Tag: Trisha

  • ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?

    ಗ್‌ ಲೈಫ್ (Thug Life) ಚಿತ್ರ ಜೂನ್ 5 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಹೊತ್ತಲ್ಲೇ ನಾಯಕಿಯಾಗಿ ನಟಿಸಿರುವ ತ್ರಿಷಾ (Trisha) ಎಷ್ಟು ಸಂಭಾವನೆ ಪಡೆದಿದ್ದಾರೆ ಎನ್ನುವ ವಿಚಾರ ಹರಿದಾಡುತ್ತಿದೆ. ದಕ್ಷಿಣ ಭಾರತದಲ್ಲಿ ಹೆಚ್ಚು ಸಂಭಾವನೆ ಪಡೆಯುವವರ ಪಟ್ಟಿಯಲ್ಲಿರುವ ಅವರು, ಈ ಚಿತ್ರಕ್ಕಾಗಿ 12 ಕೋಟಿ ರೂ. ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ.

    ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿತ್ರದ ಬಿಡುಗಡೆ ಸಮೀಪಿಸುತ್ತಿದ್ದು, ಚಿತ್ರತಂಡವು ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದೆ.

    ಚಿತ್ರದಲ್ಲಿ ʻಶುಗರ್ ಬೇಬಿʼಹಾಡಿಗೆ ತ್ರಿಷಾ ಅದ್ಭುತವಾಗಿ ಸೊಂಟ ಬಳುಕಿಸಿದ್ದಾರೆ. ಆದರೆ ಈ ಹಾಡು ಬಿಡುಗಡೆಯಾದಾಗ ವಿವಾದ ಆಗುತ್ತಾ ಎಂಬ ಚರ್ಚೆ ಹುಟ್ಟುಹಾಕಿತ್ತು. ಯಾಕಂದ್ರೆ ʻಶುಗರ್‌ ಬೇಬಿʼ ಪದ ಸಾಮಾನ್ಯವಾಗಿ ಹಣಕ್ಕಾಗಿ ವಯಸ್ಸಾದ ಪುರುಷನೊಂದಿಗೆ ಕಿರಿಯ ಯುವತಿ ಹೊಂದಿರುವ ಸಂಬಂಧವನ್ನು ಸೂಚಿಸುತ್ತದೆ. ಇದರಿಂದ ಚಿತ್ರದಲ್ಲಿ ತ್ರಿಷಾ (Trisha) ಅವರನ್ನು ವಿವಾದಾತ್ಮಕ ಪಾತ್ರದಲ್ಲಿ ಚಿತ್ರಿಸಿರಬಹುದು ಎಂಬ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿದೆ. ಈಗಾಗಲೇ ಹಾಡಿನ ಪ್ರೋಮೋ ಅನೇಕರ ಕುತೂಹಲ ಕೆರಳಿಸಿದೆ.

    ಮೇ 17 ರಂದು ಚಿತ್ರದ ಟ್ರೈಲರ್‌ ರಿಲೀಸ್‌ ಆಗಿತ್ತು. ಇದರಲ್ಲಿ ಕಮಲ್‌ ಹಾಸನ್‌ (Kamal Haasan) ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ ಮಾಡುವ ಸೀನ್‌ ಅಭಿಮಾನಿಗಳ ಕಾತರವನ್ನು ಹೆಚ್ಚಿಸಿತ್ತು. ಇನ್ನೂ ಸಿನಿ ರಸಿಕರ ಈ ಕಾತರ ತಣಿಯಲು ಜೂ.5ರ ವರೆಗೆ ಕಾಯಲೇ ಬೇಕಿದೆ.

    ಥಗ್‌ ಲೈಫ್‌ನಲ್ಲಿ ತಮಿಳು ಚಿತ್ರರಂಗದ ಪ್ರಮುಖ ನಟ ಕಮಲ್ ಹಾಸನ್ ನಾಯಕನಾಗಿ ಈ ಚಿತ್ರದಲ್ಲಿ ನಟಿಸಿದ್ದಾರೆ. ಅವರ ಜೊತೆ ಸಿಂಬು, ತ್ರಿಷಾ, ಮತ್ತು ಅಭಿರಾಮಿ ಸೇರಿದಂತೆ ಪ್ರಮುಖ ನಟ ನಟಿಯರು ಚಿತ್ರದಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಮಣಿರತ್ನಂ ತಗ್ ಲೈಫ್ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಇನ್ನೂ ಚಿತ್ರದ ಪ್ರಮೋಷನ್‌ ವೇಳೆ ಬೆಂಗಳೂರಿನಲ್ಲಿ ಕಮಲ್‌ ಹಾಸನ್‌ ನೀಡಿದ್ದ ಕನ್ನಡ ವಿರೋಧಿ ಹೇಳಿಕೆಯಿಂದ, ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ಕಂಟಕ ತಂದೊಡ್ಡುವ ಆತಂಕ ಎದುರಾಗಿದೆ.

  • ಥಗ್‌ಲೈಫ್‌ಲ್ಲಿ ‘ಶುಗರ್ ಬೇಬಿ’ ತ್ರಿಷಾ ಮಿಂಚಿಂಗ್‌ – ವಿವಾದಕ್ಕೀಡಾಗುತ್ತಾ ಹಾಡು?

    ಥಗ್‌ಲೈಫ್‌ಲ್ಲಿ ‘ಶುಗರ್ ಬೇಬಿ’ ತ್ರಿಷಾ ಮಿಂಚಿಂಗ್‌ – ವಿವಾದಕ್ಕೀಡಾಗುತ್ತಾ ಹಾಡು?

