Tag: tumkur

  • ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

    ಪ್ರಜ್ವಲ್ ಅಂತಹ ಸ್ವಭಾವದ ಹುಡುಗ ಅಲ್ಲ: ಜಿ.ಎಸ್ ಬಸವರಾಜ್

    ತುಮಕೂರು: ಪ್ರಜ್ವಲ್ ರೇವಣ್ಣ (Prajwal Revanna) ನನ್ನ ಆತ್ಮೀಯ ಸ್ನೇಹಿತ. ಅಂತಹ ಸ್ವಭಾವದ ಹುಡುಗ ಅಲ್ಲ ಎಂದು ಸಂಸದ ಜಿ.ಎಸ್ ಬಸವರಾಜ್ (G.S Basavaraj) ಹೇಳಿದ್ದಾರೆ.

    ತುಮಕೂರಿನಲ್ಲಿ (Tumkur) ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಜ್ವಲ್ ಅವರ ಮೇಲಿನ ಪ್ರಕರಣ ಸತ್ಯನೋ ಸುಳ್ಳೋ ಎಂಬುದು ತನಿಖೆ ಬಳಿಕ ತಿಳಿಯಲಿದೆ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ. ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೊಳಿಗೂ ಕೂಡ ಪಿತೂರಿ ಮಾಡಿ ಮನೆ ಹಾಳು ಮಾಡಿ ಮಾನ ಹರಾಜು ಹಾಕಿದ್ದಾರೆ ಎಂದರು.

    ಜಾರಕಿಹೋಳಿ ಪ್ರಕರಣದಲ್ಲಿ ವಿರೋಧ ಪಕ್ಷದವರೇ ಪಿತೂರಿ ಮಾಡಿದ್ದರು. ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದಿದ್ದಾರೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ನಿವಾಸಕ್ಕೆ ಎಸ್‍ಐಟಿ ತಂಡ – ಸಂತ್ರಸ್ತೆ ಸಮ್ಮುಖದಲ್ಲಿ ಸ್ಥಳ ಮಹಜರು

    ಏನಿದು ಪ್ರಕರಣ?: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳ ಪೆನ್‍ಡ್ರೈವ್ ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಸಂತ್ರಸ್ತೆಯರು ಮಹಿಳಾ ಆಯೋಗದ ಮೊರೆ ಹೋಗಿದ್ದು, ಸರ್ಕಾರ ಪ್ರಕರಣದ ತನಿಖೆಗೆ ಎಸ್‍ಐಟಿ ರಚನೆ ಮಾಡಿತ್ತು. ಇದಾದ ಬೆನ್ನಲ್ಲೇ ಮಾಜಿ ಸಚಿವ ರೇವಣ್ಣ ವಿರುದ್ಧ ಸಹ ಲೈಂಗಿಕ ದೌರ್ಜನ್ಯ ಹಾಗೂ ಸಂತ್ರಸ್ತೆಯ ಅಪಹರಣದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ಎಸ್‍ಐಟಿ ತನಿಖೆ ನಡೆಸುತ್ತಿದೆ. ಇನ್ನೂ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದು, ಅವರಿಗೆ ಲುಕೌಟ್ ನೋಟಿಸ್ ಜಾರಿಗೊಳಿಸಲಾಗಿದೆ. ಅಲ್ಲದೇ ರೇವಣ್ಣ ಸಹ ವಿದೇಶಕ್ಕೆ ತೆರಳುವ ಶಂಕೆಯ ಮೇಲೆ ಅವರ ಮೇಲೂ ಲುಕ್‍ಔಟ್ ನೋಟಿಸ್ ಜಾರಿಗೊಳಿಸಲಾಗಿದೆ.

    ಇಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದ ತನಿಖೆ ಆರಂಭಿಸಿರುವ ಎಸ್‍ಐಟಿ ಅಧಿಕಾರಿಗಳು, ಹೊಳೆನರಸೀಪುರದ ಅವರ ನಿವಾಸದಲ್ಲಿ ಸಂತ್ರಸ್ತೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಇದನ್ನೂ ಓದಿ: ಪೆನ್‌ಡ್ರೈವ್‌ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್‌ಗೆ ಗೆಲುವಿನ ಶುಭಾಶಯ!

  • ಡಿಕೆಸು ನಾಮಪತ್ರ ಸಲ್ಲಿಕೆಗೆ ತೆರಳಿದ್ದಕ್ಕೆ `ಕೈ’ ಮುಖಂಡನಿಗೆ ಚಾಕು ಇರಿತ – ಆರೋಪ

    ಡಿಕೆಸು ನಾಮಪತ್ರ ಸಲ್ಲಿಕೆಗೆ ತೆರಳಿದ್ದಕ್ಕೆ `ಕೈ’ ಮುಖಂಡನಿಗೆ ಚಾಕು ಇರಿತ – ಆರೋಪ

    ತುಮಕೂರು: ರಾಜಕೀಯ ದ್ವೇಷದಿಂದ ಯೂತ್ ಕಾಂಗ್ರೆಸ್ (Congress) ಪ್ರಧಾನ ಕಾರ್ಯದರ್ಶಿಗೆ ಚಾಕು ಇರಿದ ಪ್ರಕರಣ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ನಡೆದಿದೆ. ಡಿ.ಕೆ ಸುರೇಶ್  (D.K Suresh) ನಾಮಪತ್ರ ಸಲ್ಲಿಕೆಗೆ ತೆರಳಿದ್ದಕ್ಕೆ ಚಾಕು ಇರಿಯಲಾಗಿದೆ ಎಂಬ ಆರೋಪ ಕೇಳಿಬಂದಿದೆ.

    ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಕಾಂಗ್ರೆಸ್ ಮುಖಂಡ ಎಂದು ತಿಳಿದು ಬಂದಿದೆ. ಚಂದ್ರ, ಜಗದೀಶ್ ಹಾಗೂ ಸುನೀಲ್ ಎಂಬ ಮೂವರು, ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ಯಾಕೆ ತೆರಳಿದ್ದೆ ಎಂದು ಕೀರ್ತಿಯವರ ಬಳಿ ಜಗಳ ಆರಂಭಿಸಿದ್ದಾರೆ. ಬಳಿಕ ಮೂವರು ಸೇರಿ ಕೀರ್ತಿ ಮೇಲೆ ಚಾಕು, ದೊಣ್ಣೆಯಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹೆಂಡ್ತಿಯನ್ನ ಕ್ರೂರವಾಗಿ ಕೊಂದು, 200 ತುಂಡುಗಳಾಗಿ ಕತ್ತರಿಸಿ ನದಿಗೆ ಎಸೆದ ಹಂತಕ!

    ಚಾಕು ಇರಿತದಿಂದ ಗಾಯಗೊಂಡ ಕೀರ್ತಿಯನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕೀಯ ವೈಷಮ್ಯ ಹಿನ್ನೆಲೆ ಹಲ್ಲೆ ಮಾಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

    ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವಯನಾಡ್ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಮೃತದೇಹ ಪತ್ತೆ ಪ್ರಕರಣ – 29 ಗಂಟೆಗಳ ಕಾಲ ನಿರಂತರ ಹಲ್ಲೆ

  • ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ – ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‍ಐಆರ್

    ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ – ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ಎಫ್‍ಐಆರ್

    ತುಮಕೂರು: ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಶಾಸಕ ಎಸ್.ಆರ್ ಶ್ರೀನಿವಾಸ್ (Gubbi MLA S.R Srinivas) ಮೇಲೆ ಎಫ್‍ಐಆರ್ ದಾಖಲಾಗಿದೆ.

    ಟೆಂಡರ್ ಕಾಮಗಾರಿಯಲ್ಲಿ ಅನ್ಯಾಯ ನಡೆದಿದೆ ಎಂದು ಕಳೆದ ಗುರುವಾರ ರಾತ್ರಿ ಪಿಡಬ್ಲ್ಯೂಡಿ ಇಲಾಖೆ ಕಚೇರಿ ಮುಂಭಾಗ ಕಾಂಗ್ರೆಸ್ ಮುಖಂಡ ರಾಯಸಂದ್ರ ರವಿಕುಮಾರ್ ಧರಣಿಗೆ ಕುಳಿತಿದ್ದರು. ಈ ವೇಳೆ ಅವರ ಮೇಲೆ ಶಾಸಕ ಹಾಗೂ ಅವರ ಸಹಚರರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ರವಿಕುಮಾರ್ ನೀಡಿದ ದೂರಿನಡಿ ತುಮಕೂರಿನ (Tumkur) ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ (Tilak Park Police Station) ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಮದುವೆಗೆ ನಿರಾಕರಿಸಿದ ಪ್ರಿಯಕರ – ಮನನೊಂದ ಯುವತಿ ಕೆರೆಗೆ ಹಾರಿ ಆತ್ಮಹತ್ಯೆ

    ಐಪಿಸಿ ಸೆಕ್ಷನ್ 323 ಹಲ್ಲೆ, 363 ಕೊಲೆ ಯತ್ನ, 504 ಉದ್ದೇಶಪೂರ್ವಕ ಅವಮಾನ ಹಾಗೂ ಶಾಂತಿಭಂಗ ಸೇರಿದಂತೆ ಸೆಕ್ಷನ್ 511, 506,143, 149, ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಶಾಸಕ ಶ್ರೀನಿವಾಸ್ 1ನೇ ಆರೋಪಿಯಾಗಿದ್ದು, 10 ಜನ ಬೆಂಬಲಿಗರ ಮೇಲೆ ಎಫ್‍ಐಆರ್ ದಾಖಲಾಗಿದೆ. ಈ ಸಂಬಂಧ ತಿಲಕ್ ಪಾರ್ಕ್ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಉಜ್ಬೇಕಿಸ್ತಾನ್ ಮಹಿಳೆ ಕೊಲೆ ಕೇಸ್; ಹಣದಾಸೆಗೆ ನಡೆದಿತ್ತು ಕೃತ್ಯ – ಕೇರಳದಲ್ಲಿ ಇಬ್ಬರ ಬಂಧನ

  • ಸೋಮಣ್ಣಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡದಂತೆ ರಸ್ತೆ ತಡೆದು ಆಕ್ರೋಶ

