Tag: Tungabhadra Dam

  • ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ- ಸಂಚಾರಕ್ಕೆ ಕಂಪ್ಲಿ ಸೇತುವೆ ಮುಕ್ತ

    ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ- ಸಂಚಾರಕ್ಕೆ ಕಂಪ್ಲಿ ಸೇತುವೆ ಮುಕ್ತ

    ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಹೊರ ಹರಿವು ಇಳಿಕೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಂಪ್ಲಿ ಸೇತುವೆಯನ್ನು(Kampli Bridge) ತೆರೆಯಲಾಗಿದೆ.

    ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದರಿಂದ ಕಂಪ್ಲಿ ಸೇತುವೆ ಜಲಾವೃತವಾಗಿತ್ತು. ನಿನ್ನೆ ಸಂಜೆಯಿಂದ ನದಿಗೆ ಹೊರಹರಿವು ಕಡಿಮೆ ಮಾಡಿದ್ದರಿಂದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.ಇದನ್ನೂ ಓದಿ: ಅಪಾಯ‌ಮಟ್ಟ ಮೀರಿದ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು ಪ್ರವಾಹ ಭೀತಿಯಲ್ಲಿ ಜನ

     

    ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಈ ಸೇತುವೆ ಬಳ್ಳಾರಿ-ಗಂಗಾವತಿ (Ballari-Gangavathi) ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮಲೆ‌ನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದ ಕಾರಣ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ ನೀರು ಬಿಡಲಾಗಿತ್ತು. ಇದನ್ನೂ ಓದಿ: ಬೆಂಗಳೂರು | ಗಣೇಶ ಚತುರ್ಥಿಯ ಪ್ರಯುಕ್ತ ಹೆಚ್ಚುವರಿ 265 ವಿಶೇಷ ಸಾರಿಗೆ ಬಸ್ಸುಗಳ ಸಂಚಾರ

    ನಾಲ್ಕು ದಿನಗಳ ಕಾಲ ಕಂಪ್ಲಿ ಸೇತುವೆ ಜಲಾವೃತ ಆಗಿತ್ತು. ನಿನ್ನೆ ಸಂಜೆಯಿಂದ ಹಂತ ಹಂತವಾಗಿ ನದಿ ನೀರಿನ ಮಟ್ಟ ಇಳಿಕೆಯಾಗಿದ್ದರಿಂದ ಇಂದು ಸಾರ್ವಜನಿಕ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸೇತುವೆ ಮೇಲೆ ವಾಹನ ಓಡಾಟಕ್ಕೂ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ.

  • ತುಂಗಭದ್ರಾ ಜಲಾಶಯದಿಂದ 1.15 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

    ತುಂಗಭದ್ರಾ ಜಲಾಶಯದಿಂದ 1.15 ಲಕ್ಷ ಕ್ಯೂಸೆಕ್ ನೀರು ರಿಲೀಸ್ – ಕಂಪ್ಲಿ ಸೇತುವೆ ಮುಳುಗಡೆ

    – ಬಳ್ಳಾರಿ – ಗಂಗಾವತಿ ಸಂಪರ್ಕ ಕಡಿತ

    ಬಳ್ಳಾರಿ: ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಒಳ ಹರಿವು ಹೆಚ್ಚಳವಾಗಿದ್ದರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ತುಂಗಭದ್ರಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಸದ್ಯ ತುಂಗಭದ್ರಾ ಜಲಾಶಯಕ್ಕೆ 1,15,722 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಪಾರ ಪ್ರಮಾಣದ ನೀರು ಹರಿದು ಬರ್ತಿರೋದ್ರಿಂದ ಜಲಾಶಯದಿಂದ ನದಿಗೆ 1,17,057 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.

    ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಬಳ್ಳಾರಿ-ಗಂಗಾವತಿ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆ ಮುಳುಗಡೆಯಾಗಿದ್ದು, ಬಳ್ಳಾರಿ-ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಮತ್ತೊಂದೆಡೆ ಕಂಪ್ಲಿ ಪಟ್ಟಣದ ನದಿ ತೀರದ ಮೀನುಗಾರರ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನದಿ ಪಾತ್ರದ ಜನ, ಜಾನುವಾರು ನದಿ ತೀರಕ್ಕೆ ತೆರಳದಂತೆ ಟಿಬಿ ಬೋರ್ಡ್ ಎಚ್ಚರಿಕೆ ನೀಡಿದೆ.

  • ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ – ಪ್ರವಾಹ ಭೀತಿ

    ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ – ಪ್ರವಾಹ ಭೀತಿ

    -ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

    ಬಳ್ಳಾರಿ: ಮಲೆನಾಡು ಸೇರಿದಂತೆ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿರುವ (Rain) ಹಿನ್ನೆಲೆ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಸದ್ಯ ಜಲಾಶಯಕ್ಕೆ 75,500 ಕ್ಯೂಸೆಕ್ ಒಳಹರಿವು ಇರೋದ್ರಿಂದ, ಜಲಾಶಯದಿಂದ 86,631 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ.

