Tag: tumkur

  • ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್‌ ಜೋರು

    ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್‌ ಜೋರು

    ತುಮಕೂರು: ಪ್ರಧಾನಿ ನರೇಂದ್ರ ಮೋದಿ ತುಮಕೂರು (Tumkuru) ಜಿಲ್ಲೆಗೆ ಭೇಟಿ ಕೊಡುತ್ತಿದ್ದಂತೆ ಮುಖಂಡರಲ್ಲಿ, ಕಾರ್ಯಕರ್ತರಲ್ಲಿ ಜೋಶ್ ಹೆಚ್ಚಾಗಿರುವುದು ಕಾಣುತ್ತಿದೆ. ಒಂದಿಷ್ಟು ಕ್ಷೇತ್ರವನ್ನು ಅನಾಯಸವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಹಾಕಿಕೊಂಡ ಬಿಜೆಪಿ ಮುಖಂಡರು ಅಂತಹ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಲಾಬಿ ಶುರುಮಾಡಿಕೊಂಡಿದ್ದಾರೆ.

    ಶಿರಾ ಕ್ಷೇತ್ರವನ್ನೂ ಸುಲಭವಾಗಿ ಕಬ್ಜಾ ಮಾಡಿಕೊಳ್ಳಬಹುದು ಎನ್ನುವುದು ಬಿಜೆಪಿ ಲೆಕ್ಕಾಚಾರ‌. ಈ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ಶಾಸಕರು ಇದ್ದರೂ ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಈ ಬಾರಿ ತನಗೆ ಟಿಕೆಟ್ ಕೊಡಬೇಕು ಎಂದು ಫೈಟ್ ಶುರು ಮಾಡಿದ್ದಾರೆ. ಬಿಜೆಪಿಯ ಸಂಘಟನಾತ್ಮಕ ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ. ಮಂಜುನಾಥ್‌ ಈ ಭಾಗದ ಪ್ರಭಾವಿ ನಾಯಕ. ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ನಾನು ಕಟ್ಟಿ ಬೆಳೆಸಿದ್ದೇನೆ. ಕಳೆದ ಉಪಚುನಾವಣೆಯಲ್ಲಿ ಪಕ್ಷಕ್ಕಾಗಿ ತ್ಯಾಗ ಮಾಡಿದ್ದೇನೆ. ಈ ಬಾರಿ ನನಗೆ ಟಿಕೆಟ್ ಕೊಡಬೇಕು ಎಂದು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದಾರೆ.

    ಶಿರಾ (Sira) ಕ್ಷೇತ್ರದಲ್ಲಿ ಬಿಜೆಪಿ (BJP) ನೆಲೆ ಕಂಡಿದ್ದು ನನ್ನಿಂದ, ಪ್ರಧಾನಿ ಮೋದಿ (Narendra Modi) ಆಗಮನದಿಂದಾಗಿ ಜಿಲ್ಲೆಯಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ. ಶಿರಾ ಕ್ಷೇತ್ರವನ್ನು ಕಷ್ಟ ಇಲ್ಲದೇ ಗೆಲ್ಲುತ್ತೇವೆ. ಹಾಗಾಗಿ ನನಗೆ ಟಿಕೆಟ್ ನೀಡಬೇಕು ಎಂದು ಬಿ.ಕೆ.ಮಂಜುನಾಥ್‌ ಒತ್ತಾಯಿಸಿದ್ದಾರೆ. ಟಿಕೆಟ್ ನೀಡುವಂತೆ ಈಗಾಗಲೇ ರಾಜ್ಯಾಧ್ಯಕ್ಷರು ಹಾಗೂ ರಾಷ್ಟ್ರೀಯ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಬಿ.ಕೆ.ಮಂಜುನಾಥ್‌ ತಿಳಿಸಿದ್ದಾರೆ. ಸರ್ವೆ ಮಾಡಿ ಟಿಕೆಟ್ ಕೊಡುವ ಭರವಸೆ ಹೈಕಮಾಂಡ್ ನೀಡಿದ್ದು, ಸರ್ವೆಯಲ್ಲೂ ನಾನು ಮುಂದಿರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಬಿ.ಕೆ.ಮಂಜುನಾಥ್‌ ಬಿಜೆಪಿಯ ಸಂಘಟನಾತ್ಮಕ ಜಿಲ್ಲೆಯಾದ ಕೊರಟಗೆರೆ, ಮಧುಗಿರಿ, ಪಾವಗಡ ಹಾಗೂ ಶಿರಾ ಕ್ಷೇತ್ರದ ಜಿಲ್ಲಾಧ್ಯಕ್ಷ. ಈ ಭಾಗದಲ್ಲಿ ಕಮಲವನ್ನೂ ಗಟ್ಟಿಗೊಳಿಸಿದ್ದವರೂ ಹೌದು. ಸ್ವತಃ ಜಿಲ್ಲಾಧ್ಯಕ್ಷರೇ ಹಾಲಿ ಶಾಸಕರಿದ್ದರೂ ಟಿಕೆಟ್ ಕೇಳುತ್ತಿರುವುದು ಬಿಜೆಪಿಗೆ ಇರಿಸು ಮುರುಸಾಗಿದೆ. ಇದನ್ನೂ ಓದಿ: Turkey, Syria Earthquake: 7,900ಕ್ಕೇರಿದ ಸಾವಿನ ಸಂಖ್ಯೆ – ಅವಶೇಷಗಳಡಿ ಕೇಳುತ್ತಿದೆ ಸಂತ್ರಸ್ತರ ಚೀತ್ಕಾರ

    ಬಿ.ಕೆ.ಮಂಜುನಾಥ ಮಾತನಾಡಿ, ಶಾಸಕ ಡಾ. ರಾಜೇಶ್ ಗೌಡರು ಒಳ್ಳೆಯ ವ್ಯಕ್ತಿ ಎಂದಿದ್ದಾರೆ. ಜೊತೆಗೆ ಶಿರಾ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು. ಮದಲೂರು ಕೆರೆಗೆ ನೀರು ಹರಿಸುವ‌ ಭರವಸೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನವನ್ನು ಅವರು ಸರ್ಕಾರದ ಸಹಕಾರದಿಂದ ಮಾಡಿದ್ದಾರೆ. ವಿಶೇಷವಾಗಿ ಕಾಡುಗೊಲ್ಲರ ಆರಾಧ್ಯ ದೈವ ಜುಂಜಪ್ಪನ ಕಟ್ಟೆ ನಿರ್ಮಾಣನೂ ಮಾಡಿದ್ದಾರೆ. ಅವರು ಮಾಡಿದ ಅಭಿವೃದ್ಧಿ ಕೆಲಸಕ್ಕೆ ನಾವೆಲ್ಲ ಕೈ ಜೋಡಿಸಿದ್ದೇವೆ ಎಂದರು. ನಾನು ಟಿಕೆಟ್ ಕೇಳುತ್ತಿರುವುದರಿಂದಾಗಿ ನಮ್ಮಿಬ್ಬರ ವೈಮನಸ್ಸು ಇದೆ ಎಂದಲ್ಲ. ನಾನು ನನ್ನ ಹಕ್ಕನ್ನು ಪ್ರತಿಪಾದಿಸಿದ್ದೇನೆ ಎಂದರು. ಇದನ್ನೂ ಓದಿ: ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧನ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದ ಪಂಚರತ್ನ ಯಾತ್ರೆಯ 500 ಬಗೆಯ ಹಾರಗಳು

