Tag: Tumkur-Bengaluru National Highway

  • ನೆಲಮಂಗಲದಲ್ಲಿ ಸರಣಿ ಅಪಘಾತ – ಕಾರು ಲಾರಿಯ ಕೆಳಗೆ ಸಿಲುಕಿದ್ರೂ ಪವಾಡ ರೀತಿಯಲ್ಲಿ ಚಾಲಕ ಪಾರು

    ನೆಲಮಂಗಲದಲ್ಲಿ ಸರಣಿ ಅಪಘಾತ – ಕಾರು ಲಾರಿಯ ಕೆಳಗೆ ಸಿಲುಕಿದ್ರೂ ಪವಾಡ ರೀತಿಯಲ್ಲಿ ಚಾಲಕ ಪಾರು

    ನೆಲಮಂಗಲ: ಬೆಳ್ಳಂಬೆಳಗ್ಗೆ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ (Nelamangala Serial accident) ಸಂಭವಿಸಿದೆ. ಆದ್ರೆ ಕಾರು ಲಾರಿ ಕೆಳಗೆ ಸಿಲುಕಿ ನಜ್ಜುಗುಜ್ಜಾದರೂ ಪವಾಡ ರೀತಿಯಲ್ಲಿ ಚಾಲಕ ಪಾರಾಗಿದ್ದಾರೆ.

    ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ (Tourist Bus) ಮಧ್ಯೆ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯೊಡೆದಿದೆ, ಕಾರಿಗೆ ಹಿಂಬದಿಯಿಂದ ಟೂರಿಸ್ಟ್‌ ಬಸ್ ಡಿಕ್ಕಿ ಹೊಡೆದಿದೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (Tumkur Bengaluru National Highway) ಅವೈಜ್ಞಾನಿಕ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿರುವುದು ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 5 ಗೋವುಗಳನ್ನು ಎತ್ತಿಕೊಂಡು ಹೋಗುತ್ತಿದ್ದ ದೃಶ್ಯ ಸಿಕ್ಕಿದ್ರೂ ವಾಹನ ನಂಬರ್‌ ಇಲ್ವಂತೆ – ಕೈ ಚೆಲ್ಲಿದ ಪೊಲೀಸರು

    ಪವಾಡ ರೀತಿಯಲ್ಲಿ ಚಾಲಕ ಪಾರು
    ಭೀಕರ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಸೇಲ್ಸ್ ಟ್ಯಾಕ್ಸ್ ಕಚೇರಿಯ ಕಾರು ಚಾಲಕ ಪವಾಡ ರೀತಿಯಲ್ಲಿ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು, ಬಚಾವ್‌ ಆಗಿದ್ದಾರೆ. ನೆಲಮಂಗಲ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ನೆಲಮಂಗಲದಲ್ಲಿಕಳೆದ ಒಂದು ತಿಂಗಳ ಹಿಂದೆಯಷ್ಟೇ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್‌ ಭಾವುಕ ಪೋಸ್ಟ್‌

  • ಮುಂದಿದ್ದ ಕಾರನ್ನು ತಪ್ಪಿಸಲು ಹೋಗಿ ಹೀಗಾಯ್ತು – ನೆಲಮಂಗಲ ಭೀಕರ ಅಪಘಾತದ ಬಗ್ಗೆ ಲಾರಿ ಚಾಲಕನ ರಿಯಾಕ್ಷನ್‌

    ಮುಂದಿದ್ದ ಕಾರನ್ನು ತಪ್ಪಿಸಲು ಹೋಗಿ ಹೀಗಾಯ್ತು – ನೆಲಮಂಗಲ ಭೀಕರ ಅಪಘಾತದ ಬಗ್ಗೆ ಲಾರಿ ಚಾಲಕನ ರಿಯಾಕ್ಷನ್‌

    ಬೆಂಗಳೂರು: ನನ್ನ ಮುಂದಿದ್ದ ಕಾರಿನಲ್ಲಿದ್ದವರನ್ನು ಬಚಾವ್‌ ಮಾಡಲು ಹೋಗಿ ಹೀಗಾಯ್ತು ಎಂದು ನೆಲಮಂಗಲದಲ್ಲಿ (Nelamangala) ನಡೆದ ಸರಣಿ ಅಪಘಾತದ ಬಗ್ಗೆ ಲಾರಿ ಚಾಲಕ ಆರೀಫ್ ಹೇಳಿದ್ದಾರೆ.