    105 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 77 ಟಿಎಂಸಿ ಸಂಗ್ರಹವಾಗಿದೆ. ಕಳೆದ ವರ್ಷ ಕೊಚ್ಚಿ ಹೋಗಿದ್ದ 19ನೇ ಗೇಟ್‌ಗೆ ತಾತ್ಕಾಲಿಕ ಗೇಟ್ ಅಳವಡಿಕೆ ಮಾಡಿರೋದ್ರಿಂದ ಮುಂಜಾಗ್ರತಾ ಕ್ರಮವಾಗಿ 80 ಟಿಎಂಸಿ ನೀರು ಮಾತ್ರ ಶೇಖರಿಸಿಟ್ಟುಕೊಳ್ಳಲು ಟಿಬಿ ಬೋರ್ಡ್ ತೀರ್ಮಾನಿಸಿದೆ. ತುಂಗಾ, ಭದ್ರಾ ಹಾಗೂ ವರದಾ ನದಿಗಳಿಂದ ಅಪಾರ ಪ್ರಮಾಣದ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಹೀಗಾಗಿ ಸಂಜೆ ವೇಳೆಗೆ 1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಜೆಪಿಯವ್ರು ರಾಜಕೀಯಕ್ಕಾಗಿ ಧರ್ಮಸ್ಥಳದ ಹೆಸರು ಬಳಕೆ ಮಾಡ್ತಿದ್ದಾರೆ – ಡಿಕೆಶಿ

    1 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಟ್ಟರೆ ಹಂಪಿಯ ಕೆಲ ಸ್ಮಾರಕಗಳು ಮುಳುಗಡೆಯಾಗಲಿವೆ. ಅಲ್ಲದೇ ಬಳ್ಳಾರಿ- ಗಂಗಾವತಿ ಸಂಪರ್ಕ ಕಲ್ಪಿಸುವ ಕಂಪ್ಲಿ ಸೇತುವೆ ಕೂಡಾ ಮುಳುಗಡೆಯ ಭೀತಿಯಲ್ಲಿದೆ. ಇನ್ನೂ ನದಿಗೆ ಹೆಚ್ಚಿನ ಪ್ರಮಾಣದ ನೀರು ರಿಲೀಸ್ ಮಾಡಿದ್ರೆ ಪ್ರವಾಹ ಎದುರಾಗುವ ಆತಂಕ ಶುರುವಾಗಿದೆ. ಪ್ರವಾಹದ ಭೀತಿ ಎದುರಾಗಿರೋದ್ರಿಂದ ನದಿ ತೀರಕ್ಕೆ ಜನ ಜಾನುವಾರು ತೆರಳದಂತೆ ಟಿಬಿ ಬೋರ್ಡ್ ಅಧಿಕಾರಿಗಳು ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಮುನಿಯಪ್ಪ

  • ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ

    ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ

    ಬೆಂಗಳೂರು: ತುಂಗಭದ್ರಾ ಡ್ಯಾಮ್‌ನ (Tungabhadra Dam) 33 ಕ್ರಸ್ಟ್ ಗೇಟನ್ನೂ ತಕ್ಷಣವೇ ಬದಲಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B Y Vijayendra) ಆಗ್ರಹಿಸಿದ್ದಾರೆ.

    ವಿಧಾನಸೌಧದಲ್ಲಿ ಮಾತಾಡಿದ ಅವರು ತುಂಗಭದ್ರಾ ಅಣೆಕಟ್ಟಿನ ವಿಚಾರದಲ್ಲಿ ಅಲ್ಲಿನ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ (Shivaraj Tangadagi) ಅವರ ಹೇಳಿಕೆಯನ್ನೂ ಗಮನಿಸಿದ್ದೇನೆ. ಕಳೆದ ಆಗಸ್ಟ್ನಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ರೈತರೂ ಆತಂಕದಲ್ಲಿ ಇದ್ದರು. ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಖಾಯಂ ಪರಿಹಾರ ನೀಡಿಲ್ಲ. ಇವರು ತಡ ಮಾಡಿದ್ದು, ನೀರಿನ ಒತ್ತಡ ಇತರ ಗೇಟ್‌ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ

    ಮತ್ತೊಂದು ಕಡೆ ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ಸಚಿವರ ಮತ್ತು ರಾಜ್ಯ ಸರ್ಕಾರದ ಬೇಜವಾಬ್ದಾರಿತನದಿಂದ ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ಟಿ.ಬಿ. ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್‌ | ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ ಬೀಳುವ ವಿಶ್ವಾಸ: ವಿಜಯೇಂದ್ರ