    ಏಷ್ಯಾ ಬುಕ್ ಆಫ್ ರೆಕಾರ್ಡ್ ಸೇರಿದ ಪಂಚರತ್ನ ಯಾತ್ರೆಯ 500 ಬಗೆಯ ಹಾರಗಳು

    – ಹೆಚ್‌ಡಿಕೆಗೆ ಕೊತ್ತಂಬರಿ, ಸೌತೆಕಾಯಿ, ಕಬ್ಬು ಮೋಸಂಬಿ ಸೇರಿ ಹಲವು ಬಗೆಯ ಹಾರ
    – ಅಭಿಮಾನಿಗಳ ಹಾರೈಕೆ, ಹೆಚ್‌ಡಿಕೆ ಕೃತಜ್ಞತೆ

    ತುಮಕೂರು: 2023ರ ವಿಧಾನಸಭಾ ಚುನಾವಣಾ (Assembly Election 2023) ಪ್ರಚಾರದ ಭಾಗವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ನಡೆಯುತ್ತಿರುವ `ಪಂಚರತ್ನ ಯಾತ್ರೆ’ಯಲ್ಲಿ (PanchaRatna Yatra) ವಿವಿಧ ಬಗೆಯ ಹಾರಗಳು ಗಮನ ಸೆಳೆದಿವೆ. ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಹಾಕಿರುವ ಸುಮಾರು 500 ಬಗೆಯ ವಿಭಿನ್ನ ಹಾರಗಳು ಗಿನ್ನಿಸ್ ದಾಖಲೆ ಮಾಡಿದ್ದು, ಏಷ್ಯಾ ಬುಕ್ ಆಫ್ ರೆಕಾರ್ಡ್‌ಗೆ (Asia Book Of Records) ಸೇರಿವೆ.

    ಕೊತ್ತಂಬರಿ, ಮೋಸಂಬಿ, ಕಬ್ಬು, ಸೌತೆಕಾಯಿ, ಸೇಬು, ದಾಳಿಂಬೆ ಸೇರಿದಂತೆ ಪಂಚರತ್ನ ಯಾತ್ರೆಯಲ್ಲಿ ಅಭಿಮಾನಿಗಳು 500ಕ್ಕೂ ಹೆಚ್ಚು ಬಗೆಯ ಹಾರಗಳನ್ನು ಹಾಕಿದ್ದು, ಗಿನ್ನಿಸ್ ದಾಖಲೆಯಾಗಿದೆ. ಇದು ಏಷ್ಯಾ (Asia Book Of Records) ಹಾಗೂ ಇಂಡಿಯಾ ಬುಕ್ ಆಫ್ ರೆಕಾರ್ಡ್ (India Book Of Records) ಸೇರಿದೆ. ಇಡೀ ದೇಶದಲ್ಲಿ ಇಷ್ಟು ಬಗೆಯ ಹಾರಗಳನ್ನು ಹಾಕಿದ್ದು ಇದೇ ಮೊದಲಾಗಿದೆ. ಹಾಗಾಗಿ ಏಷ್ಯಾ ಬುಕ್ ಆಫ್ ರೆಕಾರ್ಡ್‌ನ ಪ್ರಮುಖರು ಹೆಚ್‌ಡಿಕೆಗೆ ಮೆಡಲ್ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಪತ್ನಿ ದೀಪಿಕಾಗಾಗಿ 119 ಕೋಟಿ ಬೆಲೆ ಮನೆ ಖರೀದಿಸಿದ ರಣ್ವೀರ್ ಸಿಂಗ್

    ಲಿಂಗಾಯತ, ಒಕ್ಕಲಿಗರನ್ನ ಮಂಗ ಮಾಡಿದ್ದಾರೆ: ತುಮಕೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಿಎಂ, ಮೀಸಲಾತಿ (Reservation) ವಿಚಾರದಲ್ಲಿ ಬಿಜೆಪಿ (BJP) ವಿರುದ್ಧ ಕಿಡಿ ಕಾರಿದ್ದಾರೆ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ಮೇಲೆ ಒತ್ತಡ ಇದೆ. ಕೆಲವು ಮಾರ್ಪಾಡು ಮಾಡಿಕೊಂಡಿದ್ದಾರೆ. ವೀರೇಶ್ವರ ಲಿಂಗಾಯತ ಹಾಗೂ ಒಕ್ಕಲಿಗರನ್ನು ಮಂಗ ಮಾಡಿದ್ದಾರೆ. 3ಎ ಹಾಗೂ 3ಬಿ ಪ್ರವರ್ಗವನ್ನ ಸೈಲೆಂಟ್ ಮಾಡಿದ್ದಾರೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    ಇವರು ಮೀಸಲಾತಿ ಕೊಡುವಷ್ಟರಲ್ಲಿ ಸರ್ಕಾರವೇ ಇರಲ್ಲ. ಉತ್ತರಪ್ರದೇಶದಲ್ಲಿ ಈಗಾಗಲೇ ಹೈಕೋರ್ಟ್ ಮೀಸಲಾತಿ ತಿರಸ್ಕಾರ ಮಾಡಿದೆ. ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ಬರಬಹುದು. ಬಿಜೆಪಿಯವರು ಚುನಾವಣೆಗಾಗಿ ಈ ರೀತಿ ಮಾಡುತಿದ್ದಾರೆ. ಪಂಚಮ ಸಾಲಿಗರು 2ಎ ಸೇರಿಸಿ ಎಂದು ಬೇಡಿಕೆಯಿಟ್ಟರೆ, 2ಡಿ ಮಾಡಿದ್ದಾರೆ. ಬಿಜೆಪಿ ಸರ್ಕಾರ ತೆಗೆದುಕೊಂಡ ಈ ತೀರ್ಮಾನ ಹಲವು ಜನಾಂಗವನ್ನು ಎತ್ತಿಕಟ್ಟುವಂತಾಗಿದೆ. ಮೀಸಲಾತಿ ಅನ್ನೋದು ಧ್ವನಿ ಇಲ್ಲದ ವರ್ಗಕ್ಕೆ ಅನುಕೂಲ ಆಗಬೇಕು, ಆದ್ರೆ ಸರ್ಕಾರ ತೆಗೆದುಕೊಂಡ ತೀರ್ಮಾನದಿಂದ ಜನತೆಗೆ ದ್ರೋಹ ಬಗೆದಂತಾಗಿದೆ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿ ತಾಯಿ ಅಗಲಿಕೆಗೆ ಹೆಚ್‌ಡಿಕೆ ಕಂಬನಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ನಿಧನಕ್ಕೆ ಹೆಚ್.ಡಿ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರ ಬಿಡುವಿಲ್ಲದ ದಿನಚರಿಯಲ್ಲಿ ತಾಯಿ ಬಗ್ಗೆ ತೋರಿದ ಅಕ್ಕರೆ ಮಾದರಿಯಾಗಿದೆ. ಅವರಿಗೆ ಆ ದುಃಖ ತಡೆಯುವ ಶಕ್ತಿ ಭಗವಂತ ನೀಡಲಿ. ಹೀರಾಬೇನ್ ಶತಾಯುಷಿಯಾಗಿ ಅಗಲಿದ್ದಾರೆ. ಮೋದಿ ಅವರು ದುಃಖದಿಂದ ಹೊರಗೆ ಬಂದು ದೇಶ ಸೇವೆಗೆ ಮರಳಲಿ ಎಂದು ಕೋರುತ್ತೇನೆ ಎಂದು ಭಾವುಕರಾದರು.