    ಆರಿಫ್‌ ಅವರನ್ನು ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ, ಡಾಬಸ್‌ಪೇಟೆಯಿಂದ ಬೆಂಗಳೂರಿನ ಕಡೆಗೆ ನಾನು ಬರುತ್ತಿದ್ದೆ. ನನ್ನ ಮುಂದಿನ ಕಾರನ್ನು ಸೇಫ್ ಮಾಡಲು ಹೋಗಿ ಹೀಗೆ ಆಗಿದೆ. ಲಾರಿ ಡಿವೈಡರ್ ದಾಟಿ ಮುಂದಿನ ರಸ್ತೆಗೆ ಪಲ್ಟಿ ಆಯ್ತು. ನನ್ನ ಮುಂದಿನ ಕಾರಿನಿಂದಾಗಿ ಹೀಗೆ ಆಯ್ತು. ನನಗೆ ತುಂಬಾ ನೋವಾಗ್ತಿದೆ. ಅಲ್ಲಿ ಏನಾಯ್ತು ಆಮೇಲೆ ಅನ್ನೋದು ಗೊತ್ತಿಲ್ಲ. ಕಾರಿನ ಮೇಲೆ ನನ್ನ ಲಾರಿ ಪಲ್ಟಿಯಾಗಿತ್ತು ಎಂದು ಬೇಸರದಲ್ಲಿ ಮಾತನಾಡಿದ್ದಾರೆ. ಇದನ್ನೂ ಓದಿ: ನೆಲಮಂಗಲದಲ್ಲಿ ಭೀಕರ ಅಪಘಾತ – ಪ್ರವಾಸಕ್ಕೆ ಹೊರಟಿದ್ದ ಒಂದೇ ಕುಟುಂಬದ 6 ಮಂದಿ ದುರ್ಮರಣ

    ನೆಲಮಂಗಲದ ಟಿ.ಬೇಗೂರು ಬಳಿಯ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (Tumkur Bengaluru National Highway) ಇಂದು ಮಧ್ಯಾಹ್ನ (ಶನಿವಾರ) ನಡೆದ ಎರಡು ಕಾರು, ಎರಡು ಲಾರಿ ಹಾಗೂ ಸ್ಕೂಲ್ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ದುರ್ಮರಣಕ್ಕೀಡಾಗಿದ್ದರು.

    ಕಾರಿನ ಮೇಲೆ ಕಂಟೇನರ್‌ ಬಿದ್ದ ಪರಿಣಾಮ ಕಾರಿನಲ್ಲಿದ್ದ ವಿಜಯಪುರ ಮೂಲದ ಚಂದ್ರಮ್ ಯಾಗಪ್ಪ ಗೋಳ್ (48), ಗೌರಾಬಾಯಿ (42), ದೀಕ್ಷಾ (12), ಜಾನ್ (16), ವಿಜಯಲಕ್ಷ್ಮಿ (36), ಆರ್ಯ (6) ಸಾವನ್ನಪ್ಪಿದ್ದರು.

    ಇದರಿಂದ ತುಮಕೂರು ರಸ್ತೆಯಲ್ಲಿ ಸುಮಾರು 10 ಕಿಮೀ ನಷ್ಟು ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಮಹಿಳೆಯ ಖಾಸಗಿ ಭಾಗಕ್ಕೆ ಸುಡುವ ರಾಡ್‌ನಿಂದ ಹಲ್ಲೆ – ಮೆಣಸಿನ ಪುಡಿ ಹಾಕಿ ವಿಕೃತಿ

  • ನೆಲಮಂಗಲದಲ್ಲಿ ಹೆದ್ದಾರಿಗೆ ನುಗ್ಗಿದ ನೀರು – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

    ನೆಲಮಂಗಲದಲ್ಲಿ ಹೆದ್ದಾರಿಗೆ ನುಗ್ಗಿದ ನೀರು – ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್

    ಬೆಂಗಳೂರು/ನೆಲಮಂಗಲ: ತಡರಾತ್ರಿ ಸುರಿದ ಧಾರಾಕಾರ ಮಳೆಗೆ ನೆಲಮಂಗಲದಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