    ನುಡಿದಂತೆ ನಡೆಯುವ ರಾಜ್ಯ ಸರ್ಕಾರದಡಿ ರಾಜ್ಯದ ಹಣಕಾಸಿನ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ. ಅವರು ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ 4.85 ಕೋಟಿ ರೂ. ಮೊತ್ತವನ್ನು ಕೊಡದೇ ತಡೆ ಹಿಡಿದಿದ್ದಾರೆ. ಇದನ್ನು ಪ್ರಶ್ನಿಸಿದರೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಬಹಳ ಚೆನ್ನಾಗಿದೆ ಎಂದು ಸಿದ್ದರಾಮಯ್ಯನವರು (Siddaramaiah) ಹೇಳುತ್ತಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣವನ್ನು ಬಿಡುಗಡೆ ಮಾಡದಂಥ ದುಸ್ಥಿತಿಗೆ ಬಂದು ನಿಂತಿದೆ ಎಂದಿದ್ದಾರೆ.

  • ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್,  ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

    – ಇದೇ ವರ್ಷದಿಂದ ಡ್ಯಾಂ ಗೇಟ್ ಅಳವಡಿಕೆಗೆ ಚಿಂತನೆ

    ಕೊಪ್ಪಳ: ಕಳೆದ ವರ್ಷ ಕಿತ್ತು ಹೋಗಿದ್ದ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಗೇಟ್ ಸೇರಿ ಒಟ್ಟು 8 ಕ್ರಸ್ಟ್‌ ಗೇಟ್ (Crest Gate) ನಿಷ್ಕ್ರಿಯಗೊಂಡಿದ್ದು, ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಹೇಳಿದರು.

    ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

    ತುಂಗಭದ್ರಾ ಜಲಾಶಯದ 11, 18, 20, 24, 27 ಮತ್ತು 28 ಕ್ರಸ್ಟ್ ಗೇಟ್ ಸಂಪೂರ್ಣವಾಗಿ ಜಾಮ್ ಆಗಿದ್ದು, ಮೇಲಕ್ಕೆ ಎತ್ತಲು ಆಗುತ್ತಿಲ್ಲ. ಈ ಎಲ್ಲಾ ಗೇಟ್‌ಗಳು ಅಲ್ಲಿ ಬೆಂಡ್ ಆಗಿದ್ದರಿಂದ ಚೈನ್ ಮೂಲಕ ಗೇಟ್ ಮೇಲೆ ಎತ್ತಲು ಸಾಧ್ಯವಾಗುತ್ತಿಲ್ಲ. ಜೊತೆಗೆ 4ನೇ ಕ್ರಸ್ಟ್‌ ಗೇಟ್ ಕೇವಲ 2 ಫೀಟ್ ಮಾತ್ರ ಮೇಲೆ ಎತ್ತಲು ಸಾಧ್ಯವಾಗುತ್ತಿದೆ. ಇದರಿಂದ ಜಲಾಶಯದ ಒಟ್ಟು 8 ಕ್ರಸ್ಟ್‌ ಗೇಟ್ ಗೆ ಚಲನೆ ಇಲ್ಲದಂತಾಗಿದೆ. ಈ ಕಾರಣಕ್ಕೆ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಸಂಗ್ರಹ ಸಾಮರ್ಥ್ಯವನ್ನು ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಜಲಾಶಯ ಒಟ್ಟು 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಡ್ಯಾಂ ಭರ್ತಿ ಮಾಡಿದರೆ ಮುಂದೆ ಸಾಕಷ್ಟು ಸವಾಲು ಎದುರಾಗುವ ಸಾಧ್ಯತೆ ಇದೆ. ಒಂದೊಮ್ಮೆ ಏಕಾಏಕಿ 1.50 ಲಕ್ಷ ಕ್ಯೂಸೆಕ್ ಒಳಹರಿವು ಹರಿದು ಬಂದರೆ, ಅದೇ ಪ್ರಮಾಣದ ನೀರನ್ನು ಎಲ್ಲ ಗೇಟ್ ಎತ್ತರಿಸುವ ಮೂಲಕ ನದಿಗೆ ಬಿಡ ಬೇಕಾಗುತ್ತದೆ. ಆದರೆ, ಸುಮಾರು 8 ಕ್ರಸ್ಟ್‌ ಗೇಟ್ ಗಳು ಸದ್ಯಕ್ಕೆ ಎತ್ತಲು ಸಾಧ್ಯವಿಲ್ಲದ ಸ್ಥಿತಿ ತಲುಪಿವೆ. ಹೀಗಾದಾಗ ಡ್ಯಾಂ ಭರ್ತಿ ಮಾಡುವುದು ಸರಿಯಲ್ಲ ಎಂಬ ತಜ್ಞರ ಸಲಹೆಯಂತೆ ಸಂಗ್ರಹ ಸಾಮರ್ಥ್ಯ ಕೇವಲ 80 ಟಿಎಂಸಿಗೆ ಇಳಿಕೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬನ್ನೇರುಘಟ್ಟ ಸಫಾರಿ ವೇಳೆ ಬೊಲೆರೋ ಹಿಂಬಾಲಿಸಿ ಬಾಲಕನ ಮೇಲೆ ಚಿರತೆ ದಾಳಿ

