Tag: tweet

  • ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಕಾಂಗ್ರೆಸ್ ಒಕ್ಕಲಿಗರ ದ್ರೋಹಿ, ಡಿಕೆಶಿ ಸುಳ್ಳಿನ ಶೂರ – ಜೆಡಿಎಸ್ ಲೇವಡಿ

    ಬೆಂಗಳೂರು: ಬಾಲಗಂಗಾಧರನಾಥ ಸ್ವಾಮೀಜಿ ವಿರುದ್ಧ ಜೆಡಿಎಸ್ (JDS) ಕೇಸ್ ಹಾಕಿಸಿತ್ತು ಎಂಬ ಡಿಸಿಎಂ ಡಿಕೆಶಿವಕುಮಾರ್ (DCM DK Shivakumar) ಹೇಳಿಕೆ ವಿರುದ್ಧ ಜೆಡಿಎಸ್ ಕಿಡಿಕಾರಿದೆ. ಎಕ್ಸ್‌ನಲ್ಲಿ ಡಿಕೆಶಿ ಹೇಳಿಕೆ ಖಂಡಿಸಿರುವ ಜೆಡಿಎಸ್ ಡಿಕೆಶಿವಕುಮಾರ್‌ರನ್ನು ಸುಳ್ಳಿನ ಶೂರ ಎಂದು ಲೇವಡಿ ಮಾಡಿದೆ. ಒಕ್ಕಲಿಗರ ದ್ರೋಹಿ ಕಾಂಗ್ರೆಸ್, ಒಕ್ಕಲಿಗರ ದ್ರೋಹಿ ಡಿಕೆಶಿವಕುಮಾರ್ ಎಂದು ವಾಗ್ದಾಳಿ ನಡೆಸಿದೆ.

    ಟ್ವೀಟ್‌ನಲ್ಲಿ ಏನಿದೆ?
    ಸುಳ್ಳಿನ ಶೂರ ಡಿಕೆ ಶಿವಕುಮಾರ್, ಒಕ್ಕಲಿಗ ಸಮುದಾಯ ಮತ್ತು ಪೂಜ್ಯ ಸ್ವಾಮೀಜಿ ಅವರಿಗೆ ನಿಮ್ಮ ಸರ್ಕಾರ ಮಾಡಿಬಿಟ್ಟ ಅಪಚಾರ ಮುಚ್ಚಿಟ್ಟುಕೊಳ್ಳಲು ಇನ್ನೊಬ್ಬರ ಮೇಲೆ ಕೆಸರೆರೆಚುತ್ತಿದ್ದೀರಿ, ಯಾಕೆ? ಪೂಜ್ಯ ಸ್ವಾಮೀಜಿ ಅವರ ಮೇಲೆ ನೀವು ಎಫ್‌ಐಆರ್ ಹಾಕಿದ್ದು ಈಗ ಸಮುದಾಯದ ಸಿಟ್ಟಿಗೆ ಕಾರಣವಾಗಿದೆ. ಒಕ್ಕಲಿಗರ ಆಕ್ರೋಶಕ್ಕೆ ನೀವು ಗುರಿಯಾಗಿದ್ದೀರಿ. ಬೀಸುವ ದೊಣ್ಣೆಯಿಂದ ಪಾರಾಗಲು ಜೆಡಿಎಸ್ ಬಗ್ಗೆ ಹೊಸ ಹುಳುಕು ಹುಡುಕುತ್ತಿದ್ದೀರಿ.ಇದನ್ನೂ ಓದಿ: ರಾಯಚೂರು | ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

    ಜೆಡಿಎಸ್ ಸರ್ಕಾರವಿದ್ದಾಗ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಮೇಲೆ ಕೇಸ್ ಹಾಕಲಾಗಿತ್ತು ಎಂದು ಬಾಲಬುದ್ಧಿಯ ನೀವು ಬಡಬಡಿಸಿದ್ದೀರಿ! ಹಳೆಯ ವಿಷಯ ಕೆದಕಿದ ನಿಮಗೆ ಆ ಪ್ರಕರಣ ಏನು? ಅದು ಮುಂದೇನಾಯಿತು? ಎನ್ನುವ ಮಾಹಿತಿ ಇಲ್ಲವೇ? ಆ ಪ್ರಕರಣಕ್ಕೂ ಜೆಡಿಎಸ್ ಪಕ್ಷಕ್ಕೂ ಸಂಬಂಧ ಏನು? ಮುಂದೆ ಆ ಪ್ರಕರಣ ರದ್ದಾಯಿತು ನಿಮಗೆ ಗೊತ್ತಿಲ್ಲವೇ?

    ಪೂಜ್ಯ ಸ್ವಾಮೀಜಿ ಅವರ ವಿರುದ್ಧ ನಿಮ್ಮ ಇಡೀ ಕಾಂಗ್ರೆಸ್ ಸರ್ಕಾರ ತೊಡೆತಟ್ಟಿ ನಿಂತಿದೆ. ಸಚಿವರುಗಳೆಲ್ಲ ಅವರ ಮೇಲೆ ರಕ್ಕಸರಂತೆ ಮುಗಿಬಿದ್ದಿದ್ದಾರೆ. ಹೇಳಿಕೆಯ ಬಗ್ಗೆ ಪರಮಪೂಜ್ಯರು ವಿಷಾದ ವ್ಯಕ್ತಪಡಿಸಿದ ಮೇಲೆಯೂ ಅವರ ಮೇಲೆ ಸರ್ಕಾರ ಯಾರದೋ
    ನಿರ್ದಿಷ್ಟ ಚಿತಾವಣೆಗೆ ಒಳಗಾಗಿ ಕಾಲು ಕೆರೆದು ಜಗಳಕ್ಕೆ ನಿಂತಿದೆ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಅಪಮಾನಕರವಾಗಿ ವರ್ತಿಸುತ್ತಿದೆ. ಓಲೈಕೆ ರಾಜಕೀಯ, ತುಷ್ಟೀಕರಣದ ಪರಾಕಾಷ್ಠೆ ಇದು.
    ಒಕ್ಕಲಿಗರಿಗೆ ಇದೆಲ್ಲಾ ಅರ್ಥವಾಗುತ್ತಿದೆ.
    ಒಕ್ಕಲಿಗ ವಿರೋಧಿ ಡಿಕೆಶಿಯವರೇ ನಿಮಗಿದು ತರವೇ?