    ಣಿರತ್ನಂ ನಿರ್ದೇಶನದ ಕಮಲ್ ಹಾಸನ್ (Kamal Haasan) ನಟಿಸಿರುವ ಬಹುನಿರೀಕ್ಷಿತ ‘ಥಗ್‌ಲೈಫ್’ (Thuglife) ಚಿತ್ರದ ʻಶುಗರ್‌ ಬೇಬಿʼ (Sugar Baby) ಹಾಡು ವಿವಾದಕ್ಕೀಡಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಸಿನಿಪ್ರಿಯರಲ್ಲಿ ಶುರುವಾಗಿದೆ.

    ʻಶುಗರ್ ಬೇಬಿʼ ಎಂಬ ಪದವು ಸಾಮಾನ್ಯವಾಗಿ ಹಣಕ್ಕಾಗಿ ವಯಸ್ಸಾದ ಪುರುಷನೊಂದಿಗೆ ಕಿರಿಯ ಯುವತಿ ಹೊಂದಿರುವ ಸಂಬಂಧವನ್ನು ಸೂಚಿಸುತ್ತದೆ. ಇದರಿಂದ ಚಿತ್ರದಲ್ಲಿ ತ್ರಿಷಾ (Trisha) ಅವರನ್ನು ವಿವಾದಾತ್ಮಕ ಪಾತ್ರದಲ್ಲಿ ಚಿತ್ರಿಸಿರಬಹುದು ಎಂಬ ಊಹಾಪೋಹಕ್ಕೆ ಎಡೆಮಾಡಿಕೊಟ್ಟಿದೆ. ಮಂಗಳವಾರ ಹಾಡಿನ ಪ್ರೋಮೋ ಅನೇಕರ ಕುತೂಹಲ ಕೆರಳಿಸಿತ್ತು. ಇಂದು ಹಾಡು ಬಿಡುಗಡೆಯಾಗಲಿದ್ದು, ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಬಹುದೇ ಎಂಬ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ನಡೆಯುತ್ತಿದೆ. ಇದನ್ನೂ ಓದಿ: ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!

    ಚಿತ್ರದ ಸಂಗೀತ ಬಿಡುಗಡೆಯ ಭಾಗವಾಗಿ, ‘ಶುಗರ್ ಬೇಬಿ’ ಹಾಡು ಇಂದು ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದೆ. ಇನ್ನೂ ಈ ಹಾಡಿನ ಶೀರ್ಷಿಕೆ ಮತ್ತು ನಟಿ ತ್ರಿಷಾ ಮಿಂಚಿಂಗ್‌ ದೃಶ್ಯಗಳ ಪ್ರೋಮೋ ಈಗಾಗಲೇ ಆರಂಭಿಕ ಸಂಚಲನ ಮೂಡಿಸಿದೆ.

    ಪ್ರಚೋದನಕಾರಿ ವಿಷಯಗಳನ್ನು ನಿಭಾಯಿಸುವಲ್ಲಿ ಹೆಸರುವಾಸಿಯಾದ ಮಣಿರತ್ನಂ ಮತ್ತು ಕಮಲ್ ಹಾಸನ್ ಅವರ ಹಿಂದಿನ ವಿಚಾರಗಳನ್ನು ಗಮನಿಸಿದರೆ, ಈ ಚಿತ್ರವೂ ಅದೇ ಹಾದಿಯಲ್ಲಿ ಸಾಗ್ತಿದಿಯೇ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ. ಅಲ್ಲದೇ ಮಣಿರತ್ನಂ ನೀವು ಚೆನ್ನಾಗಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

    ಮೇ 17 ರಂದು ಟ್ರೈಲರ್‌ ರಿಲೀಸ್‌ ಆಗಿತ್ತು. ಇದರಲ್ಲಿ ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ ಮಾಡುವ ಸೀನ್‌ ಅಭಿಮಾನಿಗಳ ಕಾತರವನ್ನು ಹೆಚ್ಚಿಸಿತ್ತು. ಇನ್ನೂ ಸಿನಿ ರಸಿಕರ ಈ ಕಾತರ ತಣಿಯಲು ಜೂ.5ರ ವರೆಗೆ ಕಾಯಲೇ ಬೇಕಿದೆ! ಇದನ್ನೂ ಓದಿ: ಮಾದಕ ಲುಕ್‌ನಲ್ಲಿ ಮಿಂಚಿದ ರಶ್ಮಿಕಾ- ಶ್ರೀವಲ್ಲಿ ಬ್ಯೂಟಿಗೆ ಫ್ಯಾನ್ಸ್ ಫಿದಾ

  • ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!

    ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ – ಕಮಲ್ ಹಾಸನ್ ʻಥಗ್ ಲೈಫ್‌ʼ!

    ಮಲ್ ಹಾಸನ್ (Kamal Haasan) ಅಭಿನಯದ ʻಥಗ್‌ ಲೈಫ್ʼಚಿತ್ರದ (Thug Life) ಟ್ರೈಲರ್‌ ರಿಲೀಸ್‌ ಆಗಿದ್ದು, ತ್ರಿಷಾ ಜೊತೆ ರೊಮ್ಯಾನ್ಸ್.. ಅಭಿರಾಮಿಗೆ ಲಿಪ್‌ಲಾಕ್ ಮಾಡುವ ಸೀನ್‌ ಅಭಿಮಾನಿಗಳ ಕಾತುರ ಹೆಚ್ಚಿಸಿದೆ. ಸಿನಿ ರಸಿಕರ ಈ ಕಾತುರ ತಣಿಯಲು ಜೂ.5ರ ವರೆಗೆ ಕಾಯಲೇ ಬೇಕಿದೆ!