    ಮೊದಲಿಗೆ ಎಲ್ಲಾ 33 ಕ್ರಸ್ಟ್‌ ಗೇಟ್ ನಿರ್ಮಾಣಕ್ಕೆ ಒಂದೇ ಟೆಂಡರ್ ಕರೆಯಲಾಗಿತ್ತು. ಆದರೆ ಯಾವುದೇ ಕಂಪನಿ ಟೆಂಡರ್‌ನಲ್ಲಿ ಭಾಗವಹಿಸಲಿಲ್ಲ. ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಎಲ್ಲ ಗೇಟ್ ಅಳವಡಿಕೆಗೆ ಕನಿಷ್ಠ 8 ತಿಂಗಳು ಸಮಯವನ್ನು ಕಂಪನಿ ಕೇಳಿದೆ. ರೈತರೊಂದಿಗೆ ಚರ್ಚೆ ಮಾಡಿ, ಈ ಬಾರಿ ಒಂದು ಬೆಳೆಯ ನಂತರ ಎಲ್ಲ ನೀರು ಹೊರಗೆ ಬಿಟ್ಟು ಗೇಟ್ ಅಳವಡಿಕೆ ಕೆಲಸ ಶುರು ಮಾಡಬೇಕು ಎಂಬ ಚಿಂತನೆ ಇದೆ. ಈ ಬಗ್ಗೆ ರೈತರೊಂದಿಗೆ ಚರ್ಚೆ ಮಾಡಿ ಕ್ರಮ ವಹಿಸಲಾಗುವುದು ಎಂದರು.

    ಜಿಲ್ಲೆಯಲ್ಲಿ ಯೂರಿಯಾ ಕೊರತೆ ಸಂಪೂರ್ಣವಾಗಿ ನೀಗಿಸಲಾಗಿದೆ. ಸದ್ಯ ಯೂರಿಯಾ ಎಲ್ಲರಿಗೂ ಸಿಗುವಂತೆ ಮಾಡಿದ್ದೇವೆ. ಜೊತೆಗೆ ಸುಮಾರು 2,365 ಟನ್ ದಾಸ್ತಾನು ಉಳಿಸಿಕೊಂಡಿದ್ದೇವೆ. ಜಿಲ್ಲೆಯಲ್ಲಿ ಯಾವುದೇ ತೊಂದರೆ ಆಗದಂತೆ ಯೂರಿಯಾ ಪೂರೈಕೆ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಕೊಪ್ಪಳದಲ್ಲಿ ಕೊಲೆಯಾದ ಗವಿಸಿದ್ಧಪ್ಪ ನಾಯಕ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಕೊಪ್ಪಳ ಪೊಲೀಸರು ಎಲ್ಲ ಆರೋಪಿ ಗಳನ್ನು ಬಂಧಿಸಿದ್ದಾರೆ. ಮೃತನ ತಾಯಿ ದೂರಿನ ಹಿನ್ನೆಲೆ ಘಟನೆಗೆ ಕಾರಣರಾದ ಬಾಲಕಿಯನ್ನು ವಿಚಾರಣೆ ಮಾಡಲಾಗಿದೆ. ‌ಸತ್ತ ಮನೆಯಲ್ಲಿ ರಾಜಕಾರಣ ಮಾಡುವುದು ಬಿಜೆಪಿಗೆ ಹೊಸದಲ್ಲ. ಸತ್ತ ಮನೆಯಲ್ಲಿ ರಾಜಕೀಯ ಮಾಡುವುದಕ್ಕಿಂತ ಸಾತ್ವನ ಹೇಳಬೇಕು. ಇದನ್ನು ಬಿಜೆಪಿ ಮುಖಂಡರು ಕಲಿಯಲಿ ಎಂದು ತಿರುಗೇಟು ನೀಡಿದರು.