    Live Tv
    [brid partner=56869869 player=32851 video=960834 autoplay=true]

  • ಕಾರು, ಕ್ಯಾಂಟರ್ ಡಿಕ್ಕಿ- ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

    ಕಾರು, ಕ್ಯಾಂಟರ್ ಡಿಕ್ಕಿ- ಒಂದೇ ಕುಟುಂಬದ ಮೂವರು ಸೇರಿ ನಾಲ್ವರ ಸಾವು

    ತುಮಕೂರು: ಇಂಡಿಕಾ ಕಾರು (Car) ಮತ್ತು ಕ್ಯಾಂಟರ್ (Canter) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ನಾಲ್ವರು ಸಾವನ್ನಪ್ಪಿರುವ ಘಟನೆ ತುಮಕೂರು (Tumkur) ಜಿಲ್ಲೆಯಲ್ಲಿ ನಡೆದಿದೆ.

    ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಕೊಂಡ್ಲಿ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕಿನ ನಡುವಿನಹಳ್ಳಿಯ ರಾಮಣ್ಣ (58), ನಾರಾಯಣಪ್ಪ (54), ಸಾಗರ್ (23) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕಿತ್ಸೆ ಫಲಿಸದೆ ನಾಗರತ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ವೈದ್ಯನಿಂದ ಪತ್ನಿಯ ಬರ್ಬರ ಹತ್ಯೆ – ಸೂಟ್‍ಕೇಸ್‍ನಲ್ಲಿ ತುಂಬಿ 400 ಕಿ.ಮೀ ದೂರದಲ್ಲಿ ಸುಟ್ಟು ಹಾಕಿದ

    crime

    ಮೃತರೆಲ್ಲರೂ ಒಂದೇ ಕುಟುಂಬದವರಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ತುಮಕೂರು ಕಡೆಯಿಂದ ಕೆ.ಬಿ ಕ್ರಾಸ್ ತೆರಳುತ್ತಿದ್ದ ಕ್ಯಾಂಟರ್ ಎದುರಿನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿತ್ತು. ಈ ಕಾರು ಕೆ.ಬಿ.ಕ್ರಾಸ್‌ನಿಂದ ತುಮಕೂರಿಗೆ ತೆರಳುತ್ತಿತ್ತು. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ದೆಹಲಿ ಏಮ್ಸ್‌ಗೆ ಕನ್ನ ಹಾಕಿದ್ದು ಚೀನಾ – ಡೇಟಾ ಈಗ ಸುರಕ್ಷಿತ

    Live Tv
    [brid partner=56869869 player=32851 video=960834 autoplay=true]

  • ನನಗೆ ಟಿಕೆಟ್ ಕೊಟ್ರೆ ಮಾತ್ರ ಬಿಜೆಪಿ ಗೆಲ್ಲುತ್ತೆ – ಕೆ.ಎಂ ಮುನಿಯಪ್ಪ

    ನನಗೆ ಟಿಕೆಟ್ ಕೊಟ್ರೆ ಮಾತ್ರ ಬಿಜೆಪಿ ಗೆಲ್ಲುತ್ತೆ – ಕೆ.ಎಂ ಮುನಿಯಪ್ಪ

    ತುಮಕೂರು: ಕೊರಟಗೆರೆ ಕ್ಷೇತ್ರದಲ್ಲಿ ನಡೆದ ಬಿಜೆಪಿ (BJP) ಜನಸಂಕಲ್ಪ ಯಾತ್ರೆಗೆ ಉತ್ತಮ ಸ್ಪಂದನೆ ದೊರೆತ ಬೆನ್ನಲ್ಲೇ ಟಿಕೆಟ್ (Election Ticket) ಫೈಟ್ ಜೋರಾಗಿದೆ. ಆಕಾಂಕ್ಷಿಗಳಾದ ಕೆ.ಎಂ.ಮುನಿಯಪ್ಪ (KM Muniyappa) ಹಾಗೂ ಅನಿಲ್ ಕುಮಾರ್ ನಡುವೆ ಟಿಕೆಟ್ ಗಾಗಿ ಫೈಟ್ ನಡೆಯುತ್ತಿದೆ.

    ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿದ ಕೆ.ಎಂ.ಮುನಿಯಪ್ಪ, ಕೊರಟಗೆರೆ ಕ್ಷೇತ್ರದಲ್ಲಿ ನನಗೆ ಟಿಕೆಟ್ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶದ ಗೆಲುವಿಗೆ ಭಾರತ್ ಜೋಡೋ ಯಾತ್ರೆ ಸಹಾಯ ಮಾಡಿದೆ: ಖರ್ಗೆ

    ಜನಸಂಕಲ್ಪ ಯಾತ್ರೆಗೆ ಜನಸ್ತೋಮವೇ ಹರಿದು ಬಂದಿದ್ದು ನನ್ನ ಪರಿಶ್ರಮದ ಪ್ರತಿಫಲ. ಕಳೆದ ನಾಲ್ಕು ವರ್ಷಗಳಿಂದ ನಾನು ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ನಾಯಕರೊಂದಿಗೆ ವಿಧಾನಸಭಾ ಕ್ಷೇತ್ರದಲ್ಲಿ ಬಂದು ಕೆಲಸ ಮಾಡುತ್ತಿದ್ದೇನೆ. ಈ ನನ್ನ ಪರಿಶ್ರಮದಿಂದಾಗಿ ಸಾಗರೋಪಾದಿಯಲ್ಲಿ ಜನರು ಯಲಹಂಕ ಯಾತ್ರೆಗೆ ಹರಿದು ಬಂದು ಯಶಸ್ವಿಗೊಳಿಸಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಟಿಆರ್‌ಎಸ್‌ ಅಲ್ಲ, ಇನ್ಮುಂದೆ ಬಿಆರ್‌ಎಸ್‌ – ಕೆಸಿಆರ್‌ ಪಕ್ಷದ ಹೆಸರು ಬದಲಾವಣೆಗೆ ಚುನಾವಣಾ ಆಯೋಗ ಒಪ್ಪಿಗೆ

    ಯಾರಿಗೆ ಟಿಕೆಟ್ ಕೊಟ್ಟರೂ ಕೊರಟಗೆರೆಯಲ್ಲಿ ಬಿಜೆಪಿ ಗೆಲ್ಲುತ್ತದೆ ಎಂಬ ಮಾತು ಸುಳ್ಳು. ನನಗೆ ಟಿಕೆಟ್ ಕೊಟ್ಟರೆ ಮಾತ್ರ ಬಿಜೆಪಿ ಗೆಲ್ಲುತ್ತೆ, ಇಲ್ಲದಿದ್ರೆ ಸೋಲುತ್ತದೆ. ಹೈಕಮಾಂಡ್ ನನಗೆ ಟಿಕೆಟ್ ಕೊಡುವ ವಿಶ್ವಾಸವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಹೆಚ್‍ಡಿಕೆಯನ್ನು ಬರಮಾಡಿಕೊಂಡ ಗ್ರಾಮಸ್ಥರು

    ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಹೆಚ್‍ಡಿಕೆಯನ್ನು ಬರಮಾಡಿಕೊಂಡ ಗ್ರಾಮಸ್ಥರು

    – ಹೆಲಿಕಾಪ್ಟರ್ ಮೂಲಕ ಕುಮಾರಸ್ವಾಮಿಗೆ ಹೂವಿನ ಸುರಿಮಳೆ

    ತುಮಕೂರು: ಶಿರಾದ (Sira) ಕೆಂಚಗಾನಗಹಳ್ಳಿ ಗ್ರಾಮದ ಜನರು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರನ್ನು ಕೊತ್ತಂಬರಿ ಸೊಪ್ಪಿನ ಹಾರ ಹಾಕಿ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ.

    ಜೆಡಿಎಸ್‍ನಿಂದ ನಡೆಯುತ್ತಿರುವ ಪಂಚರತ್ನ ರಥಯಾತ್ರೆಗೆ ತುಮಕೂರಿನಲ್ಲಿ (Tumkur) ಭರ್ಜರಿ ಪ್ರತಿಕ್ರಿಯೆ ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಈ ರಥಯಾತ್ರೆಯ ನೇತೃತ್ವವನ್ನು ವಹಿಸಿದ್ದು, ತುಮಕೂರು ಜಿಲ್ಲೆಯ ಪ್ರತಿ ಗ್ರಾಮದ ಜನರು ಅದ್ಧೂರಿಯಾಗಿ ಅವರನ್ನು ಬರಮಾಡಿಕೊಳ್ಳುತ್ತಿದ್ದಾರೆ. ವಿಶೇಷವೆಂದರೆ ಅವರಿಗೆ ಹೂವಿನ ಹಾರವೊಂದೇ ಅಲ್ಲದೇ ಅವರಿಗೆ ಕೆಜಿಗಟ್ಟಲೇ ತೂಕದ ಹಣ್ಣು, ತರಕಾರಿ ಹಾರವನ್ನು ಹಾಕಿ ಸನ್ಮಾನಿಸುತ್ತಿದ್ದಾರೆ.

    ಸೋಮವಾರ ಶಿರಾ ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಹೆಚ್‍ಡಿಕೆಯನ್ನು ಕಂಡ ಕೆಂಚಗಾನಗಹಳ್ಳಿ ಗ್ರಾಮಸ್ಥರು ಕೊತ್ತಂಬರಿ ಹಾರವನ್ನು ಹಾಕಿ ಸನ್ಮಾನಿಸಿದ್ದು, ವಿಶೇಷವಾಗಿತ್ತು. ಜೊತೆಗೆ ಶಿರಾದ ಜನರು ಡೊಳ್ಳುಮೆಣಸಿನ ಹಾರವನ್ನು ಹಾಕಿ ಅದ್ಧೂರಿಯಾಗಿ ಬರಮಾಡಿಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಹೆಚ್.ಡಿ ಕುಮಾರಸ್ವಾಮಿ ಅವರೇ ಫೋಟೋ ಹಾಗೂ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು

    ಇಂದು ಕೂಡ ಈ ರಥಯಾತ್ರೆ ಮುಂದುವರಿದಿದ್ದು, ಗುಬ್ಬಿ ಪಟ್ಟಣದತ್ತ ಸಾಗಿದೆ. ಅಲ್ಲಿಯೂ ಕೂಡ ಹೆಚ್‍ಡಿಕೆಗೆ ಹೆಲಿಕಾಪ್ಟರ್ ಮೂಲಕ ಹೂವಿನ ದಳವನ್ನು ಸುರಿಮಳೆಗೈಯುವ ಮೂಲಕ ವಿಭಿನ್ನವಾಗಿ ಸ್ವಾಗತಿಸಿದ್ದಾರೆ. ಮೂರು ರೌಂಡ್ ಹೆಲಿಕಾಪ್ಟರ್‌ನಲ್ಲಿ ಅಭಿಮಾನಿಗಳು ಹೆಚ್‍ಡಿಕೆಗೆ ಗುಲಾಬಿ ಹೂವಿನ ದಳವನ್ನು ಸುರಿದಿದ್ದಾರೆ. ಇದನ್ನೂ ಓದಿ: ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?