    ರಿಲೀಸ್‌ ಆಗಿರುವ ಟ್ರೈಲರ್‌ನಲ್ಲಿ ಕಮಲ್ ಹಾಸನ್ ನಟಿ ತ್ರಿಷಾ (Trisha) ಜೊತೆ ಪ್ರೇಮಿಯಂತೆ ಕಾಣಿಸಿಕೊಂಡಿದ್ದಾರೆ. ಇನ್ನೂ ನಟಿ ಅಭಿರಾಮಿ (Abhirami) ಜೊತೆ ಲಿಪ್‌ಲಾಕ್ ಮಾಡುವ ದೃಶ್ಯ ಪ್ರೇಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಚಿತ್ರದಲ್ಲಿ ಸಿಂಬು ಜೊತೆ ತ್ರಿಷಾ ಜೋಡಿಯಾಗುತ್ತಾರೆ ಎಂದು ಅಭಿಮಾನಿಗಳು ನಿರೀಕ್ಷಿಸಿದ್ದರು. ಆದರೆ ಕಮಲ್ ಜೊತೆ ತ್ರಿಷಾ ಅವರನ್ನು ನೋಡಿದ ನಂತರ ʻಏನಪ್ಪ ಈ ಥಗ್ ಲೈಫ್‌ʼ ಅಂತ ಜನ ತಲೆಗೆ ಹುಳ ಬಿಟ್ಟುಕೊಂಡಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ನಾನಾ ರೀತಿಯ ಚರ್ಚೆಗಳು ಈಗಾಗಲೆ ಆರಂಭವಾಗಿದೆ.

    ಚೆನ್ನೈ, ಕಾಂಚಿಪುರಂ, ಪಾಂಡಿಚೇರಿ, ನವದೆಹಲಿಯಲ್ಲಿ ‘ಥಗ್ ಲೈಫ್’ ಚಿತ್ರದ ಚಿತ್ರೀಕರಣ ನಡೆದಿದೆ. ಈಗಾಗಲೇ ಚಿತ್ರದ 4 ಹಾಡುಗಳು ಬಿಡುಗಡೆಯಾಗಿ ಸದ್ದು ಮಾಡುತ್ತಿವೆ. ನೆಟ್‌ಫ್ಲಿಕ್ಸ್ ಸಂಸ್ಥೆ 149 ಕೋಟಿ ರೂ.ಗೆ ಚಿತ್ರದ ಓಟಿಟಿ ರೈಟ್ಸ್ ಖರೀದಿಸಿದೆ ಎಂದು ವರದಿಯಾಗಿದೆ.

    ರಾಜ್ ಕಮಲ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಕಮಲ್ ಹಾಸನ್, ಸಿಂಬು, ತ್ರಿಷಾ, ಅಭಿರಾಮಿ, ಜೋಜು ಜಾರ್ಜ್, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ನಾಸರ್ ಸೇರಿದಂತೆ ಹಲವು ಪ್ರಮುಖ ತಾರೆಯರು ನಟಿಸಿದ್ದಾರೆ. ಚಿತ್ರಕ್ಕೆ ಮಣಿರತ್ನಂ ಹಾಗೂ ಕಮಲ್‌ ಇಬ್ಬರೂ ಕತೆ ಬರೆದಿದ್ದಾರೆ. ರೆಹಮಾನ್‌ ಸಂಗೀತ ಚಿತ್ರಕ್ಕೆ ದೊಡ್ಡ ಶಕ್ತಿಯಾಗುವ ನಿರೀಕ್ಷೆ ಇದೆ.

    ಕಳೆದ ವಾರವೇ ಚಿತ್ರದ ಟ್ರೈಲರ್ ಬಿಡುಗಡೆಗೆ ಸಿದ್ಧತೆ ನಡೆದಿತ್ತು. ಆದರೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ-ಪಾಕ್ ಗಡಿಯಲ್ಲಿ ಘರ್ಷಣೆಯಿಂದಾಗಿ ಕಮಲ್‌ ಹಾಸನ್‌ ಮುಂದೂಡಿದ್ದರು.

  • ಬರಲಿದೆ ವಿಜಯ್ ಸೇತುಪತಿ, ತ್ರಿಷಾ ನಟನೆಯ ’96’ ಚಿತ್ರದ ಸೀಕ್ವೆಲ್

    ಬರಲಿದೆ ವಿಜಯ್ ಸೇತುಪತಿ, ತ್ರಿಷಾ ನಟನೆಯ ’96’ ಚಿತ್ರದ ಸೀಕ್ವೆಲ್

    ವಿಜಯ್ ಸೇತುಪತಿ, ತ್ರಿಷಾ (Trisha Krishnan) ನಟನೆಯ ’96’ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ’96’ ಸಿನಿಮಾದ ಸೀಕ್ವೆಲ್ ಮಾಡೋದಾಗಿ ಚಿತ್ರದ ನಿರ್ದೇಶಕ ಪ್ರೇಮ್ ಕುಮಾರ್ ಘೋಷಿಸಿದ್ದಾರೆ. ಇದನ್ನೂ ಓದಿ:ನಾಗಶೇಖರ್ ಚಿತ್ರಕ್ಕೆ ಬಾಲಿವುಡ್ ನಟಿ ಆವಂತಿಕಾ ದಸ್ಸಾನಿ ನಾಯಕಿ

