ತುಮಕೂರು: 30 ವರ್ಷಗಳ ಹಿಂದೆ ಕಾಶ್ಮೀರಿ ಪಂಡಿತರೊಂದಿಗೆ ನಡೆದ ಭೀಕರ ಸತ್ಯವನ್ನು ಬಿಚ್ಚಿಟ್ಟ ದಿ ಕಾಶ್ಮೀರ್ ಫೈಲ್ಸ್ ಸಿನಿಮಾವನ್ನು ಮಂಗಳವಾರ ಸಿದ್ದಗಂಗಾ ಶ್ರೀ, ಸಿದ್ದರಬೆಟ್ಟ ಶ್ರೀಗಳು ಸೇರಿ ಸುಮಾರು 8ಕ್ಕೂ ಹೆಚ್ಚು ಸ್ವಾಮೀಜಿಗಳೊಂದಿಗೆ ವೀಕ್ಷಿಸಿದರು.
ತುಮಕೂರು: ಪಾವಗಡದ ತಿರುವಿನಲ್ಲಿ ನಡೆದ ಖಾಸಗಿ ಬಸ್‍ನ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ರಸ್ತೆಯಲ್ಲಿ ಶವಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಇಂದು ಬೆಳಗ್ಗೆ ಖಾಸಗಿ ಬಸ್ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಹೋಗುತ್ತಿತ್ತು. ಬಸ್‍ನ ಟಾಪ್‍ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಕುಳಿತಿದ್ದರು. ಆದರೆ ಬಸ್ ಓವರ್ ಲೋಡ್ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆ ಏರಿ ಮೇಲೆ ಬಸ್ ಉರುಳಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ.
ವೈ.ಎನ್ ಹೋಸಕೋಟೆಯ ಕಲ್ಯಾಣ (18), ಬೆಸ್ತರಹಳ್ಳಿ ನಿವಾಸದ ಶಹನವಾಜ್ (20), ಸೂಲನಾಯಕನಹಳ್ಳಿಯ ಅಮೂಲ್ಯ (17), ಅಜಿತ್ (28) ಮೃತರು. ಮೃತರೆಲ್ಲರೂ ತಿರುಮಣಿ, ಪಳವಳ್ಳಿ, ವೈ ಎನ್ ಹೊಸಕೋಟೆ ಮೂಲದವರಾಗಿದ್ದಾರೆ. ಮೃತದೇಹ ಎಲ್ಲೆಂದರಲ್ಲಿ ಬಿದ್ದಿದೆ. ಬಸ್‍ನಲ್ಲಿದ್ದ ಕೆಲವು ಪ್ರಯಾಣಿಕರು ಬಸ್ ಅಡಿಗೆ ಬಿದ್ದಿದ್ದರೇ, ಇನ್ನೂ ಕೆಲವರು ಕೆರೆಗೆ ಬಿದ್ದಿದ್ದಾರೆ. ಕೆರೆಯಲ್ಲಿ ಬಿದ್ದ ಪ್ರಯಾಣಿಕರು ಮೇಲೆ ಬರುತ್ತಿದ್ದಾರೆ. ಈಗಾಗಲೇ ಘಟನಾ ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಅಧಿಕಾರಿಗಳು ಮಾತನಾಡಿ, 8 ಜನರು ಸಾವನ್ನಪ್ಪಿದ್ದಾರೆ. 4 ಮೃತ ದೇಹಗಳ ರವಾನೆ ಆಗಿದೆ. ಸಾಕಷ್ಟು ಜನರಿಗೆ ಗಂಭೀರ ಗಾಯ ಆಗಿದೆ. ಅತಿಯಾದ ಸ್ಪೀಡ್‍ನಿಂದ ಘಟನೆ ಆಗಿದೆ. ಸ್ಥಳೀಯವಾಗಿ ಎಲ್ಲಾ ತುರ್ತು ಆರೋಗ್ಯ ಸೇವೆ ಉಪಯೋಗಿಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
50ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದು, ಬಸ್‍ನ ಟಾಪ್‍ನಲ್ಲಿ ಕುತಿದ್ದವರೇ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯದಿಂದ ಕೆರೆ ಕಟ್ಟೆ ಮೇಲೆ ಬಸ್ ಉರುಳಿದೆ ಎಂದು ಪಬ್ಲಿಕ್ ಟಿವಿಗೆ ತುಮಕೂರು ಎಸ್ಪಿ ರಾಹುಲ್ ಸ್ಪಷ್ಟನೆ ನೀಡಿದ್ದಾರೆ. ಬಸ್‍ನಲ್ಲಿದ್ದ ಕೆಲವರ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ತಾಲೂಕಾ ಆಸ್ಪತ್ರೆಗೆ ಭೇಟಿ ಕೊಟ್ಟ ಪಾವಗಡ ಶಾಸಕ ವೆಂಕಟರಮಣಪ್ಪ ಭೇಟಿ ನೀಡಿದ್ದು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿ: 8 ಮಂದಿ ಸಾವು