    Live Tv
    [brid partner=56869869 player=32851 video=960834 autoplay=true]

  • ದಲಿತ ಸಿಎಂ ಮಾಡಲು ನಾವು ಸಿದ್ಧ – ಹೆಚ್‌ಡಿಕೆ

    ದಲಿತ ಸಿಎಂ ಮಾಡಲು ನಾವು ಸಿದ್ಧ – ಹೆಚ್‌ಡಿಕೆ

    ತುಮಕೂರು: ಮುಂಬರುವ ಚುನಾವಣೆಯಲ್ಲಿ (Elections) 123 ಸ್ಥಾನಗಳಲ್ಲಿ ಜೆಡಿಎಸ್ ಗೆದ್ದರೆ ದಲಿತ ಸಿಎಂ (Dalit CM) ಮಾಡಲು ನಾವು ತಯಾರಿದ್ದೇವೆ. ಅದಕ್ಕೆ ನಮ್ಮ ಪಕ್ಷದಲ್ಲಿ ಮುಕ್ತ ಅವಕಾಶ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅಭಿಪ್ರಾಯಪಟ್ಟರು.

    ಗುರುವಾರ ‘ಪಂಚರತ್ನ ರಥಯಾತ್ರೆ’ ತುಮಕೂರು ನಗರಕ್ಕೆ ಪ್ರವೇಶಿಸಿದೆ. ಈ ಸಂದರ್ಭದಲ್ಲಿ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹೆಚ್‌ಡಿಕೆ ಅವರು, ದಲಿತರ ಬಗ್ಗೆ ಅಭಿಮಾನ ಇಟ್ಕೊಂಡಿರೋ ಸಿದ್ದರಾಮಯ್ಯ ಏನ್ ಮಾತಾಡಿದ್ದಾರೆ ದಾಖಲೆ ಕೊಡ್ಲ? ಅಸ್ಪಶ್ಯರ ಬಗ್ಗೆ ಎಷ್ಟು ಕೀಳಾಗಿ ಮಾತಾಡಿದ್ದಾರೆ. ಮುಖ್ಯಮಂತ್ರಿ ಇದ್ದಾಗ ದಲಿತ ಕುಟುಂಬ ಮಹಿಳೆಯನ್ನ ಚಿಕಿತ್ಸೆ ಕೊಡಿಸಿ ನಮ್ಮ ಮನೆಯಲ್ಲೇ ಆರೈಕೆ ಮಾಡಿದ್ದೆವು. ಯಾವ್ ಮುಖ್ಯಮಂತ್ರಿ ಮಾಡಿದ್ದಾರೆ ಹೇಳ್ಲಿ ಎಂದು ಸಿದ್ದು ವಿರುದ್ಧ ಗುಡುಗಿದರು. ಇದನ್ನೂ ಓದಿ: ಮುಂಬೈ ಹೋಟೆಲ್‌ವೊಂದರಲ್ಲಿ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದ ಸಿದ್ಧಾರ್ಥ್ -ಅದಿತಿ

    ಜೆಡಿಎಸ್ (JDS) ಅಧಿಕಾರಕ್ಕೆ ಬಂದ್ರೆ ದಲಿತ ಸಿಎಂ ವಿಚಾರವಾಗಿ ಮಾತನಾಡಿ, 123 ಬಂದ್ರೆ ದಲಿತ ಮುಖ್ಯಮಂತ್ರಿ ಯಾಕೆ ಆಗ್ಬಾರದು? ದಲಿತರನ್ನ ಮುಖ್ಯಮಂತ್ರಿ ಮಾಡಲು ನಾವು ತಯಾರಿದ್ದೇವೆ. ದೇವೆಗೌಡರು (HD Devegowda) ಮೀಸಲಾತಿ ಇಲ್ಲದೇ ಇದ್ದಾಗ ದಲಿತರನ್ನ ಮುಖಂಡರನ್ನಾಗಿ ಮಾಡಿದ್ದನ್ನ ನಾವು ಮರೆಯೋ ಹಾಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: IAS ಆಕಾಂಕ್ಷಿ ಅಂತಾ ಬಿಲ್ಡಪ್‌; ಬೆತ್ತಲೆ ವೀಡಿಯೋ ಇಟ್ಕೊಂಡು ಯುವಕನಿಗೆ 40 ಲಕ್ಷ ಪಂಗನಾಮ – ಖತರ್ನಾಕ್‌ ಲೇಡಿ ಅರೆಸ್ಟ್‌

    ರಥಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಈ ಕಾರ್ಯಕ್ರಮದ ಮೂಲಕ ನಾಡಿನ ಪ್ರತಿ ಕುಟುಂಬಕ್ಕೆ ತಲುಪಬೇಕು. ಪರಿವರ್ತನೆ ಹಾದಿಗೆ ಈ ಕಾರ್ಯಕ್ರಮ ಉಪಯೋಗ ಆಗಲಿದೆ. ಈ ರೀತಿಯ ಜನತೆಯ ಅಲೆ ಬರುತ್ತಿರುವುದನ್ನು ನಾನು ನಿರೀಕ್ಷೆ ಮಾಡಿರಲಿಲ್ಲ. ಹಣಕೊಟ್ಟ ಕರೆದುಕೊಂಡು ಬಂದಿಲ್ಲ. ಮಹಿಳೆಯರು ರಾತ್ರಿ 11, 12 ಗಂಟೆಯಾದ್ರೂ ಸಭೆಗೆ ಬರುತ್ತಿದ್ದಾರೆ. ಇದನ್ನು ನೋಡಿದರೆ ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ವಹಿಸುತ್ತಿದ್ದಾರೆ. ಒಂದು ಬಾರಿ ಈ ಪಕ್ಷಕ್ಕೆ ಸಂಪೂರ್ಣ ಆಶೀರ್ವಾದ ಮಾಡಿ. ಇದನ್ನೇ ಜನತೆ ಮುಂದೆ ಇಟ್ಟಿದ್ದೇನೆ. ಮುಂದಿನ ಮಾರ್ಚ್ವರೆಗೂ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ ಎಂದು ಹೇಳಿದರು.

    ಜೆಡಿಎಸ್ ಬಿ ಟೀಂ ಎಂದು ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ವಿರುದ್ಧ ಮಾತನಾಡಲು ಕಾಂಗ್ರೆಸ್‌ಗೆ ಬೇರೆ ಏನಿಲ್ಲ. ಹೀಗೆ ಹೇಳಿ ಹೇಳಿ ಅವರು 70 ಸ್ಥಾನಕ್ಕೆ ಬಂದಿದ್ದಾರೆ ಎಂದು ಕುಟುಕಿದರು.