  • ತುಂಗಭದ್ರಾ ಜಲಾಶಯದಿಂದ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಹಂಪಿ ಸ್ಮಾರಕಗಳು ಮುಳುಗಡೆ

    ತುಂಗಭದ್ರಾ ಜಲಾಶಯದಿಂದ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ – ಹಂಪಿ ಸ್ಮಾರಕಗಳು ಮುಳುಗಡೆ

    ಬಳ್ಳಾರಿ: ತುಂಗಭದ್ರಾ ಜಲಾನಯನ (Tungabhadra Dam) ಪ್ರದೇಶದಲ್ಲಿ ಭಾರೀ (Rain) ಮಳೆಯಾಗುತ್ತಿದೆ. ಇದರಿಂದ ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಡ್ಯಾಂನಿಂದ ನದಿಗೆ 96 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

    ನೀರು ಬಿಡುಗಡೆ ಮಾಡಿದ್ದರಿಂದ ಹಂಪಿಯ (Hampi) ಕೆಲ ಸ್ಮಾರಕಗಳು ಮುಳುಗಡೆಯಾಗಿವೆ. ಈಗಾಗಲೇ ಪುರಂದರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಧಾರ್ಮಿಕ ವಿಧಿವಿಧಾನ ಮಂಟಪದ ಅರ್ಧಕ್ಕೆ ನೀರು ಬಂದಿದೆ. ಮತ್ತೊಂದೆಡೆ ಕೋದಂಡರಾಮ ದೇವಸ್ಥಾನಕ್ಕೆ‌ ಹೋಗುವ ಕಂಪಭೂಪ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಮಳೆಯಾರ್ಭಟ – ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು, 8 ಸೇತುವೆಗಳು ಜಲಾವೃತ

    ಒಳಹರಿವು ಹೆಚ್ಚಾಗಿರುವುದರಿಂದ ಇನ್ನಷ್ಟು ಪ್ರಮಾಣದ ನೀರು ನದಿಗೆ ರಿಲೀಸ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಹಂಪಿಯ ಮತ್ತಷ್ಟು ಸ್ಮಾರಕಗಳು ಮುಳುಗಡೆಯಾಗುವ ಭೀತಿ ಇದೆ. ಇದನ್ನೂ ಓದಿ: ಮುಂಗಾರು ಅಬ್ಬರ – ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ನಿಷೇಧ

  • ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಟಿಬಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ರಿಲೀಸ್ – ಮುಳುಗಡೆ ಭೀತಿಯಲ್ಲಿ ಹಂಪಿ ಸ್ಮಾರಕಗಳು

    ಕೊಪ್ಪಳ: ಮಲೆನಾಡಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಟಿಬಿ ಡ್ಯಾಂಗೆ (TB Dam) ಒಳಹರಿವು ಹೆಚ್ಚಾಗಿದೆ. ಹೀಗಾಗಿ ಡ್ಯಾಂನ 26 ಗೇಟ್‌ಗಳಿಂದ 90,893 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹಂಪಿ (Hampi) ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

    ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ತುಂಗಭದ್ರಾ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಸದ್ಯ ಜಲಾಶಯದಿಂದ 90,893 ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯದ 33 ಗೇಟ್‌ಗಳ ಪೈಕಿ 26 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಬಿಡಲಾಗುತ್ತಿದೆ.

    ಏಕಾಏಕಿ ನೀರನ್ನು ಬಿಡುಗಡೆ ಮಾಡಿದ್ದು, ತುಂಗಭದ್ರಾ ನದಿ (Tungabhadra River) ಪಾತ್ರದಲ್ಲಿ ಪ್ರವಾಹದ ಭೀತಿ ಹೆಚ್ಚಾಗಿದೆ. ಹೀಗಾಗಿ ನದಿ ಪಾತ್ರದ ಗ್ರಾಮಗಳ ಜನರು ನದಿ ತೀರಕ್ಕೆ ಹೋಗದಂತೆ ಟಿಬಿ ಬೋರ್ಡ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದರೆ, ಇನ್ನಷ್ಟು ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸದ್ಯ 90,893 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಿರುವುದರಿಂದ ಹಂಪಿಯ ಕೆಲ ಸ್ಮಾರಕಗಳಿಗೆ ಮುಳುಗಡೆ ಭೀತಿ ಎದುರಾಗಿದೆ.ಇದನ್ನೂ ಓದಿ: ಬೆಂಗಳೂರಲ್ಲಿ ಚಿನ್ನದಂಗಡಿ ದರೋಡೆ ಕೇಸ್‌ – ಟಾಯ್‌ ಗನ್ ತೋರಿಸಿ ಚಿನ್ನ ರಾಬರಿ

  • ಭಾಗಶಃ ಭರ್ತಿಯಾದ ತುಂಗಭದ್ರಾ ಜಲಾಶಯ

    ಭಾಗಶಃ ಭರ್ತಿಯಾದ ತುಂಗಭದ್ರಾ ಜಲಾಶಯ

    ಬಳ್ಳಾರಿ/ಕೊಪ್ಪಳ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯ (Tungabhadra Dam) ಭಾಗಶಃ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.ಇದನ್ನೂ ಓದಿ: ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