    ಮಿಸ್ಟರ್ ಡಿಕೆಶಿಯವರೇ. ಒಕ್ಕಲಿಗರ ಅಸ್ಮಿತೆಯನ್ನು ಕೆಣಕಿದ್ದೀರಿ. ನಿಮ್ಮ ಸರ್ಕಾರ, ನಿಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯವನ್ನಾದರೂ ಮಾಡಿ. ಅಧಿಕಾರಕ್ಕಾಗಿ ಸಮುದಾಯದಿಂದ ಪೆನ್ನು ಪೇಪರ್ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಇದಕ್ಕೆ ನೀವು ಬೆಲೆ ತೆರುತ್ತೀರಿ.ಒಕ್ಕಲಿಗದ್ರೋಹಿ ಕಾಂಗ್ರೆಸ್, ಒಕ್ಕಲಿಗದ್ರೋಹಿ ಡಿಕೆಶಿ ಎಂದು ಜೆಡಿಎಸ್ ಕಿಡಿಕಾರಿದೆ.ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

  • ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

    ಜಾರ್ಖಂಡ್, ವಯನಾಡಲ್ಲಿ ಕಾಂಗ್ರೆಸ್ ಗೆಲುವಿಗೆ ಧನ್ಯವಾದ ತಿಳಿಸಿದ ರಾಹುಲ್ ಗಾಂಧಿ

    ನವದೆಹಲಿ: ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಇನ್ನಿತರ ಚುನಾವಣೆಗಳ ಫಲಿತಾಂಶ ಇಂದು (ನ.23) ಹೊರಬಿದ್ದಿದ್ದು, ಜಾರ್ಖಂಡ್ ಹಾಗೂ ವಯನಾಡು ಕ್ಷೇತ್ರದಲ್ಲಿ ಕಾಂಗ್ರೆಸ್ ವಿಜಯಕ್ಕೆ ರಾಹುಲ್ ಗಾಂಧಿ (Rahul Gandhi) ಟ್ವೀಟ್ ಮೂಲಕ ಜನತೆಗೆ ಧನ್ಯವಾದ ತಿಳಿಸಿದ್ದಾರೆ.

    ಜಾರ್ಖಂಡ್‌ನಲ್ಲಿ `ಇಂಡಿಯಾ’ ಒಕ್ಕೂಟಕ್ಕೆ ಮತಚಲಾಯಿಸಿ ಗೆಲುವು ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಸಿಎಂ ಹೇಮಂತ್ ಸೊರೆನ್ ಅವರಿಗೆ ಹಾಗೂ ಕಾಂಗ್ರೆಸ್, ಜೆಎಂಎಂ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಯನ್ನು ತಿಳಿಸಿದ್ದಾರೆ. ಈ ಗೆಲುವು ಕೇವಲ ಸಂವಿಧಾನದ ಜಯವಲ್ಲ. ಇದು ನೆಲ, ಜಲ, ಅರಣ್ಯಕ್ಕೆ ಸಲ್ಲುವ ಜಯವಾಗಿದೆ ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ವ್ಯಕ್ತಿ ಮದುವೆಯಾಗಲು 5 ವರ್ಷದ ಮಗುವನ್ನು ಕೊಂದ ತಾಯಿ

    ಇನ್ನೂ ಮಹರಾಷ್ಟ್ರದ ಚುನಾವಣಾ ಫಲಿತಾಂಶ ಕುರಿತು ಹಂಚಿಕೊಂಡು, ರಾಜ್ಯದ ಎಲ್ಲಾ ಮತದಾರರಿಗೆ, ಕಾರ್ಯಕರ್ತರ ಶ್ರಮಕ್ಕಾಗಿ ಧನ್ಯವಾದಗಳು ತಿಳಿಸುತ್ತೇನೆ. ಆದರೆ ಮಹಾರಾಷ್ಟ್ರದ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಈ ಕುರಿತು ವಿವರವಾಗಿ ವಿಶ್ಲೇಷಣೆ ನಡೆಸುತ್ತೇವೆ ಎಂದಿದ್ದಾರೆ.

    ವಯನಾಡಿನಲ್ಲಿರುವ ನನ್ನ ಕುಟುಂಬದ ಜನತೆ ಪ್ರಿಯಾಂಕಾ ಅವರ ಮೇಲೆ ಇಟ್ಟಿರುವ ನಂಬಿಕೆಯ ಕುರಿತು ನನಗೆ ಹೆಮ್ಮೆಯಿದೆ. ವಯನಾಡಿನ ಪ್ರಗತಿಗಾಗಿ ಪ್ರಿಯಾಂಕಾ ಧೈರ್ಯದಿಂದ ಮುನ್ನಡೆಯುತ್ತಾಳೆ ಎಂದು ನಾನು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಜಾರ್ಖಂಡ್‌ನ ಜೆಎಂಎಂ ನೇತೃತ್ವದ ಇಂಡಿಯಾ ಒಕ್ಕೂಟ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ 21ರಲ್ಲಿ ಗೆಲುವು ಸಾಧಿಸಿದೆ.

    ಸಂಜೆ 7 ಗಂಟೆಯವರೆಗೆ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು 230 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮಹಾವಿಕಾಸ ಅಘಾಡಿ 1 ಹಾಗೂ ಪಕ್ಷೇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.ಇದನ್ನೂ ಓದಿ: ಯಶ್‌ ನಟನೆಯ ‘ಟಾಕ್ಸಿಕ್‌’ ಸೆಟ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಬಾಲಿವುಡ್‌ ನಟಿ

  • ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ

    ಶೂಟಿಂಗ್ ಮುಗಿಸಿ ಆಸ್ಪತ್ರೆಗೆ ಬಂದಿದ್ದೆ, ಕೊನೆಯ ಬಾರಿಗೆ ಪ್ರಜ್ಞೆಯಲ್ಲಿದ್ದಾಗ ನೋಡಲಾಗಲಿಲ್ಲ: ತಾಯಿಯ ಅಗಲಿಕೆಗೆ ಕಿಚ್ಚ ಭಾವುಕ

    ತಾಯಿಯನ್ನು ಕಳೆದುಕೊಂಡಿರುವ ನೋವಿನಲ್ಲಿರುವ ನಟ ಸುದೀಪ್ (Actor Sudeep) ತಾಯಿಯ ಕುರಿತು ಸುದೀರ್ಘವಾದ ಭಾವುಕ ಟ್ವೀಟ್‌ವೊಂದನ್ನು (Tweet) ಹಂಚಿಕೊಂಡಿದ್ದಾರೆ.

    ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ ಎಂದು ಬರೆದುಕೊಂಡಿದ್ದಾರೆ.