    Live Tv
    [brid partner=56869869 player=32851 video=960834 autoplay=true]

  • ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ಸುರೇಶ್‌ ಗೌಡ ಕೊಲೆಗೆ ಸುಪಾರಿ ಆರೋಪ – ಶಾಸಕ ಗೌರಿಶಂಕರ ಸೇರಿ ಮೂವರ ವಿರುದ್ಧ FIR

    ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡ (Suresh Gowda) ಅವರನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ತುಮಕೂರು ಗ್ರಾಮಾಂತರದ ಹಾಲಿ ಜೆಡಿಎಸ್ ಶಾಸಕ ಡಿಸಿ ಗೌರಿಶಂಕರ್ (Gowrishankar) ಸೇರಿದಂತೆ ಒಟ್ಟು ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಸುರೇಶ್ ಗೌಡರು ಕೊಟ್ಟ ದೂರಿನ ಅನ್ವಯ ತುಮಕೂರಿನ (Tumakuru) ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಗ್ರಾಮಾಂತರ ಶಾಸಕ ಗೌರಿಶಂಕರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಿರೇಹಳ್ಳಿ ಮಹೇಶ್, ಶಾಸಕ ಗೌರಿಶಂಕರ, ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇದನ್ನೂ ಓದಿ: ಸುರೇಶ್ ಗೌಡ ಕೊಲೆಗೆ ಸುಪಾರಿ ಆರೋಪ- 5 ಕೋಟಿ ಡೀಲ್ ನಡೆದಿದೆ ಎಂದ ಮಾಜಿ ಶಾಸಕ

    ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಗೌರಿಶಂಕರ ಅಕ್ರಮ ಎಸಗಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆಯೋಗಕ್ಕೆ ದೂರು‌ ನೀಡಿದ್ದರು. ಅಲ್ಲದೇ ನಕಲಿ ಬಾಂಡ್ ಹಂಚಿ ಮತದಾರರಿಗೆ ಮೋಸ ಮಾಡಿದ್ದಾರೆ ಎಂದು ದೂರಿದ್ದರು. ಈ ದೂರಿ‌ನಿಂದ ಶಾಸಕ ಗೌರಿಶಂಕರ ಕೆರಳಿ ನನ್ನ ಕೊಲೆ ಮಾಡಲು ಸುಪಾರಿ ನೀಡಿದ್ದಾರೆ ಎಂದು ಸುರೇಶ್ ಗೌಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ತುಮಕೂರಿನ ಮಾಜಿ ಮೇಯರ್ ಗಡ್ಡ ರವಿಯನ್ನು ಕೊಲೆ ಮಾಡಿ ಜೈಲಿನಲ್ಲಿದ್ದ ರೌಡಿಶೀಟರ್ ಸುಜಯ್ ಭಾರ್ಗವ್‌ಗೆ ಸುಮಾರು 5 ಕೋಟಿ ರೂ.ಗೆ ಸುಪಾರಿ ನೀಡಲಾಗಿದೆ. ಅದರ ವೆಚ್ಚವನ್ನು ತುಮಕೂರು ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಟ್ಟಿಕಾ ಗೋಲ್ಡ್‌ ಕಂಪನಿಯ ಮಾಲೀಕ ಅಟ್ಟಿಕಾ ಬಾಬು ಭರಿಸುವ ಪ್ಲಾನ್ ಮಾಡಿದ್ದಾರೆ ಎಂದು ದೂರಲಾಗಿದೆ. ಅಲ್ಲದೇ ಭಾರಿ ವಾಹನ ಹತ್ತಿಸಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸುವ ಸಂಚು ರೂಪಿಸಿದ್ದಾರೆ ಎಂದು ಸುರೇಶ್ ಗೌಡ ದೂರಿದ್ದಾರೆ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಶಾಸಕ ಗೌರಿಶಂಕರ್‌ಗೆ ಥೈಲ್ಯಾಂಡ್ ಅಂದರೆ ಬಲು ಪ್ರೀತಿ, ಗೋವಾ ಅಂದರೆ ಮೋಜು, ಅಸೆಂಬ್ಲಿ ಅಂದರೆ ಅಲರ್ಜಿ: ಸುರೇಶ್ ಗೌಡ

    Live Tv
    [brid partner=56869869 player=32851 video=960834 autoplay=true]

  • ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ತುಮಕೂರಿನ ಅಪರಾಧಿಗೆ 12 ವರ್ಷ ಜೈಲು

    ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ – ತುಮಕೂರಿನ ಅಪರಾಧಿಗೆ 12 ವರ್ಷ ಜೈಲು

    ತುಮಕೂರು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಿಗೆ ತುಮಕೂರು ಜಿಲ್ಲಾ ಸೆಷನ್ ನ್ಯಾಯಾಲಯವು (District Session Court Tumkur) 6 ತಿಂಗಳ ಬಳಿಕ 12 ವರ್ಷ ಜೈಲು ಶಿಕ್ಷೆ ಹಾಗೂ 75 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ತುಮಕೂರಿನ ಶಿರಾ ಪೊಲೀಸ್ ಠಾಣಾ (Police Station) ವ್ಯಾಪ್ತಿಯ ಪಾರ್ಕ್ ಮೊಹಲ್ಲಾ ನಿವಾಸಿ ಜಾವದ್ ಶಿಕ್ಷೆಗೆ ಗುರಿಯಾದ ದೋಷಿ. ಇದನ್ನೂ ಓದಿ: ವೀರಶೈವರು ನಮ್ಮಲ್ಲಿ ದಲಿತರ ರಕ್ತ ಹರಿಯುತ್ತಿದೆ ಎಂದು ಹೇಳಲಿ: ಜ್ಞಾನ ಪ್ರಕಾಶ ಸ್ವಾಮೀಜಿ

    ಏನಿದು ಪ್ರಕರಣ?
    ಕಳೆದ ಮೇ 28 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಶಿರಾ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಕ್ ಮೊಹಲ್ಲಾದ (Park Mohalla) ಪೋತರಾಜನ ಗದ್ದುಗೆ ಬಳಿ 7 ಮತ್ತು 9 ವರ್ಷದ ಬಾಲಕಿಯರು ಆಟವಾಡುತ್ತಿದ್ದರು. ಅಲ್ಲಿಗೆ ಬಂದ ಜಾವದ್ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಇಬ್ಬರನ್ನೂ ಪಾರ್ಕ್ ಮೊಹಲ್ಲಾಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.

