Tag: Tungabhadra Dam

  • ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    ತುಂಗಭದ್ರಾ ಡ್ಯಾಂ ವಾರ್ಷಿಕ ನಿರ್ವಹಣಾ ಗುತ್ತಿಗೆಗೆ ಎಷ್ಟು ಕೋಟಿ ಹಣ ಸಂದಾಯವಾಗಿದೆ? – ಜನಾರ್ದನ ರೆಡ್ಡಿ ಪ್ರಶ್ನೆ

    – ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ, ಡ್ಯಾಂ ಸರಿಪಡಿಸುವಂತೆ ಆಗ್ರಹ

    ಕೊಪ್ಪಳ: ತುಂಗಭದ್ರಾ ಡ್ಯಾಂನ (Tungabhadra Dam) ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಬಹಿರಂಗ ಪಡಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್‌ (TB Dam crest gate collapse) ವೀಕ್ಷಣೆ ಮಾಡಿದ ಶಾಸಕ ಜನಾರ್ದನ ರೆಡ್ಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ತುಂಗಭದ್ರಾ ಜಲಾಶಯದ ನಿರ್ವಹಣೆಗೆ ಯಾರಿಗೆ ಕೊಟ್ಟಿದ್ದಾರೆ? ಇದಕ್ಕೆ ಎಲ್ಲಾ ಸರ್ಕರವೇ ಹೊಣೆ. ಡಿಕೆಶಿ ಅಚಾನಕ್ ಆಗಿದೆ ಅಂತ ಹೇಳ್ತಾರೆ, ಇದನ್ನ ಒಪ್ಪುವ ಪ್ರಶ್ನೆಯೇ ಬರಲ್ಲ ಅಂತ ಹೇಳಿದ್ದಾರೆ. ಇದನ್ನೂ ಓದಿ: Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    ಸಿಬಿಐ ತನಿಖೆ ಆಗಲಿ:
    ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದಿರಾ ಕ್ಯಾಂಟೀನ್‌ಗೆ ಡಿಜಿಟಲ್‌ ಸ್ಪರ್ಶ – ಇನ್ಮುಂದೆ ಆನ್‌ಲೈನ್‌ನಲ್ಲಿ ಊಟ ಬುಕ್ಕಿಂಗ್‌!

    ಅಲ್ಲದೇ ಗೇಟ್‌ ಅನ್ನು ನೀವು ಸರಿ ಮಾಡದಿದ್ದರೇ ಯಾರಾದ್ರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ್ಮ ಭಾಗದ ರೈತರಿಗೆ (Farmers) ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಒತ್ತಾಯಿಸಿದ್ದಾರೆ.

    ಬೇಸಿಗೆ ಕಾಲದಲ್ಲಿ ಡ್ಯಾಂ ಗೇಟ್‌ ಪರಿಶೀಲಿಸಿ, ನಿರ್ವಹಣೆ ಮಾಡಬೇಕು. ಸರ್ಕಾರ ಯಾವ ಕೆಲಸವನ್ನೂ ಮಾಡಿಲ್ಲ. ಹಳೇ ಡ್ಯಾಂಗಳ ನಿರ್ವಹಣೆಗೆ ಕೇಂದ್ರ ಸರ್ಕಾರ ತಂಡ ರಚನೆ ಮಾಡಿದೆ. ಅದನ್ನ ಇವರು ಸಂಪರ್ಕ ಮಾಡಿದ್ದಾರಾ? ಇದೆಲ್ಲವೂ ಮುಖ್ಯವಾಗುತ್ತೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಹಣ ಖರ್ಚು ಮಾಡುತ್ತೆ? ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಇದ್ಯಾವುದೇ ನಿಯಮಗಳನ್ನ ಅನುಸರಿಸುತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಿಕ್ಷಕರಿಂದ ಹೋರಾಟ – ಸರ್ಕಾರಿ ಶಾಲೆಗಳಲ್ಲಿ ತರಗತಿ ವ್ಯತ್ಯಯ?

    ವಿಶ್ವದಲ್ಲಿರುವ ಎಲ್ಲಾ ಟೆಕ್ನಾಲಜಿ ಬಳಸಿ:
    ಸರಿಯಾಗಿ ನಿರ್ವಹಣೆ ಮಾಡಿದ್ದರೇ ಈ ಘಟನೆ ನಡೆಯುತ್ತಿರಲಿಲ್ಲ. ಇದರಲ್ಲಿ ಸರ್ಕಾರದ ನಿರ್ಲಕ್ಷ್ಯ ಎದ್ದು ಕಾಣುತ್ತೆ. ಇದು ಮೂರು ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾದ್ರೂ ಡ್ಯಾಂ ನಮ್ಮ ಸುಪರ್ದಿಯಲ್ಲಿದೆ. ನಾನು ಯಾವುದೇ ರಾಜಕೀಯ ಉದ್ದೇಶದಿಂದ ಮಾತನಾಡುತ್ತಿಲ್ಲ. ವಿಶ್ವದಲ್ಲಿ ಇರುವ ಎಲ್ಲಾ ರೀತಿಯ ಟೆಕ್ನಾಲಜಿ ಬಳಸಿ ಇದನ್ನ ಕೂಡಲೇ ನಿರ್ವಹಣೆ ಮಾಡಿ ಡ್ಯಾಂ ಉಳಿಸುವ ಕೆಲಸ ಮಾಡಬೇಕು. ಡಿಕೆಶಿ ಹೇಳಿದಂತೆ ಅಚಾನಕ್ ಆಗಿ ಕಟ್ ಆಗಿದೆ ಅಂದ್ರೆ ಸಣ್ಣ ಮಕ್ಕಳು ಕೂಡಾ ನಗ್ತಾರೆ. ಈ ವೈಪಲ್ಯಕ್ಕೆ ಸಂಪೂರ್ಣ ಜವಾಬ್ದಾರಿ ಸರ್ಕಾರವೇ ತಗೊಬೇಕು. ಇದು ಡಿಬಿ ಡ್ಯಾಂ ಬೋರ್ಡ್‌ ಹಾಗೂ ಸರ್ಕಾರ ಎರಡರ ವೈಫಲ್ಯವೂ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.