    2018ರಲ್ಲಿ ತೆರೆಕಂಡ ’96’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಈ ಸಿನಿಮಾದ ಪಾರ್ಟ್ 2 ಬಂದರೆ ಚೆನ್ನಾಗಿರುತ್ತದೆ ಎಂದು ಅದೆಷ್ಟೋ ಅಭಿಮಾನಿಗಳು ಎದುರು ನೋಡುತ್ತಿದ್ದರು. 6 ವರ್ಷಗಳ ಬಳಿಕ ಸೀಕ್ವೆಲ್ ಮಾಡಲು ನಿರ್ದೇಶಕ ಪ್ರೇಮ್ ತಯಾರಿ ಮಾಡಿಕೊಳ್ತಿದ್ದಾರೆ. 96 ಚಿತ್ರದ ಕ್ರೇಜ್ ನೋಡಿ ಮೊದಲ ಭಾಗದ ಕಥೆಯನ್ನೇ ಮುಂದುವರೆಸಲು ಡೈರೆಕ್ಟರ್‌ ಪ್ರೇಮ್ ನಿರ್ಧರಿಸಿದ್ದಾರೆ.

    ಸದ್ಯ ಸ್ಕ್ರೀಪ್ಟ್‌ ಕೂಡ ಸಿದ್ಧವಾಗಿದೆ. ವಿಭಿನ್ನವಾಗಿರೋ ಕಥೆಯನ್ನೇ ತೋರಿಸಲು ಸಜ್ಜಾಗಿದ್ದಾರೆ. ಇನ್ನೂ ಪಾರ್ಟ್ 2ನಲ್ಲಿಯೂ ನಟಿಸಲು ವಿಜಯ್ ಸೇತುಪತಿ ಮತ್ತು ತ್ರಿಷಾ ಕೇಳಲಿದ್ದಾರಂತೆ. ಅವರು ಓಕೆ ಎಂದರೆ ಶೀಘ್ರದಲ್ಲಿ ಸಿನಿಮಾ ಸೆಟ್ಟೇರಲಿದೆ.ಆದರೆ ಈ ಜೋಡಿ ಮತ್ತೆ ಜೊತೆಯಾಗಿ ನಟಿಸಲು ಒಪ್ಪಿಕೊಳ್ತಾರಾ ಎಂಬುದನ್ನು ಕಾದುನೋಡಬೇಕಿದೆ.

    ’96’ ಸಿನಿಮಾದಲ್ಲಿ ಮಾಜಿ ಪ್ರೇಮಿಗಳು ಹಲವು ವರ್ಷಗಳ ನಂತರ ಭೇಟಿಯಾದ ನಂತರ ಅವರ ನಡುವೆ ನಡೆಯುವ ಎಮೋಷನಲ್ ಸಂಗತಿಯನ್ನು ತೋರಿಸಿದ್ದರು. ವಿಜಯ್ ಸೇತುಪತಿ (Vijay Sethupathi)  ಮತ್ತು ತ್ರಿಷಾ ಮಾಜಿ ಪ್ರೇಮಿಗಳು ಪಾತ್ರಕ್ಕೆ ಜೀವತುಂಬಿದ್ದರು.

  • ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ಪ್ರಭಾಸ್‌ಗೆ ವಿಲನ್ ಆದ ತ್ರಿಷಾ

    ‘ಕಲ್ಕಿ’ (Kalki 2898 AD) ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಪ್ರಭಾಸ್ ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇದರ ನಡುವೆ ಪ್ರಭಾಸ್ (Prabhas) ಮುಂಬರುವ ಸಿನಿಮಾ ಬಗ್ಗೆ ಇಂಟರೆಸ್ಟಿಂಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಪ್ರಭಾಸ್‌ಗೆ ವಿಲನ್ ಆಗಿ ನಟಿ ತ್ರಿಷಾ ಕಾಣಿಸಿಕೊಳ್ಳಲಿದ್ದಾರೆ.

    ತ್ರಿಷಾಗೆ (Trisha) ಚಿತ್ರರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ಸಿನಿಮಾದಿಂದ ಸಿನಿಮಾಗೆ ಬಗೆ ಬಗೆಯ ಪಾತ್ರಗಳನ್ನು ನಟಿ ಆಯ್ಕೆ ಮಾಡಿಕೊಳ್ತಿದ್ದಾರೆ. ‘ಸ್ಪಿರಿಟ್’ (Spirit) ಸಿನಿಮಾದಲ್ಲಿ ಪ್ರಭಾಸ್ ಡಬಲ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಹೀರೋ ಮತ್ತು ವಿಲನ್ ಎರಡು ಪಾತ್ರಕ್ಕೆ ಪ್ರಭಾಸ್ ಜೀವ ತುಂಬಲಿದ್ದಾರೆ. ಇದನ್ನೂ ಓದಿ:‘ಸ್ತ್ರೀ 2’ ಚಿತ್ರದಿಂದ ಗೆಲುವಿನ ಟ್ರ್ಯಾಕ್‌ಗೆ ಮರಳಿದ ಶ್ರದ್ಧಾ ಕಪೂರ್

