Tag: tumakur

  • 10,000 ಕೊಡ್ತೀನಿ ಬಾ –  ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ತುಮಕೂರು: ಹತ್ತು ಸಾವಿರ ಕೊಡ್ತೀನಿ ಬಾ ಎಂದು ಯುವತಿಯನ್ನು ಮಂಚಕ್ಕೆ ಕರೆದ ಪ್ರಿನ್ಸಿಪಾಲ್‍ನನ್ನು ತುಮಕೂರು (Tumakur) ಮಹಿಳಾ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಆರೋಪಿ ತುಮಕೂರಿನ ಜಯನಗರದಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದಕ್ಕೂ ಮುನ್ನ 2019ರಲ್ಲಿ ತುಮಕೂರು ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಕಾಲೇಜೊಂದರಲ್ಲಿ ಇಂಗ್ಲಿಷ್ ಪ್ರಾದ್ಯಾಪಕನಾಗಿದ್ದ. ಈ ಸಮಯದಲ್ಲಿ ಆರೋಪಿ ವಿದ್ಯಾರ್ಥಿನಿಯೊಬ್ಬಳ ನಂಬರ್ ಪಡೆದು ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರಳಿದ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

    ಸಂತ್ರಸ್ತೆ ಕಾಲೇಜು ಬಿಟ್ಟರೂ, ಯೋಗೇಶ್ ಸಂದೇಶ ಕಳುಹಿಸುವುದನ್ನು ಬಿಟ್ಟಿರಲಿಲ್ಲ. ಇದರಿಂದ ಸಂತ್ರಸ್ತೆ ಬೇಸತ್ತು ಆತನ ನಂಬರ್ ಬ್ಲಾಕ್ ಮಾಡಿದ್ದಳು. ಇದಾದ ಬಳಿಕ ಒಂದು ವರ್ಷದಿಂದ ಸೈಲೆಂಟ್ ಆಗಿದ್ದ ಯೋಗೇಶ್, ಜು.22 ರಂದು ರಸ್ತೆಯಲ್ಲಿ ಯುವತಿಯನ್ನು ಕಂಡು, ಮತ್ತೊಂದು ನಂಬರ್‌ನಿಂದ ಸಂದೇಶ ಕಳುಹಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಅಲ್ಲದೇ ಈ ಬಾರಿ ನನಗೆ ನೀನು ಬೇಕು, 10 ಸಾವಿರ ಹಣ ಕೊಡ್ತೀನಿ ಎಂದು ಪೀಡಿಸಿದ್ದ.

    ಈ ವಿಚಾರವನ್ನು ಸಂತ್ರಸ್ತೆ ತಂದೆಗೆ ತಿಳಿಸಿದ್ದಳು. ಬಳಿಕ ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೀಗ ಲೈಂಗಿಕ ಕಿರುಕುಳ ಹಾಗೂ ಅಟ್ರಾಸಿಟಿ ಕೇಸ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿಕೊಂಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಪತಿ ಜೊತೆ ಜಗಳ| ಚಹಾಗೆ ಇಲಿ ಪಾಷಾಣ ಬೆರೆಸಿ ಮಗು ಜೊತೆ ಕುಡಿದ್ಳು – ಪುತ್ರಿ ಸಾವು, ತಾಯಿ ಗಂಭೀರ

  • ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ಬರುವಾಗ ಕುಸಿದುಬಿದ್ದು 23 ವರ್ಷದ ಯುವಕ ಸಾವು

    ಸ್ನೇಹಿತನ ಮನೆಯಲ್ಲಿ ಊಟ ಮುಗಿಸಿ ಬರುವಾಗ ಕುಸಿದುಬಿದ್ದು 23 ವರ್ಷದ ಯುವಕ ಸಾವು

    ತುಮಕೂರು: ಹೃದಯಾಘಾತಕ್ಕೆ (Heart Attack) 23 ವರ್ಷದ ಯುವಕ ಸಾವನ್ನಪ್ಪಿದ ಘಟನೆ ಗುಬ್ಬಿ (Gubbi) ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಸಿದ್ದೇಶ್ (23) ಮೃತ ದುರ್ದೈವಿ. ಚಿಕ್ಕನಾಯಕನಹಳ್ಳಿಯಲ್ಲಿ ಸ್ನೇಹಿತನ ಮನೆಗೆ ಹೋಗಿ ಊಟಕ್ಕೆ ಹೋಗಿ ವಾಪಸ್ ಬರುವಾಗ ದಾರಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಅವರನ್ನು ಗುಬ್ಬಿ ಆಸ್ಪತ್ರೆಗೆ ಸ್ನೇಹಿತರು ಕರೆತಂದಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಇದನ್ನೂ ಓದಿ: Heart Attack | ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ


    ಹಠಾತ್ ಹೃದಯಾಘಾತದಿಂದ, ಆಸ್ಪತ್ರೆಗೆ ತರುವ ವೇಳೆ ಆತ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Heart Attack | ಹಾಸನ, ಶಿವಮೊಗ್ಗದಲ್ಲಿ ತಲಾ ಒಬ್ಬರು ರೈತರು ಹೃದಯಾಘಾತಕ್ಕೆ ಬಲಿ

  • ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ: ಪರಮೇಶ್ವರ್

    ಮೈಕ್ರೋ ಫೈನಾನ್ಸ್ ಮಟ್ಟ ಹಾಕಲು ಡಿಸಿಗೆ ಅಧಿಕಾರ: ಪರಮೇಶ್ವರ್

    ತುಮಕೂರು: ಮೈಕ್ರೋ ಫೈನಾನ್ಸ್ (Microfinance) ಸಮಸ್ಯೆ ಕುರಿತು ಸಿಎಂ ನೇತೃತ್ವದಲ್ಲಿ ಉನ್ನತಮಟ್ಟದ ಸಭೆ ನಡೆಸಲಾಗಿದೆ. ಮೈಕ್ರೋ ಫೈನಾನ್ಸ್‌ಗಳಿಗೆ ಸಬಂಧಿಸಿದಂತೆ ಈಗಿರುವ ಕಾನೂನು ಬಲಪಡಿಸಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwar) ಹೇಳಿದ್ದಾರೆ.

    ತುಮಕೂರಿನಲ್ಲಿ (Tumakur ) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡಲು ಬಡವರಿಗೆ ತೊಂದರೆ ನೀಡುತ್ತಿದ್ದಾರೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಹಾವಳಿ ನಿಯಂತ್ರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸುಗ್ರೀವಾಜ್ಞೆ ಮೂಲಕ ಕಾನೂನು ಜಾರಿಗೆ ತರಲಾಗುವುದು. ಸುಮೋಟೊ ಕೇಸ್ ತೆಗೆದುಕೊಳ್ಳಲು ಪೊಲೀಸರಿಗೆ ಅವಕಾಶವಿಲ್ಲ. ಇದಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಅನಧಿಕೃತ ಫೈನಾನ್ಸ್ ಹಾವಳಿಯನ್ನು ಮಟ್ಟ ಹಾಕಲಾಗುವುದು. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ವರ್ಷ ಏಳು ಜನರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು 14 ಪ್ರಕರಣ ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಾನೂನು ಕ್ರಮ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ.

  • ಇದೇ ಮೊದಲ ಬಾರಿಗೆ ತುಮಕೂರು ದಸರಾ ಆಚರಣೆ – ಸಚಿವ ಜಿ.ಪರಮೇಶ್ವರ್ ಚಾಲನೆ

    ಇದೇ ಮೊದಲ ಬಾರಿಗೆ ತುಮಕೂರು ದಸರಾ ಆಚರಣೆ – ಸಚಿವ ಜಿ.ಪರಮೇಶ್ವರ್ ಚಾಲನೆ

    ತುಮಕೂರು: ಜಿಲ್ಲಾಡಳಿತದಿಂದ ಇದೇ ಮೊದಲ ಬಾರಿಗೆ ನಡೆಯುತ್ತಿರುವ ತುಮಕೂರು ದಸರಾ ಆಚರಣೆಯು ಇಂದಿನಿಂದ 10 ದಿನಗಳ ಕಾಲ ನಡೆಯಲಿದ್ದು ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar)  ಚಾಲನೆ ನೀಡಿದ್ದಾರೆ.

    ತುಮಕೂರು (Tumakur) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮಕ್ಕೆ ಜಿ.ಪರಮೇಶ್ವರ್ ಹಾಗೂ ಪತ್ನಿ ಕನ್ನಿಕಾ ಪರಮೇಶ್ವರ್ ಸಮೇತ ಹೋಮದಲ್ಲಿ ಪಾಲ್ಗೊಂಡರು. ಇದನ್ನೂ ಓದಿ: ಇರಾನ್‌ ತೈಲ ಕೇಂದ್ರಗಳ ಮೇಲೆ ದಾಳಿಗೆ ಇಸ್ರೇಲ್‌ ಪ್ಲ್ಯಾನ್‌ – ಜೋ ಬೈಡನ್‌ ಹೇಳಿದ್ದೇನು?

    ಕಾರ್ಯಕ್ರಮದಲ್ಲಿ ಎಲೆರಾಂಪುರ ಹನುಮಂತನಾಥ ಸ್ವಾಮೀಜಿ, ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ ಜಯಚಂದ್ರ, ಶಾಸಕ ಜಿ.ಬಿ ಜ್ಯೋತಿಗಣೇಶ್, ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂ. ಸಿಇಒ ಪ್ರಭು, ಎಸ್.ಪಿ ಅಶೋಕ್ ಕೆ.ವಿ, ಮಹಾನಗರ ಪಾಲಿಕೆ ಕಮಿಷನರ್ ಅಶ್ವಿಜಾ ಬಿ.ವಿ ಸೇರಿದಂತೆ ಹಲವರು ಭಾಗಿಯಾಗಿದ್ದರು. ಇದನ್ನೂ ಓದಿ: MUDA Scam | ಸಿಎಂ ತಮ್ಮ ಕಾಲಿನ ಮೇಲೆ ಹತ್ತಾರು ಕಲ್ಲು ಹಾಕಿಕೊಂಡು ಔಷಧಿ ಇಲ್ಲದಂತೆ ಮಾಡಿಕೊಂಡಿದ್ದಾರೆ – ಸೋಮಣ್ಣ

