Tag: Triveni Sangam

  • ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

    ಮಳೆ ಆರ್ಭಟಕ್ಕೆ ಮಂಜಿನ ನಗರಿ ಥಂಡಾ – ಭಾಗಮಂಡಲದ ತ್ರಿವೇಣಿ ಸಂಗಮ ಮುಳುಗಡೆ

    – ಹಾರಂಗಿ ಡ್ಯಾಂನಿಂದ ಕಾವೇರಿ ನದಿಗೆ 18,000 ಕ್ಯೂಸೆಕ್‌ ನೀರು ರಿಲೀಸ್‌

    ಮಡಿಕೇರಿ: ವರುಣನ ಆರ್ಭಟಕ್ಕೆ ಕೊಡಗಿನ ಭಾಗಮಂಡಲ ತ್ರಿವೇಣಿ ಸಂಗಮ (Triveni Sangam) ಸಂಪೂರ್ಣವಾಗಿ ಮುಳುಗಡೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹೆಚ್ಚಳದಿಂದ ಹಾರಂಗಿ ಡ್ಯಾಂನಿಂದ (Harangai Dam) ಸುಮಾರು 18,000 ಕ್ಯೂಸೆಕ್ ನೀರು ಕಾವೇರಿ ನದಿಗೆ (Cauvery River) ಹರಿಸಲಾಗುತ್ತಿದೆ.

    ಕೊಡಗು ಜಿಲ್ಲೆಯಲ್ಲಿ ಮೃಗಶಿರ ಮಳೆಯ (Mrigashira Rain) ಅಬ್ಬರ ಮುಂದುವರೆದಿದೆ. ಕಳೆದ 3-4 ದಿನಗಳಿಂದ ಜಿಲ್ಲೆಯ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿ ಭಾಗಮಂಡದಲ್ಲಿ ಮಳೆಯಾಗುತ್ತಿವೆ. ತ್ರಿವೇಣಿ ಸಂಗಮದಲ್ಲಿ ನೀರು ಉಕ್ಕಿ ಹರಿಯುತ್ತಿದೆ. ತ್ರಿವೇಣಿ ಸಂಗಮದ ಉದ್ಯಾನ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಭಂಗಡೇಶ್ಚರ ದೇವಾಲಯ ಆವರಣಕ್ಕೂ ನೀರು ಪ್ರವೇಶ ಮಾಡಿದೆ. ಭಂಗಡೇಶ್ವರ ದೇವಾಲಯ ಆವರಣದ ಅಂಗಡಿ ಮುಂಗಟ್ಟುಗಳಿಗೆ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ನಾಪೋಕ್ಲು- ಅಯ್ಯಂಗೇರಿ -ಸಣ್ಣಪುಲಿಕೊಟ್ಟು ರಸ್ತೆ ಮೇಲೆ ಸುಮಾರು 4 ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಇದನ್ನೂ ಓದಿ: ಕೃಷ್ಣಾ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆ ನೀರುಪಾಲು

    ಕಾವೇರಿ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾರಂಗಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಜಲಾಶಯದ ಭದ್ರತೆ ದೃಷ್ಟಿಯಿಂದ ಈಗಾಗಲೇ 4 ಕ್ರಸ್ಟ್‌ಗೇಟ್‌ಗಳ ಮೂಲಕ 18 ಸಾವಿರ ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ. ನದಿಪಾತ್ರದ ಜನರು ಮುನ್ನೆಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಲೆನಾಡಿನ ಮಳೆಗಾಲದ ಗೆಳೆಯರು!

    ಕೊಡಗಿನಲ್ಲಿ ನದಿಗಳೆಲ್ಲವೂ ತುಂಬಿ ಹರಿಯುತ್ತಿವೆ. ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದ ಹೊಳೆಕೆರೆ ರಸ್ತೆಗೆ ಕಾವೇರಿ ನದಿ ನೀರು ನುಗ್ಗಿ ಸಂಚಾರ ಸ್ಥಗಿತಗೊಂಡಿದೆ. ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಎಲ್ಲಿ ಅಡಗಿರೋದು ಗೊತ್ತಿದೆ – ಈಗ ಹತ್ಯೆ ಮಾಡಲ್ಲ, ಖಮೇನಿ ಶರಣಾಗಬೇಕು: ಟ್ರಂಪ್‌ ವಾರ್ನಿಂಗ್‌

