Tag: Tripura

  • ನವರಾತ್ರಿ ಮೊದಲ ದಿನ ತ್ರಿಪುರ ಸುಂದರಿ ದೇವಿ ದರ್ಶನ ಪಡೆದ ಮೋದಿ – ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ

    ನವರಾತ್ರಿ ಮೊದಲ ದಿನ ತ್ರಿಪುರ ಸುಂದರಿ ದೇವಿ ದರ್ಶನ ಪಡೆದ ಮೋದಿ – ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಕೆ

    – 524 ವರ್ಷಗಳಷ್ಟು ಹಳೆಯದಾದ ಜೀರ್ಣೋದ್ಧಾರಗೊಂಡ ತ್ರಿಪುರ ಸುಂದರಿ ದೇವಾಲಯ ಉದ್ಘಾಟಿಸಿದ ಮೋದಿ

    ಅಗರ್ತಲಾ: ನವರಾತ್ರಿ ಉತ್ಸವದ ಮೊದಲ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗಡಿರಾಜ್ಯದ ʻಮಾತಾ ತ್ರಿಪುರ ಸುಂದರಿʼ ಅಮ್ಮನವರ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

    ತ್ರಿಪುರಾದ ಉದಯ್‌ಪುರದಲ್ಲಿರುವ ದೇಗುಲಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೋಮತಿ ಜಿಲ್ಲೆಯ ಉದಯಪುರ ಪಟ್ಟಣದಲ್ಲಿ ಜೀರ್ಣೋದ್ಧಾರಗೊಂಡಿರುವ ತ್ರಿಪುರೇಶ್ವರಿ ದೇಗುಲದ (Tripura Sundari Temple) ಉದ್ಘಾಟನೆ ನೆರವೇರಿಸಿದರು.

    51 ಶಕ್ತಿಪೀಠಗಳಲ್ಲಿ ಒಂದು
    ದೇಶದಲ್ಲಿರುವ 51 ಶಕ್ತಿಪೀಠಗಳಲ್ಲಿ ತ್ರಿಪುರೇಶ್ವರಿ ದೇಗುಲವೂ ಒಂದು. ಮಹಾರಾಜ ಧನ್ಯ ಮಾಣಿಕ್ಯ 1,501ರಲ್ಲಿ ಈ ದೇಗುಲ ನಿರ್ಮಿಸಿದ್ದರು. ತೀರ್ಥಕ್ಷೇತ್ರ ಪುನರುಜ್ಜಿವನ ಮತ್ತು ಅಧ್ಯಾತ್ಮ ವಿಸ್ತರಣಾ ಅಭಿಯಾನ (PRASAD) ಅಡಿಯಲ್ಲಿ 52 ಕೋಟಿ ರೂ. ವೆಚ್ಚದಲ್ಲಿ ಈ ದೇಗುಲ ಜೀರ್ಣೋದ್ಧಾರಗೊಂಡಿದ್ದು, ಪ್ರಧಾನಿ ಮೋದಿ ಉದ್ಘಾಟಿಸಿದ್ದಾರೆ.

    ಸುಮಾರು 45 ನಿಮಿಷಗಳ ಕಾಲ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ತ್ರಿಪುರಾದ ಮುಖ್ಯಮಂತ್ರಿ ಮಾಣಿಕ್ ಸಾಹಾ ಹಾಗೂ ಸಂಪುಟದ ಸಚಿವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದರು.

    ದೇಶದ ಶಕ್ತಿಪೀಠಗಳಲ್ಲಿ ಒಂದಾದ ಈ ದೇವಾಲಯದ ಆವರಣದಲ್ಲಿ ಅನೇಕ ಮಾರ್ಪಾಡುಗಳನ್ನು ತರಲಾಗಿದೆ. ಪ್ರವೇಶದ್ವಾರಗಳನ್ನು ನವೀಕರಿಸಲಾಗಿದೆ. ಧ್ಯಾನ ಮಂಡಪ, ಅತಿಥಿ ಗೃಹ, ಕಚೇರಿ ಕೊಠಡಿಗಳನ್ನು ಆಧುನಿಕ ರೂಪದಲ್ಲಿ ನಿರ್ಮಿಸಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ಸಿಗಲಿದೆ. ವ್ಯಾಪಾರ, ಉದ್ಯೋಗಾವಕಶಗಳು ಸೃಜಿಸಲಿವೆ ಎಂದು ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.

    ಇದಕ್ಕೂ ಮುನ್ನ ಅರುಣಾಚಲ ಪ್ರದೇಶದ ಇಟಾನಗರದಲ್ಲಿ 5,100 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.

    ಇಟಾನಗರದಲ್ಲಿ 3,700 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಎರಡು ಪ್ರಮುಖ ಜಲವಿದ್ಯುತ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅರುಣಾಚಲ ಪ್ರದೇಶದ ಸಿಯೋಮ್ ಉಪ-ಜಲಾನಯನ ಪ್ರದೇಶದಲ್ಲಿ ಹಿಯೋ ಜಲವಿದ್ಯುತ್ ಯೋಜನೆ (240 ಮೆಗಾವ್ಯಾಟ್) ಮತ್ತು ಟಾಟೊ-ಐ ಜಲವಿದ್ಯುತ್ ಯೋಜನೆ (186 ಮೆಗಾವ್ಯಾಟ್) ಅಭಿವೃದ್ಧಿಪಡಿಸುವುದಾಗಿ ತಿಳಿಸಿದರು.

  • ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

    ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

    ನವದೆಹಲಿ: ಒಂದು ವಾರದಿಂದ ನಾಪತ್ತೆಯಾಗಿದ್ದ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಶವ ಯಮುನಾ ನದಿಯಲ್ಲಿ ಪತ್ತೆಯಾಗಿದೆ.

    ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19) ತ್ರಿಪುರಾ ನಿವಾಸಿಯಾಗಿದ್ದು, ಆಕೆಯ ಕುಟುಂಬಸ್ಥರು ಶವವನ್ನು ಗುರುತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ವಿಫಲನಾಗಿದ್ದೇನೆ ಎನಿಸುತ್ತಿದೆ – ದೆಹಲಿಯಲ್ಲಿ ಕಾಣೆಯಾದ ಯುವತಿಯ ರೂಮ್‌ನಲ್ಲಿ ಡೆತ್‌ನೋಟ್ ಪತ್ತೆ

    ಜುಲೈ 7 ರ ಮುಂಜಾನೆ ಸ್ನೇಹಾ ತನ್ನ ಆಪ್ತ ಸ್ನೇಹಿತರಿಗೆ ಇಮೇಲ್‌ಗಳು ಮತ್ತು ಸಂದೇಶಗಳನ್ನು ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರು ಭಾವನಾತ್ಮಕವಾಗಿ ಸಮಸ್ಯೆ ಎದುರಿಸುತ್ತಿದ್ದರು ಎಂದು ಆಕೆಯ ಸ್ನೇಹಿತರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

    ಸ್ನೇಹಾರ ಕೊಠಡಿಯಲ್ಲಿ ಪತ್ರವೊಂದು ಸಿಕ್ಕಿದ್ದು, ಅದರಲ್ಲಿ ʻನಾನು ವಿಫಲನಾಗಿದ್ದೇನೆ, ಎಂದು ಎನಿಸುತ್ತಿದೆ. ಸೇತುವೆಯಿಂದ ಹಾರಿ ನನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ. ನಾನು ಹೊರೆಯಂತೆ ಬಾಸವಾಗುತ್ತಿದ್ದೇನೆ. ಈ ರೀತಿ ಬದುಕಲು ಸಾಧ್ಯವಾಗುತ್ತಿಲ್ಲ. ಇದು ನನ್ನ ನಿರ್ಧಾರ ಎಂದು ಪತ್ರದಲ್ಲಿ ಬರೆದಿದ್ದರು.

    ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಸ್ನೇಹಾ ದೇಬ್ನಾಥ್ ವ್ಯಾಸಾಂಗ ಮಾಡುತ್ತಿದ್ದರು.ಅವರು ಮೂಲತಃ (Tripura) ತ್ರಿಪುರದವರಾಗಿದ್ದು, ಉನ್ನತ ಶಿಕ್ಷಣಕ್ಕಾಗಿ ದೆಹಲಿಗೆ ಬಂದಿದ್ದರು. ಜುಲೈ 7 ರಂದು, ಅವರು ತಮ್ಮ ಸ್ನೇಹಿತೆಯನ್ನು ಸರೈ ರೋಹಿಲ್ಲಾ ರೈಲ್ವೆ ನಿಲ್ದಾಣದಲ್ಲಿ ಬಿಡಲು ಹೋಗಿದ್ದರು. ಅಂದಿನಿಂದ ಅವರು ಕಾಣೆಯಾಗಿದ್ದರು. ಇದನ್ನೂ ಓದಿ: ತ್ರಿಪುರದ ಯುವತಿ ದೆಹಲಿಯಲ್ಲಿ ನಿಗೂಢವಾಗಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ!

  • ವಿಫಲನಾಗಿದ್ದೇನೆ ಎನಿಸುತ್ತಿದೆ – ದೆಹಲಿಯಲ್ಲಿ ಕಾಣೆಯಾದ ಯುವತಿಯ ರೂಮ್‌ನಲ್ಲಿ ಡೆತ್‌ನೋಟ್ ಪತ್ತೆ

    ವಿಫಲನಾಗಿದ್ದೇನೆ ಎನಿಸುತ್ತಿದೆ – ದೆಹಲಿಯಲ್ಲಿ ಕಾಣೆಯಾದ ಯುವತಿಯ ರೂಮ್‌ನಲ್ಲಿ ಡೆತ್‌ನೋಟ್ ಪತ್ತೆ

    – ಸಾಯಲು ಅಲ್ಲಿಗೆ ಹೋಗಬೇಕಾಗಿಲ್ಲ, ಬೇರೆ ಏನೋ ಆಗಿದೆ – ಸಂಶಯ ವ್ಯಕ್ತಪಡಿಸಿದ ಸಹೋದರಿ

    ನವದೆಹಲಿ: ಒಂದು ವಾರದಿಂದ ಕಾಣೆಯಾಗಿರುವ ದೆಹಲಿ (Delhi) ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್‌ (Sneha Debnath) ಅವರ ಹುಡುಕಾಟ ನಡೆಯುತ್ತಿದೆ. ಈ ಹೊತ್ತಲ್ಲೇ ಅವರ ಕೊಠಡಿಯಲ್ಲಿ ಪತ್ರವೊಂದು ಸಿಕ್ಕಿದ್ದು, ಅದರಲ್ಲಿ ʻನಾನು ವಿಫಲನಾಗಿದ್ದೇನೆ, ಎಂದು ಎನಿಸುತ್ತಿದೆ. ಸೇತುವೆಯಿಂದ ಹಾರಿ ನನ್ನ ಜೀವನವನ್ನು ಕೊನೆಗೊಳಿಸಲು ನಿರ್ಧರಿಸಿದ್ದೇನೆ. ನಾನು ಹೊರೆಯಂತೆ ಬಾಸವಾಗುತ್ತಿದ್ದೇನೆ. ಈ ರೀತಿ ಬದುಕಲು ಸಾಧ್ಯವಾಗುತ್ತಿಲ್ಲ. ಇದು ನನ್ನ ನಿರ್ಧಾರ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಸ್ನೇಹಾ ದೇಬ್ನಾಥ್ ವ್ಯಾಸಾಂಗ ಮಾಡುತ್ತಿದ್ದರು.ಅವರು ಮೂಲತಃ (Tripura) ತ್ರಿಪುರದವರಾಗಿದ್ದು, ಉನ್ನತ ಶಿಕ್ಷಣಕ್ಕಾಗಿ ದೆಹಲಿಗೆ ಬಂದಿದ್ದರು. ಜುಲೈ 7 ರಂದು, ಅವರು ತಮ್ಮ ಸ್ನೇಹಿತೆಯನ್ನು ಸರೈ ರೋಹಿಲ್ಲಾ ರೈಲ್ವೆ ನಿಲ್ದಾಣದಲ್ಲಿ ಬಿಡಲು ಹೋಗಿದ್ದರು. ಅಂದಿನಿಂದ ಅವರು ಕಾಣೆಯಾಗಿದ್ದರು. ಅವರನ್ನು ಪತ್ತೆಹಚ್ಚಲು ವ್ಯಾಪಕ ಹುಡುಕಾಟ ನಡೆಸಲಾಗಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: ತ್ರಿಪುರದ ಯುವತಿ ದೆಹಲಿಯಲ್ಲಿ ನಿಗೂಢವಾಗಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ!