    ಸೋಮಣ್ಣಗೆ ತುಮಕೂರು ಕ್ಷೇತ್ರದ ಟಿಕೆಟ್ ನೀಡದಂತೆ ರಸ್ತೆ ತಡೆದು ಆಕ್ರೋಶ

    – ಮಾಧುಸ್ವಾಮಿ ಅಭಿಮಾನಿಯಿಂದ ಪೆಟ್ರೋಲ್ ಸುರಿದುಕೊಂಡು ಹೈಡ್ರಾಮಾ

    ತುಮಕೂರು: ಮಾಜಿ ಸಚಿವ ವಿ.ಸೋಮಣ್ಣಗೆ (V.Somanna) ಟಿಕೆಟ್ ಕೊಡದಂತೆ ಜಿಲ್ಲೆಯ ನಾಲ್ಕು ತಾಲೂಕಿನ ಬಿಜೆಪಿ (BJP) ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

    ಚಿಕ್ಕನಾಯಕನಹಳ್ಳಿ, ಗುಬ್ಬಿ, ತಿಪಟೂರು, ತುರುವೇಕೆರೆ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ತಿಪಟೂರು ತಾಲೂಕಿನ ಕೆ.ಬಿ ಕ್ರಾಸ್‍ನಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ತುಮಕೂರು ಜಿಲ್ಲೆಗೆ ವಿ.ಸೋಮಣ್ಣಗೆ ಕೊಡುಗೆ ಏನೂ ಇಲ್ಲ. ಇದೇ ಕಾರಣಕ್ಕೆ ಸೋಮಣ್ಣಗೆ ಟಿಕೆಟ್ ಕೊಡಬಾರದು. ಸೋಮಣ್ಣ ಬದಲು ಜೆ.ಸಿ ಮಾಧುಸ್ವಾಮಿಗೆ (J.C. Madhu Swamy) ಟಿಕೆಟ್ ಕೊಡಬೇಕು ಎಂದು ಆಗ್ರಹಿಸಿ ರಸ್ತೆ ತಡೆದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೋದಿ ಗ್ಯಾರಂಟಿಗೆ ವಾರಂಟಿ ಇಲ್ಲ: ಟಿಎಂಸಿ ನಾಯಕ ಟೀಕೆ

    ಕ್ಷೇತ್ರಕ್ಕೆ ವಲಸೆ ಬರುವ ವಿ.ಸೋಮಣ್ಣಗೆ ಟಿಕೆಟ್ ಕೊಟ್ಟರೆ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ. ಅವರು ಬಂದರೆ ತುಮಕೂರು ಜಿಲ್ಲೆಗೆ ಗ್ರಹಣ ಹಿಡಿಯುತ್ತದೆ. ಸೋಮಣ್ಣ ರಾಜಕೀಯ ಆಕ್ರಮಣ ಮಾಡುತ್ತಾರೆ. ಇದರಿಂದ ಜಿಲ್ಲೆಯ ಜನ ವನವಾಸ ಬೀಳಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಸಂಸದ ಜಿ.ಎಸ್ ಬಸವರಾಜು ಅವರಿಗೆ ಧಿಕ್ಕಾರ ಕೂಗಿ, ಗೋ ಬ್ಯಾಕ್ ಸೋಮಣ್ಣ ಎಂದು ಘೋಷಣೆ ಕೂಗಿದ್ದಾರೆ. ಕೆ.ಬಿ.ಕ್ರಾಸ್ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸೋಮಣ್ಣ ಅವರಿಗೆ ಟಿಕೆಟ್ ಕೊಡದಂತೆ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದೇ ವೇಳೆ ಮಾಧುಸ್ವಾಮಿ ಅಭಿಮಾನಿಯೊಬ್ಬ, ಅವರಿಗೆ ಟಿಕೆಟ್ ಕೊಡುವಂತೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಹೈಡ್ರಾಮಾ ಸೃಷ್ಟಿಸಿದ ಘಟನೆಯೂ ನಡೆಯಿತು. ಇದನ್ನೂ ಓದಿ: ಚಿಕ್ಕಬಳ್ಳಾಪುರ ಕ್ಷೇತ್ರದ ಮುಖಂಡರ ಸಭೆ ನಡೆಸಿದ ಕುಮಾರಸ್ವಾಮಿ; ಕ್ಷೇತ್ರಕ್ಕೆ ಬನ್ನಿ ಎಂಬ ಒತ್ತಾಯ ತಿರಸ್ಕರಿಸಿದ ಹೆಚ್ಡಿಕೆ, ನಿಖಿಲ್

  • ಪಾವಗಡ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು

    ಪಾವಗಡ ಆಸ್ಪತ್ರೆಯಲ್ಲಿ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವು

    – ಮಹಿಳೆಯರ ಸಾವಿಗೆ ಶಸ್ತ್ರಚಿಕಿತ್ಸಾ ಕೊಠಡಿ ಅಶುಚಿತ್ವವೇ ಕಾರಣ
    – ಸ್ಟೆಫೆಲೋ ಕಾಕಲ್ ಬ್ಯಾಕ್ಟೀರಿಯಾದಿಂದ ಸಾವನ್ನಪ್ಪಿರಬಹುದು ಎಂದ ಡಿಹೆಚ್‌ಒ

    ತುಮಕೂರು: ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ (Surgery) ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ (Pavagada Government Hospital) ನಡೆದಿದೆ.