     

  • Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    Tungabhadra Dam | 5 ದಿನಗಳಲ್ಲಿ ಗೇಟ್‌ ರಿಪೇರಿ – ಸರ್ಕಾರಕ್ಕೆ ಅಧಿಕಾರಿಗಳ ಭರವಸೆ

    – ಪ್ರಯತ್ನ ವಿಫಲವಾದರೆ ಎಲ್ಲಾ 60 ಟಿಎಂಸಿ ನೀರು ಖಾಲಿ ಮಾಡುವುದು

    ಕೊಪ್ಪಳ/ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್ ಗೇಟ್ ಕಿತ್ತು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ದಿನಗಳೊಳಗೆ ಗೇಟ್ ರಿಪೇರಿ ಮಾಡಿ ಕೊಡುವುದಾಗಿ ಸರ್ಕಾರಕ್ಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

    ಭಾನುವಾರ ಸಂಜೆ ಆಂಧ್ರಪ್ರದೇಶ ಹಾಗೂ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿದೆ. ಎಲ್ಲಾ ಕ್ರಸ್ಟ್‌ ಗೇಟ್‌ (Crest Gate) ತೆರೆದ ಪರಿಣಾಮ ಸುತ್ತಮುತ್ತಲಿನ ಸೇತುವೆಗಳ ಪ್ರವೇಶ ಮೇಲೆ ನಿರ್ಬಂಧ ವಿಧಿಸಲಾಗಿದೆ.

    ಅಪಾರ ಪ್ರಮಾಣದ ನೀರು ಹೊರಗಡೆ ಹೋಗುವುದನ್ನು ಹಾಗೂ ವೀಕ್ಷಣೆ ಮಾಡಲು ನರು ಕಿರು ಸೇತುವೆ ಸೇರಿದಂತೆ ಮುಖ್ಯ ಸೇತುವೆಗಳ ಮೇಲೆ ನಿಲ್ಲುತ್ತಿದ್ದರು. ಅಲ್ಲದೇ ನದಿಯ ಸೇತುವೆಯ ಮೇಲೆ ಸಹ ಜನರು ಹುಚ್ಚಾಟ ಮೆರೆಯುತ್ತಿದ್ದರು. ನಿನ್ನೆ ಡಿಸಿಎಂ ಡಿಕೆ. ಶಿವಕುಮಾರ್ (DK Shivakumar) ಅವರ ಸೂಚನೆಯಂತೆ ವಿಜಯನಗರ ಡಿಸಿ ಎಂಎಸ್ ದಿವಾಕರ್ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

    ಸರ್ಕಾರದ ಮುಂದಿರುವ ಆಯ್ಕೆಗಳೇನು?
    ಐದು ದಿನಗಳಲ್ಲಿ ಗೇಟ್ ರಿಪೇರಿ ಮಾಡುವುದಕ್ಕೆ ಸರ್ಕಾರ ಪ್ಲಾನ್‌ ಮಾಡಿಕೊಂಡಿದೆ. ಆರಂಭದಲ್ಲಿ 25 ಟಿಎಂಸಿ ನೀರು ಬಿಟ್ಟು, ಗೇಟ್ ಕೂಡಿಸಲು ಪ್ರಯತ್ನ ಮಾಡವುದು. ಈ ಪ್ರಯತ್ನ ವಿಫಲವಾದರೆ 40 ಟಿಎಂಸಿ ನೀರು ಹೊರಕ್ಕೆ ಬಿಡುವುದು.

    ಈ ಪ್ರಯತ್ನವೂ ಆಗದೇ ಇದ್ದರೆ ಅಂತಿಮವಾಗಿ 60 ಟಿಎಂಸಿ ನೀರು ಖಾಲಿ ಮಾಡಲಾಗುತ್ತದೆ. 60 ಟಿಎಂಸಿ ನೀರು ಖಾಲಿ ಮಾಡಿದರೆ ಗೇಟ್‌ ಅನ್ನು ಸುಲಭವಾಗಿ ಹಾಕಬಹುದು.

    ಈಗಾಗಲೇ ತಜ್ಞರ ಮೂಲಕ ಸಭೆ ನಡೆಸಿ, ಚರ್ಚೆ ನಡೆಸಿರುವ ಅಧಿಕಾರಿಗಳು ಒಳ ಹರಿವಿನ ಪ್ರಮಾಣ ನೋಡಿಕೊಂಡು ಹೊರ ಹರಿವು ಹೆಚ್ಚಿಸಲು ತೀರ್ಮಾನ ಮಾಡಲಾಗುತ್ತಿದೆ. ಎಂಥಹದ್ದೇ ಪರಿಸ್ಥಿತಿ ಎದುರಾದರೂ ಐದು ದಿನಗಳಲ್ಲಿ ಗೇಟ್ ರಿಪೇರಿ ಮುಗಿಸಿ, ಜನರಿಗೆ ಕೃಷಿ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಶತ ಪ್ರಯತ್ನ ಮಾಡಲಾಗುತ್ತಿದೆ.

