Tag: tunnel collapse

  • ತೆಲಂಗಾಣ ಸುರಂಗ ಕುಸಿತ – 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ

    ತೆಲಂಗಾಣ ಸುರಂಗ ಕುಸಿತ – 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ

    -ಮೃತರ ಕುಟುಂಬಸ್ಥರಿಗೆ ತೆಲಂಗಾಣ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ

    ಹೈದರಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ.

    ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಾಗ ಪತ್ತೆಯಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್‌ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ

    ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ 56 ಕಾರ್ಮಿಕರು ಒಳಗೆ ಸಿಲುಕಿದ್ದರು. ಈ ಪೈಕಿ 48 ಜನರನ್ನು ಆರಂಭದಲ್ಲಿಯೇ ರಕ್ಷಿಸಲಾಗಿದ್ದು, 8 ಕಾರ್ಮಿಕರು ಸಿಲುಕಿಕೊಂಡಿದ್ದರು. ಕಾರ್ಮಿಕರನ್ನು ಪತ್ತೆಹಚ್ಚಲು ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಭಾನುವಾರ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ.

    ಫೆ.22 ರಂದು ಸುರಂಗ ಕುಸಿತದ ಬಳಿಕ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಉತ್ತರಾಖಂಡದ ರ‍್ಯಾಟ್ ಮೈನರ್, ಸ್ನಿಫರ್ ನಾಯಿ ಸೇರಿದಂತೆ 300ಕ್ಕೂ ಅಧಿಕ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ 17 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ.

    ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಓರ್ವನ ಮೃತದೇಹ ಪತ್ತೆಯಾದ ಬಳಿಕ ಇನ್ನುಳಿದವರ ರಕ್ಷಣೆಗಾಗಿ ರೋಬೋಟ್ ಬಳಸಲು ರಾಜ್ಯ ಸರ್ಕಾರ ಯೋಜಿಸಿದ್ದು, 4 ಕೋಟಿ ರೂ. ಖರ್ಚು ಮಾಡಲಿದೆ.

    ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಮಾ.2 ರಂದು ಭೇಟಿ ನೀಡಿದ್ದರು. ಇದೀಗ ಮಾ.11 ರಂದು ಘಟನಾ ಸ್ಥಳಕ್ಕೆ ಇನ್ನೊಮ್ಮೆ ಭೇಟಿ ನೀಡುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಘಟನೆ ಏನು?
    ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿ.ಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಮಹಿಳೆಯರನ್ನು ಬಲವಂತವಾಗಿ ಮತಾಂತರ ಮಾಡಿದ್ರೆ ನೇಣು ಶಿಕ್ಷೆ ಕಾಯ್ದೆ ತರ್ತೀವಿ: ಮ.ಪ್ರದೇಶ ಸಿಎಂ

  • ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದ ರಾಜ್ಯದ ತಂಡಕ್ಕೆ ಗಣ್ಯರ ಅಭಿನಂದನೆ

    ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಯಲ್ಲಿ ತೊಡಗಿದ್ದ ರಾಜ್ಯದ ತಂಡಕ್ಕೆ ಗಣ್ಯರ ಅಭಿನಂದನೆ

    ಕೋಲಾರ: ಉತ್ತರಕಾಶಿಯ (Uttarkashi) ಸಿಲ್ಕ್ಯಾರ್ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಹೊರತೆಗೆಯಲು (Rescue Operation) ರಾಜ್ಯದ (Karnataka) 9 ಜನರ ಗಣಿಗಾರಿಕೆಯ ಎಂಜಿನಿಯರ್ ತಂಡ ಶ್ರಮಿಸಿದೆ. ಈ ತಂಡದಲ್ಲಿ ಬಂಗಾರಪೇಟೆಯ ಹೆಚ್.ಎಸ್ ವೆಂಕಟೇಶ್ ಪ್ರಸಾದ್ ಅವರು ಸಹ ಶ್ರಮಿಸಿದ್ದಾರೆ. ರಾಜ್ಯದಿಂದ ತೆರಳಿದ್ದ ತಂಡಕ್ಕೆ ಉತ್ತರಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಕೇಂದ್ರ ಭೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ವಿ.ಕೆ ಸಿಂಗ್ ಅವರು ವೆಂಕಟೇಶ್ ಪ್ರಸಾದ್ ಸೇರಿದಂತೆ ರಾಜ್ಯದ ಎಂಜಿನಿಯರ್‌ಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

