Tag: tumkur

  • ಬೋಪಯ್ಯಗೆ ಎಸಿಬಿ ದಾಳಿ ಬೆದರಿಕೆ ಹಾಕಿದ್ದ ರೌಡಿಶೀಟರ್ ಅರೆಸ್ಟ್

    ಬೋಪಯ್ಯಗೆ ಎಸಿಬಿ ದಾಳಿ ಬೆದರಿಕೆ ಹಾಕಿದ್ದ ರೌಡಿಶೀಟರ್ ಅರೆಸ್ಟ್

    ಮಡಿಕೇರಿ: ಮಾಜಿ ಸ್ಪೀಕರ್ ಹಾಗೂ ಕೊಡಗಿನ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರ ಮನೆಯ ಮೇಲೆ ಎಸಿಬಿ ದಾಳಿ ನಡೆಸುತ್ತೇವೆ ಎಂದು ಬೆದರಿಕೆ ಹಾಕಿ ಹಣ ಕೇಳಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ತುಮಕೂರಿನ ಕೊರಟಗೆರೆ ನಿವಾಸಿ ರೌಡಿ ಶೀಟರ್ ಆನಂದ್ (31) ಬಂಧಿತ ಆರೋಪಿ. ಕೆಲವು ದಿನಗಳ ಹಿಂದೆಯಷ್ಟೇ ತಮ್ಮ ಮೇಲೆ ಎಸಿಬಿ ದಾಳಿಯಾಗಲಿದ್ದು, ಅದನ್ನು ತಡೆಯಲು ಫೋನ್ ಮೂಲಕ ಹಣದ ಆಮಿಷ ಇಟ್ಟಿದ್ದ ವ್ಯಕ್ತಿಯನ್ನು ಮಡಿಕೇರಿ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

    ಕರೆ ಮಾಡಿದ ಸಂಖ್ಯೆಯ ಫೋನ್ ಲೊಕೇಶನ್ ಆಧರಿಸಿ ಕಾರ್ಯಾಚರಣೆ ಕೈಗೊಂಡ ಪೊಲೀಸರಿಗೆಲು ಆಂಧ್ರಪ್ರದೇಶ ಗಡಿಯಲ್ಲಿ ಪತ್ತೆಯಾಗಿದ್ದು, ನಂತರ ರೈಲು ಮೂಲಕ ಬೆಂಗಳೂರು ಕಡೆಗೆ ವಾಪಸ್ಸಾಗುತ್ತಿರುವುದು ತಿಳಿದಿದೆ. ಈ ವೇಳೆ ರೈಲ್ವೆ ನಿಲ್ದಾಣದಲ್ಲಿ ಆನಂದ್‍ನನ್ನು ಬಂಧಿಸಲಾಗಿದೆ. ದನ್ನೂ ಓದಿ: ನಿಮ್ಮ ಮನೆ ಮೇಲೆ ಎಸಿಬಿ ದಾಳಿ ನಡೆಯುತ್ತೆ – ಬೋಪಯ್ಯಗೆ ಕರೆ ಮಾಡಿ ಬೆದರಿಕೆ

    ಕೊಡಗಿನ ಕ್ರೈಂ ಬ್ರಾಂಚ್‍ನ ಸಿದ್ದಾಪುರದ ಎಸ್.ಐ ಮೋಹನ್ ರಾಜ್, ಕಾನ್ಸ್ ಟೇಬಲ್ ವಸಂತ್, ಮಡಿಕೇರಿಯ ನಾಗರಾಜ್, ನಂದಕುಮಾರ್ ನೇತೃತ್ವದ ಆರು ಮಂದಿಯ ತಂಡ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಮಡಿಕೇರಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದನ್ನೂ ಓದಿ: 1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್

  • ಹಾವು ಹಾವನ್ನು ನುಂಗಿತ್ತಾ!

    ಹಾವು ಹಾವನ್ನು ನುಂಗಿತ್ತಾ!

    ತುಮಕೂರು: ಹಾವು ಇನ್ನೊಂದು ಹಾವನ್ನು ನುಂಗಿರುವುದನ್ನು ಕೇಳಿರುವುದು, ನೋಡಿರುವುದು ತುಂಬಾ ಕಡಿಮೆ. ಆದರೆ ಅಂತಹ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದ್ದು, ಹಾವನ್ನೇ ಇನ್ನೊಂದು ಹಾವು ನುಂಗಿದೆ.

    ತುಮಕೂರು ನಗರದ ಶಿರಾ ರಸ್ತೆಯ ಲಿಂಗಾಪುರ ಸರ್ವೀಸ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಸುಮಾರು ಮೂರು ಅಡಿ ಉದ್ದದ ನಾಗರಹಾವು ನಾಲ್ಕು ಅಡಿ ಉದ್ದದ ಜೋರು ಪೋತ ಎನ್ನುವ ಹಾವನ್ನು ನುಂಗಿದ ಘಟನೆ ನಡೆದಿದೆ. ಇದನ್ನೂ ಓದಿ: ಮೇಕೆದಾಟು ಯೋಜನೆ ಸ್ಥಗಿತಗೊಂಡ್ರೆ ಕಾಂಗ್ರೆಸ್ ಪಕ್ಷದವರೇ ನೇರ ಹೊಣೆ: ಭೈರತಿ ಬಸವರಾಜ್