    ನಟ ಸುದೀಪ್ ತಾಯಿ ಸರೋಜ ಅವರು ಅ.20ರಂದು ಬೆಳಗ್ಗೆ ಇಹಲೋಕ ತ್ಯಜಿಸಿದರು. ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅ.20ರಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.ಇದನ್ನೂ ಓದಿ: ಹಾವೇರಿಯಲ್ಲಿ ಧಾರಾಕಾರ ಮಳೆ – ನಡು ನೀರಿನಲ್ಲಿ ಸಿಲುಕಿದ್ದ 30 ಭಕ್ತರ ರಕ್ಷಣೆ

    ಪೋಸ್ಟ್‌ನಲ್ಲಿ ಏನಿದೆ?
    ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ಕೊಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ಮಾನವ ರೂಪದ ನಿಜವಾದ ದೇವರಾಗಿದ್ದರು ನನ್ನಮ್ಮ.

    ನನಗೆ ಹಬ್ಬ ಎಂದರೆ ಅದು ನನ್ನ ತಾಯಿ. ನನ್ನ ಮೊದಲ ಅಭಿಮಾನಿ, ಹಿತೈಷಿ ಎಲ್ಲವೂ ಅವರಾಗಿದ್ದರು. ಕೆಟ್ಟ ಕೆಲಸವನ್ನೂ ಇಷ್ಟಪಟ್ಟವರು, ಒಳ್ಳೆಯ ಕೆಲಸ ಮಾಡಿದಾಗಲಂತೂ ಬೆನ್ನು ತಟ್ಟಿ ಸಂಭ್ರಮಿಸಿದವರು. ಈಗ ಆ ಎಲ್ಲ ಸುಂದರ ಘಳಿಗೆಗಳು ನೆನಪು ಮಾತ್ರ.

    ನಾನೀಗ ಅನುಭವಿಸುತ್ತಿರುವ ಸಂಕಟವನ್ನು ಹಂಚಿಕೊಳ್ಳಲು ನನ್ನಲ್ಲಿ ಪದಗಳಿಲ್ಲ. ಅವರಿಲ್ಲದ ಶೂನ್ಯವನ್ನು ಒಪ್ಪಿಕೊಳ್ಳಲು ನನ್ನಿಂದ ಆಗುತ್ತಿಲ್ಲ. ಕೇವಲ 24 ಗಂಟೆಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು.

    ಪ್ರತಿನಿತ್ಯವೂ ನನ್ನ ಮೊಬೈಲ್‌ಗೆ ಬೆಳಗ್ಗೆ 5.30ಕ್ಕೆ ಮೊದಲ ಮೆಸೇಜ್ ಬರುವುದು ಅದು ನನ್ನ ತಾಯಿಯಿಂದಲೇ. `ಗುಡ್ ಮಾರ್ನಿಂಗ್ ಕಂದ’ ಎಂಬ ಸಂದೇಶ ಬರುತ್ತಿತ್ತು. ಅಮ್ಮನಿಂದ ನನಗೆ ಕೊನೆಯ ಸಲ ಸಂದೇಶ ಬಂದಿದ್ದು, ಅಕ್ಟೋಬರ್ 18ರಂದು. ಮಾರನೇ ದಿನ ಬೆಳಗ್ಗೆ ನಾನು ಬಿಗ್‌ಬಾಸ್ ಮನೆಯ ಸೆಟ್‌ನಲ್ಲಿದ್ದೆ. ಅಂದು ಅಮ್ಮನ ಸಂದೇಶ ನನಗೆ ತಲುಪಲೇ ಇಲ್ಲ. ಕಳೆದ ಹಲವು ವರ್ಷಗಳಿಂದ ನಾನು ಯಾವತ್ತೂ ಸಂದೇಶವನ್ನು ಮಿಸ್ ಮಾಡಿಕೊಂಡವನು ಅಲ್ಲ. ಇದೇ ಮೊದಲ ಬಾರಿಗೆ ಅಮ್ಮ ಸಂದೇಶ ಕಳುಹಿಸಲಿಲ್ಲ.

    ನಾನೇ ಅಮ್ಮನ ಮೊಬೈಲ್‌ಗೆ ಸಂದೇಶ ಕಳುಹಿಸಿದೆ. ಕರೆ ಮಾಡಿ ಈ ಕುರಿತು ವಿಚಾರಿಸೋಣವೆಂದರೆ, ಬಿಗ್‌ಬಾಸ್ ಚಿತ್ರೀಕರಣದ ಒತ್ತಡದಲ್ಲಿದ್ದೆ. ಹಾಗಾಗಿ ಸಾಧ್ಯವಾಗಲಿಲ್ಲ. ಶನಿವಾರದ ಬಿಗ್‌ಬಾಸ್ ಎಪಿಸೋಡ್ ಚಿತ್ರೀಕರಣಕ್ಕಾಗಿ ಇನ್ನೇನು ವೇದಿಕೆಯ ಮೇಲೆ ಹತ್ತಬೇಕು ಎನ್ನುವಷ್ಟರಲ್ಲಿ ಅಮ್ಮನಿಗೆ ಹುಷಾರಿಲ್ಲದ, ಅವರು ಆಸ್ಪತ್ರೆಗೆ ದಾಖಲಾಗಿರುವ ಸಂದೇಶ ಬಂತು. ಕೂಡಲೇ ಸಹೋದರಿಗೆ ಕರೆ ಮಾಡಿ, ಡಾಕ್ಟರ್ ಜೊತೆ ಮಾತನಾಡಿ ನಾನು ಸ್ಟೇಜ್ ಮೇಲೆ ಹತ್ತಿದೆ.