ಈ ಬಗ್ಗೆ ಗಾಯಳು ಮಾತನಾಡಿ, ಪ್ರಯಾಣಿಕರು ಟಾಪ್‍ನಲ್ಲಿ ಕೂತು ಬರುತ್ತಿದ್ದರು. ಬಸ್ ವೇಗವಾಗಿ ಬರುತ್ತಿತ್ತು. ಟರ್ನಿಂಗ್‍ನಲ್ಲಿ ಬಸ್ ಕಂಟ್ರೋಲ್‍ಗೆ ಬರಲಿಲ್ಲ. ಟಾಪ್‍ನಲ್ಲಿ ಎಷ್ಟು ಜನ ಇದ್ರು ನೋಡಲಿಲ್ಲ ಎಂದು ತಿಳಿಸಿದ್ದಾರೆ. ಮತ್ತೊಬ್ಬ ಮಾತನಾಡಿ, ಬಸ್‍ನಲ್ಲಿ ಸುಮಾರು 70-100 ಜನ ಇದ್ದರು. ಟಾಪ್‍ನಲ್ಲಿ 50 ಜನ ಇದ್ದರು. ಆ ಬಸ್‍ನಲ್ಲಿ ಇದ್ದವರು ಎಲ್ಲರೂ ಕಾಲೇಜು ವಿದ್ಯಾರ್ಥಿಗಳು. ವೈ.ಎನ್. ಹೊಸಕೋಟೆ ಕಡೆಯಿಂದ ಪಾವಗಡಕ್ಕೆ ಬರುವ ಬಸ್ ಅದು. ತುಂಬಾ ಸ್ಪೀಡ್ ಬರ್ತಾರೆ. ಡೋರ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳೇ ಇರ್ತಾರೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಗವದ್ಗೀತೆ ಯಾವುದೇ ಧಾರ್ಮಿಕ ಗ್ರಂಥವಲ್ಲ: ಪ್ರತಾಪ್ ಸಿಂಹ
ತುಮಕೂರು ಎಸ್ಪಿ ಜೊತೆ ಗೃಹ ಸಚಿವ ಆರಗ ಜ್ಞಾನೇಂದ್ರ ಚರ್ಚೆ ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ರಕ್ಷಣಾ ವ್ಯವಸ್ಥೆ ಮಾಡಲು ಸಚಿವರು ಸೂಚನೆ ನೀಡಿದರು.
ತುಮಕುರು: ಖಾಸಗಿ ಬಸ್ ಪಲ್ಟಿಯಾಗಿ 8 ಮಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಪಳವಳ್ಳಿ ಕಟ್ಟೆ ಮೇಲೆ ನಡೆದಿದೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಮೇಲೆ ವೈ.ಎನ್. ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ಪಲ್ಟಿಯಾಗಿದೆ. ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.
ಎಸ್.ವಿ.ಟಿ. ಎಂಬ ಖಾಸಗಿ ಬಸ್‍ನಲ್ಲಿ ಒಟ್ಟು 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಘಟನೆಯಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಪಾವಗಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಪಾವಗಡ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆಗೆ ರವಾನಿಸುತ್ತಿದ್ದಾರೆ. ಗಾಯಾಳುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ:ಮುಂದಿನ ಮೂರು ದಿನ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ತುಮಕೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯ ಕಾಲನ್ನು ಪತಿ ಕತ್ತರಿಸಿದ ಘಟನೆ ತುಮಕೂರಿನ ಅಶೋಕ ಹೋಟೆಲ್‍ನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗದಗ ಮೂಲದ ಬಾಬು (34) ಆರೋಪಿಯಾಗಿದ್ದು, ಅನಿತಾ ಗಾಯಗೊಂಡ ಮಹಿಳೆಯಾಗಿದ್ದಾಳೆ. ನಾಲ್ಕು ವರ್ಷದ ಹಿಂದೆ ಬಾಬು ಮಧುಗಿರಿ ಮೂಲದ ಅನಿತಾಳನ್ನು ಮದುವೆಯಾಗಿದ್ದ. ಆದರೆ ದಂಪತಿ ನಡುವೆ ಪದೇ ಪದೇ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆಯುತ್ತಿತ್ತು.