    ವಿಷಯ ತಿಳಿದು ಸ್ಥಳಕ್ಕೆ ತಕ್ಷಣ ವಾರಂಗಲ್ ಸಂಸ್ಥೆಯ ದಿಲೀಪ್ ಬಂದಿದ್ದಾರೆ. ಎರಡು ಹಾವುಗಳನ್ನು ಸೂಕ್ಷ್ಮವಾಗಿ ಗಮನಿಸಿ ಸುರಕ್ಷಿತವಾಗಿ ಸೆರೆಹಿಡಿದಿದ್ದಾರೆ. ನಂತರ ಎರಡೂ ಹಾವುಗಳನ್ನು ಅರಣ್ಯಕ್ಕೆ ಬಿಟ್ಟಿದ್ದಾರೆ. ಈ ಅಪರೂಪದ ದೃಶ್ಯ ನೋಡಿದ ಗ್ರಾಮಸ್ಥರು ಅಚ್ಚರಿಗೊಂಡಿದ್ದು, ಏನಿದು ವಿಚಿತ್ರ ಎಂಬ ರೀತಿಯಲ್ಲಿ ಜನರು ಬೆರಗಾಗಿ ಈ ದೃಶ್ಯವನ್ನು ವೀಕ್ಷಿಸುತ್ತಿದ್ದರು.

  • ಎಲೆರಾಂಪುರಗೆ ಕೇಂದ್ರ ಸರ್ಕಾರದಿಂದ ಉತ್ತಮ ಪಂಚಾಯ್ತಿ ಪುರಸ್ಕಾರ

    ಎಲೆರಾಂಪುರಗೆ ಕೇಂದ್ರ ಸರ್ಕಾರದಿಂದ ಉತ್ತಮ ಪಂಚಾಯ್ತಿ ಪುರಸ್ಕಾರ

    ತುಮಕೂರು: ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಎಲೆರಾಂಪುರ ಗ್ರಾಮ ಪಂಚಾಯ್ತಿಗೆ ಕೇಂದ್ರ ಸರ್ಕಾರದಿಂದ ‘ಉತ್ತಮ ಪಂಚಾಯ್ತಿ ಪುರಸ್ಕಾರ’ ಲಭಿಸಿದೆ.

    ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಾಲೂಕಿನ ಗಡಿಭಾಗದ ಡಿ.ನಾಗೇನಹಳ್ಳಿ ಗ್ರಾಮವನ್ನು 2010ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಅಂತರ್ಜಲ ವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರ ಫಲವಾಗಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡ ಕಾರಣದಿಂದಾಗಿ ಗ್ರಾಮಕ್ಕೆ ‘ರಾಷ್ಟ್ರೀಯ ನೀರು ಅಭಿವೃದ್ಧಿ ಪ್ರಶಸ್ತಿ’ ಲಭಿಸಿದೆ. ಇದನ್ನೂ ಓದಿ: ನೀವು ಸರಿಯಾಗಿ ಮಾಸ್ಕ್ ಧರಿಸಿದ್ರೆ ಲಾಕ್‍ಡೌನ್ ಮಾಡಲ್ಲ: ಅರವಿಂದ್ ಕೇಜ್ರಿವಾಲ್

    ಗ್ರಾಮದ ಸುಮಾರು 400 ಹೆಕ್ಟೇರ್ ಭೂ ಪ್ರದೇಶದಲ್ಲಿ 85 ಕೃಷಿ ಹೊಂಡ, 5 ಚೆಕ್ ಡ್ಯಾಂ, 8 ಹಳೇ ಚೆಕ್ ಡ್ಯಾಂ ಅಭಿವೃದ್ಧಿ ಸೇರಿದಂತೆ ಕೆರೆ ಅಭಿವೃದ್ಧಿ ಹಾಗೂ ತಿರುವುಗಾಲುವೆ ಮೂಲಕ ನೀರು ಸಂಗ್ರಹಣೆ ಮಾಡಲಾಗಿದೆ. ಬರ ನಿರೋಧಕ ಒಣಬೇಸಾಯ, ತೋಟಗಾರಿಕೆಗೆ ಒತ್ತು ನೀಡಲಾಗಿದೆ.

    ರಾಗಿ, ಒಣ ಭತ್ತ, ತೊಗರಿ ಹೀಗೆ ಕಡಿಮೆ ನೀರು ಬಳಸಿ ಬೆಳೆಯುವ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ. ಬೆಟ್ಟದ ನೆಲ್ಲಿ, ಗೋಡಂಬಿ, ಹುಣಸೆ, ಮಾವು, ಹೆಬ್ಬೇವು ಸೇರಿದಂತೆ ಅರಣ್ಯ ಮರಗಳನ್ನು ಬೆಳೆಸಲಾಗಿದೆ. ನೀರಿನ ಮೂಲ ಹೆಚ್ಚಿರುವ ಕಾರಣ ಪ್ರಾಣಿ, ಪಕ್ಷಿ, ಜಾನುವಾರುಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಮಣ್ಣಿನ ಸವಕಳಿ ಹಾಗೂ ಮಳೆ ನೀರು ಇಂಗಿಸುವ ಸಲುವಾಗಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಬದಿ ನಿರ್ಮಿಸಲಾಗಿದೆ.