    ನಾನು ಚಿತ್ರೀಕರಣದಲ್ಲಿ ಇರುವಾಗಲೇ ಅಮ್ಮನ ಆರೋಗ್ಯ ಸ್ಥಿತಿ ಗಂಭೀರ ಅಂತ ನನ್ನ ತಂಡದವರು ತಿಳಿಸಿದರು. ಎಂತಹ ಅಸಹಾಯಕ ಸ್ಥಿತಿ ನನ್ನದು. ಮೊದಲ ಬಾರಿಗೆ ಇಂಥದ್ದೊಂದು ಸನ್ನಿವೇಶ ನನಗೆ ಎದುರಾಗಿದ್ದು. ಶೂಟಿಂಗ್ ಮಾಡುತ್ತಿರುವಾಗಲೇ ನನ್ನ ತಲೆಯಲ್ಲಿ ಹಲವಾರು ವಿಷಯಗಳು ಚಲಿಸುತ್ತಿದ್ದವು. ಸಾಕಷ್ಟು ಭಯವಿತ್ತು. ಶನಿವಾರದ ಎಪಿಸೋಡ್ ಮುಗಿಸಲೇಬೇಕು ಎನ್ನುವ ಒತ್ತಡವೂ ಇತ್ತು. ಎಲ್ಲವನ್ನೂ ನಿಭಾಯಿಸಬೇಕಿತ್ತು. ಮನಸ್ಸನ್ನು ಶಾಂತಚಿತ್ತಕ್ಕೆ ತಂದು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟೆ. ಇದೆಲ್ಲವೂ ಸಾಧ್ಯವಾಗಿದ್ದು, ನನ್ನ ತಾಯಿ ಹೇಳಿಕೊಟ್ಟ ಪಾಠದಿಂದ.

    ಎಲ್ಲ ಒತ್ತಡವನ್ನೂ ನಿಭಾಯಿಸಿಕೊಂಡು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟು ಕೂಡಲೇ ಆಸ್ಪತ್ರೆಯತ್ತ ಧಾವಿಸಿದೆ. ನಾನು ಆಸ್ಪತ್ರೆ ತಲುಪುವ ಮುನ್ನವೇ ಅಮ್ಮನನ್ನು ವೆಂಟಿಲೇಟರ್‌ನಲ್ಲಿ ಇರಿಸಿ ಚಿಕಿತ್ಸೆ ನೀಡುತ್ತಿದ್ದರು. ಅತ್ಯಂತ ನೋವಿನ ಸಂಗತಿ ಅಂದರೆ, ನನ್ನ ತಾಯಿ ಪ್ರಜ್ಞೆಯಲ್ಲಿರುವಾಗ ಕೊನೆಯ ಬಾರಿಗೆ ಅವರನ್ನು ನೋಡಲು ಆಗಲೇ ಇಲ್ಲ. ಅವರು ಕೊನೆಯುಸಿರು ಎಳೆಯುವ ಮುನ್ನ ಅಮ್ಮ ನೋವಿನಲ್ಲೇ ಸಾಕಷ್ಟು ಹೋರಾಡಿದ್ದಳು. ಕೆಲವೇ ಕೆಲವು ಗಂಟೆಗಳಲ್ಲಿ ಏನೆಲ್ಲ ಬದಲಾವಣೆ ಆಗಿದ್ದವು.

    ಅಮ್ಮ ಇಲ್ಲ ಅನ್ನುವುದು ಸತ್ಯ. ಆದರೆ, ವಾಸ್ತವವನ್ನು ಹೇಗೆ ಸ್ವೀಕರಿಸಬೇಕು ಅನ್ನೋದು ಗೊತ್ತಾಗಲಿಲ್ಲ. ಮೊನ್ನೆಯಷ್ಟೇ ಚಿತ್ರೀಕರಣಕ್ಕೆ ಹೊರಡುವ ಮುನ್ನ ಬಿಸಿ ಅಪ್ಪುಗೆಯೊಂದನ್ನು ಕೊಟ್ಟು ಕಳುಹಿಸಿದ್ದರು. ಕೆಲವೇ ಕೆಲವು ಗಂಟೆಗಳಲ್ಲಿ ಇಲ್ಲವಾಗಿ ಹೋದರು. ನಾನು ನನ್ನ ತಾಯಿಯನ್ನು ಕಳೆದುಕೊಂಡಿದ್ದೇನೆ. ಈ ಮಂಗಳಕರ ದಿನವು ಪ್ರಕೃತಿಯು ಈ ಭೂಮಿಯಿಂದ ತಾಯಿಯನ್ನು ಕರೆದುಕೊಂಡು ಹೋಗಿದೆ ಎಂದು ಸಮಾಧಾನಿಸಿಕೊಳ್ಳುವೆ. ನನ್ನ ಬದುಕಿನ ಅತ್ಯಂತ ಬೆಲೆಬಾಳುವ ಮುತ್ತೊಂದು ನನ್ನಿಂದ ಜಾರಿಹೋಗಿದೆ. ನನ್ನ ತಾಯಿ ಶಾಂತಿಯಿಂದಲೇ ತುಂಬಿರೋ ಮಡಿಲನ್ನು ಸೇರಿದ್ದಾರೆ ಎಂದು ಖಾತ್ರಿಯಿದೆ.

    ಅಮ್ಮನಿಗೆ ಗೌರವ ಸಲ್ಲಿಸಲು ಆಗಮಿಸಿದ್ದ ಪ್ರತಿಯೊಬ್ಬರಿಗೂ ನಾನು ಋಣಿ ಮತ್ತು ಧನ್ಯವಾದಗಳನ್ನು ತಿಳಿಸುತ್ತೇನೆ. ಇದು ನಿಜವಾಗಿಯೂ ನಿಮ್ಮೆಲ್ಲರ ಕರುಣೆಯಾಗಿತ್ತು. ನನ್ನ ತಾಯಿ ಆತ್ಮಕ್ಕೆ ಶಾಂತಿ ಕೋರಿದ ಎಲ್ಲರಿಗೂ ಧನ್ಯವಾದಗಳು

    ಅಮ್ಮಾ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ
    ನಾನು ನಿಮ್ಮನ್ನು ಸದಾ ಪ್ರೀತಿಸುತ್ತೇನೆ ಮತ್ತು ಅಮೂಲ್ಯವಾದದ್ದನ್ನು ಕಳೆದುಕೊಂಡಿದ್ದೇನೆ.
    -ದೀಪು ಎಂದು ಬರೆದುಕೊಂಡಿದ್ದಾರೆ.ಇದನ್ನೂ ಓದಿ: ಬ್ರ್ಯಾಂಡ್‌ ಬೆಂಗಳೂರಿಗೆ ಮುಜುಗರ – ಕ್ರೀಡಾಂಗಣದ ಆವರಣಕ್ಕೆ ನೀರು, ಏಷ್ಯನ್‌ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಗಳು ಮುಂದೂಡಿಕೆ

  • ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

    ಸೈಟ್ ಸಿದ್ದಪ್ಪನವರೇ, ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? – ಜೆಡಿಎಸ್ ಟೀಕೆ

    ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ(CM Siddaramaiah) ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ. ಎಕ್ಸ್‌ನಲ್ಲಿ ಸಿಎಂ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಇಡಿ ಕುಣಿಕೆ ಬಿಗಿಗೊಳ್ಳುತ್ತಿರುವುದರಿಂದ ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ.ಇದನ್ನೂ ಓದಿ:ರಿಷಬ್ ಶೆಟ್ಟಿ ಜೊತೆಗಿನ ಫೋಟೋ ಹಂಚಿಕೊಂಡ ಮಾಲಿವುಡ್ ನಟ ಜಯಸೂರ್ಯ

    ಜೆಡಿಎಸ್ ಟ್ವೀಟ್ ಏನು?
    ನಾನು ತಪ್ಪೇ ಮಾಡಿಲ್ಲ, ವೈಟ್ನರ್ ಹಾಕಿದ್ದು ನಾನಲ್ಲ, ನಾನು ಕ್ಲೀನ್ ಅಂಡ್ ಕ್ಲಿಯರ್. ಅದು ನಾನಲ್ಲ. ನಾನಲ್ಲ, ಆ ಸೈಟುಗಳಿಗೂ ನನಗೂ ಸಂಬಂಧವೇ ಇಲ್ಲ ಎನ್ನುತ್ತಿದ್ದ ಸೈಟ್ ಸಿದ್ದಪ್ಪನವರೇ. ಮೂಡಾಮರಿ ಈಗ ರಾಜೀನಾಮೆ ಕೊಟ್ಟಿದ್ದು ಯಾಕೆ? ರಾಜೀನಾಮೆ ಕೊಡಿ ಎಂದು ನೀವೇ ಹೇಳಿದಿರೋ ಅಥವಾ ಮರಿಯೇ ಸ್ವಇಚ್ಛೆಯಿಂದ ರಾಜೀನಾಮೆ ಕೊಟ್ಟಿತೋ? ನೇಷನ್ ವಾಂಟ್ಸ್ ಟು ನೋ ಎಂದು ಪ್ರಶ್ನೆ ಮಾಡಿದೆ. ಇಡಿ ಕುಣಿಕೆ ಬಿಗಿದುಕೊಳ್ಳುತ್ತಿದೆ ಇದರ ಪರಿಣಾಮಗಳು ಇಲ್ಲಿವೆ ಎಂದು ಸಿಎಂ ವಿರುದ್ಧ ಕಿಡಿಕಾರಿದೆ.

    ಪರಿಣಾಮ 1: 14 ನಿವೇಶನಗಳು ಮೂಡಾಕ್ಕೆ ವಾಪಸ್!
    ಪರಿಣಾಮ 2: ಮೂಡಾ ಮರಿ ತಲೆದಂಡ
    ಪರಿಣಾಮ 3: ಇನ್ನಷ್ಟು ತಲೆದಂಡಗಳು ಕಾದಿವೆ.ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ – ರಾಜ್ಯ ಸರ್ಕಾರದ ವಿರುದ್ಧ ಶ್ರೀರಾಮಸೇನೆ ಪ್ರತಿಭಟನೆ

  • ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ – ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

    ಬೆಂಗಳೂರು: ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ.ಇದನ್ನೂ ಓದಿ: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ

    ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಇಡೀ ಬೆಂಗಳೂರು ಅವ್ಯವಸ್ಥೆ ಆಗಿದೆ ಎಂದು ಎಕ್ಸ್ (X) ಖಾತೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಪೋಸ್ಟ್ ಹಾಕಿದೆ. ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದೆ.

    ಟ್ವೀಟ್‌ನಲ್ಲಿ ಏನಿದೆ?
    ಮಾನ್ಯ ಹೆಚ್‌ಡಿ ದೇವೇಗೌಡ (HD Devegowda) ಅವರು ದೂರದೃಷ್ಟಿಯಿಂದ ಬೆಂಗಳೂರು ನಗರಕ್ಕೆ ಮಾಹಿತಿ ತಂತ್ರಜ್ಞಾನದ ಅಡಿಪಾಯ ಹಾಕಿದರು. ಆ ನಂತರ ಬಂದ ಕಾಂಗ್ರೆಸ್ ಸರ್ಕಾರ ದೇವೇಗೌಡರ ದಿಸೆಯಿಂದ ಚಿನ್ನದ ಬೆಲೆ ಬಂದ ಭೂಮಿಯನ್ನು ಕೊಳ್ಳೆ ಹೊಡೆಯಲು ರಿಯಲ್ ಎಸ್ಟೇಟ್ ದಂಧೆಗೆ ನಾಂದಿ ಹಾಡಿತು. ಆ ರಿಯಲ್ ಎಸ್ಟೇಟ್ ದಂಧೆಯ ರಕ್ಕಸ ರೂಪವೇ ಡೂಪ್ಲಿಕೇಟ್ ಸಿಎಂ ಬ್ರ‍್ಯಾಂಡ್ ಬೆಂಗಳೂರು!! ಬ್ರ‍್ಯಾಂಡ್ ಬೆಂಗಳೂರು ಮುಳುಗುತ್ತಿದೆ! ಡೂಪ್ಲಿಕೇಟ್ ಸಿಎಂ ಫೋಟೋಶೂಟ್‌ನಲ್ಲಿ ಬ್ಯುಸಿಯಾಗಿದ್ದಾರೆ!! ರೋಮ್ ಹೊತ್ತಿ ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!! ಎಂದು ಜೆಡಿಎಸ್ ಲೇವಡಿ ಮಾಡಿದೆ.ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ

  • ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

    ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

    ಬೆಂಗಳೂರು: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ (Tweet) ಮಾಡಿ ಸರಿ ಮಾಡಲು ಹೇಳಿದ್ದೇನೆ. ಇದಕ್ಕೆ ಬೇರೆ ಬಣ್ಣ ಕಟ್ಟೋದು ಬೇಡ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ತಮ್ಮ ಏರಿಯಾದ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಟ್ವೀಟ್ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಮಾಹಿತಿ ಕೊಡೋಕೆ ನಾನಾ ಮಾರ್ಗಗಳು ಇವೆ. ಫೋನ್ ಮಾಡಬಹುದು, ಪತ್ರ ಬರೆಯಬಹುದು. ವೀಡಿಯೋ ಕಳುಹಿಸಬಹುದು. ನಾವು ಅದನ್ನು ಅವರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ಜನ ಸಮಸ್ಯೆ ತಂದಿದ್ದರು. ಅದನ್ನು ಸರಿ ಮಾಡಲು ಹೇಳಿದ್ದೇನೆ. ಅದಕ್ಕೆ ನೀವು ಬಣ್ಣ ಕಟ್ಟಿ ಏನೇನೋ ಹೇಳಿದರೆ ಅದು ಅವರಿಗೆ ಬಿಟ್ಟದ್ದು. ನಮಗೆ ಜನರ ಕೆಲಸ ಸರ್ಕಾರದಿಂದ ಆಗಬೇಕು. ಆ ಒಂದು ಪ್ರಯತ್ನ ನಾನು ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