    ವಿಲನ್ ಪ್ರಭಾಸ್ ಪಾತ್ರಕ್ಕೆ ತ್ರಿಷಾ ಜೋಡಿಯಾಗ್ತಿದ್ದಾರಂತೆ. ಅವರು ಕೂಡ ಲೇಡಿ ವಿಲನ್ ಆಗಿ ಮಿಂಚಲಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಈ ವಿಚಾರ ನಿಜನಾ? ಎಂಬುದನ್ನು ಚಿತ್ರತಂಡವೇ ಸ್ಪಷ್ಟನೆ ನೀಡಬೇಕಿದೆ. ಇದನ್ನೂ ಓದಿ:ಜೀವಂತ ಇದ್ದಾಗಲೇ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್- ಮೌನ ಮುರಿದ ನಟ

    ಇನ್ನೂ ತ್ರಿಷಾರನ್ನು ಈಗಾಗಲೇ ‘ಅನಿಮಲ್’ (Animal) ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿಯಾಗಿ ಸಿನಿಮಾದ ಕಥೆ ಹೇಳಿದ್ದಾರೆ. ಸಿನಿಮಾ ಕುರಿತು ಮಾತುಕತೆಯಾಗಿದ್ದು, ಸದ್ಯದಲ್ಲೇ ಚಿತ್ರತಂಡ ಈ ಕುರಿತು ಘೋಷಣೆ ಮಾಡಬೇಕಿದೆ. ಸದ್ಯ ‘ಸ್ಪಿರಿಟ್’ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದೆ.

    ಪ್ರಭಾಸ್ ಮತ್ತು ತ್ರಿಷಾ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. `ದಿ ರಾಜಾ ಸಾಬ್’ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ ಜೊತೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಪ್ರಭಾಸ್. ಸದ್ಯ ಈ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಪ್ರಭಾಸ್‌ಗೆ ತ್ರಿಷಾ ನಾಯಕಿ- ‘ಅನಿಮಲ್’ ನಿರ್ದೇಶಕ ಆ್ಯಕ್ಷನ್ ಕಟ್

    ಪ್ರಭಾಸ್‌ಗೆ ತ್ರಿಷಾ ನಾಯಕಿ- ‘ಅನಿಮಲ್’ ನಿರ್ದೇಶಕ ಆ್ಯಕ್ಷನ್ ಕಟ್

    ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾದ ಯಶಸ್ಸಿನಲ್ಲಿರುವ ಪ್ರಭಾಸ್ ಇದೀಗ ‘ಸ್ಪಿರಿಟ್’ ಸಿನಿಮಾಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದರ ನಡುವೆ ಈ ಸಿನಿಮಾ ಬಗ್ಗೆ ಲೇಟೆಸ್ಟ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಚಿತ್ರದಲ್ಲಿ ಡಾರ್ಲಿಂಗ್ ಪ್ರಭಾಸ್ ಜೊತೆ ತ್ರಿಷಾ ರೊಮ್ಯಾನ್ಸ್ ಮಾಡಲಿದ್ದಾರೆ. ಇದನ್ನೂ ಓದಿ:ಗೋವಾದಲ್ಲಿ ಕೊಡೆ ಹಿಡಿದು ನಿಂತ ‘ಬಿಗ್ ಬಾಸ್’ ಖ್ಯಾತಿಯ ಸೋನು

    ಕಳೆದ 20 ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟಿವ್ ಇರುವ ನಟಿ ತ್ರಿಷಾ (Trisha) ಇಂದಿಗೂ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ವಿಜಯ ದಳಪತಿ, ಮೆಗಾಸ್ಟಾರ್ ಚಿರಂಜೀವಿ, ಅಜಿತ್ ಕುಮಾರ್‌ಗೆ ಪ್ರಸ್ತುತ ನಾಯಕಿಯಾಗಿ ಸದ್ದು ಮಾಡುತ್ತಿರುವ ತ್ರಿಷಾ ಇದೀಗ ಪ್ರಭಾಸ್ (Prabhas) ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ.

    ತ್ರಿಷಾರನ್ನು ಈಗಾಗಲೇ ಅನಿಮಲ್ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಭೇಟಿಯಾಗಿ ಸಿನಿಮಾದ ಕಥೆ ಹೇಳಿದ್ದಾರೆ. ಸಿನಿಮಾ ಕುರಿತು ಮಾತುಕತೆಯಾಗಿದ್ದು, ಸದ್ಯದಲ್ಲೇ ಚಿತ್ರತಂಡ ಈ ಕುರಿತು ಘೋಷಣೆ ಮಾಡಬೇಕಿದೆ. ಸದ್ಯ ‘ಸ್ಪಿರಿಟ್’ ಸಿನಿಮಾದ ಪ್ರೀ ಪ್ರೋಡಕ್ಷನ್ ಕೆಲಸಗಳು ನಡೆಯುತ್ತಿದೆ.

    ಪ್ರಭಾಸ್ ಮತ್ತು ತ್ರಿಷಾ ಇಬ್ಬರೂ ಬೇರೆ ಬೇರೆ ಪ್ರಾಜೆಕ್ಟ್‌ಗಳಲ್ಲಿ ಬ್ಯುಸಿಯಾಗಿದ್ದಾರೆ. ದಿ ರಾಜಾ ಸಾಬ್ ಸಿನಿಮಾದ ಬಳಿಕ ಸಂದೀಪ್ ರೆಡ್ಡಿ ವಂಗಾ (Sandeep Reddy Vanga) ಜೊತೆ ಚಿತ್ರತಂಡ ಸೇರಿಕೊಳ್ಳಲಿದ್ದಾರೆ ಪ್ರಭಾಸ್. ಸದ್ಯ ಈ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • Vidaa Muyarchi: ರೊಮ್ಯಾಂಟಿಕ್‌ ಆಗಿ ಕಾಣಿಸಿಕೊಂಡ ಅಜಿತ್‌ ಕುಮಾರ್‌, ತ್ರಿಷಾ