    10 ವರ್ಷಗಳಿಂದ ನಿಕ್ರಾ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಂದಾಗಿ ಅಂತರ್ಜಲ ವೃದ್ಧಿಯಾಗಿ ಈ ಭಾಗದಲ್ಲಿದ್ದ ನೀರಿನ ಬವಣೆ ನೀಗಿದೆ. ಸಂಪೂರ್ಣ ನಿಷ್ಕ್ರಿಯಗೊಂಡಿದ್ದ ಸುಮಾರು 25 ಕೊಳವೆ ಬಾವಿಗಳು ಮರು ಪೂರಣಗೊಂಡಿವೆ. ಒಣಗಿದ್ದ ಬಾವಿಗಳಲ್ಲಿ ನೀರು ನಿಂತಿದೆ. ಇದನ್ನೂ ಓದಿ: 735 ಕೋಟಿ ರೂ. ಗೆ ನ್ಯೂಯಾರ್ಕ್‍ನಲ್ಲಿ ಐಷಾರಾಮಿ ಹೋಟೆಲ್ ಖರೀದಿಸಿದ ರಿಲಯನ್ಸ್

    ಸಂಪೂರ್ಣ ಬೆಟ್ಟ ಹಾಗೂ ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಮೊದಲು ಮಳೆ ನೀರು ವ್ಯರ್ಥವಾಗುತ್ತಿತ್ತು. ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ.ನಾಗೇನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿತ್ತು. ದೇಶದಲ್ಲಿ ಇದೇ ರೀತಿ ನಿಕ್ರಾ ಯೋಜನೆಯಡಿ 100 ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿ 4 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಂಡು ಈಗ ಅದು ಸಫಲವಾದ್ದರಿಂದ ಮಾದರಿ ಗ್ರಾಮವಾಗಿ ಹೊರಹೊಮ್ಮಿದೆ.

  • ಸಂಸದ ಬಸವರಾಜ್ ನಮ್ಮವರಲ್ಲ: ಮಾಧುಸ್ವಾಮಿ

    ಸಂಸದ ಬಸವರಾಜ್ ನಮ್ಮವರಲ್ಲ: ಮಾಧುಸ್ವಾಮಿ

    ತುಮಕೂರು: ಯಾರೋ ಹುಚ್ಚುಚ್ಚಾಗಿ ಮಾತನಾಡಿದರೆ ಅದಕ್ಕೆ ನಾನು ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಅಷ್ಟಕ್ಕೂ ಸಂಸದ ಬಸವರಾಜ್ ನಮ್ಮವರಲ್ಲ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

    ಸಚಿವ ಬೈರತಿ ಬಸವರಾಜ್ ಹಾಗೂ ಸಂಸದ ಜಿ.ಎಸ್. ಬಸವರಾಜ್ ಅವರು ಸುದ್ದಿಗೋಷ್ಠಿ ಸಂದರ್ಭದಲ್ಲಿ ಮಾಧುಸ್ವಾಮಿ ವಿರುದ್ಧ ಮಾತನಾಡಿರುವುದರ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ನಾನು ಆ ಸುದ್ದಿಗೋಷ್ಠಿಗೆ ಹೋಗಿದ್ದೆ. ಆದರೆ 12 ಗಂಟೆಗೆ ಕ್ಯಾಬಿನೆಟ್ ಇರುವುದರಿಂದ ಸಮಯವಾಗುತ್ತದೆ. 9.30ಗೆ ಹೊರಡಬೇಕು ಎಂದು ಮೊದಲೇ ಹೇಳಿದ್ದೆ. ಆದರೂ ಕಾರ್ಯಕ್ರಮದ ನಿರ್ವಾಹಕರು 10 ಗಂಟೆಯಾದರೂ ಸಭೆ ಮುಗಿಸಲಿಲ್ಲ. ಇದರಿಂದಾಗಿ ನಾನು ಅಲ್ಲಿಂದ ಎದ್ದು ಬಂದಿದ್ದೇನೆ. ನನಗೆ ಬೇರೆಯವರ ವಿಚಾರ ತಿಳಿದಿಲ್ಲ ಎಂದು ಹೇಳಿದರು.

    ಎಲ್ಲರಿಗೂ ತಿಳಿದಂತೆ ರೋಡ್ ಬ್ಲಾಕ್ ಆಗಿರುವುದರಿಂದ ಕ್ಯಾಬಿನೆಟ್ ಮೀಟಿಂಗ್‌ಗೆ ತಡವಾಗುತ್ತದೆ ಎಂದು ಮುಂಚೆನೇ ತಿಳಿಸಿದ್ದೆ. 12 ಗಂಟೆಗೆ ಕ್ಯಾಬಿನೆಟ್ ಇದ್ದರೂ ಅರ್ಧ ಗಂಟೆ ಮುಂಚೆ ಅಲ್ಲಿ ಹೋಗಿರಬೇಕು. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಸಿಎಂ ಜೊತೆ ಮಾತನಾಡಬೇಕಿತ್ತು ಎಂದ ಅವರು, ಸಭೆಯಲ್ಲಿರುವಾಗಲೇ 2 ಬಾರಿ ಮುಖ್ಯಮಂತ್ರಿ ಅವರು ಕರೆ ಮಾಡಿದ್ದರು. ಆದ್ದರಿಂದ ಅರ್ಧಕ್ಕೆ ಎದ್ದು ಬಂದೆ. ಈ ಬಗ್ಗೆ ನನಗೆ ಹೆಚ್ಚು ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲ ಎಂದರು. ಇದನ್ನೂ ಓದಿ:  ನಮ್ಮ ಜಿಲ್ಲೆಯನ್ನೇ ಹಾಳ್ ಮಾಡಿಬಿಟ್ಟಿದ್ದಾನೆ – ಮಾಧುಸ್ವಾಮಿ ವಿರುದ್ಧ ಬಸವರಾಜ್, ಬೈರತಿ ಗುಸು ಗುಸು

    ತುಮಕೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಸಂಸದ ಜಿ.ಎಸ್ ಬಸವರಾಜ್ ಹಾಗೂ ಸಚಿವ ಬೈರತಿ ಬಸವರಾಜ್ ಅವರು ಸಚಿವ ಮಾಧುಸ್ವಾಮಿ ಗುಸು, ಗುಸು ಎಂದು ಮಾತನಾಡಿಕೊಂಡಿದ್ದರು. ಈ ವೇಳೆ ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಬಸವರಾಜು ಆರೋಪಗಳ ಸುರಿಮಳೆಯೇ ಹರಿಸಿದ್ದರು. ದಕ್ಷಿಣ ಕೋರಿಯಾದ ಕಿಂಗ್ ಪಿನ್ ಇದ್ದಾನಲ್ಲ ಅವನ ತರ ಮಾಧುಸ್ವಾಮಿ ಆಡುತ್ತಿದ್ದಾನೆ. ಇದರಿಂದಾಗಿ ನಮ್ಮ ಜಿಲ್ಲೆಯನ್ನೇ ಹಾಳು ಮಾಡಿಬಿಟ್ಟಿದ್ದಾನೆ ಎಂದು ಸಚಿವ ಮಾಧುಸ್ವಾಮಿ ವಿರುದ್ಧ ಸಂಸದ ಜಿ.ಎಸ್ ಬಸವರಾಜ್ ಹರಿಹಾಯ್ದಿದ್ದರು. ಇದನ್ನೂ ಓದಿ: ತರಕಾರಿ, ಹಣ್ಣುಗಳನ್ನು ಲಂಚವಾಗಿ ಪಡೆಯುತ್ತಿದ್ದ ಅಧಿಕಾರಿಗಳು!

  • ಗ್ರಾಮದಲ್ಲಿ ಪ್ರತ್ಯೇಕ ಅಂಗನವಾಡಿ ಕೇಂದ್ರ ತೆರೆದ ಮುಸ್ಲಿಮರು

    ಗ್ರಾಮದಲ್ಲಿ ಪ್ರತ್ಯೇಕ ಅಂಗನವಾಡಿ ಕೇಂದ್ರ ತೆರೆದ ಮುಸ್ಲಿಮರು

    ತುಮಕೂರು: ಗ್ರಾಮದ ಬಹುಸಂಖ್ಯಾತ ಮುಸ್ಲಿಮರು ಪ್ರತ್ಯೇಕ ಅಂಗನವಾಡಿ ಕೇಂದ್ರವನ್ನು ತೆರೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

    ಕುಣಿಗಲ್ ತಾಲೂಕಿನ ಬೊಮ್ಮೇನಹಳ್ಳಿ ಪಾಳ್ಯದ ಮುಸ್ಲಿಮರು ಅಂಗನವಾಡಿ ಕೇಂದ್ರಕ್ಕೆ ಬೀಗ ಮತ್ತು ಮುಳ್ಳು ಜಡಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಅಂಗನವಾಡಿ ಕೇಂದ್ರಕ್ಕೆ ತಮ್ಮ ಧರ್ಮದ ಕಾರ್ಯಕರ್ತೆಯನ್ನು ನಿಯೋಜಿಸುವಂತೆ ಪಟ್ಟು ಹಿಡಿದಿದ್ದು, ನವೆಂಬರ್‌ನಲ್ಲಿ ಅನ್ಯ ಸಮುದಾಯದ ಮಹಿಳೆಯನ್ನು ಅಂಗನವಾಡಿ ಕೇಂದ್ರಕ್ಕೆ ನಿಯೋಜಿಸಲಾಗಿದೆ. ಇದನ್ನೂ ಓದಿ: ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಉತ್ತಮ ಆಯ್ಕೆ: ಎಂಎಸ್‌ಕೆ ಪ್ರಸಾದ್

    ಸರ್ಕಾರದ ಸೌಲಭ್ಯಗಳನ್ನು ತಿರಸ್ಕರಿಸಿದ ಅವರು ಮಕ್ಕಳಿಗೆ ಸ್ವಂತ ಖರ್ಚಿನಲ್ಲಿ ಆಹಾರ, ಹಾಲು ಮತ್ತು ಮೊಟ್ಟೆ ವಿತರಿಸುತ್ತಿದ್ದಾರೆ. ಈ ಹಿನ್ನೆಲೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದರು. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸಬಾರದು ಎಂದು ತೀರ್ಮಾನಿಸಿದ್ದಾರೆ. ಜಮಾತ್ ಸಭೆಯ ತೀರ್ಮಾನದಂತೆ ಪ್ರಾರ್ಥನಾ ಮಂದಿರದ ಪಕ್ಕದ ಹಳೆ ಕಟ್ಟಡದಲ್ಲಿ ಐದು ದಿನಗಳಿಂದ ಬಾಲವಾಡಿ ಕೇಂದ್ರ ಪ್ರಾರಂಭಿಸಿದ್ದಾರೆ.

