Tag: truck accident

  • ಇಂದೋರ್‌ನಲ್ಲಿ ಪಾದಚಾರಿಗಳು, ವಾಹನಗಳಿಗೆ ಟ್ರಕ್‌ ಡಿಕ್ಕಿ – ಮೂವರು ಸಾವು

    ಇಂದೋರ್‌ನಲ್ಲಿ ಪಾದಚಾರಿಗಳು, ವಾಹನಗಳಿಗೆ ಟ್ರಕ್‌ ಡಿಕ್ಕಿ – ಮೂವರು ಸಾವು

    ಇಂದೋರ್‌: ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್‌ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.

    ಎಣ್ಣೆ ಮತ್ತಲ್ಲಿ ಚಾಲಕ ಟ್ರಕ್‌ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ದೇಹಗಳು ಛಿದ್ರವಾಗಿ ಬಿದ್ದಿರುವ ದೃಶ್ಯಗಳು ಕಂಡುಬಂದಿವೆ. ಅನೇಕರು ಗಂಭೀರ ಸ್ಥಿತಿಯಲ್ಲಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸೋಮವಾರ ವಿಮಾನ ನಿಲ್ದಾಣ ರಸ್ತೆಯ ಶಿಕ್ಷಕ್ ನಗರದಲ್ಲಿ ನಿಯಂತ್ರಣ ತಪ್ಪಿದ ಟ್ರಕ್ ನಿರ್ಬಂಧಿತ ಪ್ರದೇಶವನ್ನು ಪ್ರವೇಶಿಸಿ ಜನರ ಗುಂಪು ಹಾಗೂ 10 ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಚಾಲಕ ವಿಪರೀತ ಮದ್ಯ ಸೇವಿಸಿದ್ದ. ಮೊದಲು ರಾಮಚಂದ್ರ ನಗರ ಡಿವೈಡರ್‌ನಲ್ಲಿ ಇಬ್ಬರು ಬೈಕ್ ಸವಾರರಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಬಡಾ ಗಣಪತಿ ಪ್ರದೇಶದ ಕಡೆಗೆ ಅಜಾಗರೂಕತೆಯಿಂದ ವಾಹನ ಚಲಾಯಿಸಿದ್ದಾನೆ. ಚಾಲಕನನ್ನು ಹಿಡಿದು ಮಲ್ಹರ್‌ಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಕೃಷ್ಣ ಲಾಲ್‌ಚಂದಾನಿ ತಿಳಿಸಿದ್ದಾರೆ.

    ಕೋಪಗೊಂಡ ಸ್ಥಳೀಯರು ಟ್ರಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಪ್ರಾಥಮಿಕ ವರದಿ ತಿಳಿಸಿದೆ. ಆದರೆ, ಅಪಘಾತವಾದ ಬೈಕ್ ಟ್ರಕ್‌ನ ಕೆಳಗೆ ಸಿಲುಕಿಕೊಂಡು, ಘರ್ಷಣೆಯಿಂದಾಗಿ ಬೈಕ್‌ನ ಇಂಧನ ಟ್ಯಾಂಕ್ ಸ್ಫೋಟಗೊಂಡು ಟ್ರಕ್ ಹೊತ್ತಿ ಉರಿಯಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ.

  • ಅಪಘಾತವಾಗಿದ್ದ ಕಾರು ತೆರವು ಮಾಡ್ತಿದ್ದವರ ಮೇಲೆ ಹರಿದ ಟ್ರಕ್ – ಆರು ಮಂದಿ ಸಾವು

    ಅಪಘಾತವಾಗಿದ್ದ ಕಾರು ತೆರವು ಮಾಡ್ತಿದ್ದವರ ಮೇಲೆ ಹರಿದ ಟ್ರಕ್ – ಆರು ಮಂದಿ ಸಾವು

    ಮುಂಬೈ: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಬೀಡ್ ಜಿಲ್ಲೆಯಲ್ಲಿ ನಡೆದಿದೆ.