    Vidaa Muyarchi: ರೊಮ್ಯಾಂಟಿಕ್‌ ಆಗಿ ಕಾಣಿಸಿಕೊಂಡ ಅಜಿತ್‌ ಕುಮಾರ್‌, ತ್ರಿಷಾ

    ಮಿಳಿನ ಸ್ಟಾರ್ ನಟ ಅಜಿತ್ ಕುಮಾರ್ (Ajith Kumar) ಜೊತೆ ತ್ರಿಷಾ (Trisha) ಹೊಸ ಸಿನಿಮಾಗಾಗಿ ಕೈಜೋಡಿಸಿದ್ದಾರೆ. ದಂಪತಿಗಳಾಗಿ ಅಜಿತ್ ಕುಮಾರ್ ಮತ್ತು ತ್ರಿಷಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ‘ವಿದಾ ಮುಯಾರ್ಚಿ’ (Vidaa Muyarchi) ಚಿತ್ರದ ಹೊಸ ಪೋಸ್ಟರ್ ಈಗ ಬಿಡುಗಡೆಯಾಗಿದೆ. ಇದನ್ನೂ ಓದಿ:ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಿರ್ಮಾಪಕಿ ಎಕ್ತಾ ಕಪೂರ್ ಭೇಟಿ

    ಸಾಕಷ್ಟು ದಿನಗಳಿಂದ ಅಜಿತ್ ಕುಮಾರ್ ಹೊಸ ಸಿನಿಮಾದಲ್ಲಿ ತ್ರಿಷಾ ನಾಯಕಿ ಎಂದು ಹೇಳಲಾಗಿತ್ತು. ಆದರೆ ಈ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಅಜಿತ್ ಮತ್ತು ತ್ರಿಷಾ ಜೊತೆಯಾಗಿರುವ ಪೋಸ್ಟರ್‌ವೊಂದು ಹಂಚಿಕೊಂಡು ನಿರ್ಮಾಣ ಸಂಸ್ಥೆ ಅನೌನ್ಸ್ ಮಾಡಿದೆ.

     

    View this post on Instagram

     

    A post shared by Trish (@trishakrishnan)

    ಹಸಿರು ಬಣ್ಣದ ಧಿರಿಸಿನಲ್ಲಿ ನಟಿ ಮಿಂಚಿದ್ರೆ, ಕಪ್ಪು ಬಣ್ಣದ ಉಡುಗೆಯಲ್ಲಿ ಅಜಿತ್ ಕಾಣಿಸಿಕೊಂಡಿದ್ದಾರೆ. ‘ವಿದಾ ಮುಯಾರ್ಚಿ’ ಸಿನಿಮಾದಲ್ಲಿ ಇಬ್ಬರೂ ದಂಪತಿಗಳಾಗಿ ನಟಿಸಿದ್ದಾರೆ. ಸದ್ಯ ಈ ಪೋಸ್ಟರ್‌ಗೆ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಈ ಚಿತ್ರವನ್ನು ಲೈಕಾ ಸಂಸ್ಥೆ ನಿರ್ಮಾಣ ಮಾಡಿದೆ.

    ಇನ್ನೂ ತ್ರಿಷಾ ಕೃಷ್ಣನ್‌ಗೆ ಚಿತ್ರರಂಗದಲ್ಲಿ ಈಗ ಬೇಡಿಕೆ ಹೆಚ್ಚಾಗಿದೆ. ಸ್ಟಾರ್ ಸಿನಿಮಾಗಳಲ್ಲಿ ನಟಿಸಲು ತ್ರಿಷಾಗೆ ನಿರ್ಮಾಪಕರು ಮಣೆ ಹಾಕ್ತಿದ್ದಾರೆ. ತೆಲುಗು ಮತ್ತು ತಮಿಳಿನಲ್ಲಿ ನಟಿ ಆ್ಯಕ್ಟೀವ್ ಆಗಿದ್ದಾರೆ.

  • ತ್ರಿಷಾ ಜೊತೆ ತಮಿಳು ನಟ ವಿಜಯ್ ಡೇಟಿಂಗ್- ಕೊನೆಗೂ ಸಿಕ್ತು ಸಾಕ್ಷಿ

    ತ್ರಿಷಾ ಜೊತೆ ತಮಿಳು ನಟ ವಿಜಯ್ ಡೇಟಿಂಗ್- ಕೊನೆಗೂ ಸಿಕ್ತು ಸಾಕ್ಷಿ

    ಮಿಳು ನಟ ವಿಜಯ್ (Vijay Thalapathy) ದಾಂಪತ್ಯದಲ್ಲಿ ಬಿರುಕಾಗಿದೆ ಎಂದು ಕೆಲ ತಿಂಗಳುಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಹೀಗಿರುವಾಗ, ತ್ರಿಷಾ (Trisha) ಜೊತೆ ವಿಜಯ್ ಹೆಸರು ಕೇಳಿ ಬರುತ್ತಿದೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸುದ್ದಿ ಚರ್ಚೆಗೆ ಗ್ರಾಸವಾಗಿದೆ.