ಇಂದು ಬೆಳಗ್ಗೆ 6 ಗಂಟೆ ವೇಳೆ ದಂಪತಿ ಅಶೋಕ ಲಾಡ್ಜ್‌ಗೆ ಬಂದಿದ್ದರು. ಈ ವೇಳೆ ಅನಿತಾಳ ಕಾಲು ಕತ್ತರಿಸಿ, ತಾನೇ ಹೊಟ್ಟೆಗೆ ಚೂರಿ ಹಾಕಿಕೊಂಡಿದ್ದಾನೆ. ನಂತರ ಹೋಟೆಲ್ ಮಾಲೀಕರಿಗೆ ಕರೆ ಮಾಡಿ, ನಾಲ್ವರು ಹುಡುಗರನ್ನು ಕಳುಹಿಸಿ, ಹೆಂಡತಿಯ ಕಾಲು ಕತ್ತರಿಸಿದ್ದೇನೆ ಆಸ್ಪತ್ರೆಗೆ ಸೇರಿಸಬೇಕು ಎಂದು ತಿಳಿಸಿದ್ದಾನೆ. ಇದನ್ನೂ ಓದಿ: ಯಡಿಯೂರಪ್ಪ, ಸಿಎಂ ಏನೇ ಮಾತಾಡಲಿ, ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದಾರೆ: ಡಿಕೆಶಿ
ತುಮಕೂರು: ಶಾಲೆ ಎಂದ ಮೇಲೆ ಎಲ್ಲರೂ ಪ್ರೀತಿ ವಿಶ್ವಾಸದಿಂದ ಇರಬೇಕು. ಯಾವುದೇ ಕಾರಣಕ್ಕೂ ಬೇರೆಯದಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಸಿದ್ದಗಂಗಾ ಶ್ರೀ ಸಿದ್ದಲಿಂಗ ಸ್ವಾಮೀಜಿ ಪ್ರತಿಕ್ರಿಯೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ಣಪೀಠದ ಆದೇಶ ಬಂದಿದೆ. ಯಾವುದಕ್ಕೂ ಅವಕಾಶ ಮಾಡಿಕೊಡದೇ ಶಾಂತಿಯುತ ವಾತಾವರಣಕ್ಕೆ ಎಲ್ಲರೂ ಸಹಕರಿಸಬೇಕು. ಶಿಸ್ತು ನಿಯಮ ಪಾಲನೆ ಮಾಡಿ ಕರ್ನಾಟಕದ ಸಂಸ್ಕೃತಿ ಪರಂಪರೆ ಎತ್ತಿ ಹಿಡಿದು ಶಾಂತಿಯುತವಾಗಿರಬೇಕು ಎಂದು ಮನವಿ ಮಾಡಿದರು.