  • ಯುಗಾದಿ ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಮುಳುಗಿ ಸಾವು

    ಯುಗಾದಿ ಪುಣ್ಯ ಸ್ನಾನಕ್ಕೆ ತೆರಳಿದ್ದ ಬಾಲಕ ತ್ರಿವೇಣಿ ಸಂಗಮದಲ್ಲಿ ಮುಳುಗಿ ಸಾವು

    ಮೈಸೂರು: ಯುಗಾದಿ (Ugadi) ಹಬ್ಬದ ದಿನ ಪುಣ್ಯಸ್ನಾನಕ್ಕೆ ತೆರಳಿದ್ದ ಬಾಲಕ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕಿನ ತ್ರಿವೇಣಿ ಸಂಗಮದಲ್ಲಿ (Triveni Sangam) ನಡೆದಿದೆ.

    ಮೃತ ಬಾಲಕನನ್ನು ಶ್ರೀರಾಂಪುರದ ಶರಣ್ (13) ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆ ಪುಣ್ಯಸ್ನಾನಕ್ಕೆ ತೆರಳಿದ್ದ. ವೇಳೆ ಈ ದುರ್ಘಟನೆ ಸಂಭವಿಸಿದೆ. ಬಾಲಕನ ಸಾವಿನಿಂದ ಫೋಷಕರ ಆಕ್ರಂದನ ಮಗಿಲು ಮುಟ್ಟಿದೆ. ಇದನ್ನೂ ಓದಿ: ನದಿಯಲ್ಲಿ ಈಜಲು ಹೋದ ಇಬ್ಬರು ಹುಡುಗರು ನೀರುಪಾಲು

    ಶನಿವಾರ (ಮಾ.29) ಟಿ.ನರಸೀಪುರದ ತಾಲೂಕಿನ ಮೇದಿನಿ ಗ್ರಾಮದಲ್ಲಿ ಈಜಲು ನದಿಗೆ ಹೋಗಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿದ್ದರು.

    ಇನ್ನೂ ಮಾ.15 ರಂದು ಟಿ.ನರಸಿಪುರದಲ್ಲಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು. ಇದನ್ನೂ ಓದಿ: Mysuru | ನೀರಿನಲ್ಲಿ ಮುಳುಗಿ ತಾತ, ಇಬ್ಬರು ಮೊಮ್ಮಕ್ಕಳು ಜಲಸಮಾಧಿ

  • ದಾಖಲೆಯ ಮಹಾ ಕುಂಭಮೇಳಕ್ಕೆ ವಿದ್ಯುಕ್ತ ತೆರೆ – ತ್ರಿವೇಣಿ ಸಂಗಮದಲ್ಲಿ ಶುರುವಾಯ್ತು ಸ್ವಚ್ಛತಾ ಕಾರ್ಯ

    ದಾಖಲೆಯ ಮಹಾ ಕುಂಭಮೇಳಕ್ಕೆ ವಿದ್ಯುಕ್ತ ತೆರೆ – ತ್ರಿವೇಣಿ ಸಂಗಮದಲ್ಲಿ ಶುರುವಾಯ್ತು ಸ್ವಚ್ಛತಾ ಕಾರ್ಯ

    – ಸ್ವಚ್ಛತಾ ಕಾರ್ಯಕ್ಕೆ ಚಾಲನೆ ಕೊಟ್ಟ ಸಿಎಂ ಯೋಗಿ ಆದಿತ್ಯನಾಥ್‌
    – ಕುಂಭಮೇಳಕ್ಕೆ 16,000 ರೈಲುಗಳ ಓಡಾಟ

    ಲಕ್ನೋ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿದ್ದ ಅತಿದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. 45 ದಿನಗಳ ಅವಧಿಯಲ್ಲಿ ಒಟ್ಟು 66 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದಿದ್ದು ಪುನೀತರಾಗಿದ್ದಾರೆ. ಕಾರ್ಯಕ್ರಮದ ಬೆನ್ನಲ್ಲೇ ಸ್ವಚ್ಛತಾ ಅಭಿಯಾನ ಶುರುವಾಗಿದೆ.