    ನಟಿ ತ್ರಿಷಾ ಕೃಷ್ಣನ್ (Trisha Krishnan) ಮತ್ತು ವಿಜಯ್ ಡೇಟಿಂಗ್ ಮಾಡುತ್ತಿದ್ದಾರಾ? ಹೀಗೊಂದು ಅನುಮಾನ ಅಭಿಮಾನಿ ವಲಯದಲ್ಲಿ ಕಾಡುತ್ತಿದೆ. ಈ ಅನುಮಾನಕ್ಕೆ ಕಾರಣವಾಗಿದ್ದು, ನಟಿ ಶೇರ್ ಮಾಡಿರುವ ಪೋಸ್ಟ್. ವಿಜಯ್ ಹುಟ್ಟುಹಬ್ಬಕ್ಕೆ ನಟಿ ವಿಶೇಷವಾಗಿ ಶುಭಕೋರಿದ್ದಾರೆ. ವಿಜಯ್ ಜೊತೆಗಿರುವ ಫೋಟೋವೊಂದನ್ನು ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಜೂನ್ 30ಕ್ಕೆ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ ಸಿಎಂ

    ತಮಿಳು ಸ್ಟಾರ್ ವಿಜಯ್ ಜೊತೆ ‘ಲಿಯೋ’ (Leo Film) ಸಿನಿಮಾದಲ್ಲಿ ತ್ರಿಷಾ ಅದ್ಭುತವಾಗಿ ಅಭಿನಯ ಮಾಡಿದ್ದರು. ಕಳೆದ ವರ್ಷ ಈ ಸಿನಿಮಾ ಮಾಡುವಾಗಲೇ ತ್ರಿಷಾ, ದಳಪತಿ ವಿಜಯ್ ಡೇಟಿಂಗ್ ಬಗ್ಗೆ ಗುಸು ಗುಸು ಮಾತುಗಳು ಕೇಳಿ ಬಂದಿತ್ತು.

  • ರಶ್ಮಿಕಾ ಮಂದಣ್ಣ ಬಳಿಕ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ತ್ರಿಷಾ

    ರಶ್ಮಿಕಾ ಮಂದಣ್ಣ ಬಳಿಕ ‘ಸಿಖಂದರ್’ ಚಿತ್ರತಂಡ ಸೇರಿಕೊಂಡ ತ್ರಿಷಾ

    ಸೌತ್ ಬೆಡಗಿ ತ್ರಿಷಾ ಕೃಷ್ಣನ್ (Trisha Krishnan) ಇದೀಗ 14 ವರ್ಷಗಳ ನಂತರ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ತ್ರಿಷಾ ಕೂಡ ಮತ್ತೊಮ್ಮೆ ಬಿಟೌನ್ ಅಡ್ಡಾಗೆ ಎಂಟ್ರಿ ಕೊಟ್ಟಿದ್ದಾರೆ. ಬ್ಯಾಡ್ ಬಾಯ್ ಸಲ್ಮಾನ್ ಖಾನ್‌ಗೆ ತ್ರಿಷಾ ನಾಯಕಿಯಾಗ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    2010ರಲ್ಲಿ ತೆರೆಕಂಡ ‘ಕಟ್ಟಾ ಮೀಟಾ’ ಚಿತ್ರದಲ್ಲಿ ಜಿಲ್ಲಾಧಿಕಾರಿಯ ಪಾತ್ರದಲ್ಲಿ ನಟಿಸಿದ್ದರು. ಅಕ್ಷಯ್ ಕುಮಾರ್‌ಗೆ (Akshay Kumar) ನಾಯಕಿ ತ್ರಿಷಾ ಕಾಣಿಸಿಕೊಂಡಿದ್ದರು. ಅದಾದ ನಂತರ ಬಾಲಿವುಡ್‌ಗೆ ಗುಡ್ ಬೈ ಹೇಳಿದ್ದರು. ಈಗ ಹಲವು ವರ್ಷಗಳ ನಂತರ ಸ್ಟಾರ್ ನಟನಿಗೆ ಜೋಡಿಯಾಗುವ ಮೂಲಕ ಸದ್ದು ಮಾಡುತ್ತಿದ್ದಾರೆ.

    ಸಲ್ಮಾನ್ ಖಾನ್ (Salman Khan) ನಟನೆಯ ‘ಸಿಖಂದರ್’ (Sikandar Film) ಚಿತ್ರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ನಾಯಕಿ ಎಂದು ಅಧಿಕೃತ ಘೋಷಣೆ ಮಾಡಿತ್ತು ಚಿತ್ರತಂಡ. ಈ ಬೆನ್ನಲ್ಲೇ ಸಿಖಂದರ್‌ ಸಲ್ಮಾನ್‌ಗೆ ಮತ್ತೋರ್ವ ನಾಯಕಿಯಾಗಿ ತ್ರಿಷಾ ಕೂಡ ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗಿದೆ. ಸೆಕೆಂಡ್ ಲೀಡ್ ನಾಯಕಿಯಾಗಿ ನಟಿಸುತ್ತಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಅಧಿಕೃತ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.


    ತ್ರಿಷಾಗೆ 41 ವರ್ಷ ವಯಸ್ಸಾಗಿದ್ರೂ ಅವರಿಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಅವರ ಕೈಯಲ್ಲಿ ಸದ್ಯ 5 ಚಿತ್ರಗಳಿವೆ. ತಮಿಳಿನ ವಿಧ ಮುಯರ್ಚಿ, ಮಲಯಾಳಂನ ‘ರಾಮ್’ ಮತ್ತು ‘ಐಡೆಂಟಿಟಿ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಮಲ್ ಹಾಸನ್ ನಟನೆಯ ಥಗ್ ಲೈಫ್, ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ವಿಶ್ವಾಂಭರ’ ಸಿನಿಮಾದಲ್ಲಿ ತ್ರಿಷಾ ನಾಯಕಿಯಾಗಿದ್ದಾರೆ.