    ಈ ವೇಳೆ ದಸರಾ ವೇದಿಕೆಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಮೊಳಗಿತು. ತುಮಕೂರು ಜಿಲ್ಲೆಗೆ ಸಿಎಂ ಸ್ಥಾನ ಸಿಗಲಿ, ಪರೋಕ್ಷವಾಗಿ ಪರಮೇಶ್ವರ್‌ಗೆ ಸಿಎಂ ಸ್ಥಾನ ಸಿಗಲಿ ಎಂದು ಎಲೆರಾಂಪುರ ಮಠದ ಹನುಮಂತನಾಥ ಸ್ವಾಮಿಜೀ ಹೇಳಿದರು. ಇದನ್ನೂ ಓದಿ: Photo Gallery | ಮಂಗಳೂರಿನಲ್ಲಿ ಕಳೆಗಟ್ಟಿದ ದಸರಾ ಸಂಭ್ರಮ – ಶಾರದಾ ಮಾತೆಗೆ ದಿವ್ಯಾಲಂಕಾರ

  • ಬಿಯರ್ ಬಾಟಲಿಯಿಂದ ಹಲ್ಲೆಗೈದು ಎಸ್ಕೇಪ್ ಆಗಲು ಯತ್ನ – ಆರೋಪಿ ಕಾಲಿಗೆ ಗುಂಡೇಟು

    ಬಿಯರ್ ಬಾಟಲಿಯಿಂದ ಹಲ್ಲೆಗೈದು ಎಸ್ಕೇಪ್ ಆಗಲು ಯತ್ನ – ಆರೋಪಿ ಕಾಲಿಗೆ ಗುಂಡೇಟು

    ತುಮಕೂರು: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಬಿಯರ್ ಬಾಟೆಲ್‍ನಿಂದ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ ಆರೋಪಿಯ ಕಾಲಿಗೆ ಮಧುಗಿರಿ ಪೊಲೀಸರು (Madhugiri Police) ಗುಂಡೇಟು ನೀಡಿದ್ದಾರೆ.

    ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಹಿಂದೂಪುರ ಮೂಲದ ರಿಜ್ವಾನ್ ಎಂದು ಗುರುತಿಸಲಾಗಿದೆ. ಆರೋಪಿ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನ ಪೊಲೀಸರು ಬಂಧಿಸಿದ್ದರು. ಇಂದು (ಜೂ.24) ಖಚಿತ ಮಾಹಿತಿ ಮೇರೆಗೆ ಪೊಲಿಸರು ಎ2 ಆರೋಪಿ ರಿಜ್ವಾನ್‍ನನ್ನ ಈಜೀಹಳ್ಳಿ ಕ್ರಾಸ್ ಬಳಿ ಬಂಧಿಸಲು ತೆರಳಿದ್ದರು. ಈ ವೇಳೆ ಆರೋಪಿ, ಪೊಲೀಸ್ ಸಿಬ್ಬಂದಿ ರಮೇಶ್ ಎಂಬವರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಪವಿತ್ರಾಗೌಡಗೆ ಕೋಟಿ ಕೋಟಿ ಹಣ ಕೊಟ್ಟಿದ್ರಾ ಸೌಂದರ್ಯ ಜಗದೀಶ್?

    ಬಳಿಕ ಆರೋಪಿಗೆ ಶರಣಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಆದರೆ ಆರೋಪಿ ಶರಣಾಗಲು ನಿರಾಕರಿಸಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಆರೋಪಿ ಭಾಗಿಯಾಗಿದ್ದ. ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರತ್ಯೇಕವಾಗಿ ಆರೋಪಿ ವಿರುದ್ಧ ಪ್ರಕರಣಗಳು ದಾಖಲಾಗಿವೆ.

    ಗಾಯಾಳು ಪೊಲೀಸ್ ಸಿಬ್ಬಂದಿ ರಮೇಶ್‍ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಹಾಗೂ ಆರೋಪಿ ರಿಜ್ವಾನ್‍ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ – ಪ್ರತ್ಯೇಕ ತನಿಖೆ ಆರಂಭಿಸಿದ ED

  • ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್

    ಅಗತ್ಯ ಬಿದ್ದರೆ ಬಿಎಸ್‍ವೈ ಅರೆಸ್ಟ್: ಪರಮೇಶ್ವರ್

    ತುಮಕೂರು: ಬಿ.ಎಸ್ ಯಡಿಯೂರಪ್ಪ (B.S Yediyurappa) ಅವರು ಸಿಐಡಿ (CID) ವಿಚಾರಣೆಗೆ ಹಾಜರಾಗಿಲ್ಲ. ಅಗತ್ಯವಿದ್ದರೆ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G.Parameshwara )ಹೇಳಿದ್ದಾರೆ.