    144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳ ಕಳೆದ ಜನವರಿ 13 ರಿಂದ ಶುರವಾಗಿ ನಿನ್ನೆ ಶಿವರಾತ್ರಿ ಪವಿತ್ರ ದಿನದಂದು ಅಂತ್ಯವಾಗಿದೆ. 45 ದಿನಗಳ ಕಾಲ ನಡೆದ ಈ ಮಹಾಕುಂಭ ಮೇಳದಲ್ಲಿ 66 ಕೋಟಿ ಜನರು ಭಾಗಿಯಾಗಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ನಿನ್ನೆಗೆ ಮಹಾಕುಂಭ ಮೇಳ ಅಂತ್ಯವಾಗಿದ್ದರೂ ಇನ್ನು ಜನಸಾಗರ ಸಂಗಮಕ್ಕೆ ಹರಿದು ಬರುತ್ತಿದ್ದು, ಇನ್ನೂ ಕೆಲ ದಿನಗಳು ಈ ಬೆಳವಣಿಗೆ ನಡೆಯಲಿದೆ.

    ಮಹಾ ಕುಂಭಮೇಳ ಅಂತ್ಯವಾದ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಅರೈಲ್ ಘಾಟ್‌ ತಲುಪಿದ ಅವರು ತಾತ್ಕಲಿವಾಗಿ ನಿರ್ಮಾಣ ಮಾಡಿದ್ದ ಟೆಂಟ್ ಸಿಟಿಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.

    ಸ್ವಚ್ಛತಾ ಕಾರ್ಯದ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಹಾ ಕುಂಭಮೇಳದಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳನ್ನು ಸನ್ಮಾನಿಸಿದರು. ಇದೇ ವೇಳೆ ಮಹಾಕುಂಭ ಮೇಳದ ಸಮಯದಲ್ಲಿ ದಾಖಲಾದ ನಾಲ್ಕು ವಿಶ್ವ ದಾಖಲೆಗಳಿಗೆ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.

    ರೈಲ್ವೆ ಸಿಬ್ಬಂದಿ ಭೇಟಿಯಾದ ಸಚಿವ ಅಶ್ವನಿ ವೈಷ್ಣವ್
    ಮಹಾ ಕುಂಭಮೇಳ ಅಂತ್ಯವಾದ ಬೆನ್ನಲ್ಲೇ ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಪ್ರಯಾಗ್‌ರಾಜ್ ರೈಲು ನಿಲ್ದಾಣದಲ್ಲಿ ಆರ್‌ಪಿಎಫ್ ಸಿಬ್ಬಂದಿ ಮತ್ತು ಇತರ ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಭೇಟಿಯಾಗಿ ಅಭಿನಂದಿಸಿದರು. ರೈಲ್ವೆ ಸಿಬ್ಬಂದಿಗಳ ಕಾರ್ಯವನ್ನು ಶ್ಲಾಘಿಷಿಸಿದರು. ಬಳಿಕ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಇಂತಹ ಅದ್ದೂರಿ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಎಲ್ಲರ ಸಹಕಾರದಿಂದ ನಾವು ನಿಕಟ ಸಮನ್ವಯದಿಂದಾಗಿ 13,000 ರೈಲುಗಳ ಬದಲು 16,000 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ಸಾಧ್ಯವಾಯಿತು. 45 ದಿನಗಳಲ್ಲಿ ಭಕ್ತರಿಗೆ ನಿರ್ವಹಣೆಯ ವಿಷಯದಲ್ಲಿ ಯಾವುದೇ ಸಮಸ್ಯೆಯಾಗದಂತೆ ನಾವು ಖಚಿತಪಡಿಸಿಕೊಂಡಿದ್ದೇವೆ ಎಂದರು.

  • ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

    ಮೈಸೂರು | ಫೆ.10ರಿಂದ ಮೂರು ದಿನ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ

    ಮೈಸೂರು: ನಾಳೆಯಿಂದ (ಫೆ.10) ಮೂರು ದಿನಗಳಕಾಲ ಮೈಸೂರು (Mysuru) ಜಿಲ್ಲೆಯ ಟಿ.ನರಸೀಪುರದ (T.Nnaraseepur) ತ್ರಿವೇಣಿ ಸಂಗಮದಲ್ಲಿ (Triveni Sangam) 13 ನೇ ಕುಂಭಮೇಳ (Kumbh Mela) ನಡೆಯಲಿದೆ.