    ಮುಸ್ಲಿಮ ಸಮುದಾಯದ ಕಾರ್ಯಕರ್ತೆಯನ್ನು ನಿಯೋಜಿಸುವವರೆಗೂ ಹೋರಾಟ ಮುಂದುವರೆಯುವ ಲಕ್ಷಣ ಇದ್ದು, ಮನೆಗಳಿಗೆ ಭೇಟಿ ನೀಡಿ ಮನವಿ ಮಾಡಿದರು, ಸಹ ಪೋಷಕರು ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿಲ್ಲ. ಸೌಹಾರ್ದತೆಯುತವಾಗಿ ವಿವಾದ ಬಗೆಹರಿಸುವ ಬದಲು ಅಧಿಕಾರಿಗಳು ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

    ಕಳೆದ ಎರಡು ತಿಂಗಳಿAದ ಮಕ್ಕಳಿಗೆ ಆಹಾರ ವಿತರಣೆಯಾಗಿಲ್ಲ ಎಂದು ಅಂಗನವಾಡಿ ಕಾರ್ಯಕರ್ತೆ ಸುಮಾ ಹೇಳಿದ್ದಾರೆ.

  • ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ

    ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ

    ತುಮಕೂರು: ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಹೆಚ್ಚು ಪ್ರಕರಣಗಳು ಕಂಡು ಬಂದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ತಾಲೂಕಾಸ್ಪತ್ರೆಯಲ್ಲೂ 500-600 ಆಕ್ಸಿಜನ್ ಸಾಂದ್ರಕಗಳಿವೆ. ಜೊತೆಗೆ ಪ್ರತಿ ತಾಲೂಕಿನಲ್ಲಿ 5-6 ಐಸಿಯು ಬೆಡ್ ಇದೆ ಎಂದರು.

    ಈ ಬಾರಿ ಮಕ್ಕಳ ಪ್ರಕರಣ ಹೆಚ್ಚು ಕಂಡುಬರುವ ಸಾಧ್ಯತೆ ಇದೆ. ಹಾಗಾಗಿ 200 ಮಕ್ಕಳ ವೈದ್ಯರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಪ್ರಕರಣದಲ್ಲಿ ಡೆತ್ ರೇಟ್ ಕಡಿಮೆ ಇದೆ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಸೂಚಿಸಿದರು.

    ಈ ಬಗ್ಗೆ ಡಿ. 9 ರಂದು ಸಚಿವ ಸಂಪುಟ ತುರ್ತು ಸಭೆ ನಡೆಸಲಾಗುವುದು. ನೀತಿ ಸಂಹಿತೆ ಇರುವುದರಿಂದ ಜಿಲ್ಲೆಯಲ್ಲಿ ಸಚಿವರಿಂದ ಸಭೆ ನಡೆಸಲು ಆಗುತ್ತಿಲ್ಲ. ಹಾಗಾಗಿ ಕೋವಿಡ್ ಸಂಬಂಧಿಸಿದಂತೆ ಉಸ್ತುವಾರಿ ನೋಡಿಕೊಳ್ಳಲು ಕಷ್ಟವಾಗುತ್ತಿದೆ. ಇದರಿಂದಾಗಿ ಡಿ. 9ರಂದು ಸಚಿವ ಸಂಪುಟ ಸಭೆ ಕರೆದು ನಂತರ ನಾವು ಕಾರ್ಯೋನ್ಮುಖರಾಗುತ್ತೇವೆ ಎಂದರು.

    ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಕಷ್ಟ. ಆದರೆ ಉಳಿದ ಜಿಲ್ಲೆಗಳಲ್ಲಿ ದೇವೇಗೌಡರಲ್ಲಿ ಸಹಕಾರಕ್ಕಾಗಿ ಮನವಿ ಮಾಡಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

    ತುಮಕೂರಿನಲ್ಲಿ ಮೈತ್ರಿ ಇಲ್ಲ. ಬಿಜೆಪಿ -ಜೆಡಿಎಸ್ ಎರಡೂ ಕಡೆಯ ಅಭ್ಯರ್ಥಿಗಳು ಆಳವಾಗಿ ಪ್ರಚಾರ ಮಾಡಿದ್ದಾರೆ. ಈ ಹಂತದಲ್ಲಿ ಯಾರೂ ಕಣದಿಂದ ನಿವೃತ್ತಿಯಾಗೋದು ಕಷ್ಟ. ಇದರಿಂದಾಗಿ ತುಮಕೂರು ಮೈತ್ರಿ ಚರ್ಚೆಯಾಗಿಲ್ಲ. ಆದರೂ ವರಿಷ್ಠರು ಚರ್ಚೆ ಮಾಡಿದರೆ ಅದು ಅವರಿಗೆ ಬಿಟ್ಟ ತೀರ್ಮಾನ. ಅದರ ಬಗ್ಗೆ ನಾನು ಮಾತನಾಡೋಕೆ ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

  • ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ

    ಮತ್ತೆ ಕೇರಳದ ಐವರು ವಿದ್ಯಾರ್ಥಿಗಳಿಗೆ ಕೊರೊನಾ

    ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಮತ್ತೆ ಐವರು ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗುಲಿದೆ.

    ಕಳೆದ ಮಂಗಳವಾರ 15 ಮಂದಿಗೆ ಸೋಂಕು ದೃಢವಾಗಿತ್ತು. ಇದೀಗ ಸೋಂಕಿತ ಕೇರಳ ವಿದ್ಯಾರ್ಥಿಗಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ. ವರದರಾಜ್ ನರ್ಸಿಂಗ್ ಕಾಲೇಜ್‌ನಲ್ಲಿ ಮಂಗಳವಾರ 7 ಮಂದಿಗೆ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ ಐವರು ಕೇರಳದ ವಿದ್ಯಾರ್ಥಿಗಳಿಗೆ ಸೋಂಕು ದೃಢವಾಗಿದೆ.

