆಯಲ್ಲಿ 3 ಮಕ್ಕಳಿಗೆ ಜನ್ಮ

    ವರಮಹಾಲಕ್ಷ್ಮಿ ಹಬ್ಬದಂದೇ ಜನನ- 2ನೇ ಹೆರಿಗೆಯಲ್ಲಿ 3 ಮಕ್ಕಳಿಗೆ ಜನ್ಮ

    ಮೈಸೂರು: ವರಮಹಾಲಕ್ಷ್ಮಿ ಹಬ್ಬದಂದೇ ತಾಯಿಯೊಬ್ಬರು ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ವಿಜಯನಗರ ನಿವಾಸಿ ಪ್ರೇಮ್ ಕುಮಾರ್ ಅವರ ಪತ್ನಿ ಸವಿತಾಗೆ 3 ಮಕ್ಕಳ ಜನ್ಮವಾಗಿದೆ. ಸವಿತಾ ತಮ್ಮ 2ನೇ ಹೆರಿಗೆಯಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರು ಆಪರೇಷನ್ ಮೂಲಕ ಮೂರು ಮಕ್ಕಳನ್ನು ಯಶಸ್ವಿಯಾಗಿ ಡೆಲಿವರಿ ಮಾಡಿಸಿದ್ದಾರೆ.

    ಮೂರು ಮಕ್ಕಳಲ್ಲಿ ಎರಡು ಗಂಡು ಮಕ್ಕಳು, ಒಂದು ಹೆಣ್ಣು ಮಗುವಾಗಿದೆ. ಪತ್ನಿಗೆ ಮೂರು ಮಕ್ಕಳಾದ ಹಿನ್ನಲೆಯಲ್ಲಿ ಪತಿ ಪ್ರೇಮ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಸದ್ಯ ಆಸ್ಪತ್ರೆಯಲ್ಲಿ ತಾಯಿ ಹಾಗೂ ಮೂವರು ಮಕ್ಕಳೂ ಕ್ಷೇಮವಾಗಿದ್ದಾರೆ.

    ಈ ಹಿಂದೆ ಬಳ್ಳಾರಿಯಲ್ಲಿ ಮಹಿಳೆಯೊಬ್ಬರು 10 ವರ್ಷದ ನಂತರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಸಿರಗುಪ್ಪ ಪಟ್ಟಣದ ಸದಾಶಿವನಗರದ ಆಸ್ಪತ್ರೆಯಲ್ಲಿ ಸೀಮಾಂದ್ರದ ಕೌತಾಳಂನ ಮಾರಮ್ಮ ಎರಡು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮದುವೆಯಾಗಿ 10 ವರ್ಷದ ನಂತರ ಏಕಕಾಲಕ್ಕೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವ ಕುಟುಂಬದವರಿಗೆ ತ್ರಿವಳಿ ಧಮಾಕಾ ಎನ್ನುವಂತಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 10 ವರ್ಷದ ನಂತರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    10 ವರ್ಷದ ನಂತರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ

    ಬಳ್ಳಾರಿ: ಅವಳಿ ಜವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಂದಿರನ್ನ ನೋಡಿರಬಹುದು, ಆದರೆ ಜಿಲ್ಲೆಯಲ್ಲಿ ಮಹಿಳೆಯೊಬ್ಬರು 10 ವರ್ಷದ ನಂತರ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

    ಸಿರಗುಪ್ಪ ಪಟ್ಟಣದ ಸದಾಶಿವನಗರದ ಆಸ್ಪತ್ರೆಯಲ್ಲಿ ಸೀಮಾಂದ್ರದ ಕೌತಾಳಂನ ಮಾರಮ್ಮ ಎರಡು ಹೆಣ್ಣು ಹಾಗೂ ಒಂದು ಗಂಡು ಮಗುವಿಗೆ ಜನ್ಮ ನೀಡಿದ್ದು ಮಕ್ಕಳು ಆರೋಗ್ಯವಾಗಿದ್ದಾರೆ.

    ಮದುವೆಯಾಗಿ ಹತ್ತು ವರ್ಷದ ನಂತರ ಏಕಕಾಲಕ್ಕೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವ ಕುಟುಂಬದವರಿಗೆ ತ್ರಿವಳಿ ಧಮಾಕ ಎನ್ನುವಂತಾಗಿದೆ. ಮೂವರು ಮಕ್ಕಳು ಆರೋಗ್ಯವಾಗಿರುವ ಪರಿಣಾಮ ಕುಟುಂಬದ ಸದಸ್ಯರಲ್ಲಿ ಹರ್ಷ ಮೂಡಿದೆ.