    ತ್ರಿವೇಣಿ ಸಂಗಮ ಸ್ಥಳಕ್ಕೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಇಂದು ಭೇಟಿ ನೀಡಿ ಕುಂಭಮೇಳದ ಸಿದ್ಧತಾ ಕಾರ್ಯ ಪರಿಶೀಲಿಸಿದರು. ಪುಣ್ಯಸ್ನಾನ ಸ್ಥಳ ಹಾಗೂ ಮೂಲಭೂತ ಸೌಕರ್ಯದ ಬಗ್ಗೆ ಪರಿಶೀಲನೆ ನಡೆಸಿದರು. ಕುಂಭಮೇಳದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

    ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದದೆ. ಇದೇ ವೇಳೆ ಕರ್ನಾಟಕದ ಪವಿತ್ರ ಕ್ಷೇತ್ರವೆಂದೇ ಹೆಸರಾದ ಟಿ.ನರಸಿಪುರದ ತ್ರಿವೇಣಿ ಸಂಗಮದಲ್ಲಿ ಸೋಮವಾರದಿಂದ ಕುಂಭಮೇಳ ನಡೆಯಲಿದೆ. ಬೆ. 9ರಿಂದ 9:30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ.

    ಧಾರ್ಮಿಕ ಕಾರ್ಯಕ್ರಮಗಳು: ಫೆ.10ರಂದು ತ್ರಯೋದಶಿ, ಪುಷ್ಯ ಪ್ರಾತಃಕಾಲ 9 ಗಂಟೆಗೆ ಶ್ರೀ ಅಗಸ್ತೇಶ್ವರ ಸನ್ನಿಧಿಯಲ್ಲಿ, ಅನುಜ್ಞೆ, ಪುಣ್ಯಾಹ, ಗಣಹೋಮ, ಪೂರ್ಣಾಹುತಿ, ಅಭಿಷೇಕ, ಮಹಾಮಂಗಳಾರತಿ ನೆರವೇರಿಸಲಾಗುತ್ತದೆ. ಸಂಜೆ 5 ಗಂಟೆಗೆ ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಅಥಿತಿ ಗಣ್ಯರಿಂದ ಉದ್ಘಾಟನೆ ಮತ್ತು ಧ್ವಜಾರೋಹಣ ನೆರವೇರಲಿದೆ.

  • ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

    ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

    – ಮೋದಿ ಇದೇ ದಿನ ಆಯ್ಕೆ ಮಾಡಿಕೊಂಡಿದ್ದು ಏಕೆ?

    ಪ್ರಯಾಗ್‌ರಾಜ್‌: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪುಣ್ಯ ಸ್ನಾನ (Holy Bath) ಮಾಡಿದ್ದಾರೆ.

    ಬೆಳಗ್ಗೆ 11:30 ಗಂಟೆ ಸುಮಾರಿಗೆ ಬೋಟ್‌ ಮೂಲಕ ಪ್ರಯಾಗ್‌ರಾಜ್‌ನ (Prayag Raj) ತ್ರಿವೇಣಿ ಸಂಗಮ್‌ಘಾಟ್‌ಗೆ ತೆರಳಿದ ಮೋದಿ ಕೊರಳಲ್ಲಿ ರುದ್ರಾಕ್ಷಿ ಮಾಲೆ, ಕೇಸರಿ ಹಾಗೂ ಕಡುನೀಲಿ ವಸ್ತ್ರ ಧರಿಸಿ ಪುಣ್ಯಸ್ನಾನ ಮಾಡಿದ್ದಾರೆ. ಇದೇ ವೇಳೆ ರುದ್ರಾಕ್ಷಿ ಮಾಲೆಯನ್ನು ಹಿಡಿದು ಸೂರ್ಯದೇವ ಹಾಗೂ ಗಂಗಾ ಮಾತೆಗೆ ನಮಿಸಿದ್ದಾರೆ.