ಸುದೀರ್ಘ ಚರ್ಚೆ, ವಾದ, ಪ್ರತಿವಾದ ಆಲಿಸಿ ಕೋರ್ಟ್ ತೀರ್ಪು ಕೊಟ್ಟಿದೆ. 15 ದಿನಗಳ ಕಾಲ ಸಮಯಾವಕಾಶದ ನಂತರ ಇವತ್ತು ತೀರ್ಪು ಪ್ರಕಟವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರ ಸಂಹಿತೆ ಕಾನೂನು ಪಾಲನೆ ಮಾಡಬೇಕು ಎಂದು ತೀರ್ಪು ಕೊಟ್ಟಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಹೈಕೋರ್ಟ್ ತೀರ್ಪು ಸ್ವಾಗತಾರ್ಹ: ಅಶ್ವತ್ಥನಾರಾಯಣ
ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
ತುಮಕೂರು: ನಿನ್ನೆ ತಾನೇ ವಿಶ್ವ ಮಹಿಳಾ ದಿನಾಚರಣೆ ಆಚರಿಸಿದೆವು ‘ಯತ್ರ ನಾರಿಯಂತು ಪೂಜ್ಯಂತೆ ರಮಂತೆ ತತ್ರ ದೇವತಾ ಎಂದು ಹಾಡಿ ಹೊಗಳಿದೆವು. ಈ ಸಂಭ್ರಮದಲ್ಲಿರಬೇಕಾದರೆ ಜಿಲ್ಲೆಯಿಂದ ಒಂದು ಆಘಾತಕಾರಿ ಸುದ್ದಿ ಕೇಳಿಬಂದಿದೆ. ಚರ್ಚ್‍ನ ಸಭಾಪಾಲನಾ ಸದಸ್ಯನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಗರ್ಭಪಾತಕ್ಕೊಸಳಗಾದ ಯುವತಿಯೊಬ್ಬರು ಸಾವನಪ್ಪಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಶಿರಾ ಗೇಟ್‍ನ ಹೌಸಿಂಗ್ ಬೋರ್ಡ್ ನಿವಾಸಿ ಗ್ರೇಸ್ ಪ್ರೀರ್ತನಾ ಗರ್ಭಪಾತಕ್ಕೊಳಗಾಗಿ ಸಾವನಪ್ಪಿದ್ದ ಯುವತಿ. ಶಿರಾಗೇಟ್ ಬಳಿ ಇರುವ ಸಿ.ಎಸ್.ಐ ವೆಸ್ಲಿ ಚರ್ಚ್‍ನ ಸಭಾಪಾಲನಾ ಸದಸ್ಯ ರಾಜೇಂದ್ರಕುಮಾರ್ ಎಂಬಾತನಿಂದ ಯುವತಿಯು ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದರು. ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರ ಕುಟುಂಬ ಲಾಕ್ ಡೌನ್ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಸಹಾಯ ಮಾಡುವ ನೆಪದಲ್ಲಿ ಅವನು, ಯುವತಿಯೊಂದಿಗೆ ಸಲಿಗೆ ಬೆಳೆಸಿದ್ದಾನೆ. ಅವರ ಜೊತೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಅವರಿಗೆ ಮಾತ್ರೆ ಕೊಟ್ಟು ಗರ್ಭಪಾತ ಮಾಡಿಸಿದ್ದಾನೆ. ಈ ವೇಳೆ ಅಧಿಕ ರಕ್ತಸ್ರಾವದಿಂದ ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಮಾನತೆಯ ಸಂದೇಶದೊಂದಿಗೆ ವಿದ್ಯಾರ್ಥಿನಿಯರಿಂದ ಬೈಕ್ ರ‍್ಯಾಲಿ
ನವೆಂಬರ್ 8 ರಂದು ಯುವತಿ ಗ್ರೇಸ್ ಪ್ರೀರ್ತನಾ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ವಿಚಾರ ಎಲ್ಲಿಯೂ ಬಹಿರಂಗಪಡಿಸದಂತೆ ಯುವತಿ ತಾಯಿ ಸಂತೋಷ್ ಸ್ಟೆಲ್ಲಾಗೆ ಪಾಸ್ಟರ್‌ನು ಹಣದ ಆಮಿಷದ ಜೊತೆಗೆ ಬೆದರಿಕೆಯನ್ನೂ ಒಡ್ಡಿದ್ದಾನೆ. ಆದರೆ ತಡವಾಗಿ ಮಂಗಳವಾರ ಯುವತಿ ತಾಯಿ ತುಮಕೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಎಫ್‍ಐಆರ್ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ: ಡೀಮ್ಡ್ ಅಧ್ಯಕ್ಷ