    ಸಚಿವರ ಟ್ವೀಟ್‌ಗೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಆಗೋದು ಮುಖ್ಯನಾ? ಹೇಗೆ ಆಯ್ತು ಅನ್ನೋದು ಮುಖ್ಯನಾ? ಜನಕ್ಕೆ ಸಮಸ್ಯೆ ಪರಿಹಾರ ಆಗಬೇಕು. ಯಾವ ಮೂಲದಿಂದ ಆಗುತ್ತೆ ಅನ್ನೋದು ಎರಡನೇ ವಿಚಾರ. ಜನ ಪ್ರತಿನಿಧಿಯಾಗಿ ಜನರ ಸಮಸ್ಯೆ ಪರಿಹಾರ ಮಾಡೋದು ನನ್ನ ಕೆಲಸ. ಜನರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ನಾನು ಆಯುಕ್ತರಿಗೆ ಅನೇಕ ಬಾರಿ ಈ ವಿಷಯ ಹೇಳಿದ್ದೆ. ಅವರಿಗೆ ಚಿತ್ರಣ ಕಳುಹಿಸಿಕೊಡೋಣ ಅಂತ ವೀಡಿಯೋ ಕಳುಹಿಸಿದೆ. ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕೆಲಸ ಆಗಬೇಕು ಅನ್ನೋದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

    ಸರಿಯಾಗಿ ಕೆಲಸ ಆಗಬೇಕು ಎಂಬುದು ನಮ್ಮ ಉದ್ದೇಶ. ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಸಿಎಂ ಕೂಡ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಈ ಬಾರಿ ಜಾಸ್ತಿ ಮಳೆ ಆಗುತ್ತದೆ ಎಂದು ನಾನು ಬಿಬಿಎಂಪಿಗೆ ಪತ್ರ ಬರೆದಿದ್ದೆ. ಅದಕ್ಕೆ ರೆಡಿಯಾಗಬೇಕು ಎಂದು ಪತ್ರ ಬರೆದಿದ್ದೆ. ಸರ್ಕಾರ ನಮ್ಮದು. ಆದರೆ ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಿ ಸರ್ಕಾರಕ್ಕೆ ತೊಂದರೆ ಆಗಬಾರದು. ನನ್ನ ಮೊದಲ ಆದ್ಯತೆ ಜನರಿಗೆ, ಆಮೇಲೆ ಸರ್ಕಾರ. ಜನರಿಗೆ ನಾವು ಜನಪ್ರತಿನಿಧಿಯಾಗಿ ನಮ್ಮ ಮೊದಲ ಆದ್ಯತೆ ಇರಬೇಕು. ಅ ಪ್ರಜ್ಞೆ ನನಗೆ ಇದೆ. ಸರ್ಕಾರಕ್ಕೆ ಹೆಸರು ಬರಬೇಕಾದರೆ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ ಎಂದು ತಾವು ಮಾಡಿದ ಟ್ವೀಟ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದ ಸರ್ಕಾರಿ ನೌಕರರು ಇನ್ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಬೇಕು!

  • ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ

    ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ

    ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ (Ananthkumar Hegde) ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ (Congress) ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.

    ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಕುರಿತು ಕಾಂಗ್ರೆಸ್ (Congress) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ. ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್‌ನಂತೆ ಕಾಡುತ್ತವೆ. ಈ ಕ್ಯಾನ್ಸರ್‌ಗೆ ಸಂವಿಧಾನದಲ್ಲಿ ಔಷಧವಿದೆ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಕೋಚಿಮುಲ್‌ ನೇಮಕಾತಿ ಅಕ್ರಮ – ಶಾಸಕರ ಶಿಫಾರಸು ಪತ್ರ ನೀಡಿದ ಅಭ್ಯರ್ಥಿಗಳಿಗೆ ಇಡಿ ಶಾಕ್‌

    ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ. ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ. ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ಹರಿಹಾಯ್ದಿದೆ. ಇದನ್ನೂ ಓದಿ: ʻಸ್ವಚ್ಛತೀರ್ಥ ಅಭಿಯಾನʼಕ್ಕೆ ರಾಜ್ಯ ನಾಯಕರು ಸಾಥ್‌ – ಹುಬ್ಬಳ್ಳಿಯಲ್ಲಿ ದೇವಸ್ಥಾನ ಸ್ವಚ್ಛಗೊಳಿಸಿದ ಪ್ರಹ್ಲಾದ್‌ ಜೋಶಿ

  • ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

    ವಿಕ್ರಂ ಸಿಂಹ ಬಂಧನದಿಂದ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ – ಕಾಂಗ್ರೆಸ್ ಟ್ವೀಟ್

    ಬೆಂಗಳೂರು: ಮರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ (Prathap Simha) ಅವರ ತಮ್ಮ ವಿಕ್ರಂ ಸಿಂಹ (Vikram Simha) ಅವರನ್ನು ಅರಣ್ಯಾಧಿಕಾರಿಗಳು (Forest Officers) ಬಂಧಿಸಿದ್ದಾರೆ. ಇದೀಗ ವಿಕ್ರಂ ಸಿಂಹ ಬಂಧನದ ಕುರಿತು ಕಾಂಗ್ರೆಸ್ (Congress) ಟ್ವೀಟ್ ಮಾಡಿದ್ದು, ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