     

  • ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

    ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಮುರಿದ ಪ್ರಕರಣ; ಸರ್ಕಾರದ್ದೇ ನಿರ್ಲಕ್ಷ್ಯ ಎಂದು ಕಿಡಿಕಾರಿದ ಬಿಜೆಪಿ – ಜನರ ಸುರಕ್ಷತೆಗೆ ಆಗ್ರಹ

    ಬೆಂಗಳೂರು: ರಾಜ್ಯ ಸರ್ಕಾರ ತುಂಗಭದ್ರಾ ಡ್ಯಾಂ (Tungabhadra Dam) ಕ್ರಸ್ಟ್ ಗೇಟ್‌ಗಳನ್ನು ಸರಿಯಾಗಿ ನಿರ್ವಹಣೆ ಮಾಡದೇ ನಿರ್ಲಕ್ಷಿಸಿದ ಪರಿಣಾಮ ಈ ಪರಿಸ್ಥಿತಿ ಎದುರಾಗಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತಾಡಿದ‌ ಬೊಮ್ಮಾಯಿ, ಡ್ಯಾಂ ಮ್ಯಾನೇಜ್‌ಮೆಂಟ್ ಕಮಿಟಿಯ ಸದಸ್ಯರು ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನ್ಸುತ್ತೆ. ಇಲ್ಲದಿದ್ದರೆ ಈ ಪರಿಸ್ಥಿತಿ ಬರ್ತಿರಲಿಲ್ಲ ಎಂದರು. ಇದನ್ನೂ ಓದಿ: Tungabhadra Dam | ಹೈದರಾಬಾದ್‌ನಿಂದ ಹೊಸ ಗೇಟ್ ತರಿಸಲು ಪ್ಲ್ಯಾನ್‌ – ಆಂಧ್ರ, ತೆಲಂಗಾಣದ ಕೆಲ ಜಿಲ್ಲೆಗಳಿಗೂ ಆತಂಕ!

    ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿರುವ ಟಿಬಿ ಡ್ಯಾಂ ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ.‌ ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಸಮಾನಾಂತರವಾದ ಡ್ಯಾಂ ಕಟ್ಟಬೇಕು ಅಂತಾ ನಮ್ಮ ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು ಎಂದು ತಿಳಿಸಿದರು.

    ಬಳ್ಳಾರಿ ಜಿಲ್ಲೆಯ ತುಂಗ-ಭದ್ರಾ ಡ್ಯಾಮ್‌ನ ಕ್ರಸ್ಟ್ ಗೇಟ್ ಕಟ್ಟಾಗಿ ನದಿ ಪಾತ್ರದ 30ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದ್ದು, ಪ್ರವಾಹ ಎದುರಾಗುವ ಆತಂಕ ಜನರಲ್ಲಿ ಮನೆ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: KRS ಡ್ಯಾಂನಲ್ಲೂ ಸ್ಟಾಫ್ ಲಾಕ್ ಗೇಟ್ ಇಲ್ಲ – ಈಗಲೇ ಎಚ್ಚೆತ್ತುಕೊಳ್ಳೋದು ಒಳ್ಳೆಯದು: ಹೆಚ್‌ಡಿಕೆ

    ಬರಗಾಲದಿಂದ ನಿರಂತರ ತತ್ತರಿಸಿದ್ದ ಜನತೆಗೆ ಅಣೆಕಟ್ಟು ತುಂಬಿದ ಖುಷಿಯಲ್ಲಿರುವಾಗಲೇ ಕ್ರಸ್ಟ್ ಗೇಟ್ ಕಟ್ಟಾಗಿರುವುದರ ಪರಿಣಾಮ ಸಂಗ್ರಹಿತ ನೀರು ಹೊರಹೋದರೆ ಮುಂದೆ ಕೃಷಿಗೆ ತೊಂದರೆಯಾಗುವ ಆತಂಕ ಆರಂಭವಾಗಿದೆ. ಇಂಥ ಬಹುದೊಡ್ಡ ಡ್ಯಾಮ್ ನಿರ್ವಹಣೆಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕಿದ್ದ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸರ್ಕಾರ ಹಾಗೂ ಜಿಲ್ಲಾಡಳಿತ ತಕ್ಷಣ ನೆರೆ ಭೀತಿಯಲ್ಲಿರುವ ಗ್ರಾಮಗಳ ಜನರನ್ನು ಸ್ಥಳಾಂತರಿಸಿ, ಕೂಡಲೇ ಜಲಾಶಯದ ಕ್ರಸ್ಟ್ ಗೇಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

    ಪ್ರತಿಪಕ್ಷ ನಾಯಕ ಆರ್.ಅಶೋಕ್ ಕೂಡಾ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದ್ದು, ಡ್ಯಾಂನ ಹೊರಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ. ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯೂ ಸಹ ಕೈತಪ್ಪಬಹುದು ಎಂದು ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

    ನೀರಾವರಿ ಸಚಿವರೂ ಆಗಿರುವ ಡಿಸಿಎಂ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ? ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು. ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ? ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ? ನಿಮ್ಮ ದುರಾಡಳಿತದಿಂದ ಉತ್ತಮ ಮಳೆಯಾಗಿದ್ದರೂ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

  • ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ನದಿಗೆ

    ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ನದಿಗೆ

    – ಕೆಆರ್‌ಎಸ್‌ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ – ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ

    ಕೊಪ್ಪಳ/ಮಂಡ್ಯ: ನಿರಂತರ ಮಳೆಯಾಗುತ್ತಿರುವ‌ ಹಿನ್ನೆಲೆಯಲ್ಲಿ ತುಂಗಭದ್ರಾ ಡ್ಯಾಂನಿಂದ (Tungabhadra Dam) 1.58 ಲಕ್ಷ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ತುಂಗಭದ್ರಾ ಜಲಾಶಯ ಮಂಡಳಿ ತಿಳಿಸಿದೆ.

    ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದಿಂದ 1.58 ಲಕ್ಷ ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಜಲಾಶಯದಿಂದ ಭಾರೀ ಪ್ರಮಾಣದ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ, ವರದಾ ನದಿಪಾತ್ರದಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಇದನ್ನೂ ಓದಿ: Wayanad Landslide | ಒಂದೇ ಕುಟುಂಬದ 9 ಜನ ಕನ್ನಡಿಗರು ನಾಪತ್ತೆ – ಕಣ್ಣೀರಿಟ್ಟ ಸಂಬಂಧಿಕ

    ಸದ್ಯ 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 97.945 ಟಿಎಂಸಿ ನೀರು ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Wayanad Landslides: ನಾಲ್ವರು ಕನ್ನಡಿಗರು ದುರ್ಮರಣ – ಬೆಂಗಳೂರಿನ ಇಬ್ಬರು ಪ್ರವಾಸಿಗರು ಕಣ್ಮರೆ!

    ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ:
    ಕಳೆದ ರಾತ್ರಿ ಕೆಆರ್‌ಎಸ್ ಅಣೆಕಟ್ಟೆಯಿಂದ 1.72 ಲಕ್ಷ ಕ್ಯುಸೆಕ್‌ ನೀರು ಬಿಟ್ಟಿದ್ದ ಪರಿಣಾಮ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನಕ್ಕೆ ಜಲದಿಗ್ಭಂಧನವಾಗಿತ್ತು. ಸದ್ಯ ಕೆಆರ್‌ಎಸ್ ಜಲಾಶಯದಿಂದ ಹೊರಹರಿವಿನ ಪ್ರಮಾಣ 1 ಲಕ್ಷ ಕ್ಯುಸೆಕ್‌ಗೆ ಇಳಿಕೆ ಮಾಡಿರುವುದರಿಂದ ನಿಮಿಷಾಂಭ ದೇವಸ್ಥಾನ ಸಹಜ ಸ್ಥಿತಿಗೆ ಬಂದಿದೆ. ಭಕ್ತರಿಗೆ ಎಂದಿನಂತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯನ್ನು ಭೇಟಿಯಾದ ಡಿಕೆಶಿ – ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಮನವಿ

  • ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತ

    ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ ಜಲಾವೃತ

    ರಾಯಚೂರು: ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಭಾರೀ ಪ್ರಮಾಣದ ನೀರು ಹರಿಸಿರುವುದರಿಂದ ಗುರುರಾಘವೇಂದ್ರ ಸ್ವಾಮಿಗಳ ಏಕಶಿಲಾ ಬೃಂದಾವನ (Vrundavana) ಜಲಾವೃತವಾಗಿದ್ದು, ರಾಯರ ಜಪದ ಕಟ್ಟೆ ಮುಳುಗಡೆಯಾಗಿದೆ.

    ರಾಯಚೂರು (Raichuru) ತಾಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ಬೃಂದಾವನ ಜಲಾವೃತವಾಗಿದೆ. ತುಂಗಭದ್ರಾ ನದಿ (Tungabhadra River) ಮೈದುಂಬಿ ಹರಿಯುತ್ತಿರುವುದರಿಂದ ಬಿಚ್ಚಾಲಮ್ಮ ದೇವಿ ದೇವಾಲಯ ಬಳಿಯ ರಾಯರ ಬೃಂದಾವನಕ್ಕೆ ನೀರು ನುಗ್ಗಿದೆ.

    ಏಕಶಿಲಾ ಬೃಂದಾವನ ದರ್ಶನ ಪಡೆಯಲು ಭಕ್ತರು ಪರದಾಟ ನಡೆಸಿದ್ದಾರೆ. ರಾಯರ ಬೃಂದಾವನಕ್ಕೆ ನೀರಿನಲ್ಲೇ ತೆರಳಿ ಅರ್ಚಕರು ಪೂಜೆ, ಅಭಿಷೇಕ ಮಾಡಲು ಸಾಹಸಪಡುತ್ತಿದ್ದಾರೆ.

    ಗುರು ರಾಘವೇಂದ್ರ ಸ್ವಾಮಿಗಳು ತಪಸ್ಸು ಮಾಡಿದ್ದ ಜಪದ ಕಟ್ಟೆ ಸಂಪೂರ್ಣ ಮುಳುಗಡೆಯಾಗಿದೆ. ಮಂತ್ರಾಲಯಕ್ಕೆ ಬರುವ ಭಕ್ತರು ಎಲೆಬಿಚ್ಚಾಲಿಗೆ ತಪ್ಪದೇ ಭೇಟಿ ನೀಡುತ್ತಾರೆ. ರಾಯರ ಪರಮ ಭಕ್ತ ಅಪ್ಪಣ್ಣಾಚಾರ್ ಬೃಂದಾವನ ನಿರ್ಮಿಸಿ ಈ ಹಿಂದೆ ಪೂಜೆ ಮಾಡಿದ್ದರು.

    ಎಲೆಬಿಚ್ಚಾಲಿಯ ಬಿಚ್ಚಾಲಮ್ಮ ದೇವಾಲಯ ಸುತ್ತಲೂ ನೀರು ಆವರಿಸಿದೆ. ಇಲ್ಲಿನ ಉಗ್ರನರಸಿಂಹ ದೇವಾಲಯ, ನಾಗದೇವತೆ ಕಟ್ಟೆ, ಶಿವಲಿಂಗ ಜಲಾವೃತವಾಗಿದ್ದು ಮುಳುಗಡೆ ಹಂತದಲ್ಲಿವೆ.

     

  • ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

    ಟಿಬಿ ಡ್ಯಾಂನ 30 ಕ್ರಸ್ಟ್‌ ಗೇಟ್‌ ಓಪನ್‌; 90‌,000 ಕ್ಯುಸೆಕ್‌ ನೀರು ನದಿಗೆ – ಹಂಪಿಯ ಹಲವು ಸ್ಮಾರಕಗಳು ಮುಳುಗಡೆ

    ಬಳ್ಳಾರಿ: ಮಲೆನಾಡು ಸೇರಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ತುಂಗಭದ್ರಾ ಜಲಾಶಯದಿಂದ (Tungabhadra Dam) ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಲಾಗುತ್ತಿದ್ದು, ಹಂಪಿಯಲ್ಲೂ (Hampi) ಪ್ರವಾಹದ ಪರಿಸ್ಥಿತಿ ಎದುರಾಗಿದೆ.

    ಜಲಾಶಯದಿಂದ ಈಗಾಗಲೇ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವುದರಿಂದ ನದಿ ತೀರದಲ್ಲಿರುವ ಹಂಪಿಯ ಹಲವು ಐತಿಹಾಸಿಕ ಸ್ಮಾರಕಗಳು ಮುಳುಗಡೆಯಾಗಿವೆ. ಧಾರ್ಮಿಕ ವಿಧಿವಿಧಾನ ಮಂಟಪ, ಪುರಂದರದಾಸರ ಮಂಟಪ, ಜನಿವಾರ ಮಂಟಪ, ಸ್ನಾನ ಘಟ್ಟಗಳು ಮುಳುಗಡೆಯಾಗಿವೆ.