    ವರದರಾಜ್ ನರ್ಸಿಂಗ್ ಕಾಲೇಜ್ ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿ ಐವರು ವಿದ್ಯಾರ್ಥಿಗಳಿದ್ದರು. ಈ ಹಿನ್ನೆಲೆಯಲ್ಲಿ ವರದರಾಜ್ ಕಾಲೇಜ್ ವಿದ್ಯಾರ್ಥಿಗಳಲ್ಲಿ 90 ಮಂದಿಗೆ ಪರೀಕ್ಷೆ ನಡೆಸಲಾಗಿತ್ತು. ಒಟ್ಟಾರೆ ಜಿಲ್ಲೆಯಲ್ಲಿ 20 ಮಂದಿ ಕೇರಳ ವಿದ್ಯಾರ್ಥಿಗಳಿಗೆ ಕೊರೊನಾ ದೃಢವಾಗಿದೆ.

    ಕಳೆದ ಮಂಗಳವಾರ ಸಿದ್ದಗಂಗಾ ನರ್ಸಿಂಗ್ ಕಾಲೇಜಿನಲ್ಲಿ 8 ವಿದ್ಯಾರ್ಥಿಗಳಿಗೆ ಹಾಗೂ ವರದರಾಜ್ ನರ್ಸಿಂಗ್ ಕಾಲೇಜಿನಲ್ಲಿ 7 ಜನರಿಗೆ ಸೋಂಕು ದೃಢವಾಗಿತ್ತು. ಈಗ ವರದರಾಜ್ ಕಾಲೇಜಿನಲ್ಲಿ ಮತ್ತೆ 5 ವಿದ್ಯಾರ್ಥಿಗಳಿಗೆ ಸೋಂಕು ತಗಲಿರುವುದು ವರದಿಯಾಗಿದೆ. ಇದನ್ನೂ ಓದಿ: ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ವರದರಾಜ್ ಕಾಲೇಜಿನಲ್ಲಿ ಒಟ್ಟು 12 ವಿದ್ಯಾರ್ಥಿಗಳಿಗೆ ಹಾಗೂ ಸಿದ್ದಗಂಗಾ ಕಾಲೇಜಿನಲ್ಲಿ 8 ಜನರಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಒಟ್ಟಾರೆಯಾಗಿ 20 ಜನ ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದನ್ನೂ ಓದಿ: ಕರ್ತವ್ಯಲೋಪ – ಮೂವರು ಕಾನ್ಸ್ ಟೇಬಲ್‌ಗಳು ಅಮಾನತು

  • ತುಮಕೂರಿನಲ್ಲಿ ವಿಚಿತ್ರ ರೋಗಕ್ಕೆ ನೂರಾರು ಕುರಿಗಳು ಬಲಿ

    ತುಮಕೂರಿನಲ್ಲಿ ವಿಚಿತ್ರ ರೋಗಕ್ಕೆ ನೂರಾರು ಕುರಿಗಳು ಬಲಿ

    ತುಮಕೂರು: ವಿಚಿತ್ರ ರೋಗಕ್ಕೆ ನೂರಾರು ಕುರಿಗಳು ಬಲಿಯಾಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ನಿರುವಗಲ್ ಗೊಲ್ಲರಹಟ್ಟಿಯಲ್ಲಿ ಕಳೆದ ಒಂದು ತಿಂಗಳಿನಿಂದ ಕುರಿಗಳು ವಿಚಿತ್ರ ಕಾಯಿಲೆಯಿಂದ ಸಾವನ್ನಪ್ಪುತ್ತಿದೆ. ಇದರಿಂದಾಗಿ ರೈತರು ಆತಂಕಕ್ಕೊಳಗಾಗಿದ್ದಾರೆ. ಕೃಷ್ಣಮೂರ್ತಿ, ನಿಂಗಯ್ಯ, ಪರಮೇಶ್, ರಾಘವೇಂದ್ರ, ಬಾಲಯ್ಯ, ದೊಡ್ಡ ಈರಯ್ಯ ಎನ್ನುವವರಿಗೆ ಸೇರಿದ ನೂರಾರು ಕುರಿಗಳು ಸಾವನ್ನಪ್ಪಿದೆ.

    ನೂರಾರು ಕುರಿಗಳು ಸಾವನ್ನಪ್ಪಿದರೂ ರೈತರ ಕಷ್ಟಕ್ಕೆ ಪಶುಸಂಗೋಪನಾ ಇಲಾಖೆ ಸ್ಪಂದಿಸದೇ ನಿರ್ಲಕ್ಷ್ಯವಹಿಸಿದೆ. ಅಷ್ಟೇ ಅಲ್ಲದೆ ಕುರಿಗಳಿಗೆ ಚಿಕಿತ್ಸೆ ನೀಡಲು ಬಂದಿಲ್ಲ. ವೈದ್ಯರೂ ಹಳ್ಳಿಗೆ ಬರುವುದಿಲ್ಲ ಎಂದು ಸತಾಯಿಸುತ್ತಿದ್ದಾರೆ. ಜೊತೆಗೆ ಕುರಿಯನ್ನೆ ಪಟ್ಟಣಕ್ಕೆ ಕರೆದುಕೊಂಡು ಬರುವಂತೆ ತಿಳಿಸುತ್ತಾರೆ ಎಂದು ಪಶು ವೈದ್ಯರ ವಿರುದ್ಧ ರೈತರು ಆಕ್ರೋಶ ವ್ಯಕ್ತಡಿಸಿದರು. ಜೊತೆಗೆ ಕುರಿಗಳ ಸಾವಿನಿಂದಾಗಿ ಉಂಟಾದ ನಷ್ಟವನ್ನು ಭರಿಸಲು ಪರಿಹಾರ ನೀಡಲು ಒತ್ತಾಯಿಸಿದರು. ಇದನ್ನೂ ಓದಿ: ಪುತ್ರನ ಮದುವೆ ಕಾರ್ಡ್ ಹಂಚಲು ಹೋದ ದಂಪತಿ ಮಸಣಕ್ಕೆ