    ರಾತ್ರೀ ಇಡೀ ಸುರಿದ ಭಾರೀ ಮಳೆಗೆ ಮುಕ್ತನಾತೇಶ್ವರ ದೇವಾಲಯದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಅಮಾನಿಕೆರೆ, ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಎಂಜಿ ರಸ್ತೆ ಸಂಪರ್ಕ ಕಡಿತಗೊಳಿಸಲಾಗಿದೆ ಹಾಗೂ ಜನಪ್ರಿಯ ಅಪಾರ್ಟ್‍ಮೆಂಟ್ ರಸ್ತೆ ಕೂಡ ಜಲಾವೃತಗೊಂಡಿದೆ. ಇದನ್ನೂ ಓದಿ: ಹಿಂದೂ ಸಂಪ್ರದಾಯದಂತೆ ಬ್ರಾಹ್ಮಣ ಯುವತಿಯನ್ನು ವರಿಸಿದ ಬಾಂಗ್ಲಾದೇಶದ ಮಹಿಳೆ

    ಅಮಾನಿಕೆರೆ ಹಾಗೂ ಬಿನ್ನಮಂಗಲದ ಕೆರೆಗಳು ಕೋಡಿ ಹಿನ್ನೆಲೆ ರಾಷ್ಟ್ರೀಯ ಹೆದ್ದಾರಿಗೆ ಕೆರೆಯ ನೀರು ನುಗ್ಗಿದ್ದು, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಅಲ್ಲದೇ ನೂರಾರು ವಾಹನಗಳು ಮಳೆಯ ನೀರಿನಲ್ಲಿ ಮುಳುಗಡೆಯಾಗಿದೆ. ಇದೀಗ ನೆಲಮಂಗಲ ಬೆಂಗಳೂರು ಸರ್ವೀಸ್ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಮತ್ತೊಂದೆಡೆ ಅಡಕಮಾರನಹಳ್ಳಿಯ ಜೈನ್ ಟೆಂಪಲ್ ಕೂಡ ನಾಲ್ಕೈದು ಅಡಿ ನೀರಿನಿಂದ ಜಲಾವೃತವಾಗಿದೆ.

    ಮಳೆಯಿಂದಾಗಿ ನೆಲಮಂಗಲ ಸರ್ವಿಸ್ ರಸ್ತೆಯಲ್ಲಿ ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್ ಸಮಸ್ಯೆ ಎದುರಾಗಿತ್ತು. ಈ ವೇಳೆ ಹುಚ್ಚು ಸಾಹಸಕ್ಕೆ ಮುಂದಾದ ಗೂಡ್ಸ್ ವಾಹನದ ಚಾಲಕ ಜನರನ್ನು ತುಂಬಿಕೊಂಡು ವೇಗವಾಗಿ ಹರಿಯುತ್ತಿರುವ ನೀರಿನಲ್ಲಿ ಬಂದು ವಾಹನದಲ್ಲಿಯೇ ಲಾಕ್ ಆಗಿದ್ದಾರೆ. ನಂತರ ವಾಹನದಲ್ಲಿ ಇದ್ದ ಯುವಕರು ವಾಹನವನ್ನು ನೀರಿನಿಂದ ಹೊರತರಲು ಹರಸಾಹಾಸ ಪಟ್ಟಿದ್ದಾರೆ. ಇದನ್ನೂ ಓದಿ: ಮುಸ್ಲಿಂ ವ್ಯಕ್ತಿಯ ಪಾರ್ಥೀವ ಶರೀರದ ಮೆರವಣಿಗೆ ಕಂಡು ಡಿಜೆ ಬಂದ್ ಮಾಡಿದ ಗಣೇಶ ಭಕ್ತರು

    ಇನ್ನೊಂದೆಡೆ ನೆಲಮಂಗಲ ಅಡಕಮಾರನಹಳ್ಳಿ ಬಳಿ ಹರಿಯುತ್ತಿರುವ ನೀರಿನಲ್ಲಿ ರಸ್ತೆ ದಾಟಲು ಮಗನ ಜೊತೆಗೆ ಪೋಷಕರು ಹರಸಾಹಸ ಪಟ್ಟರು. ಇದೀಗ ಸರ್ವೀಸ್ ರಸ್ತೆಯಲ್ಲಿ ನೂರಾರು ಲಾರಿಗಳು ನೀರಿನಲ್ಲಿ ಮುಳುಗಡೆಯಾಗಿದ್ದು, ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಲಾಗಿದೆ.

    Live Tv
    [brid partner=56869869 player=32851 video=960834 autoplay=true]