    ಮಕ್ಕಳು ಅಳುತ್ತಿರುವುದು ಕಂಡು ತಾಯಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ನೊಂದ ಬಾಲಕಿಯರ ತಾಯಿ ಶಿರಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಂದಿನ ಪಿಎಸ್‌ಐ (PSI) ಲಕ್ಷ್ಮೀನಾರಾಯಣ್ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿದ್ದರು. ನಂತರ ತನಿಖಾಧಿಕಾರಿಗಳಾದ ಪೊಲೀಸ್ ಇನ್ಸ್ಪೆಕ್ಟರ್ ವಿ.ಲಕ್ಷ್ಮಯ್ಯ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.‌ ಇದನ್ನೂ ಓದಿ: ಮಕ್ಕಳನ್ನು 1ನೇ ಕ್ಲಾಸಿಗೆ ಸೇರಿಸಲು 6 ವರ್ಷ ಕಡ್ಡಾಯ – ಸರ್ಕಾರದಿಂದ ಅಧಿಕೃತ ಆದೇಶ

    ಜಿಲ್ಲಾ ಸೆಷನ್ಸ್ ಪೋಕ್ಸೋ ನ್ಯಾಯಾಲಯದಲ್ಲಿ (District Session POCSO Speical Court) ಪ್ರಕರಣದ ವಿಚಾರಣೆ ನಡೆದಿದ್ದು, ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಜಾವದ್’ಗೆ ಕಲಂ 363 ಐಪಿಸಿಗೆ (IPC) 5 ವರ್ಷ ಶಿಕ್ಷೆ, 25 ಸಾವಿರ ರೂ. ದಂಡ ಹಾಗೂ ಕಲಂ 9(M) ಅಡಿ 7 ವರ್ಷ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಸೆಷನ್ಸ್ ಪೋಕ್ಸೋ ವಿಶೇಷ ನ್ಯಾಯಾಧೀಶರಾದ ಪಿ.ಸಂಧ್ಯಾ ರಾವ್ ತೀರ್ಪು ನೀಡಿದ್ದಾರೆ.

    ಸಂತ್ರಸ್ತರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು. ಪ್ರಕರಣ ನಡೆದು 6 ತಿಂಗಳ ನಂತರವಾದ್ರೂ ತೀರ್ಪು ಪ್ರಕಟಿಸುವ ಮೂಲಕ ನ್ಯಾಯಾಲಯವು ಮಕ್ಕಳ ಮೇಲೆ ದೌರ್ಜನ್ಯ ಎಸಗುವ ಕಿಡಿಗೇಡಿಗಳಿಗೆ ಕಠಿಣ ಎಚ್ಚರಿಕೆ ರವಾನಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಯಡಿಯೂರಪ್ಪ ಹಿಂದೂ ಅಲ್ಲ, ವೀರಶೈವ ಲಿಂಗಾಯತರು: ಸಾಗರನಹಳ್ಳಿ ನಟರಾಜ್

    ಯಡಿಯೂರಪ್ಪ ಹಿಂದೂ ಅಲ್ಲ, ವೀರಶೈವ ಲಿಂಗಾಯತರು: ಸಾಗರನಹಳ್ಳಿ ನಟರಾಜ್

    ತುಮಕೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಹಿಂದೂ ಅಲ್ಲ, ವೀರಶೈವ ಲಿಂಗಾಯತರು. ಅವರು ವೀರಶೈವ ಲಿಂಗಾಯತರೇ ಆಗಿದ್ದರೆ ಹಿಂದೂ ಆಗಲು ಸಾಧ್ಯವಿಲ್ಲ, ಆದರೆ, ತಾವು ಹಿಂದೂ ಅಲ್ಲ ಎಂದು ಹೇಳಿಕೊಳ್ಳುವುದು, ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜ್ ವಿವಾದಾತ್ಮಕ ಹೇಳಿಕೆ ನೀಡಿದರು.

    ವೀರಶೈವ – ಲಿಂಗಾಯತ ಮಹಾಸಭಾ ಸಮಾವೇಶದ ಪೂರ್ವ ತಯಾರಿ ಕುರಿತು ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ವೀರಶೈವ ಲಿಂಗಾಯತಕ್ಕೆ ಪ್ರತ್ಯೇಕ ಧರ್ಮವನ್ನು ಕೇಳುತ್ತೇವೆ. ಇನ್ನು ತಾವು ಹಿಂದೂ ಹೌದೋ ಅಲ್ಲವೋ ಎಂದು ಹೇಳಿಕೊಳ್ಳುವುದು ಬಿಡುವುದು ಯಡಿಯೂರಪ್ಪ ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.

    ನಮ್ಮ ಬೈಲಾವನ್ನಲ್ಲಿ ಒಪ್ಪಿಕೊಂಡು ಬರುವವರಿಗೆ ಸ್ವಾಗತ. ವೀರಶೈವ ಲಿಂಗಾಯತ ಅನ್ನೋದು ಪ್ರತ್ಯೇಕ ಧರ್ಮ. ಹಿಂದೂ ಧರ್ಮಕ್ಕೂ, ನಮ್ಮ ಆಚರಣೆಗೂ ತುಂಬಾ ವ್ಯತ್ಯಾಸ ಇದೆ. ನಮ್ಮದೇ ಪ್ರತ್ಯೇಕ ಧರ್ಮವಾಗಿದೆ. ಹೇಗೆ ಬೌದ್ಧ ಧರ್ಮ, ಸಿಖ್ ಧರ್ಮ ಅಂತ ಪ್ರತ್ಯೇಕ ಮಾಡಿದ್ದೀರೋ ಹಾಗೇ ನಮಗೂ ಪ್ರತ್ಯೇಕ ಧರ್ಮ ಕೊಡಬೇಕು. ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರ ಪ್ರತ್ಯೇಕ ಧರ್ಮ ಹೋರಾಟ ಸರಿಯಿದೆ. ಅದನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ಬೆಂಬಲಿಸಿ ಪ್ರತಿಭಟನಾ ರ‍್ಯಾಲಿ – ಭಾವಚಿತ್ರಕ್ಕೆ ಕ್ಷೀರಾಭಿಷೇಕ