    ಸ್ನೇಹಾ ಅವರ ಸಹೋದರಿ ಬಿಪಾಶಾ ದೇಬ್ನಾಥ್ ಈ ಬಗ್ಗೆ ಪ್ರತಿಕ್ರಿಯಿಸಿ, ಸಿಕ್ಕಿರುವ ಪತ್ರದಲ್ಲಿ ಅರ್ಥವಿಲ್ಲ. ಆಕೆ ಏಕೆ ಖಿನ್ನತೆಗೆ ಒಳಗಾಗಿದ್ದರು? ಏನು ನಡೆಯುತ್ತಿತ್ತು? ಎಂಬುದು ಇದರಲ್ಲಿ ಇಲ್ಲ. ಕೇವಲ ನಾಲ್ಕು ಸಾಲುಗಳಿವೆ. ಆಕೆ ನಿಜವಾಗಿಯೂ ಸಾಯಲು ಬಯಸಿದ್ದರೆ ಮನೆಯಲ್ಲಿ ಅಥವಾ ಹತ್ತಿರದಲ್ಲಿ ಅದಕ್ಕೆ ಹಲವು ಅವಕಾಶಗಳಿದ್ದವು. 60 ಸಿಸಿ ಕ್ಯಾಮೆರಾಗಳು ಕಾರ್ಯನಿರ್ವಹಿಸದ ಸ್ಥಳಕ್ಕೆ ಹೋಗಬೇಕಾಗಿರಲಿಲ್ಲ. ಇದರಲ್ಲಿ ಬೇರೆಯದ್ದೇ ಏನೋ ಆದಂತಿದೆ. ಆಕೆಯನ್ನು ಬೇರೆ ಯಾರಾದರೂ ನಿಯಂತ್ರಿಸುತ್ತಿದ್ದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

    ಸ್ನೇಹಾ ದೇಬ್ನಾಥ್ ಅವರ ತಂದೆ ಮತ್ತು ತಾಯಿ ಸೇರಿದಂತೆ ಅವರ ಕುಟುಂಬದ ಸದಸ್ಯರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊಗಳನ್ನು ಪೋಸ್ಟ್ ಮಾಡಿ, ಅವರ ಬಗ್ಗೆ ಸುಳಿವು ಸಿಕ್ಕರೆ ಹಂಚಿಕೊಳ್ಳಲು ಸಾರ್ವಜನಿಕರು ಮತ್ತು ಅಧಿಕಾರಿಗಳ ಸಹಾಯ ಕೋರಿದ್ದಾರೆ. ಇದನ್ನೂ ಓದಿ: ಪತ್ನಿಯಿಂದ ವಿಚ್ಛೇದನ – 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ!

  • ತ್ರಿಪುರದ ಯುವತಿ ದೆಹಲಿಯಲ್ಲಿ ನಿಗೂಢವಾಗಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ!

    ತ್ರಿಪುರದ ಯುವತಿ ದೆಹಲಿಯಲ್ಲಿ ನಿಗೂಢವಾಗಿ ನಾಪತ್ತೆ – ಪ್ರಕರಣದ ಸುತ್ತ ಹಲವು ಅನುಮಾನಗಳ ಹುತ್ತ!

    ನವದೆಹಲಿ: ಕಳೆದ 6 ದಿನಗಳಿಂದ ತ್ರಿಪುರದ (Tripura) 19 ವರ್ಷದ ಯುವತಿಯೊಬ್ಬಳು ದೆಹಲಿಯಲ್ಲಿ ನಾಪತ್ತೆಯಾಗಿದ್ದಾಳೆ. ಈ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ದೆಹಲಿಯ (Delhi) ಆತ್ಮ ರಾಮ ಸನಾತನ ಧರ್ಮ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ದೇಬ್ನಾಥ್ (19) ಕಳೆದ 6 ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾಳೆ. ಜು.7ರಂದು ಕೊನೆಯ ಬಾರಿ ಪೋಷಕರಿಗೆ ಕರೆ ಮಾಡಿ ಮಾತನಾಡಿದ್ದಳು. ಬೆಳಗ್ಗೆ 5:56ಕ್ಕೆ ತನ್ನ ಸ್ನೇಹಿತೆ ಪಿಟುನಿಯಾ ಜೊತೆ ಸರೈ ರೋಹಿಲ್ಲಾ ನಿಲ್ದಾಣಕ್ಕೆ ಹೋಗುವುದಾಗಿ ತಿಳಿಸಿದ್ದಳು. ಇದನ್ನೂ ಓದಿ: ಪತ್ನಿಯಿಂದ ವಿಚ್ಛೇದನ – 40 ಲೀಟರ್ ಹಾಲಲ್ಲಿ ಸ್ನಾನ ಮಾಡಿ ಸಂಭ್ರಮಿಸಿದ ಪತಿ!