    105 ಟಿಎಂಸಿ ಸಾಮಾರ್ಥ್ಯದ ಜಲಾಶಯದಲ್ಲಿ ಇದೀಗ 102 ಟಿಎಂಸಿ ನೀರು (TMC Water) ಸಂಗ್ರಹವಾಗಿದೆ. ಹೀಗಾಗಿ 30 ಕ್ರಸ್ಟ ಗೇಟ್ ಗಳನ್ನ ಓಪನ್ ಮಾಡಿ 90 ಸಾವಿರ ಕ್ಯುಸೆಕ್‌ ನೀರು ತುಂಗಭದ್ರಾ ನದಿಗೆ ಹರಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ಬದಲಿ ನಿವೇಶನ – ಮುಡಾ ಸೈಟ್ ಹಂಚಿಕೆ ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

    ಕಂಪ್ಲಿಯ ಸೇತುವೆ ಬಂದ್‌:
    ತುಂಗಭದ್ರಾ ಜಲಾಶಯದಿಂದ ನದಿಗೆ 90 ಸಾವಿರ ಕ್ಯುಸೆಕ್‌ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ಬಳ್ಳಾರಿ (Bellary) ಜಿಲ್ಲೆಯ ಕಂಪ್ಲಿ ಪಟ್ಟಣಕ್ಕೆ ಪ್ರವಾಹದ ಭೀತಿ ಎದುರಾಗಿದೆ. ಕಂಪ್ಲಿಯ ಸೇತುವೆಯ ಮೇಲೆ ಸಾರ್ವಜನಿಕ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇದನ್ನೂ ಓದಿ: ಕತ್ರಿನಾ, ದೀಪಿಕಾ ಪಡುಕೋಣೆ ಜೊತೆಗಿನ ಬ್ರೇಕಪ್ ಬಗ್ಗೆ ಮೌನ ಮುರಿದ ರಣ್‌ಬೀರ್ ಕಪೂರ್

    ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ ಬಳಿ ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಸೇತುವೆಯ ಸಂಪರ್ಕ ಬಂದ್ ಮಾಡಿರುವುದರಿಂದ ಬಳ್ಳಾರಿ – ಗಂಗಾವತಿ ಸಂಪರ್ಕ ಸೇತುವೆ ಸ್ಥಗಿತಗೊಂಡಿದೆ. ಮೀನುಗಾರರ ಮನೆಗಳು, ಕೋಟೆ ಪ್ರದೇಶಕ್ಕೆ ನದಿ ನೀರು ನುಗ್ಗುವ ಸಾಧ್ಯತೆ ಇದ್ದರೂ, ಅಪಾಯ ಲೆಕ್ಕಿಸದೇ ಕೆಲ ಮೀನುಗಾರರು ಮೀನುಗಾರಿಕೆಯಲ್ಲಿ ತೊಡಗಿದ್ದಾರೆ.

    ಇನ್ನೂ ನದಿಯಲ್ಲಿನ ತ್ಯಾಜ್ಯ ಕಟ್ಟಿ ನೀರು ಹೊರ ಹೋಗದ ಪರಿಸ್ಥಿತಿ ನಿರ್ಮಾಣವಾಗಿರೋದ್ರಿಂದ, ಕಂಪ್ಲಿ ಪುರಸಭೆಯಿಂದ ಜೆಸಿಬಿ ಮೂಲಕ ತ್ಯಾಜ್ಯ ವಿಲೇವಾರಿ ಕಸರತ್ತು ಶುರುವಾಗಿದೆ. ಪ್ರವಾಹ ಎದುರಾದ್ರೆ ಪರಿಸ್ಥಿತಿ ಎದುರಿಸಲು ಜಿಲ್ಲೆಯ ಅಧಿಕಾರಿಗಳು ಸಕಲ ಸಿದ್ದತೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ಫ್ಯಾನ್ಸ್‌ಗೆ ಗುಡ್ ನ್ಯೂಸ್- ಜು.29ರಂದು ಹೊರಬೀಳಲಿದೆ ‘ಕೆಡಿ’ ಚಿತ್ರದ ಅಪ್‌ಡೇಟ್

  • ತುಂಗಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು – 24 ಗಂಟೆಯಲ್ಲಿ 9 ಟಿಎಂಸಿ ನೀರು ಸಂಗ್ರಹ!

    ತುಂಗಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು – 24 ಗಂಟೆಯಲ್ಲಿ 9 ಟಿಎಂಸಿ ನೀರು ಸಂಗ್ರಹ!

    – ವಾರದೊಳಗೆ ಜಲಾಶಯ ಭರ್ತಿ ಸಾಧ್ಯತೆ
    – ಆಲಮಟ್ಟಿ ಜಲಾಶಯದ 14 ಗೇಟ್ ಓಪನ್

    ಬಳ್ಳಾರಿ: ಮಲೆನಾಡು ಅಚ್ಚುಕಟ್ಟು ಪ್ರದೇಶದಲ್ಲಿ ನಿರಂತರ ಮಳೆ (Heavy Rain) ಸುರಿಯುತ್ತಿರುವುದರಿಂದ ತುಂಗಭದ್ರಾ ಜಲಾಶಯಕ್ಕೆ‌ (Tungabhadra Dam) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯಕ್ಕೆ ಎರಡು ದಿನಗಳಿಂದ ಪ್ರತಿನಿತ್ಯ 1 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬರ್ತಿದೆ.