    ನಮ್ಮಲ್ಲೂ ಆಚರಣೆಗಳು ವಿಭಿನ್ನವಾಗಿವೆ. ಕೆಲವರಿಗೆ ವಿಭೂತಿಧಾರಣೆ ಇಷ್ಟ ಇಲ್ಲದೇ ಇರಬಹುದು. ಇನ್ನೂ ಕೆಲವರಿಗೆ ರುದ್ರಾಕ್ಷಿ ಧಾರಣೆ ಇಷ್ಟ ಇಲ್ಲದಿರಬಹುದು. ಆದರೆ, ಈ ಎಲ್ಲರನ್ನೊಳಗೊಂಡು ವೀರಶೈವ ಲಿಂಗಾಯತ ಧರ್ಮವಿದೆ. ನಾವು ಸಹ ಹಿಂದೂ ಧರ್ಮದ ಎಲ್ಲ ಹಬ್ಬಗಳನ್ನು ಆಚರಿಸುತ್ತೇವೆ. ಆದರೆ ನಮ್ಮ ಆಚರಣೆ, ಶಾಸ್ತ್ರ, ಸಂಸ್ಕೃತಿ ಬೇರೆ ಎಂದರು. ಇದನ್ನೂ ಓದಿ: ಪತ್ನಿಯನ್ನು ಕೊಚ್ಚಿ ಕೊಂದು ಮನೆಗೆ ಬೀಗ ಹಾಕಿ ಪರಾರಿಯಾದ ಪಾಪಿ ಪತಿ

    Live Tv
    [brid partner=56869869 player=32851 video=960834 autoplay=true]

  • ಕಾಂಗ್ರೆಸ್ಸೇ ಅಶ್ಲೀಲ- ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ

    ಕಾಂಗ್ರೆಸ್ಸೇ ಅಶ್ಲೀಲ- ಜಾರಕಿಹೊಳಿ ವಿರುದ್ಧ ಆರಗ ಜ್ಞಾನೇಂದ್ರ ಕಿಡಿ

    ತುಮಕೂರು: `ಹಿಂದೂ’ ಪದದ (Hindu Word) ಅರ್ಥ ಅಶ್ಲೀಲ ಎಂಬ ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿಕೆ ವಿರುದ್ಧ ಕೇಸರಿ ಪಡೆ ಮುಗಿಬಿದ್ದಿದೆ. ಈ ಬೆನ್ನಲ್ಲೇ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಸಹ ಕಿಡಿಕಾರಿದ್ದಾರೆ.

    ತುಮಕೂರಿನಲ್ಲಿಂದು (Tumkur) ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಿಂದೂ ಪದ ಅಶ್ಲೀಲವಲ್ಲ, ಕಾಂಗ್ರೆಸ್ಸೇ ಅಶ್ಲೀಲ. ಇಷ್ಟು ದಿನ ಕಾಂಗ್ರೆಸ್ಸಿಗರು ಹಿಂದೂಗಳನ್ನ ಅವಮಾನ ಮಾಡುತ್ತಾ ಅಲ್ಪಸಂಖ್ಯಾತರ ಮತ ಪಡೆದುಕೊಂಡು ಅಧಿಕಾರದ ಕುರ್ಚಿ ಮೇಲೆ ಕುಳಿತಿದ್ರು ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಮತಕ್ಕಾಗಿ ಹಿಂದೂಗಳ ಅವಹೇಳನ ಮಾಡ್ತಿರೋದು ನೀಚ ಕೆಲಸ – ಜಾರಕಿಹೊಳಿ ವಿರುದ್ಧ ಮುತಾಲಿಕ್ ಆಕ್ರೋಶ

    ಈಗ ಇಡೀ ರಾಜ್ಯ ಮತ್ತು ದೇಶದ ಜನಕ್ಕೆ ಕಾಂಗ್ರೆಸ್ಸೇ ಒಂದು ಅಶ್ಲೀಲ ಅಂತ ಗೊತ್ತಾಗಿದೆ. ಹಾಗಾಗಿ ಜನ ಕಾಂಗ್ರೆಸ್ ಪಕ್ಷವನ್ನ ತಿರಸ್ಕರಿಸಿದ್ದಾರೆ. ಈಗಾಗಲೇ ಹಿಂದೂಗಳಿಗೆ ಅವಮಾನ ಮಾಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಮುಂದೆಯೂ ಬೆಲೆ ತೆರುತ್ತಾರೆ. ಇನ್ನೂ 5 ತಿಂಗಳಲ್ಲಿ ಚುನಾವಣೆ (Election ಇದೆ. ವೋಟ್ ಬ್ಯಾಂಕ್‌ಗಾಗಿ (Vote Bank) ಕಾಂಗ್ರೆಸ್ ಈ ರೀತಿಯ ವಿವಾದಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 5,000 ಕೋಟಿ ವೆಚ್ಚದ ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಫೋಟೋ ಬಿಡುಗಡೆ

    ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ (Dk Shivakumar) ತಾಕತ್ ಇದ್ರೆ ಇವತ್ತು ಸತೀಶ್ ಜಾರಕಿಹೊಳಿಯನ್ನ ಪಕ್ಷದಿಂದ ಹೊರಗೆಹಾಕಲಿ. ಮಗು ಚಿವುಟೊದು, ತೊಟ್ಟಿಲು ತೂಗೋದು ಎರಡು ಕೆಲಸವನ್ನ ಡಿಕೆಶಿ ಮಾಡಬಾರದು. ಹಿಂದೂ-ಮುಸ್ಲಿಂ (Hindu Muslim) ಇಬ್ಬರೂ ಒಟ್ಟಿಗೆ ಹೋಗೋದಕ್ಕೆ ಇವರು ಬಿಡ್ತಿಲ್ಲ. ಪ್ರತ್ಯೇಕವಾಗಿ ಇಡುವಂತಹ ವಿಶೇಷ ಪ್ರಯತ್ನ ಈ ದೇಶದಲ್ಲಿ ನಡೆಯುತ್ತಿದೆ. ಈ ಹಿಂದೆ ಪ್ರವಾದಿ ಬಗ್ಗೆ ಅವಹೆಳನಕಾರಿ ಹೇಳಿಕೆ ನೀಡಿದ್ದರಿಂದಾಗಿ ನೂಪುರ್ ಶರ್ಮಾರನ್ನ (Nupur Sharma) ಬಿಜೆಪಿ ಪಕ್ಷದಿಂದ ಅಮಾನತ್ತು ಮಾಡಿತು. ಅದೇ ರೀತಿ ಸತೀಶ್ ಜಾರಕಿಹೊಳಿ ಮೇಲೆ ಕ್ರಮ ಕೈಗೊಳ್ಳುವ ಧೈರ್ಯ ಕಾಂಗ್ರೆಸ್ ತೊರಲಿ ಎಂದು ಸವಾಲ್ ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]