    ಇದಾದ ನಂತರ ಪೋಷಕರು 8 ಗಂಟೆಗೆ ಕರೆ ಮಾಡಿದಾಗ ಸ್ನೇಹಾ ಫೋನ್ ಸ್ವಿಚ್ ಆಫ್ ಆಗಿತ್ತು. ಗಾಬರಿಗೊಂಡಿದ್ದ ಪೋಷಕರು ಆಕೆಯ ಸ್ನೇಹಿತೆ ಪಿಟುನಿಯಾಳನ್ನು ಸಂಪರ್ಕಿಸಿದ್ದರು. ಸ್ನೇಹಾಳನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ವಿಶ್ವಕ್ಕೇ ಮಾದರಿಯಾದ ಭಾರತ – ಮಿಷನ್ ಇಂದ್ರಧನುಷ್ ಯಶಸ್ಸಿಗೆ ವಿಶ್ವಸಂಸ್ಥೆ ಶ್ಲಾಘನೆ

    ಬಳಿಕ ಸ್ನೇಹಾ ಪೋಷಕರು, ಕ್ಯಾಬ್ ಚಾಲಕನನ್ನು ಪತ್ತೆಹಚ್ಚಿ, ಮಗಳ ಚಲನವಲನದ ಮಾಹಿತಿ ಪಡೆದಿದ್ದರು. ಈ ವೇಳೆ ಸ್ನೇಹಾಳನ್ನು ದೆಹಲಿಯ ಸಿಗ್ನೇಚರ್ ಸೇತುವೆಯ ಬಳಿ ಬಿಟ್ಟಿರುವುದಾಗಿ ಮಾಹಿತಿ ನೀಡಿದ್ದ. ಬಳಿಕ ದೆಹಲಿ ಪೊಲೀಸರು ಪಕ್ಕದಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಆಕೆಯ ದೃಶ್ಯ ಸರಿಯಾಗಿ ಗೋಚರವಾಗಿಲ್ಲ. ಇದನ್ನೂ ಓದಿ: J&K | ಮೂರು ಬಸ್‌ಗಳ ನಡುವೆ ಅಪಘಾತ – 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರಿಗೆ ಗಾಯ

    ಇದರಿಂದ ಸಂಶಯಗೊಂಡ ಪೊಲೀಸರು ಸೇತುವೆಯ ಬಳಿ ಶೋಧ ಕಾರ್ಯ ನಡೆಸಿದ್ದರು. ಸತತ ಒಂದು ವಾರಗಳ ಕಾಲ ಹುಡುಕಾಡಿದರೂ ಸ್ನೇಹಾ ಪತ್ತೆಯಾಗಿಲಿಲ್ಲ.

    ಘಟನೆ ಕುರಿತು ಯುವತಿ ಪೋಷಕರು ತ್ರಿಪುರ ಸಿಎಂ ಮಾಣಿಕ್ ಸಹಾ (Manik Saha) ಅವರಿಗೆ ಮಾಹಿತಿ ನೀಡಿದ್ದಾರೆ. ಮಾಣಿಕ್ ಸಹಾ ಅವರು ಸ್ನೇಹಾ ಪತ್ತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

  • ಬಾಂಗ್ಲಾದೇಶದಲ್ಲಿ ಜೈಲಲ್ಲಿದ್ದ ಟೆರರಿಸ್ಟ್‌ಗಳು ಈಗ ರಿಲೀಸ್‌ ಆಗಿದ್ದಾರೆ: ತ್ರಿಪುರಾ ಸಿಎಂ ಕಳವಳ

    ಬಾಂಗ್ಲಾದೇಶದಲ್ಲಿ ಜೈಲಲ್ಲಿದ್ದ ಟೆರರಿಸ್ಟ್‌ಗಳು ಈಗ ರಿಲೀಸ್‌ ಆಗಿದ್ದಾರೆ: ತ್ರಿಪುರಾ ಸಿಎಂ ಕಳವಳ

    – ಬಾಂಗ್ಲಾದೊಂದಿಗೆ ತ್ರಿಪುರಾ ರಾಜ್ಯ ಗಡಿ ಹಂಚಿಕೊಂಡಿದೆ

    ಅಗರ್ತಲಾ: ಶೇಖ್ ಹಸೀನಾ ಅವರು ಬಾಂಗ್ಲಾದೇಶದಲ್ಲಿ ಪ್ರಧಾನಿಯಾಗಿದ್ದಾಗ ಜೈಲಿನಲ್ಲಿದ್ದ ಅನೇಕ ಭಯೋತ್ಪಾದಕರು ಈಗ ಬಿಡುಗಡೆಯಾಗಿದ್ದಾರೆ. ಭಾರತದ ತ್ರಿಪುರಾ ರಾಜ್ಯ ಬಾಂಗ್ಲಾದೇಶದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ ಎಂದು ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಹಾ (Manik Saha) ಕಳವಳ ವ್ಯಕ್ತಪಡಿಸಿದ್ದಾರೆ.

    ಸಿಎಂ ಸಹಾ ಅವರು ಬಾಂಗ್ಲಾದೇಶದ ಪ್ರಸ್ತುತ ಸರ್ಕಾರವನ್ನು ಟೀಕಿಸಿದರು. ಅಲ್ಲಿ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ʻಇವಿಎಂ ಹ್ಯಾಕ್‌ ಮಾಡಬಹುದುʼ – ವಿಡಿಯೋ ಹರಿಬಿಟ್ಟವನ ವಿರುದ್ಧ ಎಫ್‌ಐಆರ್

    ಬಾಂಗ್ಲಾದೇಶದಲ್ಲಿ ಪರಿಸ್ಥಿತಿ ಚೆನ್ನಾಗಿಲ್ಲ, ಅಲ್ಲಿನ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ? ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಮಗೆ ಬರುತ್ತಿರುವ ಸುದ್ದಿಗಳು ಒಳ್ಳೆಯದಲ್ಲ. ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಕಿಡಿಕಾರಿದ್ದಾರೆ.

    ಆಗ ಶೇಖ್ ಹಸೀನಾ ಸರ್ಕಾರದ ಅವಧಿಯಲ್ಲಿ ಜೈಲು ಸೇರಿದ್ದ ಭಯೋತ್ಪಾದಕರು ಈಗ ಮುಕ್ತರಾಗಿದ್ದಾರೆ. ಅವರು ಈಗ ಎಲ್ಲಿದ್ದಾರೆ? ಅವರ ಇರುವಿಕೆಯ ಬಗ್ಗೆ ನಾವು ಚಿಂತಿತರಾಗಿದ್ದೇವೆ. ವಿಶೇಷವಾಗಿ ತ್ರಿಪುರಾ, ಬಾಂಗ್ಲಾದೇಶದೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಭಯೋತ್ಪಾದಕರು ಈಗ ಎಲ್ಲಿದ್ದಾರೆ ಮತ್ತು ಅವರ ಚಟುವಟಿಕೆ ಏನು ಎಂಬುದನ್ನು ಅವರು ಪರಿಶೀಲಿಸಬೇಕು. ಈಗಿನ ಸರ್ಕಾರವು ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ವಹಿಸಬೇಕು ಎಂದು ನಾನು ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಫೆಂಗಲ್‌ ಚಂಡಮಾರುತ | ಲ್ಯಾಂಡ್‌ ಆಗಲು ಪರದಾಡಿ ಮತ್ತೆ ಹಾರಿದ ವಿಮಾನ – ವಿಡಿಯೋ ವೈರಲ್‌