    105 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇದೀಗ 55.972 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ 24 ಗಂಟೆಯಲ್ಲಿ ಬರೋಬ್ಬರಿ 9 ಟಿಎಂಸಿ ನೀರು ಜಲಾಶಯಕ್ಕೆ ಹರಿದುಬಂದಿದೆ (Water Inflow). ಸದ್ಯ ಜಲಾಶಯಕ್ಕೆ 1,08,090 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, 400 ಕ್ಯುಸೆಕ್ ನೀರನ್ನ ಹೊರಗೆ ಬಿಡಲಾಗ್ತಿದೆ. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ

    ಗುರುವಾರವು (ಜು.18) ಸಹ 7 ಟಿಎಂಸಿ, ಶುಕ್ರವಾರ (ಇಂದು) 9 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬಂದಿದೆ. ಇದೇ ರೀತಿ ನೀರು ಹರಿದುಬಂದರೆ ಒಂದೇ ವಾರದೊಳಗೆ ಜಲಾಶಯ ಭರ್ತಿಯಾಗುವ ಸಾಧ್ಯತೆ ಇದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

    ಆಲಮಟ್ಟಿ ಜಲಾಶಯದ 14 ಗೇಟ್ ಓಪನ್:
    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ (Almatti Dam) ಭರಪೂರ ನೀರು ಹರಿದು ಬರ್ತಿದೆ. ಪ್ರತಿನಿತ್ಯ ಸಾವಿರಾರು ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ನಾರಾಯಣಪುರ ಜಲಾಶಯಕ್ಕೂ ನೀರು ಹರಿಬಿಡಲಾಗುತ್ತಿದೆ.

    ಜಲಾಶಯ ಒಟ್ಟು 123.081 ಟಿಎಂಸಿ ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, ಸದ್ಯ 92 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ನಾರಾಯಣಪುರ ಜಲಾಶಯಕ್ಕೆ 14 ಗೇಟ್‌ಗಳ ಮೂಲಕ 65,000 ಕ್ಯುಸೆಕ್‌ ನೀರು ಹರಿಸಲಾಗುತ್ತಿದೆ. ಇದರಿಂದ ಕೃಷಿಗೆ ನೀರು ಪೂರೈಕೆಯಾಗುತ್ತಿದ್ದು, ರೈತರ ಮೊಗದಲ್ಲೂ ಮಂದಹಾಸ ಮೂಡಿದೆ. ಇದನ್ನೂ ಓದಿ: ಹಾಸನದ ಮಲೆನಾಡು ಭಾಗದಲ್ಲೂ ಮಳೆಯಬ್ಬರ; ಶಿರಾಡಿಘಾಟ್‌ನಲ್ಲಿ ಸರಣಿ ಭೂಕುಸಿತ – ಬೆಂಗಳೂರು, ಮಂಗಳೂರು ಸಂಚಾರ ಬಂದ್

  • ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

    ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ

    ಬೆಂಗಳೂರು: ಉತ್ತಮ ಮಳೆಯಿಂದಾಗಿ (Rain) ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಹೆಚ್ಚಿನ ಒಳ ಹರಿವು ಬರುತ್ತಿದ್ದು, ಜು.19ರಿಂದ ನಾಲೆಗಳಿಗೆ ನೀರು ಹರಿಸುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಶಿವರಾಜ್ ತಂಗಡಗಿ (Shivaraj S Tangadagi) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ವಿಚಾರವಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಪ್ರಸಕ್ತ ಸಾಲಿನಲ್ಲಿ ಮುಂಗಾರು- ಹಂಗಾಮಿನ ಮಳೆ ಚೆನ್ನಾಗಿ ಆಗುತ್ತಿದೆ. ಇದರಿಂದ ಜಲಾನಯನ ಪ್ರದೇಶದಲ್ಲಿ ಸಾಕಷ್ಟು ಒಳ ಹರಿವು ಪ್ರಾರಂಭವಾಗಿದೆ. ಇದನ್ನೂ ಓದಿ: ಮುಡಾ, ವಾಲ್ಮೀಕಿ ಹಗರಣ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – ಕಟ್ಟೆಯೊಡೆದ ಆಕ್ರೋಶ!

    ಜು.18ರ ವೇಳೆಗೆ ಜಲಾಶಯದಲ್ಲಿ 46.802 ಟಿಎಂಸಿ ನೀರು ಸಂಗ್ರಹ ಇದ್ದು, ಒಳ ಹರಿವಿನ 1,04,060 ಕ್ಯುಸೆಕ್ ಇದೆ. ಇದೇ ಪ್ರಮಾಣದಲ್ಲಿ ಒಳ ಹರಿವು ಮುಂದುವರಿದಲ್ಲಿ ವಾರದಲ್ಲಿ ಜಲಾಶಯದ ಭರ್ತಿಯಾಗುವ ನಿರೀಕ್ಷೆ ಇದೆ. ಸದ್ಯಕ್ಕೆ ಒಳಹರಿವು ಉತ್ತಮವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸದೇ ರೈತರ ಹಿತದೃಷ್ಟಿಯಿಂದ ಮುಂಗಡವಾಗಿ ನೀರು ಬಿಡುಗಡೆಗೆ ಕ್ರಮಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ಎಡದಂಡೆ ಮುಖ್ಯ ಕಾಲುವೆಗೆ ಜು.19 ರಿಂದ 4,100 ಕ್ಯುಸೆಕ್‍ನಂತೆ, ಬಲದಂಡೆ ಕೆಳಮಟ್ಟದ ವಿತರಣಾ ಕಾಲುವೆಗೆ ಜು.19 ರಿಂದ 650 ಕ್ಯುಸೆಕ್‍ನಂತೆ, ಬಲದಂಡೆ ಮೇಲ್ಮಟ್ಟದ ವಿತರಣಾ ಕಾಲುವೆಗೆ ಜು.19 ರಿಂದ 1,300 ಕ್ಯುಸೆಕ್‍ನಂತೆ ಹಾಗೂ ಕಾರ್ಖಾನೆಗಳಿಗೆ 60 ಕ್ಯುಸೆಕ್‍ನಂತೆ ನೀರು ಹರಿಸಲಾಗುವುದು. ಇನ್ನು ರಾಯಬಸವಣ್ಣ ಕಾಲುವೆಗೆ ಈಗಾಗಲೇ ಜೂ.1 ರಿಂದ 180 ಕ್ಯುಸೆಕ್‍ನಂತೆ ನೀರು ಹರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: NEET: ಪರೀಕ್ಷೆ ಸರಿಯಾಗಿ ನಡೆಯದಿದ್ದರೆ ಮಾತ್ರ ಮರುಪರೀಕ್ಷೆ ಮಾಡಬಹುದು: ಸುಪ್ರೀಂ ಕೋರ್ಟ್