    ಸಂತಾನಹರಣ, ಗರ್ಭಕೋಶ ಆಪರೇಷನ್ ಹಾಗೂ ಸಿಸೇರಿಯನ್ (Cesarean) ಹೆರಿಗೆಗೆ ಒಳಗಾಗಿದ್ದ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕಳೆದ 5 ದಿನಗಳ ಅವಧಿಯಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದುಬೈನಲ್ಲಿ ಗೌಡರ ಗೌಜಿ ಗಮ್ಮತ್ತು-2024 – ಒಕ್ಕಲಿಗ ಸಮುದಾಯಗಳ ಕುಟುಂಬ ಸಮಾಗಮ 

    ಇದೇ ಫೆಬ್ರವರಿ 22ರಂದು 7 ಮಹಿಳೆಯರಿಗೆ ಹೆರಿಗೆ ಸೇರಿದಂತೆ ವಿವಿಧ ರೀತಿಯ ಶಸ್ತ್ರಚಿಕಿತ್ಸೆಗೆ ಮಾಡಲಾಗಿತ್ತು. ಈ ವೇಳೆ ಸಂತಾನ ಹರಣ ಚಿಕಿತ್ಸೆಗೆ ಒಳಗಾಗಿದ್ದ ವೀರ್ಲಗೊಂದಿ ಗ್ರಾಮದ ಮಹಿಳೆ ಅನಿತಾ (30) ಚಿಕಿತ್ಸೆ ಮಾಡಿಸಿಕೊಂಡ ದಿನವೇ ಸಾವನ್ನಪ್ಪಿದ್ದಾರೆ. ಇನ್ನೂ ರಾಜವಂತಿ ಮೂಲದ ಅಂಜಲಿ ಎಂಬ ಮಹಿಳೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಹೆರಿಗೆ ಬಳಿಕ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಆದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಫೆ.24ರಂದು ಅಂಜಲಿ ಸಾವನ್ನಪ್ಪಿದ್ದಾರೆ.

    ಮತ್ತೊಂದು ಪ್ರಕರಣದಲ್ಲಿ ಬ್ಯಾಡನೂರು ಗ್ರಾಮದ 40 ವರ್ಷದ ನರಸಮ್ಮ ಎಂಬ ಮಹಿಳೆ ಗರ್ಭಕೋಶದ ಶಸ್ತ್ರಚಿಕಿತ್ಸೆಗೆ ನಡೆಸಲಾಗಿತ್ತು. ನಸರಮ್ಮ ಸ್ಥಿತಿಯೂ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಫೆ.25 ರಂದು ನಸರಮ್ಮ ಸಾವನ್ನಪ್ಪಿದ್ದರು. ಈ ಮೂವರು ಫೆ.22ರಂದು ಆಸ್ಪತ್ರೆಗೆ ದಾಖಲಾಗಿದ್ದರು ಎಂದು ಹೇಳಲಾಗಿದೆ.

    ಇದೀಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಶಸ್ತ್ರಚಿಕಿತ್ಸೆಗೆ ನಡೆಸಿದ ವೈದ್ಯೆ ಡಾ. ಪೂಜಾ ಹಾಗೂ ನಿರ್ಲಕ್ಷ್ಯ ತೋರಿದ ಆಸ್ಪತ್ರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೃತರ ಭಾವಚಿತ್ರ ಹಿಡಿದು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ಆರೋಗ್ಯಾಧಿಕಾರಿ ಹೇಳಿದ್ದೇನು?
    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುನಾಥ್ `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ್ದಾರೆ. ಫೆ.22 ರಂದು ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ನಡೆದಿದೆ. ಒಟ್ಟು 7 ಮಹಿಳೆಯರಿಗೆ ಅಂದು ಸಂತಾನಹರಣ, ಸಿಸೇರಿಯನ್ ಮತ್ತು ಗರ್ಭಕೋಶದ ಶಸ್ತ್ರಚಿಕಿತ್ಸೆ ನಡೆದಿದೆ. ಈ ಘಟನೆಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಹೇಳೋಕಾಗಲ್ಲ. ಶಸ್ತ್ರಚಿಕಿತ್ಸಾ ಕೊಠಡಿ (ಆಪರೇಷನ್ ಥಿಯೇಟರ್ ಶುಚಿತ್ವ) ಇಲ್ಲದಿರೋದು ಕಾರಣ ಇರಬಹುದು. ಆಪರೇಷನ್ ಥಿಯೇಟರ್‌ನಲ್ಲಿ ಸ್ಟೆಫೆಲೋ ಕಾಕಲ್ ಬ್ಯಾಕ್ಟೀರಿಯಾ ಇದೆ. ಇದರಿಂದ ಮಹಿಳೆಯರು ಸಾವನ್ನಪ್ಪಿರಬಹುದು. ಬೆಂಗಳೂರಿನಿಂದ ತನಿಖಾ ತಂಡ ಬಂದು ಸ್ಯಾಂಪಲ್ ತೆಗೆದುಕೊಂಡು ಹೋಗಿದೆ. ವರದಿ ಬಂದ ನಂತರ ವೈದ್ಯರು ಸೇರಿದಂತೆ ಸಿಬ್ಬಂದಿ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

  • ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್?