    ಕೇಂದ್ರದ ರಕ್ಷಣಾ ಇಲಾಖೆ ಹಾಗೂ ಭಾರತೀಯ ಸೇನಾ ಪಡೆಯ ಅಧಿಕಾರಿಗಳ ಸೂಚನೆ ಮೇರೆಗೆ ಖಾಸಗಿ ಮೈನಿಂಗ್ ಕಂಪನಿಯೊಂದರ ಸಿಇಒ ಸೈರಿಕ್ ಜೋಸೆಫ್ ನೇತೃತ್ವದಲ್ಲಿ ಹೆಚ್.ಎಸ್ ವೆಂಕಟೇಶ್ ಪ್ರಸಾದ್, ಶ್ರೀಕಾಂತ್, ಅಮೋಘ್, ಅಸೀಪ್ಮುಲ್ಲಾ, ಏರೋನ್ಯಾಟಿಕ್ ಇಂಜಿನಿಯರ್‍ಗಳಾದ ಗಜಾನ, ಎನ್ವಿಡಿ ಸಾಯಿ, ರೇಗು ಹಾಗೂ ಸತ್ಯ ಎಂಬವರ ತಂಡ ಕಾರ್ಯ ನಿರ್ವಹಿಸಿತ್ತು. ಇವರೆಲ್ಲರ ಶ್ರಮದ ಫಲವಾಗಿ 17 ದಿನಗಳ ಕಾಲ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲಾಯಿತು. ಇದನ್ನೂ ಓದಿ: COP28 Summit: ದುಬೈ ತೆರಳಿದ ಮೋದಿಗೆ ಅದ್ಧೂರಿ ಸ್ವಾಗತ – ಹಿಂದೂಸ್ತಾನ್‌ ಹಮಾರ ಎಂದ ಭಾರತೀಯರು

    ರಾಜ್ಯದ ಎಂಜಿನಿಯರ್‌ಗಳ ತಂಡ ನ.22 ರಂದು ಬೆಂಗಳೂರಿನಿಂದ ಡೆಹ್ರಾಡೂನ್‍ಗೆ ಹೊರಟು ಉತ್ತರಕಾಶಿ ತಲುಪಿದ್ದರು. ಬಳಿಕ ಸುರಂಗದಲ್ಲಿ ಸಿಲುಕಿಕೊಂಡಿದ್ದ 41 ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರಲು ಚಿಂತನೆ ನಡೆಸಿ ಶ್ರಮಿಸಿದ್ದಾರೆ. ಬಳಿಕ ಬೆಟ್ಟದ ಮೇಲಿಂದ ಕಾರ್ಮಿಕರು ಸಿಲುಕಿಕೊಂಡಿರುವ ಸ್ಥಳಕ್ಕೆ ನೇರವಾಗಿ ಸುರಂಗ ಮಾರ್ಗ ಮಾಡಿ ಕಾರ್ಮಿಕರನ್ನು ಹೊರ ತೆಗೆಯಲು ನೆರವಾಗಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯೆ ಹೆಚ್.ಎಸ್ ವೆಂಕಟೇಶ್ ಪ್ರಸಾದ್ ಪ್ರತಿಕ್ರಿಯೆ ನೀಡಿ, ಭಾರತೀಯ ಸೇನೆಯ ಕರ್ನಲ್ ದೀಪಕ್ ಪಾಟೀಲ್ ಕರೆ ಮಾಡಿ ನಮ್ಮ ನೆರವು ಕೇಳಿದ್ದರು. ಇದರಿಂದ 9 ಎಂಜಿನಿಯರ್‌ಗಳ ತಂಡ ತಲುಪಿತ್ತು, ಮಾನವೀಯತೆಯ ದೃಷ್ಠಿಯಿಂದ ಇಂತಹ ಕೆಲಸ ಮಾಡಲು ಖುಷಿಯಾಯಿತು. ಈ ಕೆಲಸದ ನಿರ್ವಹಣೆಯಲ್ಲಿ ಮೂಂಚೂಣಿಯಲ್ಲಿ ಇರಬೇಕೆಂದು ದಿನದ 24 ಗಂಟೆಯೂ ಕೆಲಸ ಮಾಡಿದ್ದೆವೆ. ಇಲ್ಲಿ ಕೆಲಸ ಮಾಡಲು ಊಟ ಹಾಗೂ ನಿದ್ರೆ ಬಗ್ಗೆ ಗಮನವಿರಲಿಲ್ಲ. ಮುಖ್ಯವಾಗಿ ಸುರಂಗದಲ್ಲಿ ಸಿಲುಕಿದ್ದವರನ್ನು ಹೊರತೆಗೆಯುವ ಕೆಲಸ ನಮ್ಮಿಂದಲೇ ಆಗಬೇಕೆಂದು ಉತ್ಸಾಹದಿಂದ ಕೆಲಸ ಮಾಡಿದ್ದೇವೆ. ಈ ಕೆಲಸ ಯಶಸ್ವಿಯಾಗಿದ್ದರಿಂದ ಭಾರೀ ಸಂತೋಷವಾಗಿದೆ ಎಂದಿದ್ದಾರೆ.