    ಬಳ್ಳಾರಿ (Ballary) ಜಿಲ್ಲೆಯ ಹೊಸಪೇಟೆ (Hosapete) ಹೊರವಲಯದ ಹಾಗೂ ಕೊಪ್ಪಳದ (Koppal) ಮುನಿರಾಬಾದ್ ಬಳಿಯಿರುವ ಡಿಬಿ ಡ್ಯಾಂ (TB Dam) 105 ಟಿಎಂಸಿ ಗರಿಷ್ಟ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಇದೀಗ 77 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಜಲಾಶಯದ ಸುರಕ್ಷತಾ ದೃಷ್ಟಿಯಿಂದ 62 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದ್ದು, ಇದರ ಮನಮೋಹಕ ದೃಶ್ಯ÷ಗಳು `ಪಬ್ಲಿಕ್ ಟಿವಿ’ ಕ್ಯಾಮೆರಾದಲ್ಲಿ ಸೆರೆಯಾಗಿವೆ.

    ಜಲಾಶಯದ 1ಕಿ.ಮೀ ಮೇಲ್ಭಾಗದಿಂದ ರಮಣೀಯ ನೋಟ ಸೆರೆಯಾಗಿದ್ದು, ಕಣ್ಮನ ಸೆಳೆಯುತ್ತಿದೆ. 1,633 ಅಡಿ ಗರಿಷ್ಠ ಮಟ್ಟದ ಜಲಾಶಯದಲ್ಲಿ ಇಂದು 1,625.07 ಅಡಿ ನೀರಿದ್ದು, 54,500 ಕ್ಯೂಸೆಕ್ ಒಳಹರಿವು ಇದೆ.ಇದನ್ನೂ ಓದಿ: ಸ್ಯಾಮ್‌ಸಂಗ್‌ ಗೆಲಾಕ್ಸಿ ಎಸ್‌25 ಆಲ್ಟ್ರಾ, ಎಸ್‌24 ಆಲ್ಟ್ರಾ, ಎಸ್‌23 ಆಲ್ಟ್ರಾ ಬೆಲೆ ದಿಢೀರ್‌ ಭಾರೀ ಇಳಿಕೆ

  • ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

    ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

    ಕೊಪ್ಪಳ: ರಾಜ್ಯದ ಎರಡನೇ ಅತಿದೊಡ್ಡದಾದ ತುಂಗಭದ್ರಾ ಜಲಾಶಯವು (Tungabhadra Dam) ಅವಧಿಗೂ ಮುಂಚೆಯೇ ಅರ್ಧದಷ್ಟು ಭರ್ತಿಯಾಗಿದ್ದು, ಇದರಿಂದ ರೈತರಲ್ಲಿ ಮಂದಹಾಸ ಮೂಡಿದೆ. ಜು.1ರಂದು ಅಣೆಕಟ್ಟೆಯಿಂದ ಎಲ್ಲಾ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ.

    ಕಳೆದ ವರ್ಷ ಜಲಾಶಯದಲ್ಲಿ 25 ಟಿಎಂಸಿ ಮಾತ್ರ ನೀರು ಇತ್ತು. ಉತ್ತಮವಾಗಿ ಮುಂಗಾರು ಮಳೆಯಾದ ಹಿನ್ನೆಲೆ ಕೆಲವೇ ದಿನಗಳಲ್ಲಿ ಒಳಹರಿವು ಲಕ್ಷಗಟ್ಟಲೇ ಏರಿಕೆಯಾಯಿತು. ಇದರಿಂದ ಅಣೆಕಟ್ಟೆಗೆ ಏಕಾಏಕಿ ನೀರು ಹೆಚ್ಚಾಗಿತ್ತು. ಹಾಗಾಗಿ ಜನಪ್ರತಿನಿಧಿಗಳು ರೈತರ ಬೇಡಿಕೆಯಂತೆ ನೀರಾವರಿ ಸಲಹಾ ಸಮಿತಿ ಸಭೆ ನಡೆಸದೇ ಜು.21ಕ್ಕೆ ನೀರು ಬಿಡಲಾಗಿತ್ತು. ಆದರೆ ಈ ಬಾರಿ ಪಶ್ಚಿಮಘಟ್ಟಗಳಲ್ಲಿ ಭಾರಿ ಮಳೆಯಾಗಿದ್ದು, ತುಂಗಾ ಮತ್ತು ಭದ್ರಾ ಜಲಾಶಯಗಳು ಸಂಪೂರ್ಣವಾಗಿ ಭರ್ತಿಯಾಗಿದೆ. ಎರಡು ಜಲಾಶಯಗಳಿಂದಲೂ ನೀರು ನದಿಗೆ ಹರಿಸಲಾಗಿದೆ. ಇದರಿಂದಾಗಿ ಪ್ರಸ್ತುತ ಜಲಾಶಯದಲ್ಲಿ 50 ಟಿಎಂಸಿ ನೀರು ಸಂಗ್ರಹವಾಗಿದೆ.ಇದನ್ನೂ ಓದಿ: ಕೋಮುಲ್ ಚುನಾವಣೆಯಲ್ಲಿ ಹಣದ ಹೊಳೆ – ಒಂದೊಂದು ಮತಕ್ಕೆ 5 ರಿಂದ 7 ಲಕ್ಷ ಸಂದಾಯ