    ಭಾರತ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಅಂತಿಮವಾಗಿ ಭಾರತವಿಲ್ಲದೆ ಬಾಂಗ್ಲಾದೇಶದ ಅಸ್ತಿತ್ವವು ಸಾಧ್ಯವಿಲ್ಲ. ಆದ್ದರಿಂದ ಅವರೂ ಈ ಬಗ್ಗೆ ಯೋಚಿಸಬೇಕು. ಅವರ ಜಿಡಿಪಿ ಈ ಹಿಂದೆ ಏರಿಕೆ ಕಂಡಿತ್ತು. ಆದರೆ, ಈಗ ಕುಸಿಯುತ್ತಿದೆ ಎಂದು ಎಚ್ಚರಿಸಿದ್ದಾರೆ.

  • ತಾಯಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಟರು – ಪಾಪಿಗಳು ಅರೆಸ್ಟ್

    ತಾಯಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ದುಷ್ಟರು – ಪಾಪಿಗಳು ಅರೆಸ್ಟ್

    ಅಗರ್ತಲಾ: ಇಬ್ಬರು ಮಕ್ಕಳು ಸೇರಿ ತಾಯಿಯನ್ನು (Mother) ಮರಕ್ಕೆ ಕಟ್ಟಿ ಜೀವಂತವಾಗಿ ಸುಟ್ಟು ಹಾಕಿದ ಅಮಾನವೀಯ ಘಟನೆ ಪಶ್ಚಿಮ ತ್ರಿಪುರಾದಲ್ಲಿ (Tripura) ನಡೆದಿದೆ.

    ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ನಿಲ್ದಾಣ ನಿರ್ಮಾಣವಾಗಿ 12 ವರ್ಷ ಕಳೆದರೂ ಇನ್ನೂ ಆರಂಭಗೊಂಡಿಲ್ಲ ನಗರ ಸಾರಿಗೆ!

    ಮಹಿಳೆಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಲಾಗಿದೆ ಎಂಬ ಮಾಹಿತಿ ತಿಳಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಜಿರಾನಿಯಾದ ಉಪವಿಭಾಗದ ಪೊಲೀಸ್ (Police) ಅಧಿಕಾರಿ ಕಮಲ್ ಕೃಷ್ಣ ಕೊಲೊಯ್ ತಿಳಿಸಿದ್ದಾರೆ.

    ಹತ್ಯೆಗೀಡಾದ ಮಹಿಳೆಯ ಇಬ್ಬರು ಪುತ್ರರನ್ನು ಬಂಧಿಸಿದ್ದೇವೆ. ಆರೋಪಿಗಳನ್ನು ಇಂದು (ಸೋಮವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಮಹಿಳೆ ಸುಮಾರು ಒಂದೂವರೆ ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡ ನಂತರ ತನ್ನ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಆಕೆಯ ಇನ್ನೊಬ್ಬ ಮಗ ಅಗರ್ತಲಾದಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಇಂದಿನಿಂದ ಸಿಎಂ ವಿರುದ್ಧ ಮುಡಾ ತನಿಖೆ ಆರಂಭ

  • ಶಾಲೆಯಿಂದ ಮರಳುವಾಗ 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಶಾಲೆಯಿಂದ ಮರಳುವಾಗ 5ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್

    ಅಗರ್ತಲಾ: ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ 5ನೇ ತರಗತಿ ಬಾಲಕಿ ಮೇಲೆ ಕಾಮುಕರ ಗ್ಯಾಂಗ್‌ವೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತ್ರಿಪುರಾದ ದಕ್ಷಿಣಭಾಗದ (Tripura South District) ಜಿಲ್ಲೆಯೊಂದರಲ್ಲಿ ನಡೆದಿದೆ.

    ಇತ್ತೀಚಿಗಷ್ಟೇ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಗ್ಯಾಂಗ್‌ರೇಪ್ (Gang Rape) ನಡೆದ ಪ್ರಕರಣ ಬೆಳಿಕಿಗೆ ಬಂದಿತ್ತು. ಇದಾದ ಮಾರನೇ ದಿನವೇ ಘಟನೆ ನಡೆದಿದೆ.ಇದನ್ನೂ ಓದಿ: 7 ತಿಂಗಳ ಹಿಂದಷ್ಟೇ ನಾನು ಬ್ರೇಕಪ್ ಮಾಡಿಕೊಂಡೆ: ಮೃಣಾಲ್ ಠಾಕೂರ್

    ಶಾಲೆಯಿಂದ ಮಗಳು ಹಿಂದಿರುಗದೇ ಇದ್ದಾಗ ಸಂತ್ರಸ್ತ ಬಾಲಕಿಯ ಪೋಷಕರು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಿದ್ದಾರೆ. ಎಷ್ಟೇ ಹುಡುಕಿದರೂ ಸಿಗದೇ ಇದ್ದಾಗ ತ್ರಿಪುರಾದ ಬೆಲೊನಿಯಾ ಮಹಿಳಾ ಪೊಲೀಸ್ (Belonia Women Police Station) ಠಾಣೆಯಲ್ಲಿ ದೂರು ನೀಡಿದ್ದಾರೆ.