    ಬೆಳಗಾವಿ, ತುಮಕೂರು ಜಿಲ್ಲೆಗಳ ವಿಭಜನೆ ಫಿಕ್ಸ್?

    – ಬಜೆಟ್‌ನಲ್ಲಿ ಹೊಸ ಜಿಲ್ಲೆಗಳ ಘೋಷಣೆ ಮಾಡುತ್ತಾ ಸರ್ಕಾರ?

    ಬೆಳಗಾವಿ: ಫೆ.16ರಂದು (ಶುಕ್ರವಾರ) ಸಿಎಂ ಸಿದ್ದರಾಮಯ್ಯ (Siddaramaiah) ರಾಜ್ಯ ಸರ್ಕಾರದ ಪೂರ್ಣಾವಧಿ ಬಜೆಟ್ ಮಂಡನೆ ಮಾಡಲಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಮಂಡಿಸಲಿರುವ ದಾಖಲೆಯ 15ನೇ ಬಜೆಟ್ ಸಹ ಇದಾಗಿದೆ. ಬಜೆಟ್‌ನಲ್ಲಿ ಸರ್ಕಾರ ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವ ಸಾಧ್ಯತೆಗಳಿದ್ದು, ಬೆಳಗಾವಿ ಮತ್ತು ತುಮಕೂರು (Belagavi, Tumkur) ಜಿಲ್ಲೆ ವಿಭಜನೆ ಫಿಕ್ಸ್ ಆಗುತ್ತಾ ಅನ್ನೋ ಪ್ರಶ್ನೆ ಎದಿದೆ.

    ಇದೇ ಫೆಬ್ರವರಿ 8ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯಲ್ಲಿ, ಅಸ್ತಿತ್ವದಲ್ಲಿ ಇರೋ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ನೋಂದಣಿ ಕಾಯ್ದೆ 1908 (ಕೇಂದ್ರ ಅಧಿನಿಯಮ 16, 1908) ಅಡಿಯಲ್ಲಿ ಜಿಲ್ಲೆಗಳ ಮಿತಿಯನ್ನು ಪುನರ್ ರಚಿಸುವ ಬಗ್ಗೆ ಉಲ್ಲೇಖಿಸಿತ್ತು. ಈ ಪೈಕಿ ರಾಜ್ಯದಲ್ಲಿ ದೊಡ್ಡ ಜಿಲ್ಲೆಗಳಾಗಿರುವ ಬೆಳಗಾವಿ ಹಾಗೂ ತುಮಕೂರು ಜಿಲ್ಲೆಗಳ ಹೆಸರನ್ನು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ‘ಮಿಂಟೋ’ ಆಸ್ಪತ್ರೆಯ ಕರ್ಮಕಾಂಡ – ಆಸ್ಪತ್ರೆಗೆ ಬೀಗ ಹಾಕಿ ರಸ್ತೆಯಲ್ಲೇ ರೋಗಿಗಳಿಗೆ ಚಿಕಿತ್ಸೆ

    ಸದ್ಯ ಜಿಲ್ಲೆಗಳ ವಿಭಜನೆಯ ಸದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಪ್ರತ್ಯೇಕ ಜಿಲ್ಲೆಗಾಗಿ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಹಾಗೂ ಅಥಣಿ ನಡುವೆ ಫೈಟ್ ನಡೆಯುತ್ತಿದ್ದು, ಜನಪ್ರತಿನಿಧಿಗಳು ಅಲರ್ಟ್ ಆಗಿದ್ದಾರೆ. ಹಾಗಾಗಿ ಗುರುವಾರ (ಇಂದು) ಬೆಳಗಾವಿ ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಸಾಧ್ಯತೆಗಳಿದ್ದು, ತಮ್ಮ ಬೇಡಿಕೆಗಳನ್ನು ಮುಂದಿಡಲಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಲೋಕಸಭೆ ಚುನಾವಣೆ: RSS ಹಿನ್ನೆಲೆಯುಳ್ಳ ಅಭ್ಯರ್ಥಿಗಳು ಬಿಜೆಪಿಯಿಂದ ಕಣಕ್ಕೆ?

    ಸಿಎಂ ದಾಖಲೆ ಬಜೆಟ್ ಮಂಡನೆ:
    2023ರಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಪೂರ್ಣಾವಧಿ ಬಜೆಟ್ ಮಂಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ಅವರ ದಾಖಲೆಯ 15ನೇ ಬಜೆಟ್ ಆಗಿದೆ. ಕಳೆದ ವರ್ಷ ಮಧ್ಯಂತರ ಬಜೆಟ್ ಮಂಡಿಸಿದ್ದರು. ಇದೀಗ ಪೂರ್ಣಾವಧಿ ಬಜೆಟ್ ಮಂಡಿಸುತ್ತಿದ್ದು, ರಾಜ್ಯದ ಜನರು ಹಲವು ನಿರೀಕ್ಷೆಗಳನ್ನಿಟ್ಟುಕೊಂಡಿದ್ದಾರೆ. ಇದನ್ನೂ ಓದಿ: ನಿಗೂಢ ಕೆಲಸಕ್ಕೆ 42 ಅಕ್ರಮ ಸಿಮ್‌ಗಳೊಂದಿಗೆ ಬೆಂಗಳೂರಿಗೆ ಹೊರಟಿದ್ದ ಯುವಕರು ಅರೆಸ್ಟ್‌ 