    ತುಮಕೂರಿನಲ್ಲಿ (Tumakur) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 17 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ವಿರುದ್ಧದ ಪ್ರಕರಣದ ವಿಚಾರವಾಗಿ ಪ್ರತಿಕ್ರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ನೀಡಿದೆ. ಇಲ್ಲಿಯವರೆಗೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಜೂ.15ರ ಒಳಗೆ ಚಾರ್ಜ್‍ಶೀಟ್ ಫೈಲ್ ಮಾಡಬೇಕು. ಇಷ್ಟರಲ್ಲೇ ಚಾರ್ಜ್‍ಶೀಟ್ ಫೈಲ್ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ!

    ಈಗ ಯಡಿಯೂರಪ್ಪ ಅವರ ಹೇಳಿಕೆ ದಾಖಲಿಸಬೇಕು. ಅದಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪೊಲೀಸರು ಅವರ ಕೆಲಸ ಮಾಡುತ್ತಿದ್ದಾರೆ. ಅಗತ್ಯವಿದ್ದರೆ ಅವರನ್ನು ಬಂಧಿಸಲಾಗುವುದು. ಸ್ವಾಭಾವಿಕವಾಗಿ ಅವರು ಜಾಮೀನು ಅರ್ಜಿ ಹಾಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

    ವಾಲ್ಮೀಕಿ ನಿಗಮದ ಹಗರಣದ ವಿಚಾರವಾಗಿ, ಪ್ರಕರಣದಲ್ಲಿ ಭಾಗಿಯಾದವರನ್ನು ಎಸ್‍ಐಟಿ ಅಧಿಕಾರಿಗಳು ಬಂದಿಸಿದ್ದಾರೆ. ಹೈದ್ರಾಬಾದ್‍ನಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ ಎಂದು ಅವರು ಹೇಳಿದ್ದಾರೆ.

    ನಟ ದರ್ಶನ್‍ರನ್ನು ಬಂಧಿಸಲಾಗಿರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಬಳಿ, ಎಸಿಪಿ ಭರತ್ ರೆಡ್ಡಿ ಮಾಧ್ಯಮವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ, ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಮಾಹಿತಿ ಪಡೆದು, ಹಲ್ಲೆ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ನಟ ದರ್ಶನ್ ಮನೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್

  • ಗಲಭೆಕೋರರನ್ನು ಸಾಮೂಹಿಕವಾಗಿ ಗಲ್ಲಿಗೇರಿಸಬೇಕು: ಸೊಗಡು ಶಿವಣ್ಣ

    ಗಲಭೆಕೋರರನ್ನು ಸಾಮೂಹಿಕವಾಗಿ ಗಲ್ಲಿಗೇರಿಸಬೇಕು: ಸೊಗಡು ಶಿವಣ್ಣ

    ತುಮಕೂರು: ಡಿಜೆ ಹಳ್ಳಿ ಗಲಭೆಕೋರರನ್ನು ಸಾಮೂಹಿಕವಾಗಿ ಗಲ್ಲಿಗೇರಿಸಬೇಕು ಎಂದು ಮಾಜಿ ಸಚಿವ ಸೊಗಡು ಆಗ್ರಹಿಸಿದ್ದಾರೆ.

    ತುಮಕೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಗಲಭೆಕೋರರನ್ನು ಗಲ್ಲಿಗೇರಿಸಿದಾಗ ಮಾತ್ರ ಬುದ್ಧಿ ಬರುತ್ತದೆ. ನಾವು ಆ ಸಮುದಾಯವನ್ನು ಕಳೆದ 70 ವರ್ಷದಿಂದ ಪ್ರೀತಿಯಿಂದ ನೋಡಿಕೊಂಡು ಬರುತ್ತಿದ್ದೇವೆ. ಆದರೂ ಅವರು ತಮ್ಮ ಚಾಳಿ ಬಿಡುತ್ತಿಲ್ಲ. ಹಾಗಾದರೆ ನಮ್ಮ ಪ್ರೀತಿಗೆ ಬೆಲೆನೆ ಇಲ್ಲವೇ ಎಂದು ಸೊಗಡು ಶಿವಣ್ಣ ಪ್ರಶ್ನಿಸಿದ್ದಾರೆ.

    ಗಲಭೆಗೆ ಬಿಜೆಪಿ ಕುಮ್ಮಕ್ಕು ಕೊಟ್ಟಿದೆ ಎಂದು ಹೇಳಿದ್ದ ರಾಮಲಿಂಗಾ ರೆಡ್ಡಿ ಮೀರ್ ಸಾದೀಕ್ ರೆಡ್ಡಿಯಾಗಿದ್ದಾರೆ. ಕಾಂಗ್ರೆಸ್ಸಿನವರು ತಮ್ಮ ವೋಟ್ ಬ್ಯಾಂಕ್ ಗಾಗಿ ಗಲಭೆಕೋರರ ಬೆಂಬಲಕ್ಕೆ ನಿಂತು ಓಲೈಕೆ ರಾಜಕಾರಣ ಮಾಡುತಿದ್ದಾರೆ ಎಂದು ದೂರಿದ್ದಾರೆ.