    ಟ್ವೀಟ್‌ನಲ್ಲಿ ಏನಿದೆ?
    ಪಾರ್ಲಿಮೆಂಟ್ ದಾಳಿಕೋರರಿಗೆ ಪಾಸ್ ನೀಡಿದ್ದ ಬ್ಯಾರಿಕೇಡ್ ಶೂರ ಪ್ರತಾಪ್ ಸಿಂಹ ಅವರ ಸಹೋದರ ಕಾಡಿನ ಕಳ್ಳ ವಿಕ್ರಂ ಸಿಂಹರ ಬಂಧನವಾಗಿದೆ. ಈ ಬಂಧನದ ಮೂಲಕ ನಿಸರ್ಗದ ಶೋಕಕ್ಕೆ ನ್ಯಾಯ ಸಿಕ್ಕಂತಾಗಿದೆ. ನನ್ನ ತಮ್ಮ ತಪ್ಪೇ ಮಾಡಿಲ್ಲ ಎನ್ನುತ್ತಿದ್ದ ಪ್ರತಾಪ್ ಸಿಂಹ ಅವರೇ, ನಿಮ್ಮ ತಮ್ಮ ತಲೆಮರೆಸಿಕೊಂಡಿದ್ದೇಕೆ? ಈಗ ಬಂಧನವಾಗಿದ್ದೇಕೆ? ಕಾಡುಗಳ್ಳ ವೀರಪ್ಪನ್ ಸ್ಥಾನ ತುಂಬುವಂತೆ ನಿಮ್ಮ ಸಹೋದರನನ್ನು ತಯಾರು ಮಾಡುತ್ತಿದ್ರಾ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನೆಲದ ಕಾನೂನು ಎಲ್ಲರಿಗೂ ಒಂದೆ: ಪ್ರತಾಪ್ ಸಿಂಹ ಸಹೋದರನ ಬಂಧನಕ್ಕೆ ಈಶ್ವರ್ ಖಂಡ್ರೆ ಪ್ರತಿಕ್ರಿಯೆ

    ಪ್ರಭಾವ ಬೀರಿದ ಮಾತ್ರಕ್ಕೆ ಸಂಸತ್ ದಾಳಿಕೋರರಿಗೆ ಪಾಸ್ ನೀಡಿದ ಪ್ರಕರಣದಿಂದ ತಪ್ಪಿಸಿಕೊಳ್ಳಬಹುದು ಎಂದು ನಂಬಿದ್ದೀರಿ. ಆದರೆ ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ ಕಾನೂನಿನ ಕುಣಿಕೆಯಿಂದ ತಪ್ಪಿಸಲಾರಿರಿ. ಕೋಟ್ಯಂತರ ರೂ. ಬೆಲೆ ಬಾಳುವ ಮರಗಳನ್ನು ಯಾವುದೇ ಅಂಜಿಕೆ ಇಲ್ಲದೆ ಕಡಿದು ಕಳ್ಳಸಾಗಣೆಗೆ ಮುಂದಾಗಿದ್ದು, ಯಾವ ಸೀಮೆಯ ನೈತಿಕತೆ ಸ್ವಾಮಿ ನಿಮ್ಮದು? ಇಂತಹ ಇನ್ಯಾವ ಬಗೆಯ ಕಳ್ಳ ದಂಧೆಗಳಿವೆ ನಿಮ್ಮದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮರಗಳ್ಳತನ ಪ್ರಕರಣದಲ್ಲಿ ಸಂಸದ ಪ್ರತಾಪ್‌ ಸಿಂಹ ಸಹೋದರ ವಿಕ್ರಂ ಸಿಂಹ ಬಂಧನ

    ಪತ್ರಕರ್ತರ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು ತಮ್ಮ ಗುರು ಮೋದಿಯಂತೆಯೇ ನಾನಾ ಬಗೆಯ ನಾಟಕವಾಡುವ ಪ್ರತಾಪ್‌ ಅವರೇ, ಸಂಸತ್ ದಾಳಿಕೋರರಿಗೆ ಪಾಸ್ ಕೊಟ್ಟಿದ್ದೇಕೆ, ಅವರಿಗೂ ನಿಮಗೂ ಇರುವ ಸಂಬಂಧವೇನು ಎಂಬ ಸರಳ ಪ್ರಶ್ನೆಗಳಿಗೆ ಉತ್ತರಿಸಲು ಭಯ ಪಡುವುದೇಕೆ? ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರಿಗೆ ಕಾಣಿಕೆ ಮೇಲೆ ಕಾಣಿಕೆ ಕೊಡ್ತಿದೆ: ಅಶೋಕ್ ವಾಗ್ದಾಳಿ

    ಈಗ ಇನ್ನೊಂದಿಷ್ಟು ಪ್ರಶ್ನೆಗಳು ಉದ್ಭವಿಸಿವೆ. ನಿಮ್ಮ ಸಹೋದರನ ಮರಗಳ್ಳತನದ ದಂಧೆಯಲ್ಲಿ ನಿಮ್ಮ ಪಾಲೂ ಇದೆಯೇ? ತಮ್ಮನ ಕಳ್ಳದಂಧೆಯನ್ನು ಪ್ರಭಾವ ಬೀರಿ ರಕ್ಷಿಸುತ್ತಿದ್ದಿದ್ದು ನೀವೇನಾ? ಈ ಕಳ್ಳದಂಧೆಯನ್ನು ಎಷ್ಟು ವರ್ಷಗಳಿಂದ ಮಾಡಿಕೊಂಡು ಬಂದಿದ್ದೀರಿ? ಇನ್ನೂ ಅದೆಷ್ಟು ಮರಗಳ ಮಾರಣಹೋಮ ನಡೆಸಿದ್ದೀರಿ? ಅಂದಹಾಗೆ, ಬೆತ್ತಲೆ ಜಗತ್ತಿನಲ್ಲಿ ಈ ಎಲ್ಲಾ ಸಂಗತಿಗಳ ಬಗ್ಗೆ ಬರೆಯುವುದು ಯಾವಾಗ? ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯಾಗೋದಾದ್ರೆ ನೂರಕ್ಕೆ ನೂರರಷ್ಟು ಬೆಂಬಲಿಸುತ್ತೇವೆ: ಬಿ.ನಾಗೇಂದ್ರ

  • ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಕಿಡಿ

    ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಕಿಡಿ

    ಬೆಂಗಳೂರು: ಕಾವೇರಿ ನೀರಿಗಾಗಿ (Kaveri Water) ಬೆಂಗಳೂರು ಬಂದ್‌ಗೆ (Bengaluru Bandh) ಕರೆ ನೀಡಿದ ಹಿನ್ನೆಲೆ ರೈತರು ಹಾಗೂ ಕನ್ನಡ ಪರ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭ ಪೊಲೀಸರು ಹಲವು ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಟ್ವೀಟ್ (Tweet) ಮೂಲಕ ಆಕ್ರೋಶ ಹೊರಹಾಕಿದ್ದಾರೆ.