  • ಗೃಹ ಇಲಾಖೆ ಕಾರ್ಯದರ್ಶಿಗೆ ನಿಂದನೆ- ದೆಹಲಿ ಪೊಲೀಸರಿಂದ ಆರೋಪಿ ಬಂಧನ

    ಗೃಹ ಇಲಾಖೆ ಕಾರ್ಯದರ್ಶಿಗೆ ನಿಂದನೆ- ದೆಹಲಿ ಪೊಲೀಸರಿಂದ ಆರೋಪಿ ಬಂಧನ

    ತುಮಕೂರು: ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಕರೆ ಮಾಡಿ ನಿಂದನೆ ಮಾಡಿದ ಆರೋಪದ ಮೇಲೆ ಪಾವಗಡ ತಾಲೂಕಿನ ವೆಂಕಟಾಪುರದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು (Delhi Police) ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಗ್ರಾಮದ ನಿರಂಜನ್ (40) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ಆರೋಪಿ ಫೋನ್ ಮಾಡಿ ನಿಂದನೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ ಆತನನ್ನ ಹುಡುಕಿಕೊಂಡು ದೆಹಲಿ ಪೊಲೀಸರು ಬಂದಿದ್ದು, ಇದೀಗ ಆತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು CWRC ಶಿಫಾರಸು

    ಎಂಜಿನಿಯರ್ ಪದವೀಧರನಾಗಿರುವ ನಿರಂಜನ್, ಕೆಲಸವಿಲ್ಲದೇ ನಿರುದ್ಯೋಗಿಯಾಗಿದ್ದು ಸದಾ ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ದೊರಕಿದೆ. ಕೆಲಸ ಸಿಗದ ಹಿನ್ನೆಲೆ ಮನನೊಂದು ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿಗೆ ನಿಂದನೆ ಮಾಡಿದ್ದಾನೆ ಎನ್ನಲಾಗಿದೆ. ನಿರಂಜನ್ ನಿಂದನೆ ಮಾಡಿರುವ ಮಾಹಿತಿ ಬಗ್ಗೆ ಪೊಲೀಸರು ಯಾವುದೇ ಸುಳಿವು ಬಿಟ್ಟು ಕೊಟ್ಟಿಲ್ಲ.

    ಆರೋಪಿಯ ಸ್ನೇಹಿತರು ಹಾಗೂ ಗ್ರಾಮಸ್ಥರ ಬಳಿ ಸ್ಥಳೀಯ ಪೊಲೀಸರ ಸಹಾಯದಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಇದನ್ನೂ ಓದಿ: ಅಪಘಾತದಿಂದ ಯುವಕನ ಸಾವಿಗೆ ನಾನೇ ಕಾರಣ ಎಂದು ಆತ್ಮಹತ್ಯೆಗೆ ಶರಣಾದ!

  • ಕೆಐಆರ್‌ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ 165 ಪಟ್ಟು ಅಧಿಕ ಆಸ್ತಿ ಪತ್ತೆ

    ಕೆಐಆರ್‌ಡಿಎಲ್ ಇಇ ಮನೆ ಮೇಲೆ ಲೋಕಾ ದಾಳಿ – ಆದಾಯಕ್ಕಿಂತಲೂ 165 ಪಟ್ಟು ಅಧಿಕ ಆಸ್ತಿ ಪತ್ತೆ

    ತುಮಕೂರು: ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದೇ ರೀತಿ ತುಮಕೂರಿನ (Tumkur) ಕೆಐಆರ್‌ಡಿಎಲ್‌ನ (KIRDL) ಮಧುಗಿರಿ (Madhugiri) ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಹನುಮಂತರಾಯಪ್ಪ ಅವರ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದಾರೆ.

    ತುಮಕೂರು ಲೋಕಾಯುಕ್ತ ಎಸ್‍ಪಿ ವಲಿ ಭಾಷಾ ಅವರ ನೇತೃತ್ವದಲ್ಲಿ ಮೂವರು ಡಿವೈಎಸ್‍ಪಿಗಳು ಸೇರಿದಂತೆ ಆರು ತಂಡಗಳು ಆರು ಕಡೆಗಳಲ್ಲಿ ದಾಳಿ ನಡೆಸಿವೆ. ಈ ಬಗ್ಗೆ ವಿವರ ನೀಡಿದ ಎಸ್‍ಪಿ ವಲಿ ಭಾಷಾ, ಕಾರ್ಯಪಾಲಕ ಇಂಜಿನಿಯರ್ ಹನುಮಂತರಾಯಪ್ಪ ಅವರು 1996ರಲ್ಲಿ ಕೆಲಸಕ್ಕೆ ಸೇರಿದ್ದರು. ಅವರ ಆದಾಯಕ್ಕಿಂತ 165 ಪಟ್ಟು ಆಸ್ತಿ ಹೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಒಟ್ಟು 3.69 ಕೋಟಿ ರೂ.ಗಳಷ್ಟು ಆಸ್ತಿ ಗಳಿಸಿರುವುದು ಲೋಕಾಯುಕ್ತ ದಾಳಿಯಿಂದ ತಿಳಿದು ಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತ್‌ ಜೋಡೊ ನ್ಯಾಯ ಯಾತ್ರೆ ವೇಳೆ ರಾಹುಲ್‌ ಗಾಂಧಿ ಕಾರಿನ ಗಾಜು ಪುಡಿಪುಡಿ