ಸರಗಳ್ಳತನವನ್ನು ಗಮನಿಸಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 45 ಗ್ರಾಂ. ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಹುಳಿಯದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಪರೇಷನ್ ಗಂಗಾ ಯಶಸ್ಸಿಗೆ ಭಾರತದ ಜಾಗತಿಕ ಪ್ರಭಾವವೇ ಕಾರಣ: ಮೋದಿ
ತುಮಕೂರು: ಕುಡಿದ ಮತ್ತಿನಲ್ಲಿ ಪತ್ನಿಯನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿರೋ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಜಯಮ್ಮ(52) ಕೊಲೆಯಾದ ದುರ್ದೈವಿ ಮಹಿಳೆ. ತುಮಕೂರು ಜಿಲ್ಲೆ ಹೆಬ್ಬೂರು ಸಮೀಪದ ಕೆಂಬಳಲು ಕಾಲೋನಿಯಲ್ಲಿ ಪ್ರಕರಣ ನಡೆದಿದೆ. ಪಾಪಿ ಪತಿ ನಾಗರಾಜ್(58) ಕೊಲೆಗೈದ ಆರೋಪಿಯಾಗಿದ್ದಾನೆ. ನಾಗರಾಜ್ ಕ್ಷುಲ್ಲಕ ಕಾರಣಕ್ಕೆ ಜಯಮ್ಮಳನ್ನ ಸ್ಕ್ರೂಡೈವರ್‌ನಿಂದ ಚುಚ್ಚಿ ಕೊಲೆ ಮಾಡಿದ್ದೂ, ಅಲ್ಲದೆ ಬಾತ್ ರೂಂ ಫಿಟ್ ಗುಂಡಿಯಲ್ಲಿ ಬಿಸಾಡಿದ್ದಾನೆ. ಇದನ್ನೂ ಓದಿ: ಕೊರೊನಾ ಹರಡಿದ್ದು, ಟ್ರಾಫಿಕ್ ಜಾಮ್ ಮಾಡಿದ್ದು ಪಾದಯಾತ್ರೆ ಸಾಧನೆ: ಕಾರಜೋಳ ವ್ಯಂಗ್ಯ
ನಡೆದಿದ್ದೇನು?
ನಾಗರಾಜ್, ಜಯಮ್ಮಳನ್ನು ಎರಡನೇ ಮದುವೆಯಾಗಿದ್ದನು. ಕಳೆದ ಮೂರು ದಿನಗಳ ಹಿಂದೆ ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪತ್ನಿ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ವೇಳೆ ಸ್ಕ್ರೂಡೈವರ್ ನಿಂದ ಪತ್ನಿಗೆ ಮನಬಂದಂತೆ ಚುಚ್ಚಿ ಕೊಲೆಗೈದಿದ್ದಾನೆ. ಬಳಿಕ ಮನೆ ಹಿಂಬದಿಯಿದ್ದ ಬಾತ್ ರೂಂ ಫಿಟ್ ಗೆ ಮೃತದೇಹವನ್ನ ಎಸೆದಿದ್ದಾನೆ.
ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನ ಹೊರತೆಗೆದು ತುಮಕೂರು ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಸ್ತುತ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!
ತುಮಕೂರು: ಅನಿವಾರ್ಯವಾಗಿ ಕೆಲವು ಹೆಣ್ಣುಮಕ್ಕಳು ಕುಂಕುಮ, ಸಿಂಧೂರ ವಿಷಯಗಳನ್ನು ಎತ್ತಿದ್ದಾರೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಪಟೂರಿನಲ್ಲಿ ಹೇಳಿದರು.
ಹಿಜಬ್ ಜೊತೆ ಈಗ ಪ್ರಾರಂಭವಾಗಿರುವ ಕುಂಕುಮ ವಿವಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಷಯನೇ ಇಲ್ದೇ ಹೈಕೋರ್ಟ್‍ನಲ್ಲಿ ಈ ಬಗ್ಗೆ ಮಾತನಾಡುವ ಒಂದಿಷ್ಟು ಲಾಯರ್ ಗಳನ್ನೂ ನಾನು ನೋಡಿದ್ದೇನೆ. ಸದ್ಯಕ್ಕೆ ಸಮವಸ್ತ್ರದ ಮಾತುಗಳನ್ನ ಬಿಟ್ರೆ ಇನ್ಯಾವ ವಿಚಾರಗಳೂ ಕೋರ್ಟ್ ಮುಂದೆ ಬಂದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಲಂಡನ್ ಮಾರುಕಟ್ಟೆಯಲ್ಲಿ ಒಂದು ಹಲಸಿನ ಹಣ್ಣಿಗೆ 16,000 ರೂ!