    ಮಾಜಿ ಸಿಎಂ ಸಿದ್ದರಾಮಯ್ಯ ಮಾನ ಮರ್ಯಾದೆ ಮೀರಿ ಮಾತನಾಡುತ್ತಿದ್ದಾರೆ. ಗೋಲಿಬಾರ್ ನಲ್ಲಿ ಸತ್ತವರು ಅಮಾಯಕರು ಅನ್ನುವ ರೀತಿಯಲ್ಲಿ ಹೇಳಿಕೆ ನೀಡುತಿದ್ದಾರೆ. ಎಸ್‍ಡಿಪಿಐ, ಪಿಎಫ್‍ಐ ಸಂಘಟನೆಗಳು ಇವರೇ ಬೆಳೆಸಿದ ಪಾಪದ ಕೂಸುಗಳು. ಅವರ ಮೇಲಿದ್ದ ಕೇಸ್‍ಗಳನ್ನು ಸಿದ್ದರಾಮಯ್ಯನವರೇ ಹಿಂದೆ ಪಡಿದಿದ್ರು. ಸಿದ್ದರಾನಯ್ಯರು ಈ ಮನಸ್ಥಿತಿಯಿಂದ ಹೊರಕ್ಕೆ ಬರಬೇಕು ಎಂದು ಟೀಕಿಸಿದ್ದಾರೆ.

    ಅಲ್ಲದೆ ಮುಸ್ಲಿಂ ಸಮುದಾಯದ ಯುವಕರು ಆಂಜನೇಯ ಸ್ವಾಮಿ ದೇವಸ್ಥಾನ ರಕ್ಷಣೆ ಮಾಡುವ ನಾಟಕ ಆಡಿದ್ದಾರೆ. ಬೆಕ್ಕು ಇಲ್ಲಿ ಆಟ ಆಡಿ ನಾಟಕ ಮಾಡಿದ್ದಾರೆ. ಅಷ್ಟೇ ಅದರಲ್ಲಿ ಏನೂ ಔದಾರ್ಯತೆ ಇಲ್ಲ ಎಂದು ಸೊಗಡು ಪ್ರತಿಕ್ರಿಯಿಸಿದ್ದಾರೆ.

    ಆಂಜನೇಯಸ್ವಾಮಿ ಸ್ವಾಮಿ ದೇವಸ್ಥಾನ ಅವರು ಮುಟ್ಟಿ ನೋಡಬೇಕಿತ್ತು. ನಾವೇನು ಸುಮ್ಮನಿರುತ್ತಿರಲಿಲ್ಲ. ಮುಂದೆ ನಾವೂ ಕೂಡ ಹುಲಿ ಆಟ ಆಡಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

  • ಗಬ್ಬು ನಾರುತ್ತಿದೆ ಕೊಠಡಿಗಳು, ಮೂಲಸೌಕರ್ಯವೇ ಇಲ್ಲ- ಅವ್ಯವಸ್ಥೆಗಳ ಆಗರವಾದ ಕ್ವಾರಂಟೈನ್ ಕೇಂದ್ರ

    ಗಬ್ಬು ನಾರುತ್ತಿದೆ ಕೊಠಡಿಗಳು, ಮೂಲಸೌಕರ್ಯವೇ ಇಲ್ಲ- ಅವ್ಯವಸ್ಥೆಗಳ ಆಗರವಾದ ಕ್ವಾರಂಟೈನ್ ಕೇಂದ್ರ

    ತುಮಕೂರು: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುವನ್ನು ಚಾಚುತ್ತಲೇ ಇದೆ. ಪರಿಣಾಮ ಸೋಂಕಿತರ ಹಾಗೂ ಶಂಕಿತರ ಸಂಖ್ಯೆ ಕೂಡ ಜಾಸ್ತಿಯಾಗ್ತಾ ಇದೆ. ಆದರೆ ಸೋಂಕಿತರನ್ನ, ಕ್ವಾರಂಟೈನ್‍ನಲ್ಲಿ ಇದ್ದವರನ್ನ ಸರಿಯಾಗಿ ನೋಡಿಕೊಳ್ಳಲಾಗುತ್ತಿಲ್ಲ. ಈ ಮೂಲಕ ಕ್ವಾರಂಟೈನ್ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿವೆ. ಗುಬ್ಬಿ ಪಟ್ಟಣದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಹಾಸ್ಟೆಲ್‍ನಲ್ಲಿನ ಕ್ವಾರಂಟೈನ್ ಕೇಂದ್ರ ನಿಜಕ್ಕೂ ನರಕ ಸದೃಶ್ಯವಾಗಿದೆ.