    ಇದಾದ ಬಳಿಕ ತಟದಲ್ಲಿ ನಿಂತು ಗಂಗಾ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ದೇಶದ ಒಳಿತಾಗಿ ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಶ್ರುತಿ, ಸಪ್ತಮಿ ಗೌಡ ಪರಿಚಯಿಸಿದ ಸೀರಿಯಲ್‌ಗೆ ಪ್ರೇಕ್ಷಕರಿಂದ ಸಿಕ್ತು ಅದ್ಭುತ ರೆಸ್ಪಾನ್ಸ್

    ಹಿಂದೂಗಳಿಗೆ ಪವಿತ್ರ ದಿನ ಎಂದೇ ಹೇಳಲಾಗುವ ರಥ ಸಪ್ತಮಿಯ ದಿನದಂದು ಪ್ರಧಾನಿಗಳು ಪುಣ್ಯಸ್ನಾನ ಮಾಡಿದ್ದಾರೆ. ಇದಾದ ಬಳಿಕ ಇಲ್ಲಿನ ಸಂತರೊಂದಿಗೆ ಚರ್ಚಿಸಲಿರುವ ಮೋದಿ 12 ಗಂಟೆ ಸುಮಾರಿಗೆ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Sweden shooting | ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ – 10 ಮಂದಿ ಸಾವು

    ಇಂದೇ ಪ್ರಧಾನಿಗಳ ಪುಣ್ಯಸ್ನಾನ ಏಕೆ?:
    ಇಂದು ರಥಸಪ್ತಮಿಯ ದಿನವಾಗಿದೆ. ರಥ ಸಪ್ತಮಿ ಹಬ್ಬವನ್ನು ರೈತರಿಗೆ ಸುಗ್ಗಿಯ ಆರಂಭದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಈ ದಿನದಿಂದಲೇ ಬೇಸಿಗೆಯೂ ಪ್ರಾರಂಭವಾಗುತ್ತದೆ. ಈ ದಿನವನ್ನು ದಾನ – ಧರ್ಮ ಮಾಡುವುದಕ್ಕೆ ಬಹಳ ವಿಶೇಷವೆಂದು ಪರಿಗಣಿಸಲಾಗಿದೆ. ಈ ದಿನದಂದು ದಾನ ಮಾಡುವುದರಿಂದ ಹಿಂದೆ ಮಾಡಿದ ಎಲ್ಲಾ ಪಾಪಗಳು ಮತ್ತು ರೋಗಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಈ ದಿನ ಸೂರ್ಯೋದಯಕ್ಕೆ ಮೊದಲು ಸ್ನಾನ ಮಾಡುವ ಸಂಪ್ರದಾಯವಿದೆ. ಈ ದಿನದಂದು ಪವಿತ್ರ ನದಿಯಲ್ಲಿ ಸ್ನಾನ ಮಾಡುವುದರಿಂದ ದೇಹದ ಎಲ್ಲಾ ರೋಗಗಳು, ವಿಶೇಷವಾಗಿ ಚರ್ಮಕ್ಕೆ ಸಂಬಂಧಿಸಿದಂತಹ ರೋಗಗಳು ಗುಣವಾಗುತ್ತವೆ ಎಂದು ಹೇಳಲಾಗುತ್ತದೆ. ಇದಕ್ಕಾಗಿಯೇ ರಥ ಸಪ್ತಮಿಯನ್ನು ಆರೋಗ್ಯ ಸಪ್ತಮಿ ಎಂದೂ ಕರೆಯುತ್ತಾರೆ. ಹಾಗಾಗಿಯದೇ ಮೋದಿ ದೇಶಕ್ಕೆ ಒಳಿತಾಗಲಿ ಎನ್ನುವ ಉದ್ದೇಶದಿಂದ ಪುಣ್ಯಸ್ನಾನ ಮಾಡಿದ್ದಾರೆ ಎಂದು ಜೋತಿಷಿಗಳು ಹೇಳುತ್ತಾರೆ.