  • ಜಗ್ಗೇಶ್ ಅಭಿಮಾನಿಗಳಿಂದ ಪುನೀತ್ ಹೆಸರಲ್ಲಿ ವೃದ್ಧೆಗೆ ಸೂರು

    ಜಗ್ಗೇಶ್ ಅಭಿಮಾನಿಗಳಿಂದ ಪುನೀತ್ ಹೆಸರಲ್ಲಿ ವೃದ್ಧೆಗೆ ಸೂರು

    ತುಮಕೂರು: ಪವರ್‌ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಗಲಿ ಒಂದು ತಿಂಗಳು ಕಳೆದಿದೆ. ಆದರೆ ಅವರ ಮೇಲಿನ ಅಭಿಮಾನ ಮಾತ್ರ ಅಭಿಮಾನಿಗಳಲ್ಲಿ ಇನ್ನು ಹೆಚ್ಚಾಗುತ್ತಿದೆ. ಇದಕ್ಕೆ ಉದಾಹರಣೆ ಎಂದರೆ ನವರಸ ನಾಯಕ ಜಗ್ಗೇಶ್ ಅಭಿಮಾನಿಗಳು ಅಪ್ಪು ಅವರ ಹೆಸರಲ್ಲಿ ವೃದ್ಧೆಗೆ ಮನೆಯೊಂದನ್ನು ಕಟ್ಟಿಕೊಟ್ಟು ‘ಪರಮಾತ್ಮ’ನನ್ನು ಕಾಣುತ್ತಿದ್ದಾರೆ.

    ಕನ್ನಡಿಗರ ಕಣ್ಮಣಿ, ಪುನೀತ್ ರಾಜ್‍ಕುಮಾರ್ ಮೇಲಿನ ಅಭಿಮಾನ ನಿರಂತರವಾಗಿ ವಿವಿಧ ಆಯಾಮದಲ್ಲಿ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಎಲ್ಲ ನಾಯಕ ನಟರ ಅಭಿಮಾನಿಗಳು ಅಪ್ಪು ಅಗಲಿಕೆಗೆ ಕಂಬನಿ ಮಿಡಿದಿದ್ದು ನಮ್ಮ ಕಣ್ಣ ಮುಂದೆ ಇದೆ. ಇನ್ನು ಒಂದು ಹೆಜ್ಜೆ ಮುಂದಕ್ಕೆ ಹೋಗಿ ಜಗ್ಗೇಶ್ ಅವರ ಅಭಿಮಾನಿಗಳು ಪುನೀತ್ ಅವರ ಹೆಸರಲ್ಲಿ ಅನಾಥ ವೃದ್ಧೆಗೆ ಸೂರೊಂದನ್ನು ಕಲ್ಪಿಸಿ ಕೊಟ್ಟು ಅಪ್ಪು ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿಗಳು ಸೇರಿ ರಂಗಮ್ಮ ವೃದ್ಧೆಗೆ ಪುಟ್ಟ ಮನೆಯೊಂದನ್ನು ಕಟ್ಟಿಕೊಟ್ಟಿದ್ದಾರೆ. ಈ ಮನೆಗೆ ‘ಪುನೀತ್ ನಿಲಯ’ ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.

    ಗಿರಿನಗರ ನಿವಾಸಿ ರಂಗಮ್ಮ ಅವರು ಗುಡಿಸಲಿನಲ್ಲಿ ವಾಸ ಮಾಡುತ್ತಾ ಶೋಚನೀಯ ಸ್ಥಿತಿಯಲ್ಲಿ ಇದ್ದರು. ಇದನ್ನು ಮನಗಂಡ ಜಗ್ಗೇಶ್ ಅಭಿಮಾನಿಗಳು ಹಣ ಹೊಂದಿಸಿ ಸ್ವತಃ ತಾವೇ ಶ್ರಮದಾನ ಮಾಡಿ ರಂಗಮ್ಮಗೆ ಸೂರು ಕಲ್ಪಿಸಿ ಕೊಟ್ಟಿದ್ದಾರೆ. ಈ ಸೂರಿಗೆ ಪುನೀತ್ ನಿಲಯ ಎಂದು ಹೆಸರಿಟ್ಟು ಅಪ್ಪು ಮೇಲಿನ ಅಭಿಮಾನ ವ್ಯಕ್ತಪಡಿಸಿದ್ದಾರೆ.