1885ರಿಂದ ಯಾವ ಸಮವಸ್ತ್ರ ಧರಿಸಿಕೊಂಡು ಬರುತ್ತಿದ್ದರೋ ಅದೇ ಸಮವಸ್ತ್ರಗಳನ್ನ ಧರಿಸಿಕೊಂಡು ಬರಬೇಕು ಎಂಬುದು ಸರ್ಕಾರದ ಆದೇಶ. ಎಲ್ಲರಿಗೂ ಇದು ಗೊತ್ತೇ ಇದೆ. ಹಿಜಬ್, ಕೇಸರಿ ಶಾಲು, ಸ್ಕಾರ್ಪ್‍ಗಳನ್ನು ಹಾಕಿಕೊಂಡು ಬರಬಾರ್ದು ಎಂದು ಕೋರ್ಟ್ ಮಧ್ಯಂತರ ಆದೇಶದಲ್ಲಿ ಸ್ಪಷ್ಟವಾಗಿ ಹೇಳಿದೆ. ನಾನು ಮನವಿ ಮಾಡುತ್ತೇನೆ. ಈ ತರಹದ ಇಶ್ಯೂಗಳನ್ನ ತೆಗೆದು ಸಮಾಜದಲ್ಲಿರುವಂತ ಸಾಮರಸ್ಯವನ್ನ ಹಾಳುಮಾಡಬೇಡಿ ಎಂದು ಕೇಳಿಕೊಂಡರು.
ಇದ್ರಲ್ಲಿ ಕಾಣದ ಕೈ ಅಂತೇನಿಲ್ಲ. ಕಾಣುವ ಕೈ ಎಲ್ಲವನ್ನೂ ಮಾಡ್ತಿದೆ. ಸಿಎಫ್‍ಐ ಸಂಘಟನೆ ಬಂದಿದೆ. ರಾಜಕೀಯ ನಾಯಕರು ಏನೇನು ಮಾತನಾಡುತ್ತಿದ್ದಾರೆ ಎಂಬುದನ್ನ ನಾವು ನೋಡ್ತಿದ್ದೇವೆ ಎಂದರು. ಇದನ್ನೂ ಓದಿ: ರೋಡ್ ಶೋ ವೇಳೆ ಕಾರಿನ ಮೇಲಿಂದ ಕೆಳಗೆ ಬಿದ್ದ ಪವನ್ ಕಲ್ಯಾಣ್!
ತುಮಕೂರು: ಕರುನಾಡ ಜನತೆಯ ನೆಚ್ಚಿನ ‘ಪಬ್ಲಿಕ್ ಟಿವಿ’ ದಶಮಾನೋತ್ಸವ ಸಂಭ್ರಮದಲ್ಲಿದೆ. 2012ರ ಫೆಬ್ರವರಿ 12ರಂದು ಲೋಕಾರ್ಪಣೆಗೊಂಡ ಪಬ್ಲಿಕ್ ಟಿವಿಗೆ ಹತ್ತು ವರ್ಷ ಪೂರೈಸಿದ ಸಂಭ್ರಮ. ಈ ಅಮೃತ ಘಳಿಗೆಯನ್ನು ಅರ್ಥಪೂರ್ಣವಾಗಿಸಲು ಸಿದ್ಧಗಂಗೆ ಶ್ರೀಗಳ ದಿವ್ಯ ಸಾನಿಧ್ಯ ಹಾಗೂ ಸಹಸ್ರಾರು ವಿದ್ಯಾರ್ಥಿಗಳ ಸಮಕ್ಷಮದಲ್ಲಿ ಶುಕ್ರವಾರ ಸಂಜೆ `ಪಬ್ಲಿಕ್ ದೀಪಾವಳಿ’ ಆಚರಿಸಲಾಯಿತು.
ಶ್ರೀಮಠದ ಸಿದ್ದಲಿಂಗ ಸ್ವಾಮೀಜಿ, ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ದಂಪತಿ, ಸಂಸ್ಥೆಯ ಸಿಓಓ ಹರೀಶ್ ಕುಮಾರ್ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಸ್ರಾರು ಮಕ್ಕಳು ದೀಪ ಬೆಳಗಿ ಪಬ್ಲಿಕ್ ಟಿವಿಗೆ ಶುಭ ಹಾರೈಸಿದರು. ಪಬ್ಲಿಕ್ ದೀಪಾವಳಿಯ ದೃಶ್ಯಗಳು ನಯನಮನೋಹರವಾಗಿದ್ದವು. ಇದನ್ನೂ ಓದಿ: ಭಾರತಕ್ಕೆ ಏಕದಿನ ಸರಣಿ – ವಿಂಡೀಸ್‍ಗೆ ವೈಟ್‍ವಾಶ್ ಮುಖಭಂಗ
ಈ ವೇಳೆ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಹೆಚ್.ಆರ್.ರಂಗನಾಥ್ ಅವರ ಸಮರ್ಪಣೆಯ ಕಾರಣದಿಂದ ‘ಪಬ್ಲಿಕ್ ಟಿವಿ’ 10 ವರ್ಷದಲ್ಲಿಯೇ 25 ವರ್ಷದ ಸಾಧನೆ ಮಾಡಿದೆ ಎಂದು ಶ್ಲಾಘಿಸಿದರು. ಪಬ್ಲಿಕ್ ಟಿವಿಯ ಬಿಗ್ ಬುಲೆಟಿನ್‌ಗೆ ಜನ ಹೇಗೆ ಕಾಯುತ್ತಾರೆ ಎಂಬುದನ್ನು ನೆನಪಿಸಿಕೊಂಡರು. ಪಬ್ಲಿಕ್ ಟಿವಿ ರಜತ ಮಹೋತ್ಸವ ಆಚರಿಸಲಿ ಎಂದು ಹಾರೈಸಿದರು.