    ಅವರ ಆಸ್ತಿಯಲ್ಲಿ ಮೂರು ಅಂತಸ್ತಿನ 3 ಮನೆಗಳು, ಗುಬ್ಬಿ ತಾಲೂಕಿನಲ್ಲಿ 8 ಎಕರೆ ಜಮೀನನ್ನು ಖರೀದಿಸಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಎರಡು ನಿವೇಶನ, ಮಲ್ಲಸಂದ್ರ ಹಾಗೂ ಬಡಕನಪಾಳ್ಯದಲ್ಲಿ ತಲಾ ಒಂದೊಂದು ಫಾರ್ಮ್ ಹೌಸ್ ಇರುವುದು ತಿಳಿದು ಬಂದಿದೆ. ಸಿರಾ ಗೇಟ್‍ನ ಮನೆಯಲ್ಲಿ ಬೆಳ್ಳಿ ಮತ್ತು ಚಿನ್ನದ ಆಭರಣಗಳು ಪತ್ತೆಯಾಗಿವೆ. ಸುಮಾರು 300 ಗ್ರಾಂ ಚಿನ್ನದ ಒಡವೆಗಳು, 500 ಗ್ರಾಂ ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಇದನ್ನೂ ಓದಿ: ಹಿಂದೂಗಳಿಗೆ ದೊಡ್ಡ ಗೆಲುವು – ಜ್ಞಾನವಾಪಿ ಮಸೀದಿಯಲ್ಲಿ ಮೂರ್ತಿಗಳಿಗೆ ಪೂಜೆ ಮಾಡಲು ಅನುಮತಿ

  • ಬಸವಣ್ಣನವರ ತತ್ವ ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ: ಕೆ.ಎನ್ ರಾಜಣ್ಣ

    ಬಸವಣ್ಣನವರ ತತ್ವ ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ: ಕೆ.ಎನ್ ರಾಜಣ್ಣ

    ತುಮಕೂರು: ಬಸವಣ್ಣನವರ (Basavanna) ತತ್ವಗಳು ಜಾರಿ ಆಗಿದ್ದರೆ ಧರ್ಮಗಳ ನಡುವೆ ಈ ದ್ವೇಷ ಇರುತ್ತಿರಲಿಲ್ಲ ಎಂದು ಸಚಿವ ಕೆ.ಎನ್ ರಾಜಣ್ಣ (K.N Rajanna), ಬಿಜೆಪಿ (BJP)  ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಸ್ವಾಮೀಜಿಗಳ ನಿರ್ದೇಶನದ ಮೇರೆಗೆ ನಾನು ಮಾತನಾಡುತ್ತಿದ್ದೇನೆ. 12 ನೇ ಶತಮಾನದಲ್ಲಿ ಬಸವಣ್ಣ ಅವರು ಮಾಡಿದ ಕೆಲಸವನ್ನು ಈಗ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಹಾಗಂತ ಹಿಂದೆ ಯಡಿಯೂರಪ್ಪನವರು ಏನೂ ಮಾಡಿಲ್ಲ ಅಂತ ಅರ್ಥವಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಹೊಗಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣ ಪ್ರತಿಷ್ಠೆ; ಅಯೋಧ್ಯೆಗೆ ಖಾಸಗಿ ವಿಮಾನದಲ್ಲಿ ಹೊರಟ ದೊಡ್ಡಗೌಡ್ರ ಕುಟುಂಬ

    ಸರ್ಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಇಟ್ಟು, ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದು ಸಿದ್ದರಾಮಯ್ಯನವರು. ಕಟ್ಟಕಡೆಯ ಜನರಿಗೂ ತಲುಪುವಂತೆ ಮಾಡಿದ್ದು ಅವರೇ ಎಂದು ತಿಳಿಸಿದ್ದಾರೆ. ಇವತ್ತು ಸಮಾಜದಲ್ಲಿ ಇರುವ ಪರಸ್ಪರ ಧರ್ಮಗಳ ನಡುವೆ ದ್ವೇಷದ ವಾತಾವರಣ ಮುಂದುವರೆದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಯಡಿಯೂರಪ್ಪ ಕುರಿತು ಮಾತನಾಡಿ, ಯಡಿಯೂರಪ್ಪನವರು ರೈತರ ಬಗ್ಗೆ ಕೆಲಸ ಮಾಡಿದ್ದಾರಾ? ರೈತರ ಸಾಲ ಮನ್ನಾ ಮಾಡುವಾಗ ಅವರು ಆಡಿದ ಮಾತು ನನಗೆ ಇಷ್ಟ ಆಗಿಲ್ಲ. ನೋಟ್ ಪ್ರಿಂಟ್ ಮಿಷನ್ ಇಟ್ಟುಕೊಂಡಿದ್ದೀನಾ ಎಂದು ಹೇಳಿದ್ದರು. ಆದರೆ ಆವತ್ತಿನ ಪರಿಸ್ಥಿತಿ ಹಾಗೆ ಇತ್ತೇನೋ ಎಂದು ವೇದಿಕೆಯ ಮೇಲೆಯೇ ರಾಜಣ್ಣ ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ

  • ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

    ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

    ತುಮಕೂರು: ಅಯೋಧ್ಯೆಯಲ್ಲಿ (Ayodhya) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಗೆ ಕೌಂಟ್‌ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಡಗರ ಮನೆ ಮಾಡಿದೆ. ಈ ನಡುವೆ ಶ್ರೀರಾಮನ ಭಕ್ತಿಯಲ್ಲೇ ಮುಳುಗಿರುವ ತುಮಕೂರಿನ (Tumkur) ಕುಟುಂಬವೊಂದು ವಿಭಿನ್ನ ರೀತಿಯಲ್ಲಿ ತನ್ನ ಭ್ತಕ್ತಿಯನ್ನು ಪ್ರದರ್ಶಿಸಿದೆ.

    ಹೌದು. ತುಮಕೂರಿನ ಕುಟುಂಬವೊಂದು ಇಟ್ಟಿಗೆಯಲ್ಲಿಯೇ (Brick) ಸಾಕ್ಷಾತ್ ಶ್ರೀರಾಮನನ್ನ ಕಾಣುತ್ತಿದೆ. ಹೇಗೆಂದರೆ ಕಳದ 30 ವರ್ಷದಿಂದ ಶ್ರೀರಾಮನ ಮೂಲಗದ್ದುಗೆಯ ಇಟ್ಟಿಗೆಗೆ ಮನೆಯಲ್ಲಿ ಪೂಜೆ ಸಲ್ಲಿಸುತ್ತಿರುವ ಕರ ಸೇವಕ ಕಾಂಡಿಮೆಂಟ್ ಶಿವಣ್ಣರ ಕುಟುಂಬ ಅಣು ಅಣುವಿನಲ್ಲಿಯೂ ರಾಮನನ್ನ ನೆನೆದು ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆಗೆ ಕೌಂಟ್‌ಡೌನ್ – ಬೆಂಗ್ಳೂರಿನಿಂದ ಅಯೋಧ್ಯೆಗೆ ಹೆಚ್ಚುವರಿ ರೈಲು ಸೇವೆ, ಇಲ್ಲಿದೆ ಡಿಟೇಲ್ಸ್‌

    ಕಳೆದ 30 ವರ್ಷಗಳಿಂದ ಇಟ್ಟಿಗೆಯನ್ನೇ ಶ್ರೀರಾಮ ಎಂದು ಪೂಜಿಸುತ್ತಾ ಬಂದಿದೆ. ಕಾಂಡಿಮೆಂಟ್ ಶಿವಣ್ಣ ಎರಡು ಬಾರಿ ಕರಸೇವಕರಾಗಿ ಆಯೋಧ್ಯೆಗೆ ಹೋಗಿದ್ದರು. ಬಾಬ್ರಿ ಮಸೀದಿ ಕೆಡವಿದಾಗ ರಾಮನ ಮೂಲ ಗದ್ದುಗೆ ಪತ್ತೆಯಾಗಿತ್ತು. ಆ ಗದ್ದಿಗೆಯ 4 ಇಟ್ಟಿಗೆಯನ್ನು ಶಿವಣ್ಣ ತಮ್ಮ ಮನೆಗೆ ತಂದಿದ್ದಾರೆ. ಇಟ್ಟಿಗೆಯನ್ನು ದೈವ ಸ್ವರೂಪಿ ಎಂದು ನಂಬಿದ ಶಿವಣ್ಣನ ಕುಟುಂಬ ನಿರಂತರವಾಗಿ ಪೂಜಿಸುತ್ತಾ ಬಂದಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಮರುಪರೀಕ್ಷೆ ಪತ್ರಿಕೆ ಲೀಕ್ ಆರೋಪ- ಆಡಿಯೋ ಸೂತ್ರಧಾರ ಎಸ್‍ಐ ಸ್ಫೋಟಕ ಹೇಳಿಕೆ

    ಅಯೋಧ್ಯೆ ಮೂಲಗದ್ದುಗೆಯಿಂದ ತಂದ 4 ಇಟ್ಟಿಗೆಯನ್ನು ಶ್ರೀರಾಮ ಎಂಬ ಉದ್ಘೋಷ ಇರುವ ಮಡಿ ವಸ್ತçದಲ್ಲಿ ಕಟ್ಟಿ ಇಟ್ಟಿದ್ದಾರೆ. ಪ್ರತಿ ದಿನದ ಪೂಜೆ ಮಾಡುವುದರೊಂದಿಗೆ, ಪ್ರತಿವರ್ಷ ರಾಮ ನಮವಿ ಹಬ್ಬದಂದು ವಿಶೇಷ ಪೂಜೆ ಮಾಡಿ ಪಾನಕ ಹಂಚುತ್ತಾರೆ. ರಾಮ ನವಮಿಯಂದು ಬಟ್ಟೆಯಿಂದ ಇಟ್ಟಿಗೆ ಹೊರ ತೆಗೆದು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ: ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಗೆ ಸಜ್ಜಾದ ರಾಮಮಂದಿರ- ಫೋಟೋಗಳಲ್ಲಿ ನೋಡಿ..