    ಮನೆ ನಿರ್ಮಾಣ ಕಳೆದ ನಾಲ್ಕು ತಿಂಗಳ ಹಿಂದೆಯೇ ಶುರುವಾದರೂ ಕೆಲ ಕಾರಣಗಳಿಂದ ಅರ್ಧಕ್ಕೆ ನಿಂತಿತ್ತು. ಅಪ್ಪು ಸಾವಿನ ಬಳಿಕ ಜಗ್ಗೇಶ್ ಅಭಿಮಾನಿಗಳು ಮತ್ತೆ ಕಾರ್ಯಪ್ರವರ್ತರಾದರು. ಅಪ್ಪು ಹೆಸರಲ್ಲಿ ಮನೆ ಕಟ್ಟಿ ಬಿಡೋಣ ಎಂದು ಅವರ ನಾಮಸ್ಮರಣೆ ಮಾಡುತ್ತಾ ಈ ಮನೆ ಸಂಪೂರ್ಣ ಮಾಡಿದರು. ಒಂದು ತಿಂಗಳಲ್ಲಿ ಮನೆ ನಿರ್ಮಾಣದ ಎಲ್ಲ ಕೆಲಸ ಮುಗಿಸಿ, ಸಿದ್ದರಬೆಟ್ಟ ವೀರಭದ್ರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನಿಧ್ಯದಲ್ಲಿ ಇಂದು ಗೃಹ ಪ್ರವೇಶ ಮಾಡಲಾಯಿತು. ಇದನ್ನೂ ಓದಿ:  ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಫ್ರೆಂಡ್ಸ್ ಗ್ರೂಪ್ ಹಾಗೂ ಜಗ್ಗೇಶ್ ಅಭಿಮಾನಿ ಸಂಘದಲ್ಲಿ ಸರಿಸುಮಾರು 800ಕ್ಕೂ ಹೆಚ್ಚು ಸದಸ್ಯರಿದ್ದಾರೆ. ಅವರಲ್ಲಿ ಗಾರೆ ಕೆಲಸ, ಎಲೆಕ್ಟ್ರಿಕ್, ಪ್ಲಂಬಿಂಗ್ ಹೀಗೆ ಎಲ್ಲ ಕೆಲಸ ಮಾಡುವ ಸದಸ್ಯರಿದ್ದಾರೆ. ಅವರೆಲ್ಲರೂ ತಮ್ಮ-ತಮ್ಮ ಪಾಲಿನ ಕೆಲಸ ಮಾಡಿ, ದಾನಿಗಳಿಂದ ಹಣ ಸಂಗ್ರಹಿಸಿ ಕಡಿಮೆ ಅವಧಿ ಮತ್ತು ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಟ್ಟಿದ್ದಾರೆ. 15*20 ಸುತ್ತಳತೆಯ ಸೈಟಿನಲ್ಲಿ ಮನೆಕಟ್ಟಿದ್ದಾರೆ. ಒಂದು ಹಾಲ್, ಅಡುಗೆ ಕೋಣೆ, ಅಟ್ಯಾಚ್ ಬಾತ್ ರೂಂ ಅನ್ನು ವ್ಯವಸ್ಥೆ ಮಾಡಿಕೊಡಲಾಗಿದೆ.

  • ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್

    ತುಮಕೂರು: ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ತಿಳಿಸಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಗಂಗಾ 7 ವಿದ್ಯಾರ್ಥಿಗಳಿಗೆ ಹಾಗೂ ವರದರಾಜ್ ನರ್ಸಿಂಗ್ ಕಾಲೇಜು 8 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಗರದಲ್ಲಿ ಒಟ್ಟು 15 ವಿದ್ಯಾರ್ಥಿಗಳಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇವರೆಲ್ಲರೂ ಕೇರಳದಿಂದ ಬಂದ ವಿದ್ಯಾರ್ಥಿಗಳಾಗಿದ್ದಾರೆ. ಆದ್ದರಿಂದ ಕೇರಳದ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.

     

    ಕೇರಳದ ವಿದ್ಯಾರ್ಥಿಗಳು ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನ ಎಲ್ಲಾ 180 ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಓಮಿಕ್ರಾನ್ ಪರೀಕ್ಷೆಗಾಗಿ ಲ್ಯಾಬ್‍ಗೆ ಸ್ವಾಬ್ ಮಾದರಿ ರವಾನೆ ಮಾಡಲಾಗಿದೆ.ಇದನ್ನೂ ಓದಿ: ನಾಳೆಯಿಂದ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಅನುಮತಿ- ವೀಕ್‍ಡೇಸ್‍ನಲ್ಲಿ ಅವಕಾಶ, ವೀಕೆಂಡ್‍ನಲ್ಲಿ ನಿರ್ಬಂಧ

    ಇದೇ ವೇಳೆ 15 ವಿದ್ಯಾರ್ಥಿಗಳ ಸ್ವಾಬ್‍ನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. 18 ವರ್ಷ ಮತ್ತು ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕನಿಷ್ಟ ಒಂದು ಡೋಸ್ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಮಾತ್ರ ತರಗತಿ ಅವಕಾಶ ನೀಡಲಾಗಿದೆ. ಲಸಿಕೆ ತೆಗೆದುಕೊಳ್ಳದ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ. ಈ ಕುರಿತು ಎಲ್ಲಾ ಕಾಲೇಜುಗಳಿಗೆ ಆದೇಶ ಕಳುಹಿಸಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೇಂದ್ರ ತೆಗೆದುಕೊಳ್ಳೋ ತೀರ್ಮಾನದ ಮೇಲೆ ಬೂಸ್ಟರ್ ಡೋಸ್ ನೀಡೋ ಬಗ್ಗೆ ತೀರ್ಮಾನ: ಸುಧಾಕರ್