  • ವಸಂತ ಪಂಚಮಿ ಪುಣ್ಯಸ್ನಾನ ಇಂದು; ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ

    ವಸಂತ ಪಂಚಮಿ ಪುಣ್ಯಸ್ನಾನ ಇಂದು; ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನ

    – ಮುಂಜಾನೆ 4 ಗಂಟೆ ಹೊತ್ತಿಗೆ ಪವಿತ್ರ ಸ್ನಾನ ಮಾಡಿದ 16 ಲಕ್ಷ ಭಕ್ತರು

    ಪ್ರಯಾಗ್‌ರಾಜ್: ಜಗತ್ತಿನ ಅತಿ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭಮೇಳಕ್ಕೆ ಫೆ.3ರ ಸೋಮವಾರ ಮತ್ತೊಂದು ಸುತ್ತಿನಲ್ಲಿ ಕೋಟ್ಯಂತರ ಭಕ್ತರು ಹರಿದುಬರುತ್ತಿದ್ದಾರೆ. ಇಂದು ವಸಂತ ಪಂಚಮಿಯ ಪವಿತ್ರ ದಿನವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತರು ಮೂರನೇ ಅಮೃತ ಪುಣ್ಯಸ್ನಾನ ಮಾಡಿದ್ದಾರೆ.

    ಕುಂಭಮೇಳದಲ್ಲಿ ಬೆಳಗಿನ ಜಾವವೇ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ. ಬೂದಿ ಹಚ್ಚಿದ ನಾಗ ಸಾಧುಗಳು ಸ್ನಾನ ಮಾಡಿದರು. ನಂತರ ಇತರ ಭಕ್ತರು ಸ್ನಾನ ಮಾಡುವುದರೊಂದಿಗೆ ಆಚರಣೆ ಪ್ರಾರಂಭವಾಯಿತು. ಮಹಾ ಕುಂಭಮೇಳ ಪ್ರಾರಂಭವಾದಾಗಿನಿಂದ ಸ್ನಾನ ಮಾಡಿದವರ ಸಂಖ್ಯೆ ಇದುವರೆಗೂ 35 ಕೋಟಿಯಷ್ಟಾಗಿದೆ.

    ಮುಂಜಾನೆ 4 ಗಂಟೆ ಹೊತ್ತಿಗೆ 16 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

    ಇಂದು ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ. ಇತ್ತೀಚೆಗೆ ಕುಂಭಮೇಳದಲ್ಲಿ ಜನಸಂದಣಿಯಿಂದಾಗಿ ಕಾಲ್ತುಳಿತಕ್ಕೆ 30 ಜನರು ಸಾವನ್ನಪ್ಪಿದ್ದರು. ಈ ದುರಂತ ಮತ್ತೆ ಸಂಭವಿಸಬಾರದು ಎಂದು ಜನಸಂದಣಿ ನಿರ್ವಹಿಸಲು ಹೆಚ್ಚಿನ ಸಂಖೈಯಲ್ಲಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

    ಕುಂಭಮೇಳದಲ್ಲಿ ನಡೆಯುವ ಪವಿತ್ರ ಶಾಹಿಸ್ನಾನದಲ್ಲಿ ವಸಂತ ಪಂಚಮಿ ಪ್ರಮುಖವಾಗಿದೆ. ಫೆ.12 ರಂದು ಮಹಾ ಪೂರ್ಣಿಮೆ ಮತ್ತು ಫೆ.26 ರಂದು ಮಹಾ ಶಿವರಾತ್ರಿ ದಿನ ಕೊನೆ ಪುಣ್ಯ ಸ್ನಾನ ನೆರವೇರಲಿದೆ.

  • ಕುಂಭಮೇಳದಲ್ಲಿ ಅಮಿತ್‌ ಶಾ ಪವಿತ್ರ ಸ್ನಾನ

    ಕುಂಭಮೇಳದಲ್ಲಿ ಅಮಿತ್‌ ಶಾ ಪವಿತ್ರ ಸ್ನಾನ

    ಪ್ರಯಾಗ್‌ರಾಜ್‌: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಸಾಧುಗಳ ಜೊತೆಗೆ  ಮಹಾ ಕುಂಭಮೇಳದಲ್ಲಿ (Maha Kumbh) ಪವಿತ್ರ ಸ್ನಾನ (Holy Dip) ಮಾಡಿದ್ದಾರೆ.