    ಮೃತರನ್ನು ಬೀಡ್‌ನ ಜಿಯೋರೈ ನಿವಾಸಿಗಳಾದ ಬಾಲು ಅಟ್ಕರೆ, ಭಾಗವತ್ ಪರಲ್ಕರ್, ಸಚಿನ್ ನನ್ನಾವ್ರೆ, ಮನೋಜ್ ಕರಂಡೆ, ಕೃಷ್ಣ ಜಾಧವ್ ಮತ್ತು ದೀಪಕ್ ಸುರಯ್ಯ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿಯಿಂದ ಎಸ್‌ಟಿ ಸೋಮಶೇಖರ್‌, ಶಿವರಾಂ ಹೆಬ್ಬಾರ್‌ ಉಚ್ಚಾಟನೆ

    ಸೋಮವಾರ ರಾತ್ರಿ 8:30ರ ಸುಮಾರಿಗೆ ದೀಪಕ್ ಅಟ್ಕರೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು, ಬೀಡ್ ಗ್ರಾಮದಿಂದ 100 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ-52ರ ಡಿವೈಡರ್ ಬಳಿ ಅಪಘಾತಕ್ಕೀಡಾಯಿತು. ಅವಘಡವನ್ನು ನೋಡಿದ ಕೆಲವರು ಕಾರನ್ನು ರಸ್ತೆಯಿಂದ ತೆಗೆಯುತ್ತಿದ್ದರು. 11:30ರ ಸುಮಾರಿಗೆ ವೇಗವಾಗಿ ಬಂದ ಟ್ರಕ್, ತೆರವುಗೊಳಿಸುತ್ತಿದ್ದವರ ಮೇಲೆ ಹಾದು ಹೋಗಿದೆ. ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿದ್ದಾರೆ.

    ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಟ್ರಕ್ ಚಾಲಕನನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದಾರೆ.ಇದನ್ನೂ ಓದಿ: ಮ್ಯಾನೇಜರ್ ಮೇಲೆ ಹಲ್ಲೆ- ನಟ ಉನ್ನಿ ಮುಕುಂದನ್ ವಿರುದ್ಧ ಕೇಸ್

  • ಮೆಕ್ಸಿಕೊದಲ್ಲಿ ಟ್ರಕ್‌ ಅಪಘಾತಕ್ಕೆ 10 ವಲಸಿಗರು ಬಲಿ

    ಮೆಕ್ಸಿಕೊದಲ್ಲಿ ಟ್ರಕ್‌ ಅಪಘಾತಕ್ಕೆ 10 ವಲಸಿಗರು ಬಲಿ

    ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕನ್ (Mexico) ರಾಜ್ಯವಾದ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ಮಾಡುತ್ತಿದ್ದ ಟ್ರಕ್ ಅಪಘಾತಕ್ಕೀಡಾಗಿ 10 ಮಂದಿ ವಲಸಿಗರು ದಾರುಣ ಸಾವಿಗೀಡಾಗಿದ್ದಾರೆ. 17 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಚಿಯಾಪಾಸ್‌ನಲ್ಲಿರುವ ಪಿಜಿಜಿಯಾಪಾನ್-ಟೋನಾಲಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ವಲಸಿಗರನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ರಾಷ್ಟ್ರೀಯ ವಲಸೆ ಸಂಸ್ಥೆ (ಐಎನ್‌ಎಂ) ತಿಳಿಸಿದೆ. ಇದನ್ನೂ ಓದಿ: 350 ವರ್ಷಗಳ ಬಳಿಕ ಭಾರತಕ್ಕೆ ಮರಳಲಿದೆ ಶಿವಾಜಿ ಮಹಾರಾಜರ `ವ್ಯಾಘ್ರ ನಖ’

    ಟ್ರಕ್‌ನ್ನು ಚಾಲಕ ವೇಗವಾಗಿ ಚಲಾಯಿಸುತ್ತಿದ್ದ. ನಿಯಂತ್ರಣ ತಪ್ಪಿ ಟ್ರಕ್‌ ಪಲ್ಟಿಯಾಗಿದೆ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ. ಮಗು ಸೇರಿದಂತೆ 10 ಮಂದಿ ವಲಸಿಗರು ಮೃತಪಟ್ಟಿದ್ದಾರೆ. ಗಾಯಗೊಂಡ 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ವಲಸಿಗರನ್ನು ಒಳಗೊಂಡ ರಸ್ತೆ ಅಪಘಾತಗಳು ಮೆಕ್ಸಿಕೋದಲ್ಲಿ ಸಾಮಾನ್ಯ ಎನ್ನುವಂತಾಗಿದೆ. ಮೆಕ್ಸಿಕೊದಿಂದ ಅಮೆರಿಕ ದೇಶಕ್ಕೆ ವಲಸೆ ಹೋಗುವವರ ಸಂಖ್ಯೆ ಹೆಚ್ಚು. ಸೂಕ್ತ ನಿರ್ವಹಣೆ ಇಲ್ಲದ ವಾಹಗಳಲ್ಲೇ ಹೆಚ್ಚಿನ ಮಂದಿ ವಲಸೆ ಹೋಗುತ್ತಾರೆ. ಹೀಗಾಗಿ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    2021ರ ಡಿಸೆಂಬರ್‌ನಲ್ಲೂ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಸುಮಾರು 54 ಮಂದಿ ಮೃತಪಟ್ಟಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿ ತೊರೆದ ಗೋವಾ ಮಾಜಿ ಸಿಎಂ ಪುತ್ರ – ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ

    ಬಿಜೆಪಿ ತೊರೆದ ಗೋವಾ ಮಾಜಿ ಸಿಎಂ ಪುತ್ರ – ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ

    ಪಣಜಿ: ತನ್ನ ತಂದೆಯ ಕ್ಷೇತ್ರ ಪಣಜಿಯಲ್ಲಿ ಸ್ಪರ್ಧಿಸಲು ಟಿಕೆಟ್‌ ನಿರಾಕರಿಸಿದ್ದಕ್ಕೆ ಗೋವಾ ಮಾಜಿ ಸಿಎಂ ಮನೋಹರ್‌ ಪರಿಕ್ಕರ್‌ ಪುತ್ರ ಉತ್ಪಲ್‌ ಪರಿಕ್ಕರ್‌, ಬಿಜೆಪಿ ತೊರೆದಿದ್ದಾರೆ. ಅಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

    ಕಳೆದ ಹಾಗೂ ಈ ಚುನಾವಣೆ ಸಮಯದಲ್ಲಿ ಪಕ್ಷಕ್ಕೆ ಮನವರಿಕೆ ಮಾಡಲು ಪ್ರಯತ್ನಿಸಿದೆ. ಎಷ್ಟೇ ಪ್ರಯತ್ನಿಸಿದರೂ ಪಣಜಿ ಕ್ಷೇತ್ರದ ಉಮೇದುವಾರಿಕೆಯನ್ನು ಪಡೆಯಲು ನನಗೆ ಸಾಧ್ಯವಾಗಲಿಲ್ಲ. ಕಳೆದ ಎರಡು ವರ್ಷಗಳಲ್ಲಿ ಪಕ್ಷಕ್ಕೆ ಅವಕಾಶವಾದಿಯಾಗಿ ಬಂದವರಿಗೆ ಟಿಕೆಟ್‌ ನೀಡಲಾಗಿದೆ. ಅದಕ್ಕಾಗಿಯೇ ನಾನು ಪಕ್ಷದಿಂದ ಹೊರಬರುವ ನಿರ್ಧಾರ ಮಾಡಿದ್ದೇನೆ. ಪಣಜಿ ಜನರು ನನ್ನ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ ಎಂದು ಪರಿಕ್ಕರ್‌ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪರಿಕ್ಕರ್ ಪುತ್ರನನ್ನು ಎಎಪಿಗೆ ಆಹ್ವಾನಿಸಿದ ಕೇಜ್ರಿವಾಲ್

    ಮೂರು ಬಾರಿ ಗೋವಾ ಮುಖ್ಯಮಂತ್ರಿಯಾಗಿದ್ದ ಹಾಗೂ ಕಡಲತೀರದ ರಾಜ್ಯದಲ್ಲಿ ಬಿಜೆಪಿಯ ಪ್ರಮುಖ ನಾಯಕರಾಗಿದ್ದ ಮನೋಹರ್‌ ಪರಿಕ್ಕರ್‌ ಅವರು 2019ರಲ್ಲಿ ನಿಧನರಾದರು. ತಮ್ಮ ವರ್ಚಸ್ಸು ಹಾಗೂ ಜನಪ್ರಿಯತೆಯಿಂದಾಗಿ 25 ವರ್ಷಗಳ ಕಾಲ ಪಣಜಿ ಕ್ಷೇತ್ರದಲ್ಲಿ ರಾಜಕೀಯ ಪ್ರಾಬಲ್ಯ ಹೊಂದಿದ್ದರು.

    ತಂದೆಯಂತೆಯೇ ಮಗ ಉತ್ಪಲ್‌ ಪರಿಕ್ಕರ್‌ ಕೂಡ ಪಣಜಿ ಕ್ಷೇತ್ರದಿಂದಲೇ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಪಣಜಿ ಕ್ಷೇತ್ರದಲ್ಲಿ ಟಿಕೆಟ್‌ ನೀಡಲು ಬಿಜೆಪಿ ನಿರಾಕರಿಸಿದೆ. ಇದನ್ನೂ ಓದಿ: ಸಿಎಂ ಅಭ್ಯರ್ಥಿಯಾಗಿ ನನ್ನ ಮುಖವನ್ನು ನೋಡಬಹುದು ಅಲ್ಲವೇ: ಪ್ರಿಯಾಂಕಾ ಗಾಂಧಿ