    ಮಹಾಮಾರಿ ಕೊರೊನಾ ಕಂಟ್ರೋಲ್ ಮಾಡುವಲ್ಲಿ ಸರ್ಕಾರ ಪದೇ ಪದೇ ಎಡವುತ್ತಿದೆ. ಸೋಂಕಿತರಿಗೆ, ಶಂಕಿತರಿಗೆ ಮೂಲ ಸೌಕರ್ಯ ಕೊಡುವಲ್ಲಿ ವಿಫಲವಾಗಿದೆ. ಅದರಲ್ಲೂ ಕ್ವಾರಂಟೈನ್ ಕೇಂದ್ರಗಳ ಕರ್ಮಕಾಂಡವಂತೂ ಇನ್ನೂ ಮುಂದುವರಿದಿದೆ. ಗುಬ್ವಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ಹಾಸ್ಟೆಲ್‍ನ ಕ್ವಾರಂಟೈನ್ ಕೇಂದ್ರ ಅವ್ಯವಸ್ಥೆಗಳ ಆಗರವಾಗಿದೆ. ಸುಮಾರು 53 ಜನ ಹಾಸ್ಟೆಲ್‍ನಲ್ಲಿ ಇದ್ದಾರೆ. ಇಲ್ಲಿ ಇರೋರು ಯಾವುದೇ ಮೂಲ ಸೌಕರ್ಯ ಇಲ್ಲದೇ ಪರದಾಡ್ತಿದ್ದಾರೆ. ಅದರಲ್ಲೂ ಶೌಚಾಲಯವಂತೂ ಗಬ್ಬೆದ್ದು ನಾರುತ್ತಿದೆ. ಕ್ಲೀನ್ ಮಾಡೋರೆ ಇಲ್ಲ. ಇದರಿಂದ ಕ್ವಾರಂಟೈನ್‍ನಲ್ಲಿದ್ದವರೂ ಇನ್ಯಾವುದೋ ಬೇರೆ ರೋಗಕ್ಕೆ ತುತ್ತಾಗುವ ಭಯದಲ್ಲಿ ಕಾಲ ಕಳೆಯುತಿದ್ದಾರೆ.

    ಕಿಟ್ಟದಕುಪ್ಪೆ ಗ್ರಾಮದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟ ನಂತರ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 53 ಜನರನ್ನು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಕೇವಲ ಶುಚಿತ್ವ ಮಾತ್ರ ಅಲ್ಲ ಊಟ ಮತ್ತು ನೀರನ್ನು ಗ್ರಾಮ ಪಂಚಾಯ್ತಿಯಿಂದ ನೀಡಲಾಗುತ್ತಿದೆ. ಅದನ್ನು ಪ್ಲಾಸ್ಟಿಕ್ ಕವರ್‍ಗಳಲ್ಲಿ ಕಟ್ಟಿ ಪ್ರಾಣಿಗಳಿಗೆ ನೀಡುವಂತೆ ಎಸೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಗುಣಮಟ್ಟದ ಆಹಾರ ಒದಗಿಸಲು ಆರೋಗ್ಯ ಇಲಾಖೆ ವಿಫಲವಾಗಿದೆ. ಪ್ರತಿ ಕೊಠಡಿ ಸೊಳ್ಳೆಗಳ ಉಗ್ರಾಣವಾಗಿದ್ದು, ಕ್ವಾರಂಟೈನ್‍ನಲ್ಲಿದ್ದವರಿಗೆ ನಿದ್ದೆಬಾರದಂತಾಗಿದೆ. ಇದನ್ನೂ ಓದಿ: ವಿಕ್ಟೋರಿಯಾದಲ್ಲಿ ಕೊರೊನಾ ರೋಗಿಗಳೇ ಕಸ ಗುಡಿಸಬೇಕು, ನೆಲ ಒರೆಸಬೇಕು!

    ಇದು ಕೇವಲ ಗುಬ್ಬಿಯ ಕಿತ್ತೂರು ರಾಣಿ ಚೆನ್ನಮ್ಮ ಹಾಸ್ಟೆಲ್ ಕ್ವಾರಂಟೈನ್ ಕೇಂದ್ರದ ದುಃಸ್ಥಿತಿ ಅಲ್ಲ. ಜಿಲ್ಲೆಯ ಬಹುತೇಕ ಕೇಂದ್ರಗಳು ಅವ್ಯವಸ್ಥೆಯ ಆಗರವಾಗಿದ್ದು ಕ್ವಾರಂಟೈನ್‍ನಲ್ಲಿದ್ದವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.

  • ಸಂಬಳ ಆಗಿಲ್ಲವೆಂದು ಕಂಡವರ ಹೊಟ್ಟೆಗೆ ಕನ್ನ- ಫಲಾನುಭವಿಗಳ ಬಳಿ ಅಧಿಕಾರಿಗಳು ಕೀಳ್ತಾರೆ ಹಣ

    ಸಂಬಳ ಆಗಿಲ್ಲವೆಂದು ಕಂಡವರ ಹೊಟ್ಟೆಗೆ ಕನ್ನ- ಫಲಾನುಭವಿಗಳ ಬಳಿ ಅಧಿಕಾರಿಗಳು ಕೀಳ್ತಾರೆ ಹಣ

    ತುಮಕೂರು: ಕೊರೊನಾ ಅದೆಷ್ಟು ಜನರ ಉದ್ಯೋಗ ಕಿತ್ತುಕೊಂಡಿದೆ. ಆದರೆ ಕೆಲ ಅಧಿಕಾರಿಗಳು ಮಾತ್ರ ಕೊರೊನಾವನ್ನೇ ಅಸ್ತ್ರ ಮಾಡಿಕೊಂಡು ದುಡ್ಡು ಮಾಡ್ತಿದ್ದಾರೆ. ಲಾಕ್‍ಡೌನ್‍ನಿಂದಾಗಿ ಸ್ಯಾಲರಿ ಆಗಿಲ್ಲ ಅಂತ ಫಲಾನುಭವಿಗಳ ಬಳಿ ಅಧಿಕಾರಿಗಳು ವಸೂಲಿಗೆ ಇಳಿದಿದ್ದಾರೆ.