    ತ್ರಿವೇಣಿ ಸಂಗಮದಲ್ಲಿ (Triveni Sangam) ಪವಿತ್ರ ಸ್ನಾನ ಮಾಡಿದ ನಂತರ ಅವರು ಬಡೇ ಹನುಮಾನ್ ಜಿ ದೇವಸ್ಥಾನ ಮತ್ತು ಅಭಯವತ್‌ಗೆ ಭೇಟಿ ನೀಡಲಿದ್ದಾರೆ. ನಂತರ ಜುನಾ ಅಖಾರಕ್ಕೆ ತೆರಳಿ ಮಹಾರಾಜರು ಮತ್ತು ಅಖಾರದ ಇತರ ಸಂತರನ್ನು ಭೇಟಿ ಮಾಡಿ ಅವರೊಂದಿಗೆ ಭೋಜನ ಸೇವಿಸಲಿದ್ದಾರೆ.

    ಫೆ. 5 ರಂದು ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ನಾನ ಮಾಡಲಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಮಹಾ ಕುಂಭಮೇಳದಲ್ಲಿ ಬರೋಬ್ಬರಿ 10 ಕೋಟಿ ಭಕ್ತರಿಂದ ಪುಣ್ಯಸ್ನಾನ

    ಪ್ರಯಾಗ್‌ರಾಜ್‌: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Mahakumbh 2025) 11ನೇ ದಿನವೂ ಭಕ್ತಸಾಗರ ತುಂಬಿ ತುಳುಕಿದೆ.

    ಗಂಗಾ, ಯಮುನಾ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ (Holy Pilgrims) ಮಾಡಿದವರ ಸಂಖ್ಯೆ ಇದೀಗ 10 ಕೋಟಿ ಮೈಲುಗಲ್ಲು ದಾಟಿದೆ. ಜನವರಿ 13ರಂದು ಪ್ರಾರಂಭವಾದ ಮಹಾ ಕುಂಭಮೇಳವು ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಮೈಲುಗಲ್ಲು ತಲುಪಿದೆ ಎಂದು ಉತ್ತರ ಪ್ರದೇಶದ ಸರ್ಕಾರ ಇಂದು (ಜ.23) ತಿಳಿಸಿದೆ. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

    ಜನವರಿ 13ರಂದು ಶಾಹಿ ಸ್ನಾನದ ಮೂಲಕ ಉದ್ಘಾಟನೆಯಾದ ಕುಂಭಮೇಳದಲ್ಲಿ ವಿವಿಧ ಬಗೆಯ ಪುಣ್ಯಸ್ನಾನದಲ್ಲಿ ಭಕ್ತರು ಪಾಲ್ಗೊಳ್ಳುತ್ತಾರೆ. ಹಾಗೆಯೇ ಜ.15ರಂದು ಮಕರ ಸಂಕ್ರಾಂತಿ ಸ್ನಾನ ನಡೆಯಿತು. ಮುಂದೆ ಜನವರಿ 29 ರಂದು ಮೌನಿ ಅಮಾವಾಸ್ಯೆ ಸ್ನಾನ, ಫೆಬ್ರವರಿ 3ರಂದು ವಸಂತ ಪಂಚಮಿ ಸ್ನಾನ, ಫೆಬ್ರವರಿ 12 ರಂದು ಮಾಘಿ ಪೂರ್ಣಿಮಾ ಸ್ನಾನ, ಫೆಬ್ರವರಿ 26ರಂದು ಮಹಾ ಶಿವರಾತ್ರಿ ಸ್ನಾನ ನೆರವೇರಲಿದೆ. ಸದ್ಯ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

    45 ಕೋಟಿ ಜನ ಭಾಗಿಯಾಗುವ ನಿರೀಕ್ಷೆ:
    45 ದಿನಗಳ ಕಾಲ ನಡೆಯಲಿರುವ ಕುಂಭಮೇಳದಲ್ಲಿ ಬರೋಬ್ಬರಿ 45 ಕೋಟಿ ಜನ ಬಂದು ಹೋಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರ ತಯಾರಿ ಮಾಡಿಕೊಂಡಿದೆ. ಗಂಗಾ, ಯಮುನ, ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ ʻಸಂಗಮನಗರಿʼ ಎಂಬ ನಗರವನ್ನೇ ಸೃಷ್ಟಿಸಿದೆ. ಇದನ್ನೂ ಓದಿ: ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆಗೆ ಒಳ್ಳೆಯ ಜಾಗ ಯಾವ್ದು ಅಂತ ಸರ್ಚ್‌ ಮಾಡಿದ್ದ ಭೂಪ!