ಸಂಸ್ಥೆಯ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಅವರು ಮಾತನಾಡಿ, ಪಬ್ಲಿಕ್ ಟಿವಿ ಆರಂಭಿಸಿದ ಸಂದರ್ಭದಲ್ಲಿ ಉದ್ಘಾಟನೆ ಕಾರ್ಯಕ್ರಮದಲ್ಲಿ ನಾನೊಬ್ಬನೇ ಇದ್ದೆ. ಆದರೆ ದಶಮಾನೋತ್ಸವ ಸಂದರ್ಭದಲ್ಲಿ ಶ್ರೀಮಠದ ಸಹಸ್ರಾರು ಮಕ್ಕಳೊಂದಿಗೆ ಪಾಲ್ಗೊಂಡಿದ್ದು ನಿಜಕ್ಕೂ ಖುಷಿಯಾಗಿದೆ. ಈ ಎರಡು ಕ್ಷಣಗಳನ್ನು ನನ್ನ ಜೀವನದಲ್ಲಿ ಸ್ಮರಣೀಯ ಎಂದು ತಿಳಿಸಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು
ಯಾವುದೇ ಕಾಯಕವನ್ನು ಪ್ರಾರಂಭ ಮಾಡುವುದು ಸುಲಭ. ಆದರೆ ಆ ಕಾಯಕವನ್ನು ಯಶಸ್ಸಿನ ಕಡೆಗೆ ಕೊಂಡೊಯ್ಯುವುದು ತುಂಬಾ ಕಷ್ಟದ ಕೆಲಸ. ಅಂತಹ ಅದ್ಭುತ ಕಾರ್ಯವನ್ನು ಶ್ರೀಗಳು ಮುಂದುವರಿಸುತ್ತಿದ್ದಾರೆ ಎಂದು ಸಿದ್ದಗಂಗಾ ಶ್ರೀಗಳ ಕಾರ್ಯವನ್ನು ಕೊಂಡಾಡಿದರು.
ನಿಮ್ಮೆಲ್ಲರ ಪ್ರೀತಿಯಿಂದ ಈ ಹತ್ತು ವರ್ಷದಲ್ಲಿ ಪಬ್ಲಿಕ್ ಟಿವಿ ಸಾಧಿಸಿದ್ದು ಬಹಳಷ್ಟು, ಸಾಧಿಸಬೇಕಿರೋದು ಇನ್ನಷ್ಟು. ಈ ಸಾರ್ಥಕ ದಶಕದ ಹಿಂದೆ ನಮ್ಮೊಡನೆ ನೀವಿದ್ದೀರಿ. ನಮ್ಮನ್ನು ಇಷ್ಟರ ಮಟ್ಟಿಗೆ ಬೆಳೆಸಿದ್ದೀರಿ. ನಿಮಗೆ ನಾವು ಚಿರಋಣಿ. ಜೊತೆಗೆ ಕೇಬಲ್ ಆಪರೇಟರ್ಸ್, ಜಾಹೀರಾತುದಾರರಿಗೂ ಧನ್ಯವಾದ ಎಂದು ಕೃತಜ್ಞತೆ ಸಲ್ಲಿಸಿದರಲ್ಲದೇ, ಈ ಹತ್ತು ವರ್ಷದ ಪಯಣದ ಹಾದಿಯನ್ನು ಸಂಸ್ಥೆಯ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಅವರು ಮೆಲುಕು ಹಾಕಿದರು.