  • ಮಲೆನಾಡಿನಲ್ಲಿ ಅಧಿಕ ಮಳೆ – ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

    ಮಲೆನಾಡಿನಲ್ಲಿ ಅಧಿಕ ಮಳೆ – ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು

    – ಮೂರೇ ದಿನಗಳಲ್ಲಿ 4 ಟಿಎಂಸಿ ನೀರು ಸಂಗ್ರಹ

    ಬಳ್ಳಾರಿ: ಮಲೆನಾಡಿನಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿರುವ ಹಿನ್ನೆಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ ಒಳಹರಿವಿನ (Water Inflow) ಪ್ರಮಾಣ ಮತ್ತಷ್ಟು ಹೆಚ್ಚಳವಾಗಿದ್ದು, ಮೂರೇ ದಿನಗಳ ಅಂತರದಲ್ಲಿ ಜಲಾಶಯಕ್ಕೆ 4ಕ್ಕೂ ಅಧಿಕ ಟಿಎಂಸಿ ನೀರು ಸಂಗ್ರಹವಾಗಿದೆ.

    ಇದರಿಂದ ಬರಡಾಗಿದ್ದ ತುಂಗಭದ್ರಾ ಜಲಾಶಯಕ್ಕೆ (Tungabhadra Reservoir) ಮರುಜೀವ ಬಂದಂತಾಗಿದೆ. ಗುರುವಾರ (ಜು.4) 10.082 ಟಿಎಂಸಿ ನಷ್ಟಿದ್ದ ಜಲಾಶಯದ ನೀರಿನ ಮಟ್ಟ ಶುಕ್ರವಾರ (ಜು.5) 11.714 ಟಿಎಂಸಿಗೆ ಏರಿಕೆಯಾಗಿದೆ. 24 ಗಂಟೆಯಲ್ಲಿ ಟಿಬಿ ಡ್ಯಾಂಗೆ 1.5 ಟಿಎಂಸಿ (TMC) ನೀರು ಹರಿದುಬಂದಿದೆ. ಇದನ್ನೂ ಓದಿ: ವಿಶ್ವನಾಥ್‌, ಪುತ್ರ ನನ್ನ ಮನೆಗೆ ಸೈಟ್ ಕೇಳೋಕೆ ಬಂದಿದ್ದ ಫೋಟೋ ಇದೆ: ಬೈರತಿ ಸುರೇಶ್‌ ಬಾಂಬ್‌!

    ಸದ್ಯ ಜಲಾಶಯಕ್ಕೆ 19,200ಕ್ಕೂ ಅಧಿಕ ಕ್ಯೂಸೆಕ್ ನೀರು ಒಳಹರಿವು ಇದ್ದು, ಕಳೆದ ಒಂದು ವಾರದಿಂದ ಸರಾಸರಿ ಒಳಹರಿವಿನ ಪ್ರಮಾಣದಲ್ಲಿಯೂ ಹೆಚ್ಚಳವಾಗಿದೆ. 105 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ತುಂಗಭದ್ರಾ ಜಲಾಶಯದಲ್ಲಿ 11.714 ಟಿಎಂಸಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದ್ರೆ 500ರೂ. ದಂಡ- ಬಿಬಿಎಂಪಿ ಆಯುಕ್ತ ಎಚ್ಚರಿಕೆ

    100 ಅಡಿ ಭರ್ತಿಯಾದ ಕೆಆರ್‌ಎಸ್ ಡ್ಯಾಂ:
    ಮತ್ತೊಂದೆಡೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಬೀಳುತ್ತಿರುವ ಹಿನ್ನೆಲೆ ಮಂಡ್ಯ ಜನರ ಜೀವನಾಡಿ ಕೆಆರ್‌ಎಸ್ ಡ್ಯಾಂ (KRS Dam) 100 ಅಡಿ ಭರ್ತಿಯಾಗಿದೆ. ಎರಡು ವಾರದಿಂದ ಪ್ರತಿದಿನ ಸರಾಸರಿ 10 ಸಾವಿರ ಕ್ಯೂಸೆಕ್‌ ಒಳಹರಿವು ಬರುತ್ತಿದೆ. ಇದರ ಬೆನ್ನಲ್ಲೇ ಇದೀಗ 100 ಅಡಿಗೆ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಎಲ್ಲೆಲ್ಲಿ ಏನಾಗಿದೆ? 

  • ಬರಿದಾದ ತುಂಗಭದ್ರೆಯ ಒಡಲು; ಪುಣ್ಯಸ್ನಾನಕ್ಕೆ ಹುಲಿಗೆಮ್ಮ ಭಕ್ತರ ಅಲೆದಾಟ!

    ಬರಿದಾದ ತುಂಗಭದ್ರೆಯ ಒಡಲು; ಪುಣ್ಯಸ್ನಾನಕ್ಕೆ ಹುಲಿಗೆಮ್ಮ ಭಕ್ತರ ಅಲೆದಾಟ!

    – ಪ್ರತಿ ಹುಣ್ಣಿಮೆಗೆ ಹುಲಿಗೆಮ್ಮ ದೇವಸ್ಥಾನಕ್ಕೆ ಬರುವ ಭಕ್ತ‌ ಸಮೂಹ

    ಕೊಪ್ಪಳ: ತುಂಗಭದ್ರಾ ನದಿಯ (Tungabhadra River) ಒಡಲು ಬರಿದಾಗಿದ್ದು, ಹುಲಿಗೆಮ್ಮ ದೇವಿ ದರ್ಶನಕ್ಕೆ ಬರುವ ಭಕ್ತರು ಪುಣ್ಯಸ್ನಾನಕ್ಕೆ (Holy Bath) ಪರದಾಡುವಂತಾಗಿದೆ. ಬೇಸಿಗೆ ಆರಂಭದಲ್ಲೇ ಇಂತಹ ಸ್ಥಿತಿ ಎದುರಾಗಿದ್ದು, ಮುಂದಿನ ಮೂರ್ನಾಲ್ಕು ತಿಂಗಳು ಹೇಗೆ ಎಂಬ ಆತಂಕ ಎದುರಾಗಿದೆ.