    12 ಗಂಟೆ ವೇಳೆಗೆ 30 ಲಕ್ಷ ಜನರಿಂದ ಪುಣ್ಯಸ್ನಾನ:
    ಗುರುವಾರ (ಇಂದು) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಲ್ಪವಾಸಿಗಳು ಹಾಗೂ ಇತರ ಭಕ್ತರು ಸೇರಿದಂತೆ ಸುಮಾರು 30 ಲಕ್ಷ ಮಂದಿ ಪುಣ್ಯಸ್ನಾನ ಮಾಡಿದ್ದಾರೆ. ದಿನದ ಅಂತ್ಯಕ್ಕೆ ಇದರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದೂ ಉತ್ತರ ಪ್ರದೇಶ ಸರ್ಕಾರ ತನ್ನ ಪ್ರಕಟಣೆಯಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಇಂದಿನಿಂದ ಮಹಾ ಕುಂಭಮೇಳ – ನಾಗಸಾಧುಗಳು, ಅಘೋರಿಗಳ ಸಮಾಗಮ, ಏನೆಲ್ಲಾ ವಿಶೇಷತೆಗಳಿವೆ?

  • ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕು ದಿನಗಳ ಮಹಾಕುಂಭ ಮೇಳ

    ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕು ದಿನಗಳ ಮಹಾಕುಂಭ ಮೇಳ

    ಮೈಸೂರು: ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿನ ತ್ರಿವೇಣಿ ಸಂಗಮದಲ್ಲಿ (Triveni Sangam)ನಾಳೆಯಿಂದ ನಾಲ್ಕು ದಿನ ಶ್ರೀ ಮಹದೇಶ್ವರ ಮಹಾಕುಂಭ ಮೇಳ(Kumbh Mela) ನಡೆಯಲಿದೆ.

    ಅಂಬಿಗರಹಳ್ಳಿ ಬಳಿ ಕಾವೇರಿ, ಲಕ್ಷ್ಮಣತೀರ್ಥ, ಹೇಮಾವತಿ ನದಿಗಳು ಸಂಧಿಸುವ ಸಂಗಮ ಸ್ಥಳದಲ್ಲಿ ಮಹಾ ಕುಂಭಮೇಳ ಆಯೋಜನೆಯಾಗಿದೆ. ಈ ಕುರಿತು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಈ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ – ಸಿಂಹ ಗುಡುಗು

    ಸುಮಾರು 4 ಲಕ್ಷ ಜನ ಕುಂಭ ಮೇಳದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಅ.15 ರ ಸಂಜೆ ವಾರಣಾಸಿಯ ಮಾದರಿಯಲ್ಲಿ ಗಂಗಾರತಿ ನಡೆಯಲಿದ್ದು ಅ.‌16 ರಂದು ಪುಣ್ಯಸ್ನಾನ ನಡೆಯಲಿದೆ. ಅಂದು ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್(Yogi Adityanath), ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ರಸ್ತೆಯ ಮೇಲೆ ಹರಿಯುತ್ತಿದೆ ನೀರು

    ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿ – ರಸ್ತೆಯ ಮೇಲೆ ಹರಿಯುತ್ತಿದೆ ನೀರು

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ.

    ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದ್ದು ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.

    ಮಳೆ ಮುಂದುವರಿದರೆ ಇನ್ನಷ್ಟು ನೀರಿನ ಮಟ್ಟ ಹೆಚ್ಚಳವಾಗಲಿದ್ದು, ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ.  ಇದನ್ನೂ ಓದಿ: ಭಾರೀ ಮಳೆಯಿಂದ ಅರಬ್ಬಿ ಸಮುದ್ರ ಪ್ರಕ್ಷುಬ್ಧ – ರಾಜ್ಯದ ವಿವಿಧೆಡೆ ಭೂಕುಸಿತ, ಭೂಮಿ ಕಂಪಿಸಿದ ಅನುಭವ

    ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು ಶನಿವಾರ ಶಾಸಕ ಅಪ್ಪಚ್ಚು ರಂಜನ್‌ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.

    Live Tv