    ವೆಂಕಟೇಶ್ ಪ್ರಸಾದ್ ಅವರು 2015ರಲ್ಲಿ ಮೈನಿಂಗ್ ಎಂಜಿನಿಯರ್ ಆದ ಬಳಿಕ ಗುಜರಾತ್‍ನ ಎರಡು ಮೈನಿಂಗ್ ಕಂಪನಿಗಳಲ್ಲಿ 7 ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದರು. ಈಗ ಪ್ರಸ್ತುತ ಬೆಂಗಳೂರಿನ ಖಾಸಗಿ ಮೈನಿಂಗ್ ಕಂಪನಿ ಒಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ!

  • 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

    41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಮತ್ತೆ ಸ್ಥಗಿತ

    ಡೆಹ್ರಾಡೂನ್: ಉತ್ತರಕಾಶಿಯ (Uttarkashi) ಸಿಲ್ಕ್ಯಾನ್‌ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯಾಚರಣೆಗೆ ಒಂದಿಲ್ಲೊಂದು ಅಡಚಣೆ ಎದುರಾಗುತ್ತಿದ್ದು, ರಕ್ಷಣೆ ವಿಳಂಬವಾಗುತ್ತಿದೆ. ಕಾರ್ಮಿಕರನ್ನು ತಲುಪಲು ಕೆಲವೇ ಮೀಟರ್ ಬಾಕಿ ಇದೆ. ಇದರ ನಡುವೆ ಮತ್ತೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

    ಸುರಂಗದಲ್ಲಿ (Tunnel Collapse) ಸಿಲುಕಿರುವ ಕಾರ್ಮಿಕರನ್ನು ತಲುಪುವ ಮೊದಲು ಕೇವಲ 10-12 ಮೀಟರ್ ಕೊರೆಯುವಿಕೆ ಉಳಿದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ಐದು ಮೀಟರ್‌ಗಳಲ್ಲಿ ಯಾವುದೇ ಗಮನಾರ್ಹ ಲೋಹದ ಅಡೆತಡೆಗಳನ್ನು ರಾಡಾರ್ ಪತ್ತೆ ಮಾಡಿಲ್ಲ ಎಂದು ದೃಢಪಡಿಸಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿರೋ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ವಿಳಂಬ

    ಕುಸಿದ ಸುರಂಗದ ಅಡಿಯಲ್ಲಿ ಸಿಲುಕಿರುವ ಕಾರ್ಮಿಕರನ್ನು ತಲುಪಲು ಸುರಂಗದ ಮೇಲ್ಭಾಗದ ಮೂಲಕ ಕೊರೆಯಲು ಮತ್ತೊಂದು ಡ್ರಿಲ್ಲಿಂಗ್ ಯಂತ್ರವನ್ನು ಸ್ಥಳಕ್ಕೆ ತರಲಾಗಿದೆ. ಕೊರೆಯುವ ಯಂತ್ರವು ಮುಂದಕ್ಕೆ ಸಾಗುತ್ತಿದ್ದಂತೆ, ಉಕ್ಕಿನ ಪೈಪ್‌ನ ಆರು-ಮೀಟರ್ ವಿಭಾಗಗಳನ್ನು ಒಟ್ಟಿಗೆ ಬೆಸುಗೆ ಹಾಕಲಾಗುತ್ತದೆ. ಅದನ್ನು ಕಿರಿದಾದ ಸುರಂಗ ಮಾರ್ಗಕ್ಕೆ ತಳ್ಳಲಾಗುತ್ತದೆ. ಉಕ್ಕಿನ ಗಾಳಿಕೊಡೆಯು ಸ್ಥಳದಲ್ಲಿ ಒಮ್ಮೆ, ರಕ್ಷಕರು ಹೊಸದಾಗಿ ರಚಿಸಲಾದ ಸುರಂಗದ ಮೂಲಕ ಕಾರ್ಮಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಗಾಲಿ ಸ್ಟ್ರೆಚರ್‌ಗಳನ್ನು ಬಳಸುತ್ತಾರೆ.