    ಬೆಂಗಳೂರು ಬಂದ್ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾವೇರಿ ನೀರಿಗಾಗಿ ನಡೆಯುತ್ತಿರುವ ಬೆಂಗಳೂರು ಬಂದ್‌ಗೆ ನನ್ನ ಸಂಪೂರ್ಣ ಬೆಂಬಲವಿದೆ. ಹೋರಾಟ ಶಾಂತಿಯುತವಾಗಿರಲಿ. ಬಂದ್ ಯಶಸ್ವಿಯಾಗಲಿ. ಜನತಾದಳ ಪಕ್ಷದ ಕಾರ್ಯಕರ್ತರೂ ಕೂಡ ಬಂದ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ, ತಮಿಳುನಾಡು ನಡುವೆ ಸಾರಿಗೆ ಬಸ್‌ಗಳ ಸಂಚಾರಕ್ಕೆ ಬ್ರೇಕ್

    ಟ್ವೀಟ್‌ನಲ್ಲಿ ಏನಿದೆ?
    ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ (Congress) ಸರ್ಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಇದನ್ನೂ ಓದಿ: ಬೆಂಗಳೂರು ಬಂದ್ – ಕುರುಬೂರು ಶಾಂತಕುಮಾರ್ ಪೊಲೀಸ್ ವಶಕ್ಕೆ

    ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗಾರರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ? ಇದನ್ನೂ ಓದಿ: ಬೆಂಗಳೂರು ಬಂದ್ – ವಿಮಾನ ನಿಲ್ದಾಣದಲ್ಲಿ ಮುಂಜಾನೆಯಿಂದಲೂ ಸಹಜ ಸ್ಥಿತಿ

    ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಮ್ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌- ಎಂದಿನಂತೆ ಸಂಚರಿಸುತ್ತಿವೆ ಬಿಎಂಟಿಸಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುರಿ ಕಾಯ್ತಿದ್ದ ಬಾಲಕ ಮರಳಿ ಶಾಲೆಗೆ – ಬಾಲಕನ ಭವಿಷ್ಯ ಉಜ್ವಲವಾಗಲಿ ಅಂತಾ ಸಿಎಂ ಟ್ವೀಟ್

    ಕುರಿ ಕಾಯ್ತಿದ್ದ ಬಾಲಕ ಮರಳಿ ಶಾಲೆಗೆ – ಬಾಲಕನ ಭವಿಷ್ಯ ಉಜ್ವಲವಾಗಲಿ ಅಂತಾ ಸಿಎಂ ಟ್ವೀಟ್

    ಚಿತ್ರದುರ್ಗ: ಶಾಲೆ (School) ಬಿಟ್ಟು ಕುರಿ ಕಾಯುತ್ತಿದ್ದ ಚಿತ್ರದುರ್ಗ (Chitradurga) ಜಿಲ್ಲೆಯ ಮೊಳಕಾಲ್ಮೂರು (Molakalmuru) ತಾಲೂಕಿನ ಬಸಾಪುರ ಗ್ರಾಮದ ಶಿಕ್ಷಣ ವಂಚಿತ 11 ವರ್ಷದ ಬಾಲಕ ಯೋಗೇಶ್‌ನನ್ನು ಅಧಿಕಾರಿಗಳು ಮರಳಿ ಶಾಲೆಗೆ ಕರೆತಂದಿದ್ದಾರೆ.

    ಯೋಗೇಶ್‌ನ ಪೋಷಕರು ಬಡತನದ ಬೇಗೆಯಿಂದ ಬಳಲಿದ್ದು, ಕಳೆದ 2 ವರ್ಷಗಳಿಂದ ಯೋಗೇಶ್‌ನನ್ನು ಒತ್ತಾಯ ಪೂರ್ವಕವಾಗಿ ಶಾಲೆ ಬಿಡಿಸಿ ಕುರಿ ಕಾಯಲು ಕಳುಹಿಸುತ್ತಿದ್ದರು. ಇದನ್ನು ಗಮನಿಸಿದ ಚಳ್ಳಕೆರೆಯ ಮಹೇಂದ್ರ ಈ ಬಗ್ಗೆ ಟ್ವೀಟ್ (Tweet) ಮಾಡಿ ಮುಖ್ಯಮಂತ್ರಿ ಕಚೇರಿಯ ಗಮನ ಸೆಳೆದಿದ್ದರು. ಇದನ್ನೂ ಓದಿ: ಯಲಹಂಕ ದೊಡ್ಡದೇನಲ್ಲ ನನಗೆ. ಬಾರಲೇ ಅಲ್ಲಿಗೆ ಬರೀನಿ ಬಾ: ಸಚಿವ ಸುಧಾಕರ್‌ ಧಮ್ಕಿ

    ಈ ಟ್ವೀಟ್ ಮಾಡಿದ ಒಂದೇ ದಿನದಲ್ಲಿ ಬಾಲಕನನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಪೋಷಕರ ಮನವೊಲಿಸಿ ಮರಳಿ ಶಾಲೆಗೆ ಕರೆತಂದಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ ಮಾಡಿದ್ದು, ಬಾಲ್ಯದಲ್ಲಿ ನಾನು ಸಹ ಶಿಕ್ಷಣದಿಂದ ವಂಚಿತನಾಗಿದ್ದೆ. ರಾಜಪ್ಪ ಎಂಬ ಮೇಷ್ಟ್ರು ನನಗೆ ಐದನೇ ತರಗತಿಗೆ ದಾಖಲಾತಿ ಮಾಡಿಸಿದ್ದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮದ ತತ್ವಗಳ ವಿರುದ್ಧ ಹೋರಾಡಲು INDIA ಒಕ್ಕೂಟ ರಚಿಸಿದೆ: ಡಿಎಂಕೆ ನಾಯಕ ಪೊನ್ಮುಡಿ ವಿವಾದಾತ್ಮಕ ಹೇಳಿಕೆ

    ಅಂದು ನನಗೆ ಶಿಕ್ಷಣ (Education) ಸಿಕ್ಕಿದ್ದರಿಂದ ಇಂದು ನಾನು ಮುಖ್ಯಮಂತ್ರಿ ಆಗಲು ಸಾಧ್ಯವಾಗಿದೆ. ಮರಳಿ ಶಿಕ್ಷಣದತ್ತ ಮುಖಮಾಡಿದ ಬಾಲಕ ಯೋಗೇಶನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದ್ದಾರೆ. ಇದರಿಂದ ಟ್ವೀಟ್ ಮೂಲಕ ಸಿಎಂ ಕಚೇರಿ ಗಮನ ಸೆಳೆದಿದ್ದ ಸ್ಥಳೀಯ ಮಹೇಂದ್ರ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹೊಸ ಸಂಸತ್ ಭವನದಲ್ಲಿ ಸಿಬ್ಬಂದಿಗೆ ನೂತನ ಡ್ರೆಸ್ ಕೋಡ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]