    ಹೌದು. ಕೊರಟಗೆರೆ ತಾಲೂಕಿನ ಶಿವಪುರದ ನಿವಾಸಿ ರಮೇಶ್, ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ. ಮಂಜೂರಾತಿಗೆ ಅರ್ಜಿ ಹಾಕಿದ್ದರು. ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅರ್ಜಿ ಪುರಸ್ಕೃತಗೊಂಡಿತ್ತು. ಆದರೆ ದೇವರು ವರ ಕೊಟ್ಟರೂ ಪೂಜಾರಿ ಕೊಡಲ್ಲ ಅಂತಾರಲ್ಲ ಅದೇ ರೀತಿ ಚೆಕ್ ಪಾಸ್ ಆಗಲು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಿಬ್ಬಂದಿ 10 ಸಾವಿರ ರೂ ಲಂಚ ಕೇಳಿದ್ದಾರೆ. ಕೇಸ್ ವರ್ಕರ್‍ಗಳಾದ ವೆಂಕಟೇಶ್ ಹಾಗೂ ಸೋಮಶೇಖರ್ ಅಧಿಕಾರಿಗಳ ಹೆಸರು ಹೇಳಿ ಡೀಲ್ ಕುದುರಿಸಿದ್ದಾರೆ.

    ಫಲಾನುಭವಿ: ದುಡ್ಡು ಏನೋ ಕೊಡೋಣ ಕನ್ಫರ್ಮ್ ಆಗಿ ಕೆಲಸ ಆಗುತ್ತೆ ಅಲ್ವಾ..?
    ಸಿಬ್ಬಂದಿ ವೆಂಕಟೇಶ್: ಆಗತ್ತೆ ಪಕ್ಕಾ ಆಗತ್ತೆ.. ಶೇ.100 ಇವತ್ತು ಆದರೆ ನಾಳೆ ಸಾಹೇಬ್ರ ಸಹಿ ಹಾಕಿಸಿ ಒಂದೆರಡು ದಿನದಲ್ಲಿ ಆಗತ್ತೆ. ಮ್ಯಾನೇಜರ್ ಅಕೌಂಟಿಂದ. ಫಲಾನುಭವಿ ಅಕೌಂಟಿಗೆ ಟ್ರಾನ್ಸಪರ್ ಆಗುತ್ತೆ. ಇವರು ಕನ್ಫರ್ಮ್ ಆಗಿ ನಾಳೆ ಸಹಿ ಹಾಕಿದರೆ ಸೋಮವಾರ ಅಷ್ಟೊತ್ತಿಗೆ ಇವರಿಗೆ ದುಡ್ಡು ಬರತ್ತೆ.
    ಫಲಾನುಭವಿ: ಎಷ್ಟು ಕೊಡಬೇಕು..?
    ಸಿಬ್ಬಂದಿ ವೆಂಕಟೇಶ್: ಅದೆಷ್ಟು ಮಾತಾಡಿದಾರೊ ಗೊತ್ತಿಲ್ಲ. ಆಗಲೇ ಫಿಕ್ಸ್ ಮಾಡಿದ್ದಾರೆ.

    ಫಲಾನುಭವಿ: ನಾವೆನೋ ಬೇರೆ ಕೆಲಸಕ್ಕೆ ಬಂದಿದ್ವಿ. ಈ ಯಪ್ಪಾ ಅರ್ಜೆಂಟ್ ಮಾಡ್ದ. ಬೆಳಗ್ಗೆ ಕೊಟ್ಟು ಕಳಿಸ್ತಿನಿ. ನೀವು ಆದರೆ ನೋಡಿ ಒಂದ್ ಎರಡು ಸಾವಿರ ಉಳಿಸಿ.
    ಸಿಬ್ಬಂದಿ ಸೋಮಶೇಖರ: ಅಣ್ಣಾ ದೇವರಾಣೆ. ನಮಗೂ ಕೊರೋನಾದಿಂದ 3-4 ತಿಂಗಳಿಂದ ಸ್ಯಾಲರಿ ಆಗಿಲ್ಲ. ಇನ್ನೇನ್ ಅಂದರೆ ಅದರಲ್ಲಿ ನನ್ನದೇನು ಪಾತ್ರ ಇಲ್ಲ.
    ಹೀಗೆ ಸಂಬಳ ಆಗಿಲ್ಲ ಅಂತ ಹಣ ವಸೂಲಿ ಕೆಲಸಕ್ಕೆ ಇಳಿದಿದ್ದಾರೆ. ಇದೆಷ್ಟು ಸರಿ ಅಂತ ಫಲನಾಭವಿ ರಮೇಶ್ ತಮ್ಮ ಅಳಲು ತೋಡಿಕೊಂಡಿದ್ದಾರೆ.