    ಮುಂಗಾರು ಆರಂಭದಲ್ಲಿಯೇ ತುಂಗಭದ್ರಾ ಜಲಾಶಯದಲ್ಲಿ ಅರ್ಧದಷ್ಟು ನೀರು ಸಂಗ್ರಹವಾಗಿದ್ದು, ಕಳೆದ ವರ್ಷಕ್ಕಿಂತಲೂ 20 ದಿನ ಮುಂಚೆಯೇ ನೀರು ಬಿಡುಗಡೆಗೆ ಸರ್ಕಾರ ನಿರ್ಧರಿಸಿದಂತೆ ಭಾಸವಾಗುತ್ತಿದೆ. ಈ ಹಿನ್ನೆಲೆ ಜೂ.27ರಂದು ಬೆಂಗಳೂರಿನಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ನಿಗದಿಪಡಿಸಲಾಗಿದೆ. ಈ ಮೂಲಕ ಜು.1ರಿಂದ ತುಂಗಭದ್ರಾ ಅಣೆಕಟ್ಟೆಯ ಎಡದಂಡೆ, ಬಡಲದಂಡೆ, ವಿಜಯನಗರ, ಹೈಲೆವೆಲ್ ಕಾಲುವೆ ಸೇರಿ ಎಲ್ಲ ಕಾಲುವೆಗಳಿಗೆ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಇದರಿಂದ ರೈತರಿಗೆ ಅನುಕೂಲ ಆಗಲಿದೆ.

    ತುಂಗಭದ್ರಾ ಜಲಾಶಯವು 105 ಟಿಎಂಸಿ ಸಂಗ್ರಹ ಸಾಮರ್ಥ್ಯ ಹೊಂದಿದೆ. ರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಪ್ರಾಧಿಕಾರವು ತುಂಗಭದ್ರಾ ಜಲಾಶಯದ ಸುರಕ್ಷತಾ ದೃಷ್ಟಿಯಿಂದ 80 ಟಿಎಂಸಿ ನೀರು ಸಂಗ್ರಹ ಮಾಡುವಂತೆ ಸಲಹೆ ನೀಡಿತ್ತು. ಈಗಾಗಲೇ ತುಂಗಭದ್ರಾ ಮಂಡಳಿಯು ತಮ್ಮ ಸಭೆಯಲ್ಲಿ ಚರ್ಚಿಸಿ, ಪ್ರಾಧಿಕಾರದ ಸಲಹೆಯಂತೆ 80 ಟಿಎಂಸಿ ನೀರು ಸಂಗ್ರಹ ಮಾಡಲು ಅನುಮೋದನೆ ಪಡೆದಿದೆ ಎನ್ನಲಾಗಿದ್ದು, ಆದೇಶ ಹೊರಡಿಸುವುದು ಮಾತ್ರ ಬಾಕಿ ಇದೆ.

    ಮುಂಗಾರು ಬೆಳೆಗೆ 130 ಟಿಎಂಸಿ ನೀರು ಬೇಕಾಗುತ್ತದೆ. ಪ್ರಸ್ತುತ 50 ಟಿಎಂಸಿ ನೀರು ಸಂಗ್ರಹವಾಗಿದೆ. ನವೆಂಬರ್ ತಿಂಗಳಲ್ಲಿ ಸೈಕ್ಲೋನ್ ಬಂದು, ಮಳೆಯಾಗುವ ಸಾಧ್ಯತೆ ಇದೆ. ಕೇವಲ 11 ಸಾವಿರ ಕ್ಯೂಸೆಕ್ ಒಳಹರಿವು ಬಂದರೂ ಕೂಡಾ 80 ಟಿಎಂಸಿಯಷ್ಟು ತಟಸ್ಥತೆ ಕಾಯ್ದುಕೊಂಡು, ಡೆಡ್ ಸ್ಟೋರೇಜ್, ಆವಿ, ಕುಡಿಯಲು, ಜಲಚರ ಸೇರಿ ಎಲ್ಲ ಸೇರಿ 15 ಟಿಎಂಸಿ ಬೇಕಾಗುತ್ತದೆ. ಇದರ ಹೊರತಾಗಿ 65 ಟಿಎಂಸಿ ನೀರು ಸಂಗ್ರಹವಾದರೆ, ಮತ್ತೊಮ್ಮೆ ರೈತರಿಗೆ ನೀರು ಲಭಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಹೈಲೆವೆಲ್ ಕಾಲುವೆಯ ರೈತರು ಹತ್ತಿ, ಮೆಣಸಿನಕಾಯಿ 6 ತಿಂಗಳ ಬೆಳೆ ಬೆಳೆಯುತ್ತಾರೆ. ಇವರು ಉದಾರತೆ ತೋರಿದರೆ, ಉಳಿದ ಎಲ್ಲ ಕಾಲುವೆಗಳ ರೈತರಿಗೆ ಅನುಕೂಲ ಆಗಲಿದೆ.ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟ; ರಣಪ್ರವಾಹಕ್ಕೆ ಇಬ್ಬರು ಬಲಿ, 15-20 ಕಾರ್ಮಿಕರು ಕೊಚ್ಚಿ ಹೋಗಿರುವ ಶಂಕೆ

  • ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ

    ಟಿಬಿ ಡ್ಯಾಂನಲ್ಲಿ ಅಧಿಕಾರಿಯ ಪುತ್ರನ ನಿಶ್ಚಿತಾರ್ಥ – ನಿಷೇಧವಿದ್ದರೂ ಖಾಸಗಿ ಕಾರ್ಯಕ್ಕೆ ಬಳಸಿಕೊಂಡು ನಿಯಮ ಉಲ್ಲಂಘನೆ

    ಕೊಪ್ಪಳ: ಭಾರತ-ಪಾಕಿಸ್ತಾನ ಉದ್ವಿಗ್ನತೆ ಹಿನ್ನೆಲೆ ನಿರ್ಬಂಧಿಸಲಾಗಿದ್ದ ಟಿಬಿ ಡ್ಯಾಂನಲ್ಲಿ (TB Dam) ಅಧಿಕಾರಿ ಇಇ ಗಿರೀಶ್ ಪುತ್ರನ ನಿಶ್ಚಿತಾರ್ಥ ನೆರವೇರಿಸಿ ನಿಯಮ ಉಲ್ಲಂಘಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಭಾರತ-ಪಾಕಿಸ್ತಾನ ಗಡಿಯಲ್ಲಿ ಯುದ್ಧ ಕಾರ್ಮೋಡದ ಹಿನ್ನೆಲೆ ಟಿಬಿ ಡ್ಯಾಂನಲ್ಲಿ ಮೇ 8ರಿಂದ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಜೊತೆಗೆ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೂ ಕೂಡ ಅಧಿಕಾರಿ ಇಇ ಗಿರೀಶ್ ಕೊಪ್ಪಳ (Koppal) ತಾಲೂಕಿನ ಮುನಿರಾಬಾದ್‌ನ (Munirabad) ಟಿಬಿ ಡ್ಯಾಂನ ಲೇಕ್ ವ್ಯೂ (Lake View) ಬಳಿ ಇರುವ ವಸತಿ ಗೃಹದಲ್ಲಿ ಮಗನ ನಿಶ್ಚಿತಾರ್ಥ ನೆರವೇರಿಸಿದ್ದಾರೆ.ಇದನ್ನೂ ಓದಿ: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್‌ನಲ್ಲಿ ನಿಗೂಢ ಸಾವು

    ಮೇ 10ರಂದು ನಿಶ್ಚಿತಾರ್ಥ ನಡೆದಿದ್ದು, ಶಾಮಿಯಾನ, ಖುರ್ಚಿ ಹಾಕಿ ನೂರಾರು ಜನರಿಗೆ ಹೋಳಿಗೆ ಊಟ ಹಾಕಿಸಿರುವುದಾಗಿ ತಿಳಿದುಬಂದಿದೆ. ಜೊತೆಗೆ ಟಿಬಿ ಡ್ಯಾಂ ಹಿಂಭಾಗಕ್ಕೆ ಹೋಗದಂತೆ ಚೆಕ್‌ಪೋಸ್ಟ್ ನಿರ್ಮಾಣ ಮಾಡಲಾಗಿತ್ತು. ಚೆಕ್‌ಪೋಸ್ಟ್ ಮೂಲಕ ನೂರಾರು ಜನರು ಹಾದು ಹೋಗಿರುವುದು ತಿಳಿದು ಬಂದಿದೆ.

    ಇತ್ತೀಚೆಗೆ ಲೆಕ್‌ವ್ಯೂ ಬಳಿ ಮಾಕ್‌ಡ್ರಿಲ್ ಸಹ ಮಾಡಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ ನಿಯಮ ಉಲ್ಲಂಘಿಸಿದ್ದು, ಅಧಿಕಾರಿ ಗಿರೀಶ್ ಮೇಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.ಇದನ್ನೂ ಓದಿ: Cannes Film Festival 2025: ರೆಡ್ ಕಾರ್ಪೆಟ್‌ನಲ್ಲಿ ಮಿಂಚಿದ ಕನ್ನಡತಿ ದಿಶಾ ಮದನ್