  • ‘ವಿಶ್ವಂಭರ’ ಶೂಟಿಂಗ್ ಸ್ಥಳಕ್ಕೆ ಪವನ್ ಕಲ್ಯಾಣ್: ಬರಮಾಡಿಕೊಂಡ ತ್ರಿಷಾ

    ‘ವಿಶ್ವಂಭರ’ ಶೂಟಿಂಗ್ ಸ್ಥಳಕ್ಕೆ ಪವನ್ ಕಲ್ಯಾಣ್: ಬರಮಾಡಿಕೊಂಡ ತ್ರಿಷಾ

    ಲೋಕಸಭಾ ಚುನಾವಣೆಯ ಬ್ಯುಸಿ ನಡುವೆಯೂ ಪವರ್ ಸ್ಟಾರ್ ಪವನ್ ಕಲ್ಯಾಣ್ (Pawan Kalyan) ‘ವಿಶ್ವಂಭರ’ ಶೂಟಿಂಗ್ ಸೆಟ್ ಗೆ ಭೇಟಿ ನೀಡಿದ್ದಾರೆ. ಚಿತ್ರೀಕರಣ ಸ್ಥಳಕ್ಕೆ ಬಂದ ಪವನ್ ಕಲ್ಯಾಣ್ ಅವರನ್ನು ತ್ರಿಷಾ  (Trisha) ಬರಮಾಡಿಕೊಂಡಿದ್ದಾರೆ. ಜೊತೆಗೆ ಚಿರಂಜೀವಿ (Chiranjeevi) ಕೂಡ ಇದ್ದಾರೆ. ಚಿರು ಜೊತೆ ಮಾತನಾಡುವುದಕ್ಕಾಗಿ ಪವನ್ ಕಲ್ಯಾಣ್ ಬಂದಿದ್ದರು ಎಂದು ಹೇಳಲಾಗುತ್ತಿದೆ.

    ಇದು ಚಿರು ನಟಿಸುತ್ತಿರುವ 156ನೇ ಸಿನಿಮಾವಾಗಿದ್ದು, ಜಗದೇಕ ವೀರುಡು ಅತಿಲೋಕ ಸುಂದರಿ ಸಿನಿಮಾದ ಬಳಿಕ ಚಿರಂಜೀವಿ ಫ್ಯಾಂಟಸಿ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ವಿಶ್ವಂಭರ ಎಂಬ ಟೈಟಲ್ ಇಡಲಾಗಿದೆ. ಈ ಟೈಟಲ್ ಟೀಸರ್ ನಲ್ಲಿ ಗ್ರಾಫಿಕ್ಸ್ ಕೆಲಸ ಪರಿಣಾಮಕಾರಿಯಾಗಿದೆ. ಈ ಮೆಗಾ ಫ್ಯಾಂಟಸಿ ಸಾಹಸವನ್ನು ಬಿಂಬಿಸಾರ ಖ್ಯಾತಿಯ ವಸಿಷ್ಠ ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ದೇಶಿಸಿದ್ದಾರೆ. ವಿಕ್ರಮ್, ವಂಶಿ ಮತ್ತು ಪ್ರಮೋದ್ ಹಣ ಹಾಕುತ್ತಿದ್ದು, ಚಿರಂಜೀವಿ ಸಿನಿಕರಿಯ್ ನಲ್ಲಿ ಅತ್ಯಂತ ದುಬಾರಿ ವೆಚ್ಚದ ಚಿತ್ರವಾಗಿದೆ.

    ವಿಶ್ವಂಭರ (Vishwambhara) ಸಿನಿಮಾಗೆ ಎಂಎಂ ಕೀರವಾಣಿ ಸಂಗೀತ ನೀಡಿದ್ದು, ಚೋಟಾ ಕೆ ನಾಯ್ಡು ಅವರ ಛಾಯಾಗ್ರಹಣವಿದೆ. ಎಎಸ್ ಪ್ರಕಾಶ್ ನಿರ್ಮಾಣ ವಿನ್ಯಾಸ, ಸುಶ್ಮಿತಾ ಕೊನಿಡೇಲ ವಸ್ತ್ರ ವಿನ್ಯಾಸ ಮಾಡಲಿದ್ದಾರೆ.

     

    ಕೋಟಗಿರಿ ವೆಂಕಟೇಶ್ವರರಾವ್ ಮತ್ತು ಸಂತೋಷ್ ಕಾಮಿರೆಡ್ಡಿ ಚಿತ್ರಕ್ಕೆ ಸಂಕಲನಕಾರರು. ಶ್ರೀ ಶಿವಶಕ್ತಿ ದತ್ತ ಮತ್ತು ಚಂದ್ರಬೋಸ್ ಗೀತರಚನೆಕಾರರಾಗಿದ್ದರೆ, ಶ್ರೀನಿವಾಸ್ ಗವಿರೆಡ್ಡಿ, ಗಂಟಾ ಶ್ರೀಧರ್, ನಿಮ್ಮಗಡ್ಡ ಶ್ರೀಕಾಂತ್ ಮತ್ತು ಮಯೂಖ್ ಆದಿತ್ಯ ಅವರು ಚಿತ್ರಕಥೆ ಸಹಾಯಕರಾಗಿದ್ದಾರೆ. 2025 ರ ಸಂಕ್ರಾಂತಿಗೆ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಘೋಷಿಸಿದ್ದಾರೆ.