    ಅಲೆಮಾರಿ ಜನಾಂಗದ ಸ್ವಯಂ ಉದ್ಯೋಗಕ್ಕಾಗಿ ಸುಮಾರು 53 ಫಲಾನುಭವಿಗಳು ಆಯ್ಕೆಯಾಗಿದ್ದಾರೆ. ಇವರೆಲ್ಲರಿಗೂ ಕೂಡ ತಲಾ 10 ಸಾವಿರ ಫಿಕ್ಸ್ ಮಾಡಿದ್ದೀವಿ ಎಂದು ಲಂಚಬಾಕ ನೌಕರರು ಆಫ್ ದಿ ರೆಕಾರ್ಡ್‍ನಲ್ಲಿ ಹೇಳುತ್ತಾರೆ. ಲಾಕ್‍ಡೌನ್‍ನಿಂದಾಗಿ ಜನರಿಗೆ ಕೆಲಸ ಇಲ್ಲದೇ ಕೈಯಲ್ಲಿ ಕಾಸಿಲ್ಲ. ಈ ನಡುವೆ ಸರ್ಕಾರಿ ನೌಕರರು ಕೊರೊನಾ ನೆಪ ಹೇಳಿ ಬಡ ಜನರ ರಕ್ತ ಹೀರುತ್ತಿರುವುದು ನಿಜಕ್ಕೂ ನಾಚಿಕೆಯ ಸಂಗತಿ.

  • ಚಿರು ಅಜ್ಜಿ ಊರು ತುಮಕೂರಿನಲ್ಲಿ ನೀರವ ಮೌನ

    ಚಿರು ಅಜ್ಜಿ ಊರು ತುಮಕೂರಿನಲ್ಲಿ ನೀರವ ಮೌನ

    – ಸರ್ಜಾ ಸಾವಿಗೆ ಜಕ್ಕೇನಹಳ್ಳಿ ಜನತೆ ಕಂಬನಿ

    ತುಮಕೂರು: ನಟ ಚಿರಂಜಿವಿ ಸರ್ಜಾ ಅಕಾಲಿಕ ಮರಣದಿಂದಾಗಿ ಅವರ ಅಜ್ಜಿ ಊರು ತುಮಕೂರು ಜಿಲ್ಲೆ ಮಧುಗಿರಿಯ ಜಕ್ಕೇನಹಳ್ಳಿಯಲ್ಲಿ ನೀರವ ಮೌನ ಆವರಿಸಿದೆ.

    ಜಕ್ಕೇನಹಳ್ಳಿಯಲ್ಲಿ ಸರ್ಜಾ ಆಡಿ ಬೆಳೆದಿದ್ದರು. ಹಾಗಾಗಿ ಅವಿನಾಭಾವ ಸಂಬಂಧ ಇತ್ತು. ಜಕ್ಕೇನಹಳ್ಳಿಯಲ್ಲಿ ಅಭಿಮಾನಿಗಳು ಸೇರಬಹುದು ಎಂಬ ಕಾರಣಕ್ಕೆ ಪೊಲೀಸರು ಬ್ಯಾರಿಕೇಡ್ ಹಾಕಿ ಭದ್ರತೆ ಒದಗಿಸಿದ್ದಾರೆ.

    ಈ ನಡುವೆ ಗ್ರಾಮಸ್ಥರು ಪಬ್ಲಿಕ್ ಟಿವಿ ಜೊತೆ ಮಾತನಾಡಿ ಚಿರಂಜೀವಿ ಸರ್ಜಾರನ್ನು ನೆನೆದು ಕಂಬನಿ ಮಿಡಿದರು. ಅಲ್ಲದೆ ಪ್ರತಿ ವರ್ಷ ನಡೆಯುವ ಗ್ರಾಮದ ಜಾತ್ರೆಗೆ ಕುಟುಂಬ ಸಮೇತ ಬಂದು ಪೊಜೆ ಸಲ್ಲಿಸಿ ಸಮಾನ್ಯರಂತೆ ನಮ್ಮ ಜೊತೆ ಬೆರೆಯುತ್ತಿದ್ದರು ಎಂದರು.

    ಇದೇ ವರ್ಷ ಮಾರ್ಚ್ 10ರಂದು ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿ ಗ್ರಾಮದ ಅಹೋಬಲ ಲಕ್ಷ್ಮಿ ನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವದಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗಿದ್ದರು. ಅರ್ಜುನ್ ಸರ್ಜಾ ದಂಪತಿ ಹಾಗೂ ಧ್ರುವ ಸರ್ಜಾ ದಂಪತಿ ಈ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ದಂಪತಿ ಮೊದಲು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಲ್ಲಕ್ಕಿ ಹೊತ್ತರು. ನಂತರ ತೇರು ಎಳೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಉಭಯ ನಟರಿಗೆ ಅಭಿಮಾನಿಗಳು ಸುತ್ತುವರೆದು ಸೆಲ್ಫಿಗಾಗಿ ಮುಗಿಬಿದ್ದಿದ್ದರು.