    ರಾಜ್ಯದ ಶಕ್ತಿ ದೇವತಾ ಕ್ಷೇತ್ರದಲ್ಲಿ ಒಂದಾದ ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ ದೇವಸ್ಥಾನಕ್ಕೆ ಪ್ರತಿ ದಿನ ಸಾವಿರಾರು ಭಕ್ತರು ಬಂದು ಹೋಗುತ್ತಾರೆ.‌ ಅದರಲ್ಲೂ ಹುಣ್ಣಿಮೆಯ ದಿನ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಬರುತ್ತಾರೆ. ಇಲ್ಲಿಗೆ ಬರುವ ಬಹುತೇಕ ಭಕ್ತರು ದೇವಸ್ಥಾನ ಪಕ್ಕದಲ್ಲೇ ಹರಿಯುವ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ಹರಕೆ ಕಟ್ಟಿಕೊಳ್ಳುತ್ತಾರೆ. ಆದ್ರೆ ಈ ವರ್ಷ ವರುಣನ ಮುನಿಸು ಭಕ್ತರ ಮೇಲೂ ಪರಿಣಾಮ ಬೀರಿದೆ. ನದಿಯಲ್ಲಿ ನೀರಿನ ಕೊರತೆಯಿಂದಾಗಿ ಸ್ನಾನ ಮಾಡದೇ ಹಿಂದಿರುಗುತ್ತಿದ್ದಾರೆ. ಇನ್ನೂ ಕೆಲವರು ಅನಿವಾರ್ಯವಾಗಿ ತಗ್ಗು ಪ್ರದೇಶಗಳಲ್ಲಿ ಕಟ್ಟಿಕೊಂಡ ನೀರಿನಲ್ಲೇ ಸ್ನಾನ ಮಾಡಿ ದೇವರಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

    ಭರತ ಹುಣ್ಣಿಮೆ:
    ಪ್ರತಿ ಹುಣ್ಣಿಮೆ ಸಂದರ್ಭದಲ್ಲಿ ಹುಲಿಗೆಮ್ಮ ದೇವಸ್ಥಾನ ಭಕ್ತರಿಂದ ತುಂಬಿರುತ್ತದೆ. ಆದರೆ, ಭರತ ಹುಣ್ಣಿಮೆಗೆ ಈ ಸಂಖ್ಯೆ ದುಪ್ಪಟ್ಟಾಗುತ್ತದೆ. ಅದರಂತೆ ಶನಿವಾರವಾದ ಇಂದೂ ಸಹ ರಾಜ್ಯದ ವಿವಿಧ ಭಾಗದಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದರು. ಬರುವ ಭಕ್ತರು, ತುಂಗಭದ್ರ ನದಿಯಲ್ಲಿ ಸ್ನಾನ ಮಾಡಿ, ದೇವಿ ದರ್ಶನ ಪಡೆದರೆ ಸಂಕಷ್ಟ ನಿವಾರಣೆ ಆಗುತ್ತವೆ ಎಂಬ ನಂಬಿಕೆಯಿಂದ ಬರುತ್ತಾರೆ. ಆದರೆ, ಈ ಬಾರಿ ಹುಲಿಗೆಮ್ಮ ದೇವಿ ದರ್ಶನಕ್ಕೆ ಬಂದ ಭಕ್ತರಿಗೆ ತುಂಗಭದ್ರೆಯ ಪವಿತ್ರ ಸ್ನಾನ ಮಾಡುವ ಅವಕಾಶ ಸಿಗದೇ ನಿರಾಸೆಯಿಂದ ಹಿಂದಿರುಗಿದ್ದಾರೆ. ಇದನ್ನೂ ಓದಿ: ಹಿಂದೂಗಳಿಗೊಂದು ಮುಸ್ಲಿಮರಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ: ಕೇಂದ್ರ ಸಚಿವ ಗಿರಿರಾಜ್‌ ಸಿಂಗ್‌

    ಪಕ್ಕದಲ್ಲೇ ಡ್ಯಾಂ:
    ಭಕ್ತರು ಸ್ನಾನ ಮಾಡುವ ಜಾಗದಿಂದ ನೋಡಿದರೂ ತುಂಗಭದ್ರ ಜಲಾಯಶ ಗೋಚರಿಸುತ್ತದೆ. ಆದರೆ,‌ ಈ ಬಾರಿ ಮಳೆ ಕೊರತೆಯಿಂದಾಗಿ ಜಲಾಶಯದಲ್ಲೂ ನೀರಿನ ಕೊರತೆಯಾಗಿದೆ. ಸದ್ಯ ಡ್ಯಾಂನಲ್ಲಿ ಕೇವಲ 9 ಟಿಎಂಸಿಯಷ್ಟು ನೀರಿದ್ದು, ಕುಡಿಯುವ ನೀರಿನ ಯೋಜನೆಗೆ ಕಾಲುವೆ ಮೂಲಕ ನೀರು ಕೊಡಬೇಕಿದೆ. ಈ ಹಿನ್ನೆಲೆಯಲ್ಲಿ ನದಿಗೆ ಬಿಡುಗಡೆ ಮಾಡುವ ನೀರಿನ ಪ್ರಮಾಣ ಕಡಿಮೆಯಾಗಿದೆ. ಇದನ್ನೂ ಓದಿ: ಕೋಟಿ ಕೋಟಿ ಒಡೆಯ ಅಯೋಧ್ಯೆ ಬಾಲರಾಮ – ಒಂದು ತಿಂಗಳಲ್ಲಿ 25 ಕೋಟಿ ಸಂಗ್ರಹ