    ಕಾರ್ಯಾಚರಣೆಯನ್ನು ನಿಲ್ಲಿಸುವ ಮೊದಲು ಸುಮಾರು 60 ಮೀಟರ್‌ಗಳಷ್ಟು ಉದ್ದವಿರುವ ಸುರಂಗದ ಕುಸಿದ ಭಾಗದಲ್ಲಿ 800 ಮಿಲಿಮೀಟರ್ ಅಗಲದ ಉಕ್ಕಿನ ಪೈಪ್‌ನ 46.8 ಮೀಟರ್‌ಗಳನ್ನು ಕೊರೆದ ಮಾರ್ಗದಲ್ಲಿ ಸೇರಿಸಲಾಗಿದೆ. ಇದನ್ನೂ ಓದಿ: 2 ತಿಂಗಳ ಬಳಿಕ 24 ಒತ್ತೆಯಾಳುಗಳನ್ನು ಬಿಡುಗಡೆ ಮಾಡಿದ ಹಮಾಸ್

    “ಗ್ರೀನ್ ಕಾರಿಡಾರ್” ಮೂಲಕ ಸುರಕ್ಷಿತ ಪೊಲೀಸ್ ಬೆಂಗಾವಲಿನಲ್ಲಿ ರಕ್ಷಿಸಲಾದ ಕಾರ್ಮಿಕರನ್ನು ವೈದ್ಯಕೀಯ ಕೇಂದ್ರಗಳಿಗೆ ತ್ವರಿತವಾಗಿ ಸಾಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಗರ್ವಾಲ್ ರೇಂಜ್ ಇನ್ಸ್‌ಪೆಕ್ಟರ್ ಜನರಲ್ ಕೆಎಸ್ ನಾಗ್ನ್ಯಾಲ್ ತಿಳಿಸಿದ್ದಾರೆ.

  • ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಕರೆತರುತ್ತಾರೆ ಗೊತ್ತಾ? – ಪ್ರಾತ್ಯಕ್ಷಿಕೆ ವಿಡಿಯೋ ನೋಡಿ..

    ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಕರೆತರುತ್ತಾರೆ ಗೊತ್ತಾ? – ಪ್ರಾತ್ಯಕ್ಷಿಕೆ ವಿಡಿಯೋ ನೋಡಿ..

    ಡೆಹ್ರಾಡೂನ್: ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse) ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

    ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್‌ಲೈನ್‌ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್‌ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಅಡಚಣೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ವಿಳಂಬ

    ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್‌ ಮಾಡಿರುವ ಪೈಪ್‌ಲೈನ್‌. ಎನ್‌ಡಿಆರ್‌ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್‌ ಭಾಗದ ಪೈಪ್‌ಲೈನ್‌ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್‌ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ

    ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.

  • ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ

    ಜಮ್ಮು ಸುರಂಗ ಕುಸಿತ – 10 ಮೃತದೇಹಗಳು ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಗುರುವಾರ ಸುರಂಗ ಕುಸಿತವಾಗಿದ್ದು, 36 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಚರಣೆ ಬಳಿಕ ಇಲ್ಲಿಯವರೆಗೆ ಅವಶೇಷಗಳಿಂದ 10 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಶ್ರೀನಗರ-ಜಮ್ಮು ಹೆದ್ದಾರಿಯ ಖೋನಿನಲ್ಲ ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಭಾರೀ ಭೂಕುಸಿತ ಉಂಟಾಗಿತ್ತು. ಪರಿಣಾಮ ಕಾರ್ಮಿಕರು ಅವಶೇಷಗಳಡಿ ಹೂತು ಹೋಗಿದ್ದರು. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

    ಸುರಂಗ ನಿರ್ಮಿಸುತ್ತಿದ್ದ ಕಂಪನಿ ರಕ್ಷಣಾ ಮಾನದಂಡಗಳನ್ನು ಅನುಸರಿಸದಿರುವುದೇ ದುರಂತಕ್ಕೆ ಕಾರಣವಿರಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಂಪನಿ ನಿರ್ಲಕ್ಷ್ಯಕ್ಕೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಂದು 155 ಕೇಸ್ – 166 ಮಂದಿ ಆಸ್ಪತ್ರೆಯಿಂದ ಬಿಡುಗಡೆ

    ಗುರುವಾರ ತಡರಾತ್ರಿ ಸುರಂಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭ ಬೃಹತ್ ಬಂಡೆಗಳು ಕುಸಿದಿದ್ದವು. ಅವಶೇಷಗಳಿಂದ ಪಶ್ಚಿಮ ಬಂಗಾಳದ ಐವರು, ನೇಪಾಳದ ಇಬ್ಬರು, ಅಸ್ಸಾಂನ ಒಬ್ಬ ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರ ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.