    ಬೆಲೊನಿಯಾ ಠಾಣೆಯ ಓರ್ವ ಅಧಿಕಾರಿ ಮಾತನಾಡಿ, ಶಾಲೆಗೆ ಹೋದ ಮಗಳು ಮನೆಗೆ ಬರಲಿಲ್ಲ ಎಂಬ ದೂರಿನ ಆಧಾರದ ಮೇಲೆ ತನಿಖೆಯನ್ನು ಪ್ರಾರಂಭಿಸಿದಾಗ ಶನಿವಾರ ಸಂಜೆ ಸಂತ್ರಸ್ತ ಬಾಲಕಿಯ ಮನೆ ಹತ್ತಿರದಲ್ಲಿ ಆಕೆಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಾಲಕಿಯ ಪರಿಚಯಸ್ಥನೊಬ್ಬ ಮನೆ ಬಳಿ ಬಿಟ್ಟು ಹೋಗಿರುವುದು ನಂತರ ಗೊತ್ತಾಗಿದೆ. ತನಿಖೆ ಮಾಡಿದಾಗ ಆತ ಅದೇ ಬಡಾವಣೆಯ 22 ವರ್ಷದ ಹುಡುಗ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಾರೆ.

    ಇಲ್ಲಿಯವರೆಗೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ ಆದರೆ ಆರೋಪಿಯ ಮೇಲೆ ಭಾರತೀಯ ನ್ಯಾಯ ಸಂಹಿತೆಯ ಪೋಕ್ಸೋ ಕಾಯ್ದೆ ಹಾಗೂ ಬೇರೆ ಬೇರೆ ಸೆಕ್ಷನ್‌ಗಳಡಿಯಲ್ಲಿ ಆರೋಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಶುಕ್ರವಾರ ತ್ರಿಪುರಾದ ಉತ್ತರ ಭಾಗದ ಜಿಲ್ಲೆಯೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಕೇಳಿಬಂದಿತ್ತು. ಅದಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿಲಾಗಿದೆ. ಸಂಜೆ ಹೊತ್ತಲ್ಲಿ ಅಂಗಡಿಗೆ ಎಂದು ಬಂದ ಬಾಲಕಿಯನ್ನು ಹತ್ತಿರದ ಕಾಡಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಬಾಲಕಿಯನ್ನು ಕಂಡ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು, ಪೋಷಕರಿಗೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಮುಂದಿನ 24 ಗಂಟೆಯಲ್ಲಿ ದೆಹಲಿ ಗದ್ದುಗೆಗೆ ನೂತನ ಸಾರಥಿ – ಸಿಎಂ ರೇಸ್‌ನಲ್ಲಿರುವ ಟಾಪ್‌ -5 ಕಲಿಗಳು ಯಾರು?

    ಕಳೆದ ತಿಂಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆ ತ್ರಿಪುರಾ ದಕ್ಷಿಣ ಭಾಗದ ಇಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.

  • ಅಕ್ರಮವಾಗಿ ಭಾರತ ಪ್ರವೇಶಿಸಿದ 16 ಬಾಂಗ್ಲಾ ಪ್ರಜೆಗಳ ಬಂಧನ

    ಅಕ್ರಮವಾಗಿ ಭಾರತ ಪ್ರವೇಶಿಸಿದ 16 ಬಾಂಗ್ಲಾ ಪ್ರಜೆಗಳ ಬಂಧನ

    ಅಗರ್ತಲ: ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ 16 ಬಾಂಗ್ಲಾದೇಶದ (Bangladesh) ಪ್ರಜೆಗಳನ್ನು ಪೊಲೀಸರು ಬಂಧಿಸಿದ ಘಟನೆ ತ್ರಿಪುರಾದ (Tripura) ಅಗರ್ತಲಾ ರೈಲ್ವೆ ನಿಲ್ದಾಣದಲ್ಲಿ (Agartala Railway Station) ನಡೆದಿದೆ.

    ಬಂಧಿತರಲ್ಲಿ ಮೂವರು ಮಹಿಳೆಯರು. 16 ಬಾಂಗ್ಲಾದೇಶಿ ಪ್ರಜೆಗಳನ್ನು ಮಂಗಳವಾರ ರಾತ್ರಿ ಅಗರ್ತಲಾ ರೈಲು ನಿಲ್ದಾಣದಿಂದ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ರೈಲು ಹತ್ತುವ ಮೊದಲು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸ ಕ್ರಿಮಿನಲ್ ಕಾನೂನುಗಳು ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ ಗೌರವ: ದ್ರೌಪದಿ ಮುರ್ಮು

    ಅಗರ್ತಲಾ ರೈಲು ನಿಲ್ದಾಣವು ಬಾಂಗ್ಲಾದೇಶದ ಗಡಿಯಿಂದ ಸುಮಾರು 6 ಕಿ.ಮೀ ದೂರದಲ್ಲಿದೆ. ಬಂಧಿತರು ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಲು ಮತ್ತು ಉದ್ಯೋಗದ ಹುಡುಕಾಟದಲ್ಲಿ ಭಾರತಕ್ಕೆ ಪ್ರವೇಶಿಸಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಇದನ್ನೂ ಓದಿ: ವಿನೇಶ್‌ ಫೋಗಟ್‌ ಅರ್ಜಿ ವಜಾ – ಸಿಗಲ್ಲ ಬೆಳ್ಳಿ ಪದಕ

    20 ರಿಂದ 40 ವರ್ಷ ವಯಸ್ಸಿನ 16 ಬಾಂಗ್ಲಾದೇಶೀಯರಲ್ಲಿ ಹದಿಮೂರು ಮಂದಿ ರಾಜಶಾಹಿ ವಿಭಾಗದ ಚಪೈನವಾಬ್‌ಗಂಜ್ ಜಿಲ್ಲೆಯ ನಿವಾಸಿಗಳಾಗಿದ್ದರೆ, ಉಳಿದ ಮೂವರು ಢಾಕಾ ವಿಭಾಗದ ಗಾಜಿಪುರ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಾಸ್ಪದ ಕುಕ್ಕರ್ ಸ್ಫೋಟ – ಓರ್ವ ಸಾವು, ಮತ್ತೋರ್ವ ಗಂಭೀರ

    ಕಳೆದ ಮೂರು ತಿಂಗಳಿನಿಂದ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದಕ್ಕಾಗಿ ಸುಮಾರು 250 ಬಾಂಗ್ಲಾದೇಶಿ ಪ್ರಜೆಗಳು ಮತ್ತು 32 ರೋಹಿಂಗ್ಯಾಗಳನ್ನು ಜಿಆರ್‌ಪಿ, ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಮತ್ತು ತ್ರಿಪುರ ಪೊಲೀಸರು ಅಗರ್ತಲಾ ರೈಲು ನಿಲ್ದಾಣ ಮತ್ತು ತ್ರಿಪುರದ ವಿವಿಧ ಸ್ಥಳಗಳಿಂದ ಬಂಧಿಸಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು : ಯದುವೀರ್

  • ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಾಜಿ ಮಿಸ್‌ ಇಂಡಿಯಾ ತಾರೆ 28ನೇ ವಯಸ್ಸಿಗೆ ಸಾವು!

    ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಾಜಿ ಮಿಸ್‌ ಇಂಡಿಯಾ ತಾರೆ 28ನೇ ವಯಸ್ಸಿಗೆ ಸಾವು!

    ಅಗರ್ತಲಾ: ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್‌ನಿಂದ (Dies Of Cancer) ಬಳಲುತ್ತಿದ್ದ ತ್ರಿಪುರಾ ಮೂಲದ ಮಾಜಿ ಮಿಸ್‌ ಇಂಡಿಯಾ ತಾರೆ ರಿಂಕಿ ಚಕ್ಮಾ (Rinky Chakma) (28) ನಿಧನರಾಗಿದ್ದಾರೆ.

    ಶಸ್ತ್ರಚಿಕಿತ್ಸೆ ಬಳಿಕವು ಕಳೆದ ಎರಡು ವರ್ಷಗಳಿಂದ ಬಳಲುತ್ತಿದ್ದ ಚಕ್ಮಾ ನಿಧನರಾಗಿದ್ದಾರೆ. ಫೆಮಿನಾ ಮಿಸ್‌ ಇಂಡಿಯಾ (Femina Miss India) ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಈ ಕಷ್ಟದ ಸಮಯದಲ್ಲಿ ಚಕ್ಮಾ ಕುಟುಂಬಸ್ಥರು ಹಾಗೂ ಆಪ್ತರಿಗೆ ದುಃಖ ಬರಿಸುವ ಶಕ್ತಿ ದೇವರು ಕೊಡಲಿ ಎಂದು ಬಂಧುಮಿತ್ರರು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ದೀದಿ ಸರ್ಕಾರ ಉರುಳಿಸೋ ವರೆಗೂ ತಲೆ ಕೂದಲು ಬೆಳೆಸಲ್ಲ: ಶಪಥ ಮಾಡಿದ್ದ ‘ಕೈ’ ನಾಯಕ ಬಿಜೆಪಿ ಸೇರ್ಪಡೆ

     

    View this post on Instagram

     

    A post shared by Femina Miss India (@missindiaorg)

    ಶಸ್ತ್ರಚಿಕಿತ್ಸೆ ಬಳಿಕ ಚಿಕಿತ್ಸಾ ವಿಧಾನಗಳನ್ನು ಚಾಚೂ ತಪ್ಪದೇ ಪಾಲಿಸುತ್ತಿದ್ದ ಚಕ್ಮಾ, ಶೀಘ್ರ ಗುಣಮುಖವಾಗಿ ಮತ್ತೆ ಸಹಜ ಜೀವನಕ್ಕೆ ಮರಳುತ್ತೇನೆ ಅನ್ನೋ ಭರವಸೆಯಲ್ಲಿದ್ದರು. ಆದ್ರೆ ಆಕೆ ಗುಣಮುಖಳಾಗುವುದಿಲ್ಲ ಎಂದು ತಿಳಿದ ನಂತರ ತನಗೆ ಸ್ತನ ಕ್ಯಾನ್ಸರ್‌ (ಫೈಲೋಡ್ಸ್ ಟ್ಯೂಮರ್) ಇರೋದನ್ನ ಬಹಿರಂಗಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಶೀಘ್ರ ಬಿಡುಗಡೆ – ಆಯ್ಕೆಗೆ ಮೋದಿ, ಅಮಿತ್‌ ಶಾ ತಂತ್ರವೇನು?

    ಚಕ್ಮಾ ಮೊದಲ ಬಾರಿಗೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿತು, ತಲೆ ಭಾಗದಲ್ಲಿ ಗಡ್ಡೆ ಬೆಳೆಯಿತು (ಮೆದುಳಿನ ಗಡ್ಡೆ). ಇದರಿಂದ ಕಿಮೋಥೆರಪಿಗೆ ಒಳಗಾಗಿದ್ದರು. ಈ ವೇಳೆ ಕುಟುಂಬದಲ್ಲಿ ಆರ್ಥಿಕ ಸಮಸ್ಯೆಯೂ ಉಂಟಾಗಿ ಇದ್ದ ಹಣವೆಲ್ಲ ಖಾಲಿಯಾಯ್ತು. ನಂತರ ಮೆದುಳಿನ ಶಸ್ತ್ರಚಿಕಿತ್ಸೆಗಾಗಿ ದೇಣಿಗೆ ಸಂಗ್ರಹಿಸಲು ಶುರು ಮಾಡಿದರು. ಅಷ್ಟರಲ್ಲೇ ಚಕ್ಮಾ ನಿಧನರಾದರು. ಇದನ್ನೂ ಓದಿ: ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದವರನ್ನು ರಕ್ಷಿಸಿದ್ದ ರ‍್ಯಾಟ್ ಹೋಲ್ ಮೈನಿಂಗ್ ಹೀರೋ ಮನೆ ನೆಲಸಮಗೊಳಿಸಿದ ಅಧಿಕಾರಿಗಳು

    ರಿಂಕಿ ಚಕ್ಮಾ ಅವರು 2017 ರಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ‘ಬ್ಯೂಟಿ ವಿತ್ ಎ ಪರ್ಪಸ್’ ಪ್ರಶಸ್ತಿಯನ್ನು ಗಳಿಸಿದ್ದರು. ಜೊತೆಗೆ ಮಾನುಷಿ ಚಿಲ್ಲರ್ ಪ್ರಶಸ್ತಿಯನ್ನು ಗೆದ್ದಿದ್ದರು.

    ಸ್ತನ ಕ್ಯಾನ್ಸರ್‌ಗೆ ಕಾರಣಗಳೇನು..?
    * ಮಹಿಳೆಯರಲ್ಲಿ ಹೆಚ್ಚಾದ ಮದ್ಯಪಾನ ಹಾಗೂ ಧೂಮಪಾನ
    * ಪಾಶ್ಚಿಮಾತ್ಯ ಜೀವನ ಶೈಲಿ ಹಾಗೂ ಡಯಟ್ ಪ್ಲಾನ್
    * ಅತಿ ಬೇಗನೇ ಋತುಸ್ರಾವ
    * ತಡವಾದ ಋತುಬಂಧ
    * ಸಂತಾನೋತ್ಪತ್ತಿ ಅಂಶಗಳು
    * ಗರ್ಭನಿರೋಧಕ ಬಳಕೆ
    * ಹಾರ್ಮೋನು ಬದಲಾವಣೆಯ ಚಿಕಿತ್ಸೆ
    * ಬೊಜ್ಜು, ತೂಕ ಹೆಚ್ಚಾಗುವುದು ಹಾಗೂ ಕೊಬ್ಬಿನ ಅಂಶ ಈ ಎಲ್ಲವುಗಳು ಸ್ತನ ಕ್ಯಾನ್ಸರ್‍ಗೆ ಕಾರಣವಾಗಿರುತ್ತದೆ.

    ಆರಂಭಿಕ ಲಕ್ಷಣಗಳು:
    * ಒಂದು ಅಥವಾ ಎರಡೂ ಸ್ತನಗಳಲ್ಲಿ ಊತ ಅಥವಾ ಕೆಂಪಾಗುವಿಕೆಯಂತಹ ಸ್ಪಷ್ಟ ವ್ಯತ್ಯಾಸಗಳು
    * ಸ್ತನಗಳ ಗಾತ್ರ ಅಥವಾ ಆಕಾರದಲ್ಲಿ ಬದಲಾವಣೆ
    * ಒಂದು ಅಥವಾ ಎರಡೂ ಮೊಲೆತೊಟ್ಟುಗಳ ಹಿಂತೆಗೆದುಕೊಳ್ಳುವಿಕೆ
    * ಎದೆ ಹಾಲು ಹೊರತುಪಡಿಸಿ ನಿಪ್ಪಲ್ ಡಿಸ್ಚಾರ್ಜ್
    * ಸ್ತನಗಳಲ್ಲಿ / ಸುತ್ತಲೂ ಅಸಾಮಾನ್ಯ ನೋವು
    * ಸ್ತನದ ಮೇಲೆ ಅಥವಾ ಒಳಗೆ ಗಂಟುಗಳು ಅಥವಾ ಊತಗಳು

  • ಸಿಂಹಗಳಿಗೆ ಅಕ್ಬರ್-ಸೀತಾ ನಾಮಕರಣ ಮಾಡಿದ್ದ ಅಧಿಕಾರಿ ಅಮಾನತು

    ಸಿಂಹಗಳಿಗೆ ಅಕ್ಬರ್-ಸೀತಾ ನಾಮಕರಣ ಮಾಡಿದ್ದ ಅಧಿಕಾರಿ ಅಮಾನತು

    ಅಗರ್ತಲಾ: ತ್ರಿಪುರಾದ ಮೃಗಾಲಯದಲ್ಲಿ ಸಿಂಹ ಮತ್ತು ಸಿಂಹಿಣಿಗೆ ಅಕ್ಬರ್-ಸೀತಾ ಎಂದು ನಾಮಕರಣ ಮಾಡಿದ ಅಧಿಕಾರಿಯನ್ನು ಸರ್ಕಾರ ಇದೀಗ ಅಮಾನತುಗೊಳಿಸಿದೆ.

    ನಾಮಕರಣದ ವಿವಾದದ ನಡುವೆ, ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಬಿನ್ ಲಾಲ್ ಅಗರ್ವಾಲ್ ರನ್ನು ಸರ್ಕಾರ ಅಮಾನತುಗೊಳಿಸಿದೆ. ಈ ಹೆಸರುಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಲ್ಕತ್ತಾ ಹೈಕೋರ್ಟ್‌ನಲ್ಲಿ ದೂರಿನ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ.

    ಫೆಬ್ರವರಿ 12 ರಂದು ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್‌ಗೆ ಎರಡು ಸಿಂಹಗಳನ್ನು ತರಲಾಯಿತು. ಉತ್ತರ ಬಂಗಾಳದ ಸಿಲಿಗುರಿಯ ಬೆಂಗಾಲ್ ಸಫಾರಿಯಿಂದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿಯಲ್ಲಿ ಈ ಹುಲಿಗಳನ್ನು ತರಲಾಯಿತು. ಆ ಬಳಿಕ ಈ ಎರಡೂ ಸಿಂಹಗಳನ್ನು ಒಂದೇ ಆವರಣದಲ್ಲಿ ಹಾಕಲಾಗಿದೆ ಎನ್ನುವುದರ ಜೊತೆ ಅವುಗಳ ಹೆಸರು ಭಾರೀ ಚರ್ಚೆಗೆ ಗ್ರಾಸವಾಯಿತು.

    ಇತ್ತ ಹೆಸರು ಬದಲಾವಣೆಗೆ ಒತ್ತಾಯಿಸಿ ವಿಎಚ್‌ಪಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಇದರಿಂದ ಹಿಂದೂ ಧರ್ಮದ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿತ್ತು. ಎರಡೂ ಪ್ರಾಣಿಗಳಿಗೆ ಆಯ್ಕೆ ಮಾಡಿರುವ ಹೆಸರುಗಳ ಬಗ್ಗೆ ನ್ಯಾಯಮೂರ್ತಿ ಭಟ್ಟಾಚಾರ್ಯ ಅಸಮ್ಮತಿ ವ್ಯಕ್ತಪಡಿಸಿ ಹೆಸರು ಬದಲಾವಣೆ ಮಾಡುವಂತೆ ಸೂಚಿಸಿದ್ದರು.